ಕರಾವಳಿ

ನಾಳೆ (14): ದ.ಕ. ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.13. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಂಯುಕ್ತಾಶ್ರಯದಲ್ಲಿ 2022-23ನೇ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟವು ನಾಳೆ ಬೆಳಿಗ್ಗೆ 8 ಗಂಟೆಗೆ ನಗರದ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಇದರ ಉದ್ಘಾಟನೆಯನ್ನು ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ನೆರವೇರಿಸಲಿದ್ದಾರೆ. ಸಮಾಜ ಕಲ್ಯಾಣ ಮತ್ತು […]

ನಾಳೆ (14): ದ.ಕ. ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ Read More »

ಕರಾವಳಿ, ಕರ್ನಾಟಕ

ಸುಳ್ಯ ಮದುವೆಗೆ ತೆರಳುತ್ತಿದ್ದ ಕಾರು ಪಲ್ಟಿ ➤ ತಾಯಿ- ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 12. ಕಾರು ಪಲ್ಟಿಯಾದ ಪರಿಣಾಮ ತಾಯಿ- ಮಗು ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ಜಾಲ್ಸೂರು ಕಾಸರಗೋಡು ರಸ್ತೆಯ ಪರಪ್ಪೆ ಬಳಿ ನಡೆದಿದೆ.   ಮೃತಪಟ್ಟವರನ್ನು ಸುಳ್ಯದ ನಾವೂರು ಬೋರುಗುಡ್ಡೆ ಅಬ್ದುಲ್ಲಾ ಎಂಬವರ ಪುತ್ರಿ ಶಾಹಿನಾ (28) ಹಾಗೂ ಮಗು ಶಝಾ (3) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

ಸುಳ್ಯ ಮದುವೆಗೆ ತೆರಳುತ್ತಿದ್ದ ಕಾರು ಪಲ್ಟಿ ➤ ತಾಯಿ- ಮಗು ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಮೇರಿಕದಲ್ಲಿ ರೈಲು ಡಿಕ್ಕಿ ಪುತ್ತೂರಿನ ನಿವಾಸಿ ಮೃತ್ಯು

(ನ್ಯೂಸ್‌ ಕಡಬ) newskadaba.com ಪುತ್ತೂರು, ಡಿ. 12. ಪುತ್ತೂರು ಸಮೀಪದ ಬನ್ನೂರು ನಿವಾಸಿ, ಮೈಸೂರಿನ ಹಿರಿಯ ಹೊಟೇಲ್ ಉದ್ಯಮಿಯಾಗಿದ್ದ, ಅನಂತಕೃಷ್ಣ ರಾವ್ ಎಂಬವರ ಪುತ್ರ ಟಿ.ಎ ಸುಬ್ರಹ್ಮಣ್ಯ ಪಡ್ಡಿಲ್ಲಾಯ(30) ರವರು ಮೃತಪಟ್ಟ ವಿದ್ಯಾರ್ಥಿ. ಕಳೆದ ಎರಡು ವರ್ಷಗಳಿಂದ ಅಮೇರಿಕದಲ್ಲಿ ಉನ್ನತ ವ್ಯಾಸಾಂಗ ಮಾಡುತ್ತಿದ್ದರು. ಡಿ.11 ರಂದು ಅವರಿಗೆ ರೈಲು ಡಿಕ್ಕಿಯಾಗಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಅಮೇರಿಕದಲ್ಲಿ ರೈಲು ಡಿಕ್ಕಿ ಪುತ್ತೂರಿನ ನಿವಾಸಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Theft, crime, Robbery

ಕಡಬ: ನರ್ಸರಿಗೆ ನುಗ್ಗಿದ ಕಳ್ಳರು ➤ 25 ಸಾವಿರ ರೂ. ಮೌಲ್ಯದ ಗಿಡಗಳು ಕಳ್ಳರ ಪಾಲು

(ನ್ಯೂಸ್ ಕಡಬ) newskadaba.com ಕಡಬ, ಡಿ.12. ನರ್ಸರಿಯೊಂದರಿಂದ 25 ಸಾವಿರ ರೂ. ಮಿಕ್ಕಿದ ಬೆಲೆಬಾಳುವ ಗಿಡಗಳನ್ನು ಕದ್ದೊಯ್ದಿರುವ ಘಟನೆ ಭಾನುವಾರ ತಡರಾತ್ರಿ‌ ಕಡಬದಿಂದ ವರದಿಯಾಗಿದೆ. ಇಲ್ಲಿನ ಮುಖ್ಯ ಪೇಟೆಯ ಅನುಗ್ರಹ ಸಭಾ ಭವನದ ಮುಂಭಾಗದ ಪ್ಲ್ಯಾಂಟ್ ಝೋನ್ ನರ್ಸರಿಯಿಂದ ರಂಬುಟಾನ್ ಸೇರಿದಂತೆ ಬೆಲೆಬಾಳುವ ಗಿಡಗಳನ್ನು ಕಳ್ಳತನ ಮಾಡಲಾಗಿದ್ದು, ಈ ಬಗ್ಗೆ ನರ್ಸರಿ ಮಾಲಕರು ಕಡಬ ಠಾಣೆಗೆ ದೂರು ನೀಡಿದ್ದಾರೆ.

ಕಡಬ: ನರ್ಸರಿಗೆ ನುಗ್ಗಿದ ಕಳ್ಳರು ➤ 25 ಸಾವಿರ ರೂ. ಮೌಲ್ಯದ ಗಿಡಗಳು ಕಳ್ಳರ ಪಾಲು Read More »

ಕರಾವಳಿ

ರಿಕ್ಷಾ ಮತ್ತು ಕಾರಿನ ನಡುವೆ ಅಪಘಾತ ➤ಪರಾರಿಯಾಗಿದ್ದ ಆರೋಪಿಯ ಸೆರೆ

 (ನ್ಯೂಸ್ ಕಡಬ) newskadaba.com  ಬಂಟ್ವಾಳ, ಡಿ.12  ರಿಕ್ಷಾವೊಂದಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನನ್ನು ಟ್ರಾಫಿಕ್ ಪೋಲೀಸರು ವಶಕ್ಕೆ ಪಡೆದುಕೊಂಡ ಘಟನೆ ಮೆಲ್ಕಾರ್ ನಲ್ಲಿ ನಡೆದಿದೆ. ಪ್ರಕರಣದ ಆರೋಪಿಯನ್ನು ಮುಹಮ್ಮದ್ ಶೇಕ್ ಫೈಝಿಲ್ ಎಂದು ಗುರುತಿಸಲಾಗಿದೆ. ತಲಪಾಡಿ ಎಂಬಲ್ಲಿ ಬಿಸಿರೋಡಿನಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ರಿಕ್ಷಾಕ್ಕೆ ಹಿಂಬದಿಯಿಂದ ಕಾರೊಂದು ಡಿಕ್ಕಿಯಾಗಿ ಪರಾರಿಯಾಗಿತ್ತು. ಡಿಕ್ಕಿಯಾದ ರಭಸಕ್ಕೆ ರಿಕ್ಷಾ ಪಲ್ಟಿಯಾಗಿ ರಿಕ್ಷಾ ಚಾಲಕ ಪುರುಷೋತ್ತಮ ಹಾಗೂ ಪ್ರಯಾಣಿಕ ಹೃತಿಕ ಎಂಬರಿಗೆ ಗಾಯವಾಗಿದ್ದು, ಗಾಯಗೊಂಡವರು ಖಾಸಗಿ ಆಸ್ಪತ್ರೆಯಲ್ಲಿ ‌ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಳುಗಳು

ರಿಕ್ಷಾ ಮತ್ತು ಕಾರಿನ ನಡುವೆ ಅಪಘಾತ ➤ಪರಾರಿಯಾಗಿದ್ದ ಆರೋಪಿಯ ಸೆರೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಣಿಯೂರು ಪೇಟೆಯಲ್ಲಿ ಕಾಡಾನೆ ಪ್ರತ್ಯಕ್ಷ!

(ನ್ಯೂಸ್‌ ಕಡಬ) newskadaba.com ನೆರಿಯ, ಡಿ.12 ನೆರಿಯ ಪಂಚಾಯತ್ ವ್ಯಾಪ್ತಿಯ ಅಣಿಯೂರು ಪೇಟೆಯ ಸೇತುವೆ ಬಳಿಯ ನದಿಯಲ್ಲಿ ಕಾಡಾನೆ ಒಂದು ಡಿ. 12 ರಂದು ಪ್ರತ್ಯಕ್ಷವಾಗಿದೆ. ನಂತರ ಅಣಿಯೂರು ನದಿ ಮೂಲಕ ಹಾದು ನೆಕ್ಕರೆದಾರಿಯಾಗಿ ಹುಂಬಾಜೆ ಭಾಗಕ್ಕೆ ಹೋಗಿದೆ ಎಂದು ತಿಳಿದು ಬಂದಿದೆ.

ಅಣಿಯೂರು ಪೇಟೆಯಲ್ಲಿ ಕಾಡಾನೆ ಪ್ರತ್ಯಕ್ಷ! Read More »

ಕರಾವಳಿ

ಪುತ್ರನ ಸಾವಿನ ದುಃಖದಲ್ಲೂ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು

( ನ್ಯೂಸ್ ಕಡಬ ) newskadaba.com ಚಿಕ್ಕಮಗಳೂರು, ಡಿ.12 ಮೂಡಿಗೆರೆ ತಾಲೂಕಿನಲ್ಲಿ ಅಪಘಾತಕ್ಕಿಡಾಗಿ ಆಸ್ಪತ್ರೆಯಲ್ಲಿ ಸಾವುಬದುಕಿನ ಹೋರಾಟ ನಡೆಸುತ್ತಿದ್ದ ಧನ್ಯ ಕುಮಾರ್ ಮೃತಪಟ್ಟಿದ್ದಾನೆಂದು ತಿಳಿದುಬಂದಿದೆ. ಮಗನ ಸಾವಿನ ದುಃಖದಲ್ಲೂ ಪೋಷಕರು ಮಗನ ಅಂಗಾಂಗಗಳನ್ನು ದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ. ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದು, ಇತರೆ ಅಂಗಾಂಗಗಳಿಗೆ ಯಾವುದೇ ಹಾನಿಯಾಗಿಲ್ಲ. ಹೀಗಾಗಿ ಹೃದಯ, ಕಿಡ್ನಿ, ಲಿವರ್, ಕಣ್ಣು ಸೇರಿದಂತೆ ದೇಹದ ಪ್ರಮುಖ ಭಾಗಗಳ ಅಂಗಾಂಗ ದಾನ ಮಾಡಲು ಧನ್ಯ ಕುಮಾರ್ ಪೋಷಕರು ಒಪ್ಪಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ

ಪುತ್ರನ ಸಾವಿನ ದುಃಖದಲ್ಲೂ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಬಂಟ್ವಾಳ: ಅಪಘಾತವೆಸಗಿ ಪರಾರಿಯಾಗಿದ್ದ ಚಾಲಕನ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 12. ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರನ್ನು ಬಂಟ್ವಾಳ ಸಂಚಾರಿ ಪೊಲೀಸರು ಪತ್ತೆ ಹಚ್ಚಿದ್ದು, ಸ್ವಿಫ್ಟ್ ಕಾರು ಸಹಿತ ಚಾಲಕನನ್ನು ವಶಕ್ಕೆ ಪಡೆದ ಘಟನೆ ಬಿ ಸಿ ರೋಡಿನ ತಲಪಾಡಿ ಎಂಬಲ್ಲಿ ನಡೆದಿದೆ. ಬಂಧಿತನನ್ನು ಮೊಹಮ್ಮದ್ ಶೇಖ್ ಫೈಝಲ್ ಎಂದು ಗುರುತಿಸಲಾಗಿದೆ. ಈತ ಡಿ. 05ರಂದು ಬೆಳಗ್ಗೆ ಬಿ.ಸಿ.ರೋಡಿನ ತಲಪಾಡಿಯಲ್ಲಿ ತನ್ನ ಕಾರನ್ನು ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ. ಘಟನೆಯಲ್ಲಿ ರಿಕ್ಷಾ ಚಾಲಕ ಹಾಗೂ ಪ್ರಯಾಣಿಕ ಗಾಯಗೊಂಡಿದ್ದರು. ಆರೋಪಿಯು

ಬಂಟ್ವಾಳ: ಅಪಘಾತವೆಸಗಿ ಪರಾರಿಯಾಗಿದ್ದ ಚಾಲಕನ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕುಕ್ಕರ್ ಪ್ರಕರಣ ➤ನಾಲ್ವರ ಗುರುತು ಪತ್ತೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ.10  ಮಂಗಳೂರಿನಲ್ಲಿ ಕುಕ್ಕರ್ ಪ್ರಕರಣದ ಆರೋಪಿ ಶಾರೀಕ್ ಕೊಚ್ಚಿಯಲ್ಲಿ ವಿದೇಶಿಗ ಸಹಿತ ನಾಲ್ವರ ಸಂಪರ್ಕದಲ್ಲಿದ್ದನೆಂದು ರಾಷ್ಟ್ರೀಯ ತನಿಖಾ ಸಂಸ್ಥೆ ಅವರ ಗುರುತು ಪತ್ತೆಹಚ್ಚಿದ್ದು ಯಾವುದೇ ಮಾಹಿತಿ ನೀಡಲು ನಿರಾಕರಿಸಿದೆ ಎಂದು ವರದಿ ತಿಳಿಸಿದೆ. ಸ್ಪೋಟದ ಮುನ್ನ ಕೊಚ್ಚಿಗೆ ಹೋಗಿದ್ದು, ಅಲ್ಲಿ ವ್ಯವಹಾರ ನಡೆಸಿದವರ ಪೈಕಿ ನಾಲ್ವರ ಮಾಹಿತಿ ಲಭಿಸಿದ್ದು, ಇದರಲ್ಲಿ ಓರ್ವ ವಿದೇಶಿಗ, ಇಬ್ಬರು ಕೇರಳಿಯರು ಮತ್ತು ತಮಿಳುನಾಡು ನಿವಾಸಿಗಳು ಎಂದು ಪೊಲೀಸ್ ಇಲಾಖೆ ತಿಳಿಸಿದೆ.        

ಕುಕ್ಕರ್ ಪ್ರಕರಣ ➤ನಾಲ್ವರ ಗುರುತು ಪತ್ತೆ Read More »

ಕರಾವಳಿ, ಕರ್ನಾಟಕ

ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ

(ನ್ಯೂಸ್ ಕಡಬ) newskadaba.com ಕುಂತೂರು, ಡಿ. 10. ಇಲ್ಲಿನ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿಶ್ವ ಮಾನವ ಹಕ್ಕುಗಳ ದಿನವನ್ನು ಮಾನವ ಹಕ್ಕುಗಳ ಸಂಘದ ವತಿಯಿಂದ ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು.   ಕಾರ್ಯಕ್ರಮದ ಅಧಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಉಷಾ ಎಂ.ಎಲ್ ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾನವ ಹಕ್ಕುಗಳ ಮಹತ್ವ ಮತ್ತು ಪ್ರಸ್ತುತತೆಯನ್ನು ಪ್ರಶಿಕ್ಷಣಾರ್ಥಿಗಳಿಗೆ ವಿವರಿಸಿದರು. ಪ್ರಶಿಕ್ಷಣಾರ್ಥಿ ತಷ್ಪಿಯತ್ ಮಾನವ ಹಕ್ಕುಗಳ ದಿನದ ಕುರಿತು ಸವಿವರವಾಗಿ ಮಾತನಾಡಿದರು. ಪ್ರಶಿಕ್ಷಣಾರ್ಥಿಗಳು ಸಮೂಹ ಗೀತೆಯನ್ನು ಹಾಡಿದರು. ಮಾನವ

ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ Read More »

ಕರಾವಳಿ, ಕರ್ನಾಟಕ
Scroll to Top