ಕರಾವಳಿ

ಮಾ. 18 ರಂದು ತಹಶೀಲ್ದಾರರ ಗ್ರಾಮ ವಾಸ್ತವ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 15. ತಾಲೂಕಿನ ಸುರತ್ಕಲ್ ಹೋಬಳಿಯ ಮಧ್ಯ ಚೇಳ್ಯಾರು ಗ್ರಾಮದ ಎಮ್.ಆರ್.ಪಿ.ಎಲ್ ಕಾಲೋನಿ ಸಭಾ ಭವನದಲ್ಲಿ ಮಾ.18ರಂದು ಬೆಳಗ್ಗೆ 10 ರಿಂದ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಗ್ರಾಮ ವಾಸ್ತವ್ಯ ಹಮ್ಮಿಕೊಳ್ಳಲಾಗಿದೆ ಎಂದು ಮಂಗಳೂರು ತಾಲೂಕು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾ. 18 ರಂದು ತಹಶೀಲ್ದಾರರ ಗ್ರಾಮ ವಾಸ್ತವ್ಯ Read More »

ಕರಾವಳಿ

ಮಾ. 21ರಂದು ಹರೇಕಳ ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 15. ಉಳ್ಳಾಲ ತಾಲೂಕು ಹರೇಕಳ ಗ್ರಾಮ ಪಂಚಾಯತ್‍ನ 2022-23ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಮಾ. 21ರ ಮಂಗಳವಾರದಂದು ಅಪರಾಹ್ನ 2.30ಕ್ಕೆ ಹರೇಕಳ ಗ್ರಾಮ ಪಂಚಾಯತ್‍ನ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾ. 21ರಂದು ಹರೇಕಳ ಗ್ರಾಮ ಸಭೆ Read More »

ಕರಾವಳಿ

ಮಾ. 21ರಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 15. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯು ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ  ಮಾ. 21ರ ಬೆಳಿಗ್ಗೆ 10.30ಕ್ಕೆ ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾ. 21ರಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆ Read More »

ಕರಾವಳಿ

ಮಾ. 18ರಿಂದ 28ರವರೆಗೆ ಜಿಲ್ಲೆಯ ವಿವಿಧೆಡೆ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು,ಮಾ. 15. ಸಾರ್ವಜನಿಕರ ಕುಂದು ಕೊರತೆ, ಅಹವಾಲುಗಳನ್ನು ಆಲಿಸಲು ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಇದೇ ಮಾ.18 ರಿಂದ 28ರ ವರೆಗೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸಭೆಗಳನ್ನು ಹಮ್ಮಿಕೊಂಡಿದ್ದಾರೆ. ವಿವರ ಇಂತಿದೆ: ಮಾ.18ರ ಶನಿವಾರದಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1ರ ವರೆಗೆ ಮುಲ್ಕಿ ನಗರ ಪಂಚಾಯತ್ ಸಮುದಾಯ ಭವನದಲ್ಲಿ, ಮಾ. 21ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 1ರ ವರೆಗೆ ಬಂಟ್ವಾಳ ತಾಲೂಕು ಕಚೇರಿಯಲ್ಲಿ, ಮಾ.27ರಂದು ಬೆಳಿಗ್ಗೆ

ಮಾ. 18ರಿಂದ 28ರವರೆಗೆ ಜಿಲ್ಲೆಯ ವಿವಿಧೆಡೆ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ Read More »

ಕರಾವಳಿ, ಕರ್ನಾಟಕ

ಕಡಬ: ಮಾ. 24ರಂದು ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು,ಮಾ. 15. ಇಲ್ಲಿನ ವೆನ್‍ಲಾಕ್ ಜಿಲ್ಲಾ ಸಂಚಾರಿ ನೇತ್ರ ಘಟಕದಿಂದ ಮಾ. 24ರ ಬೆಳಿಗ್ಗೆ 8 ಗಂಟೆಯಿಂದ ಕಡಬ ಹಾಲು ಉತ್ಪಾದಕರ ಸಂಘದ ಆವರಣದಿಂದ ಸಂಚಾರಿ ನೇತ್ರ ಘಟಕ ಹೊರಡಲಿದೆ ಎಂದು ವೆನ್‍ಲಾಕ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಡಬ: ಮಾ. 24ರಂದು ಶಿಬಿರ Read More »

ಕರಾವಳಿ

ಕಾಣೆಯಾಗಿದ್ದ ವ್ಯಕ್ತಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆ.!

(ನ್ಯೂಸ್ ಕಡಬ) newskadaba.com ಉಡುಪಿ, ಮಾ. 15. ನಾಪತ್ತೆಯಾಗಿದ್ದ ಹುಬ್ಬಳ್ಳಿ ಮೂಲದ ರವಿ ಎಂಬವರು ಕಟಪಾಡಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದ ಗಿಡಗಂಟಿಗಳ ನಡುವೆ ತೀವ್ರ ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಪತ್ತೆಯಾದ ಕುರಿತು ಉಡುಪಿಯಲ್ಲಿ ವರದಿಯಾಗಿದೆ. ಮಾಹಿತಿ ಪಡೆದ ಸಮಾಜ ಸೇವಕ ವಿಶು ಶೆಟ್ಟಿ ಅವರು ತಕ್ಷಣ ಸ್ಥಳಕ್ಕೆ ಧಾವಿಸಿ ಸಾಮಾಜಿಕ ಕಾರ್ಯಕರ್ತರ ನೆರವಿನಿಂದ ವ್ಯಕ್ತಿಯನ್ನು ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ಕಾಣೆಯಾಗಿದ್ದ ವ್ಯಕ್ತಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆ.! Read More »

ಕರಾವಳಿ

ಮಾ. 19ರಂದು ಸಾಗರ ಪರಿಕ್ರಮ-2023 ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು,ಮಾ. 15. ಕೇಂದ್ರದ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ  ಸಚಿವರಾದ ಪರಶೋತ್ತಮ್ ರೂಪಾಲ ಅವರ ಅಧ್ಯಕ್ಷತೆಯಲ್ಲಿ ಸಾಗರ ಪರಿಕ್ರಮ-2023 (ಹಂತ-4) ಕಾರ್ಯಕ್ರಮವನ್ನು ಮಾ. 19ರ ಭಾನುವಾರ ಮಧ್ಯಾಹ್ನ 3 ಗಂಟೆಗೆ ನಗರದ ಬಲ್ಲಾಳ್‍ಬಾಗ್ ನಲ್ಲಿರುವ ಟಿ.ಎಂ.ಎ.ಪೈ ಕನ್‍ವೆನ್‍ಷನ್ ಸೆಂಟರ್‍ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾ. 19ರಂದು ಸಾಗರ ಪರಿಕ್ರಮ-2023 ಕಾರ್ಯಕ್ರಮ Read More »

ಕರಾವಳಿ

ಮಂಗಳೂರು: ಇಂದು ಆದಿವಾಸಿ ಸಮುದಾಯ ಭವನ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಮಂಗಳೂರು,ಮಾ. 15. ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಪೆರ್ಮುದೆ ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಕುತ್ತೆತೂರಿನಲ್ಲಿ ಆದಿವಾಸಿ ಸಮುದಾಯ ಭವನದ ನೂತನ ಕಟ್ಟಡದ ಮಾ.15ರ ಬುಧವಾರ ಬೆಳಗ್ಗೆ 10 ಗಂಟೆಗೆ ಲೋಕಾರ್ಪಣೆಯಾಗಲಿದೆ. ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವರಾದ ಬಿ.ಶ್ರೀರಾಮುಲು ಭವನವನ್ನು ಲೋಕಾರ್ಪಣೆ ಮಾಡುವರು. ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ

ಮಂಗಳೂರು: ಇಂದು ಆದಿವಾಸಿ ಸಮುದಾಯ ಭವನ ಉದ್ಘಾಟನೆ Read More »

ಕರಾವಳಿ, ಕರ್ನಾಟಕ

ಇಂದು ಮಂಗಳೂರು ವಿವಿ ಘಟಿಕೋತ್ಸವ

(ನ್ಯೂಸ್ ಕಡಬ) newskadaba.com ಮಂಗಳೂರು,ಮಾ. 15. ಮಂಗಳೂರು ವಿಶ್ವವಿದ್ಯಾನಿಲಯದ 41ನೇ ವಾರ್ಷಿಕ ಘಟಿಕೋತ್ಸವವು ಮಾ.15ರ ಬುಧವಾರದಂದು ಮಂಗಳೂರು ವಿಶ್ವ ವಿದ್ಯಾನಿಲಯದ ಮಂಗಳ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ರಾಷ್ಟ್ರೀಯ ಮೌಲ್ಯೀಕರಣ ಮತ್ತು ಮಾನ್ಯತಾ ಪರಿಷತ್‍ನ ನಿರ್ದೇಶಕ ಎಸ್.ಸಿ.ಶರ್ಮಾ ಮುಖ್ಯ ಅತಿಥಿಯಾಗಿ ಘಟಿಕೋತ್ಸವ ಭಾಷಣವನ್ನು ಮಾಡುವರು. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮಂಗಳೂರು ವಿಶ್ವ ವಿದ್ಯಾನಿಲಯದ ಕುಲಪತಿಗಳಾದ ಡಾ.ಅಶ್ವಥ್ಥ್ ನಾರಾಯಣ್.ಸಿ.ಎನ್ ಅಧ್ಯಕ್ಷತೆ ವಹಿಸುವರು.

ಇಂದು ಮಂಗಳೂರು ವಿವಿ ಘಟಿಕೋತ್ಸವ Read More »

ಕರಾವಳಿ

ಕಾರಿಂಜೇಶ್ವರ ಸನ್ನಿಧಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಿಷೇಧಿಸಿ ಆದೇಶ ಹೊರಡಿಸಿದ ಸರಕಾರ..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 14. ತಾಲೂಕಿನ ಕಾರಿಂಜೇಶ್ವರ ಸನ್ನಿಧಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆಗೆ ನಿಷೇಧ ಮಾಡಿ ಸರಕಾರ ಅದೇಶ ಹೊರಡಿಸಿದೆ. ಈ ಮೂಲಕ ಹಿಂದೂ ಜಾಗರಣಾ ವೇದಿಕೆಯ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದಂತಾಗಿದೆ. ಕಾರಿಂಜ ದೇವಾಲಯದ ಸುತ್ತಮುತ್ತ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿರುವುದರಿಂದ ದೇವಸ್ಥಾನಕ್ಕೆ ಹಾನಿಯಾಗುತ್ತಿದೆ ಎಂಬುದು ಅರೋಪ ಕೇಳಿಬರುತ್ತಿರುವ ಹಿನ್ನೆಲೆ, ಇದರ ವಿರುದ್ಧ ಪ್ರತಿಭಟನೆಗಳು ಹೋರಾಟಗಳು ನಿರಂತರವಾಗಿ ನಡೆಯುತ್ತಿತ್ತು. ಅದರೆ ಇದೀಗ ಸರಕಾರ ಗಣಿಗಾರಿಕೆಗೆ ನಿಷೇಧ ಮಾಡಿ ಅದೇಶ ಹೊರಡಿಸಿದೆ. ಕರ್ನಾಟಕ ಉಪ

ಕಾರಿಂಜೇಶ್ವರ ಸನ್ನಿಧಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಿಷೇಧಿಸಿ ಆದೇಶ ಹೊರಡಿಸಿದ ಸರಕಾರ..! Read More »

ಕರಾವಳಿ, ಕರ್ನಾಟಕ
Scroll to Top