ಕರಾವಳಿ

ಡಿ. 30ರಂದು ಸಾಮಾನ್ಯ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 24. ಮಂಗಳೂರು ಮಹಾನಗರ ಪಾಲಿಕೆಯ ಪರಿಷತ್ತಿನ ಸಾಮಾನ್ಯ ಸಭೆಯು ಡಿ.30ರ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಮಂಗಳಾ ಸಭಾಂಗಣದಲ್ಲಿ ನಡೆಯಲಿದೆ ಎಂದು ಪಾಲಿಕೆಯ ಪರಿಷತ್ತು ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿ. 30ರಂದು ಸಾಮಾನ್ಯ ಸಭೆ Read More »

ಕರಾವಳಿ, ಕರ್ನಾಟಕ

ಇಂದು ರಾಷ್ಟ್ರೀಯ ಗ್ರಾಹಕ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 24. ಜಿಲ್ಲಾಡಳಿತ, ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟ(ರಿ), ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ ಹಾಗೂ ನಗರದ ಬೆಸೆಂಟ್ ಮಹಿಳಾ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಇಂದು ರಾಷ್ಟ್ರೀಯ ಗ್ರಾಹಕ ದಿನಾಚಣೆ-2022 ಕಾರ್ಯಕ್ರಮವನ್ನು ನಗರದ ಬೆಸೆಂಟ್ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಗ್ರಾಹಕ ವ್ಯಾಜ್ಯ ವಿಲೇವಾರಿ ಆಯೋಗದ ಅಧ್ಯಕ್ಷ ಪ್ರಕಾಶ್ ಕೆ. ಕಾರ್ಯಕ್ರಮ

ಇಂದು ರಾಷ್ಟ್ರೀಯ ಗ್ರಾಹಕ ದಿನಾಚರಣೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಡಿ. 26ರಿಂದ KSRTC ಬಸ್ ಗಳ ಸಂಚಾರದಲ್ಲಿ ವ್ಯತ್ಯಯ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 24. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯಲ್ಲಿ ಇದೇ ಡಿ. 21 ರಿಂದ 27ರವರೆಗೆ ನಡೆಯುತ್ತಿರುವ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಹಾಗೂ ಹೊರ ರಾಜ್ಯಗಳಿಂದ ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ನ ಸುಮಾರು 50,000ಕ್ಕಿಂತಲೂ ಹೆಚ್ಚಿನ ವಿದ್ಯಾರ್ಥಿಗಳು/ಪೋಷಕರು/ಶಿಕ್ಷಕರು ಆಗಮಿಸಿದ್ದಾರೆ. ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ರಾಜ್ಯ ರಸ್ತೆ ಸಾರಿಗೆ ನಿಗಮದ ಇತರೆ ವಿಭಾಗಗಳಿಂದ ಹಾಗೂ ವಾ.ಕ.ರ.ಸಾ.ನಿಗಮ, ಕ.ಕ.ರ.ಸಾ. ನಿಗಮಗಳಿಂದ ವಿದ್ಯಾರ್ಥಿಗಳನ್ನು ಕರೆದುಕೊಂಡು ಬಂದಿದ್ದು, ಆ ವಿದ್ಯಾರ್ಥಿಗಳು/ಪೋಷಕರು/ಶಿಕ್ಷಕರು ಡಿ. 27

ಮಂಗಳೂರು: ಡಿ. 26ರಿಂದ KSRTC ಬಸ್ ಗಳ ಸಂಚಾರದಲ್ಲಿ ವ್ಯತ್ಯಯ Read More »

ಕರಾವಳಿ, ಕರ್ನಾಟಕ

ಉಪ್ಪಿನಂಗಡಿ: ಡಾ.ಸುಪ್ರೀತ್ ಲೋಬೋರವರಿಗೆ ಆಯುರ್ವೇದದಲ್ಲಿ ಪಿಎಚ್‌.ಡಿ ಪದವಿ                                                                                                                                        

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 24. ಇಲ್ಲಿನ ಡಾ.ಕೆ.ಜಿ.ಭಟ್ ಬಿಲ್ಡಿಂಗ್‌ ನಲ್ಲಿ ಜೊಸ್ಸೀಸ್ ಆಯುರ್ವೇದ ಆಸ್ಪತ್ರೆ ಮತ್ತು ನೆಕ್ಕಿಲಾಡಿಯಲ್ಲಿ ಬಳ್ಳಿ ಆಯುರ್ಗ್ರಾಮ ಆಯುರ್ವೇದ ಆಸ್ಪತ್ರೆ ಹೊಂದಿರುವ ಡಾ. ಸುಪ್ರೀತ್ ಲೋಬೋ ಅವರು ಭುವನೇಶ್ವರದ ಉತ್ಕಲ ವಿಶ್ವವಿದ್ಯಾನಿಲಯದಿಂದ ಆಯುರ್ವೇದದಲ್ಲಿ ಪಿಎಚ್‌.ಡಿ ಪದವಿ ಗಳಿಸಿದ್ದಾರೆ. ಡಾ. ಚತುರ್ಭುಜ ಭುಯಾನ್ A COMPARATIVE CLINICAL STUDY OF AGNIKARMA WITH SUVARN SHALAKA AND PANCHADHATU SHALAKA IN JANUSANDHIGATA VATA W.S.R. TO OSTEOARTHRITIS OF KNEE JOINT

ಉಪ್ಪಿನಂಗಡಿ: ಡಾ.ಸುಪ್ರೀತ್ ಲೋಬೋರವರಿಗೆ ಆಯುರ್ವೇದದಲ್ಲಿ ಪಿಎಚ್‌.ಡಿ ಪದವಿ                                                                                                                                         Read More »

ಕರಾವಳಿ, ಕರ್ನಾಟಕ

ವಿದೇಶಗಳಿಂದ ಆಗಮಿಸುವ ಪ್ರಯಾಣಿಕರು ಆರ್‌ಟಿ-ಪಿಸಿಆರ್ ಕಡ್ಡಾಯ   ➤ ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವಿಯಾ                                                 

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 24. ಜಾಗತಿಕ ಮಟ್ಟದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ, ಭಾರತಕ್ಕೆ ವಿದೇಶಗಳಿಂದ ಆಗಮಿಸುವ ಪ್ರಯಾಣಿಕರು ಕಡ್ಡಾಯವಾಗಿ ಆರ್‌ಟಿ-ಪಿಸಿಆರ್ ಪರೀಕ್ಷೆ ಮಾಡಿಸಿರುವುದು ಕಡ್ಡಾಯ ಎಂದು ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವಿಯಾ ತಿಳಿಸಿದ್ದಾರೆ. ಚೀನಾ, ಜಪಾನ್, ದಕ್ಷಿಣ ಕೊರಿಯಾ, ಹಾಂಗ್ ಕಾಂಗ್ ಮತ್ತು ಥೈಲ್ಯಾಂಡ್‌ ದೇಶಗಳಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯವಾಗಿದ್ದು, ಕೋವಿಡ್‌ ಲಕ್ಷಣಗಳು ಕಂಡುಬಂದರೆ ಕೂಡಲೇ ಅವರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತದೆ. ಇದಲ್ಲದೆ ಚೀನಾ, ಜಪಾನ್, ದಕ್ಷಿಣ ಕೊರಿಯಾ, ಹಾಂಗ್

ವಿದೇಶಗಳಿಂದ ಆಗಮಿಸುವ ಪ್ರಯಾಣಿಕರು ಆರ್‌ಟಿ-ಪಿಸಿಆರ್ ಕಡ್ಡಾಯ   ➤ ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವಿಯಾ                                                  Read More »

ಕರಾವಳಿ

ಕೋವಿಡ್ ಭೀತಿ- 24 ಗಂಟೆಗಳ ಅವಧಿಯಲ್ಲಿ 201 ಹೊಸ ಪ್ರಕರಣಗಳು ಪತ್ತೆ   ➤ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ                       

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 24. ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 201 ಹೊಸ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈವರೆಗಿನ ಒಟ್ಟು ಸೋಂಕಿತರ ಸಂಖ್ಯೆ 4.46 ಕೋಟಿಗೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 3,397ಕ್ಕೆ ಏರಿಕೆಯಾಗಿದೆ. ಕೇರಳದಲ್ಲಿ ಒಬ್ಬರು ಸೇರಿದಂತೆ ಈವರೆಗೂ ದೇಶದಲ್ಲಿ 5,30,691 ಜನರು ಕೋವಿಡ್‌ ನಿಂದ ಮೃತಪಟ್ಟಿದ್ದಾರೆ ಎಂದು ಸಚಿವಾಲಯ ತಿಳಿಸಿದೆ. ದೈನಂದಿನ ಪಾಸಿಟಿವಿಟಿ ದರ ಶೇ 0.15ರಷ್ಟಿದ್ದು,

ಕೋವಿಡ್ ಭೀತಿ- 24 ಗಂಟೆಗಳ ಅವಧಿಯಲ್ಲಿ 201 ಹೊಸ ಪ್ರಕರಣಗಳು ಪತ್ತೆ   ➤ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ                        Read More »

ಕರಾವಳಿ

ಮಾಸ್ಕ್ ಕಡ್ಡಾಯ, ನಿಯಮ ಪಾಲಿಸದೇ ಇದ್ದಲ್ಲಿ ಶಿಸ್ತಿನ ಕ್ರಮಕ್ಕೆ ಸೂಚನೆ ➤ ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 24. ಇನ್ಮುಂದೆ ಮಾಸ್ಕ್ ಹಾಕದೇ ಹೊರಗೆ ಬರುವ ಹಾಗಿಲ್ಲ. ಮಾಸ್ಕ್ ಹಾಕದೇ ರಸ್ತೆಗಿಳಿದ್ರೆ ಮತ್ತೆ ಫೈನ್ ಬೀಳುತ್ತೆ ಎಂದು ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ. ಕೊರೋನಾ ನಾಲ್ಕನೇ ಅಲೆ ಆತಂಕ ಹಿನ್ನೆಲೆ ಮಾಸ್ಕ್ ಕಡ್ಡಾಯ ಧರಿಸಿ, ಮಾಸ್ಕ್ ಧರಿಸದೇ ಬಸ್ ಏರಿದ್ರೆ ಫೈನ್ ಬೀಳೋದು ಗ್ಯಾರಂಟಿ. ನಿಯಮ ಪಾಲಿಸದೇ ಇದ್ದಲ್ಲಿ ದಂಡ ಅಥವಾ ಶಿಸ್ತಿನ ಕ್ರಮಕ್ಕೆ ಸೂಚನೆ ನೀಡಿದೆ.        

ಮಾಸ್ಕ್ ಕಡ್ಡಾಯ, ನಿಯಮ ಪಾಲಿಸದೇ ಇದ್ದಲ್ಲಿ ಶಿಸ್ತಿನ ಕ್ರಮಕ್ಕೆ ಸೂಚನೆ ➤ ರಾಜ್ಯ ಸರ್ಕಾರ Read More »

ಕರಾವಳಿ

ನೆಲ್ಯಾಡಿ: ದನದ ಮಾಂಸ ಮಾರಾಟ…! ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಡಿ. 24. ಇಲ್ಲಿನ ಸಿರಿಬಾಗಿಲು ಗ್ರಾಮದ ದೇರಣೆ ಎಂಬಲ್ಲಿ ದನದ ಮಾಂಸ ಮಾರಾಟ ಮಾಡಿ, ಅದರ ತಲೆ ಹಾಗೂ ಕಾಲುಗಳನ್ನು ಸ್ಥಳದಲ್ಲೇ ಬಿಟ್ಟುಹೋಗಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಶಿರಾಡಿ ಗ್ರಾಮದ ಅಡ್ಡಹೊಲೆ ಮಿತ್ತಮಜಲು ನಿವಾಸಿ ತೋಮಸ್ ಯಾನೆ ಮನೋಜ್ ಎಂದು ಗುರುತಿಸಲಾಗಿದೆ. ಸಿರಿಬಾಗಿಲು ಗ್ರಾಮದ ದೇರಣೆ ಅರಣ್ಯ ಪ್ರದೇಶದಲ್ಲಿ ದನದ ಮಾಂಸ ಕಡಿದು ಅದರ ತಲೆ ಹಾಗೂ ಕಾಲುಗಳನ್ನು ಸ್ಥಲದಲ್ಲೆ ಬಿಟ್ಟು ಹೋಗಲಾಗಿದ್ದು, ಈ

ನೆಲ್ಯಾಡಿ: ದನದ ಮಾಂಸ ಮಾರಾಟ…! ➤ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮತ್ತೆ ಕೊರೊನಾ ಅಬ್ಬರ  ➤ ಖಾಸಗಿ ಶಾಲೆಗಳಿಂದ ಮಹತ್ವದ ನಿರ್ಧಾರ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 24. ವಿಶ್ವದಾದ್ಯಂತ ಕೊರೊನಾ ಅಬ್ಬರಿಸಿ ಬೊಬ್ಬಿರಿಯುತ್ತಿರುವ ಹಿನ್ನಲೆ ಶಿಕ್ಷಣ ಸಂಸ್ಥೆಗಳಿಗೆ ಭಯದ ವಾತಾವರಣ ಸೃಷ್ಟಿಯಾಗಿದೆ. ಇನ್ನು ಸರ್ಕಾರ ಸಾರ್ವಜನಿಕರಿಗೆ ಅಥವಾ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಗೈಡ್ಸ್ ಲೈನ್ಸ್ ಬಿಡುಗಡೆ ಮಾಡುವ ಮುನ್ನವೇ ಖಾಸಗಿ ಶಾಲೆಗಳು ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಖಾಸಗಿ ಶಾಲೆಯ ಆಡಳಿತ ಮಂಡಳಿಗಳ ಜೊತೆ ರುಪ್ಸಾ ಪದಾಧಿಕಾರಿಗಳು ವಿಡಿಯೋ ಕಾನ್ಫರೆನ್ಸ್‌ ಮೂಲಕ ಮತ್ತೆ ಮಾಸ್ಕ್ ಕಡ್ಡಾಯ, ಸಾಮಾಜಿಕ ಅಂತರದ ಬಗ್ಗೆ ಚರ್ಚೆಯನ್ನು ನಡೆಸಿದ್ದಾರೆ. ಇನ್ನು ಚರ್ಚೆ ನಡೆಸಿದ ಬಳಿಕ

ಮತ್ತೆ ಕೊರೊನಾ ಅಬ್ಬರ  ➤ ಖಾಸಗಿ ಶಾಲೆಗಳಿಂದ ಮಹತ್ವದ ನಿರ್ಧಾರ Read More »

ಕರಾವಳಿ

ಪುತ್ತೂರು: ಅತ್ತೆ ಹಾಗೂ ಅತ್ತಿಗೆಯಿಂದ ವರದಕ್ಷಿಣೆ ಕಿರುಕುಳ, ಹಲ್ಲೆ ಪ್ರಕರಣ ➤ ಮಹಿಳೆ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಬೆಳಂದೂರು, ಡಿ. 24. ಮಹಿಳೆಯೊಬ್ಬರ ಮೇಲೆ ಅತ್ತೆ ಮತ್ತು ಅತ್ತಿಗೆ ವರದಕ್ಷಿಣೆ ಕಿರುಕುಳ ನೀಡಿ ಜೀವ ಬೆದರಿಕೆಯೊಡ್ಡಿ ಕತ್ತಿಯಿಂದ ಹಲ್ಲೆಗೈದಿರುವ ಘಟನೆ ಬೆಳಂದೂರು ಗ್ರಾಮದ ಅಮೈ ಎಂಬಲ್ಲಿ ನಡೆದಿದೆ. ಬೆಳಂದೂರು ಗ್ರಾಮದ ಅಮೈ ನಿವಾಸಿ ಕುಲದೀಪ್ ಎಂಬವರ ಪತ್ನಿಗೆ ಅವರ ಅತ್ತೆ ಹಾಗೂ ಅತ್ತಿಗೆ ವರದಕ್ಷಿಣೆ ಕಿರುಕುಳ ನೀಡಿದ್ದಲ್ಲದೇ ಜೀವ ಬೆದರಿಕೆಯೊಡ್ಡಿ ಕತ್ತಿಯಿಂದ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಗಾಯಾಳು ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.

ಪುತ್ತೂರು: ಅತ್ತೆ ಹಾಗೂ ಅತ್ತಿಗೆಯಿಂದ ವರದಕ್ಷಿಣೆ ಕಿರುಕುಳ, ಹಲ್ಲೆ ಪ್ರಕರಣ ➤ ಮಹಿಳೆ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top