ಕರಾವಳಿ

ಕಡಬ: ಆಪರೇಷನ್ ಎಲಿಫೆಂಟ್ ಕಾರ್ಯಾಚರಣೆ ವೇಳೆ ಅಧಿಕಾರಿಗಳೊಂದಿಗೆ ವಾಗ್ವಾದ- ಕರ್ತವ್ಯಕ್ಕೆ ಅಡ್ಡಿ ಪ್ರಕರಣ ➤ ಬಂಧಿತ 7 ಮಂದಿ ಆರೋಪಿಗಳಿಗೆ ಜಾಮೀನು

(ನ್ಯೂಸ್ ಕಡಬ) newskadaba.com ಕಡಬ, ಮಾ. 18. ಕೆಲ ದಿನಗಳ ಹಿಂದೆ ಕಡಬ ರೆಂಜಿಲಾಡಿ ಮೀನಾಡಿ ಸಮೀಪದ ನೈಲ ಎಂಬಲ್ಲಿ ಕಾಡಾನೆಯೊಂದು ಅಮಾಯಕರಿಬ್ಬರನ್ನು ಬಲಿತೆಗೆದುಕೊಂಡ ನಂತರದ ಬೆಳವಣಿಗೆಯಲ್ಲಿ ಸೆರೆ ಹಿಡಿಯಲಾದ ಕಾಡಾನೆಯೊಂದನ್ನು ಕೊಂಡೊಯ್ಯುವುದಕ್ಕೆ ಆಕ್ಷೇಪಿಸಿದ ನಾಗರಿಕರ ಗುಂಪೊಂದು ಎಲ್ಲಾ ಕಾಡಾನೆಗಳನ್ನೂ ಸೆರೆಹಿಡಿದು ಕೊಂಡೊಯ್ಯುವಂತೆ ಹೇಳಿ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿ ಅರಣ್ಯ, ಪೊಲಿಸ್ ಇಲಾಖಾ ವಾಹನಗಳಿಗೆ ಕಲ್ಲು ತೂರಾಟ ಮಾಡಿ ಹಾನಿ ಉಂಟು ಮಾಡಿದ್ದಲ್ಲದೆ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆಗೆ ಯತ್ನಿಸಿದ್ದ ಆರೋಪದಲ್ಲಿ ಬಂಧಿತ ಏಳು ಮಂದಿಗೆ ಜಿಲ್ಲಾ […]

ಕಡಬ: ಆಪರೇಷನ್ ಎಲಿಫೆಂಟ್ ಕಾರ್ಯಾಚರಣೆ ವೇಳೆ ಅಧಿಕಾರಿಗಳೊಂದಿಗೆ ವಾಗ್ವಾದ- ಕರ್ತವ್ಯಕ್ಕೆ ಅಡ್ಡಿ ಪ್ರಕರಣ ➤ ಬಂಧಿತ 7 ಮಂದಿ ಆರೋಪಿಗಳಿಗೆ ಜಾಮೀನು Read More »

ಕರಾವಳಿ

ಮಂಗಳೂರು: ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಗತ್ಯ ಕ್ರಮ ಕೈಗೊಳ್ಳಿ ➤ ಡಿ.ಸಿ. ರವಿಕುಮಾರ್ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 18. ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದವರು ಜಿಲ್ಲೆಯಲ್ಲಿ ಕಾಡ್ಗಿಚ್ಚು ಹಾಗೂ ಇತರೆ ಬೆಂಕಿ ಅವಘಡಗಳನ್ನು ನಂದಿಸುವ ಕಾರ್ಯವನ್ನು ಉತ್ತಮವಾಗಿ ಮಾಡುತ್ತಿದ್ದು, ಈ ಕಾರ್ಯಕ್ಕೆ ಮತ್ತಷ್ಟು ಅನುಕೂಲವಾಗುವಂತೆ ಜಿಲ್ಲೆಯಲ್ಲಿರುವ ಬೃಹತ್ ಕೈಗಾರಿಕೆಗಳು, ಉದ್ದಿಮೆಗಳು ಬೆಂಕಿ ನಂದಿಸುವ ನೀರಿನ ಟ್ಯಾಂಕರ್’ಗಳನ್ನು ಒದಗಿಸಿಕೊಡಲು ಕೈಜೋಡಿಸುವಂತೆ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಕರೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಂಗಳೂರು: ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಗತ್ಯ ಕ್ರಮ ಕೈಗೊಳ್ಳಿ ➤ ಡಿ.ಸಿ. ರವಿಕುಮಾರ್ ಸೂಚನೆ Read More »

ಕರಾವಳಿ

ನಾಲ್ಕೂರು ಗ್ರಾಮದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

(ನ್ಯೂಸ್ ಕಡಬ) newskadaba.com.ಸುಳ್ಯ, ಮಾ 18.ಮಾ. 18ರಿಂದ ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಹಾಲೆ ಮಜಲು ಶ್ರೀ ವೆಂಕಟೇಶ್ವರ ಸಭಾ ಭವನದಲ್ಲಿ ಜಿಲ್ಲಾಧಿಕಾರಿಯವರು ಗ್ರಾಮ ವಾಸ್ತವ್ಯ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸ್ಥಳೀಯ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ, ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಲಿದ್ದಾರೆ. ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗುವಂತೆ ಅಪರ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಲ್ಕೂರು ಗ್ರಾಮದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ Read More »

ಕರಾವಳಿ, ಕರ್ನಾಟಕ

ವಿಟ್ಲ: ಬೈಕ್ ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಮಾ. 18. ಬೈಕ್ ಅಪಘಾತದಿಂದಾಗಿ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಾಣಿ ಬುಡೋಳಿಯಲ್ಲಿ ನಡೆದಿದೆ. ಮೃತರನ್ನು ಬುಡೋಳಿ ಪಾಟ್ರಕೋಡು ನಿವಾಸಿ ಫಾರೂಕ್ ಎಂದು ಗುರುತಿಸಲಾಗಿದೆ. ಇವರಿಗೆ 10 ವರ್ಷಗಳ ಹಿಂದೆ ವಿವಾಹವಾಗಿದ್ದು, ಕೆಲ ದಿನಗಳ ಹಿಂದೆಯಷ್ಟೇ ಅವರ ಪತ್ನಿಗೆ ಹೆರಿಗೆಯಾಗಿತ್ತು. ಮಗುವನ್ನು ನೋಡಲೆಂದು ಫಾರೂಕ್ ದೇರಳಕಟ್ಟೆಯ ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ದೇರಳಕಟ್ಟೆ ಆಸ್ಪತ್ರೆಯ ಬಳಿ ಅಪಘಾತ ಸಂಭವಿಸಿತ್ತು. ಅಪಘಾತದಿಂದಾಗಿ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಸ್ಥಳೀಯ

ವಿಟ್ಲ: ಬೈಕ್ ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ವಿಷಪದಾರ್ಥ ಸೇವಿಸಿ ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಟ್ಲ, ಮಾ. 18. ವ್ಯಕ್ತಿಯೋರ್ವರು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಡ್ಕಿದು ಗ್ರಾಮದ ಬಂಗೇರಕೋಡಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಬಂಗೇರಕೋಡಿ ನಿವಾಸಿ ವೀರಪ್ಪ ಗೌಡ ಎಂದು ಗುರುತಿಸಲಾಗಿದೆ‌. ಇವರು ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಪಕ್ಕದಲ್ಲಿ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೃತರ ಪುತ್ರ ಮುರಳೀಧರ ಕುಮಾರ್ ಬಿ.ರವರು ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪುತ್ತೂರು: ವಿಷಪದಾರ್ಥ ಸೇವಿಸಿ ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 18. ವ್ಯಕ್ತಿಯೋರ್ವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಾಲ್ಮರದ ಮುದ್ದೋಡಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಕೊಂಡವರನ್ನು ಮುದ್ದೋಡಿ ನಿವಾಸಿ ವಿಜಯ ರೈ (60) ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಇವರು, ಶುಕ್ರವಾರದಂದು ಸಂಜೆ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಗಮನಕ್ಕೆ ಬಂದ ತಕ್ಷಣವೇ ಮನೆ ಮಂದಿ ವಿಜಯ ರೈ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದರಾದರೂ ಆ ವೇಳೆಗಾಗಲೇ ವಿಜಯ ರೈ ಮೃತಪಟ್ಟಿದ್ದರು.

ಪುತ್ತೂರು: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಅಕ್ರಮ ಮದ್ಯ ಮಾರಾಟ ಪ್ರಕರಣದ ಆರೋಪಿಗೆ ನಿರೀಕ್ಷಣಾ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 18. ಅಕ್ರಮ ಮದ್ಯ ಮಾರಾಟ ಮಾಡಿದ ಆರೋಪದಡಿ ಬಂಧಿತರಾಗಿದ್ದ ಸರ್ವೆ ನಿವಾಸಿಗೆ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.   ಮಾ. 03ರಂದು ಸರ್ವೆ ಗ್ರಾಮದ ನಾರಾಯಣ ಎಂಬವರ ವಿರುದ್ಧ ಕಲo 32, 34, 43 ಕರ್ನಾಟಕ ಅಬಕಾರಿ ಕಾಯ್ದೆಯಂತೆ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ಆರೋಪಿ ನಾರಾಯಣ ಅವರು ನಿರೀಕ್ಷಣಾ ಜಾಮೀನು ಕೋರಿ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದೀಗ ಅರ್ಜಿಯ ವಿಚಾರಣೆ

ಪುತ್ತೂರು: ಅಕ್ರಮ ಮದ್ಯ ಮಾರಾಟ ಪ್ರಕರಣದ ಆರೋಪಿಗೆ ನಿರೀಕ್ಷಣಾ ಜಾಮೀನು ಮಂಜೂರು Read More »

ಕರಾವಳಿ

ಗಗನಸಖಿಯಾಗಿ ನೇಮಕಗೊಂಡ ಕಡಬದ ರಕ್ಷಾ ಎಸ್

(ನ್ಯೂಸ್ ಕಡಬ) newskadaba.com ಕಡಬ, ಮಾ. 18. ತಾಲೂಕು ಕೊಣಾಲು ಗ್ರಾಮದ ಆರ್ಲ ನಿವಾಸಿ ರಕ್ಷಾ ಯಸ್.ರವರು ‘ಗೋ ಫಸ್ಟ್’ ವಿಮಾನದಲ್ಲಿ ಗಗನಸಖಿಯಾಗಿ ನೇಮಕಗೊಂಡಿದ್ದಾರೆ. ಗಗನಸಖಿ ನೇಮಕಾತಿಗೆ ಸಂಬಂಧಿಸಿದಂತೆ ನಡೆದ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ರಕ್ಷಾ ಅವರು, ಬೆಂಗಳೂರಿನಲ್ಲಿ ನಡೆದ ಸಂದರ್ಶನಕ್ಕೆ ಹಾಜರಾಗಿ ಆಯ್ಕೆಗೊಂಡಿದ್ದರು. ಬಳಿಕ 6 ತಿಂಗಳ ತರಬೇತಿ ಮುಗಿಸಿದ ಅವರು ಇದೀಗ ಗೋ ಫಸ್ಟ್ ವಿಮಾನದಲ್ಲಿ ಗಗನಸಖಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರು ನೆಲ್ಯಾಡಿ ಜ್ಞಾನೋದಯ ಬೆಥನಿ ಆಂಗ್ಲಮಾಧ್ಯಮ ಶಾಲೆಯಲ್ಲಿ ಪ್ರಾಥಮಿಕ, ಹೈಸ್ಕೂಲ್ ಶಿಕ್ಷಣ ಮುಗಿಸಿ,

ಗಗನಸಖಿಯಾಗಿ ನೇಮಕಗೊಂಡ ಕಡಬದ ರಕ್ಷಾ ಎಸ್ Read More »

ಕರಾವಳಿ

ಮಾ. 21ಕ್ಕೆ ಪಿಲಿಕುಳದಲ್ಲಿ ಖಗೋಳಶಾಸ್ತ್ರದ ಚಟುವಟಿಕೆಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 17. ಮಾರ್ಚ್ 21 ಹಾಗೂ ಸೆಪ್ಟಂಬರ್ 23 ಹಗಲು ಹಾಗೂ ರಾತ್ರಿಗಳ ಹೆಚ್ಚು ಕಡಿಮೆ ಸಮನಾಗಿರುತ್ತದೆ. ಈ ದಿನ ಸೂರ್ಯನ ಕಿರಣಗಳು ಭೂಮಿಯ ಭ್ರಮಣದ ಅಕ್ಷಕ್ಕೆ ಲಂಬವಾಗಿ ಬೀಳುತ್ತವೆ. ಇತರ ಅಕ್ಷಾಂಶಗಳಲ್ಲಿ ಸೂರ್ಯನ ಕಿರಣಗಳು ಓರೆಯಾಗಿ ಬೀಳುತ್ತವೆ. ಆ ದಿನದಂದು ಮಾತ್ರ ಸೂರ್ಯನ ಕಿರಣಗಳ ಓರೆಕೋನವು ಆ ಸ್ಥಳದ ಅಕ್ಷಾಂಶಕ್ಕೆ ಸಮಾನವಾಗಿರುತ್ತದೆ. ಈ ಕಾರಣ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ಆವರಣದಲ್ಲಿ ಮಾ. 21 ರಂದು ಬೆಳಗ್ಗೆ 10.30 ರಿಂದ

ಮಾ. 21ಕ್ಕೆ ಪಿಲಿಕುಳದಲ್ಲಿ ಖಗೋಳಶಾಸ್ತ್ರದ ಚಟುವಟಿಕೆಗಳು Read More »

ಕರಾವಳಿ

SSLC ಪಬ್ಲಿಕ್ ಪರೀಕ್ಷೆ ಹಿನ್ನೆಲೆ  ➤ ಪೋಷಕರು, ವಿದ್ಯಾರ್ಥಿಗಳಿಗೆ ಸಹಾಯವಾಣಿ ಆರಂಭ

(ನ್ಯೂಸ್ ಕಡಬ) newskadaba.com  ಮಂಗಳೂರು, ಮಾ. 18. ಎಸ್.ಎಸ್.ಎಲ್.ಸಿ ಪರೀಕ್ಷಾ ಸಮೀಪಿಸುತ್ತಿದ್ದು ಎಂದಿನಂತೆ ಈ ಬಾರಿಯೂ ಕೂಡ ವಿದ್ಯಾರ್ಥಿಗಳ ನಡುವೆ ಗೊಂದಲ ನಿವಾರಣೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ವರ್ಷವೂ ಸಹಾಯವಾಣಿ ಪ್ರಾರಂಭಿಸಿದೆ ಎನ್ನಲಾಗಿದೆ. ಮಾರ್ಚ್ 20 ರಿಂದ 28ರ ವರೆಗೆ ಮಧ್ಯಾಹ್ನ 3 ರಿಂದ 7:30ರ ವರೆಗೆ ವಿದ್ಯಾರ್ಥಿಗಳು ಮತ್ತು ಪಾಲಕರು ಹಾಗೂ ಮಾ.26 ರಂದು ಬೆಳಗ್ಗೆ 11 ರಿಂದ ಸಂಜೆ 6 ರವರೆಗೆ ಇರಲಿದೆ. ಮಾ. 31ರಿಂದ ಏ.

SSLC ಪಬ್ಲಿಕ್ ಪರೀಕ್ಷೆ ಹಿನ್ನೆಲೆ  ➤ ಪೋಷಕರು, ವಿದ್ಯಾರ್ಥಿಗಳಿಗೆ ಸಹಾಯವಾಣಿ ಆರಂಭ Read More »

ಕರಾವಳಿ
Scroll to Top