ಕರಾವಳಿ

ಬಿ.ಸಿ.ರೋಡ್: ಆಟೋ ರಿಕ್ಷಾ ಪಲ್ಟಿ ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 05. ಆಟೋರಿಕ್ಷಾ ಪಲ್ಟಿಯಾಗಿ ಇಬ್ಬರು ಗಾಯಗೊಂಡ ಘಟನೆ ಬಿಸಿರೋಡು ತಲಪಾಡಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಬಿ.ಸಿ.ರೋಡ್ ಕಡೆಯಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಆಟೋ ತಲಪಾಡಿಯಲ್ಲಿ ನಿಯಂತ್ರಣ ತಪ್ಪಿ ಮಗುಚಿಬಿದ್ದಿದೆ. ಘಟನೆಯ ವೇಳೆ ಆಟೋದಲ್ಲಿ ಇಬ್ಬರೇ ಇರುವುದಾಗಿ ಸ್ಥಳೀಯರು ತಿಳಿಸಿದ್ದು, ಚಾಲಕ ಗಂಭೀರ ಗಾಯಗೊಂಡರೆ ಪ್ರಯಾಣಿಕನಿಗೂ ಗಾಯವಾಗಿದೆ ಎಂದು ಮಾಹಿತಿ ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಬಿ.ಸಿ.ರೋಡ್: ಆಟೋ ರಿಕ್ಷಾ ಪಲ್ಟಿ ➤ ಇಬ್ಬರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಲಾರಿಗಳ ನಡುವೆ ಭೀಕರ ಅಪಘಾತ ➤ ಇಬ್ಬರು ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 05. ಲಾರಿಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಚಾಲಕರಿಬ್ಬರು ಮೃತಪಟ್ಟ ಘಟನೆ ಗುರುಪುರ- ಕೈಕಂಬ ಬಳಿ ನಡೆದಿದೆ.   ಮೂಡಬಿದ್ರೆ ಕಡೆಯಿಂದ ಮಣ್ಣು ತುಂಬಿಕೊಂಡು ಬರುತ್ತಿದ್ದ ಲಾರಿಯು ವಿರುದ್ದ ದಿಕ್ಕಿನಿಂದ ತೆರಳುತ್ತಿದ್ದ ಲಾರಿಗೆ ಇಳಿಜಾರು ಪ್ರದೇಶದಲ್ಲಿ ಢಿಕ್ಕಿ ಹೊಡೆದಿದ್ದು, ಪರಿಣಾಮ ಲಾರಿಗಳು ರಸ್ತೆ ಬದಿಯ ಹೊಂಡಕ್ಕೆ ಬಿದ್ದಿವೆ. ಎರಡೂ ಲಾರಿಗಳು ಸಂಪೂರ್ಣ ಜಖಂಗೊಂಡಿದ್ದು, ಚಾಲಕರ ಮೃತದೇಹವನ್ನು ಹೊರತೆಗೆಯಲು ಹರಸಾಹಸ ಪಡಬೇಕಾಯಿತು. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಮಂಗಳೂರು: ಲಾರಿಗಳ ನಡುವೆ ಭೀಕರ ಅಪಘಾತ ➤ ಇಬ್ಬರು ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾರುಗಳ ಮೇಲೆ ಮಗುಚಿ ಬಿದ್ದ ಲಾರಿ ➤ ಪ್ರಯಾಣಿಕರು ಅದೃಷ್ಟವಶಾತ್ ಪಾರು

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 05. ಭತ್ತದ ಮೂಟೆ ಹೊತ್ತ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಎರಡು ಟೂರಿಸ್ಟ್ ಕಾರಿನ ಮೇಲೆಯೇ ಪಲ್ಟಿ ಹೊಡೆದ ಘಟನೆ ಉಡುಪಿಯ ಕೆಳಪರ್ಕಳ ಎಂಬಲ್ಲಿ ನಡೆದಿದೆ. ಅಪಘಾತದಿಂದಾಗಿ ಒಂದು ಕಾರು ಸಂಪೂರ್ಣ ಜಖಂಗೊಂಡಿದ್ದು, ಭತ್ತದ ಮೂಟೆ ಲಾರಿಯಿಂದ ಬೇರ್ಪಟ್ಟು ರಸ್ತೆಯಲ್ಲಿ ಬಿದ್ದಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಹಿಂದೆಯೂ ಈ ಭಾಗದಲ್ಲಿ ವಾಹನ ಅಪಘಾತ ಘಟನೆ ನಡೆದಿದೆ. ಹೊಸ

ಕಾರುಗಳ ಮೇಲೆ ಮಗುಚಿ ಬಿದ್ದ ಲಾರಿ ➤ ಪ್ರಯಾಣಿಕರು ಅದೃಷ್ಟವಶಾತ್ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಆಂಬ್ಯುಲೆನ್ಸ್ ವಾಹನ ಪಲ್ಟಿ ➤ ವೈದ್ಯ ಸೇರಿದಂತೆ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 05. ನಿಯಂತ್ರಣ ತಪ್ಪಿದ ಕಕ್ಕಿಂಜೆಯ ಖಾಸಗಿ ಆಸ್ಪತ್ರೆಯ ಆಂಬುಲೆನ್ಸ್, ಸೇತುವೆಯ ಬದಿಗೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ವೈದ್ಯರೋರ್ವರು ಸೇರಿದಂತೆ ಮೂವರು ಗಾಯಗೊಂಡ ಘಟನೆ ಭಾನುವಾರದಂದು ರಾತ್ರಿ ನಡೆದಿದೆ.   ಗಾಯಗೊಂಡವರನ್ನು ಡಾ.‌‌ನಿತಿನ್, ಕ್ಷ-ಕಿರಣ ತಜ್ಞ ರಿತೇಶ್ ಹಾಗೂ ಲ್ಯಾಬ್ ಟೆಕ್ನೀಷಿಯನ್ ಹುಝೈರ್ ಎಂದು ಗುರುತಿಸಲಾಗಿದೆ. ಡಾ.ನಿತಿನ್ ಅವರಿಗೆ ತಲೆಗೆ ಗಾಯ ಹಾಗೂ ಕೈ ಮೂಳೆ‌ ಮುರಿತಕ್ಕೊಳಗಾಗಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನಿಬ್ಬರು ಗಾಯಾಳುಗಳನ್ನು

ಬೆಳ್ತಂಗಡಿ: ಆಂಬ್ಯುಲೆನ್ಸ್ ವಾಹನ ಪಲ್ಟಿ ➤ ವೈದ್ಯ ಸೇರಿದಂತೆ ಮೂವರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Death, deadbody, Waterfall

ಕಡಬ: ಪತ್ನಿಯೊಂದಿಗೆ ಜಗಳವಾಡಿ ನಾಪತ್ತೆಯಾಗಿದ್ದ ಪತಿ ➤ ಮೃತದೇಹ ಕಾಡಿನಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಡಿ.04. ವ್ಯಕ್ತಿಯೋರ್ವರ ಮೃತದೇಹವೊಂದು ದೋಲ್ಪಾಡಿ ಗ್ರಾಮದ ಕೊಜಂಬಾಡಿ ಅರಣ್ಯ ಪ್ರದೇಶದಲ್ಲಿ ಕವಚಿ ಬಿದ್ದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.   ಮೃತ ವ್ಯಕ್ತಿಯನ್ನು ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದ ದಿ.ಕೊರಗಪ್ಪ ಎಂಬವರ ಪುತ್ರ ದೇವರಾಜ್ ಎಂದು ಗುರುತಿಸಲಾಗಿದೆ. ಲಾರಿ ಚಾಲಕನಾಗಿದ್ದ ದೇವರಾಜ್, ಕಾಣಿಯೂರು ಗ್ರಾಮದ ನಾವೂರು ನಿವಾಸಿಯನ್ನು 13 ವರ್ಷಗಳ ಹಿಂದೆ ವಿವಾಹವಾಗಿದ್ದು, ಅವರಿಗೆ ಇಬ್ಬರು ಮಕ್ಕಳಿದ್ದಾರೆ. ದೇವರಾಜ್ ಅಮಲು ಪದಾರ್ಥ ಸೇವಿಸಿ ಆಗಾಗ ಪತ್ನಿಯೊಂದಿಗೆ ಜಗಳ ಮಾಡುತ್ತಿದ್ದು,

ಕಡಬ: ಪತ್ನಿಯೊಂದಿಗೆ ಜಗಳವಾಡಿ ನಾಪತ್ತೆಯಾಗಿದ್ದ ಪತಿ ➤ ಮೃತದೇಹ ಕಾಡಿನಲ್ಲಿ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಫಾಲ್ಸ್ ಗೆ ತೆರಳಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 04. ಸ್ನೇಹಿತರೊಂದಿಗೆ ದಿಡುಪೆ ಸಮೀಪದ ಎರ್ಮಾಯಿ ಫಾಲ್ಸ್ ಗೆ ತೆರಳಿದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ವರದಿಯಾಗಿದೆ.     ಮೃತ ವಿದ್ಯಾರ್ಥಿಯನ್ನು ದ್ವಿತೀಯ ಪಿಯುಸಿ ವಿದ್ಯಾರ್ಥಿ ವಿವೇಕ್ (17) ಎಂದು ಗುರುತಿಸಲಾಗಿದೆ. ಈತನ ಸಹಿತ 7 ವಿದ್ಯಾರ್ಥಿಗಳು ಮಲವಂತಿಗೆ ಬಳಿಯ ಎರ್ಮಾಯಿ ಫಾಲ್ಸ್ ಗೆ ಶನಿವಾರದಂದು ಮದ್ಯಾಹ್ನದ ವೇಳೆಗೆ ತೆರಳಿದ್ದು, ಈ ಸಂದರ್ಭ ವಿವೇಕ್ ಎಂಬಾತ ನೀರಿನಲ್ಲಿ ಮುಳುಗಿದ್ದಾನೆ ಎನ್ನಲಾಗಿದೆ. ಜೊತೆಯಲ್ಲಿದ್ದವರು ಆತನ ರಕ್ಷಣೆಗೆ ಪ್ರಯತ್ನಿಸಿದರಾದರೂ ಸಾಧ್ಯವಾಗದೇ ಇದ್ದಯ, ತಕ್ಷಣವೇ

ಬೆಳ್ತಂಗಡಿ: ಫಾಲ್ಸ್ ಗೆ ತೆರಳಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ಬೈಕ್ ಮತ್ತು ಟಿಪ್ಪರ್ ನಡುವೆ ಅಪಘಾತ ➤ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 04. ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ವೀರಕಂಬ ಗ್ರಾಮದ ಮಜಿ ಶಾಲಾ ಮುಂಭಾಗ ಸಂಭವಿಸಿದೆ.   ಗಾಯಗೊಂಡವರನ್ನು ಪೆರುವಾಯಿ ನಿವಾಸಿ ಮನೋಜ್ ಎಂದು ಗುರುತಿಸಲಾಗಿದೆ. ಘಟನೆಯಿಂದ ಬೈಕ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ.

ವಿಟ್ಲ: ಬೈಕ್ ಮತ್ತು ಟಿಪ್ಪರ್ ನಡುವೆ ಅಪಘಾತ ➤ ಸವಾರ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದ.ಕ: ಡಿ. 05ರಿಂದ ಮೆದುಳು ಜ್ವರ ನಿಯಂತ್ರಣ ಲಸಿಕಾ ಅಭಿಯಾನ ➤ 1ರಿಂದ 15 ವರ್ಷದೊಳಗಿನ ಮಕ್ಕಳಿಗೆ JE ಲಸಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 03. ಮಕ್ಕಳಿಗೆ ಮಾರಣಾಂತಿಕವಾಗಬಲ್ಲ ಮೆದುಳು ಜ್ವರ ನಿಯಂತ್ರಣಕ್ಕೆ ದ.ಕ ಜಿಲ್ಲೆಯಲ್ಲಿ ಡಿ. 5ರಿಂದ ಲಸಿಕಾ ಅಭಿಯಾನ ಆರಂಭಗೊಳ್ಳಲಿದೆ ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್ ಕುಮಾರ್ ತಿಳಿಸಿದ್ದಾರೆ.   ಅಭಿಯಾನದ ಮೂಲಕ 1ರಿಂದ 15 ವರ್ಷದ ಮಕ್ಕಳಿಗೆ JE ಲಸಿಕೆಯನ್ನು ನೀಡಲಾಗುವುದು. ಹಾಗೆಯೇ ಮುಂದೆ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿಯಲ್ಲಿ 9 ಮತ್ತು 16 ತಿಂಗಳ ವಯಸ್ಸಿನ ಮಕ್ಕಳಿಗೆ JE ಲಸಿಕೆಯನ್ನು ಎರಡು ಡೋಸ್‌ ಆಗಿ ನೀಡಲಾಗುವುದು. ಜಿಲ್ಲೆಯಾದ್ಯಂತ ಜಿ.ಇ

ದ.ಕ: ಡಿ. 05ರಿಂದ ಮೆದುಳು ಜ್ವರ ನಿಯಂತ್ರಣ ಲಸಿಕಾ ಅಭಿಯಾನ ➤ 1ರಿಂದ 15 ವರ್ಷದೊಳಗಿನ ಮಕ್ಕಳಿಗೆ JE ಲಸಿಕೆ Read More »

ಕರಾವಳಿ, ಕರ್ನಾಟಕ

ಶುಶ್ರೂಷಕರ ನೇಮಕಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 02. ಯುನೈಟೆಡ್ ಕಿಂಗ್ ಡಮ್‍ನಲ್ಲಿ ಶುಶ್ರೂಷಕರ ಹುದ್ದೆಗೆ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತಿಂಗಳಿಗೆ ಗರಿಷ್ಠ 2 ಲಕ್ಷ ರೂ. ವೇತನದೊಂದಿಗೆ 3 ತಿಂಗಳು ಉಚಿತ ವಸತಿ ವ್ಯವಸ್ಥೆ ನೀಡಲಾಗುವುದು.   ಹುದ್ದೆಯ ಅರ್ಹತೆಯ ವಿವರ ಇಂತಿವೆ: ಬಿ.ಎಸ್ಸಿ ನರ್ಸಿಂಗ್, ಜಿಎನ್‍ಎಮ್ ಹಾಗೂ ಪಿಬಿಬಿಎಸ್ಸಿ ನರ್ಸಿಂಗ್ ನಲ್ಲಿ 6 ತಿಂಗಳು ಮತ್ತು ಮೇಲ್ಪಟ್ಟು ಅನುಭವ ಹೊಂದಿದವರು, ಐಇಎಲ್‍ಟಿಎಸ್- ಬಾನ್ಡ್ 7 ಅಥವಾ ಒಇಟಿ-ಗ್ರೇಡ್ ಬಿ, ಅರ್ಹತೆ ಹೊಂದಿದ್ದು,

ಶುಶ್ರೂಷಕರ ನೇಮಕಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ದ.ಕ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ- ಹೆಸರು ಸೇರ್ಪಡೆಗೆ ಇಂದಿನಿಂದ ವಿಶೇಷ ಅಭಿಯಾನ ➤ ಜಿಲ್ಲಾಧಿಕಾರಿ ರವಿಕುಮಾರ್

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 02. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ಹೊಸ ಮತದಾರರಿಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಡಿ.3 ಮತ್ತು 4ರಂದು ವಿಶೇಷ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಡಿ.8ರ ವರೆಗೆ ಹಕ್ಕು ಮತ್ತು ಆಕ್ಷೇಪಣೆಯ ಸಮಯದಲ್ಲಿ ಮನೆ ಮನೆ ಸಮೀಕ್ಷೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ತಿಳಿಸಿದರು.   ಡಿ. 26ರೊಳಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ವಿಲೇವಾರಿ ಮಾಡಲಾಗುವುದು. 2023ರ ಜನವರಿ 5ರಂದು ಅಂತಿಮ

ದ.ಕ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ- ಹೆಸರು ಸೇರ್ಪಡೆಗೆ ಇಂದಿನಿಂದ ವಿಶೇಷ ಅಭಿಯಾನ ➤ ಜಿಲ್ಲಾಧಿಕಾರಿ ರವಿಕುಮಾರ್ Read More »

ಕರಾವಳಿ, ಕರ್ನಾಟಕ
Scroll to Top