ಕರಾವಳಿ

ಮಂಗಳೂರು: ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ! ➤ ಓರ್ವ ಮೃತ್ಯು, ಮೂವರಿಗೆ ಗಾಯ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.30. ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಸಂಭವಿಸಿದ ಅಫಘಾತದಲ್ಲಿ ಓರ್ವ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಕೊಲ್ಯ- ಅಡ್ಕ ಬಳಿ ಸಂಭವಿಸಿದೆ. ಉಪ್ಪಳ ಹಿದಾಯತ್ ನಗರ ನಿವಾಸಿ ಅಹಮ್ಮದ್ (22) ಮೃತರು. ಕೇರಳದ ಕಣ್ಣೂರು ನಿವಾಸಿ ಫಾತಿಮ ಹಾಗೂ ರೇವತಿ ಎಂಬವರಿಗೆ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಓರ್ವ ಗಾಯಾಳುವನ್ನು ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಗಾಯಾಳು ಪೈಕಿ ಫಾತಿಮ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ […]

ಮಂಗಳೂರು: ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ! ➤ ಓರ್ವ ಮೃತ್ಯು, ಮೂವರಿಗೆ ಗಾಯ Read More »

ಕರಾವಳಿ

ವಿಟ್ಲ: ಬಸ್ ನಿಲ್ಧಾಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆ !

(ನ್ಯೂಸ್ ಕಡಬ)newskadaba.com ವಿಟ್ಲ, ಜ.30. ಕನ್ಯಾನ ಬಸ್ ನಿಲ್ಧಾಣದಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದೆ. ಕೇರಳ ಮೂಲದ ವಿನಯನ್ (58) ಮೃತರು ಎಂದು ಗುರುತಿಸಲಾಗಿದೆ. ವಿನಯನ್ ಮೃತದೇಹವು ಕನ್ಯಾನದ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದ್ದು, ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

ವಿಟ್ಲ: ಬಸ್ ನಿಲ್ಧಾಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆ ! Read More »

ಕರಾವಳಿ, ಕ್ರೈಮ್ ನ್ಯೂಸ್

100 ರೂ.ನಲ್ಲಿ 15 ಪೈಸೆ ಮಾತ್ರ ಅಭಿವೃದ್ಧಿಗೆ ಬಳಕೆ ➤ ನ್ಯಾ| ಸಂತೋಷ್‌ ಹೆಗ್ಡೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.30. ಪ್ರಸ್ತುತ ದೇಶದಲ್ಲಿ ಸರಕಾರದಿಂದ ಮಂಜೂರಾಗುವ 100 ರೂ. ಅನುದಾನದಲ್ಲಿ 15 ಪೈಸೆ ಮಾತ್ರ ಅಭಿವೃದ್ಧಿಗೆ ಬಳಕೆಯಾಗುತ್ತಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಹೇಳಿದ್ದಾರೆ. ಮಂಗಳೂರಿನಲ್ಲಿ ಆಯೋಜಿಸಿದ ಜಿಲ್ಲಾ ಸಮಾವೇಶ “ಪರಿಕಲ್ಪನೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 1985ರಲ್ಲಿ ರಾಜೀವ್‌ ಗಾಂಧಿಯವರು ಪ್ರಧಾನಿಯಾಗಿದ್ದಾಗ ಸರಕಾರದಿಂದ ಮಂಜೂರಾಗುವ ಪ್ರತೀ 1 ರೂ. ಅನುದಾನದಲ್ಲಿ 15 ಪೈಸೆ ಮಾತ್ರ ಅಭಿವೃದ್ಧಿಗಾಗಿ ಬಳಕೆಯಾಗುತ್ತದೆ ಎನ್ನುವ ಮಾತು ಚಾಲ್ತಿಯಲ್ಲಿತ್ತು. ಅಭಿವೃದ್ಧಿ ಹೆಸರಿನಲ್ಲಿ ಕೇಂದ್ರ, ರಾಜ್ಯ ಸರಕಾರಗಳು ಬೊಕ್ಕಸದಿಂದ

100 ರೂ.ನಲ್ಲಿ 15 ಪೈಸೆ ಮಾತ್ರ ಅಭಿವೃದ್ಧಿಗೆ ಬಳಕೆ ➤ ನ್ಯಾ| ಸಂತೋಷ್‌ ಹೆಗ್ಡೆ Read More »

ಕರಾವಳಿ

ಪುತ್ತೂರು: ಕಂಬಳದಲ್ಲಿ ಚಿತ್ರ ನಟಿ ಸಾನಿಯಾ ಅಯ್ಯರ್ ಗೆ ಮುಜುಗರ…!

(ನ್ಯೂಸ್ ಕಡಬ)newskadaba.com ಪುತ್ತೂರು, ಜ.30. ನಗರದಲ್ಲಿ ನಡೆಯುತ್ತಿರುವ ಕೋಟಿ-ಚೆನ್ನಯ ಕಂಬಳದಲ್ಲಿ ಚಿತ್ರ ನಟಿ ಸಾನಿಯಾ ಅಯ್ಯರ್ ಗೆ ಅಭಿಮಾನಿಯೊಬ್ಬ ಕಿರಿಕ್ ಮಾಡಿರುವ ಘಟನೆ ವರದಿಯಾಗಿದೆ. ಚಿತ್ರನಟಿ ಸಾನಿಯಾ ಅಯ್ಯರ್ ಪುತ್ತೂರು ಕೋಟಿ-ಚೆನ್ನಯ ಕಂಬಳಕ್ಕೆ ಅತಿಥಿಯಾಗಿ ಆಗಮಿಸಿದ್ದು, ವೇದಿಕೆಯಿಂದ ಇಳಿದು ಬರುವ ಸಂದರ್ಭದಲ್ಲಿ ಅಭಿಮಾನಿಯೊಬ್ಬ ಸೆಲ್ಫಿ ಕೆಳುವ ನೆಪದಲ್ಲಿ ಸಾನಿಯಾ ಅಯ್ಯರ್ ಕೈ ಹಿಡಿದು ಎಳೆದಿರುವ ಆರೋಪ ಎದುರಾಗಿದೆ, ಇದರಿಂದ ಸಾನಿಯ ಅಯ್ಯರ್ ಮುಜುಗರಕ್ಕೊಳಗಾಗಿದ್ದಾರೆ. ಅಭಿಮಾನಿ ಸಾನಿಯಾ ಅಯ್ಯರ್ ಭಾಷಣ ಮಾಡುತ್ತಿದ್ದ ಸಮಯದಲ್ಲಿ ಐ ಲವ್ ಯೂ ಹೇಳುತ್ತಿದ್ದ

ಪುತ್ತೂರು: ಕಂಬಳದಲ್ಲಿ ಚಿತ್ರ ನಟಿ ಸಾನಿಯಾ ಅಯ್ಯರ್ ಗೆ ಮುಜುಗರ…! Read More »

ಕರಾವಳಿ

ಮಂಗಳೂರು: ನಾಪತ್ತೆಯಾಗಿದ್ದ ಯುವತಿ ವಿವಾಹವಾಗಿ ಪತ್ತೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.30. ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಯುವತಿ ತನ್ನ ಪ್ರಿಯಕರನೊಂದಿಗೆ ಮದುವೆಯಾಗಿ ಪತ್ತೆಯಾಗಿದ್ದಾಳೆ. ನಾಪತ್ತೆಯಾಗಿದ್ದ ಕಮಲಾಕ್ಷ ಎಂಬವರ ಪುತ್ರಿ, ನಗರದ ಫೈನಾನ್ಸ್‌ ಕಂಪನಿಯೊಂದರ ಉದ್ಯೋಗಿ ಶಿವಾನಿ (20)ತನ್ನ ಪ್ರಿಯಕರನೊಂದಿಗೆ ಮದುವೆಯಾಗಿದ್ದು, ಪೊಲೀಸರು ತಂತ್ರಜ್ಞಾನ ಮಾಹಿತಿ ಆಧಾರದಲ್ಲಿ ಪತ್ತೆ ಮಾಡಿ ಕರೆ ತಂದಿದ್ದಾರೆ. ಕಂಕನಾಡಿ ಠಾಣೆಯ ಪೊಲೀಸ್‌ ಆಧಿಕಾರಿಗಳ ಮುಂದೆ ಹಾಜರಾಗಿ ತಾನು ಪ್ರೀತಿಸಿದವನನ್ನು ಸ್ವಯೇಚ್ಚೆಯಿಂದ ಮದುವೆಯಾಗಿದ್ದಾಗಿ ಹೇಳಿಕೆ ನೀಡಿದ್ದು ಪತಿಯೊಂದಿಗೆ ಬಾಳುವುದಾಗಿ ಲಿಖಿತ ಹೇಳಿಕೆ ನೀಡಿದ್ದಾಳೆ. ಲವ್‌ ಜಿಹಾದ್‌ ಆತಂಕದ ನಡುವೆ ಒಂದು ವಾರ

ಮಂಗಳೂರು: ನಾಪತ್ತೆಯಾಗಿದ್ದ ಯುವತಿ ವಿವಾಹವಾಗಿ ಪತ್ತೆ Read More »

ಕರಾವಳಿ

➤ಕನ್ನಡದ ಕವಿ, ಕತೆಗಾರ ಕೆ.ವಿ ತಿರುಮಲೇಶ್‌ ವಿಧಿವಶ

(ನ್ಯೂಸ್ ಕಡಬ) newskadaba.com, ಬೆಂಗಳೂರು, ಜ.30. ಕನ್ನಡದ ಖ್ಯಾತ ಕವಿ, ಕತೆಗಾರ, ವಿಮರ್ಶಕ ಕೆ.ವಿ. ತಿರುಮಲೇಶ್‌ (82) ಇಂದು ಮುಂಜಾನೆ ಹೈದರಾಬಾದಿನ ತಮ್ಮ ಮಗಳ ನಿವಾಸದಲ್ಲಿ ನಿಧನ ಹೊಂದಿದ್ದಾರೆ. ಹೃದಯ ಸಂಬಂಧಿ ಕಾಯಿಲೆ ಹೊಂದಿದ್ದ ಅವರಿಗೆ ಇತ್ತೀಚೆಗೆ ಹೃದಯದ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಕಳೆದ ವಾರದವರೆಗೂ ಆಸ್ಪತ್ರೆಯಲ್ಲಿದ್ದ ಅವರು ನಿನ್ನೆ ಡಿಸ್‌ಚಾರ್ಜ್‌ ಆಗಿ ಮನೆಗೆ ಬಂದಿದ್ದರು. ಕೇರಳದ ಕಾಸರಗೋಡು ಜಿಲ್ಲೆಯ ಕಾರಡ್ಕ ಎಂಬ ಗ್ರಾಮದಲ್ಲಿ 1940ರ ಸೆಪ್ಟೆಂಬರ್ 12ರಂದು ಜನಿಸಿದ ಕೆ.ವಿ. ತಿರುಮಲೇಶ್ ಇವರು ಕನ್ನಡ ಭಾಷೆಯ ಬಹು ಮುಖ್ಯ

➤ಕನ್ನಡದ ಕವಿ, ಕತೆಗಾರ ಕೆ.ವಿ ತಿರುಮಲೇಶ್‌ ವಿಧಿವಶ Read More »

ಕರಾವಳಿ

ಉಡುಪಿ: ಗಿಫ್ಟ್ ನೆಪದಲ್ಲಿ ಸಾವಿರಾರು ರೂ. ವಂಚನೆ

(ನ್ಯೂಸ್ ಕಡಬ)newskadaba.com ಉಡುಪಿ, ಜ.30. ಎಲೆಕ್ಟ್ರಾನಿಕ್ಸ್‌ ಸಾಮಾಗ್ರಿ ಗಿಫ್ಟ್ ವಿಜೇತರಾಗಿದ್ದೀರಿ ಎಂದು ನಂಬಿಸಿ ವ್ಯಕ್ತಿಯೊಬ್ಬರಿಗೆ ಸಾವಿರಾರು ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದೀಚ್ಚಾ ಪರೇಶ್‌ ಕಾಮತ್‌ ಎಂಬವರಿಗೆ ಯಾರೋ ಕರೆ ಮಾಡಿ ಎಲೆಕ್ಟ್ರಾನಿಕ್ಸ್‌ ಸಾಮಾಗ್ರಿ ಗಿಫ್ಟ್ ಬಂದಿದೆ ಎಂದು ನಂಬಿಸಿದ್ದರು. ಗಿಫ್ಟ್ ಕಳುಹಿಸಲು ಬ್ಯಾಂಕ್‌ ಖಾತೆ ನೀಡಿ ಇದಕ್ಕೆ ಹಣ ವರ್ಗಾಯಿಸುವಂತೆ ತಿಳಿಸಿದ್ದು, ಅದರಂತೆ ಒಟ್ಟು 33,998 ರೂ. ಪಾವತಿಸಿ, ಗಿಫ್ಟ್ ಹಾಗೂ ಹಣ ಹಿಂದೆ ಕೊಡದೇ ವಂಚಿಸಿದ್ದಾರೆ ಎಂದು

ಉಡುಪಿ: ಗಿಫ್ಟ್ ನೆಪದಲ್ಲಿ ಸಾವಿರಾರು ರೂ. ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.30. ಕಲ್ಲಾಪು ಸನಿಹ ನೇತ್ರಾವತಿ ನದಿಯ ತಂತ್ರಿ ರಸ್ತೆ ಬಳಿ ಅಪರಿಚಿತ ಮೃತದೇಹ ಪತ್ತೆಯಾದ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಮೂರು ದಿನಗಳ ಹಿಂದೆ ನದಿಗೆ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಲುಂಗಿ, ಟೀಶರ್ಟ್ ಧರಿಸಿದ್ದು ಕೈಯಲ್ಲಿ ವಾಚ್, ಪತ್ತೆಯಾಗಿದೆ. ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದು, ಉಳ್ಳಾಲ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ. ಬಜಾಲ್ ಅಥವಾ ಬಂಟ್ವಾಳ ಭಾಗದಲ್ಲಿ ನದಿಗೆ ಬಿದ್ದಿರುವ ಶಂಕೆವ್ಯಕ್ತವಾಗಿದ್ದು , ನದಿ ಮಧ್ಯದಲ್ಲಿ ತೇಲುತ್ತಿದ್ದ ಮೃತದೇಹವನ್ನು ಸಮಾಜ ಸೇವಕ

ಮಂಗಳೂರು: ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಹಾಸಿಗೆ ಹಿಡಿದಿದ್ದ ಪತ್ನಿಯನ್ನು ಕೊಲೆಗೈದು ಪತಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.28. ಕಾಪಿಕಾಡ್‌ನ ಅಪಾರ್ಟ್‌ಮೆಂಟ್‌ ಒಂದರಲ್ಲಿ ಪತಿಯೊಬ್ಬ ಹಾಸಿಗೆ ಹಿಡಿದಿದ್ದ ತನ್ನ ಪತ್ನಿಯನ್ನು ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಶೈಲಜಾ (64) ಮತ್ತು ನಿವೃತ್ತ ಕೆನರಾ ಬ್ಯಾಂಕ್ ಮ್ಯಾನೇಜರ್ ದಿನೇಶ್ ರಾವ್ (65) ಎಂದು ಗುರುತಿಸಲಾಗಿದೆ. ಶೈಲಜಾ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಹಾಸಿಗೆ ಹಿಡಿದಿದ್ದು, ಇವರನ್ನು ನೋಡಿಕೊಳ್ಳಲು ಹೋಮ್ ನರ್ಸ್ ಬಂದು ಹೋಗುತ್ತಿದ್ದರು. ದಿನೇಶ್ ಪತ್ನಿಯನ್ನು ಕೊಂದು ಹೆಂಡತಿ ಮೃತಪಟ್ಟಿರುವ ಪಕ್ಕದ ಕೋಣೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಮಂಗಳೂರು: ಹಾಸಿಗೆ ಹಿಡಿದಿದ್ದ ಪತ್ನಿಯನ್ನು ಕೊಲೆಗೈದು ಪತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಾನವೀಯತೆ ಮರೆತ ಪಾಪಿಗಳು ➤ ನಾಯಿಯನ್ನು  ಗೋಣಿಚೀಲದಲ್ಲಿ ಹಾಕಿ ದೊಣ್ಣೆಯಿಂದ ಹೊಡೆದು ಕೊಲೆ!

(ನ್ಯೂಸ್ ಕಡಬ) newskadaba.com, ಉಡುಪಿ, ಜ.28. ಕಾಲೇಜು ವಿದ್ಯಾರ್ಥಿನಿ ನಾಯಿಯೊಂದಿಗೆ ಆಟವಾಡಿದಳು ಎಂಬ ಕಾರಣಕ್ಕೆ ನಾಯಿಯನ್ನು ಗೋಣಿಚೀಲದಲ್ಲಿ ಹಾಕಿ ಬರ್ಬರವಾಗಿ ಬಡಿದುಕೊಲೆ ಮಾಡಿರುವ ಅಮಾನವೀಯ ಘಟನೆ ಉಡುಪಿ ಜಿಲ್ಲೆ ಕಾಪು ತಾಲೂಕಿನ ಶಿರ್ವದಲ್ಲಿ ನಡೆದಿದೆ. ಬಂಟಕಲ್ ಮಧ್ವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ  ಈ ಘಟನೆ ನಡೆದಿದ್ದು, ಕಾಲೇಜಿನ ವಾರ್ಡನ್​ ರಾಜೇಶ್ ವಿಕೃತ್  ಎಂಬಾತ ಈ ನೀಚ ಕೃತ್ಯ ಮೆರೆದಿದ್ದಾನೆ. ಕಾಲೇಜು ವಿದ್ಯಾರ್ಥಿನಿ ನಾಯಿ ಜೊತೆ ಆಟವಾಡಿದ್ದಕ್ಕೆ ನಾಯಿಯನ್ನೇ ಕೊಲೆ ಮಾಡಲಾಗಿದೆ ಎನ್ನಲಾಗಿದ್ದು,

ಮಾನವೀಯತೆ ಮರೆತ ಪಾಪಿಗಳು ➤ ನಾಯಿಯನ್ನು  ಗೋಣಿಚೀಲದಲ್ಲಿ ಹಾಕಿ ದೊಣ್ಣೆಯಿಂದ ಹೊಡೆದು ಕೊಲೆ! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top