ಕರಾವಳಿ

ರೈಲಿನಲ್ಲಿ ಕಳೆದುಹೋಗಿದ್ದ 8.57 ಲಕ್ಷ ಮೌಲ್ಯದ ಚಿನ್ನವಿದ್ದ ಬ್ಯಾಗ್ ಕೊನೆಗೂ ಪತ್ತೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.01. ಮುಂಬೈಯಿಂದ ಮಂಗಳೂರಿಗೆ ಬರುತ್ತಿದ್ದ ರೈಲಿನಲ್ಲಿ ಕಳೆದುಹೋಗಿದ್ದ ಚಿನ್ನಾಭರಣಗಳಿದ್ದ ಟ್ರಾಲಿ ಬ್ಯಾಗ್‌ ನಗರದ ಕುಲಶೇಖರದಲ್ಲಿ ರೈಲು ಹಳಿ ಪಕ್ಕದಲ್ಲಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ರವೀಂದ್ರ ಎಂ.ಶೆಟ್ಟಿ (74) ಮತ್ತು ಅವರ ಪತ್ನಿ ಶಶಿಕಲಾ ಶೆಟ್ಟಿ ಅವರು ಮಂಗಳೂರಿಗೆ ರೈಲಿನಲ್ಲಿ ಬರುತ್ತಿದ್ದಾಗ ಸುರತ್ಕಲ್‌ನಿಂದ ಮಂಗಳೂರು ನಡುವೆ ಅವರ ಟ್ರಾಲಿ ಬ್ಯಾಗ್‌ ಕಳೆದು ಹೋಗಿತ್ತು. ಕಳವಾಗಿರುವ ಬಗ್ಗೆ ಮಂಗಳೂರು ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಎನ್ನಲಾಗಿದೆ.

ರೈಲಿನಲ್ಲಿ ಕಳೆದುಹೋಗಿದ್ದ 8.57 ಲಕ್ಷ ಮೌಲ್ಯದ ಚಿನ್ನವಿದ್ದ ಬ್ಯಾಗ್ ಕೊನೆಗೂ ಪತ್ತೆ Read More »

ಕರಾವಳಿ

➤➤ ಉದ್ಯೋಗ ಮಾಹಿತಿ ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು ➤ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಕಡಬ, ಫೆ. 28. ಕಡಬದ ಹಲವು ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ. ಕಡಬದ ಆಗ್ರೋ ಸೇಲ್ಸ್ ಸಂಸ್ಥೆಯೊಂದಕ್ಕೆ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಆಕರ್ಷಕ ವೇತನ ನೀಡಲಾಗುವುದು. ಆಸಕ್ತರು ಸಂಪರ್ಕಿಸಿ: 9591852522 ಕಡಬದ ಸುರಕ್ಷಾ ಪೈಂಟ್ಸ್ & ಹಾರ್ಡ್ ವೇರ್ ಮಳಿಗೆಗೆ ಸೇಲ್ಸ್ ಗರ್ಲ್

➤➤ ಉದ್ಯೋಗ ಮಾಹಿತಿ ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು ➤ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

ಬಂಟ್ವಾಳ: ಗ್ರಾ.ಪಂ ಉಪಚುನಾವಣೆ ➤ ಅನಂತಾಡಿಯಲ್ಲಿ ಕಾಂಗ್ರೆಸ್, ನೆಟ್ಲಮಡ್ನೂರಿನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆಲುವು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಫೆ.28. ಗ್ರಾ.ಪಂ ಉಪಚುನಾವಣೆಯಲ್ಲಿ ಅನಂತಾಡಿ ಗ್ರಾಮದಲ್ಲಿ ಕಾಂಗ್ರೆಸ್ ಬೆಂಬಲಿತ ಶಶಿಕಲಾ 254 ಮತಗಳನ್ನು ಗಳಿಸಿ ಬಿಜೆಪಿ ಬೆಂಬಲಿತ ಗೀತಾ 242 ಮತಗಳನ್ನು ಗಳಿಸಿದ್ದಾರೆ. ಇಲ್ಲಿ ಕಾಂಗ್ರೆಸ್ ಬೆಂಬಲಿತರು ಖಾತೆ ತೆರೆದಂತಾಗಿದೆ. ನೆಟ್ಲ ಮುಡ್ನೂರಿನಲ್ಲಿ ಬಿಜೆಪಿ ಬೆಂಬಲಿತ ಸುಜಾತ 353 ಮತ ಗಳಿಸಿ ಗೆಲುವು ಸಾಧಿಸಿದರೆ ಕಾಂಗ್ರೆಸ್ ಹರಿಣಾಕ್ಷಿ ಸೋಲು ಕಂಡರು ಎನ್ನಲಾಗಿದೆ.

ಬಂಟ್ವಾಳ: ಗ್ರಾ.ಪಂ ಉಪಚುನಾವಣೆ ➤ ಅನಂತಾಡಿಯಲ್ಲಿ ಕಾಂಗ್ರೆಸ್, ನೆಟ್ಲಮಡ್ನೂರಿನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆಲುವು Read More »

ಕರಾವಳಿ

ಫೆ. 28: ಇಂದು ನಗರಾಭಿವೃದ್ಧಿ ಸಚಿವರ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 28. ನಗರಾಭಿವೃದ್ಧಿ ಸಚಿವರಾದ ಬಿ.ವಿ. ಬಸವರಾಜ(ಬೈರತಿ) ಅವರು ಫೆ.28ರ ಮಂಗಳವಾರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಫೆ.28ರ ಮಂಗಳವಾರ ಬೆಳಿಗ್ಗೆ 8.30ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, 9 ಗಂಟೆಗೆ ಬಂಟ್ವಾಳ ತಾಲೂಕಿನ ಸಜಿಪ ಮುನ್ನೂರು ಗ್ರಾಮದ ಆಲಾಡಿಗೆ ತಲುಪುವರು. ನಂತರ ಬೆಳಿಗ್ಗೆ 10 ಗಂಟೆಯಿಂದ ಆಲಾಡಿಯಲ್ಲಿ ಬಂಟ್ವಾಳ ತಾಲೂಕು ಹಾಗೂ ಮಂಗಳೂರು ತಾಲೂಕಿಗೆ ಸಗಟು ಕುಡಿಯುವ ನೀರು ಸರಬರಾಜು ಮಾಡಲು ನಿರ್ಮಾಣಗೊಂಡ ಜಾಕ್‍ವೆಲ್ ಕಂ ಪಂಪ್‍ಹೌಸ್ ಆವರಣದಲ್ಲಿ ಕಾಮಗಾರಿ ಪರಿವೀಕ್ಷಣೆ

ಫೆ. 28: ಇಂದು ನಗರಾಭಿವೃದ್ಧಿ ಸಚಿವರ ಜಿಲ್ಲಾ ಪ್ರವಾಸ Read More »

ಕರಾವಳಿ

ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ ➤ 6 ಮಂದಿಗೆ ಜೀವದಾನ

(ನ್ಯೂಸ್ ಕಡಬ) newskadaba.com ಮಣಿಪಾಲ, ಫೆ. 28. ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡ ಮಹಿಳೆಯೋರ್ವರ ಅಂಗಾಂಗ ದಾನ ಮಾಡಿ ಆರು ಮಂದಿಗೆ ಜೀವದಾನ ನೀಡಿದ ಘಟನೆ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ನಡೆದಿದೆ. 44 ವರ್ಷದ ಕೊಡೇರಿ ಶಿಲ್ಪಾ ಮಾಧವರವರಿಗೆ ಬೈಂದೂರು ತಾಲೂಕಿನ ಮರವಂತೆ ಬಳಿ ಫೆಬ್ರವರಿ 26ರಂದು ರಸ್ತೆ ಅಪಘಾತ ಸಂಭವಿಸಿದ್ದು, ಗಂಭೀರ ಗಾಯಗೊಂಡ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ವೈದ್ಯರು ಗಾಯಾಳುವನ್ನು ರಕ್ಷಿಸಲು ಎಷ್ಟೇ ಪ್ರಯತ್ನಿಸಿದರೂ, ಅವರು

ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ ➤ 6 ಮಂದಿಗೆ ಜೀವದಾನ Read More »

ಕರಾವಳಿ, ಕರ್ನಾಟಕ

40 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಕಡಬ ಪೊಲೀಸರು..!

(ನ್ಯೂಸ್ ಕಡಬ) newskadaba.com ಕಡಬ, ಫೆ. 28. ಶ್ರೀಗಂಧ ಹಾಗೂ ವಾಹನ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ 40 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿದ ಘಟನೆ ಮೂಡಿಗೆರೆ ತಾಲೂಕಿನ ಬಾಳೂರು ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಸಕಲೇಶಪುರ ತಾಲೂಕಿನ ಕೊಡಿಗೆ ಗ್ರಾಮದ ಅಬೂಬಕ್ಕರ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಕಡಬ ಠಾಣಾ ಹೆಚ್.ಸಿ ಗಳಾದ ರಾಜು ನಾಯಕ್, ಭವಿತ್ ರಾಜ್ ಮತ್ತು ಪಿ.ಸಿ ಸಿರಾಜುದ್ದೀನ್ ಎಂಬವರು ಮೂಡಿಗೆರೆ ತಾಲೂಕಿನ ಬಾಳೂರು ಎಂಬಲ್ಲಿ ಪತ್ತೆಹಚ್ಚಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು

40 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಕಡಬ ಪೊಲೀಸರು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ಮಾರ್ಚ್ 1 ರಿಂದ ತುರ್ತು ಸೇವೆ ಹೊರತುಪಡಿಸಿ ಇತರ ಸರ್ಕಾರಿ ಸೇವೆ ಸ್ಥಗಿತ

(ನ್ಯೂಸ್ ಕಡಬ)newskadaba.com ಉಡುಪಿ, ಫೆ.28. ಮಾರ್ಚ್ 1 ರಿಂದ ಸರ್ಕಾರಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ನಡೆಯಲಿದ್ದು, ಈ ಸಂದರ್ಭದಲ್ಲಿ ತುರ್ತು ವೈದ್ಯಕೀಯ ಸೇವೆ ಹೊರತುಪಡಿಸಿ ಇತರೆ ಎಲ್ಲಾ ಸರ್ಕಾರಿ ಸೇವೆಗಳು ಸ್ಥಗಿತಗೊಳ್ಳಲಿವೆ ಎಂದು ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಆಧ್ಯಕ್ಷ ಅಂಪಾರು ದಿನಕರ ಶೆಟ್ಟಿ ಹೇಳಿದರು.   ಉಡುಪಿ ತಾಲೂಕು ಪಂಚಾಯತ್ ಸಭಾ ಭವನದಲ್ಲಿ ನಡೆದ, ಜಿಲ್ಲೆಯಲ್ಲಿ ಮಾರ್ಚ್ 1 ರಿಂದ ನಡೆಯುವ ನೌಕರರ ಅರ್ನಿದಿಷ್ಟಾವಧಿ ಮುಷ್ಕರದ ರೂಪು ರೇಷೆ ಕುರಿತ , ಜಿಲ್ಲೆಯ ಸರಕಾರಿ

ಉಡುಪಿ: ಮಾರ್ಚ್ 1 ರಿಂದ ತುರ್ತು ಸೇವೆ ಹೊರತುಪಡಿಸಿ ಇತರ ಸರ್ಕಾರಿ ಸೇವೆ ಸ್ಥಗಿತ Read More »

ಕರಾವಳಿ

ಪುತ್ತೂರು: ಗೂಡಂಗಡಿಗೆ ಅಬಕಾರಿ ಅಧಿಕಾರಿಗಳಿಂದ ದಾಳಿ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 28. ಗೂಡಂಗಡಿಯೊಂದಕ್ಕೆ ದಾಳಿ ನಡೆಸಿದ ಅಬಕಾರಿ ಇಲಾಖಾ ಅಧಿಕಾರಿಗಳು ಮದ್ಯ ವಶಕ್ಕೆ ಪಡೆದ ಘಟನೆ ಮುರ ರೈಲ್ವೇ ಗೇಟ್ ಬಳಿ ನಡೆದಿದೆ. ಗೂಡಂಗಡಿಗೆ ದಾಳಿ ನಡೆಸಿದ ಅಧಿಕಾರಿಗಳು ತಪಾಸಣೆ ನಡೆಸಿದಾಗ ಮದ್ಯ ತುಂಬಿಸಿಡಲಾದ ಬಾಟಲಿಗಳು ಪತ್ತೆಯಾಗಿವೆ. ಆದರೆ ಅಧಿಕ ಪ್ರಮಾಣದ ಮದ್ಯ ಇರದ ಹಿನ್ನೆಲೆ ಕಾನೂನು ಕ್ರಮ ಕೈಗೊಳ್ಳುವ ದೃಷ್ಟಿಯಿಂದ ದಂಡ ವಿಧಿಸಿ ಬಿಡಲಾಗಿದೆ ಎಂದು ತಿಳಿದುಬಂದಿದೆ.

ಪುತ್ತೂರು: ಗೂಡಂಗಡಿಗೆ ಅಬಕಾರಿ ಅಧಿಕಾರಿಗಳಿಂದ ದಾಳಿ Read More »

ಕರಾವಳಿ

ಹಗ್ಗ ಜಗ್ಗಾಟ ಸ್ಪರ್ಧೆಯ ವೇಳೆ ಹೃದಯಾಘಾತ ➤ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com. ಮಂಗಳೂರು .  ಫೆ.28. ಮಂಗಳೂರು  ಬಂಟರ  ಸಂಘದ ವತಿಯಿಂದ  ಏರ್ಪಡಿಸಿದ್ದ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ರಿಯಲ್ ಎಸ್ಟೇಟ್  ಉದ್ಯಮಿ ಹೃದಯಾಘಾತದಿಂದ ಮೃತಪಟ್ಟ  ಘಟನೆ ನಡೆದಿದೆ. ಕಾರ್ಯಕಾರಿ ಸಮಿತಿ ಸದಸ್ಯ ಕುಶಲನಾಥ ಶೆಟ್ಟಿ(50) ಮೃತಪಟ್ಟವರು.  ಸಂಘದ ವತಿಯಿಂದ  ಏರ್ಪಡಿಸಿದ್ದ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಇವರು ಪಾಲ್ಗೊಂಡಿದ್ದರು. ಸ್ಪರ್ಧೆಯ ಬಳಿಕ ಇವರಿಗೆ ಎದೆನೋವು ಕಾಣಿಸಿಕೊಂಡಿತು. ಅವರು ಅಸ್ಪತ್ರೆಗೆ  ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಹಗ್ಗ ಜಗ್ಗಾಟ ಸ್ಪರ್ಧೆಯ ವೇಳೆ ಹೃದಯಾಘಾತ ➤ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಕುಟ್ರುಪ್ಪಾಡಿ ಗ್ರಾ.ಪಂ ಉಪಚುನಾವಣೆ   ➤ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುದೇಶ್ ಜಯಭೇರಿ

(ನ್ಯೂಸ್ ಕಡಬ)newskadaba.com ಪುತ್ತೂರು, ಫೆ.28. ಕಡಬ ತಾಲೂಕಿನ ಕುಟ್ರುಪಾಡಿ ಗ್ರಾ.ಪಂ ನ ಬಲ್ಯ ವಾರ್ಡ್ 1ರಲ್ಲಿ ತೆರವಾದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುದೇಶ್ ರವರು 221 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದು, ಒಟ್ಟು 1055 ಮತಗಳು 750 ಮತಗಳು ಚಲಾವಣೆಯಾಗಿದೆ. ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುದೇಶರವರು 400 ಮತಗಳನ್ನು ಪಡೆದು 179 ಮತಗಳನ್ನು ತನ್ನ ಸಮೀಪದ ಪ್ರತಿಸ್ಪರ್ದಿ ಕರುಣಾಕರ ವಿರುದ್ಧ 221 ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆ ಎನ್ನಲಾಗಿದೆ.  

ಕುಟ್ರುಪ್ಪಾಡಿ ಗ್ರಾ.ಪಂ ಉಪಚುನಾವಣೆ   ➤ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುದೇಶ್ ಜಯಭೇರಿ Read More »

ಕರಾವಳಿ
Scroll to Top