ಕರಾವಳಿ

ಪುತ್ತೂರು: ಗಾಂಜಾ ನಶೆಯಲ್ಲಿ ಅನುಚಿತ ವರ್ತನೆ ➤‌ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 13. ಗಾಂಜಾ ನಶೆಯಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬರನ್ನು ಪುತ್ತೂರು ನಗರ ಪೊಲೀಸ್ ಠಾಣಾ ಎಸ್.ಐ ಶ್ರೀಕಾಂತ್ ರಾಥೋಡ್ ಅವರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತನನ್ನು ಕಬಕ ಗ್ರಾಮದ ಕಲ್ಲಂದಡ್ಕ ನಿವಾಸಿ ಉಮ್ಮರ್ ಫಾರೂಖ್ (36) ಎಂದು ಗುರುತಿಸಲಾಗಿದೆ. ಎಸ್.ಐ ಶ್ರೀಕಾಂತ್ ರಾಥೋಡ್ ಮತ್ತು ಸಿಬ್ಬಂದಿಗಳು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಕಬಕ ಗ್ರಾಮದ ಪೋಳ್ಯ ಸಾರ್ವಜನಿಕ ಬಸ್ ತಂಗುದಾಣದಲ್ಲಿ ವ್ಯಕ್ತಿಯೋರ್ವ ಅನುಚಿತವಾಗಿ ವರ್ತಿಸುತ್ತಾ ಸಾರ್ವಜನಿಕರನ್ನುದ್ದೇಶಿಸಿ ಹೀನಾಯವಾಗಿ ಮಾತನಾಡುತ್ತಾ ತೊಂದರೆ ನೀಡುತ್ತಿರುವುದಾಗಿ ಬಂದ […]

ಪುತ್ತೂರು: ಗಾಂಜಾ ನಶೆಯಲ್ಲಿ ಅನುಚಿತ ವರ್ತನೆ ➤‌ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ತೋಡಿನ ನೀರಿಗೆ ಸೇರಿಕೊಂಡ ರಾಸಾಯನಿಕ ➤‌ ಸ್ಥಳಕ್ಕೆ ಕಡಬ ತಹಶೀಲ್ದಾರ್ ಭೇಟಿ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಅ. 13. ಹರಿಯುವ ನೀರಿಗೆ ರಾಸಾಯನಿಕ ಪದಾರ್ಥ ಸೇರಿಕೊಂಡ ಪರಿಣಾಮ ಮೀನು ಸೇರಿದಂತೆ ನೂರಾರು ಜಲಚರಗಳು ಸತ್ತುಹೋಗಿರುವ ಇಚ್ಲಂಪಾಡಿ ಗ್ರಾಮದ ಕೊರಮೇರು ಪ್ರದೇಶಕ್ಕೆ ಕಡಬ ತಹಶೀಲ್ದಾರ್ ರಮೇಶ್‌ಬಾಬು ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಇಚ್ಲಂಪಾಡಿ ಗ್ರಾಮದ ಕೊರಮೇರು ಎಂಬಲ್ಲಿ ಯಾರೋ ಟ್ಯಾಂಕರ್‌ನಿಂದ ಹರಿಯುವ ತೋಡಿನ ನೀರಿಗೆ ರಾಸಾಯನಿಕ ಪದಾರ್ಥ ಹರಿಯಬಿಟ್ಟ ಪರಿಣಾಮ ತೋಡಿನಲ್ಲಿದ್ದ ಮೀನು ಸೇರಿದಂತೆ ನೂರಾರು ಜಲಚರಗಳು ಸಾವನ್ನಪ್ಪಿದ್ದವು. ಈ ಹಿನ್ನೆಲೆಯಲ್ಲಿ ಕಡಬ ತಹಶೀಲ್ದಾರ್ ರಮೇಶ್‌ಬಾಬುರವರು

ತೋಡಿನ ನೀರಿಗೆ ಸೇರಿಕೊಂಡ ರಾಸಾಯನಿಕ ➤‌ ಸ್ಥಳಕ್ಕೆ ಕಡಬ ತಹಶೀಲ್ದಾರ್ ಭೇಟಿ Read More »

ಕರಾವಳಿ

ಉಪ್ಪಿನಂಗಡಿ ಠಾಣಾ ಎದುರಿನಲ್ಲೇ ಕಳ್ಳರ ಕೈಚಳಕ ➤‌ ಮೂರು ಅಂಗಡಿಗೆ ನುಗ್ಗಿದ ಕಳ್ಳರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ. 13. ಇಲ್ಲಿನ ಪೊಲೀಸ್ ಠಾಣಾ ಮುಂಭಾಗದಲ್ಲಿರುವ ಅಂಗಡಿಯೊಂದಕ್ಕೆ ಕಳ್ಳರು ನುಗ್ಗಿದ ಘಟನೆ ಅ.13ರಂದು ಬೆಳಗ್ಗೆ ಬೆಳಕಿಗೆ ಬಂದಿದೆ. ಇಲ್ಲಿನ ಲಕ್ಷ್ಮೀ ಸ್ಟೋರ್ ಎಂಬ ಅಂಗಡಿಯ ಷಟರ್ ಮುರಿದು ಒಳನುಗ್ಗಿರುವ ಕಳ್ಳರು ಸುಮಾರು 40 ಸಾವಿರ ರೂಪಾಯಿ ನಗದು ಹಾಗೂ ಸೊತ್ತುಗಳನ್ನು ದೋಚಿದ್ದಾರೆ. ಹಾಗೂ ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿಯ ಸೆಲ್ ಸೈಟ್ ಮೊಬೈಲ್ ಶಾಪ್ ಗೆ ನುಗ್ಗಿದ ಕಳ್ಳರು 5 ಸಾವಿರ ರೂಪಾಯಿ ನಗದು ದೋಚಿದ್ದಾರೆ. ಅಲ್ಲದೇ ಬ್ಯಾಂಕ್ ರಸ್ತೆಯಲ್ಲಿರುವ

ಉಪ್ಪಿನಂಗಡಿ ಠಾಣಾ ಎದುರಿನಲ್ಲೇ ಕಳ್ಳರ ಕೈಚಳಕ ➤‌ ಮೂರು ಅಂಗಡಿಗೆ ನುಗ್ಗಿದ ಕಳ್ಳರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಪಿಎಫ್ಐ ನಾಯಕರ ಮನೆ ಮೇಲೆ ಮತ್ತೆ ಪೊಲೀಸ್ ದಾಳಿ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 13. ನಗರದ ವಿವಿಧೆಡೆ ಇರುವ ಪಿಎಫ್‌ಐ ಮತ್ತು ಎಸ್‌ಡಿಪಿಐ ನಾಯಕರ ಮನೆಗೆ ಇಂದು ಬೆಳ್ಳಂಬೆಳಗ್ಗೆ ಪೊಲೀಸರು ದಾಳಿ ನಡೆಸಿ, ಮನೆಗಳಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ಈ ವೇಳೆ ಏಳು ಮಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಪಣಂಬೂರು, ಉಳ್ಳಾಲ, ಬಜ್ಪೆ ಠಾಣಾ ವ್ಯಾಪ್ತಿಯ 9 ಕಡೆ ದಾಳಿ ನಡೆಸಿದ ಪೊಲೀಸರು, ಎಸ್‌ಡಿಪಿಐ ಜಿಲ್ಲಾಧ್ಯಕ್ಷರ ಮನೆ ಮೇಲೆಯೂ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ವಿಶೇಷ ತಂಡಗಳನ್ನು ರಚಿಸಿ ಪೊಲೀಸರು ಈ ದಾಳಿ ನಡೆಸಿದ್ದು,

ಮಂಗಳೂರು: ಪಿಎಫ್ಐ ನಾಯಕರ ಮನೆ ಮೇಲೆ ಮತ್ತೆ ಪೊಲೀಸ್ ದಾಳಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಹೊತ್ತಿ ಉರಿದ ಮನೆ ➤‌ ಅಪಾರ ನಷ್ಟ

(ನ್ಯೂಸ್ ಕಡಬ) newskadaba.com ಉಡುಪಿ, ಅ. 13. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ಹೊತ್ತಿಕೊಂಡಿದ್ದು, ಅಪಾರ ನಷ್ಟ ಸಂಭವಿಸಿದ ಘಟನೆ ಪರ್ಕಳ ಈಶ್ವರನಗರದ ವಿವೇಕಾನಂದ ನಗರದಲ್ಲಿ ನಡೆದಿದೆ. ಬೆಂಕಿ ಅವಘಡದಲ್ಲಿ ಮನೆ ಸುಟ್ಟು ಕರಕಲಾಗಿದ್ದು, ಗೃಹೋಪಯೋಗಿ ಉಪಕರಣಗಳಾದ ಟಿವಿ, ಫ್ರಿಜ್, ಸೋಫಾ, ಬೆಡ್ ಸೇರಿದಂತೆ 1 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಘಟನೆಯ ವೇಳೆ ಮನೆಯಲ್ಲಿ ಯಾರೂ ಇರದೇ ಇದ್ದುದರಿಂದ ವಿಷಯ ತಿಳಿದ ನೆರೆಹೊರೆಯವರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಸ್ಥಳೀಯ ಸಿಎಂಸಿ

ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಹೊತ್ತಿ ಉರಿದ ಮನೆ ➤‌ ಅಪಾರ ನಷ್ಟ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ಮನೆಬಿಟ್ಟು ತೆರಳಿದ ಬಾಲಕಿಯರನ್ನು ಹುಡುಕುತ್ತಿದ್ದ ವೇಳೆ ದಾರಿಯಲ್ಲಿ ಸಿಕ್ಕ ಅಮಾಯಕರಿಗೆ ಹಲ್ಲೆ

(ನ್ಯೂಸ್ ಕಡಬ) newskadaba.com ವಿಟ್ಲ, ಅ. 11. ಇಬ್ಬರು ಬಾಲಕಿಯರು ಮನೆ ಬಿಟ್ಟು ತೆರಳಿದ್ದು, ಅವರನ್ನು ಹುಡುಕಿಕೊಂಡು ಬಂದ ಯುವಕರ ತಂಡವೊಂದು ದಾರಿಯಲ್ಲಿ ಸಿಕ್ಕಿದ ಅಮಾಯಕ ಬೇರೆ ಇಬ್ಬರು ಬಾಲಕಿಯರಿಗೆ ಹಿಗ್ಗಾಮುಗ್ಗ ಹಲ್ಲೆ ನಡೆಸಿದ ಘಟನೆ ವಿಟ್ಲದಲ್ಲಿ ನಡೆದಿದೆ. ಸಾಲೆತ್ತೂರು ನಿವಾಸಿ ಆಟೋ ಚಾಲಕರೊಬ್ಬರ ಪುತ್ರಿ, ಆಕೆಯ ಸ್ನೇಹಿತೆ ಮತ್ತೋರ್ವ ಬಾಲಕಿಯ ಜೊತೆ ಮನೆಯಲ್ಲಿ ಹೇಳದೇ ಮನೆಬಿಟ್ಟು ತೆರಳಿದ್ದರು.‌ ಈ ಬಗ್ಗೆ ಎಲ್ಲಾ ಕಡೆ ಹುಡುಕಾಡಿದರೂ ಯಾವುದೇ ಸುಳಿವು ಸಿಗದೇ ಇದ್ದ ಹಿನ್ನೆಲೆ, ಕೆಲ ಸ್ವಯಂ ಘೋಷಿತ

ವಿಟ್ಲ: ಮನೆಬಿಟ್ಟು ತೆರಳಿದ ಬಾಲಕಿಯರನ್ನು ಹುಡುಕುತ್ತಿದ್ದ ವೇಳೆ ದಾರಿಯಲ್ಲಿ ಸಿಕ್ಕ ಅಮಾಯಕರಿಗೆ ಹಲ್ಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಲ್ಯಾಪ್ ಟಾಪ್ ಮಾರಾಟದಲ್ಲಿ ವಂಚನೆ ➤‌ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 11. ಕಡಿಮೆ ದರದಲ್ಲಿ ಲ್ಯಾಪ್‌ಟಾಪ್‌ ನೀಡುವುದಾಗಿ ಹೇಳಿ ವ್ಯಕ್ತಿಯೋರ್ವರಿಗೆ 5.73 ಲಕ್ಷ ರೂ. ವಂಚಿಸಿರುವ ಬಗ್ಗೆ ಮಂಗಳೂರು ಉತ್ತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಉದ್ಯಮಿಯೋರ್ವರು ಕಂಪ್ಯೂಟರ್‌ ಹಾಗೂ ಲ್ಯಾಪ್‌ಟಾಪ್‌ ಮೊದಲಾದ ಬಿಡಿಭಾಗಗಳನ್ನು ಮಾರಾಟ ಮಾಡುತ್ತಿದ್ದು, ಅವರಿಗೆ ಜೈಪುರ ವೈಶಾಲಿ ನಗರದ ಮಿರಾಕಲ್‌ ಟೆಕ್ನಾಲಜೀಸ್‌ನ ಮನೋಜ್‌ ಚೌರಾಸಿಯಾ ಎಂಬಾತ ಕರೆ ಮಾಡಿ ಕಡಿಮೆ ದರದಲ್ಲಿ ಲ್ಯಾಪ್‌ಟಾಪ್‌ ನೀಡುವುದಾಗಿ ತಿಳಿಸಿದ್ದ. ಅದರಂತೆ ಆಗಸ್ಟ್‌ ತಿಂಗಳಿನಲ್ಲಿ ಆತನಿಂದ ಎರಡು ಲ್ಯಾಪ್‌ಟಾಪ್‌ ಗಳನ್ನು

ಮಂಗಳೂರು: ಲ್ಯಾಪ್ ಟಾಪ್ ಮಾರಾಟದಲ್ಲಿ ವಂಚನೆ ➤‌ ದೂರು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಂಕದಕಟ್ಟೆ: ಅನ್ಸಾರುಲ್ ಇಸ್ಲಾಂ ಯಂಗ್ ಮೆನ್ಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಸಿಯಾಬುದ್ದೀನ್ ಆಯ್ಕೆ

(ನ್ಯೂಸ್ ಕಡಬ) newskadaba.com ಸುಂಕದಕಟ್ಟೆ, ಅ. 11. ಅನ್ಸಾರುಲ್ ಇಸ್ಲಾಂ ಯಂಗ್ ಮೆನ್ಸ್ ಅಸೋಸಿಯೇಷನ್ ಸುಂಕದಕಟ್ಟೆ ಇದರ ನೂತನ ಪದಾದಿಕಾರಿಗಳ ನೇಮಕ ಪ್ರಕ್ರಿಯೆಯು ಇತ್ತೀಚೆಗೆ ನಡೆಯಿತು. ಇದರ ಅಧ್ಯಕ್ಷರಾಗಿ ಸಿಯಾಬುದ್ದೀನ್, ಉಪಾಧ್ಯಕ್ಷರಾಗಿ ಇರ್ಷಾದ್ ಹಾಗೂ ನಿಝಾಮುದ್ದೀನ್, ಪ್ರದಾನ ಕಾರ್ಯದರ್ಶಿಯಾಗಿ ರವೂಫ್ ಮಶ್ರಿಕ್, ಜೊತೆ ಕಾರ್ಯದರ್ಶಿಯಾಗಿ ನವಾಝ್, ಸಹ ಕಾರ್ಯದರ್ಶಿಯಾಗಿ ಜಬ್ಬಾರ್, ಕೋಶಾಧಿಕಾರಿಯಾಗಿ ಅಶ್ರಫ್ ಇಂಡಿಯಾ, ಸಂಘಟನಾ ಕಾರ್ಯದರ್ಶಿಯಾಗಿ ಫಾರೂಕ್ ಹಾಗೂ ಜಲೀಲ್ ಅವರನ್ನು ನೇಮಕ ಮಾಡಲಾಯಿತು. ಸಲಹೆಗಾರರಾಗಿ ಇರ್ಶಾದ್ ಮತ್ತು ನಿಝಾಮ್ ಉಸ್ತಾದ್, ಮೀಡಿಯ ವಿಂಗ್ ತಾಜುದ್ದೀನ್

ಸುಂಕದಕಟ್ಟೆ: ಅನ್ಸಾರುಲ್ ಇಸ್ಲಾಂ ಯಂಗ್ ಮೆನ್ಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಸಿಯಾಬುದ್ದೀನ್ ಆಯ್ಕೆ Read More »

ಕರಾವಳಿ, ಕರ್ನಾಟಕ

ನೆಟ್ಟಣ: ರೈಲು ಹಳಿ ದಾಟುತ್ತಿದ್ದ ವೇಳೆ ಎಂಜಿನ್ ಢಿಕ್ಕಿ ➤‌ ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com ನೆಟ್ಟಣ, ಅ. 10. ಇಲ್ಲಿನ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದ ಬಳಿ ರೈಲು ಇಂಜಿನ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಂದು ಮಧ್ಯಾಹ್ನ ನೆಟ್ಟಣದಲ್ಲಿ ನಡೆದಿದೆ. ಗಂಭೀರ ಗಾಯಗೊಂಡವರನ್ನು ಐತ್ತೂರು ಗ್ರಾಮದ ಓಟೆಕಜೆ ನಾಗಣ್ಣ ಎಂದು ಗುರುತಿಸಲಾಗಿದೆ. ರೈಲು ಇಂಜಿನ್ ಡಿಕ್ಕಿ ಹೊಡೆದ ರಭಸಕ್ಕೆ ವ್ಯಕ್ತಿಯ ಒಂದು ಕಾಲು ಮತ್ತು ಒಂದು ಕೈ ತುಂಡಾಗಿದ್ದು, ಗಂಭೀರ ಗಾಯಗೊಂಡ ಅವರನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರಿನಲ್ಲಿ

ನೆಟ್ಟಣ: ರೈಲು ಹಳಿ ದಾಟುತ್ತಿದ್ದ ವೇಳೆ ಎಂಜಿನ್ ಢಿಕ್ಕಿ ➤‌ ವ್ಯಕ್ತಿ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಆರ್ಟಿಒ ಆವರಣದಲ್ಲಿ ಮಾತಿನ ಚಕಮಕಿ

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 10. ಬನ್ನೂರಿನ ಪ್ರಾದೇಶಿಕ ಸಾರಿಗೆ ಇಲಾಖೆಯ ಹೊರ ಆವರಣದಲ್ಲಿ ಖಾಸಗಿ ಸಂಸ್ಥೆಯ ವ್ಯಕ್ತಿ ಮತ್ತು ಸಾರ್ವಜನಿಕರೊಬ್ಬರ ನಡುವೆ ಮಾತಿನ ಚಕಮಕಿ ನಡೆದು ಕೊನೆಗೆ ಅದು ಹಲ್ಲೆ ನಡೆಸುವ ಹಂತಕ್ಕೆ ಏರಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಸಾರ್ವಜನಿಕರೊಬ್ಬರು ಬ್ಲಾಕ್ ಆಗಿರುವ ವಾಹನ ಚಲನಾ ಪರವಾನಿಗೆಯ ದಾಖಲೆ ಪತ್ರವನ್ನು ಖಾಸಗಿ ಸಂಸ್ಥೆಯೊಬ್ಬರ ಮೂಲಕ ಪ್ರಾದೇಶಿಕ ಸಾರಿಗೆ ಕಚೇರಿಗೆ ನೀಡುವಲ್ಲಿ ನಡೆದ ವ್ಯತ್ಯಾಸಕ್ಕೆ ಸಂಬಂಧಿಸಿ ಅವರಿಬ್ಬರೊಳಗೆ ಕಚೇರಿಯ ಹೊರ ಆವರಣದ ಗೇಟ್ ಬಳಿ

ಪುತ್ತೂರು: ಆರ್ಟಿಒ ಆವರಣದಲ್ಲಿ ಮಾತಿನ ಚಕಮಕಿ Read More »

ಕರಾವಳಿ, ಕರ್ನಾಟಕ
Scroll to Top