ಕರಾವಳಿ

ಕಡಬ: ಸ್ಕಾರ್ಪಿಯೋ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಡಿ. 26. ಸ್ಕಾರ್ಪಿಯೋ ಮತ್ತು ಸ್ಕೂಟಿ ನಡುವೆ ಡಿಕ್ಕಿಯಾಗಿ ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬ ಸಮೀಪದ ಕಳಾರದಲ್ಲಿ ನಡೆದಿದೆ. ಮೃತಪಟ್ಟವರನ್ನು ಕಳಾರ ನಿವಾಸಿ ಉಮ್ಮರ್ ಎಂದು ಗುರುತಿಸಲಾಗಿದೆ. ಮೃತದೇಹವನ್ನು ಕಡಬ ಸರಕಾರಿ ಆಸ್ಪತ್ರೆಯಲ್ಲಿರಿಸಲಾಗಿದೆ.

ಕಡಬ: ಸ್ಕಾರ್ಪಿಯೋ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ➤ ಸವಾರ ಮೃತ್ಯು Read More »

ಕರಾವಳಿ

ಹೊಸ ವರ್ಷಾಚರಣೆಗೆ ಬಿತ್ತು ಟಫ್ ರೂಲ್ಸ್..!!! ➤ ರಾಜ್ಯ ಸರಕಾರದಿಂದ ಹೊಸ ಕೊರೋನಾ ಗೈಡ್ ಲೈನ್ಸ್ ರಿಲೀಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 26. ರಾಜ್ಯ ಸರಕಾರವು ಕೊರೊನಾ ನಿಯಂತ್ರಣಕ್ಕೆ ಹಲವು ಕ್ರಮಗಳನ್ನ ಕೈಗೊಂಡಿದ್ದು, ಎಲ್ಲಾ ಥಿಯೇಟರ್‌ ಗಳಲ್ಲಿ, ಶಾಲಾ- ಕಾಲೇಜುಗಳಲ್ಲಿ ಮಾಸ್ಕ್‌ ಕಡ್ಡಾಯಗೊಳಿಸಲಾಗಿದ್ದು, ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್‌ ನಿಯಮ ಪಾಲಿಸಬೇಕು. ಕೊರೊನಾ ನಿಯಂತ್ರಣಕ್ಕೆ ಬಿಗಿ ಕ್ರಮ ಕೈಗೊಳ್ಳಲಾಗಿದೆ ಎಂದು ಕೋವಿಡ್‌ ಸಭೆ ಬಳಿಕ ಸಚಿವ ಆರ್‌ ಅಶೋಕ್‌ ಹೇಳಿದ್ದಾರೆ. ಇದೇ ವೇಳೆ ಮಾತನಾಡಿದ ಸಚಿವ ಸುಧಾಕರ್‌, ಸ್ವಯಂ ಪ್ರೇರಿತವಾಗಿ ಮೂರನೇ ಡೋಸ್‌ ಲಸಿಕೆಯನ್ನು ತೆಗೆದುಕೊಳ್ಳುವಂತೆ ಮನವಿ ಮಾಡಿದರು.

ಹೊಸ ವರ್ಷಾಚರಣೆಗೆ ಬಿತ್ತು ಟಫ್ ರೂಲ್ಸ್..!!! ➤ ರಾಜ್ಯ ಸರಕಾರದಿಂದ ಹೊಸ ಕೊರೋನಾ ಗೈಡ್ ಲೈನ್ಸ್ ರಿಲೀಸ್ Read More »

ಕರಾವಳಿ
DC Ravikumar

ದ.ಕ: ಕೊರೋನಾ ಆತಂಕದ ಹಿನ್ನೆಲೆ ➤ ಮುನ್ನೆಚ್ಚರಿಕಾ ಕ್ರಮವಾಗಿ ಮಾರ್ಗಸೂಚಿ ಪ್ರಕಟ- ಡಿಸಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 26. ಕೆಲವು ದೇಶಗಳಲ್ಲಿ ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಹೊಸ ವರ್ಷಾಚರಣೆಯ ಸಂದರ್ಭ ಎಚ್ಚರ ವಹಿಸುವಂತೆ ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು‌ ಕೆಲವೊಂದು ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ಜಿಲ್ಲಾಧಿಕಾರಿ ಹೊರಡಿಸಿರುವ ಮಾರ್ಗಸೂಚಿಯಲ್ಲಿ ಶಾಪಿಂಗ್ ಮಾಲ್, ಕಚೇರಿಗಳು, ಸಿನೆಮಾ ಹಾಲ್, ಪಬ್, ಬಾರ್, ರೆಸ್ಟೋರೆಂಟ್ ಹಾಗೂ ಬಸ್, ರೈಲು, ಮಟ್ರೋ, ವಿಮಾನಯಾನದ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಅಗತ್ಯಗೊಳಿಸಲಾಗಿದೆ. ಆರೋಗ್ಯ ಸಮಸ್ಯೆ ಇರುವವರು, ವೃದ್ಧರು ಒಳಾಂಗಣದಲ್ಲಿದ್ದಾಗಲೂ ಮಾಸ್ಕ್ ಧರಿಸುವುದು ಉತ್ತಮ

ದ.ಕ: ಕೊರೋನಾ ಆತಂಕದ ಹಿನ್ನೆಲೆ ➤ ಮುನ್ನೆಚ್ಚರಿಕಾ ಕ್ರಮವಾಗಿ ಮಾರ್ಗಸೂಚಿ ಪ್ರಕಟ- ಡಿಸಿ Read More »

ಕರಾವಳಿ, ಕರ್ನಾಟಕ

ಪುತ್ತೂರು: ಕುಸಿದು ಬಿದ್ದು ವ್ಯಕ್ತಿ ಮೃತ್ಯು 

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 26. ಮನೆಯ ಟೆರೇಸಿಗೆ ಹತ್ತುವ ಮೆಟ್ಟಿಲಿನ ಸಮೀಪ ಕುಸಿದು ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸಾಲ್ಮರ ಮುದ್ದೋಡಿ ಎಂಬಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಸಾಲ್ಮರ ಮುದ್ದೋಡಿ ನಿವಾಸಿ ನಾರಾಯಣ ನಾಯ್ಕ (64) ಎಂದು ಗುರುತಿಸಲಾಗಿದೆ. ಅವರು ಮನೆಯ ಟೆರೇಸಿಗೆ ಹತ್ತುವ ಮೆಟ್ಟಿಲಿನ ಸಮೀಪ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಪುತ್ತೂರು ನಗರ ಪೊಲೀಸ್ ಠಾನೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.  

ಪುತ್ತೂರು: ಕುಸಿದು ಬಿದ್ದು ವ್ಯಕ್ತಿ ಮೃತ್ಯು  Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಜಲೀಲ್ ಕೊಲೆ ಪ್ರಕರಣ ➤ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 26. ಕಾಟಿಪಳ್ಳ ಜಲೀಲ್ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ. ಬಂಧಿತರನ್ನು ನೈತಂಗಡಿ ಕೃಷ್ಣಾಪುರ ನಿವಾಸಿ ಶೈಲೇಶ್ ಯಾನೇ ಶೈಲೇಶ್ ಪೂಜಾರಿ, ಉಡುಪಿ ಹೆಜಮಾಡಿ ನಿವಾಸಿ ಸವೀನ್ ಕಾಂಚನ್ ಯಾನೇ ಮುನ್ನ, ಕೃಷ್ಣಾಪುರ 3ನೇ ಬ್ಲಾಕ್ ನಿವಾಸಿ ಪವನ್ ಅಲಿಯಾಸ್ ಪಚ್ಚು ಎಂದು ಗುರುತಿಸಲಾಗಿದೆ. ಸದ್ಯ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತದೆ.

ಮಂಗಳೂರು: ಜಲೀಲ್ ಕೊಲೆ ಪ್ರಕರಣ ➤ ಮೂವರ ಬಂಧನ Read More »

ಕರಾವಳಿ, ಕರ್ನಾಟಕ

ಶಬರಿಮಲೆಗೆ ಕರೆದೊಯ್ಯಲು ಬರುವ ಕೇರಳದ ವಾಹನಗಳಿಗೆ ಗಡಿಯಲ್ಲಿ ಅವಕಾಶ ನೀಡಿ ➤ ಯು.ಟಿ ಖಾದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 26. ಉಳ್ಳಾಲ ಹಾಗೂ ಮಂಗಳೂರಿನಿಂದ ಶಬರಿಮಲೆಗೆ ಹೋಗುವಂತ ಅಯ್ಯಪ್ಪ ಮಾಲಾಧಾರಿಗಳನ್ನು ಕೊಂಡೊಯ್ಯಲು ಬರುವ ಕೇರಳದ ವಾಹನಗಳಿಗೆ ಗಡಿಯಲ್ಲಿ ಅವಕಾಶ ನೀಡಬೇಕು ಎಂದು ಶಾಸಕ ಯು.ಟಿ.ಖಾದರ್ ಹೇಳಿದ್ದಾರೆ. ಉಳ್ಳಾಲ ಹಾಗೂ ಮಂಗಳೂರಿನಿಂದ ಪವಿತ್ರ ಶಬರಿಮಲೆ ಯಾತ್ರೆಗೆ ತೆರಳುವ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ಕರ್ನಾಟಕ ಮತ್ತು ಕೇರಳದ ಎರಡೂ ರಾಜ್ಯಗಳ ತೆರಿಗೆ ಪಾವತಿಸಲು ಕಷ್ಟವಾದ ಕಾರಣ ಕೇರಳದಿಂದ ವಾಹನಗಳನ್ನು ವ್ಯವಸ್ಥೆಗೊಳಿಸಿ ತೆರಳುತ್ತಿದ್ದು ಅಂತ ವಾಹನಗಳಿಗೆ ತಲಪಾಡಿ ಗಡಿಯಲ್ಲಿ ಅಧಿಕಾರಿಗಳು ಮಂಗಳೂರು ತನಕ ಬಂದು

ಶಬರಿಮಲೆಗೆ ಕರೆದೊಯ್ಯಲು ಬರುವ ಕೇರಳದ ವಾಹನಗಳಿಗೆ ಗಡಿಯಲ್ಲಿ ಅವಕಾಶ ನೀಡಿ ➤ ಯು.ಟಿ ಖಾದರ್ Read More »

ಕರಾವಳಿ

ಉಪ್ಪಿನಂಗಡಿ: ನಾಯಿ ಅಡ್ಡ ಬಂದು ಸ್ಕೂಟರ್ ಪಲ್ಟಿ ➤ ಸಹಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 26. ನಾಯಿಯೊಂದು ರಸ್ತೆಗೆ ಅಡ್ಡ ಬಂದು ಆಕ್ಟಿವಾ ಹೋಂಡಾಗೆ ಢಿಕ್ಕಿಯಾದ ಪರಿಣಾಮ ಆಕ್ಟಿವಾ ಪಲ್ಟಿಯಾಗಿ ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಕಡವಿನಬಾಗಿಲು ತಿರುವಿನಲ್ಲಿ ನಡೆದಿದೆ. ಗಾಯಗೊಂಡವರನ್ನು ಇಳಂತಿಲ ಗ್ರಾಮದ ಕಡವಿನಬಾಗಿಲು ನಿವಾಸಿ ರಮ್ಲಾನ್ ಫಯಾಝ್ ಹಾಗೂ ಇಮ್ರಾನ್ ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ ಉಪ್ಪಿನಂಗಡಿಯಿಂದ ಕಡವಿನಬಾಗಿಲಿನ ತಮ್ಮ ಮನೆಗೆ ಹೋಗುವ ವೇಳೆ ಈ ಅವಘಡ ಸಂಭವಿಸಿದೆನ್ನಲಾಗಿದೆ‌. ಅಪಘಾತದಿಂದ ಫಯಾಝ್ ಎಂಬವರ ಕೈ ಹಾಗೂ ಕಾಲು ಮೂಳೆ ಮುರಿತಕ್ಕೊಳಗಾಗಿದ್ದು,

ಉಪ್ಪಿನಂಗಡಿ: ನಾಯಿ ಅಡ್ಡ ಬಂದು ಸ್ಕೂಟರ್ ಪಲ್ಟಿ ➤ ಸಹಸವಾರನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಚೀನಾದಿಂದ ಭಾರತಕ್ಕೆ ಆಗಮಿಸಿದ ವ್ಯಕ್ತಿಯಲ್ಲಿ ಕೊರೋನಾ ಸೋಂಕು ಪತ್ತೆ…!!!      ➤ ಹೆಚ್ಚಿದ ಆತಂಕ       

(ನ್ಯೂಸ್ ಕಡಬ) newskadaba.com.  ಚೀನಾದ ಕೋವಿಡ್ ರೂಪಾಂತರಿ ಭೀತಿ ಭಾರತದಲ್ಲಿ ಹೆಚ್ಚುತ್ತಿದ್ದು, ಕರ್ನಾಟಕದಲ್ಲಿ ಕೊರೋನಾ ಸೋಂಕು ಹರಡದಂತೆ ಅಗತ್ಯ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ.  ಈ ನಡುವೆ ಚೀನಾದಿಂದ ಬೆಂಗಳೂರಿಗೆ ಆಗಮಿಸಿದ ವ್ಯಕ್ತಿಯೊಬ್ಬರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು ಕೋವಿಡ್ ಭೀತಿ ಇನ್ನಷ್ಟು ಹೆಚ್ಚಿಸಿದೆ. ನಿನ್ನೆ ಚೀನಾದಿಂದ ಬಂದ 40 ವರ್ಷದ ವ್ಯಕ್ತಿಯನ್ನು ಕೋವಿಡ್ ತಪಾಸಣೆಗೆ ಒಳಪಡಿಸಲಾಗಿದೆ. ಅದರಂತೆ ಬಂದ ವರದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, ತಕ್ಷಣವೇ ಖಾಸಗಿ ಆಸ್ಪತ್ರೆಗೆ ರವಾನಿಸಿ ಐಸೋಲೇಷನ್ ಮಾಡಲಾಗಿದ್ದು, ಹೆಚ್ಚಿನ ತಪಾಸಣೆಗಾಗಿ ವ್ಯಕ್ತಿಯ ಮಾದರಿ ಸಂಗ್ರಹ

ಚೀನಾದಿಂದ ಭಾರತಕ್ಕೆ ಆಗಮಿಸಿದ ವ್ಯಕ್ತಿಯಲ್ಲಿ ಕೊರೋನಾ ಸೋಂಕು ಪತ್ತೆ…!!!      ➤ ಹೆಚ್ಚಿದ ಆತಂಕ        Read More »

ಕರಾವಳಿ

ಆತೂರು: ಜ. 01ರಿಂದ 05ರ ವರೆಗೆ “ದ್ಸಿಕ್ರ್ ಹಲ್ಕಾ” ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಆತೂರು, ಡಿ. 26. ಬದ್ರಿಯಾ ಜುಮಾ ಮಸೀದಿ ಆತೂರು, ಇಲ್ಲಿ ಪ್ರತೀ ತಿಂಗಳ ಪ್ರಥಮ ಗುರುವಾರ ಅಸ್ತಮಿಸಿದ ಶುಕ್ರವಾರದಂದು ರಾತ್ರಿ ಸೈಯದ್ ಮಹಮ್ಮದ್ ಜುನೈದ್ ಜಿಫ್ರಿ ತಂಙಳ್ ನೇತೃತ್ವದಲ್ಲಿ ನಡೆಸಿಕೊಂಡು ಬರುತ್ತಿರುವ ಚರಿತ್ರೆ ಪ್ರಸಿದ್ಧ ಆತೂರು ದ್ರಿಕ್ ಹಲ್ಕಾ ಇದರ 22ನೇ ವಾರ್ಷಿಕ ಮಹಾ ಸಂಗಮವು ಜನವರಿ 1 ರಿಂದ 5ರ ತನಕ ನಡೆಯಲಿದೆ. ಇದರಲ್ಲಿ ಅಂತಾರಾಷ್ಟ್ರೀಯ ಪ್ರಭಾಷಣಗಾರು, ಸೈಯಿದರು, ಪಂಡಿತರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಆತೂರು: ಜ. 01ರಿಂದ 05ರ ವರೆಗೆ “ದ್ಸಿಕ್ರ್ ಹಲ್ಕಾ” ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ತಾಲೂಕು ಘಟಕ ರಚನೆ ➤ ಅಧ್ಯಕ್ಷರಾಗಿ ನಿಂಗರಾಜು, ಪ್ರ.ಕಾರ್ಯದರ್ಶಿಯಾಗಿ ಸೀತಾರಾಮ ಕೆ.ಜಿ ಪಲ್ಲತ್ತಾರು ಆಯ್ಕೆ

(ನ್ಯೂಸ್ ಕಡಬ) newskadaba.com ಆಲಂಕಾರು, ಡಿ. 26. ಕಡಬ ತಾಲೂಕು ಸರಕಾರಿ ಪ್ರಾಥಮಿಕ ಶಾಲೆಗಳ ಮುಖ್ಯ ಗುರುಗಳ ಸಂಘ ಇದರ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಕಡಬ ಮಾದರಿ ಶಾಲೆಯಲ್ಲಿ ನಡೆದ ಸಭೆಯಲ್ಲಿ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ದ.ಕ.ಜಿ.ಪಂ. ಹಿ. ಪ್ರಾಥಮಿಕ ಶಾಲೆ ಆಲಂಕಾರಿನ ಮುಖ್ಯಗುರುಗಳಾದ ನಿಂಗರಾಜು ಕೆ.ಪಿ, ಪ್ರಧಾನ ಕಾರ್ಯದರ್ಶಿಯಾಗಿ ಸೀತಾರಾಮ ಕೆ.ಜಿ ಪಲ್ಲತ್ತಾರು, ಕೋಶಾಧಿಕಾರಿಯಾಗಿ ಹಮೀದ್ ಕೆ ಕಡಬ, ಉಪಾಧ್ಯಕ್ಷರುಗಳಾಗಿ ಶಾರದಾ ಮತ್ತು ವಾರಿಜ, ಜಂಟಿ ಕಾರ್ಯದರ್ಶಿಗಳಾಗಿ ಕುಶಾಲಪ್ಪ ಡಿ. ಹಾಗೂ ಮಹೇಶ್, ಸಂಘಟನಾ ಕಾರ್ಯದರ್ಶಿಗಳಾಗಿ

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ತಾಲೂಕು ಘಟಕ ರಚನೆ ➤ ಅಧ್ಯಕ್ಷರಾಗಿ ನಿಂಗರಾಜು, ಪ್ರ.ಕಾರ್ಯದರ್ಶಿಯಾಗಿ ಸೀತಾರಾಮ ಕೆ.ಜಿ ಪಲ್ಲತ್ತಾರು ಆಯ್ಕೆ Read More »

ಕರಾವಳಿ, ಕರ್ನಾಟಕ
Scroll to Top