ಕರಾವಳಿ

crime, arrest, suspected

ಮಂಗಳೂರು: ಕದ್ದ ಹಣ ಮಣ್ಣಿನಡಿ ಹೂತಿಟ್ಟ ಖದೀಮ..! ➤  ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.16. ಕಳೆದ ವರ್ಷದ ನವೆಂಬರ್ ನಲ್ಲಿ ನಗರದ ಕೆ.ಎಸ್ ರಾವ್ ರಸ್ತೆಯ ಬಳಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಗೂ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ 35ಕ್ಕೂ ಅಧಿಕ ಕಳ್ಳತನ‌ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕು ಪಡಂಗಡಿ-ಮದ್ದಡ್ಕ ನಿವಾಸಿ ಕುಂಞಿಮೋನು ಯಾನೆ ಜಾಫರ್‌ ಯಾನೆ ಹಮೀದ್ (48) ಎಂದು ಗುರುತಿಸಲಾಗಿದೆ. ನಲಪಾಡ್ ಅಪ್ಸರಾ ಛೇಂಬರ್ಸ್ ಕಟ್ಟಡದ ನೆಲಮಹಡಿಯಲ್ಲಿನ ಹೂವು ವ್ಯಾಪಾರದ ಹೋಲ್ ಸೇಲ್ ಅಂಗಡಿಯಲ್ಲಿ […]

ಮಂಗಳೂರು: ಕದ್ದ ಹಣ ಮಣ್ಣಿನಡಿ ಹೂತಿಟ್ಟ ಖದೀಮ..! ➤  ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ಅಡಿಕೆ ಕೀಳುವ ಸಮಯದಲ್ಲಿ ಮುರಿದು ಬಿದ್ದ ಮರ…!! ➤ ವ್ಯಕ್ತಿಯೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com  ಉಡುಪಿ, ಜ..16. ಅಡಿಕೆ ಕೀಳುತ್ತಿದ್ದ ವ್ಯಕ್ತಿಯೊಬ್ಬರು ಮರ ಮುರಿದು ನೆಲಕ್ಕೆ ಬಿದ್ದು ಮೃತಪಟ್ಟ ಘಟನೆ ಉಡುಪಿಯಲ್ಲಿ ವರದಿಯಾಗಿದೆ. ನಗರದ ಬಸ್ ನಿಲ್ದಾಣದ ಸಮೀಪದ ಮತ್ತದಬೆಟ್ಟು ನಿವಾಸಿ ಶ್ಯಾಮ್ ಅಂಚನ್ (59) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಶ್ಯಾಮ್ ಅವರು ಮರದಿಂದ ಅಡಿಕೆ ಕೀಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಬಳಿಕ ಮೃತಪಟ್ಟರು. ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಇವರು ಪರ್ಕಳದಲ್ಲಿ ಪಾಲುದಾರಿಕೆಯಲ್ಲಿ ಬೇಕರಿ ನಡೆಸುತ್ತಿದ್ದರು

ಉಡುಪಿ: ಅಡಿಕೆ ಕೀಳುವ ಸಮಯದಲ್ಲಿ ಮುರಿದು ಬಿದ್ದ ಮರ…!! ➤ ವ್ಯಕ್ತಿಯೋರ್ವ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಕಾರು ಮತ್ತು ಬೈಕ್ ನಡುವೆ ರಸ್ತೆ ಅಪಘಾತ…!! ➤ ಗಾಯಾಳುವಿಗೆ ನೆರವಾಗಿ ಮಾನವೀಯತೆ ಮೆರೆದ ಶಾಸಕ ಖಾದರ್

(ನ್ಯೂಸ್ ಕಡಬ)newskadaba.com ಮಂಗಳೂರು, ಜ.16. ಕಾರು-ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಗಾಯಗೊಂಡಿದ್ದು, ಗಾಯಗೊಂಡ ಬೈಕ್ ಸವಾರನನ್ನು ಆಸ್ಪತ್ರೆಗೆ ರವಾನಿಸುವ ಮೂಲಕ ಶಾಸಕ ಖಾದರ್ ಮಾನವೀಯತೆ ಮೆರೆದಿದ್ದಾರೆ. ಸಂಜೆ ವೇಳೆ ಅಪಘಾತ ಸಂಭವಿಸಿದ್ದು, ಈ ಸಂದರ್ಭದಲ್ಲಿ ವಿಧಾನಸಭೆ ವಿಪಕ್ಷ ಉಪನಾಯಕ ಹಾಗೂ ಶಾಸಕ ಯು.ಟಿ. ಖಾದರ್ ಅದೇ ರಸ್ತೆ ಮೂಲಕ ಸಂಚರಿಸುತ್ತಿದ್ದರು. ತಕ್ಷಣ ಗಾಯಾಳುವನ್ನು ತನ್ನ ಕಾರಿನಲ್ಲೇ ಆಸ್ಪತ್ರೆಗೆ ರವಾನಿಸುವ ಮೂಲಕ ಖಾದರ್ ಮಾನವೀಯತೆ ಮೆರೆಯುವ ಜೊತೆಗೆ ತಮ್ಮ

ಮಂಗಳೂರು: ಕಾರು ಮತ್ತು ಬೈಕ್ ನಡುವೆ ರಸ್ತೆ ಅಪಘಾತ…!! ➤ ಗಾಯಾಳುವಿಗೆ ನೆರವಾಗಿ ಮಾನವೀಯತೆ ಮೆರೆದ ಶಾಸಕ ಖಾದರ್ Read More »

ಕರಾವಳಿ, ಕರ್ನಾಟಕ
crime, arrest, suspected

ಕುಂದಾಪುರ:  ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ…!! ➤  ಓರ್ವ ಆರೋಪಿಯ ಬಂಧನ

(ನ್ಯೂಸ್ ಕಡಬ)newskadaba.com ಕುಂದಾಪುರ, ಜ.16. ಅಕ್ರಮ ಗೋವಧೆ ಸ್ಥಳಕ್ಕೆ ದಾಳಿ ನಡೆಸಿದ ಗ್ರಾಮಾಂತರ ಠಾಣೆ ಎಸ್‌ಐ ಪವನ್‌ ನಾಯಕ್‌ ಹಾಗೂ ಸಿಬ್ಬಂದಿಗಳು ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಗುಲ್ವಾಡಿ ಗ್ರಾಮದ ಕುದ್ರು ಎಂಬಲ್ಲಿ ಅಬ್ದುಲ್‌ ಸಮದ್‌ ಮನೆಯ ಪಕ್ಕದಲ್ಲಿ ಅಕ್ರಮ ಕಸಾಯಿಖಾನೆ ಕಾರ್ಯಾಚರಿಸುತ್ತಿದೆ ಎಂದು ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಲಾಗಿದೆ ಎಂದು ವರದಿಯಾಗಿದೆ. ಗೋವುಗಳನ್ನು ಅಕ್ರಮವಾಗಿ ವಧೆ ಮಾಡಿ ಮಾಂಸ ತಯಾರಿಸುತ್ತಿರುವ ಮಾಹಿತಿಯಂತೆ ದಾಳಿ ಮಾಡಿದಾಗ 3 ಜನರು ಓಡಿ ಹೋಗಿದ್ದು, ಆರೋಪಿ ಮೊಹಮ್ಮದ್‌ ಯೂಸುಬ್‌ನನ್ನು ಸೆರೆಹಿಡಿಯಲಾಗಿದೆ.

ಕುಂದಾಪುರ:  ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ…!! ➤  ಓರ್ವ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕುಂದಾಪುರ:  ಬೈಕ್ ಢಿಕ್ಕಿ…!! ➤  ಓರ್ವ ಪಾದಚಾರಿ ಮೃತ್ಯು

(ನ್ಯೂಸ್ ಕಡಬ)newskadaba.com ಕುಂದಾಪುರ, ಜ.16. ಬೈಕ್ ಢಿಕ್ಕಿಯಾಗಿ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಕೋಣಿ ಗ್ರಾಮದ ಕಟ್ಕೇರಿಯಲ್ಲಿ ವರದಿಯಾಗಿದೆ. ಚಂದ್ರಕುಮಾರ್ (68) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಪ್ರದೀಪ್ ಎಂಬವರು ಕೋಟೇಶ್ವರ ಕಡೆಯಿಂದ ಹಾಲಾಡಿ ಕಡೆಗೆ ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಉಳ್ಳೂರಿನ ಕಾರೆಬೈಲು ನಿವಾಸಿ ಚಂದ್ರಕುಮಾರ್ ಅವರಿಗೆ ಢಿಕ್ಕಿಯಾಗಿದೆ. ಗಂಭೀರ ಗಾಯಗೊಂಡ ಚಂದ್ರಕುಮಾರ್ ಅವರನ್ನು ಕೂಡಲೇ ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆ ವೇಳೆ

ಕುಂದಾಪುರ:  ಬೈಕ್ ಢಿಕ್ಕಿ…!! ➤  ಓರ್ವ ಪಾದಚಾರಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಚಳಿಯ ವಾತಾವರಣ ಇನ್ನಷ್ಟು ಹೆಚ್ಚಳ ಸಾಧ್ಯತೆ.!! ➤  ಹವಾಮಾನ ಇಲಾಖೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.16. ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಚಳಿಯ ವಾತಾವರಣ ತೀವ್ರಗೊಂಡಿದೆ. ಭಾರೀ ಚಳಿ ಹಾಗೂ ಮಂಜುನಿಂದ ಕೂಡಿದ ವಾತಾವರಣವಿತ್ತು ಎಂದು ವರದಿಯಾಗಿದೆ. ಗ್ರಾಮಾಂತರ ಭಾಗಗಳಲ್ಲಿ ಚಳಿ ಹೆಚ್ಚಿದ್ದು, ಬಿಸಿಲು ಆವರಿಸುವವರೆಗೂ ಮೈ ಕೊರೆಯುವ ಚಳಿ ಇತ್ತೀಚೆಗೆ ಜಾಸ್ತಿ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಕಡಬ,  ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ಮುಂತಾದ ಕಡೆಗಳಲ್ಲಿ ಬೆಳಗ್ಗೆ ಬಿಸಿಲು ಆವರಿಸಿದರೂ ಚಳಿ ಕಡಿಮೆಯಾಗುತ್ತಿಲ್ಲ ಎಂದು ಸ್ಥಳೀಯರು ಹೇಳುತ್ತಾರೆ. ನಗರಗಳಲ್ಲಿಯೂ ಬೆಳಗ್ಗಿನ ಹೊತ್ತು ಭಾರೀ

ಮಂಗಳೂರು: ಚಳಿಯ ವಾತಾವರಣ ಇನ್ನಷ್ಟು ಹೆಚ್ಚಳ ಸಾಧ್ಯತೆ.!! ➤  ಹವಾಮಾನ ಇಲಾಖೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ವಿಮಾನ ಪ್ರಯಾಣಿಕರಿಗೆ ಶಾಕ್ ..!! ➤ ಎಪ್ರಿಲ್ ತಿಂಗಳಿನಿಂದ ಪಾವತಿಸಬೇಕು ಹೆಚ್ಚುವರಿ ಶುಲ್ಕ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.15. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಪ್ರಯಾಣಿಸುವವರು ಎಪ್ರಿಲ್‌ ತಿಂಗಳಿನಿಂದ ಹೆಚ್ಚಿನ ಬೆಲೆ ತೆರಬೇಕಾಗಿದೆ.  ಮಾರ್ಚ್‌ 2026ರ ತನಕ ಅದಾನಿ ಏರ್‌ಪೋರ್ಟ್ಸ್‌ ಒಡೆತನದ ಈ ವಿಮಾನ ನಿಲ್ದಾಣದಲ್ಲಿ ಯೂಸರ್‌ ಡೆವಲೆಪ್ಮೆಂಟ್‌ ಫೀ (ಯುಡಿಎಫ್)‌ ಅಥವಾ ಬಳಕೆದಾರರ ಶುಲ್ಕವನ್ನು ಏರಿಸಲು ನಿರ್ಣಯಿಸಲಾಗಿದೆ. ವಿಮಾನ ನಿಲ್ದಾಣಗಳ ಆರ್ಥಿಕ ನಿಯಂತ್ರಣ ಪ್ರಾಧಿಕಾರವು ಈ ನಿಟ್ಟಿನಲ್ಲಿ ಅನುಮತಿಯನ್ನು ನೀಡಿದೆ ಎಂದು ವರದಿ ಮಾಡಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಇದೀಗ ಇರುವ ನಿಯಮದ ಪ್ರಕಾರ ಯುಡಿಎಫ್‌ ಅನ್ನು ನಿರ್ಗಮನ

ಮಂಗಳೂರು: ವಿಮಾನ ಪ್ರಯಾಣಿಕರಿಗೆ ಶಾಕ್ ..!! ➤ ಎಪ್ರಿಲ್ ತಿಂಗಳಿನಿಂದ ಪಾವತಿಸಬೇಕು ಹೆಚ್ಚುವರಿ ಶುಲ್ಕ Read More »

ಕರಾವಳಿ, ಕರ್ನಾಟಕ

ಮಂಗಳೂರು: ಸಿವಿಲ್ ನ್ಯಾಯಾಧೀಶರ ಪರೀಕ್ಷೆ..! ➤  ಯುವ ನ್ಯಾಯವಾದಿ ರಾಹುಲ್ ಶೆಟ್ಟಿಗಾರ್ ರಾಜ್ಯಕ್ಕೆ ಫಸ್ಟ್

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.15. ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಮಂಗಳೂರಿನ ಯುವ ನ್ಯಾಯವಾದಿ ರಾಹುಲ್ ಶೆಟ್ಟಿಗಾರ್ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಮೊದಲ ಪ್ರಯತ್ನದಲ್ಲೇ ತೇರ್ಗಡೆ ಹೊಂದಿರುವ ಅವರು, ರಾಜ್ಯದಲ್ಲೇ ಪ್ರಥಮ ಸ್ಥಾನಿಯಾಗಿ ಹೊರ ಹೊಮ್ಮಿದ್ದಾರೆ. ಮೂಲತಃ ಉಡುಪಿ ಪರ್ಕಳದವರಾದ ರಾಹುಲ್, ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ಸರ್ವೋದಯ ಶೆಟ್ಟಿಗಾರ್ ಮತ್ತು ರೈಲ್ವೇ ಇಲಾಖೆಯ ನಿವೃತ್ತ ಉದ್ಯೋಗಿ ಲೀಲಾವತಿಯವರ ಪುತ್ರ. ಮಂಗಳೂರಿನ ಖ್ಯಾತ ನ್ಯಾಯವಾದಿ ಪಿ.ಪಿ. ಹೆಗ್ಡೆಅವರ ಬಳಿ ಕಿರಿಯ ವಕೀಲರಾಗಿ ಸೇವೆ ಸಲ್ಲಿಸಿದ್ದಾರೆ. ಪಿ.ಪಿ. ಹೆಗ್ಡೆ ಅವರ ಅಡಿಯಲ್ಲಿ

ಮಂಗಳೂರು: ಸಿವಿಲ್ ನ್ಯಾಯಾಧೀಶರ ಪರೀಕ್ಷೆ..! ➤  ಯುವ ನ್ಯಾಯವಾದಿ ರಾಹುಲ್ ಶೆಟ್ಟಿಗಾರ್ ರಾಜ್ಯಕ್ಕೆ ಫಸ್ಟ್ Read More »

ಕರಾವಳಿ, ಕರ್ನಾಟಕ

ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ..! ➤  ರಿಕ್ಷಾ ಚಾಲಕ ಆಸ್ಪತ್ರೆಯಿಂದ ಬಿಡುಗಡೆ

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.15. ನಗರವನ್ನೇ ಬೆಚ್ಚಿ ಬೀಳಿಸಿದ್ದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಿಕ್ಷಾ ಚಾಲಕ ಪುರುಷೋತ್ತಮ ಇದೀಗ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.  ಘಟನೆಯಲ್ಲಿ ರಿಕ್ಷಾ ಚಾಲಕ ಗಂಭೀರ ಗಾಯಗೊಂಡಿದ್ದರು. ಇದೀಗ ನಿರಂತರ ಸರಿ ಸುಮಾರು ಎರಡು ತಿಂಗಳ ಚಿಕಿತ್ಸೆಯ ಬಳಿಕ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ತಿಳಿದುಬಂದಿದೆ. ನಗರದ ನಾಗುರಿ ಎಂಬಲ್ಲಿ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ಕುಕ್ಕರ್ ಸ್ಪೋಟಗೊಂಡಿತ್ತು. ಇದರಲ್ಲಿ ಆರೋಪಿ ಮುಹಮ್ಮದ್ ಶಾರೀಕ್ ಮತ್ತು ರಿಕ್ಷಾ ಚಾಲಕ

ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ..! ➤  ರಿಕ್ಷಾ ಚಾಲಕ ಆಸ್ಪತ್ರೆಯಿಂದ ಬಿಡುಗಡೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಉಡುಪಿ: ಮಾದಕ ವಸ್ತು ಗಾಂಜಾದೊಂದಿಗೆ ದರೋಡೆಗೆ ಸಂಚು..! ➤ ನಾಲ್ವರ ಬಂಧನ……

(ನ್ಯೂಸ್ ಕಡಬ)newskadaba.com ಉಡುಪಿ, ಜ.15. ಮಾದಕ ವಸ್ತು ಗಾಂಜಾದೊಂದಿಗೆ ದರೋಡೆಗೆ ಸಂಚು ರೂಪಿಸುತ್ತಿದ್ದ ನಾಲ್ವರನ್ನು ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ವಿ.ಪಿ ನಗರದ 3ನೇ ಮುಖ್ಯ ರಸ್ತೆಯ ಬಳಿಯಿಂದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮುಝಾಮಿಲ್ (27), ಮೊಹಮ್ಮದ್ ಅನಾಜ್ ಸಾಹೇಬ್ (25), ಮೊಹಮ್ಮದ್ ರಪೀಕ್ (26), ನಿಯಾಲ್ (19) ಪೊಲೀಸರು ವಶಕ್ಕೆ ಪಡೆದ ಆರೋಪಿಗಳು. ಪೊಲೀಸರ ದಾಳಿ ವೇಳೆ ರಾಕೀಬ್ ಎಂಬಾತ ಪರಾರಿಯಾಗಿದ್ದಾನೆ ಎಂದು ವರದಿ ತಿಳಿಸಿದೆ. ಖಚಿತ ಮಾಹಿತಿ ಪಡೆದ ಮಣಿಪಾಲ ಠಾಣೆ ಪೊಲೀಸರು, ವಾಸ್ತವ್ಯ

ಉಡುಪಿ: ಮಾದಕ ವಸ್ತು ಗಾಂಜಾದೊಂದಿಗೆ ದರೋಡೆಗೆ ಸಂಚು..! ➤ ನಾಲ್ವರ ಬಂಧನ…… Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top