ಕರಾವಳಿ

ದ.ಕ.ದಲ್ಲಿ ಹೊಸ ಮುಖಗಳಿಗೆ ಅವಕಾಶ..!  ➤ ಮಾಜಿ ಪೊಲೀಸ್‌ ಅಧಿಕಾರಿ ಪುತ್ರನಿಗೆ ಕೈ ಟಿಕೆಟ್‌

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.25. ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಬಿಡುಗಡೆಯಾಗಿದ್ದು, ಬಿಜೆಪಿ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ಕೆಲವು ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. ಎಂಟು ಕ್ಷೇತ್ರಗಳ ಪೈಕಿ ಐದು ಕಡೆ ಅಭ್ಯರ್ಥಿಗಳ ಹೆಸರು ಘೋಷಿಸಲಾಗಿದೆ. ಕಾಂಗ್ರೆಸ್‌ ಹಿರಿಯ ನಾಯಕ ಬಿ.ಕೆ ಹರಿಪ್ರಸಾದ್‌ ಸಹೋದರ ಬಿಕೆ ಶಿವರಾಂ ಪುತ್ರ ರಕ್ಷಿತ್‌ ಶಿವರಾಂಗೆ ಬೆಳ್ತಂಗಡಿಯಲ್ಲಿ ಟಿಕೆಟ್ ನೀಡಲಾಗಿದೆ. ಸುಳ್ಯ ಮೀಸಲು ಕ್ಷೇತ್ರದಲ್ಲಿ ಕೃಷ್ಣಪ್ಪ ಜಿ ಘೋಷಿಸಲಾಗಿದೆ.

ದ.ಕ.ದಲ್ಲಿ ಹೊಸ ಮುಖಗಳಿಗೆ ಅವಕಾಶ..!  ➤ ಮಾಜಿ ಪೊಲೀಸ್‌ ಅಧಿಕಾರಿ ಪುತ್ರನಿಗೆ ಕೈ ಟಿಕೆಟ್‌ Read More »

ಕರಾವಳಿ

ಮಂಗಳೂರು ನಗರದ ಕಸ ವಿಲೇವಾರಿಗೆ ವಾರ್ ರೂಂ ➤ಶಾಸಕ ಕಾಮತ್

(ನ್ಯೂಸ್ ಕಡಬ) News kadaba.com ಮಂಗಳೂರು,ಮಾ.24 ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮನೆ ಮನೆಗಳಿಂದ ಕಸ‌ ಸಂಗ್ರಹಿಸುವುದು ಹಾಗೂ ರಸ್ತೆ ಬದಿಗಳಲ್ಲಿ ಕಸದ ರಾಶಿಗಳು ಬಿದ್ದಿರುವುದನ್ನು ಬಗೆಹರಿಸುವ ದೃಷ್ಟಿಯಿಂದ ಶಾಸಕ ವೇದವ್ಯಾಸ್ ಕಾಮತ್ ಅವರು ತಮ್ಮ ಕಚೇರಿಯಲ್ಲಿ ವಾರ್ ರೂಂ ಪ್ರಾರಂಭಿಸಿದ್ದಾರೆ. ಕಳೆದ ಹಲವು ದಿನಗಳಿಂದ ಕಸ ಸಂಗ್ರಹಣೆಯ ಕಾರ್ಮಿಕರು ಮುಷ್ಕರ ಹೂಡಿರುವ ಕಾರಣ ,ಅವರ ಬೇಡಿಕೆಗಳನ್ನು ಈಡೇರಿಸುವ ದೃಷ್ಟಿಯಿಂದ ಶಾಸಕ ಕಾಮತ್ ಅವರು ಮಾತುಕತೆಯ ಮೂಲಕ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. ಇಡೀ ರಾಜ್ಯದಾದ್ಯಂತ ಕಾರ್ಮಿಕರು

ಮಂಗಳೂರು ನಗರದ ಕಸ ವಿಲೇವಾರಿಗೆ ವಾರ್ ರೂಂ ➤ಶಾಸಕ ಕಾಮತ್ Read More »

ಕರಾವಳಿ, ಕರ್ನಾಟಕ

ಮಾ. 27ರಿಂದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ..!

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 24. ಐದು ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾ. 27ರಿಂದ ಎ. 1ರ ವರೆಗೆ ಆಯಾ ಶಾಲೆಗಳಲ್ಲಿ ಮೌಲ್ಯಾಂಕನ ನಡೆಸಲಾಗುತ್ತದೆ. ಅದರಲ್ಲಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ, ಕಲಿಕಾ ನ್ಯೂನತೆ, ಪ್ರಗತಿಯನ್ನು ತಿಳಿದುಕೊಂಡು ಮುಂದಿನ ಶೈಕ್ಷಣಿಕ ಕಲಿಕಾ ಕೊರತೆಯನ್ನು ನೀಗಿಸಲು ಶೈಕ್ಷಣಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಅದರ ಫಲಿತಾಂಶವನ್ನು ಸಂಬಂಧಿಸಿದ ಪೋಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮಾತ್ರ ತಿಳಿಸಲಾಗುವುದು. ಆ ಮೂಲಕ ಫಲಿತಾಂಶದ ಗೌಪ್ಯತೆಯನ್ನು ಕಾಪಾಡಲಾಗುವುದು. 5 ಮತ್ತು 8ನೇ ತರಗತಿಯ ಮೌಲ್ಯಾಂಕನವು ವಾರ್ಷಿಕ

ಮಾ. 27ರಿಂದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ..! Read More »

ಕರಾವಳಿ, ಕರ್ನಾಟಕ

ಸುಬ್ರಹ್ಮಣ್ಯ: ನೇಣುಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಮಾ. 24. ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಬ್ರಹ್ಮಣ್ಯದ ಕಾಶಿ ಕಟ್ಟೆಯ ಸಮೀಪ ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಕ್ಕಡದ ನಿವಾಸಿ ಸುಜಿತ್ ಎಂದು ಗುರುತಿಸಲಾಗಿದೆ. ಹಲವು ವರ್ಷಗಳಿಂದ ಸುಬ್ರಹ್ಮಣ್ಯದಲ್ಲಿ ಲಾಂಡ್ರಿ ಕೆಲಸ ನಡೆಸುತ್ತಿದ್ದ ಈತ, ಪರ್ವತಮುಖಿ ಬಳಿ ಇರುವ ತಮ್ಮ ರೂಮ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಬ್ರಹ್ಮಣ್ಯ: ನೇಣುಬಿಗಿದು ಯುವಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಅರಂತೋಡು:ನಾಳೆ ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಮೃತ ಉದ್ಯಾನವನ ➤ಅಮೃತ ಮುಕ್ತಿಧಾಮ ಹಾಗೂ ಅಮೃತ ಸಭಾಂಗಣ ಉದ್ಘಾಟನಾ ಕಾರ್ಯಕ್ರಮ

(ನ್ಯೂಸ್ ಕಡಬ) News kadaba.com ಅರಂತೋಡು, ಮಾ.24 ಅರಂತೋಡು ಗ್ರಾಮ ಪಂಚಾಯತ್ ವತಿಯಿಂದ ನೂತನವಾಗಿ ನಿರ್ಮಿಸಿದ ಅಮೃತ ಸಭಾಂಗಣ ,ಅಮೃತ ಮುಕ್ತಿಧಾಮ ಹಾಗೂ ಅಮೃತ ಉದ್ಯಾನವನ ಉದ್ಘಾಟನಾ ಕಾರ್ಯಕ್ರಮ ಮಾ.25 ರಂದು (ನಾಳೆ) ನಡೆಯಲಿದೆ.ನೂತನ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯನ್ನು ಬಂದರು ಮೀನುಗಾರಿಕೆ ಮತ್ತು ಒಳನಾಡುಜಲ ಸಾರಿಗೆ ಸಚಿವ ಎಸ್.ಅಂಗಾರ ಉದ್ಘಾಟಿಸಲಿದ್ದಾರೆ.ಅಧ್ಯಕ್ಷತೆಯನ್ನು  ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಹರಿಣಿ ದೇರಾಜೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ  ಎ.ವಿ.ತೀರ್ಥರಾಮ,ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ

ಅರಂತೋಡು:ನಾಳೆ ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಮೃತ ಉದ್ಯಾನವನ ➤ಅಮೃತ ಮುಕ್ತಿಧಾಮ ಹಾಗೂ ಅಮೃತ ಸಭಾಂಗಣ ಉದ್ಘಾಟನಾ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ
crime, arrest, suspected

ಮಂಗಳೂರು: 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 24. ಸುಮಾರು 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ತುಂಬೆ ವ್ಯಾಪ್ತಿಯ ತಲಪಾಡಿ ನಿವಾಸಿ ಅಬ್ದುಲ್ ಅಜೀಜ್ (45) ಎಂದು ಗುರುತಿಸಲಾಗಿದೆ. ಈತ ಕೇರಳ ಮತ್ತು ಕರ್ನಾಟಕದ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಅಜೀಜ್ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ನಾಲ್ಕು, ಉಳ್ಳಾಲದಲ್ಲಿ ಮೂರು, ಬಂಟ್ವಾಳದಲ್ಲಿ ಒಂದು ಮತ್ತು ಹಾಸನದ ಅರೇಹಳ್ಳಿ ಮತ್ತು ಕೇರಳ ರಾಜ್ಯದ ಕುಟ್ಯಾಡಿಯಲ್ಲಿ ತಲಾ ಒಂದು ಪ್ರಕರಣಗಳಿವೆ. ಬಂಧಿತ

ಮಂಗಳೂರು: 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ರಸ್ತೆ ಅಪಘಾತ  ➤ ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ. 24. ಅಶೋಕ್ ಲೈಲ್ಯಾಂಡ್ ದೋಸ್ತ್ ಹಾಗೂ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿ ರಿಕ್ಷಾದಲ್ಲಿದ್ದ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ- 75ರ ಉಪ್ಪಿನಂಗಡಿ ಗ್ರಾಮದ ಮಠ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ರಿಕ್ಷಾ ಚಾಲಕ ಮಹಮ್ಮದ್ ಅನ್ಸಾರ್, ಸುಮಯ್ಯ ಹಾಗೂ 1 ವರ್ಷದ ಮಗು ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಅಶೋಕ್ ಲೇಲ್ಯಾಂಡ್ ಹಾಗೂ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿದೆ.  

ಉಪ್ಪಿನಂಗಡಿ: ರಸ್ತೆ ಅಪಘಾತ  ➤ ಪ್ರಯಾಣಿಕರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಉಪ್ಪಿನಂಗಡಿ: ಚಿನ್ನ ಖರೀದಿಗೆ ತೆರಳುತ್ತಿದ್ದ ವ್ಯಕ್ತಿಯಿಂದ 10 ಲ.ರೂ. ಕಳ್ಳತನ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ. 24. ಮಗಳ ವಿವಾಹಕ್ಕೆ ಚಿನ್ನಾಭರಣ ಖರೀದಿಸಲೆಂದು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಕಾಯರ್ಪಾಡಿ ನಿವಾಸಿ ಮೊಹಮ್ಮದ್ ಅವರಿಂದ 10 ಲಕ್ಷ ರೂ.ದೋಚಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಇಳಂತಿಲ ಗ್ರಾಮದ ಕಡವಿನಬಾಗಿಲು ನಿವಾಸಿ ಮುಸ್ತಫಾ (41) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯಿಂದ 9 ಲಕ್ಷ ರೂ.ಹಣವನ್ನು ವಶಪಡಿಸಿಕೊಂಡಿದ್ದು, ಪ್ರಕರಣದ ಇನ್ನೋರ್ವ ಆರೋಪಿ ಒಂದು ಲಕ್ಷ ರೂಪಾಯಿಯೊಂದಿಗೆ ಪರಾರಿಯಾಗಿದ್ದು, ಆತನ ಪತ್ತೆಗೆ ಪೊಲೀಸರು ಶೋಧಕಾರ್ಯ ಮುಂದುವರಿಸಿದ್ದಾರೆ.

ಉಪ್ಪಿನಂಗಡಿ: ಚಿನ್ನ ಖರೀದಿಗೆ ತೆರಳುತ್ತಿದ್ದ ವ್ಯಕ್ತಿಯಿಂದ 10 ಲ.ರೂ. ಕಳ್ಳತನ ➤ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯದ ಯುವಕ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 24. ಸುಳ್ಯ ತಾಲೂಕಿನ ಕಲ್ಮಕಾರು ಗ್ರಾಮದ ಯುವಕನೋರ್ವ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕಲ್ಮಕಾರು ಗ್ರಾಮದ ಮೆಂಟೆಕಜೆ ತೇಜಕುಮಾರ್ ರವರ ಪುತ್ರ ಲೋಕೇಶ(22) ಎಂದು ಗುರುತಿಸಲಾಗಿದೆ. ಈತ ಚಿಕ್ಕಮಗಳೂರುನಲ್ಲಿ ಜಿಯೋ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದು, ತನ್ನ ರೂಮಿನಲ್ಲಿ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.  

ಸುಳ್ಯದ ಯುವಕ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಧರ್ಮಸ್ಥಳ ಕ್ಷೇತ್ರ ಸಂದರ್ಶಿಸಲು ಬಂದಿದ್ದ ಯುವತಿ ನಾಪತ್ತೆ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 24. ಕುಟುಂಬಸ್ಥರ ಜೊತೆ ಉತ್ತರ ಕನ್ನಡದಿಂದ ಧರ್ಮಸ್ಥಳ ಶ್ರೀ ಕ್ಷೇತ್ರಕ್ಕೆ ದೇವರ ಸಂದರ್ಶನಕ್ಕೆ ಬಂದಿದ್ದ ಯುವತಿಯೋರ್ವಳು ನಾಪತ್ತೆಯಾದ ಕುರಿತು ವರದಿಯಾಗಿದೆ. ನಾಪತ್ತೆಯಾದ ಯುವತಿಯನ್ನು ರೇಶ್ಮಾ ಎಂದು ಗುರುತಿಸಲಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ದೇವರ ದರ್ಶನ ಪಡೆದ ಬಳಿಕ ಎಲ್ಲರೂ ರೂಂ ಹೋಗಿದ್ದು, ಬಳಿಕ ಯುವತಿ ರೇಶ್ಮಾ ನಾಪತ್ತೆಯಾಗಿರುವುದಾಗಿ ತಿಳಿದುಬಂದಿದೆ.  

ಧರ್ಮಸ್ಥಳ ಕ್ಷೇತ್ರ ಸಂದರ್ಶಿಸಲು ಬಂದಿದ್ದ ಯುವತಿ ನಾಪತ್ತೆ ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top