ಕರಾವಳಿ

ಮಂಗಳೂರು: ಕೊರಗಜ್ಜ ಕ್ಷೇತ್ರಕ್ಕೆ ನಟ ಶಿವರಾಜ್ ಕುಮಾರ್ ಭೇಟಿ

(ನ್ಯೂಸ್ ಕಡಬ) newskadaba.com ಉಳ್ಳಾಲ, ಡಿ. 10. ಕರಾವಳಿಯ ಕಾರಣೀಕ ಶಕ್ತಿ ಕೊರಗಜ್ಜ ದೈವದ ಆದಿಸ್ಥಳ ಕುತ್ತಾರು ದೆಕ್ಕಾಡಿಗೆ ನಟ ಶಿವರಾಜ್ ಕುಮಾರ್ ಅವರು ಕುಟುಂಬ ಸಮೇತ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.   ‘ವೇದ’ ಸಿನಿಮಾದ ಫ್ರೀ ರಿಲೀಸ್ ಇವೆಂಟ್ ಗೆ ಮಂಗಳೂರಿಗೆ ಆಗಮಿಸಿರುವ ಶಿವರಾಜ್ ಕುಮಾರ್ ಅವರು, ಮೊದಲ ಬಾರಿಗೆ ಪತ್ನಿ ಗೀತಾ ಹಾಗೂ ಕುಟುಂಬಸ್ಥರೊಂದಿಗೆ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು, ಇವತ್ತು ವೇದ ಈವೆಂಟ್ […]

ಮಂಗಳೂರು: ಕೊರಗಜ್ಜ ಕ್ಷೇತ್ರಕ್ಕೆ ನಟ ಶಿವರಾಜ್ ಕುಮಾರ್ ಭೇಟಿ Read More »

ಕರಾವಳಿ, ಕರ್ನಾಟಕ

ಬಾಲಗಂಗಾಧರನಾಥ ಸ್ವಾಮೀಜಿಯವರಿಗೆ ಅವರೇ ಸಾಟಿ – ಧರ್ಮಪಾಲನಾಥ ಸ್ವಾಮೀಜಿ ➤ಆದಿಚುಂಚನಗಿರಿ ಭೈರವೈಕ್ಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ೭೮ ನೇ ಜಯಂತ್ಯೋತ್ಸವ ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಡಿ.10  ಸುಧೀರ್ಘ ಇತಿಹಾಸ ಹಾಗೂ ಪರಂಪರೆಯನ್ನು ಹೊಂದಿರುವ ನಾಥ ಪರಂಪರೆಯ ೭೨ ಜಗದ್ಗುರುಗಳನ್ನು ಕಂಡಿರುವ ಪ್ರಾಚೀನ ಇತಿಹಾಸ ಹೊಂದಿರುವ ಆದಿಚುಂಚನಗಿರಿ ಧರ್ಮ ಪೀಠವನ್ನು  ಭೈರವೈಕ್ಯರಾಗಿರುವ ಬಾಲಗಂಗಾಧರನಾಥ ಸ್ವಾಮೀಜಿಯವರು ಅಲಂಕರಿಸಿದ ಬಳಿಕ ಅಭೂತಪೂರ್ವ ಸಾಧನೆ ಮಾಡಿರುವ  ಸ್ವಾಮೀಜಿಯವರಿಗೆ ಅವರೇ ಸಾಟಿ ಬೇರೆ ಯಾರೂ ಇಲ್ಲ ಎಂದು ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ನುಡಿದರು. ಅವರು ಶುಕ್ರವಾರ ಕಡಬ ಒಕ್ಕಲಿಗ ಗೌಡ ಸಮುದಾಯವ ಭವನದಲ್ಲಿ ದಶಂಬರ್ ೨೨ ರಂದು ಪುತ್ತೂರಿನಲ್ಲಿ

ಬಾಲಗಂಗಾಧರನಾಥ ಸ್ವಾಮೀಜಿಯವರಿಗೆ ಅವರೇ ಸಾಟಿ – ಧರ್ಮಪಾಲನಾಥ ಸ್ವಾಮೀಜಿ ➤ಆದಿಚುಂಚನಗಿರಿ ಭೈರವೈಕ್ಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ೭೮ ನೇ ಜಯಂತ್ಯೋತ್ಸವ ಪೂರ್ವಭಾವಿ ಸಭೆ Read More »

ಕರಾವಳಿ, ಕರ್ನಾಟಕ

ಬಸ್ – ಸ್ಕೂಟರ್ ನಡುವೆ ಢಿಕ್ಕಿ ➤ ಪವಾಡಸದೃಶ ಪಾರಾದ ಯುವತಿಯರು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 10. ಶಾಲಾ ಬಸ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ಸಂಭವಿಸಿ, ಸ್ಕೂಟರ್ ಬಸ್ ನಡಿಗೆ ಸಿಲುಕಿದ ಘಟನೆ ನಗರದ ಪಿವಿಎಸ್ ಜಂಕ್ಷನ್ ನಲ್ಲಿ ಶನಿವಾರದಂದು ಮಧ್ಯಾಹ್ನ ನಡೆದಿದೆ.   ಘಟನೆಯ ರಭಸಕ್ಕೆ ಸ್ಕೂಟರ್ ಬಸ್ ನಡಿಗೆ ಸಿಲುಕಿದ್ದು, ಅದೃಷ್ಟವಶಾತ್ ಸ್ಕೂಟರ್ ನಲ್ಲಿದ್ದ ಇಬ್ಬರು ಯುವತಿಯರು ಪಾರಾಗಿದ್ದಾರೆ ಎನ್ನಲಾಗಿದೆ.

ಬಸ್ – ಸ್ಕೂಟರ್ ನಡುವೆ ಢಿಕ್ಕಿ ➤ ಪವಾಡಸದೃಶ ಪಾರಾದ ಯುವತಿಯರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಡಿ.11 ರಂದು ಶ್ವಾನ ಪ್ರದರ್ಶನ

(ನ್ಯೂಸ್ ಕಡಬ) newskadaba.com ಮಂಗಳೂರು ಡಿ.10 ಕರಾವಳಿ ಕೆನೈನ್ ಕ್ಲಬ್ ಆಶ್ರಯದಲ್ಲಿ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಇದೇ 11ರಂದು ಬೆಳಿಗ್ಗೆ 9ಕ್ಕೆ ಶ್ವಾನಗಳ ರಾಷ್ಟ್ರಮಟ್ಟದ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ವರದಿಯಾಗಿದೆ.   ಶಾಸಕ ಡಿ. ವೇದವ್ಯಾಸ್ ಕಾಮತ್ ಕಾರ್ಯಕ್ರವನ್ನು ಉದ್ಘಾಟಿಸಿ, ಪಾಲಿಕೆ ಸಚೇತಕ ಪ್ರೇಮಾನಂದ ಶೆಟ್ಟಿ ಮತ್ತು ಶ್ವೇತಾ ಪರೇಕ್ ಭಾಗವಹಿಸುವರು. ಕೊರಿಯ ದೇಶದ ಚೂಂಗ್-ಗೀ ಎಎಚ್ಎನ್ ಮತ್ತು ವೊಂಗ್ ಜಾಂಗ್ ಲೀ ಅವರು ಶ್ವಾನ ಪ್ರದರ್ಶನದ ಮುಖ್ಯ ತೀರ್ಪುಗಾರರಾಗಿರುವರು ಎಂದು ತಿಳಿದುಬಂದಿದೆ. ವಿವಿಧ ತಳಿಗಳ

ಡಿ.11 ರಂದು ಶ್ವಾನ ಪ್ರದರ್ಶನ Read More »

ಕರಾವಳಿ, ಕರ್ನಾಟಕ

ಡಿ.17 ರಂದು ಬೆಳ್ತಂಗಡಿಗೆ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಮಂಗಳೂರು ಡಿ.10 ವಿಧಾನಸಭೆಯ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇದೇ 17ರಂದು ಬೆಳ್ತಂಗಡಿಗೆ ಭೇಟಿ ನೀಡಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ. ಬೆಳ್ತಂಗಡಿಯಲ್ಲಿ 17ರಂದು ಏರ್ಪಡಿಸಿರುವ ತಾಲ್ಲೂಕು ಮಟ್ಟದ ಕಬಡ್ಡಿ ಟೂರ್ನಿಯನ್ನು ಸಿದ್ದರಾಮಯ್ಯ ಉದ್ಘಾಟಿಸುವರು. ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲೂ ಅವರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.        

ಡಿ.17 ರಂದು ಬೆಳ್ತಂಗಡಿಗೆ ಸಿದ್ದರಾಮಯ್ಯ Read More »

ಕರಾವಳಿ, ಕರ್ನಾಟಕ

ಆಭರಣ ಉತ್ಪಾದನಾ ಘಟಕದಿಂದ ಕಳ್ಳತನ ➤ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com  ಮಂಗಳೂರು ಡಿ.10  ಆಭರಣ ಉತ್ಪಾದನಾ ಘಟಕದಿಂದ ಸುಮಾರು 7 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ವ್ಯಕ್ತಿಯನ್ನು ಬಂಧಿಸಲಾದ ಘಟನೆ ವರದಿಯಾಗಿದೆ. ಬಂಧಿತ ವ್ಯಕ್ತಿಯನ್ನು ಪಶ್ಚಿಮ ಬಂಗಾಳದ ಮೇದಿನಿಪರ ಜಿಲ್ಲೆಯ ಸುಭಾಶಿಶ್ ಬೇರಾ(38) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಭರಣ ತಯಾರಿಕಾ ಘಟಕದ ಮಾಜಿ ಕೆಲಸಗಾರನಾಗಿದ್ದ ಬೇರಾ ಮುಖ್ಯ ಬಾಗಿಲು ಒಡೆದು ಒಳಗಿದ್ದ ಬೆಲೆಬಾಳುವ ವಸ್ತುಗಳನ್ನು ತೆಗೆದುಕೊಂಡು ಪರಾರಿಯಾಗಿದ್ದ ಎಂದು ತಿಳಿದುಬಂದಿದೆ. ಆರೋಪಿಯನ್ನು ಬಂಧಿಸಿದಾಗ

ಆಭರಣ ಉತ್ಪಾದನಾ ಘಟಕದಿಂದ ಕಳ್ಳತನ ➤ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಸಿಮೆಂಟ್ ಮಿಶ್ರಣದ ಲಾರಿ ಮನೆಯಂಗಳಕ್ಕೆ ಪಲ್ಟಿ..! ➤ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 10. ಸಿಮೆಂಟ್ ಮಿಶ್ರಣ ಮಾಡುವ ಲಾರಿಯೊಂದು ಮನೆಯಂಗಳಕ್ಕೆ ಬಿದ್ದ ಪರಿಣಾಮ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಬಂಟ್ವಾಳದ ಕುಮ್ಡೇಲು ಎಂಬಲ್ಲಿ ನಡೆದಿದೆ.   ಕುಮ್ಡೆಲು ಎಂಬಲ್ಲಿ ಎದುರಿನಿಂದ ಬಂದ ವಾಹನವೊಂದಕ್ಕೆ ಸೈಡ್ ಕೊಡುವ ಭರದಲ್ಲಿ ರಸ್ತೆಯ ಬದಿಗೆ ಸರಿದ ಲಾರಿಯು ನಿಯಂತ್ರಣ ಕಳೆದುಕೊಂಡು ಮನೆಯಂಗಳಕ್ಕೆ ಉರುಳಿ ಬಿದ್ದಿದೆ. ಘಟನೆಯಿಂದ ಮನೆಯವರ ಕಂಪೌಂಡ್ ಜರಿದು ಬಿದ್ದು ನಷ್ಟ ಉಂಟಾಗಿದ್ದು, ಆದರೆ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಬಂಟ್ವಾಳ: ಸಿಮೆಂಟ್ ಮಿಶ್ರಣದ ಲಾರಿ ಮನೆಯಂಗಳಕ್ಕೆ ಪಲ್ಟಿ..! ➤ ಚಾಲಕ ಅಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಯುವಕನ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com  ಕಲಬುರಗಿ , ಡಿ.10. ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ  ಮರಗುತ್ತಿ ಗ್ರಾಮದ ಎಂ.ಎಂ. ಗಾರ್ಡನ್ ಬಳಿ ನಡೆದಿದೆ. ಕೊಲೆಯಾದವರನ್ನು ಮಾಲಗತ್ತಿ ನಿವಾಸಿ ಬಸವರಾಜ್ ಅಂಬಲಗಿ (35) ಎಂದು ಗುರುತಿಸಲಾಗಿದೆ. ಈತನನ್ನು ದುಷ್ಕರ್ಮಿಗಳು ಕೊಲೆಗೈದಿದ್ದು.  ಕೊಲೆಗೆ ಕಾರಣವೇನೆಂದು ತಿಳಿದು ಬಂದಿಲ್ಲ.  ಆರೋಪಿಗಳಿಗಾಗಿ ಹುಡುಕಾಟ ಮುಂದುವರೆದಿದ್ದು ಈ ಕುರಿತು ಗುವಿವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುವಕನ ಬರ್ಬರ ಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ನಟ ಶಿವರಾಜ್ ಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ.10  ಕನ್ನಡದ ಖ್ಯಾತ ಚಿತ್ರ ನಟ ಡಾ|| ಶಿವರಾಜ್ ಕುಮಾರ್ ರವರು ಧರ್ಮಸ್ಥಳದ ಶ್ರೀ ಮಂಜುನಾಥನ ಸನ್ನಿಧಾನಕ್ಕೆ ಕುಟುಂಬ ಸಮೇತ ಭೇಟಿ ನೀಡಿ ದೇವರ ದರ್ಶನ ಪಡೆದರು.   ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿದ ಅವರು ಶ್ರೀ  ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಪತ್ನಿ ಗೀತಾ ಶಿವರಾಜ್ ಕುಮಾರ್, ಪುತ್ರಿಯರಾದ ನಿರುಪಮ ರಾಜ್ ಕುಮಾರ್ , ನಿವೇದಿತ ರಾಜ್ ಕುಮಾರ್

ನಟ ಶಿವರಾಜ್ ಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ Read More »

ಕರಾವಳಿ, ಕರ್ನಾಟಕ

ಬಸ್ ಅಪಘಾತ ➤ಓರ್ವ ಮಹಿಳೆ ಬಲಿ …!!!!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 10. ಬಸ್ ಚಾಲಕನ ನಿರ್ಲಕ್ಷದಿಂದಾಗಿ ಓರ್ವ ಮಹಿಳೆ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ.     ಮೃತ ಮಹಿಳೆಯನ್ನು ಮೇಘ ರಂಜಿತ್(34) ಎಂದು ಗುರುತಿಸಲಾಗಿದೆ. ಚಾಲಕನ ಅತಿವೇಗದ ಚಾಲನೆಯೇ ಘಟನೆಗೆ ಕಾರಣ ಎನ್ನಲಾಗಿದೆ. ಈ ಕುರಿತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಸಮೀಪದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.      

ಬಸ್ ಅಪಘಾತ ➤ಓರ್ವ ಮಹಿಳೆ ಬಲಿ …!!!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top