ಕರಾವಳಿ

ಕೋವಿಡ್ ಹೆಚ್ಚಳ ➤ ಮಹಾರಾಷ್ಟ್ರದಲ್ಲಿ ಓರ್ವ ಮೃತ್ಯು             

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 31. ಭಾರತದಲ್ಲಿ 243 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳು 3,609ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಕೋವಿಡ್ ಪ್ರಕರಣಗಳ ಸಂಖ್ಯೆ 4.46 ಕೋಟಿ (4,46,78,158) ದಾಖಲಾಗಿದೆ. ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದು, ಸಾವಿನ ಸಂಖ್ಯೆ 5,30,699 ಆಗಿದೆ. ಸಕ್ರಿಯ ಪ್ರಕರಣಗಳು ಒಟ್ಟು ಸೋಂಕುಗಳಲ್ಲಿ ಶೇಕಡಾ 0.01 ರಷ್ಟಿದ್ದರೆ, ರಾಷ್ಟ್ರೀಯ ಕೋವಿಡ್ -19 ಚೇತರಿಕೆಯ ಪ್ರಮಾಣವು ಶೇಕಡಾ 98.80 ಕ್ಕೆ ಏರಿದೆ ಎಂದು […]

ಕೋವಿಡ್ ಹೆಚ್ಚಳ ➤ ಮಹಾರಾಷ್ಟ್ರದಲ್ಲಿ ಓರ್ವ ಮೃತ್ಯು              Read More »

ಕರಾವಳಿ

ಜ. 05ರಂದು ಭಾಗೀದಾರರ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 31. ಆರ್.ಟಿ.ಇ-2009, ಪೋಕ್ಸೊ-2012 ಹಾಗೂ ಬಾಲನ್ಯಾಯ ಕಾಯ್ದೆ- 2015ರ ಅನುಷ್ಟಾನದ ಕುರಿತು ಭಾಗೀದಾರರಾದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಮಕ್ಕಳ ಪಾಲನಾ ಸಂಸ್ಥೆಗಳನ್ನು ನಡೆಸುತ್ತಿರುವ ಸ್ವಯಂ ಸೇವಾ ಸಂಸ್ಥೆಯ ಮುಖ್ಯಸ್ಥರುಗಳೊಂದಿಗೆ ಸಮಾಲೋಚನಾ ಸಭೆ, ಪ್ರಗತಿ ಪರಿಶೀಲನಾ ಸಭೆ 2023ರ ಜನವರಿ 5ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ. ನಾಗಣ್ಣ ಗೌಡ ಅವರು ಸಭೆಯ ಅಧ್ಯಕ್ಷತೆ ವಹಿಸುವರು

ಜ. 05ರಂದು ಭಾಗೀದಾರರ ಸಭೆ Read More »

ಕರಾವಳಿ, ಕರ್ನಾಟಕ

ಇಂದಿನಿಂದ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 31. ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ, ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದರ್ ಕುಮಾರ್ ಕಟಾರಿಯಾ ಅವರು ಇಂದಿನಿಂದ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಡಿ.31ರ ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಇಲಾಖೆಗಳ ಯೋಜನೆಯ ಪ್ರಗತಿ ಪರಿಶೀಲನೆ ಕುರಿತು ಕ್ಷೇತ್ರ ವೀಕ್ಷಣೆ ನಡೆಸುವರು. ನಂತರ ವಾಸ್ತವ್ಯ ಹೂಡಲಿದ್ದಾರೆ. 2023ರ ಜನವರಿ 1ರಂದು ಪ್ರಸಿದ್ಧ ಕ್ಷೇತ್ರಗಳಿಗೆ ಭೇಟಿ ನೀಡುವರು. ನಂತರ ಬೆಳಿಗ್ಗೆ 10.15ಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳಿಗೆ ಸಂಬಂಧಿಸಿದಂತೆ

ಇಂದಿನಿಂದ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳ ಜಿಲ್ಲಾ ಪ್ರವಾಸ Read More »

ಕರಾವಳಿ

ಮಲ್ಪೆ: ಸಮುದ್ರಕ್ಕೆ ಹಾರಿ ವ್ಯಕ್ತಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಮಲ್ಪೆ, ಡಿ. 31. ಸಮುದ್ರಕ್ಕೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಲ್ಪೆಯಲ್ಲಿ ವರದಿಯಾಗಿದೆ. ಆತ್ಮಹತ್ಯೆ  ಮಾಡಿಕೊಂಡವರನ್ನು ಮಲ್ಪೆಯ ಕೊಡವೂರು ಗ್ರಾಮದ ಅಚ್ಚ್ಯುತ್ ಕಿಣಿ (69) ಎಂದು ಗುರುತಿಸಲಾಗಿದೆ. ಚರ್ಮರೋಗದಿಂದ ಬಳಲುತ್ತಿದ್ದ ಇವರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲ್ಪೆ: ಸಮುದ್ರಕ್ಕೆ ಹಾರಿ ವ್ಯಕ್ತಿ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ವಿಟ್ಲ: ಆಡು ಕಳ್ಳತನ ಮಾಡುತ್ತಿದ್ದ ಯುವಕರು ಪೊಲೀಸ್ ವಶಕ್ಕೆ…!

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 31. ಆಡುಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಯುವಕರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ವಿಟ್ಲದಲ್ಲಿ ನಡೆದಿದೆ.   ಇಲ್ಲಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಮೂರು ನಾಲ್ಕು ತಿಂಗಳಿನಿಂದ ಗುಡ್ಡಕ್ಕೆ ಮೇಯಲು ಬಿಟ್ಟ ಆಡುಗಳು ನಾಪತ್ತೆಯಾಗುತ್ತಿತ್ತು. ಈ ಬಗ್ಗೆ ಎಚ್ಚೆತ್ತ ನಾಗರಿಕರು ಕಳ್ಳರನ್ನು ಪತ್ತೆಗಾಗಿ ಕಾದುಕುಳಿತಿದ್ದರು. ಡಿ‌. 30ರ ಶುಕ್ರವಾರದಂದು ಸಾಯಂಕಾಲ ವೇಳೆ ಮರಕ್ಕಿಣಿಯಿಂದ ಆಡು ಕಳ್ಳತನ ಮಾಡಿ ಬರುತ್ತಿದ್ದ ಯುವಕರಿಬ್ಬರನ್ನು ಕೇಪು ಕಲ್ಲಂಗಳ ದ್ವಾರ ಸಮೀಪ ಸಾರ್ವಜನಿಕರ ತಂಡ ಹಿಡಿದು

ವಿಟ್ಲ: ಆಡು ಕಳ್ಳತನ ಮಾಡುತ್ತಿದ್ದ ಯುವಕರು ಪೊಲೀಸ್ ವಶಕ್ಕೆ…! Read More »

ಕರಾವಳಿ, ಕ್ರೈಮ್ ನ್ಯೂಸ್

ಬಾಯಿಯೇ ಆರೋಗ್ಯದ ಹೆಬ್ಬಾಗಿಲು ➤ ಡಾ|| ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 31. ನಾವು ತಿನ್ನುವ ಎಲ್ಲಾ ಆಹಾರ ಬಾಯಿಯ ಮುಖಾಂತರವೇ ದೇಹದೊಳಗೆ ಸೇರುತ್ತದೆ. ನಮ್ಮ ಬಾಯಿಯ ಆರೋಗ್ಯ ಚೆನ್ನಾಗಿದ್ದು, ಆರೋಗ್ಯವಂತ ಹಲ್ಲುಗಳು ಇದ್ದಲ್ಲಿ, ನಾವು ತಿನ್ನುವ ಆಹಾರ ಚೆನ್ನಾಗಿ ಪಚನಗೊಂಡು ದೇಹಕ್ಕೆ ಬೇಗನೆ ಸೇರಿಕೊಂಡು ನಮ್ಮ ಆರೋಗ್ಯ ವೃದ್ಧಿಸುತ್ತದೆ. ಈ ನಿಟ್ಟಿನಲ್ಲಿ ಬಾಯಿಯ ಆರೋಗ್ಯ ಕಾಪಾಡಿಕೊಂಡಲ್ಲಿ ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯ ತನ್ನಿಂತಾನೇ ವೃದ್ಧಿಸುತ್ತದೆ. ಬಾಯಿಯೇ ನಮ್ಮ ಆರೋಗ್ಯದ ಹೆಬ್ಬಾಗಿಲ. ನಿರಂತರವಾಗಿ ಬಾಯಿಯ ಆರೋಗ್ಯದ ತಪಾಸಣೆ ಮಾಡಿಸಿ, ಆರೋಗ್ಯ ಪೂರ್ಣ

ಬಾಯಿಯೇ ಆರೋಗ್ಯದ ಹೆಬ್ಬಾಗಿಲು ➤ ಡಾ|| ಚೂಂತಾರು Read More »

ಕರಾವಳಿ, ಕರ್ನಾಟಕ

ಸುಳ್ಯ: ಪಾದಚಾರಿಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದು ಪರಾರಿ ➤ ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 31. ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಪರಾರಿಯಾದ ಘಟನೆ ಮಂಗಳೂರು- ಮೈಸೂರು ರಾ. ಹೆದ್ದಾರಿಯ ಪೆರಾಜೆ ಎಂಬಲ್ಲಿ ನಡೆದಿದೆ. ವ್ಯಕ್ತಿಯೋರ್ವರು ಅಡಿಕೆ ಕೊಯ್ಯುವ ಕೆಲಸ ಮುಗಿಸಿ, ವಾಪಾಸ್ ಮನೆಗೆ ಹಿಂತಿರುಗುತ್ತಿದ್ದ ವೇಳೆ ಅತಿವೇಗದಲ್ಲಿ ಬಂದ ಅಪರಿಚಿತ ವಾಹನ ಢಿಕ್ಕಿ ಹೊಡೆದಿದ್ದು, ಚಾಲಕ ವಾಹನವನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಗಂಭೀರ ಗಾಯಗೊಂಡ ವ್ಯಕ್ತಿಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೆ ಹದರಿದ ಗಾಯಾಳು ಊರಿನ ಹೆಸರು ಮಾತ್ರ ಹೇಳುತ್ತಿದ್ದು,

ಸುಳ್ಯ: ಪಾದಚಾರಿಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದು ಪರಾರಿ ➤ ವ್ಯಕ್ತಿ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ ➤ ಪಾದಚಾರಿ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಭಟ್ಕಳ, ಡಿ. 31. ಹೆದ್ದಾರಿ ದಾಟುತ್ತಿದ್ದ ಪಾದಚಾರಿಯೋರ್ವನಿಗೆ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾವಿನಕಟ್ಟ ಕೋಕ್ತಿ ಕ್ರಾಸ್ ಬಳಿ ವರದಿಯಾಗಿದೆ. ಮೃತ ಪಾದಚಾರಿಯನ್ನು ಹೊನ್ನಪ್ಪ ತಿಮ್ಮಯ್ಯ ನಾಯ್ಕ (66) ಎಂದು ಗುರುತಿಸಲಾಗಿದೆ. ಈತ ಕೋಕ್ತಿ ಕ್ರಾಸ್ ನಿಂದ ಮಾವಿನಕಟ್ಟೆಯ ಮೀನು ಮಾರುಕಟ್ಟೆ ಕಡೆ ಹೋಗಲು ರಸ್ತೆ ದಾಟುತ್ತಿದ್ದ ವೇಳೆ ಮುರುಡೇಶ್ವರ ಕಡೆಯಿಂದ ಅತಿ ವೇಗವಾಗಿ ಬಂದ ಬಸ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಢಿಕ್ಕಿ ಹೊಡೆದ ರಭಸಕ್ಕೆಪಾದಚಾರಿ

ರಸ್ತೆ ಅಪಘಾತ ➤ ಪಾದಚಾರಿ ಸ್ಥಳದಲ್ಲೇ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ಸೆಕ್ಯೂರಿಟಿ ಗಾರ್ಡ್ ಮೃತದೇಹ ಚರಂಡಿಯಲ್ಲಿ ಪತ್ತೆ 

(ನ್ಯೂಸ್ ಕಡಬ) newskadaba.com ಉಳ್ಳಾಲ, ಡಿ. 31. ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯ ಮೃತದೇಹ ಚರಂಡಿಯಲ್ಲಿ ಪತ್ತೆಯಾದ ಘಟನೆ ಉಳ್ಳಾಲದಲ್ಲಿ ವರದಿಯಾಗಿದೆ. ಮೃತರನ್ನು ಗಣೇಶ್ ಶೆಟ್ಟಿ (45) ಎಂದು ಗುರುತಿಸಲಾಗಿದೆ. ಏಜೆನ್ಸಿ ಮೂಲಕ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಡಿ.27 ರಿಂದ ಕರ್ತವ್ಯಕ್ಕೆ ಹಾಜರಾಗದೆ ಇದ್ದು, ನಸುಕಿನ ಜಾವ ಕುತ್ತಾರು ಜಂಕ್ಷನ್ ನಲ್ಲಿ ಹೆಣವಾಗಿ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ದೇರಳಕಟ್ಟೆಯ ಬೆಳ್ಮಭಾಗದಲ್ಲಿ ಬಾಡಿಗೆ ಮನೆಯಲ್ಲಿ

ಉಳ್ಳಾಲ: ಸೆಕ್ಯೂರಿಟಿ ಗಾರ್ಡ್ ಮೃತದೇಹ ಚರಂಡಿಯಲ್ಲಿ ಪತ್ತೆ  Read More »

ಕರಾವಳಿ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯದ ಅಜಿತೇಶ್ ಭೂಸೇನೆಯ ಲೆಫ್ಟಿನೆಂಟ್ ಆಗಿ ಆಯ್ಕೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ. 31. ಸುಬ್ರಹ್ಮಣ್ಯದ ಅಜಿತೇಶ್ ಪಿ.ಎಸ್. ಭೂಸೇನೆಯ ಲೆಫ್ಟಿನೆಂಟ್ ಹುದ್ದೆಗೆ ಆಯ್ಕೆಯಾಗಿದ್ದಾರೆ. ಅಜಿತೇಶ್ ಇವರು, ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣವನ್ನು ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದಲ್ಲಿ, ಪಿ.ಯು ಶಿಕ್ಷಣವನ್ನು ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ, ಮಡಿಕೇರಿಯ ಪೊನ್ನಂಪೇಟೆ ಕಾಲೇಜಿನಲ್ಲಿ ಫಾರೆಸ್ಟರಿಯಲ್ಲಿ ಬಿ.ಎಸ್ ಸಿ ಪದವಿಯನ್ನು ಪಡೆದಿದ್ದಾರೆ. ಯು.ಪಿ.ಎಸ್.ಸಿ. ನಡೆಸಿದ ಕಂಬೈನ್ ಡಿಫೆನ್ಸ್ ಸರ್ವಿಸ್ ಪರೀಕ್ಷೆ ಹಾಗೂ ಅಲಹಾಬಾದ್ ಸರ್ವಿಸ್ ಸೆಲೆಕ್ಷನ್ ಬೋರ್ಡ್ ನಡೆಸಿದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಈ ಹುದ್ದೆಗೆ ಆಯ್ಕೆಯಾದ ಇವರು, ಸುಬ್ರಹ್ಮಣ್ಯ ಕುಮಾರಸ್ವಾಮಿ

ಸುಬ್ರಹ್ಮಣ್ಯದ ಅಜಿತೇಶ್ ಭೂಸೇನೆಯ ಲೆಫ್ಟಿನೆಂಟ್ ಆಗಿ ಆಯ್ಕೆ Read More »

ಕರಾವಳಿ
Scroll to Top