ಕರಾವಳಿ

ಕಾರ್ಕಳ: ಅನಾರೋಗ್ಯ ಹಿನ್ನೆಲೆ..! ➤ ಮನೆನೊಂದು ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಕಾರ್ಕಳ, ಮಾ.04. ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ನಿಟ್ಟೆಯಲ್ಲಿ ನಡೆದಿದೆ. ಮೃತರನ್ನು ಶಿರೂರು ಕರಾವಳಿ ನಿವಾಸಿ ಶೀಲಾವತಿ ಶೆಡ್ಡಿ ಎಂಬವರ ಮಗಳು ಸೀಮಾ (22) ಎಂದು ಗುರುತಿಸಲಾಗಿದೆ. ಇವರು ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದು, ನಿಟ್ಟೆ ಕಾಲೇಜಿನ ಹಾಸ್ಟೆಲ್ ನಲ್ಲಿದ್ದರು. ನರ ಹಾಗೂ ಚರ್ಮದ ಸಮಸ್ಯೆಯಿಂದ ಮನನೊಂದು 4-5 ತಿಂಗಳ ಹಿಂದೆ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಇದೀಗ ಮತ್ತೆ ಇದೇ ವಿಚಾರದಿಂದ ಮನನೊಂದು […]

ಕಾರ್ಕಳ: ಅನಾರೋಗ್ಯ ಹಿನ್ನೆಲೆ..! ➤ ಮನೆನೊಂದು ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಕರಾವಳಿಗೆ ಬಿಸಿ ಗಾಳಿಯ ಆತಂಕ ➤ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

(ನ್ಯೂಸ್ ಕಡಬ)newskadaba.com ಮಂಗಳೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸಹಿತ ಸಹಿತ ಕರಾವಳಿ ಕರ್ನಾಟಕ ಭಾಗದಲ್ಲಿ ಮುಂದಿನ 48 ಗಂಟೆಗಳಲ್ಲಿ ಬಲವಾದ ಬಿಸಿ ಗಾಳಿ ಬೀಸುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಳೆದೊಂದು ವಾರದಿಂದ ತೀವ್ರ ಬಿಸಿಲಿನ ವಾತಾವರಣವಿದೆ. ಬೇಸಿಗೆಯ ಆರಂಭದಲ್ಲಿಯೇ ವಾಡಿಕೆಗಿಂತ ಹೆಚ್ಚಿನ ತಾಪಮಾನ ದಾಖಲಾಗುತ್ತಿದೆ. ಮಾರ್ಚ್ ಮೂರನೇ ವಾರದವರೆಗೆ ಗರಿಷ್ಟ ಉಷ್ಣಾಂಶ ಮುಂದುವರಿಯುವ ಸಾಧ್ಯತೆ ಇದೆ.

ಮಂಗಳೂರು: ಕರಾವಳಿಗೆ ಬಿಸಿ ಗಾಳಿಯ ಆತಂಕ ➤ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ Read More »

ಕರಾವಳಿ

ಪೆಟ್ರೋಲ್‌ ರಿಕ್ಷಾ ಹಾಗೂ ಇ-ಆಟೋ ಚಾಲಕರ ನಡುವೆ ಗಲಾಟೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.04. ಪೆಟ್ರೋಲ್‌ ಚಾಲಿತ ಆಟೋ ರಿಕ್ಷಾ ಚಾಲಕರು ಹಾಗೂ ಇ-ಆಟೋ ಚಾಲಕರ ನಡುವೆ ಪಾರ್ಕಿಂಗ್‌ ವಿಚಾರಕ್ಕೆ ಗಲಾಟೆ ನಡೆದ ಘಟನೆ ನಗರದಲ್ಲಿ ನಡೆದಿದೆ. ನಂತರ ಹಿರಿಯ ಪೊಲೀಸ್‌ ಅಧಿಕಾರಿಗಳು ಇತ್ತಂಡಗಳ ಪ್ರಮುಖರನ್ನು ಕರೆದು ರಾಜಿ ಸಂಧಾನ ನಡೆಸಿ ಗೊಂದಲ ಬಗೆಹರಿಸಿದ್ದಾರೆಂದು ತಿಳಿದುಬಂದಿದೆ. ಅಲ್ಲದೇ ಇನ್ನೊಂದು ವಾರದೊಳಗೆ ಇ-ಆಟೋಗಳಿಗೆ ವಲಯ ಸಂಖ್ಯೆ ನಮೂದಿಸುವ ಪ್ರಕ್ರಿಯೆ ನೆರವೇರಲಿದೆ ಎಂದು ತಿಳಿದುಬಂದಿದೆ.  

ಪೆಟ್ರೋಲ್‌ ರಿಕ್ಷಾ ಹಾಗೂ ಇ-ಆಟೋ ಚಾಲಕರ ನಡುವೆ ಗಲಾಟೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ಯುವಕನಿಗೆ ಚೂರಿಯಿಂದ ಇರಿದು ಕೊಲೆ ಯತ್ನ ➤ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)newskadaba.com ಉಳ್ಳಾಲ, ಮಾ.04. ಯುವಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಮಂಗಳೂರಿನ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಪುರ ಎಂಬಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಕೋಟೆಪುರ ನಿವಾಸಿ ಸದಕತ್ತುಲ್ಲಾ (34) ಮೇಲೆ ಚೂರಿಯಿಂದ ಇರಿಯಲಾಗಿದೆ.ತಕ್ಷಣ ಅವರನ್ನು ಇಂಡಿಯಾನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದಕತ್ತುಲ್ಲಾ ಮನೆಯಲ್ಲಿದ್ದ ಸಂದರ್ಭ ಎದುರುಗಡೆ ಕರೆಸಿ ಚೂರಿಯಿಂದ ಹೊಟ್ಟೆ ಭಾಗಕ್ಕೆ ಇರಿಯಲಾಗಿದೆ ಎನ್ನಲಾಗಿದೆ. ತಕ್ಷಣ ಮನೆಮಂದಿ ಆಸ್ಪತ್ರೆಗೆ ದಾಖಲಿಸಿದ್ದಾರೆ.    

ಉಳ್ಳಾಲ: ಯುವಕನಿಗೆ ಚೂರಿಯಿಂದ ಇರಿದು ಕೊಲೆ ಯತ್ನ ➤ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಸುರತ್ಕಲ್:  ಜಲೀಲ್ ಕೊಲೆ ಪ್ರಕರಣ ➤ ಆರೋಪಿಗೆ ಜಾಮೀನು ಮಂಜೂರು

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.04. ಸುರತ್ಕಲ್ ಕಾಟಿಪಳ್ಳದ ಅಬ್ದುಲ್ ಜಲೀಲ್ ಕೊಲೆ ಪ್ರಕರಣದ ಆರೋಪಿಯೋರ್ವನಿಗೆ ನ್ಯಾಯಾಲಯ ಜಾಮೀನು ನೀಡಿದೆ ಎಂದು ಗುರುತಿಸಲಾಗಿದೆ. ಜಲೀಲ್ ಕೊಲೆ ಪ್ರಕರಣದ ಮೂರನೇ ಆರೋಪಿ ಪವನ್ ಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾದೀಶರಾದ ರವೀಂದ್ರ ಜೋಷಿ ಅವರು ಶರತ್ತು ಬದ್ದ ಜಾಮೀನು ಮಂಜೂರು ಮಾಡಿದ್ದಾರೆ. ಸುರತ್ಕಲ್​​ನ ಕಾಟಿಪಳ್ಳ ನಾಲ್ಕನೇ ಬ್ಲಾಕ್​ನಲ್ಲಿ ಜಲೀಲ್(45) ಎಂಬುವರಿಗೆ ದುಷ್ಕರ್ಮಿಗಳು ಡಿ.24ರಂದು ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದರು.ಪ್ರಕರಣ ರಾಜ್ಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.

ಸುರತ್ಕಲ್:  ಜಲೀಲ್ ಕೊಲೆ ಪ್ರಕರಣ ➤ ಆರೋಪಿಗೆ ಜಾಮೀನು ಮಂಜೂರು Read More »

ಕರಾವಳಿ

➤ ಕಡಬ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ!

(ನ್ಯೂಸ್ ಕಡಬ) newskadaba.com. ಕಡಬ, ಮಾ 3. ಕೋಡಿಂಬಾಳ ಗ್ರಾಮದ ಕಜೆಮೂಲೆ ನಿವಾಸಿ ಮಹಮ್ಮದ್ ಆತ್ಮಹತ್ಯೆಗೆ ಶರಣಾದವರು. ಕೋಡಿಂಬಾಳದ  ಕಾರ್ಖಾನೆ ಎಂಬಲ್ಲಿ  ಮಾವಿನ ಮರದ ಕೊಂಬೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಸುಮಾರು 06 ವರ್ಷಗಳಿಂದ ಅಸ್ತಮಾ ಕಾಯಿಲೆಯಿಂದ ಬಳಲುತ್ತಿದ್ದು, ಯಾವುದೇ ಕೆಲಸ ಮಾಡಲು ಆಗದೆ ಇದ್ದುದರಿಂದ ಮಾನಸಿಕವಾಗಿ ನೊಂದಿದ್ದು, ಅದೇ ವಿಚಾರವಾಗಿ ಜೀವನದಲ್ಲಿ ಜಿಗುಪ್ಸೆಗೊಂಡು  ನೇಣು ಬಿಗಿದಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

➤ ಕಡಬ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ! Read More »

ಕರಾವಳಿ, ಕ್ರೈಮ್ ನ್ಯೂಸ್

➤ ಕಡಬ ಶಿವಾರು ರಕ್ಷಿತಾರಣ್ಯದ ಹಳೆನೇರೆಂಕಿ ಭಾಗದಲ್ಲಿ ಕಳೆದ ಕೆಲ ದಿನಗಳಿಂದ ಹರಡುತ್ತಿರುವ ಬೆಂಕಿ

(ನ್ಯೂಸ್ ಕಡಬ) newskadaba.com. ಬಂಟ್ವಾಳ, ಮಾ 3. ಕಡಬ, ಮಾ 03.  ಕಡಬ ತಾಲೂಕಿನ ನೆಲ್ಯಾಡಿ ಸಮೀಪದಬ ಶಿವಾರು ರಕ್ಷಿತಾರಣ್ಯದ ಹಳೆನೇರೆಂಕಿ ಭಾಗದಲ್ಲಿ ಕಳೆದ ಕೆಲ  ದಿನಗಳಿಂದ ಹರಡುತ್ತಿರುವ ಬೆಂಕಿ ನಿಯಂತ್ರಣಕ್ಕೆ ಬಾರದೆ ಮತ್ತೆ ಮುಂದಕ್ಕೆ ಸಾಗುತ್ತಿದ್ದು, ಬೆಂಕಿ ನಂದಿಸಲು ಗ್ರಾಮಸ್ಥರು, ಅಗ್ನಿಶಾಮಕ ದಳ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. ಮೂರು ದಿನದ ಹಿಂದೆ ಶಿವಾರು ರಕ್ಷಿತಾರಣ್ಯದ ಹಳೆನೇರೆಂಕಿ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಅರಣ್ಯ ಸಿಬ್ಬಂದಿಗಳ ಜೊತೆಗೆ ಗ್ರಾಮಸ್ಥರು ಸಹಕರಿಸಿ ಬೆಂಕಿ ನಂದಿಸಿದ್ದರು. ಆದರೆ

➤ ಕಡಬ ಶಿವಾರು ರಕ್ಷಿತಾರಣ್ಯದ ಹಳೆನೇರೆಂಕಿ ಭಾಗದಲ್ಲಿ ಕಳೆದ ಕೆಲ ದಿನಗಳಿಂದ ಹರಡುತ್ತಿರುವ ಬೆಂಕಿ Read More »

ಕರಾವಳಿ

ಬಂಟ್ವಾಳ ಅಕ್ರಮ ಮದ್ಯ ಮಾರಾಟ ➤ ಓರ್ವ ಅರೆಸ್ಟ್!

(ನ್ಯೂಸ್ ಕಡಬ) newskadaba.com. ಬಂಟ್ವಾಳ, ಮಾ 3. ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ, ಬಗ್ಗೆ ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಎಸ್. ಐ.ರಾಮಕೃಷ್ಣ ಅವರು ಆರೋಪಿ ಸಹಿತ ಮದ್ಯವನ್ನು ವಶಕ್ಕೆ ಪಡೆದುಕೊಂಡ ಘಟನೆ  ನಡೆದಿದೆ. ಕಳ್ಳಿಗೆ ಗ್ರಾಮದ ಜಾರಂದಗುಡ್ಡೆ ನಿವಾಸಿ ಅಶೋಕ ಬಂಧಿತ ಆರೋಪಿ. ಈತನಿಂದ 2217 ರೂ ಮೌಲ್ಯದ 90 ಎಂ.ಎಲ್.ನ ಮೈಸೂರು ಲ್ಯಾನ್ಸರ್ ವಿಸ್ಕಿ ಎಂಬ ಹೆಸರಿನ 10 ಮದ್ಯದ ಸ್ಯಾಚೇಟ್ ಹಾಗೂ 500 ರೂ ನಗದನ್ನು ವಶಕ್ಕೆ

ಬಂಟ್ವಾಳ ಅಕ್ರಮ ಮದ್ಯ ಮಾರಾಟ ➤ ಓರ್ವ ಅರೆಸ್ಟ್! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

➤ ಕರಾವಳಿಯಲ್ಲಿ 36.9 ಡಿಗ್ರಿ ಸೆ. ಉಷ್ಣಾಂಶ

ನ್ಯೂಸ್ ಕಡಬ) newskadaba.com. ಮಂಗಳೂರು. ಮಾ 3.ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ಉಷ್ಣಾಂಶ ಏರಿಕೆ ಕಾಣುತ್ತಿದ್ದು, ದಾಖಲೆಯತ್ತ ಸಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಮಂಗಳೂರಿನಲ್ಲಿ ಗುರುವಾರ 36.9 ಡಿ. ಸೆ ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ಇದು ದೇಶದಲ್ಲಿಯೇ ಅತ್ಯಧಿಕವಾಗಿತ್ತು. ಅಲ್ಲದೇ ಇದು ವಾಡಿಕೆಗಿಂತ 3 ಡಿ.ಸೆ ಹೆಚ್ಚಳವಾಗಿದೆ. ಇದೇ ವೇಳೆ 23.8 ಡಿ.ಸೆ ಕನಿಷ್ಠ ತಾಪಮಾನ ದಾಖಲಾಗಿದ್ದು, 1 ಡಿ.ಸೆ ಏರಿಕೆಯಾಗಿದೆ ಎಂದು ತಿಳಿದು ಬಂದಿದೆ.

➤ ಕರಾವಳಿಯಲ್ಲಿ 36.9 ಡಿಗ್ರಿ ಸೆ. ಉಷ್ಣಾಂಶ Read More »

ಕರಾವಳಿ

ಮಂಗಳೂರು: ಪುತ್ರಿಯರ ಅತ್ಯಾಚಾರ ಆರೋಪ.! ➤ ತಂದೆ ದೋಷಮುಕ್ತಿ

(ನ್ಯೂಸ್ ಕಡಬ)newskadaba.com  ಮಂಗಳೂರು, ಮಾ.03. ಇಬ್ಬರು ಪುತ್ರಿಯರು ತಮ್ಮ ತಂದೆಯ ಮೇಲೆ ಹೊರಿಸಿದ್ದ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದ ಒಂದು ಪ್ರಕರಣವು ಮಂಗಳೂರು ಪೊಕ್ಸೊ ನ್ಯಾಯಾಲಯದಲ್ಲಿ ಖುಲಾಸೆಗೊಂಡಿದೆ. ಕಾಟಿಪಳ್ಳದ ನಿವಾಸಿ ಅಬ್ದುಲ್ ಹಕೀಂ ಈ ಪ್ರಕರಣದಲ್ಲಿ ದೋಷಮುಕ್ತಗೊಂಡ ವ್ಯಕ್ತಿ ಎಂದು ವರದಿ ತಿಳಿಸಿದೆ. 2021ರ ಜೂನ್‌ನಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು.  

ಮಂಗಳೂರು: ಪುತ್ರಿಯರ ಅತ್ಯಾಚಾರ ಆರೋಪ.! ➤ ತಂದೆ ದೋಷಮುಕ್ತಿ Read More »

ಕರಾವಳಿ
Scroll to Top