ಕರಾವಳಿ

ಬೆಳ್ಳಾರೆ: ಪ್ರವೀಣ್‌ ನೆಟ್ಟಾರು ಹತ್ಯೆ ಕೇಸ್‌ ➤ ಜೈಲುಪಾಲಾಗಿದ್ದ ʼಶಾಫಿ ಬೆಳ್ಳಾರೆಗೆ ಟಿಕೆಟ್ ಘೋಷಿಸಿದ SDPI

(ನ್ಯೂಸ್ ಕಡಬ)newskadaba.com ಪುತ್ತೂರು, ಫೆ.14. ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ತನಿಕಾ ಸಂಸ್ಥೆಗಳ ವಶದಲ್ಲಿರುವ ಶಾಫಿ ಬೆಳ್ಳಾರೆಗೆ ಮುಂದಿನ ವಿಧಾನಸಭಾ ಚುನಾವಣೆಗೆ ಎಸ್‌ಡಿಪಿಐ (SDPI)ಯಿಂದ ಪುತ್ತೂರು ಟಿಕೆಟ್‌ ಘೋಷಣೆ ಮಾಡಲಾಗಿದೆ ಎಂದು ವರದಿಯಾಗಿದೆ. ಇದೀಗ ರಾಜ್ಯದೆಲ್ಲೆಡೆ ಮುಂದಿನ ವಿಧಾನ ಸಭಾ ಚುನಾವಣೆಗೆ ರಣತಂತ್ರ ರೂಪಿಸುತ್ತಿದ್ದ ಬೆನ್ನಲ್ಲೆ ಎಸ್‌ಡಿಪಿಐಯಿಂದ ಪುತ್ತೂರು ಟಿಕೆಟ್‌ ಘೋಷಣೆ ಮಾಡಿದ್ದು, ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆಗೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಶಾಫಿ ಎಸ್‌ಡಿಪಿಐ ಟಿಕೆಟ್‌ ನೀಡಿದೆ.

ಬೆಳ್ಳಾರೆ: ಪ್ರವೀಣ್‌ ನೆಟ್ಟಾರು ಹತ್ಯೆ ಕೇಸ್‌ ➤ ಜೈಲುಪಾಲಾಗಿದ್ದ ʼಶಾಫಿ ಬೆಳ್ಳಾರೆಗೆ ಟಿಕೆಟ್ ಘೋಷಿಸಿದ SDPI Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಚೆಕ್ ಅಮಾನ್ಯ ಪ್ರಕರಣ ➤ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಪುತ್ತೂರು, ಫೆ.14. ಪುತ್ತೂರು ನಗರ ಠಾಣೆಯಲ್ಲಿ 2015ರಲ್ಲಿ ಚೆಕ್ ಅಮಾನ್ಯ ಪ್ರಕರಣದಲ್ಲಿ ವಾರೆಂಟ್ ಜಾರಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಶಾಂತಿಗೋಡು ಗ್ರಾಮದ ಅಕ್ಷಿತ್ ಶೆಟ್ಟಿ ಎಂದು ಗುರುತಿಸಲಾಗಿದೆ. ಅಕ್ಷಿತ್ ಶೆಟ್ಟಿಯನ್ನು ಪುತ್ತೂರು ನಗರ ಠಾಣಾ ಪರಮೇಶ್ವರ ಮತ್ತು ಪಿ ಸಿ ಗಿರಿಪ್ರಶಾಂತ್ ಅವರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಪುತ್ತೂರು: ಚೆಕ್ ಅಮಾನ್ಯ ಪ್ರಕರಣ ➤ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ

ಬಾವಿಗಿಳಿದು ಚಿರತೆ ಸೆರೆ; ಪಶು ವೈದ್ಯೆಯ ‘ಸಾಹಸ’.!

(ನ್ಯೂಸ್ ಕಡಬ)newskadaba.com ಮೂಡಬಿದಿರೆ, ಫೆ.14. ಎರಡು ದಿನಗಳ ಹಿಂದೆ ಬಾವಿಗೆ ಬಿದ್ದಿದ್ದ ಒಂದು ವರ್ಷ ಪ್ರಾಯದ ಹೆಣ್ಣು ಚಿರತೆ ಮರಿಯನ್ನು ಪಶುವೈದ್ಯೆ ಬೋನಿನೊಳಗಿದ್ದು ಬಾವಿಗಿಳಿದು ರಕ್ಷಿಸಿ ಮೇಲಕ್ಕೆ‌ ಎತ್ತಿದ್ದಾರೆ. ಇಲಾಖೆಯ ಕರೆ ಮೇರೆಗೆ ಎನ್‌ಜಿಓ ಚಿಟ್ಟೆ ಪಿಲಿ ವೈಲ್ಡ್ ಲೈಫ್ ರೆಸ್‌ಕ್ಯೂ ಸೆಂಟರ್‌ನ ತಜ್ಞ ಪಶುವೈದ್ಯರಾದ ಡಾ. ಯಶಸ್ವಿ, ಡಾ. ಮೇಘನಾ , ಡಾ. ಪೃಥ್ವೀ, ಡಾ. ನಫೀಸಾ ಸ್ಥಳಕ್ಕಾಗಮಿಸಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿ ಮೂಲಕ ಬೋನಿನೊಳಗೆ ಹಾಕಲಾಯಿತು ಎನ್ನಲಾಗಿದೆ.

ಬಾವಿಗಿಳಿದು ಚಿರತೆ ಸೆರೆ; ಪಶು ವೈದ್ಯೆಯ ‘ಸಾಹಸ’.! Read More »

ಕರಾವಳಿ

ಸುರತ್ಕಲ್: ಏಳನೇ ತರಗತಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ!!

(ನ್ಯೂಸ್ ಕಡಬ)newskadaba.com ಸುರತ್ಕಲ್, ಫೆ.14. ಕೃಷ್ಣಾಪುರದ ಖಾಸಗಿ ಶಾಲಾ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ಸುರತ್ಕಲ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಮುಂಜಾನೆ ಸಂಭವಿಸಿದೆ. ಏಳನೇ ತರಗತಿ ಓದುತ್ತಿದ್ದ ಕಾಟಿಪಳ್ಳದ ಹರ್ಷಿತ್‌ (13) ಮೃತ ವಿದ್ಯಾರ್ಥಿ ಎಂದು ಗುರುತಿಸಾಗಿದ್ದು,  ಪ್ರತೀ ವಾರದ ಕೊನೆಯಲ್ಲಿ ಸೂರಿಂಜೆಯಲ್ಲಿರುವ ತನ್ನ ಅಜ್ಜನ ಮನೆಗೆ ಹೋಗುವುದು ವಾಡಿಕೆ. ಈ ಬಾರಿಯೂ ಶಾಲೆ ಮುಗಿಸಿ ತೆರಳಿದ್ದ ಹರ್ಷಿತ್‌ ರವಿವಾರ ಮುಂಜಾನೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈತನ ತಂದೆ ಸುಧಾಕರ ದೇವಾಡಿಗ ಸುರತ್ಕಲ್‌

ಸುರತ್ಕಲ್: ಏಳನೇ ತರಗತಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ!! Read More »

ಕರಾವಳಿ, ಕ್ರೈಮ್ ನ್ಯೂಸ್

ಜೀಪು – ಸ್ಕೂಟರ್ ಢಿಕ್ಕಿ ➤ಸ್ಕೂಟರ್ ಸವಾರಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ.13.ಜೀಪು ಮತ್ತು ಸ್ಕೂಟರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಗಾಯಗೊಂಡ  ಘಟನೆ  ಇಂದು  ಅಪರಾಹ್ನ ಕುಂಬ್ರ ಜಂಕ್ಷನ್ ನಲ್ಲಿ ನಡೆದಿದೆ.  ಪುತ್ತೂರಿನಿಂದ ಸುಳ್ಯದ ಕಡೆಗೆ ತೆರಳುತ್ತಿದ್ದ ಜೀಪು ಹಾಗೂ ಕೌಡಿಚ್ಚಾರ್ ನಿಂದ ಕುಂಬ್ರಕ್ಕೆ ಬರುತ್ತಿದ್ದ  ಸ್ಕೂಟರ್ ನಡುವೆ ಕುಂಬ್ರ ಜಂಕ್ಷನ್ ನಲ್ಲಿ ಅಪಘಾತ ಸಂಭವಿಸಿದೆ.ಪರಿಣಾಮ ಸ್ಕೂಟರ್ ಸವಾರನಿಗೆ ಸ್ವಲ್ಪ ಗಾಯಗಳಾಗಿವೆ. ಢಿಕ್ಕಿಯನ್ನು ತಪ್ಪಿಸುವ ಭರದಲ್ಲಿ ಜೀಪು ಚಾಲಕ ತನ್ನ ವಾಹನವನ್ನು ರಸ್ತೆ ಬದಿಗೆ ಇಳಿಸಿದ್ದು ಈ ವೇಳೆ ರಸ್ತೆ

ಜೀಪು – ಸ್ಕೂಟರ್ ಢಿಕ್ಕಿ ➤ಸ್ಕೂಟರ್ ಸವಾರಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಬೋಟಿನಲ್ಲಿ ಆಯತಪ್ಪಿ ಬಿದ್ದು ತಲೆಗೆ ಏಟು !! ➤ ಮೀನುಗಾರ ಮೃತ್ಯು

(ನ್ಯೂಸ್ ಕಡಬ)newskadaba.com ಭಟ್ಕಳ, ಫೆ.13. ಮೀನುಗಾರಿಕೆಯಲ್ಲಿ ನಿರತ ವೇಳೆ ಆಕಸ್ಮಿಕವಾಗಿ ಆಯತಪ್ಪಿ ಬೋಟಿನ ಬಲೆ ಎಳೆಯುವ ಡ್ರಮ್ ವಿಂಚ್ ಮೇಲೆ ಬಿದ್ದ ಪರಿಣಾಮ ಮೀನುಗಾರ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಭಟ್ಕಳದ ಬೈಲೂರಿನ ಬಾವಿಹಿತ್ಲು ನಿವಾಸಿ ನಾಗರಾಜನ್(27) ಎಂದು ಗುರುತಿಸಲಾಗಿದೆ. ನಾಗರಾಜನ್ ಮಲ್ಪೆ ಬಂದರಿನಲ್ಲಿ ಪ್ರತಾಪ್ ಸುವರ್ಣ ಮಾಲೀಕತ್ವದ ಶ್ರೀಕೃಷ್ಣ ಚಕ್ರ ಲೈಲ್ಯಾಂಡ್ ಮೀನುಗಾರಿಕಾ ಬೋಟ್ ನಲ್ಲಿ ಕಲಾಸಿಯಾಗಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದರು.

ಬೋಟಿನಲ್ಲಿ ಆಯತಪ್ಪಿ ಬಿದ್ದು ತಲೆಗೆ ಏಟು !! ➤ ಮೀನುಗಾರ ಮೃತ್ಯು Read More »

ಕರಾವಳಿ

ಮರ್ಧಾಳ: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ➤ ಗಂಭೀರ ಗಾಯಗೊಂಡ ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಫೆ.13. ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಮಗು ಮೃತಪಟ್ಟು, ಐವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಎಂಬಲ್ಲಿ ಸೋಮವಾರದಂದು ನಡೆದಿದೆ. ಮರ್ಧಾಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಿಯಾ ಕಾರು ಹಾಗೂ ಕೆಎಸ್ಸಾರ್ಟಿಸಿ ವಸ್ ನಡುವೆ ಮರ್ಧಾಳ ಸಮೀಪದ ಐತ್ತೂರು ಗ್ರಾಮ ಪಂಚಾಯತ್ ಎದುರು ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ

ಮರ್ಧಾಳ: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ➤ ಗಂಭೀರ ಗಾಯಗೊಂಡ ಮಗು ಮೃತ್ಯು Read More »

ಕರಾವಳಿ

ಮರ್ಧಾಳ: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಢಿಕ್ಕಿ ➤ ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಫೆ.13. ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಎಂಬಲ್ಲಿ ಸೋಮವಾರದಂದು ನಡೆದಿದೆ. ಮರ್ಧಾಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಿಯಾ ಕಾರು ಹಾಗೂ ಕೆಎಸ್ಸಾರ್ಟಿಸಿ ವಸ್ ನಡುವೆ ಮರ್ಧಾಳ ಸಮೀಪದ ಐತ್ತೂರು ಗ್ರಾಮ ಪಂಚಾಯತ್ ಎದುರು ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ

ಮರ್ಧಾಳ: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಢಿಕ್ಕಿ ➤ ನಾಲ್ವರು ಗಂಭೀರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಹಾಸ್ಟೆಲ್‌ಗಳಿಗೆ ಆರೋಗ್ಯ ಇಲಾಖೆ ಕಣ್ಗಾವಲು !!  ➤ ಆಹಾರ ಸುರಕ್ಷತೆ ಕಾಪಾಡಲು ಕಟ್ಟುನಿಟ್ಟಿನ ಸೂಚನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.13. ಹಾಸ್ಟೆಲ್‌ಗಳಲ್ಲಿ ಪದೇ ಪದೇ ವಿಷಾಹಾರ ಸೇವನೆ ಪ್ರಕರಣಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ- ಕಾಲೇಜಿನ ಹಾಸ್ಟೆಲ್‌ಗಳ ಮೇಲೆ ನಿಗಾ ಇಡಲು ಆರೋಗ್ಯ ಇಲಾಖೆ ಮುಂದಾಗಿದೆ. ವಿಶೇಷವಾಗಿ ಹಾಸ್ಟೆಲ್‌ಗಳಲ್ಲಿರುವ ವಿದ್ಯಾರ್ಥಿಗಳ ಆರೋಗ್ಯದ ಕುರಿತು ನಿಗಾ ವಹಿಸಲಿದ್ದು, ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರದ ಮೂಲಕ ಆಹಾರ, ನೀರಿನ ಗುಣಮಟ್ಟದ ಪರಿಶೀಲನೆಯನ್ನು ಮಾಡಲು ಸಿದ್ಧತೆ ಮಾಡಿಕೊಂಡಿದೆ. ಮಂಗಳೂರಿನಲ್ಲಿ ಇತ್ತೀಚೆಗೆ ಖಾಸಗಿ ಆಸ್ಪತ್ರೆಯ ಹಾಸ್ಟೆಲ್‌ನ ವಿದ್ಯಾರ್ಥಿಗಳು ಫುಡ್‌ ಪಾಯಿಸನ್‌ನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದು, ದೊಡ್ಡ ಸುದ್ದಿಯಾಗಿತ್ತು.

ಹಾಸ್ಟೆಲ್‌ಗಳಿಗೆ ಆರೋಗ್ಯ ಇಲಾಖೆ ಕಣ್ಗಾವಲು !!  ➤ ಆಹಾರ ಸುರಕ್ಷತೆ ಕಾಪಾಡಲು ಕಟ್ಟುನಿಟ್ಟಿನ ಸೂಚನೆ Read More »

ಕರಾವಳಿ

ಕಾಪು: ಶರತ್‌ ಶೆಟ್ಟಿ ಹತ್ಯೆ ಪ್ರಕರಣ   ➤  ದೈವದ ಮೊರೆ ಹೋದ ಕುಟುಂಬ.!

(ನ್ಯೂಸ್ ಕಡಬ)newskadaba.com ಕಾಪು, ಫೆ.13. ದುಷ್ಮರ್ಮಿಗಳಿಂದ ಹತ್ಯೆಗೊಳಗಾದ ಪಾಂಗಾಳ ಶರತ್‌ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳನ್ನು ಶೀಘ್ರವೇ ಪೊಲೀಸರ ಕೈಗೆ ಸಿಲುಕಿಸುವಂತೆ ಶರತ್‌ ಶೆಟ್ಟಿ ಕುಟುಂಬದವರು ದೈವದ ಮೊರೆ ಹೋಗಿದ್ದಾರೆ. ಶ್ರೀ ಧೂಮಾವತಿ ಮತ್ತು ಪರಿವಾರ ದೈವಗಳ ನೇಮ ನಡೆದಿದ್ದು, ಅಲ್ಲಿ ಅವರು ತನ್ನ ಭಾವನ ಸಾವಿಗೆ ಕಾರಣರಾಗಿ ತಲೆಮರೆಸಿಕೊಂಡಿರುವ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ನಡೆಸುತ್ತಿರುವ ಪ್ರಯತ್ನಕ್ಕೆ ದೈವ ಬಲವನ್ನು ಒದಗಿಸಿಕೊಟ್ಟು, ಅವರ ಬಂಧನವಾಗಿ ಕಠಿಣ ಶಿಕ್ಷೆ ದೊರಕುವಂತೆ ಅನುಗ್ರಹಿಸುವಂತೆ ಅವರು ದೈವದ ಮೊರೆ ಹೋಗಿದ್ದಾರೆ.

ಕಾಪು: ಶರತ್‌ ಶೆಟ್ಟಿ ಹತ್ಯೆ ಪ್ರಕರಣ   ➤  ದೈವದ ಮೊರೆ ಹೋದ ಕುಟುಂಬ.! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top