ಕರಾವಳಿ

ಬಂಟ್ವಾಳ: ಶೌಚಾಲಯದ ಗುಂಡಿ ಅಗೆಯುತ್ತಿದ್ದ ವೇಳೆ ಮಣ್ಣು ಕುಸಿತ ➤ ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 14. ಶೌಚಾಲಯದ ಗುಂಡಿ ಅಗೆಯುತ್ತಿದ್ದ ವೇಳೆ ಮಣ್ಣು ಕುಸಿದು ವ್ಯಕ್ತಿಯೊಬ್ಬರು ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಅಡ್ಡೂರಿನಲ್ಲಿ ನಡೆದಿದೆ.   ಮೃತರನ್ನು ಅಡ್ಡೂರು ನಿವಾಸಿ ಆದಂ ಹಾಗೂ ಗಾಯಗೊಂಡವರನ್ನು ಇಮ್ತಿಯಾಝ್ ಮತ್ತು ಇಬ್ರಾಹೀಂ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಟ್ಟು ನಾಲ್ಕು ಮಂದಿ ಶೌಚಾಲಯಕ್ಕೆ ಗುಂಡಿ ಅಗೆಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ಬಂಟ್ವಾಳ: ಶೌಚಾಲಯದ ಗುಂಡಿ ಅಗೆಯುತ್ತಿದ್ದ ವೇಳೆ ಮಣ್ಣು ಕುಸಿತ ➤ ಓರ್ವ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಬಾವಿಗೆ ಬಿದ್ದ ವೃದ್ದೆ- ರಕ್ಷಣೆ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 14. ಆಕಸ್ಮಿಕವಾಗಿ ಬಾವಿಗೆ ಬಿದ್ದ ವೃದ್ಧೆಯೊಬ್ಬರನ್ನು ಅಗ್ನಿಶಾಮಕದಳ ಸಿಬ್ಬಂದಿ ರಕ್ಷಿಸಿದ ಘಟನೆ ಬಲ್ನಾಡಿನಲ್ಲಿ ಮಂಗಳವಾರದಂದು ನಡೆದಿದೆ.   ಬಾವಿಗೆ ಬಿದ್ದ ವೃದ್ದೆಯನ್ನು ಬಲ್ನಾಡು ನಿವಾಸಿ ಬಾಲಕ್ಕ ಎಂದು ಗುರುತಿಸಲಾಗಿದೆ. ಇವರು ಮಧ್ಯಾಹ್ನ ಊಟದ ಬಳಿಕ ನಾಪತ್ತೆಯಾಗಿದ್ದರು. ಮನೆ ಮಂದಿ ಹುಡುಕಾಡಿದಾಗ ಬಾವಿಯ ಹಗ್ಗ ಕೆಳಗೆ ಬಿದ್ದಿತ್ತು, ಇದನ್ನು ಗಮನಿಸಿ ಬಾವಿಗೆ ಇಣುಕಿದಾಗ ಬಾವಿಯೊಳಗೆ ಅವರು ಬಿದ್ದಿರುವುದು ತಿಳಿದುಬಂದಿದೆ. ತಕ್ಷಣವೇ ಮನೆಂಮದಿ ಅಗ್ನಿಶಾಮಕದಳದವರಿಗೆ ಕರೆ ಮಾಡಿದ್ದು, ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳದ ಠಾಣಾಧಿಕಾರಿ ವಿ.ಸುಂದರ್

ಪುತ್ತೂರು: ಬಾವಿಗೆ ಬಿದ್ದ ವೃದ್ದೆ- ರಕ್ಷಣೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮ್ಯಾಂಡಸ್ ಚಂಡಮಾರುತದ ಹಿನ್ನೆಲೆ ➤ ಮೀನುಗಾರಿಕಾ ದೋಣಿಗಳು ದಡ ಸೇರುವಂತೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 13. ಮ್ಯಾಂಡಸ್ ಚಂಡಮಾರುತದ ಪ್ರಭಾವದಿಂದಾಗಿ ಡಿ.16ರವರೆಗೆ ಅರಬ್ಬಿ ಸಮುದ್ರವು ಪ್ರಕ್ಷುಬ್ಧವಾಗಿರುತ್ತದೆ, ಈ ವೇಳೆ ಸಂಭವಿಸುವ ಅನಾಹುತವನ್ನು ತಡೆಗಟ್ಟುವ ಉದ್ದೇಶದಿಂದ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕಾ ದೋಣಿಗಳು ಕೂಡಲೇ ದಡ ಸೇರುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಂಗಳೂರು ಕೋಸ್ಟ್ ಗಾರ್ಡ್ ನೀಡಿರುವ ಹವಾಮಾನ ಮುನ್ಸೂಚನೆಯನ್ನು ಆಧರಿಸಿ ಎಚ್ಚರಿಕೆ ನೀಡಿದ್ದಾರೆ.

ಮ್ಯಾಂಡಸ್ ಚಂಡಮಾರುತದ ಹಿನ್ನೆಲೆ ➤ ಮೀನುಗಾರಿಕಾ ದೋಣಿಗಳು ದಡ ಸೇರುವಂತೆ ಸೂಚನೆ Read More »

ಕರಾವಳಿ, ಕರ್ನಾಟಕ

ಅನ್ಯಕೋಮಿನ ವಿದ್ಯಾರ್ಥಿಗೆ ಪತ್ರ ಬರೆದ ಪ್ರಕರಣ ➤ ವಿದ್ಯಾರ್ಥಿಗಳು ಅಮಾನತು

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 13. ಖಾಸಗಿ ವಿದ್ಯಾಸಂಸ್ಥೆಯ ಹಿಂದೂ ವಿದ್ಯಾರ್ಥಿನಿಯೋರ್ವಳು ಮುಸ್ಲಿಂ ಯುವಕನಿಗೆ ಪತ್ರ ಬರೆದ ವಿಚಾರವಾಗಿ ಗೊಂದಲವುಂಟು ಮಾಡಿದ ಎರಡು ಕೋಮಿನ ವಿದ್ಯಾರ್ಥಿಗಳನ್ನು ಅಮಾನತು ಮಾಡಿದ ಬಗ್ಗೆ ವರದಿಯಾಗಿದೆ. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಕೇಪು ಮೂಲದ ಹಿಂದೂ ವಿದ್ಯಾರ್ಥಿನಿ ಹಾಗೂ ಕೆಲಿಂಜದ ಮುಸ್ಲಿಂ ವಿದ್ಯಾರ್ಥಿ ನಡುವೆ ಪ್ರೇಮಾಂಕುರವಾಗಿದ್ದು, ಈ ಹಿಂದೆಯೇ ಪ್ರಾಂಶುಪಾಲರು ಇಬ್ಬರಿಗೂ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ. ಇದರ ಮುಂದುವರಿದ ಭಾಗವಾಗಿ ಬ್ಯಾಗ್ ನಲ್ಲಿ ಲವ್ ಲೆಟರ್ ಪತ್ತೆಯಾಗಿದ್ದು, ಎರಡು ಕೋಮಿನ

ಅನ್ಯಕೋಮಿನ ವಿದ್ಯಾರ್ಥಿಗೆ ಪತ್ರ ಬರೆದ ಪ್ರಕರಣ ➤ ವಿದ್ಯಾರ್ಥಿಗಳು ಅಮಾನತು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಲಾಡ್ಜ್ ವೊಂದರಲ್ಲಿ  ವ್ಯಾಪಾರಿಯೊಬ್ಬರ ಮೃತದೇಹ ಪತ್ತೆ  

 (ನ್ಯೂಸ್ ಕಡಬ) newskadaba.com   ಮಂಗಳೂರು, ಡಿ.13  ಲಾಡ್ಜ್ ವೊಂದರಲ್ಲಿ ವ್ಯಾಪಾರಿಯೊಬ್ಬರ ಮೃತದೇಹ ಮಲಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆ. ಮೃತರನ್ನು ಮೂಲತಃ ಕುಂಬಳೆ ನಿವಾಸಿ ಅಬ್ದುಲ್ ಕರೀಂ (55) ಎಂದು ಗುರುತಿಸಲಾಗಿದೆ. ನಗರದಲ್ಲಿ ವ್ಯಾಪಾರ ವಹಿವಾಟು ಹೊಂದಿದ್ದು, ನಿರಂತರ ಕರೆ ಮಾಡಿದರೂ ಸ್ವೀಕರಿಸಿಲ್ಲ ಎನ್ನಲಾಗಿದೆ.  ಸಂಶಯಗೊಂಡು ಲಾಡ್ಜ್ ಸಿಬ್ಬಂದಿ 11 ಗಂಟೆ ವೇಳೆ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ, ತನಿಖೆ ಮುಂದುವರೆದಿದೆ ಎಂದು ಕಮಿಷನರ್ ಮಾಹಿತಿ ನೀಡಿದ್ದಾರೆಂದು ತಿಳಿದುಬಂದಿದೆ..  

ಲಾಡ್ಜ್ ವೊಂದರಲ್ಲಿ  ವ್ಯಾಪಾರಿಯೊಬ್ಬರ ಮೃತದೇಹ ಪತ್ತೆ   Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಚರ್ಮ ಗಂಟುರೋಗ ಪ್ರಕರಣ ಪತ್ತೆ..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 13. ಜಾನುವಾರುಗಳನ್ನು ಕಾಡುತ್ತಿರುವ ಚರ್ಮಗಂಟು ರೋಗ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದ್ದು, ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ಹಸುಗಳು ರೋಗದಿಂದ ಬಳಲುತ್ತಿವೆ ಎಂದು ತಿಳಿದು ಬಂದಿದೆ.   ಜಿಲ್ಲೆಯ ಹಲವೆಡೆ ರೋಗ ಬಾಧಿಸಿದ್ದು, ಬೆಳ್ತಂಗಡಿ ತಾಲೂಕು ತೆಂಕಕಾರಂದೂರು ಗ್ರಾಮದ ಕಾಸಿಂ ಎಂಬುವರ ಗಿರ್ ಹಸುಗಳು ಚರ್ಮಗಂಟು ರೋಗದಿಂದ ಬಳಲುತ್ತಿರುವುದು ಕಂಡುಬಂದಿದೆ. ಹೋರಿಯು ಕಳೆದ ಒಂದು ವಾರದಿಂದ ಮಲಗಲು ಆಗದೇ ಪರಿತಪಿಸುತ್ತಿದ್ದು, ಚರ್ಮಗಂಟು ರೋಗದಿಂದ ಅದರ ಸ್ನಾಯುಗಳು, ನರಗಳು ಮಲಗಲು ಕೂಡ ಸಹಕರಿಸುತ್ತಿಲ್ಲ. ಸದ್ಯ

ಬೆಳ್ತಂಗಡಿ: ಚರ್ಮ ಗಂಟುರೋಗ ಪ್ರಕರಣ ಪತ್ತೆ..! Read More »

ಕರಾವಳಿ, ಕರ್ನಾಟಕ
Theft, crime, Robbery

ವಿಟ್ಲ: ಹಾಡಹಗಲೇ ಮಹಿಳೆಯ ಸರ ಕಿತ್ತು ಪರಾರಿಯಾದ ಕಳ್ಳ…!

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 13. ಮಹಿಳೆಯ ಸರ ಕಿತ್ತು ಪರಾರಿಯಾದ ಘಟನೆ ಇಡ್ಕಿದು ಗ್ರಾಮದ ಮಿತ್ತೂರು ರೈಲ್ವೇ ಬ್ರಿಡ್ಜ್ ಬಳಿ ನಡೆದಿದೆ. ಮಹಿಳೆಯೊಬ್ಬರು ಮಿತ್ತೂರಿನಲ್ಲಿ ಬಸ್ಸಿನಿಂದು ಇಳಿದು ಕೋಲ್ಪೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಎದುರಿನಿಂದ ಆಕ್ಟೀವಾದಲ್ಲಿ ಬಂದ ಕಂದು ಬಣ್ಣದ ಟೀ ಶರ್ಟ್‌ ಧರಿಸಿದ ಯುವಕನೋರ್ವ ಸರ ಎಳೆದುಕೊಂಡು ಹೋಗಿ ರಾಷ್ಟ್ರೀಯ ಹೆದ್ದಾರಿ ಮೂಲಕ ಪರಾರಿಯಾಗಿದ್ದಾನೆ ಎಂದು ಮಹಿಳೆ ತಿಳಿಸಿರುವುದಾಗಿ ವರದಿಯಾಗಿದೆ. ಈ ಕುರಿತು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಟ್ಲ: ಹಾಡಹಗಲೇ ಮಹಿಳೆಯ ಸರ ಕಿತ್ತು ಪರಾರಿಯಾದ ಕಳ್ಳ…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಲಾಡ್ಜ್ ನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 13. ಪಂಪ್‌ವೆಲ್‌ನ ಲಾಡ್ಜ್‌ವೊಂದರಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾದ ಘಟನೆ ಮಂಗಳವಾರದಂದು ವರದಿಯಾಗಿದೆ. ಮೃತರನ್ನು ಕಾಸರಗೋಡು ಮೂಲದ ಅಬ್ದುಲ್ ಕರೀಂ (56) ಎಂದು ಗುರುತಿಸಲಾಗಿದೆ. ಮೃತದೇಹದ ಪಕ್ಕದಲ್ಲಿ ಕೆಲವು ಮಾತ್ರೆಗಳು ಪತ್ತೆಯಾಗಿದ್ದು, ಈ ಹಿಂದೆ ಮಹಿಳೆಯೊಬ್ಬರು ಮೃತ ವ್ಯಕ್ತಿಯನ್ನು ಭೇಟಿಯಾಗಿದ್ದರು ಎಂದೂ ಪೊಲೀಸ್ ಮೂಲಗಳು ತಿಳಿಸಿವೆ.

ಮಂಗಳೂರು: ಲಾಡ್ಜ್ ನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Theft, crime, Robbery

ಮನೆ ಹಿಂಬಾಗಿಲು ಮುರಿದು 3.48 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 13. ಮನೆಯ ಹಿಂಬಾಗಿಲು ಮುರಿದು ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಡೈಮಂಡ್ ಹಾಗೂ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಉಡುಪಿಯ ಶಿವಳ್ಳಿ ಗ್ರಾಮ ಕುಂಜಿಬೆಟ್ಟು ಬಳಿ ನಡೆದಿದೆ.   ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಯ ಹಿಂಬಾಗಿಲು ಮುರಿದು ಒಳನುಗ್ಗಿದ ಕಳ್ಳರು ರೂಮ್‌ ನಲ್ಲಿದ್ದ ಅಲ್ಮೇರಾದ ಬಾಗಿಲನ್ನು ಮುರಿದು ತೆಗೆದು, ಗೋದ್ರೇಜ್‌ ಲಾಕರ್‌ ನಲ್ಲಿದ್ದ ಡೈಮಂಡ್‌ ಉಂಗುರ-1, 20 ಗ್ರಾಂ ತೂಕದ ಚಿನ್ನದ ಜುಮುಕಿ-2, 8 ಗ್ರಾಂ ತೂಕದ ಚಿನ್ನದ

ಮನೆ ಹಿಂಬಾಗಿಲು ಮುರಿದು 3.48 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರತಿಭಾ ಪ್ರದರ್ಶನ

(ನ್ಯೂಸ್ ಕಡಬ) newskadaba.com ಕಡಬ, ಡಿ. 13. ಇಲ್ಲಿನ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಬಹುಮಾನ ವಿತರಣೆ ಮತ್ತು ಪ್ರತಿಭಾ ಪ್ರದರ್ಶನ ಕಾರ್ಯಕ್ರಮವು ಸೈಂಟ್ ಜೋಕಿಮ್ಸ್ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಪ್ರಾಂಶುಪಾಲರಾದ ಅಮಿತ್ ಪ್ರಕಾಶ್ ರೋಡ್ರಿಗಸ್‌ರವರು ಮಾತನಾಡಿ, ಮಕ್ಕಳಿಗೆ ಸ್ಪರ್ಧೆಗಳು ಅವರ ಕಲಿಕೇತರ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ಎಷ್ಟು ತೊಡಗಿಸಿಕೊಂಡಿದ್ದಾರೆ ಎಂಬುದನ್ನು ಅಳೆಯುವುದಾಗಿದೆ. ಬಹುಮಾನ ಬಂತೆಂದು ಹಿಗ್ಗದೇ, ಬರಲಿಲ್ಲ ಎಂದು ಕುಗ್ಗದೇ ಸಮಾನವಾಗಿ ಸ್ವೀಕರಿಸಬೇಕು ಎಂದರು. ಅತಿಥಿಗಳಾಗಿ ಶಾಲೆಯ

ಕಡಬ: ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರತಿಭಾ ಪ್ರದರ್ಶನ Read More »

ಕರಾವಳಿ, ಕರ್ನಾಟಕ
Scroll to Top