ಕರಾವಳಿ

ಮಂಗಳೂರು: ಮಕ್ಕಳ ಕಳ್ಳನೆಂದು ಶಂಕಿಸಿ ಅಪರಿಚಿತ ವ್ಯಕ್ತಿಗೆ ಸಾರ್ವಜನಿಕರಿಂದ ಗೂಸಾ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 02. ಮಕ್ಕಳನ್ನು ಕದಿಯುತ್ತಿದ್ದ ಶಂಕೆ ಹಿನ್ನಲೆ ವ್ಯಕ್ತಿಯೋರ್ವನಿಗೆ ಸಾರ್ವಜನಿಕರು ಗೂಸಾ ನೀಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ವೆನ್ಲಾಕ್ ಆಸ್ಪತ್ರೆ ಬಳಿ ತಾಯಿಯೊಂದಿಗೆ ನಿಂತಿದ್ದ ಮಗುವನ್ನು ವ್ಯಕ್ತಿಯೊಬ್ಬ ಎಳೆದಾಡುತ್ತಿದ್ದು, ತಾಯಿ ಕಿರುಚಾಡಿದ್ದನ್ನು ಕಂಡು ಸ್ಥಳಕ್ಕೆ ಸಾರ್ವಜನಿಕರು ಜಮಾಯಿಸಿದ್ದಾರೆ. ಇನ್ನು ವ್ಯಕ್ತಿಯನ್ನು ಅಲ್ಲಿಯೇ ಹಿಡಿದು ವಿಚಾರಣೆ ನಡೆಸಿ, ಹಲ್ಲೆ ನಡೆಸಿದ್ದು, ಹಲ್ಲೆ ನಡೆಸುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮಂಗಳೂರು: ಮಕ್ಕಳ ಕಳ್ಳನೆಂದು ಶಂಕಿಸಿ ಅಪರಿಚಿತ ವ್ಯಕ್ತಿಗೆ ಸಾರ್ವಜನಿಕರಿಂದ ಗೂಸಾ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೆಎಸ್ಸಾರ್ಟಿಸಿ ಬಸ್ ಹಾಗೂ ಟಿಟಿ ವಾಹನದ ನಡುವೆ ಢಿಕ್ಕಿ ➤ ಪ್ರಯಾಣಿಕರು ಪಾರು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 02. ಕೆಎಸ್ಸಾರ್ಟಿಸಿ ಬಸ್ಸೊಂದು ಹಠಾತ್ತನೆ ನಿಲ್ಲಿಸಿದ ಪರಿಣಾಮ ಹಿಂದಿನಿಂದ ಬರುತ್ತಿದ್ದ ಟೆಂಪೋಟ್ರಾವೆಲ್ (ಟಿ ಟಿ) ವಾಹನವು ಬಸ್ಸಿಗೆ ಡಿಕ್ಕಿ ಹೊಡೆದು ನಜ್ಜುಗುಜ್ಜಾದ ಘಟನೆ ಕುಂಬ್ರದಲ್ಲಿ ನಡೆದಿದೆ. ಸುಳ್ಯದಿಂದ ಪುತ್ತೂರು ಕಡೆಗೆ ಬರುತ್ತಿದ್ದ ಸರಕಾರಿ ಬಸ್ ಕುಂಬ್ರ ಶಾಲಾ ಮುಖ್ಯ ದ್ವಾರದ ಬಳಿ ಬರುತ್ತಿದ್ದಂತೆಯೇ ಹಠಾತ್ ಬ್ರೇಕ್ ಹಾಕಿ ನಿಲ್ಲಿಸಿದ್ದು, ಅದೇ ವೇಳೆ ಹಿಂದಿನಿಂದ ಬಂದ ಟಿಟಿ ವಾಹನವು ಬಸ್ಸಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಟಿಟಿ ವಾಹನದ ಮುಂಭಾಗ ಜಖಂಗೊಂಡಿದೆ.

ಕೆಎಸ್ಸಾರ್ಟಿಸಿ ಬಸ್ ಹಾಗೂ ಟಿಟಿ ವಾಹನದ ನಡುವೆ ಢಿಕ್ಕಿ ➤ ಪ್ರಯಾಣಿಕರು ಪಾರು Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ: ಹೆಚ್ಚುತ್ತಿರುವ ಹುಚ್ಚುನಾಯಿ ಹಾಗೂ ಬೀದಿನಾಯಿಗಳ ಹಾವಳಿ ➤ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 02. ತಾಲೂಕಿನ ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂತಡ್ಕ ಕರಂಬಾರು ಹಲವು ಪ್ರದೇಶಗಳಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಬೀದಿ ನಾಯಿಗಳು ಹಾಗೂ ಹುಚ್ಚು ನಾಯಿಗಳ ಹಾವಳಿ ಆತಂಕ ಮೂಡಿಸಿದೆ.   ಕರಂಬಾರು ಗ್ರಾಮದ ಬಂತಡ್ಕ ಜನತಾ ಕಾಲೋನಿ ಪರಿಸರದಲ್ಲಿ ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಮತ್ತೆ ಹುಚ್ಚು ನಾಯಿಗಳ ಹಾವಳಿ ಮುಂದುವರಿದಿದ್ದು, ಇದರ ತಡೆಗೆ ಸ್ಥಳೀಯ ಗ್ರಾಮ ಪಂಚಾಯತ್ ಶಿರ್ಲಾಲಿಗೆ ಮನವಿ ಮಾಡಿದ್ದರೂ ಇದಕ್ಕೆ ಯಾವುದೇ ಕ್ರಮ ಕೈಗೊಂಡಿಲ್ಲ. ಹುಚ್ಚುನಾಯಿಗಳ

ಬೆಳ್ತಂಗಡಿ: ಹೆಚ್ಚುತ್ತಿರುವ ಹುಚ್ಚುನಾಯಿ ಹಾಗೂ ಬೀದಿನಾಯಿಗಳ ಹಾವಳಿ ➤ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ Read More »

ಕರಾವಳಿ, ಕರ್ನಾಟಕ

ಪುತ್ತೂರು: ಕ್ಯಾಂಪ್ಕೋ ಬ್ಲಡ್ ಸೆಂಟರ್, ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ, ಸಕ್ಷಮ ಘಟಕದ ಸಹಯೋಗದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ➤ ವಿಷನ್ ಸಹಾಯನಿಧಿ ಸೇವಾ ಟ್ರಸ್ಟ್ ನ ಆಶ್ರಯ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 02. ಇಲ್ಲಿನ ವಿಷನ್ ಸಹಾಯನಿಧಿ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ಪುತ್ತೂರು, ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿ ಸಮಕ್ಷಮ ಪುತ್ತೂರು ಘಟಕದ ಸಹಯೋಗದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರ ಮತ್ತು ನೇತ್ರದಾನ ನೋಂದಣಿ, ಉಚಿತ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ತಪಾಸಣಾ ಶಿಬಿರ ಹಾಗೂ ಊರ- ಪರವೂರ ಸಹೃದಯಿ ದಾನಿಗಳ ಸಹಕಾರದಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಅಶಕ್ತರಿಗೆ ನಿರಂತರವಾಗಿ ಆಹಾರ ಸಾಮಗ್ರಿಗಳ ಕಿಟ್ ನೀಡುವ 18ನೇ ಯೋಜನೆಯ ‘ಒಳಿತು

ಪುತ್ತೂರು: ಕ್ಯಾಂಪ್ಕೋ ಬ್ಲಡ್ ಸೆಂಟರ್, ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ, ಸಕ್ಷಮ ಘಟಕದ ಸಹಯೋಗದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ➤ ವಿಷನ್ ಸಹಾಯನಿಧಿ ಸೇವಾ ಟ್ರಸ್ಟ್ ನ ಆಶ್ರಯ Read More »

ಕರಾವಳಿ, ಕರ್ನಾಟಕ

ನಿಜವಾದ ಆರೋಪಿಯ ಬದಲು ಅದೇ ಹೆಸರಿನ ಮತ್ತೋರ್ವನ ಬಂಧನ ➤ ಇಬ್ಬರು ಮಹಿಳಾ ಪೊಲೀಸ್ ಅಧಿಕಾರಿಗಳಿಗೆ 5 ಲಕ್ಷ ರೂ. ದಂಡ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 02. ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ನೈಜ ಆರೋಪಿಯನ್ನು ಬಂಧಿಸದೇ ಅದೇ ಹೆಸರಿನ ಬೇರೊಬ್ಬ ವ್ಯಕ್ತಿಯನ್ನು ಬಂಧಿಸಿ ಸುಮಾರು ಒಂದು ವರ್ಷಗಳ ಕಾಲ ನ್ಯಾಯಾಂಗ ಬಂಧನದಲ್ಲಿರಿಸದ ಇಬ್ಬರು ಮಹಿಳಾ ಪೊಲೀಸರು ಸಂತ್ರಸ್ತರಿಗೆ ತಮ್ಮ ಜೇಬಿನಿಂದಲೇ 5 ಲಕ್ಷ ರೂ. ಪರಿಹಾರ ನೀಡುವಂತೆ ಮಂಗಳೂರು ಎರಡನೇ ಹೆಚ್ಚುವರಿ ಎಫ್‌ಟಿಎಸ್‌ಸಿ ಪೊಕ್ಸೋ ನ್ಯಾಯಾಲಯವು ಆದೇಶಿಸಿದೆ.   ಮಂಗಳೂರು ಮಹಿಳಾ ಪೊಲೀಸ್‌ ಠಾಣಾ ನಿರೀಕ್ಷಕಿ ರೇವತಿ ಮತ್ತು ಉಪನಿರೀಕ್ಷಕಿ ರೋಸಮ್ಮ ಪಿ.ಪಿ. ದಂಡ ವಿಧಿಸಲ್ಪಟ್ಟ ಪೊಲೀಸ್

ನಿಜವಾದ ಆರೋಪಿಯ ಬದಲು ಅದೇ ಹೆಸರಿನ ಮತ್ತೋರ್ವನ ಬಂಧನ ➤ ಇಬ್ಬರು ಮಹಿಳಾ ಪೊಲೀಸ್ ಅಧಿಕಾರಿಗಳಿಗೆ 5 ಲಕ್ಷ ರೂ. ದಂಡ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯಮಟ್ಟದ ವೈಟ್ ಲಿಪ್ಟಿಂಗ್ ಸ್ಪರ್ಧೆ ➤ ಪ್ರಥಮ ಸ್ಥಾನ ಪಡೆದ ಮರ್ಧಾಳದ ಬ್ಯೂಲ ಪಿ.ಟಿ

(ನ್ಯೂಸ್ ಕಡಬ) newskadaba.com ಕಡಬ, ಡಿ. 01. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆಯಲ್ಲಿ ನಡೆದ ರಾಜ್ಯ ಮಟ್ಟದ ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಮರ್ಧಾಳದ ಬ್ಯೂಲ ಪಿ.ಟಿ. ಜೂನಿಯರ್ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಸೀನಿಯರ್ ವಿಭಾಗದಲ್ಲಿ ಕಂಚಿನ ಪದಕ ಪಡೆದುಕೊಂಡಿದ್ದಾರೆ.     ಪ್ರಸ್ತುತ ಪುತ್ತೂರಿನ ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ತೃತೀಯ ಬಿಕಾಂ ವಿದ್ಯಾರ್ಥಿನಿಯಾಗಿರುವ ಈಕೆ ಕಡಬ ತಾಲೂಕಿನ ತುಂಬ್ಯದ ಪಾರಶೇರಿಲ್ ಮನೆ ನಿವಾಸಿ ತೋಮಸ್ ಪಿ.ವಿ ಮತ್ತು ಗ್ರೇಸಿ ತೋಮಸ್ ದಂಪತಿಯ ಪುತ್ರಿ.

ರಾಜ್ಯಮಟ್ಟದ ವೈಟ್ ಲಿಪ್ಟಿಂಗ್ ಸ್ಪರ್ಧೆ ➤ ಪ್ರಥಮ ಸ್ಥಾನ ಪಡೆದ ಮರ್ಧಾಳದ ಬ್ಯೂಲ ಪಿ.ಟಿ Read More »

ಕರಾವಳಿ, ಕರ್ನಾಟಕ

ಅರಣ್ಯ ಇಲಾಖೆ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ➤ 4 ಚಿನ್ನದ ಪದಕ ಮುಡಿಗೇರಿಸಿಕೊಂಡ ಸುಳ್ಯದ ಎಸಿಎಫ್ ಪ್ರವೀಣ್ ಶೆಟ್ಟಿ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 02. ಬೆಳಗಾವಿಯಲ್ಲಿ ಮೂರು ದಿನಗಳ ಕಾಲ ನಡೆದ ಅರಣ್ಯ ಇಲಾಖೆ ನೌಕರರ ರಾಜ್ಯ ಮಟ್ಟದ ಕ್ರೀಡಾ ಕೂಟದಲ್ಲಿ ಸುಳ್ಯದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್‌ಕುಮಾರ್ ಶೆಟ್ಟಿಯವರು ನಾಲ್ಕು ಚಿನ್ನದ ಪದಕದೊಂದಿಗೆ ವೈಯಕ್ತಿಕ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.   ಇವರು ಹಿರಿಯರ ವಿಭಾಗದ ಶಾಟ್ ಪುಟ್, ಡಿಸ್ಕಸ್ ತ್ರೋ, ಹ್ಯಾಮರ್ ತ್ರೋ ವಿಭಾಗಗಳಲ್ಲಿ ಪ್ರಥಮ ಸ್ಥಾನಿಯಾಗಿ ಚಿನ್ನದ ಪದಕ ಗೆದ್ದಿದ್ದಾರೆ. ಇದರ ಅಂಕ ಆಧರಿಸಿ ಅವರಿಗೆ ವೈಯಕ್ತಿಕ ಚಾಂಪಿಯನ್‌ಶಿಪ್ ಕೊಡಲಾಗಿದೆ. ಪುತ್ತೂರು

ಅರಣ್ಯ ಇಲಾಖೆ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ➤ 4 ಚಿನ್ನದ ಪದಕ ಮುಡಿಗೇರಿಸಿಕೊಂಡ ಸುಳ್ಯದ ಎಸಿಎಫ್ ಪ್ರವೀಣ್ ಶೆಟ್ಟಿ Read More »

ಕರಾವಳಿ, ಕರ್ನಾಟಕ

ಸುಳ್ಯ: ಮದ್ಯ ಸೇವಿಸಿ ಜೀಪು ಚಲಾಯಿಸಿದ ಚಾಲಕ ➤ ವಾಹನಗಳು ಜಖಂ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 02. ಕುಡಿದು ಜೀಪು ಚಲಾಯಿಸಿದ ಪರಿಣಾಮ ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಹಾಗೂ ಕಾರಿಗೆ ಡಿಕ್ಕಿಯಾಗಿ ವಾಹನಗಳು ಜಖಂಗೊಂಡ ಘಟನೆ ಅಂಬಟೆಡ್ಕ ಬಳಿ ನಡೆದಿದೆ.   ಸುಳ್ಯದ ಮುಖ್ಯ ರಸ್ತೆಯಿಂದ ರಥಬೀದಿಯಾಗಿ ಬಂದ ಜೀಪೊಂದು ಚೆನ್ನಕೇಶವ ದೇವಸ್ಥಾನದ ಬಳಿ ಹಾಕಲಾಗಿದ್ದ ಬ್ಯಾರಿಕೇಡ್ ಗೆ ಢಿಕ್ಕಿ ಹೊಡೆದು, ನಂತರ ಅಲ್ಲಿಂದ ಅಂಬಟಡ್ಕದ ಹೊಟೇಲೊಂದರ ಎದುರು ನಿಲ್ಲಿಸಲಾಗಿದ್ದ ನಾಲ್ಕು ಬೈಕ್ ಮತ್ತು ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಜೀಪು ಚಾಲಕ ವಿಪರೀತ ಕುಡಿದು

ಸುಳ್ಯ: ಮದ್ಯ ಸೇವಿಸಿ ಜೀಪು ಚಲಾಯಿಸಿದ ಚಾಲಕ ➤ ವಾಹನಗಳು ಜಖಂ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕ್ಷುಲ್ಲಕ ಕಾರಣಕ್ಕೆ ಏಜೆಂಟ್ ಹಾಗೂ ಬಸ್ ಚಾಲಕನ ನಡುವೆ ಹೊಡೆದಾಟ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 02. ಸಮಯದ ವಿಚಾರಕ್ಕೆ ಸಂಬಂಧಿಸಿ ಖಾಸಗಿ ಬಸ್ ನ ಏಜೆಂಟ್ ಹಾಗೂ ಬಸ್ ಚಾಲಕನ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಹೊಡೆದಾಟ ನಡೆದ ಘಟನೆ ವಿಟ್ಲದ ಖಾಸಗಿ ಬಸ್ಸು ನಿಲ್ದಾಣದಲ್ಲಿ ನಡೆದಿದೆ.   ಖಾಸಗಿ ಬಸ್ ನ ಎಜೆಂಟ್ ಜಯ ಕೊಟ್ಟಾರಿ ಮತ್ತು ಬಸ್ ಚಾಲಕ ಅಬ್ಬಾಸ್ ಎಂಬವರ ನಡುವೆ ಟೈಮಿಂಗ್ಸ್ ವಿಚಾರದಲ್ಲಿ ವಾಗ್ವಾದ ನಡೆದಿದ್ದು, ಬಳಿಕ ಅದು ತಾರಕಕ್ಕೇರಿ ಪರಸ್ಪರ ಹೊಡೆದಾಟ ನಡೆದಿದೆ ಎನ್ನಲಾಗಿದೆ. ಈ ಬಗ್ಗೆ

ಕ್ಷುಲ್ಲಕ ಕಾರಣಕ್ಕೆ ಏಜೆಂಟ್ ಹಾಗೂ ಬಸ್ ಚಾಲಕನ ನಡುವೆ ಹೊಡೆದಾಟ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ ಷಷ್ಟಿಯಲ್ಲಿ ವ್ಯಾಪಾರ ಮಾಡುತ್ತಿದ್ದ ಯುವಕನಿಗೆ ಪೊಲೀಸ್ ಸಿಬ್ಬಂದಿಯಿಂದ ಹಲ್ಲೆ ಆರೋಪ ➤ ಯುವಕ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಡಿ. 01. ಸುಬ್ರಹ್ಮಣ್ಯ ಷಷ್ಠಿಯಂದು ವ್ಯಾಪಾರ ಮಾಡುತ್ತಿದ್ದ ಕಡಬದ ಯುವಕನೋರ್ವನಿಗೆ ಸುಬ್ರಹ್ಮಣ್ಯ ಪೋಲಿಸ್ ಠಾಣಾ ಸಿಬ್ಬಂದಿಯೋರ್ವರು ಹಣ ನೀಡುವಂತೆ ಒತ್ತಾಯಿಸಿ, ಯುವಕನನ್ನು ಪೋಲಿಸ್ ವಸತಿ ಗೃಹಕ್ಕೆ ಕರೆದೊಯ್ದು ಚಿತ್ರ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಿ ಯುವಕ ಕಡಬ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘನೆ ವರದಿಯಾಗಿದೆ.   ಹಲ್ಲೆಗೊಳಗಾದವರನ್ನು ಕುಟ್ರುಪಾಡಿ ಗ್ರಾಮದ ಬೀಮಗುಂಡಿ ನಿವಾಸಿ ಶಶಿಕಿರಣ್ ಎಂದು ಗುರುತಿಸಲಾಗಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಶಶಿಕಿರಣ್, ಚಂಪಾಷಷ್ಠಿಯಂದು ನಾನು ಜ್ಯೂಸ್ ಐಸ್

ಸುಬ್ರಹ್ಮಣ್ಯ ಷಷ್ಟಿಯಲ್ಲಿ ವ್ಯಾಪಾರ ಮಾಡುತ್ತಿದ್ದ ಯುವಕನಿಗೆ ಪೊಲೀಸ್ ಸಿಬ್ಬಂದಿಯಿಂದ ಹಲ್ಲೆ ಆರೋಪ ➤ ಯುವಕ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ
Scroll to Top