ಕರಾವಳಿ

ಮಂಗಳೂರು: ಯಶಸ್ವಿಯಾಗಿ ನಡೆದ ಬ್ರಿಕ್ ಬಿಡಿಎಮ್ ಆಸರೆ ಕಾರ್ಯಕ್ರಮ ➤ ಸಮಾಜದ ಅಭಿವೃದ್ಧಿಯು ಸಾಮಾಜಿಕ ಕಳಕಳಿಯ ಚಿಂತನೆಗಳಿಂದ ಸಾಧ್ಯ- ಯು.ಟಿ ಖಾದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 02. ಬ್ರಿಕ್ ಸ್ಟೋನ್ ಕಂಪೆನಿ ಸೌದಿ ಅರೇಬಿಯಾ ಪ್ರಾಯೋಜಕತ್ವದಲ್ಲಿ, ಬ್ಲಡ್ ಡೋನರ್ಸ್ ಮಂಗಳೂರು (ರಿ) ಸಹಕಾರದೊಂದಿಗೆ ಬ್ರಿಕ್-ಬಿಡಿಎಮ್ ಆಸರೆ ಎಂಬ ಕಾರ್ಯಕ್ರಮವು ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಬೃಹತ್ ರಕ್ತದಾನ‌ ಶಿಬಿರ, ಸಾಧಕರಿಗೆ ಸನ್ಮಾನ, ದಿವ್ಯಾಂಗರಿಗೆ ಸವಲತ್ತು ವಿತರಣೆ, ಮಹಿಳೆಯರಿಗೆ ಹೊಲಿಗೆಯಂತ್ರ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ, ಯುವಜನತೆ ಸಾಮಾಜಿಕ ಕಳಕಳಿಯೊಂದಿಗೆ ಕಾರ್ಯಕ್ರಮ ಹಮ್ಮಿಕೊಳ್ಳುವುದರಿಂದ ಸಮಾಜದ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಾಣವಾಗುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳಿಗೆ ಪ್ರೋತ್ಸಾಹ […]

ಮಂಗಳೂರು: ಯಶಸ್ವಿಯಾಗಿ ನಡೆದ ಬ್ರಿಕ್ ಬಿಡಿಎಮ್ ಆಸರೆ ಕಾರ್ಯಕ್ರಮ ➤ ಸಮಾಜದ ಅಭಿವೃದ್ಧಿಯು ಸಾಮಾಜಿಕ ಕಳಕಳಿಯ ಚಿಂತನೆಗಳಿಂದ ಸಾಧ್ಯ- ಯು.ಟಿ ಖಾದರ್ Read More »

ಕರಾವಳಿ
dc ravikumar

ಮಂಗಳೂರು: ಆಹಾರ ಮಳಿಗೆಗೆ ದ.ಕ. ಜಿಲ್ಲಾಧಿಕಾರಿ ದಿಢೀರ್ ದಾಳಿ ➤ ಶುಚಿತ್ವ ಕೊರತೆಯ ಬಗ್ಗೆ ತೀವ್ರ ಆಕ್ರೋಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜ 02. ಪಣಂಬೂರು ಬೀಚ್‌ ನಲ್ಲಿರುವ ಆಹಾರ ಮಳಿಗೆಗಳ ಮೇಲೆ ಜಿಲ್ಲಾಧಿಕಾರಿ ರವಿಕುಮಾರ್ ದಿಢೀರ್ ದಾಳಿ ನಡೆಸಿ ಹತ್ತಕ್ಕೂ ಅಧಿಕ ಅಂಗಡಿಗಳಲ್ಲಿ ಸ್ವಚ್ಛತೆಯ ಕೊರತೆ ಕಂಡು ಬಂದ ಹಿನ್ನೆಲೆ ತಕ್ಷಣ ಮುಚ್ಚುವಂತೆ ಆದೇಶ ಹೊರಡಿಸಿದ್ದಾರೆ. ಪತ್ರಕರ್ತರ ಸಂಘ ಹಾಗೂ ದ.ಕ. ಜಿಲ್ಲಾಡಳಿತವು ಬ್ರಾಂಡ್ ಮಂಗಳೂರಿನ ಸಮುದ್ರ ಕಿನಾರೆಯ ಸ್ವಚ್ಛತೆಗೆ ಯೋಜನೆಯನ್ನು ಹಮ್ಮಿಕೊಂಡಿದ್ದು, ಅದರಂತೆ ಜಿಲ್ಲಾಧಿಕಾರಿ ಉದ್ಘಾಟನೆಗೆ ಆಗಮಿಸಿದ್ದರು. ಬಳಿಕ ಆಹಾರ ಸ್ಟಾಲ್‌ ಗಳು ಹಾಗೂ ಅಂಗಡಿಗಳಿಗೆ ಭೇಟಿ ನೀಡಿ ಪರಿಸರ ಸ್ವಚ್ಛತೆಯ

ಮಂಗಳೂರು: ಆಹಾರ ಮಳಿಗೆಗೆ ದ.ಕ. ಜಿಲ್ಲಾಧಿಕಾರಿ ದಿಢೀರ್ ದಾಳಿ ➤ ಶುಚಿತ್ವ ಕೊರತೆಯ ಬಗ್ಗೆ ತೀವ್ರ ಆಕ್ರೋಶ Read More »

ಕರಾವಳಿ, ಕರ್ನಾಟಕ

ಶಿರಾಡಿ: ಆನೆ ದಾಳಿಗೆ ಮೃತಪಟ್ಟ ವ್ಯಕ್ತಿ ಮನೆಗೆ ಸಚಿವ ಅಂಗಾರ ಭೇಟಿ ➤ ಗಾಯಾಳುವಿನ ಚಿಕಿತ್ಸೆ ವೆಚ್ಚ ಭರಿಸುವಂತೆ ಸೂಚನೆ

(ನ್ಯೂಸ್ ಕಡಬ) newskadaba.com ಗುಂಡ್ಯ, ಜ. 02. ಶಿರಾಡಿಯಲ್ಲಿ ಆನೆ ದಾಳಿಗೆ ಒಳಗಾದ ವ್ಯಕ್ತಿಗಳ ಮನೆಗೆ ಸಚಿವ ಎಸ್. ಅಂಗಾರ ಅವರು ಭೇಟಿ ನೀಡಿ ಸಾಂತ್ವನ ಹೇಳಿದರು. ಘಟನೆ ಕುರಿತು ಅರಣ್ಯ ಇಲಾಖೆಯ ಡಿಸಿಎಫ್ ಅವರನ್ನು ಸಂಪರ್ಕಿಸಿ ಇಲಾಖಾ ವತಿಯಿಂದ ಗಾಯಾಳುಗಳಿಗೆ ಚಿಕಿತ್ಸೆ ನೀಡುವಂತೆ ಸೂಚಿಸಿದರು. ರಸ್ತೆಯಲ್ಲಿ ಹೋಗುತ್ತಿದ್ದ ತಂದೆ ಮಗನ ಮೇಲೆ ಒಂಟಿ ಸಲಗ  ಡಿ. 31 ರಂದು  ದಾಳಿ ಮಾಡಿತ್ತು. ಈ ಘಟನೆಯಲ್ಲಿ ಶಿರಾಡಿ ಗ್ರಾಮದ ಜನತಾ ಕಾಲನಿ ನಿವಾಸಿಗಳಾದ ತಿಮ್ಮಪ್ಪ ಮತ್ತು ಅವರ

ಶಿರಾಡಿ: ಆನೆ ದಾಳಿಗೆ ಮೃತಪಟ್ಟ ವ್ಯಕ್ತಿ ಮನೆಗೆ ಸಚಿವ ಅಂಗಾರ ಭೇಟಿ ➤ ಗಾಯಾಳುವಿನ ಚಿಕಿತ್ಸೆ ವೆಚ್ಚ ಭರಿಸುವಂತೆ ಸೂಚನೆ Read More »

ಕರಾವಳಿ

ಸಮುದ್ರದ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ…!                     

(ನ್ಯೂಸ್ ಕಡಬ) newskadaba.com ಸುರತ್ಕಲ್, ಜ. 02. ಸುರತ್ಕಲ್ ಬಳಿಯ ಲೈಟ್ ಹೌಸ್ ಬೀಚ್ ನಲ್ಲಿ ಸಮುದ್ರದ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ. ಮೃತ ಯುವಕನನ್ನು ಕಾನ ನಿವಾಸಿ ಸುರೇಶ್ ಪ್ರಸಾದ್ ಯಾದವ್ ಎಂಬವರ ಪುತ್ರ ಸತ್ಯಂ (18) ಎಂದು ಗುರುತಿಸಲಾಗಿದೆ. ಲೈಟ್ ಹೌಸ್ ಬೀಚ್ ನಿಂದ 1.5 ಕಿ.ಮೀ ದೂರದಲ್ಲಿರುವ ರೇಡ್ ರಾಕ್ ಬೀಚ್ ನಲ್ಲಿ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ. ಸತ್ಯಂ ಮತ್ತು ಆತನ ಸ್ನೇಹಿತ ಸಮುದ್ರದಲ್ಲಿ ಈಜಲು

ಸಮುದ್ರದ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ…!                      Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಖಾಸಗಿ ಬಸ್ ಡಿಕ್ಕಿಯಾಗಿ ಬಾಲಕ ಮೃತ್ಯು..!           

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 02. ನಡೆದುಕೊಂಡು ಹೋಗುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿಯಾದ ಪರಿಣಾಮ ಬಾಲಕ ಮೃತಪಟ್ಟ ಘಟನೆ ಕಾಸರಗೋಡಿನ ಚೆರ್ಕಳದಲ್ಲಿ ನಡೆದಿದೆ. ಮೃತ ಬಾಲಕನನ್ನು ಆಶಿಕ್ ಮತ್ತು ಝುಬೈದಾ ದಂಪತಿ ಪುತ್ರ ಅಬ್ದುಲ್ ವಾಹಿದ್ (3) ಎಂದು ಗುರುತಿಸಲಾಗಿದೆ. ಚೆರ್ಕಳ ಬಸ್ ನಿಲ್ದಾಣದಲ್ಲಿ ಬಸ್ ಹಿಂದಕ್ಕೆ ಚಲಿಸುವಾಗ ಈ ಘಟನೆ ಸಂಭವಿಸಿದೆನ್ನಲಾಗಿದೆ. ಬಸ್ ಡಿಕ್ಕಿಯಾದ ವೇಳೆ ಮಗುವಿನ ಜೊತೆಗಿದ್ದ ತಾಯಿಯು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.  

ಖಾಸಗಿ ಬಸ್ ಡಿಕ್ಕಿಯಾಗಿ ಬಾಲಕ ಮೃತ್ಯು..!            Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಬಂಟ್ವಾಳ: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 01. ತೆಂಗಿನಕಾಯಿ ಕೀಳುವ ವೇಳೆ ವ್ಯಕ್ತಿಯೋರ್ವ ಆಯತಪ್ಪಿ ಮರದಿಂದ ಬಿದ್ದು ಮೃತಪಟ್ಟ ಘಟನೆ ನಾವೂರ ಎಂಬಲ್ಲಿ ನಡೆದಿದೆ. ನಾವೂರ ಸೂರ ನಿವಾಸಿ ಸುರೇಶ್ (40) ಎಂದು ಗುರುತಿಸಲಾಗಿದೆ. ಇವರು, ಕಳೆದ ಹಲವಾರು ವರ್ಷಗಳಿಂದ ತೆಂಗಿನಕಾಯಿ ಹಾಗೂ ಅಡಿಕೆ ಕೀಳುವ ಕಾಯಕ ಮಾಡುತ್ತಿದ್ದು, ಎಂದಿನಂತೆ ತೆಂಗಿನಕಾಯಿ ಕೀಳುವ ಕೆಲಸಕ್ಕೆಂದು ಹೋಗಿದ್ದರು. ಈ ಸಂದರ್ಭ ಆಕಸ್ಮಿಕವಾಗಿ ಮರದಿಂದ ಕೆಳಗೆ ಬಿದ್ದಿದ್ದು, ಗಂಭೀರ ಗಾಯಗೊಂಡ ಅವರನ್ನು ಕೂಡಲೇ ಬಂಟ್ವಾಳ ಆಸ್ಪತ್ರೆಗೆ ಕರೆದುಕೊಂಡು ಹೋಗಿ, ಅಲ್ಲಿಂದ

ಬಂಟ್ವಾಳ: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಹೃದಯಾಘಾತ- ಯೋಧ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 01. ರಜೆಯಲ್ಲಿ ಊರಿಗೆ ಬಂದಿದ್ದ ಬಿಎಸ್‌ಎಫ್ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತರನ್ನು ಕುಲಶೇಖರ ಉಮಿಕಾನ ನಿವಾಸಿ, ಬಿಎಸ್‌ಎಫ್ ಯೋಧ ಹರೀಶ್ ಕುಮಾರ್ (43) ಎಂದು ಗುರುತಿಸಲಾಗಿದೆ. ಕಳೆದ 21 ವರ್ಷಗಳಿಂದ ಗಡಿ ಭದ್ರತಾ ಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಇವರು, ರಜೆಯ ಮೇಲೆ ಊರಿಗೆ ಬಂದಿದ್ದರು. ಶನಿವಾರದಂದು ಇವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ಜ.1ರಂದು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

ಮಂಗಳೂರು: ಹೃದಯಾಘಾತ- ಯೋಧ ನಿಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಉಪ್ಪಿನಂಗಡಿ: ಶಾಲಾ ವಾರ್ಷಿಕೋತ್ಸವಕ್ಕೆ ತೆರಳಿದ್ದ ಬಾಲಕಿಯ ಅತ್ಯಾಚಾರ ➤ ಪೋಕ್ಸೋ ಕಾಯ್ದೆಯಡಿ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ.01. ಶಾಲಾ ವಾರ್ಷಿಕೋತ್ಸವಕ್ಕೆಂದು ತೆರಳಿದ್ದ ಬಾಲಕಿಯನ್ನು ಮನೆಗೆ ಕರೆದೊಯ್ಯುವ ನೆಪದಲ್ಲಿ ಪುಸಲಾಯಿಸಿ ಅತ್ಯಾಚಾರಗೈದ ಘಟನೆ ಉಪ್ಪಿನಂಗಡಿಯಿಂದ ವರದಿಯಾಗಿದೆ. ಶಾಲಾ ವಾರ್ಷಿಕೋತ್ಸವ ವೀಕ್ಷಿಸಿ ಬಾಲಕಿಯನ್ನು ತನ್ನ ಬೈಕಿನಲ್ಲಿ ಮನೆಗೆ ಕರೆದೊಯ್ಯುತ್ತಿದ್ದ ವೇಳೆ ನೆಲ್ಯಾಡಿ ಗ್ರಾಮದ ಪುಚ್ಚೇರಿ ಎಂಬಲ್ಲಿ ಆರೋಪಿ ನವೀನ್ ಎಂಬಾತ ಅತ್ಯಾಚಾರಗೈದಿರುವುದಾಗಿ ಆರೋಪಿಸಲಾಗಿದ್ದು, ಆರೋಪಿಯನ್ನು ಬಂಧಿಸಿರುವ ಉಪ್ಪಿನಂಗಡಿ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.  

ಉಪ್ಪಿನಂಗಡಿ: ಶಾಲಾ ವಾರ್ಷಿಕೋತ್ಸವಕ್ಕೆ ತೆರಳಿದ್ದ ಬಾಲಕಿಯ ಅತ್ಯಾಚಾರ ➤ ಪೋಕ್ಸೋ ಕಾಯ್ದೆಯಡಿ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಹೊಸ ವರ್ಷದ ಮೊದಲ ದಿನವೇ ಭೀಕರ ಅಪಘಾತ ➤ ಬಸ್ – ಇನ್ನೋವಾ ಢಿಕ್ಕಿ: ಕರಾವಳಿಯ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ.01. ಹೊಸ ವರ್ಷದ ಮೊದಲ ದಿನವೇ ದಕ್ಷಿಣ ಕನ್ನಡದಲ್ಲಿ ನಡೆದ ಭೀಕರ ಅಪಘಾತಕ್ಕೆ ಇಬ್ಬರು ಬಲಿಯಾಗಿದ್ದಾರೆ. ಮೂಡುಬಿದಿರೆಯಿಂದ ಬೆಳ್ತಂಗಡಿ ಮಾರ್ಗವಾಗಿ ಉಪ್ಪಿನಂಗಡಿಗೆ ತೆರಳುತ್ತಿದ್ದ ಖಾಸಗಿಬಸ್ ಹಾಗೂ ಇನ್ನೋವಾ ಕಾರಿನ ನಡುವೆ ವೇಣೂರು ಸಮೀಪದ ಗೋಳಿಯಂಗಡಿ ಎಂಬಲ್ಲಿ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಕಾರು ಚಾಲಕ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ದ.ಕ. ಜಿಲ್ಲಾ ಮದ್ರಸ ಮ್ಯಾನೇಜ್‌ಮೆಂಟ್ ನ ಅಧ್ಯಕ್ಷರಾದ ನೌಶಾದ್ ಸೂರಲ್ಪಾಡಿ ಹಾಗೂ ಕಾರು ಚಾಲಕ ಮುಷರ್ರಫ್ ಎಂದು ಗುರುತಿಸಲಾಗಿದೆ. ಹೆಚ್ಚಿನ

ಬೆಳ್ತಂಗಡಿ: ಹೊಸ ವರ್ಷದ ಮೊದಲ ದಿನವೇ ಭೀಕರ ಅಪಘಾತ ➤ ಬಸ್ – ಇನ್ನೋವಾ ಢಿಕ್ಕಿ: ಕರಾವಳಿಯ ಇಬ್ಬರು ಮೃತ್ಯು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಶಿರಾಡಿ: ಒಂಟಿಸಲಗ ದಾಳಿ ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ

(ನ್ಯೂಸ್ ಕಡಬ) newskadaba.com ಗುಂಡ್ಯ, ಡಿ. 31. ಗುಂಡ್ಯ ಹೊಳೆ ಬದಿಗೆ ತೆರಳಿದವರ ಮೇಲೆ ಒಂಟಿ ಸಲಗವೊಂದು ದಾಳಿ ನಡೆಸಿದ ಪರಿಣಾಮ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಶನಿವಾರದಂದು ಶಿರಾಡಿ ಎಂಬಲ್ಲಿ ಸಂಭವಿಸಿದೆ. ಶಿರಾಡಿ ಗ್ರಾಮದ ಜನತಾ ಕಾಲನಿ ನಿವಾಸಿಗಳಾದ ತಿಮ್ಮಪ್ಪ ( 45) ಮತ್ತು ಅವರ ಪುತ್ರ ಶರಣ್ (18) ಶನಿವಾರದಂದು ಗುಂಡ್ಯ ಹೊಳೆ ಬದಿಗೆ ತೆರಳಿದ್ದರು. ಈ ವೇಳೆ ಕಾಡಿನಿಂದ ಹೊಳೆಯತ್ತ ಆಗಮಿಸಿದ್ದ ಒಂಟಿ ಸಲಗವೊಂದು ಶರಣ್ ಮೇಲೆ ದಾಳಿ ಮಾಡಿದ್ದು,

ಶಿರಾಡಿ: ಒಂಟಿಸಲಗ ದಾಳಿ ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top