ಕರಾವಳಿ

ವ್ಯಕ್ತಿ ನಾಪತ್ತೆ     ➤ಪತ್ತೆಗೆ ಮನವಿ

(ನ್ಯೂಸ್ ಕಡಬ) newskadaba.com ಮಲ್ಪೆ, ಡಿ.09 ಕೆಲಸಕ್ಕೆಂದು ಮಲ್ಪೆ ಬಂದರಿಗೆ ಬಂದಿದ್ದ ಕೇರದ ಮೂಲದ ವ್ಯಕ್ತಿಯೊಬ್ಬರು ಹಲವು ತಿಂಗಳುಗಳಿಂದ ನಾಪತ್ತೆಯಾಗಿರುವ ಕುರಿತು ವರದಿಯಾಗಿದೆ. ನಾಪತ್ತೆಯಾದವರನ್ನು ಕೃಷ್ಣ(48) ಎಂದು ಗುರುತಿಸಲಾಗಿದೆ. ಈತನ ಪತ್ನಿ, ಮಕ್ಕಳು ಮಲ್ಪೆಗೆ ಹುಡುಕಿಕೊಂಡು ಬಂದಿದ್ದು, ಇವರ ಕುರಿತು ಮಾಹಿತಿ ದೊರಕಿದ್ದಲ್ಲಿ ಮಲ್ಪೆ ಪೊಲೀಸ್ ಠಾಣೆಗೆ ತಿಳಿಸುವಂತೆ ಕೋರಲಾಗಿದೆ.

ವ್ಯಕ್ತಿ ನಾಪತ್ತೆ     ➤ಪತ್ತೆಗೆ ಮನವಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಡಿ. 14ರಿಂದ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 09. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಸಾರ್ವಜನಿಕರಿಂದ ದೂರು ಪಡೆಯಲು ಕರ್ನಾಟಕ ಲೋಕಾಯುಕ್ತದ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಇದೇ ಡಿ.14ರಿಂದ ಜಿಲ್ಲೆಯ ವಿವಿಧ ತಾಲೂಕುಗಳ ಪ್ರವಾಸ ಕೈಗೊಂಡಿದ್ದಾರೆ. ವಿವರ ಇಂತಿದೆ: ಡಿ.14ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಬಂಟ್ವಾಳ ತಾಲೂಕು ಕಚೇರಿಯಲ್ಲಿ, ಡಿ.16ರಂದು ಬೆಳಿಗ್ಗೆ

ಡಿ. 14ರಿಂದ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ Read More »

ಕರಾವಳಿ, ಕರ್ನಾಟಕ

ಪ್ರೇಮಕ್ಕೆ ತಿರುಗಿದ ಇನ್ಸ್ಟಾಗ್ರಾಮ್ ಪರಿಚಯ ➤ ಲೈಂಗಿಕ ದೌರ್ಜನ್ಯ- ದೂರು ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ 09. ಇನ್‌ ಸ್ಟಾಗ್ರಾಮ್‌ ಮೂಲಕ ಪರಿಚಯವಾದ ಕಾನೂನು ಸಂಘರ್ಷಕ್ಕೊಳಗಾಗಿದ್ದ ಬಾಲಕನೋರ್ವ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.   ಎಸೆಸೆಲ್ಸಿ ವ್ಯಾಸಂಗ ಮಾಡುತ್ತಿದ್ದ ಬಾಲಕಿಯೋರ್ವಳಿಗೆ ಕಾನೂನು ಸಂಘರ್ಷಕ್ಕೊಳಗಾದ ಬಾಲಕನು ಇನ್‌ಸ್ಟಾ ಗ್ರಾಮ್‌ ಮೂಲಕ ಪರಿಚಯವಾಗಿದ್ದು, ಬಳಿಕ ಆಗಾಗ್ಗೆ ಆತ ಬಾಲಕಿ ಮನೆಗೆ ಹೊಗಿ ಬರುತ್ತಿದ್ದ ಎನ್ನಲಾಗಿದೆ. ಕಳೆದ ಡಿ.02ರಂದು ರಾತ್ರಿ 8.30ರ ಸುಮಾರಿಗೆ ಬಾಲಕಿಯ ಮನೆಗೆ ಬಂದ ಆತ ಆಕೆಯನ್ನು ಸ್ಕೂಟರ್‌ನಲ್ಲಿ

ಪ್ರೇಮಕ್ಕೆ ತಿರುಗಿದ ಇನ್ಸ್ಟಾಗ್ರಾಮ್ ಪರಿಚಯ ➤ ಲೈಂಗಿಕ ದೌರ್ಜನ್ಯ- ದೂರು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಅಕ್ರಮ ಮರಳುಗಾರಿಕೆ ಅಡ್ಡೆಗೆ ಲೋಕಾಯುಕ್ತ ದಾಳಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 09. ನೇತ್ರಾವತಿ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಗೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಮರಳು ತೆಗೆಯಲು ಉಪಯೋಗಿಸುತ್ತಿದ್ದ ದೋಣಿ ಹಾಗೂ ಲಾರಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.   ಇಲ್ಲಿ ನಡೆಯುತ್ತಿರುವ ಅಕ್ರಮ ಮರಳು ದಂಧೆಯ ಕುರಿತ ದೂರುಗಳು ಕೇಳಿಬಂದ ಹಿನ್ನೆಲೆ, ನೇತ್ರಾವತಿ ಸ್ನಾನಘಟ್ಟದ ಸಮೀಪ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ವೇಳೆ ಅಧಿಕಾರಿಗಳು ದಾಳಿ ನಡೆಸಿದ್ದು, ಘಟ‌ನಾ ಸ್ಥಳದಿಂದ ಮರಳು ತುಂಬಿದ ಒಂದು ಲಾರಿ, ಮರಳು ತುಂಬಲು ನಿಲ್ಲಿಸಲಾಗಿದ್ದ ಮತ್ತೊಂದು

ಬೆಳ್ತಂಗಡಿ: ಅಕ್ರಮ ಮರಳುಗಾರಿಕೆ ಅಡ್ಡೆಗೆ ಲೋಕಾಯುಕ್ತ ದಾಳಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಂಡಮಾರುತದ ಹಿನ್ನೆಲೆ ➤ ಕರಾವಳಿಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.09  ಬಂಗಾಲಕೊಳ್ಳಿಯಲ್ಲಿ ಚಂಡಮಾರುತದ ಹಿನ್ನೆಲೆಯಲ್ಲಿ ಬೆಂಗಳೂರು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಡಿ.12 ರವರೆಗೆ ಗುಡುಗು ಮತ್ತು ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ವರದಿ ತಿಳಿಸಿದೆ. ನೈಋತ್ಯ ಹಾಗೂ ಆಗ್ನೇಯ ಬಂಗಾಲಕೊಲ್ಲಿಯಲ್ಲಿ ಎದ್ದಿರುವ ಭಾರಿ ಚಂಡಮಾರುತದಿಂದ ನೆರೆಯ ರಾಜ್ಯಗಳಾದ ತಮಿಳುನಾಡು ,ಪುದುಚೇರಿ ಹಾಗೂ ಆಂಧ್ರಪ್ರದೇಶದ ಕರಾವಳಿ ಬಾಗದಲ್ಲಿ ಭಾರಿ ಮಳೆಯಾಗುತ್ತಿದ್ದು,  ಇದರ ಪರಿಣಾಮ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು, ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರು

ಚಂಡಮಾರುತದ ಹಿನ್ನೆಲೆ ➤ ಕರಾವಳಿಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಬುರ್ಖಾ ಧರಿಸಿ ಡ್ಯಾನ್ಸ್ ➤ ನಾಲ್ವರು ವಿದ್ಯಾರ್ಥಿಗಳು ಅಮಾನತು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 09. ನಗರದ  ಖಾಸಗಿ ಕಾಲೇಜೊಂದರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಬುರ್ಖಾ ಧರಿಸಿ ಐಟಂ ಡ್ಯಾನ್ಸ್ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ ನಾಲ್ವರು ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿರುವುದಾಗಿ ವರದಿಯಾಗಿದೆ.   ಈ ಕಾಲೇಜಿನಲ್ಲಿ ಡಿ. 07ರಂದು ಸಂಜೆ ಕಾರ್ಯಕ್ರಮ ನಡೆದಿದ್ದು, ಇದಾದ ಬಳಿಕ ನಾಲ್ವರು ವಿದ್ಯಾರ್ಥಿಗಳು ಬುರ್ಖಾ ಧರಿಸಿ ವೇದಿಕೆಯೇರಿ ನೃತ್ಯ ಪ್ರದರ್ಶನ ಮಾಡಿದ್ದರು. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಕಾಲೇಜು ಆಡಳಿತ ಮಂಡಳಿ ಆಂತರಿಕ

ಮಂಗಳೂರು: ಬುರ್ಖಾ ಧರಿಸಿ ಡ್ಯಾನ್ಸ್ ➤ ನಾಲ್ವರು ವಿದ್ಯಾರ್ಥಿಗಳು ಅಮಾನತು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

17 ಕೋಟಿ ರೂ. ವೆಚ್ಚದಲ್ಲಿ ಪಯಸ್ವಿನಿ ನದಿಗೆ ಕಿಂಡಿ ಅಣೆಕಟ್ಟು ನಿರ್ಮಾಣ ➤ ಸಚಿವ ಅಂಗಾರರಿಂದ ಗುದ್ದಲಿಪೂಜೆ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 09. ಇಲ್ಲಿನ ಪಯಸ್ವಿನಿ ನದಿಗೆ 17 ಕೋಟಿ ರೂ. ವೆಚ್ಚದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣವಾಗಲಿದ್ದು, ಇದರ ಕಾಮಗಾರಿಗೆ ಸಚಿವ ಅಂಗಾರ ರವರು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮೀನುಗಾರಿಕಾ ನಿಗಮಾಧ್ಯಕ್ಷ ಎ.ವಿ ತೀರ್ಥರಾಮ, ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ಅಧಿಕಾರಿಗಳು, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

17 ಕೋಟಿ ರೂ. ವೆಚ್ಚದಲ್ಲಿ ಪಯಸ್ವಿನಿ ನದಿಗೆ ಕಿಂಡಿ ಅಣೆಕಟ್ಟು ನಿರ್ಮಾಣ ➤ ಸಚಿವ ಅಂಗಾರರಿಂದ ಗುದ್ದಲಿಪೂಜೆ Read More »

ಕರಾವಳಿ, ಕರ್ನಾಟಕ

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ➤ ಚಾಲಕ ಪಾರು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಡಿ. 09. ಸ್ವಿಫ್ಟ್ ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಘಟನೆ ರಾ.ಹೆ 75ರ ಗೋಳಿತೊಟ್ಟು ಸರಕಾರಿ ಶಾಲೆಯ ಮುಂಭಾಗದಲ್ಲಿ ನಡೆದಿದೆ. ಇಲ್ಲಿನ ಪಿ.ಎಸ್.ಸ್ಟೋರ್ ಮಾಲಕ ಪಿ.ಎಸ್ ಮುಹಮ್ಮದ್ ಎಂಬವರು ಉಪ್ಪಿನಂಗಡಿಯಿಂದ ಮರಳಿ ಗೋಳಿತೊಟ್ಟು ಕಡೆಗೆ ಬರುತ್ತಿದ್ದ ವೇಳೆ ರಸ್ತೆಗೆ ಅಡ್ಡಬಂದ ನಾಯಿಯನ್ನು ತಪ್ಪಿಸುವ ಭರದಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗಿದೆ. ಘಟನೆಯಿಂದ ಕಾರು ಜಖಂಗೊಂಡಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ➤ ಚಾಲಕ ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ಪಲ್ಟಿ ➤ ಸಹ ಸವಾರನಿಗೆ ಗಾಯ

(ನ್ಯೂಸ್ ಕಡಬ ) newskadaba. com  ನೆಲ್ಯಾಡಿ .ಡಿ.09.  ಬೈಕ್ ಪಲ್ಟಿಯಾದ ಪರಿಣಾಮ ಸಹ ಸವಾರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ. ಗಾಯಗೊಂಡ ಸಹ ಸವಾರನನ್ನು ಹರಿದಾಸನ್ ಎಂದು ಗುರುತಿಸಲಾಗಿದೆ.  ಈತ ಶಿರಾಡಿಯಿಂದ ಗುಂಡ್ಯಕ್ಕೆ ಸಿನು ಎಂಬುವರ ಜೊತೆ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಗುಂಡ್ಯ ಸಮೀಪ  ಈ ಘಟನೆ ನಡೆದಿದೆ. ಈ ಕುರಿತು ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಬೈಕ್ ಪಲ್ಟಿ ➤ ಸಹ ಸವಾರನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಪುಣ್ಚತ್ತಾರು: ಆಕ್ಟಿವಾ ಹಾಗೂ ಬೈಕ್ ನಡುವೆ ಅಪಘಾತ

(ನ್ಯೂಸ್ ಕಡಬ) newskadaba.com ಕಾಣಿಯೂರು, ಡಿ. 09. ಬೈಕ್ ಮತ್ತು ಆಕ್ಟಿವಾ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಆಕ್ಟಿವಾ ಸವಾರ ಗಾಯಗೊಂಡ ಘಟನೆ ಪುಣ್ಚತ್ತಾರಿನಲ್ಲಿ ನಡೆದಿದೆ. ಪುತ್ತೂರಿನಿಂದ ಸುಬ್ರಹ್ಮಣ್ಯ ಕಡೆಗೆ ಹೋಗುತ್ತಿದ್ದ ಬೈಕ್ ಮತ್ತು ದೋಳ್ಪಾಡಿ ಕಡೆಯಿಂದ ಪುಣ್ಚತ್ತಾರು ಕಡೆಗೆ ಬರುತ್ತಿದ್ದ ಆಕ್ಟಿವಾ ಮಧ್ಯೆಅಪಘಾತ ಸಂಭವಿಸಿದೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

ಪುಣ್ಚತ್ತಾರು: ಆಕ್ಟಿವಾ ಹಾಗೂ ಬೈಕ್ ನಡುವೆ ಅಪಘಾತ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top