ಕರಾವಳಿ

ಚಾಲಕನ ನಿಯಂತ್ರಣ ತಪ್ಪಿ ಆ್ಯಂಬುಲೆನ್ಸ್‌ ಪಲ್ಟಿ..!!   ➤ನಾಲ್ವರು ಪ್ರಾಣಪಾಯದಿಂದ ಪಾರು

(ನ್ಯೂಸ್ ಕಡಬ)Newskadaba.com ಕಾರ್ಕಳ, ಮಾ.31. ಕಾರ್ಕಳ ರೋಟರಿ ಆಸ್ಪತ್ರೆಯ ಆ್ಯಂಬುಲೆನ್ಸ್‌ ಕಾರ್ಕಳದಿಂದ ಎಳ್ಳಾರೆ ಸಾಗುತ್ತಿದ್ದ ವೇಳೆ ಬಂಗ್ಲೆಗುಡ್ಡೆಯಲ್ಲಿ ಬೈಕ್‌ ಒಂದು ಅಡ್ಡ ಬಂದ ಪರಿಣಾಮ ಆ್ಯಂಬುಲೆನ್ಸ್‌ ಚಾಲಕ ಅದನ್ನು ತಪ್ಪಿಸಲು ಯತ್ನಿಸಿದ್ದನು. ಈ ಸಂದರ್ಭ ಆ್ಯಂಬುಲೆನ್ಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಆ್ಯಂಬುಲೆನ್ಸ್‌ನಲ್ಲಿದ್ದ ನಾಲ್ವರು ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ನಾಲ್ವರು ರೋಟರಿ ಆಸ್ಪತ್ರೆಯಲ್ಲಿ ಕಣ್ಣಿನ ಶಿಬಿರದಲ್ಲಿ ಸರ್ಜರಿ ಮಾಡಿಸಿಕೊಂಡು ಆಸ್ಪತ್ರೆಯ ಆ್ಯಂಬುಲೆನ್ಸ್‌ ನಲ್ಲಿ ಮನೆಗೆ ವಾಪಸಾಗುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಗಾಯಗೊಂಡವರನ್ನು ಕಾರ್ಕಳ ರೋಟರಿ ಆಸ್ಪತ್ರೆಗೆ ಕರೆಯೊಯ್ಯಲಾಗಿದ್ದು […]

ಚಾಲಕನ ನಿಯಂತ್ರಣ ತಪ್ಪಿ ಆ್ಯಂಬುಲೆನ್ಸ್‌ ಪಲ್ಟಿ..!!   ➤ನಾಲ್ವರು ಪ್ರಾಣಪಾಯದಿಂದ ಪಾರು Read More »

ಕರಾವಳಿ

ಬೆಳ್ತಂಗಡಿ ಮನೆಯೊಂದರಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ! ➤ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

(ನ್ಯೂಸ್ ಕಡಬ) newskadaba.com. ಬೆಳ್ತಂಗಡಿ, ಮಾ.31.  ಕರಂಬಾರು ಗ್ರಾಮದ ಬಂತಡ್ಕದ ಮನೆಯೊಂದರಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಈ ಹಾವನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಬಂತಡ್ಕದ ಮನೆಯಲ್ಲಿ ರಾತ್ರಿ ಬೃಹತ್ ಗಾತ್ರದ ಹಾವು ಕಾಣಿಸಿಕೊಂಡಿತ್ತು. ಬಳಿಕ ಅಶೋಕ್ ಬಂತಡ್ಕ ಹಾಗೂ ಲಂಕೇಶ್ ಎಂಬವರು ಸ್ಥಳಕ್ಕೆ ಬಂದು ಹಾವನ್ನು ಹಿಡಿದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ.

ಬೆಳ್ತಂಗಡಿ ಮನೆಯೊಂದರಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ! ➤ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ Read More »

ಕರಾವಳಿ

ಮಂಗಳೂರು: ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟು ಪಾಲನೆಗೆ ಸೂಚನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.31. ವಿಧಾನಸಭೆ ಚುಣಾವಣೆ ಘೋಷಣೆಯಾಗಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ ಈ ನಿಟ್ಟಿನಲ್ಲಿ ಕೆಲ ಸೂಚನೆಗಳನ್ನು ಪಾಲಿಸುವಂತೆ ಜಿಲ್ಲಾಡಳಿತ ತಿಳಿಸಿದೆ. ಮಾ.29ರಿಂದ ಮೇ 15ರವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿ ಇರುತ್ತದೆ. ಮಾದರಿ ನೀತಿಸಂಹಿತೆ ಉಲ್ಲಂಘನೆಯಾಗದಂತೆ ತಡೆಗಟ್ಟುವ ಉದ್ದೇಶದಿಂದ ವಿಧಾನಸಭಾ ಕ್ಷೇತ್ರವಾರು ವಿವಿಧ ತಂಡಗಳನ್ನು ರಚಿಸಲಾಗಿದೆ.

ಮಂಗಳೂರು: ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟು ಪಾಲನೆಗೆ ಸೂಚನೆ Read More »

ಕರಾವಳಿ

ಕರಾವಳಿ: ಮತದಾನ ಕೇಂದ್ರಗಳಲ್ಲಿ ಯಕ್ಷಗಾನ, ಕಂಬಳದ ಸೊಗಸು          

(ನ್ಯೂಸ್ ಕಡಬ)newskadaba.com ಕರಾವಳಿ, ಮಾ.31. ದಕ್ಷಿಣ ಕನ್ನಡ ಜಿಲ್ಲೆ ಕರಾವಳಿ ಜಿಲ್ಲೆ ಮತ್ತು ಇದು ಯಕ್ಷಗಾನ ಕಲೆಯ ಸಾಂಪ್ರದಾಯಿಕ ಜಾನಪದ ನೃತ್ಯಕ್ಕೆ ಹೆಸರುವಾಸಿಯಾಗಿದೆ. ಯಕ್ಷಕಲೆ ನೃತ್ಯ, ಸಂಗೀತ, ಹಾಡು ಮತ್ತು ಬಣ್ಣದ ವೇಷಭೂಷಣಗಳೊಂದಿಗೆ ವಿದ್ವತ್ ಸಂವಾದದ ಅಪರೂಪದ ಸಂಯೋಜನೆ. ಕರಾವಳಿ ಜಿಲ್ಲೆಯ ಜನರು ಈ ಸಾಂಪ್ರದಾಯಿಕ ಜಾನಪದ ಕಲೆ ಜನರ ಜೀವನದಲ್ಲಿ ಹಾಸುಹೊಕ್ಕಾಗಿದೆ. ಈ ನಿಟ್ಟಿನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಭಾಗವಹಿಸುವ ಮತದಾರರನ್ನು ಸೆಳೆಯಲು ಯಕ್ಷಕಲೆಯನ್ನು ಬಳಸಿಕೊಳ್ಳಲು ಸ್ವೀಪ್‌ ತಂಡ ಮುಂದಾಗಿದೆ.  

ಕರಾವಳಿ: ಮತದಾನ ಕೇಂದ್ರಗಳಲ್ಲಿ ಯಕ್ಷಗಾನ, ಕಂಬಳದ ಸೊಗಸು           Read More »

ಕರಾವಳಿ

ಉಡುಪಿ: ಕಳ್ಳತನವಾದ 34 ಮೊಬೈಲ್‌‌ಗಳನ್ನು ವಾರಸುದಾರರಿಗೆ ಹಿಂದಿರುಗಿಸಿದ ಪೊಲೀಸರು

(ನ್ಯೂಸ್ ಕಡಬ)newskadaba.com ಉಡುಪಿ, ಮಾ.31. ಕಳ್ಳತನವಾದ ಹಾಗೂ ಕಳೆದು ಹೋಗಿದ್ದ 34 ಮೊಬೈಲ್ ಫೋನ್‌ ಗಳನ್ನು ಪತ್ತೆ ಹಚ್ಚಿ ಆಯಾ ಮಾಲೀಕರಿಗೆ ಹಸ್ತಾಂತರಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ವರದಿಯಾದ ವಿವಿಧ ಪ್ರಕರಣಗಳ ಅಡಿಯಲ್ಲಿ, ಕಳೆದುಹೋದ 34 ಫೋನ್‌ ಗಳನ್ನು ಜಿಲ್ಲಾ ಪೊಲೀಸರು ಪತ್ತೆ ಮಾಡಿದ್ದಾರೆ. ಮೊಬೈಲ್ ಫೋನ್‌ ಗಳು ಕಳ್ಳತನ ಮತ್ತು ನಾಪತ್ತೆಯಾದ ಬಗ್ಗೆ ಸಾರ್ವಜನಿಕರು ಆದಷ್ಟು ಬೇಗ ಹತ್ತಿರದ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡುವಂತೆ ಉಡುಪಿ ಜಿಲ್ಲಾ ಪೊಲೀಸ್ ಆಯುಕ್ತರು ವಿನಂತಿಸಿದ್ದಾರೆ.

ಉಡುಪಿ: ಕಳ್ಳತನವಾದ 34 ಮೊಬೈಲ್‌‌ಗಳನ್ನು ವಾರಸುದಾರರಿಗೆ ಹಿಂದಿರುಗಿಸಿದ ಪೊಲೀಸರು Read More »

ಕರಾವಳಿ

ಉಡುಪಿ: 55 ಕೇಂದ್ರಗಳಲ್ಲಿ ಎಸೆಸೆಲ್ಸಿ ಪರೀಕ್ಷೆ ➤ 200 ಮೀಟರ್ ಸುತ್ತಮುತ್ತ ನಿಷೇಧಾಜ್ಞೆ

(ನ್ಯೂಸ್ ಕಡಬ)newskadaba.com  ಉಡುಪಿ, ಮಾ.31. ರಾಜ್ಯಾದ್ಯಂತ ಇಂದಿನಿಂದ ಎಸೆಸೆಲ್ಸಿ ಪರೀಕ್ಷೆ ಆರಂಭಗೊಂಡಿದ್ದು, ಉಡುಪಿ ಜಿಲ್ಲೆಯಲ್ಲಿ 13, 753 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದಾರೆ. ಜಿಲ್ಲೆಯ 55 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಬೈಂದೂರಿನಲ್ಲಿ 8, ಕುಂದಾಪುರದಲ್ಲಿ 9, ಕಾರ್ಕಳದಲ್ಲಿ 10, ಬ್ರಹ್ಮಾವರದಲ್ಲಿ 12 ಹಾಗೂ ಉಡುಪಿಯಲ್ಲಿ 16 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಇನ್ನು ಪರೀಕ್ಷೆ ಇಂದಿನಿಂದ ಎಪ್ರಿಲ್ 15ರವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರದ 200 ಮೀಟರ್ ಸುತ್ತಮುತ್ತ ನಿಷೇಧಾಜ್ಞೆ ಮಾಡಲಾಗಿದೆ.    

ಉಡುಪಿ: 55 ಕೇಂದ್ರಗಳಲ್ಲಿ ಎಸೆಸೆಲ್ಸಿ ಪರೀಕ್ಷೆ ➤ 200 ಮೀಟರ್ ಸುತ್ತಮುತ್ತ ನಿಷೇಧಾಜ್ಞೆ Read More »

ಕರಾವಳಿ

ಕಡಬ: ಮರವೊಂದಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ 

(ನ್ಯೂಸ್ ಕಡಬ)newskadaba.com  ಕಡಬ, ಮಾ.31. ಯುವಕನೋರ್ವ ಸಾಯುವ ಕುರಿತಾಗಿ ವಾಟ್ಸ್ಯಾಪ್ ಸ್ಟೇಟಸ್ ಹಾಕಿ ಬಳಿಕ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ‌ಮಾಡಿಕೊಂಡ ಘಟನೆ ಕಡಬದಲ್ಲಿ ವರದಿಯಾಗಿದೆ. ಕಡಬ ತಾಲೂಕಿನ ಇಚಿಲಂಪಾಡಿ ಗ್ರಾಮದಲ್ಲಿ ಘಟನೆ ಸಂಭವಿಸಿದ್ದು, ಈ ಘಟನೆ ನಡೆದಿದ್ದು ಮೃತ ಯುವಕ  ರೆನೀಶ್ (27 ವರ್ಷ) ಎಂದು ಗುರುತಿಸಲಾಗಿದೆ.  

ಕಡಬ: ಮರವೊಂದಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ  Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ಕಳವಾದ ಬೈಕ್-ಮಂಗಳೂರಿನಲ್ಲಿ ಪತ್ತೆ..! ➤ ಮೂವರು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.31. ಕೋಟೆಕಾರು ಕೊರಗಜ್ಜನ ಕಟ್ಟೆ ಬಳಿಯಿಂದ ಕಳವು ನಡೆಸಿದ್ದ ಬೈಕ್ ಇಂದು ಮಂಗಳೂರಿನಲ್ಲಿ ಪತ್ತೆಯಾಗಿದ್ದು, ಬೈಕ್ ಮಾಲೀಕರ ಸ್ನೇಹಿತರೊಬ್ಬರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಬೈಕ್ ಸಮೇತ ಪಾಂಡೇಶ್ವರ ಠಾಣಾ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದುಬಂದಿದೆ. ಮಾ.28ರ ನಸುಕಿನ ಜಾವ ಕೋಟೆಕಾರು ಕೊರಗಜ್ಜನ ಕಟ್ಟೆ ಬಳಿ ಒಳರಸ್ತೆಯಲ್ಲಿ ನಿಲ್ಲಿಸಿದ್ದ ರಾಜೇಶ್ ಎಂಬವರಿಗೆ ಸೇರಿದ ಬೈಕನ್ನು ಕಳ್ಳರು ಕಳವು ನಡೆಸಿದ್ದರು. ಕೃತ್ಯ ಸಿಸಿಟಿವಿಯಲ್ಲಿ ಸೆಎರಯಾಗಿದ್ದು, ಕಳ್ಳನ ಚಹರೆಯೂ ಸರಿಯಾಗಿ ಗೋಚರಿಸಿತ್ತು. ಅದೇ

ಉಳ್ಳಾಲ: ಕಳವಾದ ಬೈಕ್-ಮಂಗಳೂರಿನಲ್ಲಿ ಪತ್ತೆ..! ➤ ಮೂವರು ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಲಾಡ್ಜ್ ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ..!       

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.31. ಮಂಗಳೂರು ನಗರದ ಕೆ ಎಸ್ ರಾವ್ ರಸ್ತೆಯಲ್ಲಿನ ಲಾಡ್ಜ್ ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ದೇವೇಂದ್ರ (46) ಅವರ ಪತ್ನಿ ಮತ್ತು 2 ಮಕ್ಕಳು ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಮಾಡಿಕೊಂಡವರು ಮೈಸೂರಿನ ವಾಣಿ ವಿಲಾಸದವರೆಂದು ತಿಳಿದು ಬಂದಿದ್ದು, ಪಕ್ಕದಲ್ಲೇ ಡೆತ್ ನೋಟು ಕೂಡ ಪತ್ತೆಯಾಗಿದೆ ಎನ್ನಲಾಗಿದೆ. ಇನ್ನು ನಾಲ್ವರ ಪೈಕಿ ಓರ್ವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ್ರೆ, ಉಳಿದ ಮೂವರು ಮಲಗಿದ ಸ್ಥಿತಿಯಲ್ಲಿ

ಮಂಗಳೂರು: ಲಾಡ್ಜ್ ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ..!        Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ನ್ಯಾಯಸಮ್ಮತ ಚುನಾವಣೆ ನಡೆಸಲು ಕೋವಿ    ➤ ಶಸ್ತ್ರಾಸ್ತ್ರ ದಾಸ್ತಾನಿರಿಸಲು ಜಿಲ್ಲಾಧಿಕಾರಿ ಸೂಚನೆ.!                        

(ನ್ಯೂಸ್ ಕಡಬ)newskadaba.com ಮಂಗಳೂರು,ಮಾ.31 ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಯಾದ ಕಾರಣ ಜಿಲ್ಲೆಯಲ್ಲಿ ಮುಕ್ತ, ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸಲು, ಸಾರ್ವಜನಿಕ ಶಾಂತಿ, ಸುವ್ಯವಸ್ಥೆ ಮತ್ತು ಸಾರ್ವಜನಿಕ ಸುರಕ್ಷತೆ ಕಾಪಾಡುವ ದೃಷ್ಟಿಯಿಂದ ಜಿಲ್ಲೆಯಲ್ಲಿ ಪರವಾನಗಿ ಪಡೆದಿರುವ ಆಯುಧಗಳನ್ನು ಠೇವಣಿ ಮಾಡುವಂತೆ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ರವಿಕುಮಾರ್ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಎಲ್ಲಾ ಅಧೀಕೃತ ಕೋವಿ ಮದ್ದುಗುಂಡು ವ್ಯಾಪಾರಸ್ಥರು ಹಾಗೂ ಪೊಲೀಸ್ ಠಾಣೆಗಳಲ್ಲಿ ಶಸ್ತ್ರಾಸ್ತ್ರ ನಿಯಮ 2016 ನಿಯಮ-48 ರಲ್ಲಿ ತಿಳಿಸಿರುವಂತೆ ಪ್ರತೀ ಆಯುಧಗಳಿಗೆ ತಿಂಗಳಿಗೆ

ಮಂಗಳೂರು: ನ್ಯಾಯಸಮ್ಮತ ಚುನಾವಣೆ ನಡೆಸಲು ಕೋವಿ    ➤ ಶಸ್ತ್ರಾಸ್ತ್ರ ದಾಸ್ತಾನಿರಿಸಲು ಜಿಲ್ಲಾಧಿಕಾರಿ ಸೂಚನೆ.!                         Read More »

ಕರಾವಳಿ, ಕರ್ನಾಟಕ
Scroll to Top