ಕರಾವಳಿ

Death, deadbody, Waterfall

ಬಂಟ್ವಾಳ: ರೈಲ್ವೆ ಬ್ರಿಡ್ಜ್ ನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!

(ನ್ಯೂಸ್ ಕಡಬ)newskadaba.com ಬಂಟ್ವಾಳ, ಫೆ.03. ಬಿ.ಸಿ ರೋಡಿನ ಮುಖ್ಯ ವೃತ್ತದ ಬಳಿ ರೈಲ್ವೆ ಓವರ್ ಬ್ರಿಡ್ಜ್ ನಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ ಎನ್ನಲಾಗಿದೆ. ಸುಮಾರು 55 ಪ್ರಾಯದ ಅಪರಿಚಿತ ವ್ಯಕ್ತಿ ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅಪರಿಚಿತ ವ್ಯಕ್ತಿ ಅಮಲು ಪದಾರ್ಥ ಸೇವಿಸಿ ಮಲಗಿದ್ದ ಎಂದು ಹೇಳಲಾಗಿದೆ. ಸಾರ್ವಜನಿಕರು ಮೃತದೇಹವನ್ನು ನೋಡಿ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂಟ್ವಾಳ ‌ನಗರ ಠಾಣಾ ಎಸ್. ಐ.ರಾಮಕೃಷ್ಣ ಹಾಗೂ ಸಿಬ್ಬಂದಿ ಗಳು ಭೇಟಿ ನೀಡಿ ಶವವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ […]

ಬಂಟ್ವಾಳ: ರೈಲ್ವೆ ಬ್ರಿಡ್ಜ್ ನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಫೆ.11ರಂದು ಕರಾವಳಿಗೆ ಭೇಟಿ ನೀಡಲಿರುವ ಅಮಿತ್ ಶಾ !

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.03. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಫೆ.11ರಂದು ದಕ್ಷಿಣ ಕನ್ನಡಕ್ಕೆ ಭೇಟಿ ನೀಡಲಿದ್ದು, ಅವರನ್ನು ಸ್ವಾಗತಿಸಲು ಆಡಳಿತಾರೂಢ ಬಿಜೆಪಿ ಪಾಳಯದಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ಕೇಂದ್ರ ಅಡಿಕೆ ಮತ್ತು ಕೋಕೋ ಮಾರ್ಕೆಟಿಂಗ್ ಅಂಡ್ ಪ್ರೊಸೆಸಿಂಗ್ ಕೋ-ಆಪರೇಟಿವ್ ಲಿಮಿಟೆಡ್ (ಕ್ಯಾಂಪ್ಕೊ)ನ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಅಮಿತ್ ಶಾ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಭೇಟಿ ನೀಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯು ಪ್ರತೀಕಾರದ ಹತ್ಯೆಗಳಿಗೆ ಸಾಕ್ಷಿಯಾಗಿದೆ ಮತ್ತು ರಾಜ್ಯದ ಕೋಮು ಸೂಕ್ಷ್ಮ

ಫೆ.11ರಂದು ಕರಾವಳಿಗೆ ಭೇಟಿ ನೀಡಲಿರುವ ಅಮಿತ್ ಶಾ ! Read More »

ಕರಾವಳಿ

ವೀರೇಂದ್ರ ಹೆಗ್ಗಡೆ ಅವರಿಂದ ‘ಮಂದಾರ’ ಪ್ರಾಯೋಗಿಕ ಪತ್ರಿಕೆ ಅನಾವರಣ !

(ನ್ಯೂಸ್ ಕಡಬ)newskadaba.com ಧರ್ಮಸ್ಥಳ, ಫೆ.03. ಉಜಿರೆಯ ಎಸ್‌ಡಿಎಂ ಕಾಲೇಜಿನ ಬಿಬಿಎ ಮತ್ತು ಬಿಎ ವಿದ್ಯಾರ್ಥಿಗಳು ಆರಂಭಿಸಿರುವ ‘ಮಂದಾರ’ ಪ್ರಾಯೋಗಿಕ ಮಾಸಪತ್ರಿಕೆಯನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ಶ್ರೀಕ್ಷೇತ್ರದಲ್ಲಿ ಅನಾವರಣಗೊಳಿಸಿದರು. ಬಳಿಕ ಪತ್ರಿಕೆಯ ಉದ್ದೇಶ, ರೂಪುರೇಷಗಳ ಬಗ್ಗೆ ಮಾಹಿತಿ ಪಡೆದು, ಶುಭಹಾರೈಸಿದರು. ಈ ಸಂದರ್ಭದಲ್ಲಿ ಉಜಿರೆಯ ಎಸ್‌ಡಿಎಂ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ಭಾಸ್ಕರ ಹೆಗಡೆ, ಎ.ಆರ್.ರಕ್ಷಿತ್ ರೈ, ಸಂಪಾದಕ ಚಂದನ್ ಭಟ್, ವ್ಯವಸ್ಥಾಪಕ ಸಂಪಾದಕ ಎಂ.ಎಸ್.ಶೋಭಿತ್ ಉಪಸ್ಥಿತರಿದ್ದರು. ‘ಮಂದಾರ’

ವೀರೇಂದ್ರ ಹೆಗ್ಗಡೆ ಅವರಿಂದ ‘ಮಂದಾರ’ ಪ್ರಾಯೋಗಿಕ ಪತ್ರಿಕೆ ಅನಾವರಣ ! Read More »

ಕರಾವಳಿ

ಪುತ್ತೂರು: ಜಾಗದ ವಿಚಾರಕ್ಕೆ ಸಂಬಂಧಿಸಿ ಹೊಡೆದಾಟ ➤ ಓರ್ವನಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com ಪುತ್ತೂರು, ಫೆ.03. ಜಾಗದ ವಿಚಾರಕ್ಕೆ ಸಂಬಂಧಿಸಿ ಹೊಡೆದಾಟ ನಡೆದ ಘಟನೆ ಮುಂಡೂರಿನಲ್ಲಿ ನಡೆದಿದೆ. ಅಶ್ರಫ್ ಗಾಯಗೊಂಡವರು ಎಂದು ತಿಳಿದುಬಂದಿದೆ. ಅಶ್ರಫ್ ಗಂಭೀರವಾಗಿ ಗಾಯಗೊಂಡ ಕಾರಣ ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಶ್ರಫ್ ಮತ್ತು ಸ್ಥಳೀಯ ಕೆಲವರ ಜೊತೆ ಹೊಡೆದಾಟ ನಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ ಅಶ್ರಫ್ ಗೆ ಗಂಭೀರವಾಗಿ ಗಾಯಗೊಂಡಿದೆ ಎನ್ನಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಪುತ್ತೂರು: ಜಾಗದ ವಿಚಾರಕ್ಕೆ ಸಂಬಂಧಿಸಿ ಹೊಡೆದಾಟ ➤ ಓರ್ವನಿಗೆ ಗಂಭೀರ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಶವಸಂಸ್ಕಾರಕ್ಕೂ ಬಂತು ‘ಸಂಚಾರಿ ಸ್ಮಶಾನ’ !  

(ನ್ಯೂಸ್ ಕಡಬ)newskadaba.com ಉಡುಪಿ, ಫೆ.02. ಮೃತದೇಹಗಳ ಅಂತ್ಯಸಂಸ್ಕಾರಕ್ಕೆ ಸ್ಥಳದ ಕೊರತೆ ಎದುರಾಗಿದ್ದು, ಈ ಸಮಸ್ಯೆಯನ್ನು ನೀಗಿಸಲು ಕುಂದಾಪುರ ತಾಲೂಕಿನ ಮುದೂರು ಗ್ರಾಮದಲ್ಲಿ ಇತ್ತೀಚಿಗೆ ಸಂಚಾರಿ ಚಿತಾಗಾರವನ್ನು ಆರಂಭಿಸಲಾಗಿದೆ. ಹಿಂದುಳಿದವರು, ದಲಿತರು ವಾಸಿಸುವ ಭಾಗದಲ್ಲಿ ಐದು ಸೆಂಟ್ಸ್ ಜಾಗವಿರುವ ಕುಟುಂಬಗಳ ಮನೆಯಲ್ಲಿ ಸಾವಿಗೀಡಾದರೆ ಸ್ಮಶಾನಕ್ಕೆ ಕುಂದಾಪುರದ 40 ಕಿ.ಮೀ ದೂರದಲ್ಲಿರುವ ಸ್ಮಶಾನಕ್ಕೆ ಕೊಂಡೊಯ್ಯಬೇಕಿದೆ. ಹೀಗಾಗಿ ಮುದೂರು ವ್ಯವಸಾಯ ಸೇವಾ ಸಹಕಾರಿ ಸಂಘ (ಎಂಪಿಎಸಿ), ಗ್ರಾಮಸ್ಥರ ಅನುಕೂಲಕ್ಕಾಗಿ ಸಂಚಾರಿ ಶವಸಂಸ್ಕಾರ ವಾಹನವನ್ನು ಪರಿಚಯಿಸಿದೆ.  

ಶವಸಂಸ್ಕಾರಕ್ಕೂ ಬಂತು ‘ಸಂಚಾರಿ ಸ್ಮಶಾನ’ !   Read More »

ಕರಾವಳಿ

ಉಡುಪಿ: ಫೆ. 11, 12 ರಂದು ಪ್ರಥಮ ಯಕ್ಷಗಾನ ಸಮ್ಮೇಳನ

(ನ್ಯೂಸ್ ಕಡಬ)newskadaba.com ಉಡುಪಿ, ಫೆ.02. ಯಕ್ಷಗಾನ ವಿದ್ವಾಂಸ ಹಾಗೂ ಸಂಶೋಧಕ ಡಾ.ಎಂ.ಪ್ರಭಾಕರ ಜೋಶಿ ಅವರ ಅಧ್ಯಕ್ಷತೆಯಲ್ಲಿ ಫೆ.11 ಮತ್ತು 12 ರಂದು ಉಡುಪಿಯ ಎಂ.ಜಿ.ಎ ಕ್ರೀಡಾಂಗಣದಲ್ಲಿ ನಡೆಯುವ ಪ್ರಥಮ ಯಕ್ಷಗಾನ ಸಮ್ಮೇಳನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಸಮ್ಮೇಳನದ ಕಾರ್ಯಾಧ್ಯಕ್ಷ ಡಾ.ಜಿ.ಎಲ್.ಹೆಗಡೆ ಹೇಳಿದರು. ನಗರದ ಎಂ.ಜಿ.ಎ. ಕಾಲೇಜಿನ ರವೀಂದ್ರ ಮಂಟಪದಲ್ಲಿ ಯಕ್ಷಗಾನ ಸಮ್ಮೇಳನದ ಪೂರ್ವಭಾವಿ ತಯಾರಿಯ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದರು. ಯಕ್ಷಗಾನ ಸಮ್ಮೇಳನವು ಸಾಹಿತ್ಯ ಸಮ್ಮೇಳನದ ಮಾದರಿಯಲ್ಲಿ ಅದ್ಧೂರಿ ಮೆರವಣಿಗೆಯೊಂದಿಗೆ ಪ್ರಾರಂಭವಾಗಲಿದ್ದು, ಮಾನ್ಯ ಮುಖ್ಯಮಂತ್ರ್ರಿಗಳಾದ ಬಸವರಾಜ

ಉಡುಪಿ: ಫೆ. 11, 12 ರಂದು ಪ್ರಥಮ ಯಕ್ಷಗಾನ ಸಮ್ಮೇಳನ Read More »

ಕರಾವಳಿ

ಮಂಗಳೂರು ಪಾಲಿಕೆ ನೂತನ ಆಯುಕ್ತರಾಗಿ ಚನ್ನಬಸಪ್ಪ ಕೆ. ನೇಮಕ  

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.02. ಮಂಗಳೂರು ಮಹಾನಗರಪಾಲಿಕೆ ಕಮಿಷನರ್ ಅಕ್ಷಯ್ ಶ್ರೀಧರ್ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಮಂಗಳೂರು ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ತುಮಕೂರು ಅಪರ ಜಿಲ್ಲಾಧಿಕಾರಿಯಾಗಿದ್ದ ಚನ್ನಬಸಪ್ಪ ಕೆ. ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ. ಅಕ್ಷಯ್ ಶ್ರೀಧರ್ ಅವರು ಕಳೆದೆರಡು ವರ್ಷಗಳಿಂದ ಪಾಲಿಕೆ ಆಯುಕ್ತರಾಗಿ ಕಾರ್ಯ ನಿರ್ವಹಿಸಿದ್ದರು.

ಮಂಗಳೂರು ಪಾಲಿಕೆ ನೂತನ ಆಯುಕ್ತರಾಗಿ ಚನ್ನಬಸಪ್ಪ ಕೆ. ನೇಮಕ   Read More »

ಕರಾವಳಿ

➤ಫುಟ್‌ಬಾಲ್‌ನಲ್ಲಿ ಗಿನ್ನಿಸ್ ದಾಖಲೆ ಬರೆದ ಮಂಗಳೂರಿನ ಯುವಕ ಮೊಹಮ್ಮದ್ ಶಲೀಲ್

ನ್ಯೂಸ್ ಕಡಬ) newskadaba.com ಮಂಗಳೂರು, ಫೆ.2. ದೇರಳಕಟ್ಟೆ ಬೆಳ್ಮ ನಿವಾಸಿ ಮೊಹಮ್ಮದ್ ಶಲೀಲ್  ಅವರು ಫುಟ್‌ಬಾಲ್‌ನಲ್ಲಿ ವಿಶೇಷ ಸಾಧನೆಗೈದು ಗಿನ್ನೆಸ್ ದಾಖಲೆಗೆ ಸೇರಿದ್ದಾರೆ. ಕೇವಲ ಮೂವತ್ತು ಸೆಕೆಂಡುಗಳಲ್ಲಿ ಫುಟ್​ಬಾಲ್​ನೊಂದಿಗೆ 10 ರೌಂಡ್​ಗಳ ನಟ್ ಮೆಗ್ ಸಾಧಿಸುವ ಮೂಲಕ ಶಲೀಲ್ ಇಬ್ಬರು ಸಾಧಕರ ಹೆಸರಿನಲ್ಲಿದ್ದ ಗಿನ್ನಿಸ್ ದಾಖಲೆಗಳನ್ನು ಮುರಿದಿದ್ದಾರೆ. ಈ ಹಿಂದೆ ಇಂಗ್ಲೆಂಡ್​ನಲ್ಲಿ 2017ರಲ್ಲಿ ಡೆಲೆ ಎಂಬವರು 30 ಸೆಕೆಂಡುಗಳಲ್ಲಿ 7 ಸುತ್ತುಗಳನ್ನು ಸಾಧಿಸುವ ಮೂಲಕ ಮೊದಲ ಗಿನ್ನೆಸ್ ದಾಖಲೆ ಸಾಧಿಸಿದ್ದರು. ಬಳಿಕ 2021 ರ ಫೆಬ್ರವರಿಯಲ್ಲಿ ಮಹಿಳಾ

➤ಫುಟ್‌ಬಾಲ್‌ನಲ್ಲಿ ಗಿನ್ನಿಸ್ ದಾಖಲೆ ಬರೆದ ಮಂಗಳೂರಿನ ಯುವಕ ಮೊಹಮ್ಮದ್ ಶಲೀಲ್ Read More »

ಕರಾವಳಿ, ಕ್ರೀಡಾ ನ್ಯೂಸ್

ಪಡಿತರ ಕೇಂದ್ರಗಳಲ್ಲಿ ನೀಡುತ್ತಿರುವುದು ಸಾರವರ್ಧಿತ ಅಕ್ಕಿ    ➤ ದ.ಕ ಜಿಲ್ಲೆಯಲ್ಲಿ ಪ್ಲಾಸ್ಟಿಕ್‌ ಅಕ್ಕಿ ವಿತರಣೆ ವದಂತಿ..!

(ನ್ಯೂಸ್ ಕಡಬ)newskadaba.com ಪುತ್ತೂರು, ಫೆ.02. ಪಡಿತರ ಅಂಗಡಿ ಮೂಲಕ ನೀಡಲಾಗುತ್ತಿರುವ ಅಕ್ಕಿಯೊಂದಿಗೆ ಪ್ಲಾಸ್ಟಿಕ್‌ ಅಕ್ಕಿ ಕಾಳು ಮಿಶ್ರಣವಾಗಿದೆ ಎಂಬ ವದಂತಿ ವ್ಯಾಪಕವಾಗಿ ಹಬ್ಬುತ್ತಿದೆ. ಆದರೆ ವಾಸ್ತವವಾಗಿ ಅದು ಪ್ಲಾಸ್ಟಿಕ್‌ ಅಕ್ಕಿ ಅಲ್ಲ, ಸಾರವರ್ಧಿತ ಅಕ್ಕಿ ! ದ.ಕ.ಜಿಲ್ಲೆಯಲ್ಲಿ ಜನವರಿಯ ಅಕ್ಕಿ ವಿತರಣೆ ಆಗುತ್ತಿದ್ದಂತೆ ಅದರಲ್ಲಿ ಕಂಡು ಬಂದಿರುವ ದೊಡ್ಡ ಗಾತ್ರದ ಬಿಳಿ ಬಣ್ಣದ ಅಕ್ಕಿಯನ್ನು ಕಂಡು ಪಡಿತರ ಅಕ್ಕಿಗೆ ಪ್ಲಾಸ್ಟಿಕ್‌ ಅಕ್ಕಿ ಬೆರೆಸಲಾಗಿದೆ ಎಂದು ಆಹಾರ ಇಲಾಖೆ, ಗ್ರಾ.ಪಂ.ಗಳಿಗೆ ದೂರು ಹೇಳುತ್ತಿರುವ ಪ್ರಸಂಗ ಕಂಡು ಬರುತ್ತಿದೆ. ಕೇಂದ್ರ

ಪಡಿತರ ಕೇಂದ್ರಗಳಲ್ಲಿ ನೀಡುತ್ತಿರುವುದು ಸಾರವರ್ಧಿತ ಅಕ್ಕಿ    ➤ ದ.ಕ ಜಿಲ್ಲೆಯಲ್ಲಿ ಪ್ಲಾಸ್ಟಿಕ್‌ ಅಕ್ಕಿ ವಿತರಣೆ ವದಂತಿ..! Read More »

ಕರಾವಳಿ

ಉಳ್ಳಾಲ:  27 ಲಕ್ಷ ಮೌಲ್ಯದ ಭಾರೀ ಪ್ರಮಾಣದ ಗಾಂಜಾ‌ ವಶ   ➤ ಆರೋಪಿಗಳು ಅರೆಸ್ಟ್..!

(ನ್ಯೂಸ್ ಕಡಬ)newskadaba.com ಉಳ್ಳಾಲ, ಫೆ.02. ಕೊಣಾಜೆ ಪೊಲೀಸ್ ಠಾಣಾ ಪಿಎಸ್ಸೈ ಶರಣಪ್ಪ ಭಂಡಾರಿಯವರು ಖಚಿತ ಮಾಹಿತಿ ಮೇರೆಗೆ ಕೇರಳ-ಕರ್ನಾಟಕ ಗಡಿ ಪ್ರದೇಶ ನೆತ್ತಿಲಪದವು ಎಂಬಲ್ಲಿ ಅಕ್ರಮವಾಗಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಕಾರನ್ನು ವಶಕ್ಕೆ ಪಡೆದು ಸುಮಾರು 27 ಲಕ್ಷ ಮೌಲ್ಯದ ಗಾಂಜಾವನ್ನು ಸ್ವಾಧೀನಪಡಿಸಿದ್ದು, ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ. ಕಾಸರಗೋಡು ಜಿಲ್ಲೆಯ ಕಡಪುರಂ ,ಹೊಸಬೆಟ್ಟು ನಿವಾಸಿ ಅಬೂಬಕ್ಕರ್ ಸಿದ್ದೀಕ್(35) ಅಲಿಯಾಸ್ ಹ್ಯಾರೀಸ್, ಕಾಸರಗೋಡು ಜಿಲ್ಲೆಯ ಮುದ್ರಾನ್ ಗ್ರಾಮದ ಕುಂಬಿ ನಿವಾಸಿ ಅಖಿಲ್‌ ಎಮ್(25) ಉದ್ಯಾವರ ,ಮಾಡ ನಿವಾಸಿ ಹೈದರ್

ಉಳ್ಳಾಲ:  27 ಲಕ್ಷ ಮೌಲ್ಯದ ಭಾರೀ ಪ್ರಮಾಣದ ಗಾಂಜಾ‌ ವಶ   ➤ ಆರೋಪಿಗಳು ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top