ಕರಾವಳಿ

ಗುಂಡ್ಯ: ಬಸ್ ಮತ್ತು ಗ್ಯಾಸ್ ಟ್ಯಾಂಕರ್ ನಡುವೆ ಅಪಘಾತ

(ನ್ಯೂಸ್ ಕಡಬ)newskadaba.com ಗುಂಡ್ಯ, ಏ.14. ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಸಮೀಪ KSRTC ರಾಜಹಂಸ ಬಸ್ ಹಾಗೂ ಗ್ಯಾಸ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕನ ಕೈ ಮುರಿತಕ್ಕೊಳಗಾದ ಘಟನೆ ಸಂಭವಿಸಿದೆ. ಗಾಯಾಳುವನ್ನು ತುಮಕೂರಿನ ಮಧು(25)ಎಂದು ಗುರುತಿಸಲಾಗಿದ್ದು, ಆತನಿಗೆ ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಯನ್ನು ನೀಡಿ ಮಂಗಳೂರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಕೊಂಡೊಯ್ಯಲಾಗಿದೆ.

ಗುಂಡ್ಯ: ಬಸ್ ಮತ್ತು ಗ್ಯಾಸ್ ಟ್ಯಾಂಕರ್ ನಡುವೆ ಅಪಘಾತ Read More »

ಕರಾವಳಿ

ಬೆಳ್ತಂಗಡಿ: ಬಾರ್ ಎದುರು ಕುಡಿದ ಮತ್ತಿನಲ್ಲಿ ಗಲಾಟೆ ➤ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.14. ವೇಣೂರು ಜುಗುಲ್‌ ಬಾರ್‌ ಎದುರು ಹಲ್ಲೆ ನಡೆಸಿದ ಪ್ರಕರಣದಡಿ ಗೋಳಿಯಂಗಡಿ ಪ್ರಸಾದ್‌ ಅಲಿಯಾಸ್‌ ಬಾಡು ಹಾಗೂ ಗರ್ಡಾಡಿಯ ಕರುಣಾಕರ ಶೆಟ್ಟಿ ಎಂಬವರ ವಿರುದ್ಧ ವೇಣೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇವರಿಬ್ಬರು ಆರೋಪಿಗಳು ಕುಡಿದ ಮತ್ತಿನಲ್ಲಿ ಮೂಡುಕೋಡಿ ನಿವಾಸಿ ನಾರ್ಣಪ್ಪ ಪೂಜಾರಿ (70) ಎಂಬವರಿಗೆ ಹಲ್ಲೆ ನಡೆಸಿದ್ದು, ತಲೆಯ ಬಾಗಕ್ಕೆ ಗಾಯಗೊಂಡಿದ್ದ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬೆಳ್ತಂಗಡಿ: ಬಾರ್ ಎದುರು ಕುಡಿದ ಮತ್ತಿನಲ್ಲಿ ಗಲಾಟೆ ➤ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ

(ನ್ಯೂಸ್ ಕಡಬ)newskadaba.com ಉಳ್ಳಾಲ, ಏ.14. ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರು 12 ಮಂದಿಯಿಂದ ಲಕ್ಷಾಂತರ ಹಣ ಪಡೆದು ವಂಚಿಸಿರುವ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಂಚನೆ ನಡೆಸಿದ ಲೀನಾ ಲೋಬೋ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಜಿತೇಶ ಕ್ಲಿಶನ್ ಡಿ ಸೋಜಾ, ರಿಕ್ಸನ್ ಸಂತಾನಿಸ್, ಎಡ್ಲಿನ್ ಕ್ಲಿಂಟನ್ ಡಿ ಸೋಜಾ, ಗ್ಲಾನ್ಸಿಲ ಫೆರ್ನಾಂಡೀಸ್, ಜೋಸೆಫ್ ಡಿ ಸೋಜಾ, ಗ್ಲಾನೆಟ್ ಫೆರ್ನಾಂಡೀಸ್, ಸಚಿನ್ ಪಸನ್ನ, ವಿನಯ್ ಜೋಯ್ ಅಲ್ವಾರಿಸ್, ಜೀವನ್ ಕ್ಲಿಫರ್ಡ್ ಡಿ ಸೋಜಾ,

ಉಳ್ಳಾಲ: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ಧಾರ್ಮಿಕ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ..! ➤ ಶಾಸಕ ಯು.ಟಿ ಖಾದರ್ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ)newskadaba.com ಉಳ್ಳಾಲ, ಏ.14. ಧಾರ್ಮಿಕ ಕೇಂದ್ರಗಳಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿರುವ ಉಳ್ಳಾಲ ಶಾಸಕ ಯು.ಟಿ ಖಾದರ್ ವಿರುದ್ಧ ಚುನಾವಣಾ ಆಯೋಗಕ್ಕೆ SDPI ನಿಂದ ದೂರು ನೀಡಲಾಗಿದೆ. ಮದನಿ ನಗರ, ಉಳ್ಳಾಲ ಕೋಡಿ ತೋಟದ ಮಸೀದಿ ಹಾಗೂ ಮದರಸಗಳಲ್ಲಿ ಶಾಸಕ ಯು.ಟಿ ಖಾದರ್ ಮಾತನಾಡುತ್ತಿರುವ ಚಿತ್ರಗಳು ವೈರಲ್ ಆಗಿತ್ತು. ಇದೊಂದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ, ಧಾರ್ಮಿಕ ಕೇಂದ್ರಗಳಲ್ಲಿ ಚುನಾವಣಾ ಪ್ರಚಾರ ನಡೆಸುವುದು ಸಮಂಜಸವಲ್ಲ, ತಕ್ಷಣ ಆಯೋಗ ಶಾಸಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಅನ್ನುವ ಒತ್ತಾಯ ಮಾಡಿದ್ದಾರೆ.

ಉಳ್ಳಾಲ: ಧಾರ್ಮಿಕ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ..! ➤ ಶಾಸಕ ಯು.ಟಿ ಖಾದರ್ ವಿರುದ್ಧ ದೂರು ದಾಖಲು Read More »

ಕರಾವಳಿ

ಬಂಟ್ವಾಳ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ..! ➤ ಶಂಕೆ ಹಿನ್ನೆಲೆ ಪತಿಯಿಂದ ಠಾಣೆಗೆ ದೂರು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.14. ಮನೆಯಲ್ಲಿ ಯಾರು ಇಲ್ಲದ ವೇಳೆ ಮಹಿಳೆಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಿಲಾತಬೆಟ್ಟು ಗ್ರಾಮದ ನಯನಾಡು ನಿವಾಸಿ ಹರಿಪ್ರಸಾದ್ ಅವರ ಪತ್ನಿ ಜಯಲಕ್ಮೀ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ತಿಳಿದುಬಂದಿದೆ. ಮನೆಯೊಳಗೆ ನೇಣು ಬಿಗಿದು ಅವರು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಅವರ ಪತಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.

ಬಂಟ್ವಾಳ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ..! ➤ ಶಂಕೆ ಹಿನ್ನೆಲೆ ಪತಿಯಿಂದ ಠಾಣೆಗೆ ದೂರು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ವ್ಯಾನ್

(ನ್ಯೂಸ್ ಕಡಬ)newskadaba.com ಮಂಗಳೂರು, ಏ.14. ಚಾಲಕನ ನಿಯಂತ್ರಣ ತಪ್ಪಿ ವಾಹನವೊಂದು ಅಂಗಡಿ ಹಾಗೂ ಗ್ಯಾರೇಜ್ ಗೆ ನುಗ್ಗಿದ ಘಟನೆ ನಗರದ ಬಿಕರ್ನಕಟ್ಟೆಯಲ್ಲಿ ನಡೆದಿದೆ. ಮರೋಳಿಯಲ್ಲಿರುವ ವೃಧ್ದಾಶ್ರಮಕ್ಕೆ ಸೇರಿದ ವ್ಯಾನ್ ಇದಾಗಿದ್ದು, ಚಾಲಕನಿಗೆ ಅಪಸ್ಮಾರ ಕಾಣಿಸಿಕೊಂಡ ಕಾರಣ ವಾಹನ ನಿಯಂತ್ರಣ ಕಳೆದುಕೊಂಡಿದೆ. ಸ್ಥಳದಲ್ಲಿ ಹೆಚ್ಚಿನ ಜನ ಸಂಚಾರವಿರಲಿಲ್ಲ. ಘಟನೆಯಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ವರದಿ ತಿಳಿಸಿದೆ.  

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ವ್ಯಾನ್ Read More »

ಕರಾವಳಿ

ಉಡುಪಿ: ಮೊದಲ ದಿನ 4 ನಾಮಪತ್ರ ಸಲ್ಲಿಕೆ

(ನ್ಯೂಸ್ ಕಡಬ)newskadaba.com ಉಡುಪಿ, ಏ.14. ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ಕ್ಕೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆಯ ಮೊದಲ ದಿನವಾದ ಇಂದು ಜಿಲ್ಲೆಯಲ್ಲಿ ಒಟ್ಟು 4 ನಾಮಪತ್ರಗಳು ಸಲ್ಲಿಕೆಯಾಗಿದೆ. 119 ಕುಂದಾಪುರ ವಿಧಾನಸಭಾ ಕ್ಷೇತ್ರಕ್ಕೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಕಿರಣ್ ಕುಮಾರ್ ಕೊಡ್ಗಿ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಅಭ್ಯರ್ಥಿಯಾಗಿ ದಿನೇಶ್ ನಾಮಪತ್ರ ಸಲ್ಲಿಸಿರುತ್ತಾರೆ. 120 ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಮದಾಸ ಭಟ್ ನಾಮಪತ್ರ ಸಲ್ಲಿಸಿದ್ದಾರೆ. 122 ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ ಭಾರತೀಯ

ಉಡುಪಿ: ಮೊದಲ ದಿನ 4 ನಾಮಪತ್ರ ಸಲ್ಲಿಕೆ Read More »

ಕರಾವಳಿ

ಉಳ್ಳಾಲ: ಸಿಎಂ ಭೇಟಿ ಹಿನ್ನೆಲೆ ➤ ಸಂಚಾರಿ ಪೇದೆ ಗಂಭೀರ

(ನ್ಯೂಸ್ ಕಡಬ)newskadaba.com ಉಳ್ಳಾಲ, ಏ.13. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಳ್ಳಾಲದ ಸೋಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುವ ಹಿನ್ನೆಲೆ ರಾ.ಹೆ.66 ರಲ್ಲಿ ಬಂದೋಬಸ್ತ್ ನಲ್ಲಿದ್ದ ಕಂಕನಾಡಿ ಸಂಚಾರಿ ಠಾಣೆ ಪೊಲೀಸ್ ಪೇದೆಗೆ ಟೆಂಪೋ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿರುವ ಘಟನೆ ಆಡಂಕುದ್ರು ಬಳಿ ಸಂಭವಿಸಿದೆ. ಮಂಜುನಾಥ ಹೆಗಡೆ ಗಂಭೀರ ಗಾಯಗೊಂಡವರು. ರಾ.ಹೆ66 ರಲ್ಲಿ ಮುಖ್ಯಮಂತ್ರಿ ಭೇಟಿ ಹಿನ್ನೆಲೆಯಲ್ಲಿ ವಾಹನಗಳನ್ನು ನಿಯಂತ್ರಿಸುವ ಕೆಲಸ ಮಾಡುತ್ತಿದ್ದರು. ಈ ವೇಳೆ ತಲಪಾಡಿ ಕಡೆಗೆ ತೆರಳುತ್ತಿದ್ದ ಟೆಂಪೋವೊಂದರ ಚಾಲಕನ ನಿಯಂತ್ರಣ ಕಳೆದು ಪೊಲೀಸ್ ಪೇದೆಗೆ

ಉಳ್ಳಾಲ: ಸಿಎಂ ಭೇಟಿ ಹಿನ್ನೆಲೆ ➤ ಸಂಚಾರಿ ಪೇದೆ ಗಂಭೀರ Read More »

ಕರಾವಳಿ

ಕುಕ್ಕೆ ಸುಬ್ರಮಣ್ಯಕ್ಕೆ ಸಿಎಂ ಬೊಮ್ಮಾಯಿ ಭೇಟಿ

(ನ್ಯೂಸ್ ಕಡಬ)newskadaba.com ಸುಬ್ರಹ್ಮಣ್ಯ, ಏ.13. ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ, ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ದರುಶನ ಪಡೆದು, ಪ್ರಾರ್ಥನೆ ಸಲ್ಲಿಸಿದರು. ಇವರೊಂದಿಗೆ ಪತ್ನಿ ಚೆನ್ನಮ್ಮ ಇದ್ದರು ಎನ್ನಲಾಗಿದೆ. ಬೊಮ್ಮಾಯಿ(CM Basavaraj Bommai) ಅವರಿಗೆ ಕ್ಷೇತ್ರದ ಪ್ರಧಾನ ಅರ್ಚಕ ಸೀತರಾಮ ಯಡಪಡಿತ್ತಾಯ ಶಾಲು ಹೊದೆಸಿ ದೇವರ ಪ್ರಸಾದ ನೀಡಿ ಹರಸಿದರು. ಬಳಿಕ ಸಂಪುಟ ನರಸಿಂಹ ಸ್ವಾಮಿ ದೇವರ ದರುಶನ ಪಡೆದರು. ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು.

ಕುಕ್ಕೆ ಸುಬ್ರಮಣ್ಯಕ್ಕೆ ಸಿಎಂ ಬೊಮ್ಮಾಯಿ ಭೇಟಿ Read More »

ಕರಾವಳಿ

ಉಡುಪಿ: ಸಿಎಂ ಬೊಮ್ಮಯಿ ಹೆಲಿಕಾಪ್ಟರ್ ಲ್ಯಾಂಡ್ ವೇಳೆ ಹೆಲಿಪ್ಯಾಡ್ ಬಳಿ ಬೆಂಕಿ

(ನ್ಯೂಸ್ ಕಡಬ)newskadaba.com ಉಡುಪಿ, ಏ.13. ಸಿಎಂ ಬಸವರಾಜ ಬೊಮ್ಮಾಯಿ ಅವರ ಹೆಲಿಕಾಪ್ಟರ್ ಲ್ಯಾಂಡ್ ಆಗುತ್ತಿದ್ದ ಹೆಲಿಪ್ಯಾಡ್ ಬಳಿ ಬೆಂಕಿ ಕಾಣಿಸಿಕೊಂಡ ಘಟನೆ ಉಡುಪಿ ಜಿಲ್ಲೆ ಬೈಂದೂರಿನ ಅರೆಶಿರೂರು ಹೆಲಿಪ್ಯಾಡ್ ಬಳಿ ನಡೆದಿದೆ. ಮುಖ್ಯಮಂತ್ರಿಗಳ ಎಸ್ಕಾರ್ಟ್ ಹೋದ ಬಳಿಕ ಬೆಂಕಿ ಕಾಣಿಸಿಕೊಂಡಿದ್ದು ಕೆಲ ಕ್ಷಣ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಬೈಂದೂರು ಅಗ್ನಿಶಾಮಕದಳ ಸಿಬ್ಬಂದಿ ಕೂಡಲೇ ಬೆಂಕಿ ನಂದಿಸಿದ್ದು ಅರೆಶಿರೂರು ಹೆಲಿಪ್ಯಾಡ್ ಮೂಲಕ ಕೊಲ್ಲೂರಿಗೆ ಸಿಎಂ ಆಗಮಿಸಿದ್ದಾರೆ.

ಉಡುಪಿ: ಸಿಎಂ ಬೊಮ್ಮಯಿ ಹೆಲಿಕಾಪ್ಟರ್ ಲ್ಯಾಂಡ್ ವೇಳೆ ಹೆಲಿಪ್ಯಾಡ್ ಬಳಿ ಬೆಂಕಿ Read More »

ಕರಾವಳಿ
Scroll to Top