ಕರಾವಳಿ

ಪ.ಜಾ, ಪ.ಪಂ ಕಾರ್ಮಿಕರ ಸಹಾಯಧನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 06. ಸಹಾಯಧನದಲ್ಲಿ ಮಿಶ್ರ ತಳಿ ಹಸು, ಸುಧಾರಿತ ತಳಿ ಎಮ್ಮೆ ಘಟಕ ಹಾಗೂ ಕುರಿ, ಮೇಕೆ ಘಟಕ ವಿತರಣೆಗೆ ಡಿ.30ರೊಳಗೆ ಅರ್ಜಿ ಆಹ್ವಾನಿಸಲಾಗಿದೆ.   ಹಸು, ಎಮ್ಮೆ ಘಟಕದ ವೆಚ್ಚ 60,000 ರೂ. ಹಾಗೂ ಕುರಿ, ಮೇಕೆ ಘಟಕದ ವೆಚ್ಚ 66,000 ರೂ.ಗಳು. ಪ.ಜಾತಿ ಮತ್ತು ಪ.ಪಂಗಡ ವರ್ಗಕ್ಕೆ ಸೇರಿದ ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು ಮತ್ತು ಪಶುಸಂಗೋಪನೆಯಲ್ಲಿ ತೊಡಗಿದವರು ಸಂಬಂಧಿಸಿದ ತಾಲೂಕು ಪಶು ಆಸ್ಪತ್ರೆಯಿಂದ ಅರ್ಜಿ ಪಡೆದು, ಭರ್ತಿ […]

ಪ.ಜಾ, ಪ.ಪಂ ಕಾರ್ಮಿಕರ ಸಹಾಯಧನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಪುತ್ತೂರು: ಕೆಎಸ್ಸಾರ್ಟಿಸಿ ಬಸ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 06. ಕೆಎಸ್ಸಾರ್ಟಿಸಿ ಬಸ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಯುವಕರಿಬ್ಬರು ಗಾಯಗೊಂಡ ಘಟನೆ ನೆಹರು ನಗರ ವಿವೇಕಾನಂದ ಕಾಲೇಜು ಬಳಿಯ ತಿರುವಿನಲ್ಲಿ ಸಂಭವಿಸಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಪುತ್ತೂರು: ಕೆಎಸ್ಸಾರ್ಟಿಸಿ ಬಸ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Death, deadbody, Waterfall

ಕಿಂಡಿ ಅಣೆಕಟ್ಟಿನಲ್ಲಿ ಮುಳುಗಿ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ‌. 06. ಕಿಂಡಿ ಅಣೆಕಟ್ಟಿನ ನೀರಿನಲ್ಲಿ ಮುಳುಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಾಡಾವು ಬೊಳಿಕ್ಕಳ ಗೌರಿ ಹೊಳೆಯಲ್ಲಿ ನಡೆದಿದೆ.   ಮೃತರನ್ನು ಮೂಲತಃ ಉಪ್ಪಿನಂಗಡಿ ನಿವಾಸಿ ಮಾಡಾವು ಬೊಳಿಕ್ಕಳದಲ್ಲಿ ಸಂಬಂಧಿಕರ ಮನೆಯಲ್ಲಿರುವ ಹರೀಶ್ಚಂದ್ರ(45) ಎಂದು ಗುರುತಿಸಲಾಗಿದೆ. ಸೋಮವಾರದಂದು ಸಂಜೆ ನಾಲ್ವರು ವ್ಯಕ್ತಿಗಳು ಬೊಳಿಕ್ಕಳ ಕಿಂಡಿ ಅಣೆಕಟ್ಟಿನಲ್ಲಿ ಶೇಖರಣೆಗೊಂಡ ನೀರಿನಲ್ಲಿ ಸ್ನಾನಕ್ಕೆ ಹೋಗಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ಕಿಂಡಿ ಅಣೆಕಟ್ಟಿನಲ್ಲಿ ಮುಳುಗಿ ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಪೂಂಜಾಲಕಟ್ಟೆ ಠಾಣಾಧಿಕಾರಿ ಅಮಾನತಿಗೆ ದ.ಕ ಜಿಲ್ಲಾ ಲೀಗಲ್ ಫೋರಂ ಆಗ್ರಹ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 06. ನ್ಯಾಯವಾದಿ ಕುಲ್‌ದೀಪ್ ಶೆಟ್ಟಿಯವರ ಮೇಲೆ ಹಲ್ಲೆ, ದೌರ್ಜನ್ಯ ನಡೆಸಿದ ಪುಂಜಾಲಕಟ್ಟೆ ಠಾಣಾಧಿಕಾರಿ ಮತ್ತು ಇತರ ಪೊಲೀಸರನ್ನು ಅಮಾನತು ಮಾಡುವಂತೆ ಆಗ್ರಹಿಸಿ ದ.ಕ.ಜಿಲ್ಲಾ ಲೀಗಲ್ ಫೋರಂ ಹಾಗೂ ಜಿಲ್ಲೆಯ ನ್ಯಾಯವಾದಿಗಳು ಪ್ರತಿಭಟನೆ ನಡೆಸಿ ಬಂಟ್ವಾಳ ಡಿವೈಎಸ್‌ಪಿ ಪ್ರತಾಪ್ ಥೋರೊಟ್ ಅವರಿಗೆ ಮನವಿ ನೀಡಿದರು. ಈ ಸಂದರ್ಭ ಲೀಗಲ್ ಫೋರಂನ ದ.ಕ.ಜಿಲ್ಲಾಧ್ಯಕ್ಷ ಎಸ್.ಪಿ.ಚೆಂಗಪ್ಪ ಮಾತನಾಡಿ, ಏಕಾಏಕಿ ಮನೆಗೆ ಆಗಮಿಸಿದ ಪೊಲೀಸರು ವಕೀಲ ಕುಲದೀಪ್‌ಗೆ ಹಲ್ಲೆ ನಡೆಸಿ ಅಂಗಿ ಹರಿದು ಹಾಕಿ, ಕುಟುಂಬದ

ಬಂಟ್ವಾಳ: ಪೂಂಜಾಲಕಟ್ಟೆ ಠಾಣಾಧಿಕಾರಿ ಅಮಾನತಿಗೆ ದ.ಕ ಜಿಲ್ಲಾ ಲೀಗಲ್ ಫೋರಂ ಆಗ್ರಹ Read More »

ಕರಾವಳಿ, ಕರ್ನಾಟಕ
Death, deadbody, Waterfall

ಬಸ್ ನಿಂದ ಬಿದ್ದು ಪ್ರಯಾಣಿಕ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 06. ಕೆಎಸ್ಸಾರ್ಟಿಸಿ ಬಸ್‌ನಿಂದ ಪ್ರಯಾಣಿಕರೊಬ್ಬರು ಬಿದ್ದು ಮೃತಪಟ್ಟ ಘಟನೆ ಕೆಮ್ಮಾಯಿ ಸಮೀಪ ನಡೆದಿದೆ.   ಮೃತರನ್ನು ಕೆದಿಲ ಗ್ರಾಮದ ಮುದ್ರಾಜೆ ನಿವಾಸಿ ಪ್ರಸ್ತುತ ಕೆಮ್ಮಾಯಿಯಲ್ಲಿ ಬಾಡಿಗೆ ಮನೆಯಲ್ಲಿರುವ ಸೋಮಪ್ಪ ನಾಯ್ಕ ಎಂದು ಗುರುತಿಸಲಾಗಿದೆ. ಇವರು ಪುತ್ತೂರಿನಿಂದ ಉಪ್ಪಿನಂಗಡಿಯ ಹಳೆನೇರಂಕಿ ಕಡೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದು, ಕೆಮ್ಮಾಯಿ ಬಳಿ ಬಸ್ ನಿಲುಗಡೆ ವೇಳೆ ಬಸ್‌ನಿಂದ ಬಿದ್ದು ತೀವ್ರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ದರಾದರೂ ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಬಸ್ ನಿಂದ ಬಿದ್ದು ಪ್ರಯಾಣಿಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಿಎಸ್ಎಫ್ ಯೋಧೆಯಾಗಿ ಪುತ್ತೂರಿನ ಚೈತ್ರಾ ನೇಮಕ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 05. ಭಾರತೀಯ ಗಡಿ ಭದ್ರತಾ ಪಡೆಯಲ್ಲಿ ಕಾನ್‌ಸ್ಟೇಬಲ್ ಆಗಿ ಪುತ್ತೂರಿನ ಕರ್ಕುಂಜದ ಚೈತ್ರಾರವರು ಆಯ್ಕೆಯಾಗಿದ್ದಾರೆ.     ಸ್ಟಾಫ್ ಸೆಲೆಕ್ಷನ್ ಕಮಿಷನ್-2021ರಲ್ಲಿ ನಡೆಸಿದ ಪರೀಕ್ಷೆಯಲ್ಲಿ ಚೈತ್ರರವರು ನೇಮಕಗೊಂಡಿದ್ದು, 2022ರ ಡಿ. 21ರಂದು ಬೆಂಗಳೂರಿನ ಬಿಎಸ್‌ಎಫ್ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶಿಸಲಾಗಿದೆ. ಬಲ್ನಾಡು ಕರ್ಕುಂಜದ ಲಿಂಗಪ್ಪ ಗೌಡ ಹಾಗೂ ಜಾನಕಿ ದಂಪತಿ ಪುತ್ರಿಯಾಗಿರುವ ಈಕೆ, ಪ್ರಾಥಮಿಕ ಶಿಕ್ಷಣವನ್ನು ರಾಗಿಕುಮೇರು ಹಿ.ಪ್ರಾ ಶಾಲೆ, ಕೊಂಬೆಟ್ಟು ಪದವಿ ಪೂರ್ವ ಕಾಲೇಜಿನಲ್ಲಿ ಪ್ರೌಢಶಾಲೆ ಹಾಗೂ ಪಿಯುಸಿ

ಬಿಎಸ್ಎಫ್ ಯೋಧೆಯಾಗಿ ಪುತ್ತೂರಿನ ಚೈತ್ರಾ ನೇಮಕ Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ಲಾರಿಯಡಿಗೆ ಬಿದ್ದು ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 05. ಲಾರಿಯಡಿಗೆ ಬಿದ್ದು ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮೊಡಂಕಾಪು ಎಂಬಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಮೃತ ಮಹಿಳೆಯನ್ನು ಬೆಂಜನಪದವು ಕರಾವಳಿ ಸೈಟ್ ನಿವಾಸಿ ಉಷಾ (32) ಎಂದು ಗುರುತಿಸಲಾಗಿದೆ. ಬೆಂಜನಪದವು ಎಂಬಲ್ಲಿ ಅಂಗಡಿ ಹೊಂದಿದ್ದ ಉಷಾ ಅವರು, ಸಾಮಗ್ರಿ ತರಲು ಪೇಟೆಗೆ ಹೋಗುತ್ತಿದ್ದಾಗ ಮೊಡಂಕಾಪು ಎಂಬಲ್ಲಿ ಸ್ಕೂಟರ್ ಡಿಕ್ಕಿ ಹೊಡೆದು, ರಸ್ತೆಗೆಸೆಯಲ್ಪಟ್ಟ ಇವರ ಮೇಲೆ ಲಾರಿ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೊಲೀಸರು

ಬಂಟ್ವಾಳ: ಲಾರಿಯಡಿಗೆ ಬಿದ್ದು ಮಹಿಳೆ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Death, deadbody, Waterfall

ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 05. ಮಹಿಳೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಕೈಂತಿಲ ಎಂಬಲ್ಲಿ ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡವರನ್ನು ಕಸಬಾ ಗ್ರಾಮದ ಕೈಂತಿಲ ನಿವಾಸಿ ಗಿರಿಯಪ್ಪ ಗೌಡರ ಪತ್ನಿ ಸವಿತ ಯಾನೆ ಸೇಸಮ್ಮ (50) ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡಿಕೊಂಡಿದ್ದ ಇವರು, ಮನೆ ಸಮೀಪದ ತೋಟದಲ್ಲಿ ವಿಷ ಸೇವಿಸಿದ ಸ್ಥಿತಿಯಲ್ಲಿ ಕಂಡುಬಂದಿದ್ದರು. ಕೂಡಲೇ ಅವರನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತಾದರೂ ಆ

ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಜ್ಜಾವರ ಚೈತನ್ಯ ಸೇವಾಶ್ರಮದಲ್ಲಿ ಗೀತಾಜಯಂತಿ ಕಾರ್ಯಕ್ರಮ ➤ ಪ್ರತಿಭೆ ಯಾವುದೇ ಧರ್ಮ ಜಾತಿಯ ಸೊತ್ತಲ್ಲ- ಡಾ. ಪ್ರಭಾಕರ್

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 05. ಪ್ರತಿಭೆ ಎನ್ನುವುದು ಯಾವುದೇ ಜಾತಿ ಧರ್ಮ ಬಣ್ಣದ ಸೊತ್ತಲ್ಲ ಎಂದು ಸುಳ್ಯದ ವಿಶ್ರಾಂತ ಪ್ರಾಂಶುಪಾಲ ಹಾಗೂ ಖ್ಯಾತ ಲೇಖಕ ಡಾ.ಪ್ರಭಾಕರ ಶಿಶಿಲ ಹೇಳಿದರು. ಅವರು ಅಜ್ಜಾವರ ಚೈತನ್ಯ ಸೇವಾಶ್ರಮದಲ್ಲಿ ಗೀತಾಜಯಂತಿ ಕಾರ್ಯಕ್ರಮ ಹಾಗೂ ಆಶ್ರಮದ ಸ್ವಾಮೀಜಿ ಶ್ರೀ ಯೋಗೇಶ್ವರಾನಂದ ಸರಸ್ವತಿಯವರ 187 ನೇ ಕೃತಿ ಧ್ಯಾನದಿಂದ ಆತ್ಮದರ್ಶನ’ವನ್ನು ಬಿಡುಗಡೆಗೊಳಿಸಿ ಮಾತನಾಡಿದರು.     ಭಗವದ್ಗೀತೆ ಜಗತ್ತಿಗೆ ಶ್ರೇಷ್ಠ ಸಂದೇಶ ನೀಡಿದೆ. ಇದು ನನ್ನ ವೈಯಕ್ತಿಕ ಜೀವನದಲ್ಲೂ ಪ್ರಯೋಜನವಾಗಿದೆ. ಮೇಲು

ಅಜ್ಜಾವರ ಚೈತನ್ಯ ಸೇವಾಶ್ರಮದಲ್ಲಿ ಗೀತಾಜಯಂತಿ ಕಾರ್ಯಕ್ರಮ ➤ ಪ್ರತಿಭೆ ಯಾವುದೇ ಧರ್ಮ ಜಾತಿಯ ಸೊತ್ತಲ್ಲ- ಡಾ. ಪ್ರಭಾಕರ್ Read More »

ಕರಾವಳಿ, ಕರ್ನಾಟಕ

ಡಿ. 06ರಂದು ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 05. 33 ಕೆ.ವಿ ಮಾಡಾವು-ಕಾವು-ಸುಳ್ಯ, ಮತ್ತು 33 ಕೆ.ವಿ ಮಾಡಾವು-ಕುಂಬ್ರ-ಸುಳ್ಯ ವಿದ್ಯುತ್ ಮಾರ್ಗದ ಪಾಲನಾಕಾರ್ಯ ಹಾಗೂ 33 ಕೆ.ವಿ ಲಿಂಕ್ ಲೈನ್ ಕಾಮಗಾರಿ ನಡೆಯಲಿರುವುದರಿಂದ ಡಿ.6ರಂದು ಪೂರ್ವಾಹ್ನ 10ರಿಂದ ಸಾಯಂಕಾಲ 5ಗಂಟೆಯವರಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.   ಆದ್ದರಿಂದ, 33/11ಕೆವಿ ಸುಳ್ಯ, ಕಾವು ಮತ್ತು ಕುಂಬ್ರ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11ಕೆವಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಡಿ. 06ರಂದು ವಿದ್ಯುತ್ ನಿಲುಗಡೆ Read More »

ಕರಾವಳಿ
Scroll to Top