ಕರಾವಳಿ

ಕಾರ್ಕಳ: ಮಾನಸಿಕವಾಗಿ ನೊಂದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಕಾರ್ಕಳ, ಜ.21. ನೇಣುಬಿಗಿದು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಂಡ್ಲಿಯಲ್ಲಿ ನಡೆದಿದೆ.ಮಜಯ ಪೂಜಾರಿ (48) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಅಂಗಡಿಗೆ ಹೋಗಿ ವಿಳ್ಯದೆಲೆ ಖರೀದಿಸಿಕೊಂಡು ಬರುತ್ತೇನೆಂದು ಹೇಳಿ ಮನೆಯಿಂದ ಹೋದವರು ವಾಪಾಸ್ ಬರದೇ ಇದ್ದುದರಿಂದ ಮನೆಯವರು ಹುಡುಕಾಡಿದಾಗ ಬೆಳ್ಸಾರ್‌ ಬೆಟ್ಟು ನರ್ಸರಿ ಎಂಬಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ವಿಪರೀತ ಮದ್ಯ ಸೇವನೆಯ ಚಟವೊಂದಿದ್ದ ಅವರು ಕಳೆದು ಏಳು ತಿಂಗಳಿಂದ ಕುಡಿತದ ಚಟದಿಂದ ಮುಕ್ತರಾಗಿದ್ದರು. ಯಾವುದೋ ಘಟನೆಯಿಂದಾಗಿ ಮಾನಸಿಕವಾಗಿ […]

ಕಾರ್ಕಳ: ಮಾನಸಿಕವಾಗಿ ನೊಂದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಗಸ್ತು ನಿರತ ಪೊಲೀಸರ ಮೇಲೆ ಹಲ್ಲೆ

(ನ್ಯೂಸ್ ಕಡಬ)newskadaba.com  ಮಂಗಳೂರು, ಜ 21. ಗಸ್ತು ನಿರತ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಐವರ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ. ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸ್ ಕಾನ್‌ಸ್ಟೇಬಲ್ ಮಲ್ಲಿಕಾರ್ಜುನ ಅಂಗಡಿ ಮತ್ತು ಪ್ರದೀಪ್ ನಾಗನ ಗೌಡರೊಂದಿಗೆ ಗಸ್ತು ನಿರತರಾಗಿದ್ದಾಗ ತುಪ್ಪೆಕಲ್ಲಿನ ಕಾಂಕ್ರಿಟ್ ರಸ್ತೆಯ ಬಳಿಯ ಖಾಲಿ ಸ್ಥಳದಲ್ಲಿ ಮಾರುತಿ ಸುಝುಕಿ ಬಿಳಿ ಬಣ್ಣದ ಆಲ್ಟೋ ಕಾರೊಂದರ ಬಳಿ ಇಬ್ಬರು ಅಪರಿಚಿತರು ನಿಂತಿದ್ದರು. ಮತ್ತು ಕಾರಿನೊಳಗೆ ಮೂವರಿದ್ದರು ಎನ್ನಲಾಗಿದೆ. ಗಸ್ತು ಕರ್ತವ್ಯದಲ್ಲಿದ್ದ

ಮಂಗಳೂರು: ಗಸ್ತು ನಿರತ ಪೊಲೀಸರ ಮೇಲೆ ಹಲ್ಲೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಮೂರು ದಿನಗಳ ಮಲ್ಪೆ ಬೀಚ್ ಉತ್ಸವಕ್ಕೆ ವಿಧ್ಯುಕ್ತ ಚಾಲನೆ !

(ನ್ಯೂಸ್ ಕಡಬ)newskadaba.com  ಉಡುಪಿ, ಜ. 21. ಮುಂದಿನ ಪೀಳಿಗೆಗೆ ಅಭಿವೃದ್ಧಿ ಹೊಂದಿದ ಉಡುಪಿ ಜಿಲ್ಲೆಯನ್ನು ನೀಡುವ ಜವಾಬ್ದಾರಿ ಎಲ್ಲರ ಮೇಲಿದೆ. ದೂರದೃಷ್ಟಿಯ ಯೋಜನೆಗಳಿಂದ ಜಿಲ್ಲೆಯನ್ನು ಅಭಿವೃದ್ಧಿ ಪಥದತ್ತ ಕೊಂಡ್ಯೊಯ್ಯಲು ಸಾಧ್ಯ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದರು. ಮಲ್ಪೆ ಬೀಚ್ ನಲ್ಲಿ , ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಜತ ಉಡುಪಿ- ಬೀಚ್ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ

ಉಡುಪಿ: ಮೂರು ದಿನಗಳ ಮಲ್ಪೆ ಬೀಚ್ ಉತ್ಸವಕ್ಕೆ ವಿಧ್ಯುಕ್ತ ಚಾಲನೆ ! Read More »

ಕರಾವಳಿ

ಮಂಗಳೂರು: ಸಮಗ್ರ ಕೃಷಿ ಪದ್ಧತಿ ಉತ್ಕೃಷ್ಟತಾ ಕೇಂದ್ರ ನಿರ್ಮಾಣಕ್ಕೆ ಶಂಕುಸ್ಥಾಪನೆ !

(ನ್ಯೂಸ್ ಕಡಬ)newskadaba.com ಮಂಗಳೂರು, ಜ.21. ರೈತರ ಅಭ್ಯುದಯಕ್ಕಾಗಿ ಕೃಷಿ ಇಲಾಖೆಯಿಂದ ಸರ್ಕಾರ ರೂಪಿಸುವ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲು ಅಗತ್ಯವಿರುವ ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಸದಾ ಸಿದ್ಧವಿದೆ. ಆ ದಿಸೆಯಲ್ಲಿ ಜಿಲ್ಲೆಯ ಸಮಗ್ರ ಕೃಷಿ ಪದ್ದತಿ ಉತ್ಕೃಷ್ಟತಾ ಕೇಂದ್ರವನ್ನು ನಿರ್ಮಿಸಲಾಗುತ್ತಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದ್ದಾರೆ. ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಹಾಗೂ ನಬಾರ್ಡ್ ವತಿಯಿಂದ ಪಡೀಲು ಹತ್ತಿರದ ಅಳಪೆ ಗ್ರಾಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ

ಮಂಗಳೂರು: ಸಮಗ್ರ ಕೃಷಿ ಪದ್ಧತಿ ಉತ್ಕೃಷ್ಟತಾ ಕೇಂದ್ರ ನಿರ್ಮಾಣಕ್ಕೆ ಶಂಕುಸ್ಥಾಪನೆ ! Read More »

ಕರಾವಳಿ

 ಪುತ್ತೂರು : ಹಣದ ವಿಚಾರದಲ್ಲಿ ಅಪಹರಣಗೈದು ಕೊಲೆ ಬೆದರಿಕೆ !

(ನ್ಯೂಸ್ ಕಡಬ)newskadaba.com ಪುತ್ತೂರು, ಜ.21. ಹಣದ ವಿಚಾರದಲ್ಲಿ ತಂಡವೊಂದು ವ್ಯಕ್ತಿಯನ್ನು ಅಪಹರಣ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದಲ್ಲದೆ, ಆತನ ಸಹೋದರನಿಗೆ ಕೊಲೆ‌ ಮಾಡುವುದಾಗಿ ಜೀವ ಬೆದರಿಕೆ ಹಾಕಿದ ಘಟನೆ ವರದಿಯಾಗಿದೆ. ಕೊಯಿಲ ನಿವಾಸಿ ನಿಝಾಮ್ ಅವರು ಹಲ್ಲೆ ಸಂತ್ರಸ್ತ. ಅವರನ್ನು ಮಂಗಳೂರಿನ ಭಾಗಕ್ಕೆ ಕರೆದುಕೊಂಡು ಹೋಗಿ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ಅವರು ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸಹೋದರ ಶಾರೂಕ್ (23) ಅವರನ್ನು ಅಪಹರಣ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆಂದು ಹೇಳಲಾಗಿದೆ.  ಹಣ ಕೊಡದಿದ್ದರೆ ಶಾರೂಕ್ ನನ್ನು

 ಪುತ್ತೂರು : ಹಣದ ವಿಚಾರದಲ್ಲಿ ಅಪಹರಣಗೈದು ಕೊಲೆ ಬೆದರಿಕೆ ! Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ! ➤  NIA ಯಿಂದ 1,500 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ. 21. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ. ಎನ್‌ಐಎ ಪರ ವಕೀಲರಾದ ಪಿ.ಪ್ರಸನ್ನ ಕುಮಾರ್ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. 1,500 ಪುಟಗಳ ಚಾರ್ಜ್‌ಶೀಟ್‌ನಲ್ಲಿ 240 ಸಾಕ್ಷಿಗಳ ಹೇಳಿಕೆಗಳು ಒಳಗೊಂಡಿದ್ದು, ಒಟ್ಟು 20 ಆರೋಪಿಗಳ ಹೆಸರು ಉಲ್ಲೇಖಿಸಲಾಗಿದೆ. ಪ್ರಕರಣದಲ್ಲಿ ಇದುವರೆಗೆ 14 ಆರೋಪಿಗಳನ್ನು ಬಂಧಿಸಲಾಗಿದ್ದು, 6 ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.  

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ! ➤  NIA ಯಿಂದ 1,500 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗಣರಾಜ್ಯೋತ್ಸವ ನೌಕಾಪಡೆ ತಂಡಕ್ಕೆ ಮಂಗಳೂರಿನ ಲೆ|ಕ ದಿಶಾ ಅಮೃತ್ ನೇತೃತ್ವ !

(ನ್ಯೂಸ್ ಕಡಬ)newskadaba.com ಮಂಗಳೂರು, ಜ.21. ಭಾರತವು ತನ್ನ 74 ನೇ ಗಣರಾಜ್ಯೋತ್ಸವವನ್ನು ಜನವರಿ 26 ರಂದು ಆಚರಿಸಲು ಸಜ್ಜಾಗಿದ್ದು, ವಿಶೇಷವೆಂದರೆ ಈ ವರ್ಷ, ಕರ್ತವ್ಯ ಪಥದಲ್ಲಿ ಭಾರತೀಯ ನೌಕಾಪಡೆಯಲ್ಲಿ ಲೆಫ್ಟಿನೆಂಟ್ ಕಮಾಂಡರ್ ಆಗಿರುವ ಮಂಗಳೂರಿನ ಕುವರಿ ದಿಶಾ ಅಮೃತ್ ನೌಕಾಪಡೆ ತಂಡವನ್ನು ಮುನ್ನಡೆಸಲಿದ್ದಾರೆ. ಈ ತುಕಡಿಯು 144 ಯುವ ನಾವಿಕರನ್ನು ಒಳಗೊಂಡಿದ್ದು, ನಾರಿ ಶಕ್ತಿ ಸ್ತಬ್ದಚಿತ್ರ ಇರಲಿದೆ. ಇದರಲ್ಲಿ ಮೂವರು ಮಹಿಳಾ ಅಧಿಕಾರಿಗಳು ಮತ್ತು ಐವರು ಪುರುಷ ಅಗ್ನಿವೀರ್‌ಗಳು ಭಾಗವಹಿಸಲಿದ್ದಾರೆ. ಅಮೃತ್ ಜೊತೆಗೆ, ಮತ್ತೊಬ್ಬ ಮಹಿಳಾ ಅಧಿಕಾರಿ,

ಗಣರಾಜ್ಯೋತ್ಸವ ನೌಕಾಪಡೆ ತಂಡಕ್ಕೆ ಮಂಗಳೂರಿನ ಲೆ|ಕ ದಿಶಾ ಅಮೃತ್ ನೇತೃತ್ವ ! Read More »

ಕರಾವಳಿ, ಕರ್ನಾಟಕ

ಮಂಗಳೂರು: ‘ಬಿಎಸ್ ಡಬ್ಲ್ಯೂಟಿ’ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರಧಾನ!! ➤  ಚಿತ್ರ ನಟ ಅರವಿಂದ್ ಬೋಳಾರ್ ಆಯ್ಕೆ

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.20. ಭಾರತ್ ಸೋಶಿಯಲ್ ವೆಲ್ಫೇರ್ ಟ್ರಸ್ಟ್ “BSWT” ವರ್ಷದ ವ್ಯಕ್ತಿ ಪ್ರಶಸ್ತಿಗೆ ಚಿತ್ರ ನಟ ಅರವಿಂದ್ ಬೋಳಾರ್ ರವರು ಆಯ್ಕೆಯಾಗಿದ್ದಾರೆ. ಅರವಿಂದ ಬೋಳಾರ್ ಅವರು ತುಳು ನಾಟಕ, ಚಲನಚಿತ್ರ ಮತ್ತು ಯಕ್ಷಗಾನ ರಂಗದ ಪ್ರಮುಖ ಕಲಾವಿದರಲ್ಲಿ ಒಬ್ಬರು. ಕನ್ನಡ, ಕೊಂಕಣಿ ಮಲೆಯಾಳಂ ಭಾಷಾ ಸಿನಿಮಾದಲ್ಲಿ ಅಭಿನಯಿಸುತ್ತಾ ಬ್ಯಾರಿ ಭಾಷಾ ಪಾತ್ರದಲ್ಲಿಯೂ ಸೈ ಎನಿಸಿಕೊಂಡವರು. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬೋಳಾರ್ ಎಂಬಲ್ಲಿ ತಂದೆ ಕೃಷ್ಣಪ್ಪ ಮತ್ತು ತಾಯಿ ಸುಂದರಿಯವರ ಮಗನಾಗಿ ಜನಿಸಿದ ಇವರು ತುಳು

ಮಂಗಳೂರು: ‘ಬಿಎಸ್ ಡಬ್ಲ್ಯೂಟಿ’ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರಧಾನ!! ➤  ಚಿತ್ರ ನಟ ಅರವಿಂದ್ ಬೋಳಾರ್ ಆಯ್ಕೆ Read More »

ಕರಾವಳಿ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ಗಿರಿಧರ ಪ್ರಶಸ್ತಿಗೆ ಇಬ್ರಾಹಿಂ ಖಲೀಲ್ ಆಯ್ಕೆ !!

(ನ್ಯೂಸ್ ಕಡಬ)newskadaba.com  ಪುತ್ತೂರು, ಜ.20. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟವಾಗಿದ್ದು, ಪುತ್ತೂರು ಸುದ್ದಿ ಬಿಡುಗಡೆ ವರದಿಗಾರರಾಗಿದ್ದ ಇಬ್ರಾಹಿಂ ಖಲೀಲ್ ರವರು ಗಿರಿಧರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. 2020 ನೇ ವರ್ಷದಲ್ಲಿ ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಪ್ರಕಟಗೊಂಡ ಅತ್ಯುತ್ತಮ ಅಪರಾಧ ವರದಿಗೆ ಈ ಪ್ರಶಸ್ತಿ ನೀಡಲಾಗಿದೆ. ವಿಜಯಪುರದಲ್ಲಿ ನಡೆಯುವ 37ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.  

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ಗಿರಿಧರ ಪ್ರಶಸ್ತಿಗೆ ಇಬ್ರಾಹಿಂ ಖಲೀಲ್ ಆಯ್ಕೆ !! Read More »

ಕರಾವಳಿ

ಕಡಬ: ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನಕ್ಕೆ ವಾರಂಟ್ ಜಾರಿ !!

(ನ್ಯೂಸ್ ಕಡಬ)newskadaba.com ಸಂಪ್ಯ, ಜ.20. ಸಂಪ್ಯ ಠಾಣಾ ವ್ಯಾಪ್ತಿಯಲ್ಲಿ 2019ರಲ್ಲಿ ನಡೆದ ಅಪರಾಧ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕಡಬ ಮೂಲದ  ಆರೋಪಿಯನ್ನು ಸಂಪ್ಯ ಪೊಲೀಸರು ಬಂಧಿಸಿದ್ದಾರೆ. ಕಡಬ ತಾಲೂಕು ಕೊಯಿಲ ಗ್ರಾಮದ ಕಲಾಯಿ ನಿವಾಸಿಯಾಗಿದ್ದು ಪ್ರಸ್ತುತ ಮಂಜೇಶ್ವರ ಉಪ್ಪಳ ಗ್ರಾಮದ ಕೈಕಂಬ ಜಂಕ್ಷನ್ ಇಂಡಿಯನ್ ಗ್ಯಾರೇಜ್ ಬಳಿ ವಾಸವಿರುವ ಇಬ್ರಾಹಿಂ ಖಲಂದರ್ ಯಾನೆ ಇಬ್ರಾಹಿಂ ಬಂಧಿತ ಆರೋಪಿ. ಈತನ ಬಂಧನಕ್ಕೆ ನ್ಯಾಯಾಲಯ ವಾರಂಟ್ ಜಾರಿ ಮಾಡಿತ್ತು. ಸಂಪ್ಯ ಗ್ರಾಮಾಂತರ ಠಾಣಾ ಉಪನಿರೀಕ್ಷಕ ಉದಯರವಿ ಅವರ ಸಲಹೆಯಂತೆ ಗ್ರಾಮಾಂತರ ಠಾಣಾ ಹೆಡ್‌ಕಾನ್‌ ಸ್ಟೇಬಲ್‌ಗಳಾದ ಹರೀಶ್, ಪ್ರವೀಣ್ ಮತ್ತು ಕಾನ್‌ಸ್ಟೇಬಲ್ ಸಚಿನ್‌ರವರು ಜ.19ರಂದು ಕಾಸರಗೋಡು ವಿದ್ಯಾನಗರದಲ್ಲಿ ಆರೋಪಿಯನ್ನು ಪತ್ತೆ ಮಾಡಿ ಬಂಧಿಸಿ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.  

ಕಡಬ: ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನಕ್ಕೆ ವಾರಂಟ್ ಜಾರಿ !! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top