ಕರಾವಳಿ

ಮಡಿಕೇರಿ: ವಿವಾಹಿತ ಮಹಿಳೆಯ ಅನುಮಾನಾಸ್ಪದವಾಗಿ ಮೃತ್ಯು

(ನ್ಯೂಸ್ ಕಡಬ)newskadab.com  ಮಡಿಕೇರಿ, ಜ.18. ವಿವಾಹಿತ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ವೀರಾಜಪೇಟೆ ತಾಲೂಕು ಚೆಂಬೆಬೆಳ್ಳೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಐಮಂಗಲ ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿಗಳಾದ ಯೇಸುದಾಸ್‌ ಹಾಗೂ ತಾರಾ ದಂಪತಿಯ ಪುತ್ರ ರಕ್ಷಿತ್‌ ಅವರ ಪತ್ನಿ ಕಾವ್ಯಾ (23) ಮೃತಪಟ್ಟವರು ಎನ್ನಲಾಗಿದೆ. ರಕ್ಷಿತ್‌ ಕೆಲಸ ಮುಗಿಸಿ ಮನೆಗೆ ಬಂದಾಗ ಕಾವ್ಯಾ ಯಾವುದೇ ಪ್ರತಿಕ್ರಿಯೆ ಇಲ್ಲದೆ ಬಿದ್ದಿದ್ದರೆನ್ನಲಾಗಿದೆ. ತತ್‌ಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. 4 ವರ್ಷಗಳ ಹಿಂದೆ ರಕ್ಷಿತ್‌ ಹಾಗೂ ಕಾವ್ಯಾ […]

ಮಡಿಕೇರಿ: ವಿವಾಹಿತ ಮಹಿಳೆಯ ಅನುಮಾನಾಸ್ಪದವಾಗಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಜ. 21ರಂದು ತಾರಸಿ, ಕೈತೋಟ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 18. ಸಿರಿ ತೋಟಗಾರಿಕಾ ಸಂಘದಿಂದ ಇದೇ ಜ. 21ರಂದು ಕೈತೋಟ ಮತ್ತು ತಾರಸಿ ತೋಟ ತರಬೇತಿಯನ್ನು ನಗರದ ಕದ್ರಿ ಬಾಲಭವನದಲ್ಲಿ (ಕದ್ರಿ ಉದ್ಯಾನವನದ ಹತ್ತಿರ) ಹಮ್ಮಿಕೊಳ್ಳಲಾಗಿದೆ. ಆಸಕ್ತರು ಮಂಗಳೂರಿನ ಬೆಂದೂರ್ ವೆಲ್ ನಲ್ಲಿರುವ ಸಿರಿ ತೋಟಗಾರಿಕಾ ಸಂಘದಲ್ಲಿ ತರಬೇತಿ ಶುಲ್ಕ ಪಾವತಿಸಿ ಜ.20ರೊಳಗೆ ಹೆಸರು ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 9845523944 ಸಂಪರ್ಕಿಸುವಂತೆ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು: ಜ. 21ರಂದು ತಾರಸಿ, ಕೈತೋಟ ತರಬೇತಿ Read More »

ಕರಾವಳಿ, ಕರ್ನಾಟಕ

ರಾಮಕುಂಜ: ಸರಕಾರಿ ಗೋಶಾಲೆ ಪ್ರಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 18. ಕಡಬ ತಾಲೂಕಿನ ರಾಮಕುಂಜ ಗ್ರಾಮದಲ್ಲಿ ಕುಮಾರಧಾರ ಸರ್ಕಾರಿ ಗೋ ಶಾಲೆಯು ಪ್ರಾರಂಭವಾಗಿದೆ. ಇದೇ ಜ. 15ರಿಂದ ಈ ಗೋಶಾಲೆಯಲ್ಲಿ, ಜಾನುವಾರುಗಳನ್ನು ದಾಖಲಿಸಿಕೊಂಡು ನಿರ್ವಹಣೆ ಮಾಡಲಾಗುತ್ತಿದೆ. ಪುಸ್ತುತ ಗೋಶಾಲೆಯಲ್ಲಿ 12 ಜಾನುವಾರುಗಳಿರುತ್ತವೆ ಎಂದು ಜಿಲ್ಲಾ ಪ್ರಾಣಿ ದಯಾ ಸಂಘದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಮಕುಂಜ: ಸರಕಾರಿ ಗೋಶಾಲೆ ಪ್ರಾರಂಭ Read More »

ಕರಾವಳಿ

ಅರಂತೋಡು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

(ನ್ಯೂಸ್ ಕಡಬ) newskadaba.com ಅರಂತೋಡು, ಜ. 18. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಘಟನೆ ಮಾಣಿ- ಮೈಸೂರು ಹೆದ್ದಾರಿಯ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಬಳಿ ನಡೆದಿದೆ. ಮಡಿಕೇರಿಯಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಅರಂತೋಡು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಬೈಕ್ ಮತ್ತು ಲಾರಿ ನಡುವೆ ಮುಖಾಮುಖಿ ಢಿಕ್ಕಿ ➤ ವಿದ್ಯಾರ್ಥಿಗಳಿಬ್ಬರು ಸ್ಥಳದಲ್ಲೇ ಮೃತ್ಯು..!                                                

(ನ್ಯೂಸ್ ಕಡಬ) newskadaba.com ಬ್ರಹ್ಮಾವರ, ಜ.18. ಬೈಕ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿ 66ರ ಪೆಟ್ರೋಲ್ ಬಂಕ್ ವೊಂದರ ಬಳಿ ನಡೆದಿದೆ. ಶಿವಮೊಗ್ಗ ನಿವಾಸಿ ಸಮಿತ್ ಕುಮಾರ್ (19) ಹಾಗೂ ಸಾಲಿಗ್ರಾಂ ಚಿತ್ರಪಾಡಿ ನಿವಾಸಿ ವಾಗೀಶ್(19) ಮೃತರು ಎಂದು ಗುರುತಿಸಲಾಗಿದೆ. ಇವರು ಉಡುಪಿಯ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು. ಇವರು ಕಾಲೇಜು ಮುಗಿಸಿ ರಾತ್ರಿ ಮನೆಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಎದುರಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ

ಉಡುಪಿ: ಬೈಕ್ ಮತ್ತು ಲಾರಿ ನಡುವೆ ಮುಖಾಮುಖಿ ಢಿಕ್ಕಿ ➤ ವಿದ್ಯಾರ್ಥಿಗಳಿಬ್ಬರು ಸ್ಥಳದಲ್ಲೇ ಮೃತ್ಯು..!                                                 Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಯುವತಿಗೆ ಚೂರಿಯಿಂದ ಇರಿದು ಬರ್ಬರ ಕೊಲೆ

(ನ್ಯೂಸ್ ಕಡಬ)newskadaba.com  ಪುತ್ತೂರು, ಜ.17. ಮನೆಗೆ ನುಗ್ಗಿ ಯುವತಿಯನ್ನು‌ ಚೂರಿಯಿಂದ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಪುತ್ತೂರಿ‌ನ ಮಂಡೂರು ಬಳಿ ನಡೆದಿದೆ. ಕಂಪದ ಎಂಬಲ್ಲಿನ 23 ವರ್ಷದ ಜಯಶ್ರೀಗೆ ಚೂರಿಯಿಂದ ಇರಿಯಲಾಗಿದೆ. ಆಕೆಯನ್ನು ಆಸ್ಪತ್ರೆಗೆ ಸಾಗಿಸುವ ದಾರಿ‌ ಮಧ್ಯೆ ಮೃತಪಟ್ಟಿದ್ದಾಳೆ. ಯುವತಿಯ ಮೃತದೇಹ ಪುತ್ತೂರಿನ ಆಸ್ಪತ್ರೆಯಲ್ಲಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.  

ಪುತ್ತೂರು: ಯುವತಿಗೆ ಚೂರಿಯಿಂದ ಇರಿದು ಬರ್ಬರ ಕೊಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಫೆಬ್ರವರಿಯಲ್ಲಿ ಸಿಎಂ ಬೊಮ್ಮಾಯಿ ಕಡಬ,ಸುಬ್ರಹ್ಮಣ್ಯಕ್ಕೆ ಆಗಮನ ➤  ಸಚಿವ ಎಸ್.ಅಂಗಾರ

(ನ್ಯೂಸ್ ಕಡಬ)newskadaba.com ಕಡಬ, ಜ.17. ಅಭಿವೃದ್ಧಿ ಕಾಮಗಾರಿಗಳ ಚಾಲನೆ ನೀಡಲು ಹಾಗೂ ಉದ್ಘಾಟನೆ ನೆರವೇರಿಸಲು ರಾಜ್ಯದ ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಫೆಬ್ರವರಿ ತಿಂಗಳ 28ರ ಮೊದಲು ಕುಕ್ಕೆ ಸುಬ್ರಹ್ಮಣ್ಯ ಹಾಗೂ ಕಡಬಕ್ಕೆ ಆಗಮಿಸಲಿದ್ದಾರೆ ಎಂದು  ಸಚಿವ ಎಸ್.ಅಂಗಾರ ಅವರು ಸುಬ್ರಹ್ಮಣ್ಯದಲ್ಲಿ  ನಡೆದ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ 300 ಕೋಟಿ ವೆಚ್ಚದ ಮಾಸ್ಟರ್ ಪ್ಲಾನ್ ಕಾಮಗಾರಿಗೆ ಸಿಎಂ ಬೊಮ್ಮಾಯಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಫೆಬ್ರವರಿ 28ರಂದು ಅಥವಾ ಅದಕ್ಕಿಂತ ಮೊದಲು ಸಿಎಂ ಕಾರ್ಯಕ್ರಮ ನಡೆಯಲಿದೆ. ಕಡಬ ತಾಲೂಕಿನಲ್ಲಿ ನಿರ್ಮಾಣಗೊಂಡಿರುವ ಕಡಬ ತಾಲೂಕು ಪಂಚಾಯತ್ ಕಟ್ಟಡ, ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಮಿನಿ ವಿಧಾನ ಸೌಧ, ಪಶುಪಾಲನಾ ಇಲಾಖೆಯ ಡಿಪ್ಲೊಮಾ ಕಾಲೇಜು ಇವುಗಳ ಉದ್ಘಾಟನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೆರವೇರಿಸಲಿದ್ದಾರೆ ಎನ್ನಲಾಗಿದೆ.  ಈ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲಾಗಿದೆ. ಅವರು ದಿನಾಂಕ ನಿಗದಿ ಮಾಡಿದ ಕೂಡಲೇ ಪೂರ್ವಭಾವಿ ಸಭೆ, ಸಿದ್ಧತೆಗಳನ್ನು ನಡೆಸಲಾಗುವುದು ಎಂದು ಸಚಿವರು ತಿಳಿಸಿದರು.    

ಫೆಬ್ರವರಿಯಲ್ಲಿ ಸಿಎಂ ಬೊಮ್ಮಾಯಿ ಕಡಬ,ಸುಬ್ರಹ್ಮಣ್ಯಕ್ಕೆ ಆಗಮನ ➤  ಸಚಿವ ಎಸ್.ಅಂಗಾರ Read More »

ಕರಾವಳಿ, ಕರ್ನಾಟಕ

ಮಂಗಳೂರು: ರಿಯಾಯಿತಿ ದರದಲ್ಲಿ ಉಚಿತ ವಸತಿ ಗೃಹ ಪ್ರಾರಂಭ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.17. ನಗರದ ಕೊಂಚಾಡಿ ಹಾಗೂ ಕಂಕನಾಡಿಯಲ್ಲಿನ ಮಹಿಳಾ ವಸತಿ ಗೃಹಗಳಲ್ಲಿ ಉದ್ಯೋಗನಿರತ ಮಹಿಳೆಯರಿಗೆ ರಿಯಾಯಿತಿ ದರದಲ್ಲಿ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರ ಮತ್ತು ಹಿಂದುಳಿದ ವರ್ಗದ ಮಹಿಳೆಯರಿಗೆ ಉಚಿತವಾಗಿ ವಸತಿ ಗೃಹಗಳಲ್ಲಿ ಪ್ರವೇಶ ಪ್ರಾರಂಭಿಸಲಾಗಿದೆ. ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ:0824-2959809 ಸಂಪರ್ಕಿಸುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.    

ಮಂಗಳೂರು: ರಿಯಾಯಿತಿ ದರದಲ್ಲಿ ಉಚಿತ ವಸತಿ ಗೃಹ ಪ್ರಾರಂಭ Read More »

ಕರಾವಳಿ, ಕರ್ನಾಟಕ

ಮಂಗಳೂರು: ವಿಜಯ ಕುಮಾರ್ ರವರು ನೋಡಲ್ ಅಧಿಕಾರಿಯಾಗಿ ನೇಮಕ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.17. ಇಲ್ಲಿನ ಕಂದಾಯ ಅಧಿಕಾರಿ ವಿಜಯ ಕುಮಾರ್ ಅವರನ್ನು ಬೀದಿ ಬದಿ ವ್ಯಾಪಾರಸ್ಥರಿಗೆ ಮತ್ತು ಅವರ ಕುಟುಂಬದವರಿಗೆ ಪಿಎಂ ಸ್ವನಿಧಿ ಮಹೋತ್ಸವ ಆಚರಣೆ ಕಾರ್ಯಕ್ರಮದ ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಜನಪ್ರತಿನಿಧಿಗಳು, ಮಂಗಳೂರು ಮಹಾನಗರಪಾಲಿಕೆ ನಗರ ಬಡತನ ನಿರ್ಮೂಲನಾ ಕೋಶ, ಜಿಲ್ಲಾ ಕೌಶಲ್ಯಾಭಿವೃದ್ಧಿ ಮತ್ತು ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿಯ ಸದಸ್ಯ ಅಧಿಕಾರಿಗಳನ್ನು ಸಮನ್ವಯಗೊಳಿಸಿಕೊಂಡು ಸ್ವನಿಧಿ ಮಹೋತ್ಸವವನ್ನು ಯಶಸ್ವಿಯಾಗಿ ಆಯೋಜಿಸುವಂತೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್ ಅವರು ಸೂಚಿಸಿದ್ದಾರೆ.  

ಮಂಗಳೂರು: ವಿಜಯ ಕುಮಾರ್ ರವರು ನೋಡಲ್ ಅಧಿಕಾರಿಯಾಗಿ ನೇಮಕ Read More »

ಕರಾವಳಿ, ಕರ್ನಾಟಕ

ಎಂಡೋಸಲ್ಫಾನ್ ಸಂತ್ರಸ್ತರಿಗೆ ಜ.17ರಿಂದ ವಿಶೇಷ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.17. ಜಿಲ್ಲೆಯ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ವಿಶೇಷ ಆರೋಗ್ಯ ತಪಾಸಣಾ ಶಿಬಿರ ಇದೇ ಜ.17ರಿಂದ 21ರ ವರೆಗೆ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ವಿವಿಧ ತಾಲೂಕುಗಳಲ್ಲಿ ನಡೆಯಲಿವೆ. ಜ.17ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ, ಜ.18ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಹಾಗೂ ಜ.21ರಂದು ಪುತ್ತೂರು ತಾಲೂಕಿನ ಪಾಣಾಜೆ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯ ತಪಾಸಣೆ ನಡೆಯಲಿದ್ದು, ಸಂತ್ರಸ್ತರು ಈ ಶಿಬಿರದ ಸದುಪಯೋಗ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು

ಎಂಡೋಸಲ್ಫಾನ್ ಸಂತ್ರಸ್ತರಿಗೆ ಜ.17ರಿಂದ ವಿಶೇಷ ಆರೋಗ್ಯ ತಪಾಸಣಾ ಶಿಬಿರ Read More »

ಕರಾವಳಿ, ಕರ್ನಾಟಕ
Scroll to Top