ಕರಾವಳಿ

ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಢಿಕ್ಕಿ  ➤ 8 ಮಂದಿಗೆ ಗಾಯ        

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 17. ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಢಕ್ಕಿ  ಸಂಭವಿಸಿದ ಪರಿಣಾಮ ಚಾಲಕ ಸೇರಿದಂತೆ ಪ್ರಯಾಣಿಕರು ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಿ.ಸಿ.ರೋಡ್ ನ ಸೇತುವೆ ಬಳಿ ಸಂಭವಿಸಿದೆ. ಬಿ.ಸಿ.ರೋಡ್ ನ ನೇತ್ರಾವತಿ ಸೇತುವೆ ಬಳಿ ಸೆಲಿನಾ ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಹಾಗೂ ಸಜಿಪ ರೂಟ್ ನ ಶಾರದಾ ಬಸ್ ನಡುವೆ ಈ ಅಪಘಾತ ನಡೆದಿದ್ದು, ಘಟನೆಯಿಂದ ಬಸ್ ಚಾಲಕರು ಹಾಗೂ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು […]

ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಢಿಕ್ಕಿ  ➤ 8 ಮಂದಿಗೆ ಗಾಯ         Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವೇಶ್ಯಾವಾಟಿಕೆಯಲ್ಲಿ ಸಿಲುಕಿದ್ದ ಅಪ್ರಾಪ್ತ ಬಾಲಕಿಯ ರಕ್ಷಣೆ

(ನ್ಯೂಸ್ ಕಡಬ) newskadaba.com  ಮೈಸೂರು, ಡಿ. 17. ವೇಶ್ಯಾವಾಟಿಕೆಗೆಂದು ಕರೆತರಲಾಗಿದ್ದ ಆಂಧ್ರ ಮೂಲದ ಅಪ್ರಾಪ್ತ ಬಾಲಕಿಯನ್ನು ಒಡನಾಡಿ ಸೇವಾ ಸಂಸ್ಡೆ, ನಗರ ಮಾನವ ಸಾಗಾಣಿಕೆ ನಿಗ್ರಹ ದಳ ಮತ್ತು ಜಿಲ್ಲಾ ಮಕ್ಕಳ ಪೊಲೀಸ್ ಘಟಕದ ಜಂಟಿ ಕಾರ್ಯಾಚರಣೆಯ ಮೂಲಕ  ರಕ್ಷಿಸಿದ ಘಟನೆ ನಗರದ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ನಡೆದಿದೆ. ಆಂಧ್ರ ಮೂಲದ 15 ವರ್ಷದ ಅಪ್ರಾಪ್ತ ಬಾಲಕಿಯನ್ನು ರಕ್ಷಿಸಲಾಗಿದೆ. ಆಕೆ ಆಂಧ್ರದ ಅನಂತಪುರ ಜಿಲ್ಲೆಯಲ್ಲಿ ಒಂದು ವರ್ಷದಿಂದ ಲೈಂಗಿಕವಾಗಿ ವೇಶ್ಯಾವಾಟಿಕೆಗೆ ಬಲಿಯಾಗಿದ್ದಾಳೆ ಎಂದು ವಿಚಾರಣೆಯಲ್ಲಿ ತಿಳಿದು ಬಂದಿದೆ.

ವೇಶ್ಯಾವಾಟಿಕೆಯಲ್ಲಿ ಸಿಲುಕಿದ್ದ ಅಪ್ರಾಪ್ತ ಬಾಲಕಿಯ ರಕ್ಷಣೆ Read More »

ಕರಾವಳಿ

ಕಡಬ: ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ನಿತಿನ್ ಕುಮಾರ್ ಗೆ ಕಡಬ ಪೊಲೀಸ್ ಠಾಣೆಯಲ್ಲಿ ಸನ್ಮಾನ        

(ನ್ಯೂಸ್ ಕಡಬ) newskadaba.com ಕಡಬ, ಡಿ. 16. ಖೋಖೋ ಪಂದ್ಯಾಟದಲ್ಲಿ ರಾಷ್ಡ್ರಮಟ್ಟಕ್ಕೆ ಆಯ್ಕೆಯಾದ ಕೋಡಿಂಬಾಳದ ನಿತಿನ್ ಕುಮಾರ್ ಅವರನ್ನು ಕಡಬ ಠಾಣೆಯಲ್ಲಿ ಸನ್ಮಾನಿಸಲಾಯಿತು. ಎಸ್.ಐ ಆಂಜನೇಯ ರೆಡ್ಡಿಯವರು ನಿತಿನ್ ಕುಮಾರ್ ಅವರನ್ನು ಸನ್ಮಾನಿಸಿ ಮಾತನಾಡಿ, ಪೊಲೀಸರು ತಪ್ಪು ಮಾಡಿದವರನ್ನು ಶಿಕ್ಷಿಸಲು ಮಾತ್ರ ಇರುವವರಲ್ಲ, ಉತ್ತಮ ಸಾಧನೆ ಮಾಡಿದವರನ್ನು ಗುರುತಿಸುವುದು ಸಹ ನಮ್ಮ ಕರ್ತವ್ಯ. ಯಾವುದೇ ಪ್ರತಿಭೆಗಳನ್ನು ನಾವು ಪ್ರೋತ್ಸಾಹಿಸಿದಾಗ ಅವರಿಗೆ ಇನ್ನಷ್ಟು ಸಾಧನೆ ಮಾಡಲು ಪ್ರೇರೇಪಣೆ ನೀಡಿದಂತಾಗುತ್ತದೆ ಎಂದರು. ಈ ಸಂದರ್ಭದಲ್ಲಿ ನಿತಿನ್ ಕುಮಾರ್ ತಂದೆ ರಮೇಶ್,

ಕಡಬ: ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ನಿತಿನ್ ಕುಮಾರ್ ಗೆ ಕಡಬ ಪೊಲೀಸ್ ಠಾಣೆಯಲ್ಲಿ ಸನ್ಮಾನ         Read More »

ಕರಾವಳಿ, ಕರ್ನಾಟಕ

ಬಲ್ಯ ಗ್ರಾಮದ ಹದಗೆಟ್ಟ ರಸ್ತೆಯ ದುಸ್ಥಿತಿ ➤ ಮತದಾನ ಬಹಿಷ್ಕರಿಸುವುದಾಗಿ ಬ್ಯಾನರ್ ಅಳವಡಿಕೆ

(ನ್ಯೂಸ್ ಕಡಬ) newskadaba.com ಕಡಬ, ಡಿ. 16. ತಾಲೂಕಿನ ಬಲ್ಯ ಗ್ರಾಮದ ಬಹುತೇಕ ರಸ್ತೆಗಳು ಕೆಟ್ಟು ಹೋಗಿ ಸಂಚಾರಕ್ಕೆ ಅಡಚಣೆಯಾಗಿದ್ದು, ಇದರಿಂದಾಗಿ ಆ ಗ್ರಾಮದ ಜನತೆ ಮತದಾನ ಬಹಿಷ್ಕಾರ ಮಾಡುವ ಬಗ್ಗೆ ಬ್ಯಾನರ್ ಅಳವಡಿಸಿದ ಘಟನೆ ನಡೆದಿದೆ. ಬಲ್ಯ ಗ್ರಾಮದ ದೇವತ್ತಡ್ಕ, ರಾಮನಗರ, ನೆಲ್ಲ, ಬನಾರಿ, ಮತ್ರಾಡಿ, ಕೋಡಿಯಡ್ಕ, ಪುಳಿತ್ತಡಿ, ನಾಲ್ಗುತ್ತು, ಪಾತ್ರಾಜೆ, ಕಲ್ಲೇರಿ, ಬಲ್ಯ ಶಾಲೆ, ಬಲ್ಯ- ಕೇರ್ಪುಡೆ ಮೊದಲಾದ ಸಂಪರ್ಕ ರಸ್ತೆಗಳು 15 ಕಿ.ಮೀ ಹೊಂದಿದ್ದು, ಈ ರಸ್ತೆಗಳು ದುರಸ್ತಿಯಾಗುವವರೆಗೆ ಮತದಾನ ಬಹಿಷ್ಕಾರ ಮಾಡುವ

ಬಲ್ಯ ಗ್ರಾಮದ ಹದಗೆಟ್ಟ ರಸ್ತೆಯ ದುಸ್ಥಿತಿ ➤ ಮತದಾನ ಬಹಿಷ್ಕರಿಸುವುದಾಗಿ ಬ್ಯಾನರ್ ಅಳವಡಿಕೆ Read More »

ಕರಾವಳಿ, ಕರ್ನಾಟಕ

ಅನೈತಿಕ ದಂಧೆಗಿಳಿದ ಮಂಗಳಮುಖಿಯರು..! ➤ ಖುದ್ದು ಕಾರ್ಯಾಚರಣೆಗಿಳಿದ ಎಸ್ಪಿ

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 16. ಉಡುಪಿ ಸಿಟಿ ಬಸ್ ನಿಲ್ದಾಣ ಸಮೀಪ ಮಂಗಳಮುಖಿಯರು ಅನೈತಿಕ ದಂಧೆಯಲ್ಲಿ ತೊಡಗಿಸಿಕೊಳ್ಳುತ್ತಿರುವುದಾಗಿ ದೂರು ಕೇಳಿಬಂದ ಹಿನ್ನೆಲೆ ಡಿ.16 ರಂದು ತಡರಾತ್ರಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಹಾಕೇ ಮಚ್ಚಿಂದ್ರ ಸ್ವತಃ ಕಾರ್ಯಾಚರಣೆ ನಡೆಸಿ ಇಬ್ಬರು ಪಿಂಪ್‌ಗಳನ್ನು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ನಗರದ ಸಿಟಿ ಬಸ್ ನಿಲ್ದಾಣ ಹಾಗೂ ಸರ್ವಿಸ್ ನಿಲ್ದಾಣದ ಸಮೀಪ ಅನೈತಿಕ ದಂಧೆಯಲ್ಲಿ ತೊಡಗಿಸಿಕೊಂಡ ಕೆಲವು ಮಂಗಳಮುಖಿಯರು, ವಾಹನಗಳನ್ನು ಅಡ್ಡ ಹಾಕಿ ಸಾರ್ವಜನಿಕರಿಗೆ ತೊಂದರೆ

ಅನೈತಿಕ ದಂಧೆಗಿಳಿದ ಮಂಗಳಮುಖಿಯರು..! ➤ ಖುದ್ದು ಕಾರ್ಯಾಚರಣೆಗಿಳಿದ ಎಸ್ಪಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ವ್ಯಾನ್ ಮತ್ತು ಕಾರಿನ ನಡುವೆ ಭೀಕರ ಅಪಘಾತ !!!      

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 16. ಸುಳ್ಯದಿಂದ ಗುತ್ತಿಗಾರಿಗೆ ಬರುತ್ತಿದ್ದ ವ್ಯಾನ್ ಮತ್ತು ಸುಳ್ಯದ ಕಡೆಗೆ ತೆರಳುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ ಸಂಭವಿಸಿದ ಘಟನೆ ನಡೆದಿದೆ. ಡಿಕ್ಕಿಯಾದ ರಭಸಕ್ಕೆ ವಾಹನ ಜಖಂಗೊಂಡಿದ್ದು, ಕಾರು ಚಾಲಕ ಬೆಟ್ಟ ಮರಿಯಪ್ಪ ಎಂಬವರ ಕೈಗೆ ಗಾಯಗಳಾಗಿದೆ ಎಂದು ತಿಳಿದುಬಂದಿದೆ.    

ಸುಳ್ಯ: ವ್ಯಾನ್ ಮತ್ತು ಕಾರಿನ ನಡುವೆ ಭೀಕರ ಅಪಘಾತ !!!       Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ !!!                   

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 16. ಅಪರಿಚಿತ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ವಾರಸುದಾರರು ಇದ್ದಲ್ಲಿ ಮಂಗಳೂರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ. ಇವರ ಹೆಸರು, ವಿಳಾಸ ತಿಳಿದಿಲ್ಲ. ಪ್ರಾಯ ಸುಮಾರು 45-50 ವರ್ಷ ಇರಬಹುದು ಎಂದು ಅಂದಾಜಿಸಲಾಗಿದೆ. ಎತ್ತರ 5 ಅಡಿ 4 ಇಂಚು, ಬಡಕಲು ಶರೀರ, ಸುಮಾರು 3 ಇಂಚು ಉದ್ದದ ಕಪ್ಪು ಬಿಳಿ ಮಿಶ್ರಿತ ತಲೆಕೂದಲು, 4 ಇಂಚು ಉದ್ದ ಕಪ್ಪು ಬಿಳಿ ಮಿಶ್ರಿತ ಗಡ್ಡ ಮೀಸೆ, ಗೋಧಿ ಮೈಬಣ್ಣ,

ಮಂಗಳೂರು: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ !!!                    Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಕಾರು ಡಿಕ್ಕಿ  

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 16. ರಸ್ತೆ ದಾಟುತ್ತಿದ್ದ ವೇಳೆ ವಿದ್ಯಾರ್ಥಿಯೋರ್ವನಿಗೆ ಕಾರೊಂದು ಡಿಕ್ಕಿಯಾದ ಘಟನೆ ಹಾರಾಡಿಯಲ್ಲಿ ಸಂಭವಿಸಿದೆ. ಶಾಲಾ ವಿದ್ಯಾರ್ಥಿಯು ರಸ್ತೆ ದಾಟುತ್ತಿದ್ದ ವೇಳೆ ಉಪ್ಪಿನಂಗಡಿ ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ಕಾರೊಂದು ಆಕೆಗೆ ಡಿಕಿಯಾಗಿದ್ದು, ಗಾಯಗೊಂಡ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವಾಹನಗಳ ದಟ್ಟಣೆ ಹೆಚ್ಚಾಗಿದ್ದು ಶಾಲಾ ವಿದ್ಯಾರ್ಥಿಗಳು ರಸ್ತೆ ದಾಟುವ ವೇಳೆ ರಸ್ತೆ ವಿಭಜಕದಲ್ಲಿ ಗೊಂದಲವುಂಟಾಗಿ ಅತ್ತಿಂದಿತ್ತ ಬರುವ ವಾಹನಗಳನ್ನು ಗಮನಿಸಲಾರದೇ ಅನೇಕ ಬಾರಿ ಸಣ್ಣ ಪುಟ್ಟ ಅಪಘಾತಕ್ಕೀಡಾಗುತ್ತಿದೆ.

ಪುತ್ತೂರು: ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಕಾರು ಡಿಕ್ಕಿ   Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹೈಕೋರ್ಟ್ ವಕೀಲ ಅಬ್ದುಲ್ ಫಾರೂಕ್ ಹೃದಯಾಘಾತದಿಂದ ಮೃತ್ಯು                    

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 16. ಹೈಕೋರ್ಟ್ ವಕೀಲ ಹಾಗೂ ಮೂಲತಃ ಮೂಡಬಿದಿರೆ ನಿವಾಸಿ ಅಬ್ದುಲ್ ಫಾರೂಕ್(49) ಹೃದಯಾಘಾತದಿಂದ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ. ಸುಪ್ರೀಂ ಕೋರ್ಟ್ ನ್ಯಾಯಾಧೀಶ ಅಬ್ದುಲ್ ನಝೀರ್ ಅವರ ಕಿರಿಯ ಸಹೋದರ ಆಗಿರುವ ಅಬ್ದುಲ್ ಫಾರೂಕ್ ಅವರ ಮೃತದೇಹ ಬೆಳುವಾಯಿಗೆ ತರಲಾಗುತ್ತದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಸ್ವಲ್ಪ ಸಮಯ ಮಂಗಳೂರು ಪಾಂಡೇಶ್ವರದಲ್ಲಿ ವಾಸವಾಗಿದ್ದ ಅವರು ಈಗ ಹೈಕೋರ್ಟ್ ವಕೀಲರಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದರು ಎನ್ನಲಾಗಿದೆ.  

ಹೈಕೋರ್ಟ್ ವಕೀಲ ಅಬ್ದುಲ್ ಫಾರೂಕ್ ಹೃದಯಾಘಾತದಿಂದ ಮೃತ್ಯು                     Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಜೇಶ್ವರ ದ-ಅವಾ ಕಾಲೇಜು ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತ್ಯು ➤ ತಮಿಳುನಾಡಿನಲ್ಲಿ ದುರ್ಘಟನೆ

(ನ್ಯೂಸ್ ಕಡಬ) newskadaba.com ಉಪ್ಪಳ, ಡಿ. 15. ಮುತ್ತುಪೇಟೆಯಲ್ಲಿ ಸ್ನಾನಕ್ಕೆಂದು ನೀರಿಗಿಳಿದ ವೇಳೆ ಆಕಸ್ಮಿಕವಾಗಿ ಮುಳುಗಿ ಮಳ್ ಹರ್ ದಅವಾ ಕಾಲೇಜು ವಿದ್ಯಾರ್ಥಿ ಮೃತಪಟ್ಟ ಘಟನೆ ತಮಿಳುನಾಡಿನಲ್ಲಿ ನಡೆದಿದೆ.   ಮೃತ ವಿದ್ಯಾರ್ಥಿಯನ್ನು ಉಪ್ಪಳ ಪೈವಳಿಕೆ ನಿವಾಸಿ ಅನ್ಸಾಫ್ ಎಂದು ಗುರುತಿಸಲಾಗಿದೆ. ಮಂಜೇಶ್ವರದ ಮಳ್ ಹರ್ ದಅವಾ ಕಾಲೇಜಿನಲ್ಲಿ ಓದುತ್ತಿದ್ದ ಅನ್ಸಾಫ್ ಗೆಳೆಯರ ಜೊತೆ ಮುತ್ತುಪೇಟೆ ಝಿಯಾರತ್ ಗೆ ತೆರಳಿದ್ದು, ಝಿಯಾರತ್ ಬಳಿಕ ಸ್ನಾನಕ್ಕೆಂದು ನದಿಗಿಳಿದು ಆಕಸ್ಮಿಕವಾಗಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅನ್ಸಾಫ್ ನಿಧನಕ್ಕೆ ಮಳ್ ಹರ್

ಮಂಜೇಶ್ವರ ದ-ಅವಾ ಕಾಲೇಜು ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತ್ಯು ➤ ತಮಿಳುನಾಡಿನಲ್ಲಿ ದುರ್ಘಟನೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top