ಕರಾವಳಿ

ಕಾರ್ಕಳ: ದ್ವಿಚಕ್ರ ವಾಹನ -ಟಿಪ್ಪರ್ ನಡುವೆ ಅಪಘಾತ ➤ ಓರ್ವ ಮಹಿಳೆ ಮೃತ್ಯು

(ನ್ಯೂಸ್ ಕಡಬ)newskadaba.com  ಕಾರ್ಕಳ, ಜ.26. ದ್ವಿಚಕ್ರ ವಾಹನ ಹಾಗೂ ಟಿಪ್ಪರ್ ಢಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಅತ್ತೂರಿನಲ್ಲಿ ನಡೆದಿದೆ. ಮೃತ ವಾಹನ ಸವಾರೆಯನ್ನು ಜಾಹಿರ ಬಾನು ಎಂದು ಗುರುತಿಸಲಾಗಿದೆ. ಟಿಪ್ಪರ್ ಹಾಗೂ ಸ್ಕೂಟಿ ಅತ್ತುರಿನತ್ತ ಸಾಗುತಿತ್ತು ಎನ್ನಲಾಗಿದೆ.

ಕಾರ್ಕಳ: ದ್ವಿಚಕ್ರ ವಾಹನ -ಟಿಪ್ಪರ್ ನಡುವೆ ಅಪಘಾತ ➤ ಓರ್ವ ಮಹಿಳೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಮಂಗಳೂರು: ಬಾಲಕಿಗೆ ಕಿರುಕುಳ ನೀಡಲು ಯತ್ನ ➤ ಉತ್ತರ ಪ್ರದೇಶ ಮೂಲದ ವ್ಯಕ್ತಿ ಬಂಧನ

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.26. ಮಂಗಳೂರು ತಾಲೂಕಿನ ಮರವೂರಿನಲ್ಲಿ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಲು ಯತ್ನಿಸಿದ ಆರೋಪದ ಮೇಲೆ 23 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆತನನ್ನು ಉತ್ತರ ಪ್ರದೇಶ ಮೂಲದ ಗೋಪಾಲ್ ಬಿಂದಾ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೂಲಿ ಕಾರ್ಮಿಕರಾಗಿರುವ ಬಾಲಕಿಯ ಪೋಷಕರ ದೂರಿನ ಪ್ರಕಾರ, ವ್ಯಕ್ತಿ ಕಾರ್ಮಿಕರ ಕೋಣೆಗೆ ನುಸುಳಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ. ಆರೋಪಿಯ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣೆ (ಪೊಕ್ಸೊ) ಕಾಯ್ದೆಯಡಿ

ಮಂಗಳೂರು: ಬಾಲಕಿಗೆ ಕಿರುಕುಳ ನೀಡಲು ಯತ್ನ ➤ ಉತ್ತರ ಪ್ರದೇಶ ಮೂಲದ ವ್ಯಕ್ತಿ ಬಂಧನ Read More »

ಕರಾವಳಿ

ಕಡಬ: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ)newskadaba.com  ಕಡಬ, ಜ.26. ಪ್ರಕರಣವೊಂದಕ್ಕೆ ಸಂಬಂಧಿಸಿ  ಕಳೆದ ಹತ್ತು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಕಡಬ ಪೊಲೀಸರು ಬಂದಿಸಿದ್ದಾರೆ. ಈತನ ವಿರುದ್ದ  ಪುತ್ತೂರು ನಗರ ಠಾಣೆ, ಉಪ್ಪಿನಂಗಡಿ, ಸುಳ್ಯ, ಕೊಣಾಜೆ ಹಾಗೂ ಬಂಟ್ವಾಳ ನಗರ ಠಾಣೆಯಲ್ಲಿ  ಪ್ರಕರಣ ದಾಖಲಾಗಿತ್ತು. ಈತನನ್ನು ಪತ್ತೆ ಹಚ್ಚಿ ಠಾಣೆಗೆ ಕರೆದುಕೊಂಡು ಬಂದು  ಬಳಿಕ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಮಾನ್ಯ ನ್ಯಾಯಾಲವು  ಆರೋಪಿಗೆ  15 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಿದೆ.  ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ರವಿ ಬಿಎಸ್ , ಕಡಬ ಠಾಣಾ ಎಸ್.ಐ  ಆಂಜನೇಯ ರೆಡ್ಡಿ ರವರ ಮಾರ್ಗದರ್ಶನದಲ್ಲಿ  ಕಡಬ ಠಾಣಾ ಎ.ಎಸ್.ಐ

ಕಡಬ: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ Read More »

ಕರಾವಳಿ

ಕರಾವಳಿಯಲ್ಲಿ ಮುಂದುವರಿದ ನೈತಿಕ ಪೊಲೀಸ್ ಗಿರಿ

(ನ್ಯೂಸ್ ಕಡಬ)newskadaba.com  ಧರ್ಮಸ್ಥಳ, ಜ.26. ಯುವತಿಯೊಂದಿಗೆ ಲಾಡ್ಜ್ ನಲ್ಲಿ ಇದ್ದಾನೆ ಎಂದು ಆರೋಪಿಸಿ ಸಂಘಪರಿವಾರದ ಕಾರ್ಯಕರ್ತರು ಮುಸ್ಲಿಮ್ ಯುವಕನೊಬ್ಬನಿಗೆ ಹಲ್ಲೆ ನಡೆಸಿದ ಘಟನೆ ಇಲ್ಲಿನ ಕನ್ಯಾಡಿಯಲ್ಲಿ ವರದಿಯಾಗಿದೆ. ಧರ್ಮಸ್ಥಳದ ಕನ್ಯಾಡಿಯ ವಸತಿಗೃಹದಲ್ಲಿ ಕೋಣೆ ಪಡೆಯಲು ಪ್ರಯತ್ನಿಸಿದ ಚಿತ್ರದುರ್ಗದ ದಾದಾ ಪೀರ್ ಮತ್ತು ಉಮಾ ಎಂಬುವವರನ್ನು ಸಂಘಪರಿವಾರದ ಕಾರ್ಯಕರ್ತರು ಹಲ್ಲೆ ನಡೆಸಿ ಪೋಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ. ಪೋಲೀಸರು ಪೋಷಕರಿಗೆ ಮಾಹಿತಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಕರಾವಳಿಯಲ್ಲಿ ಮುಂದುವರಿದ ನೈತಿಕ ಪೊಲೀಸ್ ಗಿರಿ Read More »

ಕರಾವಳಿ

ಕರಾವಳಿಯ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ ! ➤ ಹವಾಮಾನ ಇಲಾಖೆ ಸೂಚನೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.26. ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಮೈಸೂರು, ದಾವಣಗೆರೆ, ಚಾಮರಾಜನಗರ, ಮಂಡ್ಯ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.

ಕರಾವಳಿಯ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ ! ➤ ಹವಾಮಾನ ಇಲಾಖೆ ಸೂಚನೆ Read More »

ಕರಾವಳಿ, ಕರ್ನಾಟಕ

ಪ್ರಜಾಪ್ರಭುತ್ವದ ಪಥ ಸಂಚಲನದಲ್ಲಿ ಕರಾವಳಿಯ ಏಕೈಕ ಯುವಕ ಮಿಥುನ್ !

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜ.26. ಪ್ರಜಾಪ್ರಭುತ್ವ ದಿನದ ಅಂಗವಾಗಿ ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯಲಿರುವ ಪಥಸಂಚಲನದಲ್ಲಿ ಇಂಡಿಯನ್ ಕೋಸ್ಟ್ ಗಾರ್ಡ್ ನಿಂದ ಕರ್ನಾಟಕವನ್ನು ಏಕೈಕ ಯುವಕ ಪ್ರತಿನಿಧಿಸಲಿದ್ದು, ಅವರು ಕರಾವಳಿ ಮೂಲದವರಾಗಿದ್ದಾರೆ. ಬಂಟ್ವಾಳ ತಾಲೂಕಿನ ಸೇರಾ ನಿವಾಸಿ ಮಿಥುನ್ ಅವರು ಪಥಸಂಚಲನದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ. ಮಿಥುನ್ ಕುಮಾರ್, ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಸೇರಾ ನಿವಾಸಿ ದಿ.ಕೃಷ್ಣಪ್ಪ ಪೂಜಾರಿ ಹಾಗೂ ದಿ. ಭಾರತಿ ಅವರ ಏಕೈಕ ಪುತ್ರರಾಗಿದ್ದಾರೆ. ಭಾರತೀಯ ತಟರಕ್ಷಣಾ ಪಡೆಯಲ್ಲಿರುವ ಮಿಥುನ್ ಅವರು ಆಂದ್ರಪ್ರದೇಶದ

ಪ್ರಜಾಪ್ರಭುತ್ವದ ಪಥ ಸಂಚಲನದಲ್ಲಿ ಕರಾವಳಿಯ ಏಕೈಕ ಯುವಕ ಮಿಥುನ್ ! Read More »

ಕರಾವಳಿ

ಮಂಗಳೂರಿನಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.26. ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು. ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ್ ಕಾಮತ್, ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಮಂಗಳೂರು ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮಾ, ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರು, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್.,

ಮಂಗಳೂರಿನಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ Read More »

ಕರಾವಳಿ

ಮಂಗಳೂರು: ವ್ಯಾನ್‌ನಲ್ಲಿಯೇ ಬೆಂಕಿ ಹಚ್ಚಿಕೊಂಡು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.26. ಉಡುಪಿ ಜಿಲ್ಲೆಯ ಮುಂಡ್ಕೂರು ಗ್ರಾಮದಲ್ಲಿ 46 ವರ್ಷದ ವ್ಯಕ್ತಿಯೊಬ್ಬರು ತಮ್ಮ ವ್ಯಾನ್‌ನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಕೃಷ್ಣ ಸಫಲಿಗ ಎಂದು ಗುರುತಿಸಲಾಗಿದ್ದು, ಮೃತರು ತಮ್ಮ ಮಾಲೀಕತ್ವದ ವ್ಯಾನ್ ಅನ್ನು ಟ್ಯಾಕ್ಸಿಯಾಗಿ ಬಳಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ತಡರಾತ್ರಿ ವಾಹನದಲ್ಲಿ ಕುಳಿತು ತನ್ನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದಾರೆ. ತನ್ನ ಸೋದರನ ಮನೆಯಲ್ಲಿ ನಡೆದ ‘ಮೆಹೆಂದಿ’ ಕಾರ್ಯಕ್ರಮದಿಂದ ವಾಪಸಾಗುತ್ತಿದ್ದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ

ಮಂಗಳೂರು: ವ್ಯಾನ್‌ನಲ್ಲಿಯೇ ಬೆಂಕಿ ಹಚ್ಚಿಕೊಂಡು ವ್ಯಕ್ತಿ ಮೃತ್ಯು Read More »

ಕರಾವಳಿ

ಮಂಗಳೂರು: ಸಮಗ್ರ ಘನತ್ಯಾಜ್ಯ ನಿರ್ವಹಣಾ ಕೇಂದ್ರ ಲೋಕಾರ್ಪಣೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.26. ಜಿಲ್ಲಾ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಎಡಪದವು ಗ್ರಾಮ ಪಂಚಾಯತ್ ನ ಸಂಯುಕ್ತಾಶ್ರಯದಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ನಿರ್ಮಾಣವಾದ ಸಮಗ್ರ ಘನತಾಜ್ಯ ನಿರ್ವಹಣಾ ಕೇಂದ್ರವನ್ನು ಜ.26ರಂದು ತೆಂಕ ಎಡಪದವು ಎಂ.ಆರ್.ಎಫ್ ಕೇಂದ್ರದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕøತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಲೋಕಾರ್ಪಣೆ ಮಾಡಿದರು. ಸಂಸದರಾದ ನಳಿನ್ ಕುಮಾರ್

ಮಂಗಳೂರು: ಸಮಗ್ರ ಘನತ್ಯಾಜ್ಯ ನಿರ್ವಹಣಾ ಕೇಂದ್ರ ಲೋಕಾರ್ಪಣೆ Read More »

ಕರಾವಳಿ

ಧರ್ಮಸ್ಥಳ: ಅನ್ಯಕೋಮಿನ‌ ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ ಸಂಘಪರಿವಾರದ ಕಾರ್ಯಕರ್ತರು

(ನ್ಯೂಸ್ ಕಡಬ)newskadaba.com ಧರ್ಮಸ್ಥಳ, ಜ.25. ಅನ್ಯಕೋಮಿನ ಜೋಡಿಯನ್ನು ತಂಡವೊಂದು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಧರ್ಮಸ್ಥಳ ಹೊರವಲಯದ ಕನ್ಯಾಡಿಯಲ್ಲಿ ಈ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ದಾದಾಪೀರ್‌ ಎಂಬಾತ ವಿವಾಹಿತ ಹಿಂದೂ ಮಹಿಳೆಯ ಜತೆಯಾಗಿ ಧರ್ಮಸ್ಥಳಕ್ಕೆ ಬಂದಿದ್ದರು. ಅವರು ಲಾಡ್ಜ್ ನಲ್ಲಿ ರೂಂ ಪಡೆಯಲೆಂದು ಕನ್ಯಾಡಿಗೆ ಬಂದಿದ್ದರು. ಈ ವೇಳೆ ರೂಂ‌ ಕೊಟ್ಟಿಲ್ಲ. ಬಳಿಕ ಸ್ಥಳೀಯ ಸಂಘಪರಿವಾರದ ಕಾರ್ಯಕರ್ತರು ಅವರನ್ನು ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಇಬ್ಬರ ಪೋಷಕರಿಗೂ ಮಾಹಿತಿ ನೀಡಿ ಕರೆಸಿಕೊಂಡಿದ್ದಾರೆ ಎನ್ನಲಾಗಿದೆ.  

ಧರ್ಮಸ್ಥಳ: ಅನ್ಯಕೋಮಿನ‌ ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ ಸಂಘಪರಿವಾರದ ಕಾರ್ಯಕರ್ತರು Read More »

ಕರಾವಳಿ
Scroll to Top