ಕರಾವಳಿ

ರಾಮಕುಂಜ: ನಿವೃತ್ತ ಪಶುವೈದ್ಯ ಪರೀಕ್ಷಕ ಅಶೋಕ್ ಕೊಯಿಲ ಅವರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ರಾಮಕುಂಜ, ಜ. 19. ಹಿರಿಯ ಪಶುವೈದ್ಯ ಪರೀಕ್ಷಕರಾಗಿ ಕಳೆದ ಅಕ್ಟೋಬರ್ ತಿಂಗಳಿನಲ್ಲಿ ನಿವೃತ್ತರಾಗಿರುವ ಅಶೋಕ್ ಕೊಯಿಲ ಅವರನ್ನು ರಾಮಕುಂಜ ಗ್ರಾ.ಪಂ.ವತಿಯಿಂದ ಗ್ರಾ.ಪಂ.ಅಧ್ಯಕ್ಷೆ ಮಾಲತಿ ಎನ್.ಕೆ, ಉಪಾಧ್ಯಕ್ಷ ಪ್ರಶಾಂತ್ ಆರ್.ಕೆ, ಪಿಡಿಒ ಜೆರಾಲ್ಡ್ ಮಸ್ಕರೇನಸ್‌ ರವರು ಶಾಲು, ಹಾರಾರ್ಪಣೆ, ಫಲತಾಂಬೂಲ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ.ಸದಸ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ರಾಮಕುಂಜ: ನಿವೃತ್ತ ಪಶುವೈದ್ಯ ಪರೀಕ್ಷಕ ಅಶೋಕ್ ಕೊಯಿಲ ಅವರಿಗೆ ಸನ್ಮಾನ Read More »

ಕರಾವಳಿ, ಕರ್ನಾಟಕ

ಉಪ್ಪಿನಂಗಡಿ: ಹಾಡಹಗಲೇ ಮನೆ ವರಾಂಡದಲ್ಲಿದ್ದ ನಾಯಿಮರಿಯನ್ನು ಹೊತ್ತೊಯ್ದ ಚಿರತೆ ➤ ಆತಂಕದಲ್ಲಿ ಗ್ರಾಮಸ್ಥರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ. 19.  ಹಾಡಹಗಲೇ ಪ್ರತ್ಯಕ್ಷಗೊಂಡ ಚಿರತೆಯೊಂದು ಗಣೇಶ್ ಎಂಬವರ ಮನೆ ವರಾಂಡದಲ್ಲಿ ಮಲಗಿದ್ದ 40 ದಿನ ಪ್ರಾಯದ ಪಗ್ ಜಾತಿಯ ನಾಯಿ ಮರಿಯೊಂದನ್ನು ಹೊತ್ತೊಯ್ದ ಘಟನೆ ತಣ್ಣೀರುಪಂಥ ಗ್ರಾಮದ ಅಳಕೆ ಎಂಬಲ್ಲಿ ನಡೆದಿದೆ. ಕಲ್ಲೇರಿಯಲ್ಲಿ ಅಂಗಡಿ ಹೊಂದಿದ್ದ ಗಣೇಶ್ ರವರು ಮನೆಯಲ್ಲಿ ಒಬ್ಬರೇ ಇದ್ದ ವೇಳೆ ಈ ಘಟನೆ ಸಂಭವಿಸಿದೆ. ಘಟನೆಯ ಊರಿಡೀ ಹಬ್ಬುತ್ತಿದ್ದಂತೆಯೇ ಗ್ರಾಮಸ್ಥರಲ್ಲಿ ಆತಂಕ ಎದುರಾಗಿದೆ.

ಉಪ್ಪಿನಂಗಡಿ: ಹಾಡಹಗಲೇ ಮನೆ ವರಾಂಡದಲ್ಲಿದ್ದ ನಾಯಿಮರಿಯನ್ನು ಹೊತ್ತೊಯ್ದ ಚಿರತೆ ➤ ಆತಂಕದಲ್ಲಿ ಗ್ರಾಮಸ್ಥರು Read More »

ಕರಾವಳಿ, ಕರ್ನಾಟಕ

ಸುಬ್ರಹ್ಮಣ್ಯ: ಆಯ್ದ ಶಾಲೆಗಳಲ್ಲಿ ಈ ವರ್ಷದಿಂದಲೇ ನೂತನ ಶಿಕ್ಷಣ ಜಾರಿ ➤ ಸಚಿವ ಬಿ.ಸಿ ನಾಗೇಶ್

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜ. 19. ರಾಜ್ಯದಲ್ಲಿ ಈ ವರ್ಷದಿಂದ ಆಯ್ದ ಶಾಲೆಗಳಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೊಳಿಸಲಾಗುತ್ತಿದ್ದು, ಮುಂದಿನ ವರ್ಷದಿಂದ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಶಿಕ್ಷಣ ನೀತಿ ಅನುಷ್ಠಾನದಿಂದ ಭಾರತೀಯ ಶಿಕ್ಷಣ ಕ್ಷೇತ್ರವು ಮತ್ತೆ ಪರಮ ವೈಭವವನ್ನು ಪಡೆಯಲಿದೆ. ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೆ ಈಗಾಗಲೇ ದಿನಾಂಕ ಘೋಷಿಸಿದ್ದು, ಪರೀಕ್ಷಾ ಪೂರ್ವಸಿದ್ಧತೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ಅತಿಥಿ ಶಿಕ್ಷಕರಿಗೆ ವೇತನ ಪಾವತಿ

ಸುಬ್ರಹ್ಮಣ್ಯ: ಆಯ್ದ ಶಾಲೆಗಳಲ್ಲಿ ಈ ವರ್ಷದಿಂದಲೇ ನೂತನ ಶಿಕ್ಷಣ ಜಾರಿ ➤ ಸಚಿವ ಬಿ.ಸಿ ನಾಗೇಶ್ Read More »

ಕರಾವಳಿ

ಮದ್ಯ ಖರೀದಿ ವಯೋಮಿತಿ 21ರಿಂದ 18 ಕ್ಕಿಳಿಸಲು ಮುಂದಾದ ಸರ್ಕಾರ !! ➤   ಯು.ಟಿ.ಖಾದರ್ ಖಂಡನೆ

(ನ್ಯೂಸ್ ಕಡಬ)newskadab.com  ಮಂಗಳೂರು, ಜ.18. ರಾಜ್ಯ ಸರ್ಕಾರ 18 ವರ್ಷದವರಿಗೆ ಮದ್ಯ ಖರೀದಿಗೆ ಅನುಮತಿ ಕೊಡಲು ಚಿಂತಿಸುತ್ತಿದೆ. ಬಿಜೆಪಿ ಸರ್ಕಾರದ ಈ ಕ್ರಮವನ್ನು ನಾವು ಬಲವಾಗಿ ಖಂಡಿಸುತ್ತೇವೆ ಎಂದು ಮಂಗಳೂರಿನಲ್ಲಿ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಹೇಳಿದ್ದಾರೆ. ಇದು ಒಂದು ತಲೆಮಾರನ್ನು ನಾಶ ಮಾಡಲು ಹೊರಟಿರುವ ಕ್ರಮ. ಯುವ ಸಬಲೀಕರಣ, ಯುವಕರಿಗೆ ಉದ್ಯೋಗ ಕೊಡಲು ಇವರಿಗೆ ಆಗಿಲ್ಲ.ಈಗ ಯುವಕರನ್ನು ದುಷ್ಟಟಕ್ಕೆ ಪ್ರೇರೇಪಿಸುವ ಯೋಚನೆ ಸರ್ಕಾರ ಮಾಡ್ತಿದೆ. ಬಿಜೆಪಿ ಸರ್ಕಾರಕ್ಕೆ ಇದರ ಪರಿಣಾಮ ಗೊತ್ತಿಲ್ಲ, ಕೇವಲ ದುಡ್ಡು ಮಾಡಬೇಕು ಅಷ್ಟೇ.

ಮದ್ಯ ಖರೀದಿ ವಯೋಮಿತಿ 21ರಿಂದ 18 ಕ್ಕಿಳಿಸಲು ಮುಂದಾದ ಸರ್ಕಾರ !! ➤   ಯು.ಟಿ.ಖಾದರ್ ಖಂಡನೆ Read More »

ಕರಾವಳಿ

ಮಂಗಳೂರು: ಮುಳುಗಿದ ಚೀನಾ ಹಡಗಿನಿಂದ ತೈಲ ತೆರವು ಕಾರ್ಯ ಶುರು !!                

(ನ್ಯೂಸ್ ಕಡಬ)newskadab.com  ಮಂಗಳೂರು, ಜ.18. ಮಂಗಳೂರಿನ ಉಚ್ಚಿಲ ಕಡಲ ತೀರದಲ್ಲಿ ಚೈನಾದ ಹಡಗು ಮುಳುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಬರೋಬ್ಬರಿ ಆರು ತಿಂಗಳ ಬಳಿಕ ಹಡಗಿನ ತೈಲ ತೆರವು ಕಾರ್ಯ ಆರಂಭವಾಗಿದೆ. ಸರಕು ಹಡಗಿನಲ್ಲಿದ್ದ ಸುಮಾರು 220 ಟನ್‌ ತೈಲ ತೆರವು ಕಾರ್ಯ ನಡೀತಾ ಇದ್ದು, ಚೀನಾದಿಂದ ಲೆಬನಾನ್‌ಗೆ 8 ಸಾವಿರ ಟನ್‌ ತೂಕದ ಸ್ಟೀಲ್‌ ಕಾಯಿಲ್‌ ಸಾಗಿಸುತ್ತಿದ್ದ ಹಡಗು ಇದಾಗಿತ್ತು‌. ಗುಜರಾತ್‌ ಮೂಲದ ಬನ್ಸಲ್‌ ಎಂಡೆವರ್ಸ್‌ ಸಂಸ್ಥೆಗೆ ತೈಲ ತೆರವು ಗುತ್ತಿಗೆ ನೀಡಲಾಗಿದೆ‌‌. 160 ಟನ್‌ ಫರ್ನೆಸ್‌

ಮಂಗಳೂರು: ಮುಳುಗಿದ ಚೀನಾ ಹಡಗಿನಿಂದ ತೈಲ ತೆರವು ಕಾರ್ಯ ಶುರು !!                 Read More »

ಕರಾವಳಿ

ಕುಂದಾಪುರ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ 20 ಲಕ್ಷ ರೂ. ಚಿನ್ನಾಭರಣ ಕಳವು

(ನ್ಯೂಸ್ ಕಡಬ)newskadab.com  ಕುಂದಾಪುರ, ಜ.18. ಗೋವಾದ ಪಣಜಿಯಿಂದ ಸಾಸ್ತಾನದ ಐರೋಡಿಗೆ ಬಸ್ಸಿನಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರು 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳೆದುಕೊಂಡಿದ್ದು, ವಸ್ತುಗಳನ್ನು ಹಿಂದಿ ಮಾತನಾಡುವ ತಂಡ ಕದ್ದೊಯ್ದಿರುವ ಶಂಕೆ ವ್ಯಕ್ತವಾಗಿದೆ. ಐರೋಡಿ ನಿವಾಸಿ ಸಂಗೀತಾ ಭಟ್ ಚಿನ್ನಾಭರಣ ಕಳೆದುಕೊಂಡ ಮಹಿಳೆಯಾಗಿದ್ದು, ಆಕೆಯು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪಣಜಿಯಿಂದ ಪುತ್ತೂರಿಗೆ ತೆರಳುತ್ತಿದ್ದರು. ಸಂಗೀತಾ ತನ್ನ ಬಟ್ಟೆ ಮತ್ತು ಚಿನ್ನಾಭರಣಗಳಿರುವ ಚಿಕ್ಕ ಕಾಟನ್ ಬ್ಯಾಗ್ ಅನ್ನು ಟ್ರಾಲಿ ಬ್ಯಾಗ್‌ನಲ್ಲಿ ಇಟ್ಟುಕೊಂಡು ಅದನ್ನು ಲಾಕ್ ಮಾಡಿ ತಾನು ಕುಳಿತಿದ್ದ ಸೀಟಿನ

ಕುಂದಾಪುರ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ 20 ಲಕ್ಷ ರೂ. ಚಿನ್ನಾಭರಣ ಕಳವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಏರ್‌ ಕಂಪ್ರೈಸರ್‌ ಸ್ಫೋಟಗೊಂಡು ಕಾರ್ಮಿಕ ಮೃತ್ಯು

(ನ್ಯೂಸ್ ಕಡಬ)newskadab.com  ಉಪ್ಪಿನಂಗಡಿ, ಜ.18. ಟಯರ್‌ ರಿಸೋಲ್‌ ಸಂಸ್ಥೆಯೊಂದರಲ್ಲಿ ಏರ್‌ ಕಂಪ್ರೈಸರ್‌ ಸ್ಫೋಟಗೊಂಡು ಕಾರ್ಮಿಕ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಗಾಂಧಿಪಾರ್ಕ್‌ ಬಳಿಯಲ್ಲಿ  ನಡೆದಿದೆ. ಉಪ್ಪಿನಂಗಡಿ ಗಾಂಧಿ ಪಾರ್ಕ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂಡಿಯನ್ ಟಯರ್ ಅಂಗಡಿಯಲ್ಲಿ ಏರ್ ಕಂಪ್ರೆಸರ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಆಲಂಕಾರು ಮೂಲದ ರಾಜೇಶ್ ಪೂಜಾರಿ (43) ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಏರ್ ಕಂಪ್ರೆಸರ್ ಸ್ಫೋಟಗೊಂಡು ಗಂಭೀರ ಗಾಯಗೊಂಡಿದ್ದ ರಾಜೇಶ್ ರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆತರಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಉಪ್ಪಿನಂಗಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.  

ಉಪ್ಪಿನಂಗಡಿ: ಏರ್‌ ಕಂಪ್ರೈಸರ್‌ ಸ್ಫೋಟಗೊಂಡು ಕಾರ್ಮಿಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

’ಮಿಸ್‌ ಮಂಗಳೂರು’ ಪಟ್ಟ ಕಾಫಿನಾಡಿನ ಚೆಲುವೆ ಸುಶ್ಮಾ ಎಸ್‌. ಶೆಟ್ಟಿ ಪಾಲು !!

(ನ್ಯೂಸ್ ಕಡಬ)newskadab.com  ಮಂಗಳೂರು, ಜ.18. ಕಾಫಿನಾಡಿನ ದಿಟ್ಟ ಪ್ರತಿಭೆ ಸುಷ್ಮಾ ಎಸ್. ಶೆಟ್ಟಿ ‘ಮಿಸ್ ಮಂಗಳೂರು’ ಪಟ್ಟ ಧರಿಸುವ ಮೂಲಕ ಪ್ರತಿಭಾವಂತೆಯಾಗಿ ಹೊರ ಹೊಮ್ಮಿದ್ದಾರೆ. ಮಂಗಳೂರಿನ ಶ್ರೀದೇವಿ ಕಾಲೇಜಿನಲ್ಲಿ ಹೆವೆನ್ ರೋಜ್ ಆಂಡ್ ಸಿಜ್ಲಿಂಗ್ ಗೈಸ್ ಪ್ರಾಯೋಜಕತ್ವದಲ್ಲಿ ಏರ್ಪಡಿಸಿದ್ದ ಮಿಸ್ ಸ್ಪರ್ದೆಯಲ್ಲಿ ನೂರು ಸ್ಪರ್ಧಾಳುಗಳು ಭಾಗವಹಿಸಿದ್ದರು. ಅದರಲ್ಲಿ ಅಂತಿಮ ಆಯ್ಕೆ ಸುತ್ತಿಗೆ 36 ಸ್ಪರ್ಧಿಗಳು ಆಯ್ಕೆಯಾದರು. ಅದರಲ್ಲಿ ಕೊನೆಯ ಸುತ್ತಿನ 10 ಮಂದಿಯಲ್ಲಿ ಸುಷ್ಮಾ ಎಸ್. ಶೆಟ್ಟಿ ಅವರು ಆಯ್ಕೆಯಾಗಿ ‘ಮಿಸ್ ಮಂಗಳೂರು’ ಪಟ್ಟವನ್ನು ತೊಟ್ಟರು. ಸುಶ್ಮಾ

’ಮಿಸ್‌ ಮಂಗಳೂರು’ ಪಟ್ಟ ಕಾಫಿನಾಡಿನ ಚೆಲುವೆ ಸುಶ್ಮಾ ಎಸ್‌. ಶೆಟ್ಟಿ ಪಾಲು !! Read More »

ಕರಾವಳಿ

ಪುತ್ತೂರು: ಯುವತಿಗೆ ಚೂರಿಯಿಂದ ಇರಿತ ಪ್ರಕರಣ !!   ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadab.com  ಪುತ್ತೂರು, ಜ.18. ಮುಂಡೂರು ಕಂಪದಲ್ಲಿ ಯುವತಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಯಶ್ರಿ(23)ನ್ನು ಕನಕಮಜಲು ನಿವಾಸಿ ಉಮೇಶ್ ನಿನ್ನೆ ಮನೆಗೆ ನುಗ್ಗಿ ಚೂರಿಯಿಂದ ಇರಿದು ಕೊಲೆ ಮಾಡಿದ್ದ. ಉಮೇಶ್, ಜಯಶ್ರಿಯ ಸಂಬಂಧಿಕನಾಗಿದ್ದು ಆಗಾಗ ಮನೆಗೆ ಬಂದು ಹೋಗುತ್ತಿದ್ದ ಎನ್ನಲಾಗಿದೆ. ಆತನ ನಡವಳಿಕೆಯಿಂದ ಬೇಸತ್ತು ಜಯಶ್ರೀ ಇತ್ತೀಚೆಗೆ ಆತನಿಂದ ದೂರ ಸರಿದಿದ್ದಳು, ಇದೇ ಸಿಟ್ಟಿನಲ್ಲಿ ಆರೋಪಿ ಕೃತ್ಯ ಎಸಗಿದ್ದಾನೆ ಎನ್ನುವುದು ತಿಳಿದು ಬಂದಿದೆ.

ಪುತ್ತೂರು: ಯುವತಿಗೆ ಚೂರಿಯಿಂದ ಇರಿತ ಪ್ರಕರಣ !!   ➤ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಕೆಲಸಕ್ಕೆಂದು ಹೋದ ಯುವತಿ ನಾಪತ್ತೆ

(ನ್ಯೂಸ್ ಕಡಬ)newskadab.com  ಮಂಗಳೂರು, ಜ.18. ನಗರದ ಮಣಪ್ಪುರಂ ಫೈನಾನ್ಸ್‌ನ ಉದ್ಯೋಗಿಯಾಗಿದ್ದ ಯುವತಿಯೊಬ್ಬಳು ನಾಪತ್ತೆಯಾದ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಮಲಾಕ್ಷ ಎಂಬವರ ಪುತ್ರಿ ಶಿವಾನಿ (20) ಕಾಣೆಯಾದ ಯುವತಿ. ಈಕೆ ಜ.16ರಂದು ಬೆಳಗ್ಗೆ 7ಕ್ಕೆ ಕೆಲಸಕ್ಕೆ ತೆರಳಿದ್ದು, ಸಂಜೆ 6 ಗಂಟೆಯಾದರೂ ಮರಳಿ ಬಂದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. 5.6 ಅಡಿ ಎತ್ತರದ, ಬಿಳಿ ಮೈಬಣ್ಣದ, ದಪ್ಪಮುಖದ, ಸಾಧಾರಣ ಮೈಕಟ್ಟಿನ ಈಕೆ ತುಳು ಮತ್ತು ಕನ್ನಡ ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೊರಟು ಹೋದಾಗ ಹಸಿರು ಬಣ್ಣದ

ಮಂಗಳೂರು: ಕೆಲಸಕ್ಕೆಂದು ಹೋದ ಯುವತಿ ನಾಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top