ಕರಾವಳಿ

ಮಂಗಳೂರು: ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.30. ಕಲ್ಲಾಪು ಸನಿಹ ನೇತ್ರಾವತಿ ನದಿಯ ತಂತ್ರಿ ರಸ್ತೆ ಬಳಿ ಅಪರಿಚಿತ ಮೃತದೇಹ ಪತ್ತೆಯಾದ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಮೂರು ದಿನಗಳ ಹಿಂದೆ ನದಿಗೆ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಲುಂಗಿ, ಟೀಶರ್ಟ್ ಧರಿಸಿದ್ದು ಕೈಯಲ್ಲಿ ವಾಚ್, ಪತ್ತೆಯಾಗಿದೆ. ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದು, ಉಳ್ಳಾಲ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ. ಬಜಾಲ್ ಅಥವಾ ಬಂಟ್ವಾಳ ಭಾಗದಲ್ಲಿ ನದಿಗೆ ಬಿದ್ದಿರುವ ಶಂಕೆವ್ಯಕ್ತವಾಗಿದ್ದು , ನದಿ ಮಧ್ಯದಲ್ಲಿ ತೇಲುತ್ತಿದ್ದ ಮೃತದೇಹವನ್ನು ಸಮಾಜ ಸೇವಕ […]

ಮಂಗಳೂರು: ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಹಾಸಿಗೆ ಹಿಡಿದಿದ್ದ ಪತ್ನಿಯನ್ನು ಕೊಲೆಗೈದು ಪತಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.28. ಕಾಪಿಕಾಡ್‌ನ ಅಪಾರ್ಟ್‌ಮೆಂಟ್‌ ಒಂದರಲ್ಲಿ ಪತಿಯೊಬ್ಬ ಹಾಸಿಗೆ ಹಿಡಿದಿದ್ದ ತನ್ನ ಪತ್ನಿಯನ್ನು ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಶೈಲಜಾ (64) ಮತ್ತು ನಿವೃತ್ತ ಕೆನರಾ ಬ್ಯಾಂಕ್ ಮ್ಯಾನೇಜರ್ ದಿನೇಶ್ ರಾವ್ (65) ಎಂದು ಗುರುತಿಸಲಾಗಿದೆ. ಶೈಲಜಾ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಹಾಸಿಗೆ ಹಿಡಿದಿದ್ದು, ಇವರನ್ನು ನೋಡಿಕೊಳ್ಳಲು ಹೋಮ್ ನರ್ಸ್ ಬಂದು ಹೋಗುತ್ತಿದ್ದರು. ದಿನೇಶ್ ಪತ್ನಿಯನ್ನು ಕೊಂದು ಹೆಂಡತಿ ಮೃತಪಟ್ಟಿರುವ ಪಕ್ಕದ ಕೋಣೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಮಂಗಳೂರು: ಹಾಸಿಗೆ ಹಿಡಿದಿದ್ದ ಪತ್ನಿಯನ್ನು ಕೊಲೆಗೈದು ಪತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಾನವೀಯತೆ ಮರೆತ ಪಾಪಿಗಳು ➤ ನಾಯಿಯನ್ನು  ಗೋಣಿಚೀಲದಲ್ಲಿ ಹಾಕಿ ದೊಣ್ಣೆಯಿಂದ ಹೊಡೆದು ಕೊಲೆ!

(ನ್ಯೂಸ್ ಕಡಬ) newskadaba.com, ಉಡುಪಿ, ಜ.28. ಕಾಲೇಜು ವಿದ್ಯಾರ್ಥಿನಿ ನಾಯಿಯೊಂದಿಗೆ ಆಟವಾಡಿದಳು ಎಂಬ ಕಾರಣಕ್ಕೆ ನಾಯಿಯನ್ನು ಗೋಣಿಚೀಲದಲ್ಲಿ ಹಾಕಿ ಬರ್ಬರವಾಗಿ ಬಡಿದುಕೊಲೆ ಮಾಡಿರುವ ಅಮಾನವೀಯ ಘಟನೆ ಉಡುಪಿ ಜಿಲ್ಲೆ ಕಾಪು ತಾಲೂಕಿನ ಶಿರ್ವದಲ್ಲಿ ನಡೆದಿದೆ. ಬಂಟಕಲ್ ಮಧ್ವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ  ಈ ಘಟನೆ ನಡೆದಿದ್ದು, ಕಾಲೇಜಿನ ವಾರ್ಡನ್​ ರಾಜೇಶ್ ವಿಕೃತ್  ಎಂಬಾತ ಈ ನೀಚ ಕೃತ್ಯ ಮೆರೆದಿದ್ದಾನೆ. ಕಾಲೇಜು ವಿದ್ಯಾರ್ಥಿನಿ ನಾಯಿ ಜೊತೆ ಆಟವಾಡಿದ್ದಕ್ಕೆ ನಾಯಿಯನ್ನೇ ಕೊಲೆ ಮಾಡಲಾಗಿದೆ ಎನ್ನಲಾಗಿದ್ದು,

ಮಾನವೀಯತೆ ಮರೆತ ಪಾಪಿಗಳು ➤ ನಾಯಿಯನ್ನು  ಗೋಣಿಚೀಲದಲ್ಲಿ ಹಾಕಿ ದೊಣ್ಣೆಯಿಂದ ಹೊಡೆದು ಕೊಲೆ! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಡ್ರಗ್ ಪ್ರಕರಣ     ➤ 13 ಮಂದಿಗೆ ಜಾಮೀನು

(ನ್ಯೂಸ್ ಕಡಬ)newskadaba.com ಮಂಗಳೂರು, ಜ.28. ನಗರದಲ್ಲಿ ಇತ್ತೀಚೆಗೆ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ವೈದ್ಯರ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂ ಬಂಧಿಸಲ್ಪಟ್ಟಿದ್ದ 13 ಮಂದಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ವಿವಿಧ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆಗಳ ವೈದ್ಯರು, ವೈದ್ಯ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 24 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಉಳಿದ 11 ಮಂದಿ ಕೂಡ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಇನ್ನು ಈ ಪ್ರಕರಣದ ಕುರಿತು ಇತ್ತೀಚೆಗೆ ಮಾತನಾಡಿದ್ದ ಮಂಗಳೂರು ವಕೀಲರ ಸಂಘದ ಉಪಾಧ್ಯಕ್ಷ

ಮಂಗಳೂರು: ಡ್ರಗ್ ಪ್ರಕರಣ     ➤ 13 ಮಂದಿಗೆ ಜಾಮೀನು Read More »

ಕರಾವಳಿ

ಕುಂದಾಪುರ: ಬಸ್ ಹರಿದು ವಿದ್ಯಾರ್ಥಿಯೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com ಕುಂದಾಪುರ, ಜ.28. ಬಸ್ ಫೂಟ್ ಬೋರ್ಡ್ ಮೇಲೆ ನಿಂತು ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯೋರ್ವ ಕೆಳಗೆ ಇಳಿಯುವ ಸಂದರ್ಭದಲ್ಲಿ ಆಯತಪ್ಪಿ ಖಾಸಗಿ ಬಸ್ ನ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟ ಘಟನೆ ಹೆಮ್ಮಾಡಿಯಲ್ಲಿ ನಡೆದಿದೆ. ಹೆಮ್ಮಾಡಿ ಸಮೀಪದ‌ ಕಟ್ ಬೇಲ್ತೂರು ನಿವಾಸಿ, ಕೋಟೇಶ್ವರ ಕಾಗೇರಿ ಕಾಲೇಜಿನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿ ಸುದೀಪ್ (20) ಮೃತ ದುರ್ದೈವಿ. ಸಾಗರದಿಂದ ಕುಂದಾಪುರಕ್ಕೆ ತೆರಳುವ ಖಾಸಗಿ ಬಸ್ ನಲ್ಲಿ ಸುದೀಪ್ ಸಂಚರಿಸುತ್ತಿದ್ದಾಗ ಈ ಅವಘಡ ನಡೆದಿದೆ. ಹೆಮ್ಮಾಡಿ

ಕುಂದಾಪುರ: ಬಸ್ ಹರಿದು ವಿದ್ಯಾರ್ಥಿಯೋರ್ವ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ಳಾರೆ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ➤ ಪ್ರಮುಖ ಆರೋಪಿಗಳು ಸೌದಿ ಅರೇಬಿಯಾದಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.28. ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಅರೋಪಿಗಳು ಸೌದಿ ಅರೇಬಿಯಾದಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಎನ್.ಐ.ಎ ಅಧಿಕಾರಿಗಳು ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನಿಬ್ಬರು ಪ್ರಮುಖ ಆರೋಪಿಗಳಿಗಾಗಿ ತೀವ್ರ ಹುಡುಕಾಟ ನಡೆಸಿದ್ದಾರೆ. ಈ ಮಧ್ಯೆ ತಲೆಮರೆಸಿಕೊಂಡಿರಿವ ಇಬ್ಬರು ಪ್ರಮುಖ ಆರೋಪಿಗಳಾದ ಶರೀಫ್ ಹಾಗೂ ಕೆ.ಎ.ಮಸೂದ್ ಬಗ್ಗೆ ಸುಳಿವು ನೀಡಿದರೆ 10 ಲಕ್ಷ

ಬೆಳ್ಳಾರೆ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ➤ ಪ್ರಮುಖ ಆರೋಪಿಗಳು ಸೌದಿ ಅರೇಬಿಯಾದಲ್ಲಿ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಪ್ರಕರಣ ➤ ಅಧಿಕಾರಿಗೆ 5 ವರ್ಷ ಜೈಲು, 1.50 ಕೋ.ರೂ. ದಂಡ..!

(ನ್ಯೂಸ್ ಕಡಬ)newskadaba.com ಮಂಗಳೂರು, ಜ.28. ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿ ಹೊಂದಿದ ಪ್ರಕರಣದಲ್ಲಿ ನ್ಯಾಯಾಲಯವು ವಲಯ ಅರಣ್ಯಾಧಿಕಾರಿಗೆ 5 ವರ್ಷಗಳ ಸಾದಾ ಸಜೆ ಮತ್ತು 1.50 ಲ.ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಬೆಳ್ತಂಗಡಿ ಸಹ್ಯಾದ್ರಿ ವಲಯದ ವಲಯ ಅರಣ್ಯಾಧಿಕಾರಿಯಾಗಿದ್ದು ಪ್ರಸ್ತುತ ನಿವೃತ್ತರಾಗಿರುವ ಮಂಗಳೂರು ದೇರೆಬೈಲ್‌ ಕೊಂಚಾಡಿ ನಿವಾಸಿ ಎಸ್‌.ರಾಘವ ಪಾಟಾಳಿ ಶಿಕ್ಷೆಗೊಳಗಾದ ಅಪರಾಧಿ. ಈತನ ವಿರುದ್ಧ ಮಂಗಳೂರು ಲೋಕಾಯುಕ್ತ ಪೊಲೀಸ್‌ ಠಾಣೆಯಲ್ಲಿ 2011ರ ಜು.21ರಂದು ಭ್ರಷ್ಟಾಚಾರ ತಡೆ ಕಾಯಿದೆ 1988ರಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ

ಮಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಪ್ರಕರಣ ➤ ಅಧಿಕಾರಿಗೆ 5 ವರ್ಷ ಜೈಲು, 1.50 ಕೋ.ರೂ. ದಂಡ..! Read More »

ಕರಾವಳಿ

ಮಂಗಳೂರು: ಕೆಲಸದ ವೇಳೆ ಆಕಸ್ಮಿಕವಾಗಿ ಕುಸಿದ ಮೇಲ್ಛಾವಣಿ ➤ ಯುವಕನೋರ್ವ ಮೃತ್ಯು..!

(ನ್ಯೂಸ್ ಕಡಬ)newskadaba.com ಮಂಗಳೂರು, ಜ.28. ಕೆಲಸದಲ್ಲಿ ನಿರತನಾಗಿದ್ದ ವೇಳೆ ಆಕಸ್ಮಿಕವಾಗಿ ವರ್ಕ್‌ಶಾಪ್‌ ವೊಂದರ ಮೇಲ್ಛಾವಣಿಯಿಂದ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದೆ. ನಗರದ ಎಕ್ಕೂರುಗುಡ್ಡೆ ನಿವಾಸಿ ವರುಣ್‌(25) ಮೃತಪಟ್ಟವರು ಎನ್ನಲಾಗಿದೆ. ವರುಣ್‌ ಅವರು ವರ್ಕ್‌ಶಾಪ್‌ನ ಮೇಲ್ಛಾವಣಿಯ ಶೀಟ್‌ ಮೇಲೆ ಸೋಲಾರ್‌ ಪ್ಯಾನಲ್‌ಗೆ ವಯರಿಂಗ್‌ ಮತ್ತು ಪ್ಲಂಬಿಂಗ್‌ ಕೆಲಸ ಮಾಡುತ್ತಿದ್ದರು. ಈ ವೇಳೆ ಶೀಟ್‌ ತುಂಡಾಗಿ ವರುಣ್‌ ಅವರು ಕೆಳಗೆ ಬಿದ್ದು ತಲೆಗೆ ಗಂಭೀರ ಗಾಯವಾಗಿತ್ತು. ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಮೃತಪಟ್ಟಿದ್ದಾರೆ ಎಂದು

ಮಂಗಳೂರು: ಕೆಲಸದ ವೇಳೆ ಆಕಸ್ಮಿಕವಾಗಿ ಕುಸಿದ ಮೇಲ್ಛಾವಣಿ ➤ ಯುವಕನೋರ್ವ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ವಿಟ್ಲ: ಸೊಸೈಟಿ ದರೋಡೆಗೆ ಯತ್ನ ➤ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ವಿಟ್ಲ, ಜ.28. ವಿಟ್ಲಪಡ್ನೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೋಡಪದವು ಶಾಖೆಯ ಶಟರ್‌ ತುಂಡರಿಸಿ ದರೋಡೆಗೆ ಯತ್ನಿಸಿದ ಆರೋಪಿಗಳ ಪೈಕಿ ಓರ್ವನನ್ನು ವಾಹನ ಸಹಿತವಾಗಿ ವಿಟ್ಲ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಬಾರೆಬೆಟ್ಟು ನಿವಾಸಿ ಟಿ.ಕೆ. ಅಬ್ದುಲ್‌ ಸಲಾಂ (37) ಬಂಧಿತ ಆರೋಪಿ ಎನ್ನಲಾಗಿದೆ. ಬೈಕ್‌ ಹಾಗೂ ಕಾರಿನಲ್ಲಿ ಆಗಮಿಸಿ ವಿಟ್ಲಪಟ್ನೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೋಡಪದವು ಶಾಖೆಯ ಮುಖ್ಯ ಶಟರ್‌ ಅನ್ನು ಗ್ಯಾಸ್‌ ಕಟ್ಟರ್‌ ನಿಂದ ತುಂಡರಿಸಿ ದರೋಡೆಗೆ ವಿಫ‌ಲ ಯತ್ನ

ವಿಟ್ಲ: ಸೊಸೈಟಿ ದರೋಡೆಗೆ ಯತ್ನ ➤ ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ರಜೆಗಳ ಕಲ್ಯಾಣಕ್ಕಾಗಿ ತಾರತಮ್ಯ ಮುಕ್ತ ಆಡಳಿತ ➤ ಸಚಿವ ಬಿ.ಸಿ. ನಾಗೇಶ್‌           

(ನ್ಯೂಸ್ ಕಡಬ)newskadaba.com  ಮಡಿಕೇರಿ, ಜ.27. ದೇಶದ ಪ್ರತಿಯೊಬ್ಬ ಪ್ರಜೆಯೂ ಪ್ರಗತಿಯನ್ನು ಸಾಧಿಸಿ, ಗೌರವಯುತ ಜೀವನ ನಡೆಸಬೇಕು. ಯಾರೊಬ್ಬರಿಗೂ ತಾರತಮ್ಯ ಮಾಡಬಾರದು ಎನ್ನುವುದು ನಮ್ಮ ಸಂವಿಧಾನದ ಮೂಲ ಆಶಯವಾಗಿದ್ದು, ಇದಕ್ಕೆ ಅನುಗುಣವಾಗಿ ಸರ್ವರ ಕಲ್ಯಾಣಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾರ್ಯ ನಿರ್ವಹಿಸುತ್ತಿವೆ ಎಂದು ಶಿಕ್ಷಣ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ. ಜಿಲ್ಲಾಡಳಿತದ ವತಿಯಿಂದ ನಗರದ ಜನರಲ್‌ ಕೆ.ಎಸ್‌. ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು ಎಂದು ತಿಳಿದುಬಂದಿದೆ.  

ಪ್ರಜೆಗಳ ಕಲ್ಯಾಣಕ್ಕಾಗಿ ತಾರತಮ್ಯ ಮುಕ್ತ ಆಡಳಿತ ➤ ಸಚಿವ ಬಿ.ಸಿ. ನಾಗೇಶ್‌            Read More »

ಕರಾವಳಿ, ಕರ್ನಾಟಕ
Scroll to Top