ಕರಾವಳಿ

ಕಾರು ಮತ್ತು ಕಂಟೈನರ್ ನಡುವೆ ಅಪಘಾತ ➤ ಪ್ರಾಧ್ಯಾಪಕನೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com   ಹೊನ್ನಾವರ, ಮಾ.18. ಕಾರು ಹಾಗೂ ಕಂಟೈನರ್ ನಡುವೆ ಢಿಕ್ಕಿ ಸಂಭವಿಸಿ ಬಂಟಕಲ್ಲು ಶ್ರಿ ಮಧ್ವ ವಾದಿರಾಜ ತಾಂತ್ರಿಕ ಕಾಲೇಜಿನ ಮೆಕ್ಯಾನಿಕಲ್‌ ವಿಭಾಗದ ಹಿರಿಯ ಸಹಾಯಕ ಪ್ರಾಧ್ಯಾಪಕರೊಬ್ಬರು ಮೃತಪಟ್ಟ ಘಟನೆ ಹೊನ್ನಾವರದಲ್ಲಿ ನಡೆದಿದೆ. ಹಿರಿಯ ಸಹಾಯಕ ಪ್ರಾಧ್ಯಾಪಕ ಅನಂತೇಶ ರಾವ್‌ (40) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅನಂತೇಶ ರಾವ್ ಅವರು ಸೋದೆ ಮೂಲ ಮಠಕ್ಕೆ ಉಡುಪಿಯಿಂದ ತೆರಳುತ್ತಿದ್ದರು. ಈ ವೇಳೆ ಹೊನ್ನಾವರ ಬಳಿ ಅವರ ಕಾರು ಕಂಟೈನರ್‌ಗೆ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡ ಅವರು […]

ಕಾರು ಮತ್ತು ಕಂಟೈನರ್ ನಡುವೆ ಅಪಘಾತ ➤ ಪ್ರಾಧ್ಯಾಪಕನೋರ್ವ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಟ್ಯಾಪಿಂಗ್ ಕತ್ತಿ ಎದೆಗೆ ಹೊಕ್ಕಿ ಮಹಿಳೆ ಮೃತ್ಯು..!

(ನ್ಯೂಸ್ ಕಡಬ) newskadaba.com ಕಡಬ, ಮಾ. 17. ಟ್ಯಾಪಿಂಗ್ ಕತ್ತಿ ಎದೆಗೆ ಹೊಕ್ಕು ಗಂಭೀರ ಗಾಯಗೊಂಡು ಮಹಿಳೆ ಮೃತಪಟ್ಟ ಘಟನೆ ತಾಲೂಕಿನ ಎಡಮಂಗಲ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಎಡಮಂಗಲ ಗ್ರಾಮದ ಬಳಕ್ಕಬೆ ನಿವಾಸಿ ಶಿವರಾಮ ಎಂಬವರ ಪತ್ನಿ ಗೀತಾ ಎಂದು ಗುರುತಿಸಲಾಗಿದೆ. ಗೀತಾರವರು ತಮ್ಮದೇ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಎಡವಿ ಬಿದ್ದಿದ್ದು, ಈ ವೇಳೆ ಅವರ ಕೈಯಲ್ಲಿದ್ದ ಕತ್ತಿ ಎದೆಯೊಳಗೆ ಹೊಕ್ಕು ಗಂಭೀರ ಗಾಯಗೊಂಡು ಮೃತಪಟ್ಟಿರುವುದಾಗಿ ಅವರ ಪತಿ

ಕಡಬ: ಟ್ಯಾಪಿಂಗ್ ಕತ್ತಿ ಎದೆಗೆ ಹೊಕ್ಕಿ ಮಹಿಳೆ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ವಾಣಿಜ್ಯ ಮಳಿಗೆಯಲ್ಲಿ ಬೆಂಕಿ ಅವಘಡ ➤ ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ. 17. ಇಲ್ಲಿನ ಪೃಥ್ವಿ ವಾಣಿಜ್ಯ ಮಳಿಗೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರು ಸೇರಿ ಬೆಂಕಿ ನಂದಿಸಿದ್ದರಿಂದ ದೊಡ್ಡ ಅನಾಹುತವನ್ನು ತಪ್ಪಿದಂತಾಗಿದೆ. ವಾಣಿಜ್ಯ ಮಳಿಗೆಯ ವಿದ್ಯುತ್ ಮೀಟರ್ ಬೋರ್ಡ್ ಗಳಿರುವ ಎರಡು ಕೇಂದ್ರಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ಸಂಭವಿಸಿದೆನ್ನಲಾಗಿದೆ.  

ಉಪ್ಪಿನಂಗಡಿ: ವಾಣಿಜ್ಯ ಮಳಿಗೆಯಲ್ಲಿ ಬೆಂಕಿ ಅವಘಡ ➤ ತಪ್ಪಿದ ಅನಾಹುತ Read More »

ಕರಾವಳಿ, ಕ್ರೈಮ್ ನ್ಯೂಸ್

ಫಲಾನುಭವಿಗಳ ಸಮ್ಮೇಳನ- ಕಡಬ, ಪುತ್ತೂರು ವ್ಯಾಪ್ತಿಯ ಬಸ್ ಸಂಚಾರದಲ್ಲಿ ವ್ಯತ್ಯಯ ➤ ಸಾರ್ವಜನಿಕರು ಸಹಕರಿಸುವಂತೆ ಮನವಿ

(ನ್ಯೂಸ್ ಕಡಬ) newskadaba.com ಮಡಿಕೇರಿ, ಮಾ. 17. ಮಡಿಕೇರಿಯಲ್ಲಿ ನಡೆಯುವ ಫಲಾನುಭವಿಗಳ ಸಮ್ಮೇಳನಕ್ಕೆ ಒಪ್ಪಂದದ ಮೇರೆಗೆ ಬಸ್ಸುಗಳನ್ನು ನಿಯೋಜಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮಾ. 18 ರಂದು ಮಡಿಕೇರಿ, ಕುಶಾಲನಗರ, ವೀರಾಜಪೇಟೆ, ಸೋಮವಾರಪೇಟೆ, ಪುತ್ತೂರು, ಸುಳ್ಯ, ಕಡಬ ತಾಲೂಕುಗಳ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ ಕೆಎಸ್‍ಆರ್.ಟಿಸಿ ಬಸ್ ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಸಾರ್ವಜನಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಹಕರಿಸುವಂತೆ ಕೆಎಸ್‍ಆರ್.ಟಿಸಿ ಪುತ್ತೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಬಿ.ಜಯಕರ ಶೆಟ್ಟಿ ಮನವಿ ಮಾಡಿದ್ದಾರೆ.  

ಫಲಾನುಭವಿಗಳ ಸಮ್ಮೇಳನ- ಕಡಬ, ಪುತ್ತೂರು ವ್ಯಾಪ್ತಿಯ ಬಸ್ ಸಂಚಾರದಲ್ಲಿ ವ್ಯತ್ಯಯ ➤ ಸಾರ್ವಜನಿಕರು ಸಹಕರಿಸುವಂತೆ ಮನವಿ Read More »

ಕರಾವಳಿ, ಕರ್ನಾಟಕ

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯ ಅತ್ಯಾಚಾರ ➤ ದಂತ ವೈದ್ಯನ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 17. ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯವೆಸಗಿದ ದಂತ ವೈದ್ಯನ ವಿರುದ್ದ ನರ್ಸ್ ಓರ್ವರು ಮಂಗಳೂರು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.   ನಗರದ ಖಾಸಗಿ ಆಸ್ಪತ್ರೆಯೊಂದರ ನರ್ಸ್ ಗೆ ಮಂಗಳೂರಿನ ದಂತ ವೈದ್ಯಕೀಯ ಕಾಲೇಜಿನಲ್ಲಿ ಬಿಡಿಎಸ್ ಫೈನಲ್ ಡಿಗ್ರಿ ಓದುತ್ತಿದ್ದ ಕೇರಳ ಮೂಲದ ದಂತ ವೈದ್ಯ ನ ಪರಿಚಯವಾಗಿತ್ತು. ಬಳಿಕ ಆತ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದು, ಆಕೆ ಗರ್ಭವತಿಯಾದಾಗ ಮಾತ್ರೆ ನೀಡಿ ಗರ್ಭಪಾತ ಮಾಡಿಸಿದ್ದ ಎಂದು ದೂರಿನಲ್ಲಿ

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯ ಅತ್ಯಾಚಾರ ➤ ದಂತ ವೈದ್ಯನ ವಿರುದ್ದ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ಸಾಲಭಾದೆಯಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಟ್ಲ, ಮಾ. 17. ಸಾಲಭಾದೆಯಿಂದ ಮನನೊಂದು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕೋಲ್ಪೆ ಬಂಗಾರಕೋಡಿ ನಿವಾಸಿ ವೀರಪ್ಪ ಗೌಡ (55) ಎಂದು ಗುರುತಿಸಲಾಗಿದೆ. ಕೃಷಿಕರಾಗಿರುವ ಇವರು ಸಾಲಭಾದೆಯಿಂದ ಮನನೊಂದು ಆತ್ಮಹತ್ಯೆ ಶರಣಾಗಿದ್ದಾರೆ ಎನ್ನಲಾಗಿದೆ. ಮೃತರು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.  

ವಿಟ್ಲ: ಸಾಲಭಾದೆಯಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ

ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ 24 ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ) newskadaba.com ಉಡುಪಿ, ಮಾ. 17. ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಕಳೆದ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ 24ಕ್ಕೂ ಅಧಿಕ ಸಂಖ್ಯೆಯ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿರುವ ಉಡುಪಿ ಪೊಲೀಸರು ಅವರನ್ನು ನ್ಯಾಯಾಲಯಗಳಿಗೆ ಹಾಜರು ಪಡಿಸಿದ್ದಾರೆ. ಜಿಲ್ಲೆಯಲ್ಲಿ ವಿವಿಧ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆ ಹಚ್ಚಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೇಂದ್ರ ಹಾಕೆ ಅವರು ವಿಶೇಷ ತಂಡಗಳನ್ನು ರಚಿಸಿದ್ದು, ಈ ತಂಡಗಳು ಸುಮಾರು 15 ದಿನಗಳಲ್ಲಿ ಹೊರ ಜಿಲ್ಲೆ ಹಾಗೂ ಹೊರರಾಜ್ಯಗಳಲ್ಲಿ

ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ 24 ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕರ್ನಾಟಕ

ದಾಖಲಾತಿ ಇಲ್ಲದೇ 20 ಲಕ್ಷ ರೂ. ಸಾಗಾಟ ➤ ಆರೋಪಿ ಸಹಿತ ನಗದು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೈಂದೂರು, ಮಾ. 17. ಸೂಕ್ತ ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 20 ಲಕ್ಷ ರೂ.ಗಳನ್ನು ಆರೋಪಿ ಸಹಿತ ಬೈಂದೂರು ಠಾಣಾ ಪೊಲೀಸರು ವಶಪಡಿಸಿದ ಘಟನೆ ವರದಿಯಾಗಿದೆ. ಬಂಧಿತನನ್ನು ಕಾರು ಚಲಾಯಿಸುತ್ತಿದ್ದ ಬೆಳ್ತಂಗಡಿ ಶಿರ್ಲಾಲು ಮಂಜಿಲಪಲ್ಕೆ ನಿವಾಸಿ ಬಶೀರ್ (42) ಎಂದು ಗುರುತಿಸಲಾಗಿದೆ. ಉಡುಪಿ ಜಿಲ್ಲೆಯ ಗಡಿಭಾಗದ ಶಿರೂರು ಚೆಕ್‌ಪೋಸ್ಟ್‌ನಲ್ಲಿ ಮಾ.16ರಂದು ವಾಹನ ತಪಾಸಣೆ ನಡೆಸುತ್ತಿದ್ದ ಎಸ್‌ಐ ನಿರಂಜನಗೌಡ ಮತ್ತು ಸಿಬ್ಬಂದಿ ಭಟ್ಕಳದಿಂದ ಬಂದ ನೋಂದಣಿ ನಂಬರ್ ಪ್ಲೇಟ್ ಇಲ್ಲದ ಕಾರನ್ನು ತಡೆ ಹಿಡಿದು,

ದಾಖಲಾತಿ ಇಲ್ಲದೇ 20 ಲಕ್ಷ ರೂ. ಸಾಗಾಟ ➤ ಆರೋಪಿ ಸಹಿತ ನಗದು ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಗುತ್ತಿಗಾರು ಸರಕಾರಿ ಪ್ರೌಢ ಶಾಲೆಯಿಂದ ಕಂಪ್ಯೂಟರ್ ಬ್ಯಾಟರಿ ಕಳವು ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಗುತ್ತಿಗಾರು, ಮಾ. 17. ಇಲ್ಲಿನ  ಸರಕಾರಿ ಪ್ರೌಢ ಶಾಲೆಯಲ್ಲಿನ ಕೊಠಡಿಯಲ್ಲಿದ್ದ ಕಂಪ್ಯೂಟರ್ ನ ಹಳೆಯ ಬ್ಯಾಟರಿಗಳನ್ನು ಕಳವುಗೈದಿರುವ ಬಗ್ಗೆ ಶಾಲಾ ಮುಖ್ಯಸ್ಥರು ದೂರು ದಾಖಲಿಸಿದ್ದಾರೆ. ಇಲಾಖೆಯಿಂದ ಪೂರೈಕೆಯಾಗಿದ್ದ 16 ಬ್ಯಾಟರಿಗಳು ಕಳವಾಗಿದ್ದು, ಈ ಬ್ಯಾಟರಿಗಳ ಅಂದಾಜು ಮೌಲ್ಯ 16 ಸಾವಿರ ರೂ. ಎನ್ನಲಾಗಿದೆ. ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಐಪಿಸಿ ಕಲಂ 380,454, 457ರಂತೆ ಪ್ರಕರಣ ದಾಖಲಿಸಲಾಗಿದೆ.

ಗುತ್ತಿಗಾರು ಸರಕಾರಿ ಪ್ರೌಢ ಶಾಲೆಯಿಂದ ಕಂಪ್ಯೂಟರ್ ಬ್ಯಾಟರಿ ಕಳವು ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಬೀದಿಬದಿ ವ್ಯಾಪಾರಿಗಳಿಂದ ನಿಯಮಾನುಸಾರ ವ್ಯಾಪಾರ ನಡೆಸಲು ಸಿ.ಎಂ.ಗೆ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 17. ಇಲ್ಲಿನ ಪಾಲಿಕೆ ವ್ಯಾಪ್ತಿಯ ಬೀದಿಬದಿ ವ್ಯಾಪಾರಿಗಳಿಗೆ ನಿಯಮಾನುಸಾರ ವ್ಯಾಪಾರ ನಡೆಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಿಗಳ ಶ್ರೇಯೋಭಿವೃದ್ಧಿ ಸಂಘದ ನಿಯೋಗವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ವ್ಯಾಪಾರಿಗಳಿಗೆ ಜೀವನೋಪಾಯ ಸಂರಕ್ಷಣೆ ಮತ್ತು ನಿಯಂತ್ರಣ ಕಾಯ್ದೆ ಮತ್ತು 2019 ರ ಕರ್ನಾಟಕ ಬೀದಿಬದಿ ವ್ಯಾಪಾರ ನಿಯಮಗಳ ವ್ಯಾಪಾರಕ್ಕೆ ಅವಕಾಶ ನೀಡುತ್ತಿಲ್ಲ. ಅಧಿಕಾರಿಗಳು ಗುರುತಿನ ಚೀಟಿ ಮತ್ತು

ಬೀದಿಬದಿ ವ್ಯಾಪಾರಿಗಳಿಂದ ನಿಯಮಾನುಸಾರ ವ್ಯಾಪಾರ ನಡೆಸಲು ಸಿ.ಎಂ.ಗೆ ಮನವಿ Read More »

ಕರಾವಳಿ, ಕರ್ನಾಟಕ
Scroll to Top