ಕರಾವಳಿ

ಕಡಬ: ಓವರ್‌ಟೇಕ್ ಮಾಡುವ ವೇಳೆ ನಿಯಂತ್ರಣ ತಪ್ಪಿದ ಬಸ್ ➤‌ ರಸ್ತೆ ಬದಿಯ ಚರಂಡಿಗೆ ಬಿದ್ದ ಕೆಎಸ್ಸಾರ್ಟಿಸಿ ಬಸ್

(ನ್ಯೂಸ್ ಕಡಬ) newskadaba.com ಕಡಬ, ಸೆ.30. ಓವರ್‌ಟೇಕ್ ಮಾಡುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಸಾರ್ಟಿಸಿ ಬಸ್ಸೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪದವು ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಉಪ್ಪಿನಂಗಡಿಯಿಂದ ಕಡಬ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸನ್ನು ಹಿಂದಿನಿಂದ ತೆರಳುತ್ತಿದ್ದ ಮತ್ತೊಂದು ಕೆಎಸ್ಸಾರ್ಟಿಸಿ ಬಸ್ ಓವರ್‌ಟೇಕ್ ಮಾಡುವ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ಚರಂಡಿಗೆ ಬಿದ್ದಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ತರಚಿದ ಗಾಯಗಳೊಂದಿಗೆ […]

ಕಡಬ: ಓವರ್‌ಟೇಕ್ ಮಾಡುವ ವೇಳೆ ನಿಯಂತ್ರಣ ತಪ್ಪಿದ ಬಸ್ ➤‌ ರಸ್ತೆ ಬದಿಯ ಚರಂಡಿಗೆ ಬಿದ್ದ ಕೆಎಸ್ಸಾರ್ಟಿಸಿ ಬಸ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ: ಕಾಡಿನಲ್ಲಿ ವೀಡಿಯೋ ಮಾಡುತ್ತಾ ವಿಷ ಸೇವಿಸಿದ ಯುವಕ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಸೆ. 29. ಯುವಕನೋರ್ವ ಧರ್ಮಸ್ಥಳ ಸಮೀಪದ ಕಾಡಿನಲ್ಲಿ ವೀಡಿಯೋ ಮಾಡಿ ವಿಷ ಸೇವಿಸಿದ್ದಲ್ಲದೇ ಅದನ್ನು ಕುಟುಂಬಸ್ಥರಿಗೆ ಕಳುಹಿಸಿದ್ದು, ಈ ಕುರಿತು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ಬಂದ ಮೇರೆಗೆ ಸ್ಥಳಕ್ಕೆ ತೆರಳಿದ ಪೊಲೀಸರು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ವರದಿಯಾಗಿದೆ.   ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ರಾಮನಾಥ್‌ ಪುರದ ನಿವಾಸಿ ಸುನಿಲ್‌ (28) ಎಂಬಾತ ಬೈಕ್ ನಲ್ಲಿ ಬುಧವಾರದಂದು ಬೆಳಗ್ಗೆ ಧರ್ಮಸ್ಥಳಕ್ಕೆ ಬಂದು, ದೇವರ

ಧರ್ಮಸ್ಥಳ: ಕಾಡಿನಲ್ಲಿ ವೀಡಿಯೋ ಮಾಡುತ್ತಾ ವಿಷ ಸೇವಿಸಿದ ಯುವಕ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸವಣೂರು: ಪಿಎಫ್ಐ ಕಛೇರಿಗೆ ಪೊಲೀಸ್, ಕಂದಾಯ ಇಲಾಖೆಯಿಂದ ಬೀಗ

(ನ್ಯೂಸ್ ಕಡಬ) newskadaba.com ಸವಣೂರು, ಸೆ. 29. ಯುಎಪಿಎ ಕಾಯ್ದೆಯಡಿ ಕೇಂದ್ರ ಸರ್ಕಾರ ನಿಷೇಧಿಸಿರುವ ಪಿಎಫ್ಐ ಸೇರಿದಂತೆ 8 ಸಂಘಟನೆಗಳ ಪೈಕಿ ಸವಣೂರಿನಲ್ಲಿದ್ದ ಪಿಎಫ್ಐ ಕಚೇರಿಗೆ ಪೊಲೀಸ್ ಇಲಾಖೆ ಹಾಗೂ ಕಂದಾಯ ಇಲಾಖೆಯ ವತಿಯಿಂದ ಬೀಗ ಹಾಕಲಾಗಿದೆ. ಈ ಸಂದರ್ಭದಲ್ಲಿ ಕಡಬ ತಹಶೀಲ್ದಾರ್ ರಮೇಶ್ ಬಾಬು, ಉಪ ತಹಶೀಲ್ದಾರ್ ಮನೋಹರ್, ಬೆಳ್ಳಾರೆ ಪೊಲೀಸ್ ಠಾಣಾ ಎಸ್.ಐ ಸುಹಾಸ್, ಕಂದಾಯ ನಿರೀಕ್ಷಕ ಪೃಥ್ವಿ, ಗ್ರಾಮಕರಣಿಕ ಬಸವರಾಜು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸವಣೂರು: ಪಿಎಫ್ಐ ಕಛೇರಿಗೆ ಪೊಲೀಸ್, ಕಂದಾಯ ಇಲಾಖೆಯಿಂದ ಬೀಗ Read More »

ಕರಾವಳಿ, ಕರ್ನಾಟಕ

ಮರ್ಧಾಳ: ಆಟೋ ಚಾಲಕ- ಮಾಲಕ ಸಂಘ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಮರ್ಧಾಳ, ಸೆ. 29. ಇಲ್ಲಿನ ಆಟೋ ಚಾಲಕ- ಮಾಲಕರ ಶ್ರೇಯಾಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಮರ್ದಾಳ ವ್ಯಾಪ್ತಿಯ ಆಟೋ ಚಾಲಕ – ಮಾಲಕರನ್ನೊಳಗೊಂಡ ಸೌಹಾರ್ದ ಸಂಗಮ ಸಂಘದ ಉದ್ಘಾಟನಾ ಕಾರ್ಯಕ್ರಮವು ಇಂದು ಬೆಳಿಗ್ಗೆ ಮರ್ಧಾಳದ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಇದರ ಉದ್ಘಾಟನೆಯನ್ನು ಕಡಬ ಠಾಣಾ ಎಸ್ಐ ಆಂಜನೇಯ ರೆಡ್ಡಿಯವರು ದೀಪ ಬೆಳಗಿಸುವ ಮೂಲಕ ಮೂಲಕ ನೆರವೇರಿಸಿದರು. ಸೌಹಾರ್ದ ಸಂಗಮದ ಆಟೋ ಚಾಲಕ ಮಾಲಕ ಸಂಘದ ಗೌರವಾಧ್ಯಕ್ಷರಾಗಿ ಎ.ಪಿ ಚೆರಿಯನ್ ಇವರನ್ನು ನೇಮಕ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು

ಮರ್ಧಾಳ: ಆಟೋ ಚಾಲಕ- ಮಾಲಕ ಸಂಘ ಉದ್ಘಾಟನೆ Read More »

ಕರಾವಳಿ, ಕರ್ನಾಟಕ

ವಿಟ್ಲ ಠಾಣಾ ತನಿಖಾ ಎಸ್ಐ ಆಗಿ ರುಕ್ಮ ನಾಯ್ಕ್ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ವಿಟ್ಲ, ಸೆ.29. ವಿಟ್ಲ ಠಾಣಾ ತನಿಖಾ ಸಬ್ ಇನ್ಸ್‌ಪೆಕ್ಟರ್ ಆಗಿ ರುಕ್ಮ‌ನಾಯ್ಕ್ ಅಧಿಕಾರ ಸ್ವೀಕರಿಸಿದರು. ಈ ಮೊದಲು ಕಡಬ ಠಾಣೆಯಲ್ಲಿ ಕಾರ್ಯ ನಿರ್ವಹಿಸಿ, ಬಳಿಕ ಬೆಳ್ಳಾರೆ ಠಾಣೆಗೆ ವರ್ಗಾವಣೆಗೊಂಡಿದ್ದ ಇವರು, ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ನಂತರದ ಬೆಳವಣಿಗೆಯಲ್ಲಿ ಪೊಲೀಸ್ ವರಿಣ್ಠಾಧಿಕಾರಿ ಕಛೇರಿಗೆ ವರ್ಗಾಯಿಸಲಾಗಿತ್ತು. ಇದೀಗ ವಿಟ್ಲ ಠಾಣೆಯ ತನಿಖಾ ಎಸ್ಐ ವರ್ಗಾಯಿಸಲಾಗಿದೆ.  

ವಿಟ್ಲ ಠಾಣಾ ತನಿಖಾ ಎಸ್ಐ ಆಗಿ ರುಕ್ಮ ನಾಯ್ಕ್ ಅಧಿಕಾರ ಸ್ವೀಕಾರ Read More »

ಕರಾವಳಿ

ಮಂಗಳೂರು: ಚಿಟ್ ಫಂಡ್ ನಿಂದ ಹತ್ತು ಲಕ್ಷ ರೂ. ವಂಚನೆ ➤‌ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 27. ಚಿಟ್‌ ಫಂಡ್‌ನಲ್ಲಿ 10 ಲಕ್ಷ ರೂ. ವಂಚಿಸಿದ ಆರೋಪಕ್ಕೆ ಸಂಬಂಧಿಸಿ ವ್ಯಕ್ತಿಯೋರ್ವ ಮೂವರ ವಿರುದ್ಧ ದೂರು ದಾಖಲಿಸಿದ ಘಟನೆ ಸುರತ್ಕಲ್ ನ ಇಡ್ಯ ಗ್ರಾಮದಲ್ಲಿ ವರದಿಯಾಗಿದೆ. ಸುರತ್ಕಲ್‌ನ ಇಡ್ಯ ಗ್ರಾಮದ ಫೈನಾನ್ಸ್‌ ಕಂಪನಿ ಮೂಲಕ ಚಿಟ್‌ ಫಂಡ್‌ ವ್ಯವಹಾರ ನಡೆಸುತ್ತಿದ್ದ ಅಶೋಕ್‌ ಭಟ್‌, ವಿದ್ಯಾ ಮತ್ತು ಪ್ರಿಯಾಂಕಾ ಭಟ್‌ ಅವರು ಕೊಡಬೇಕಾದ 10 ಲಕ್ಷ ರೂಪಾಯಿ ನೀಡಿಲ್ಲ ಎಂದು ಸಿಇಎನ್‌ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. 10 ಲಕ್ಷ

ಮಂಗಳೂರು: ಚಿಟ್ ಫಂಡ್ ನಿಂದ ಹತ್ತು ಲಕ್ಷ ರೂ. ವಂಚನೆ ➤‌ ದೂರು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಕ್ರೈಸ್ತ ಅಲ್ಪಸಂಖ್ಯಾತರ ವಿವಿಧೋದ್ದೇಶ ಸಹಕಾರಿ ಸಂಘ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 27. ಸಹಕಾರಿ ತತ್ವವನ್ನು ಪಾಲಿಸುವ ಮೂಲಕ ಪ್ರತಿಯೊಬ್ಬ ವ್ಯಕ್ತಿಯೂ ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆರ್ಥಿಕ ಸ್ವಾವಲಂಬನೆ ದೇಶದ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಪುತ್ತೂರು ಧರ್ಮಪ್ರಾಂತದ ಧರ್ಮಾಧ್ಯಕ್ಷ ವಂ| ಬಿಷಪ್ ಗೀವರ್ಗಿಸ್ ಮಾರ್ ಮಕ್ಕಾರಿಯೋಸ್ ನುಡಿದರು. ಅವರು ಕ್ರೈಸ್ತ ಅಲ್ಪಸಂಖ್ಯಾತರ ವಿವಿಧೋದ್ದೇಶ ಸಹಕಾರಿ ಸಂಘದ ಕಡಬ ಶಾಖೆಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ಎಲ್ಲರೂ ಬೆಳೆಯಬೇಕೆಂಬ ಶುದ್ಧ ಮನಸ್ಸಿನಿಂದ ನಾವು ಕಾರ್ಯೋನ್ಮುಖರಾದರೆ ನಾವೂ ಬೆಳೆಯಬಹುದು. ನಮ್ಮ ಜೊತೆಗಿರುವವರೂ ಬೆಳೆಯಬಹುದು. ಆದುದರಿಂದ ಸಂಸ್ಥೆಯ ಬೆಳವಣಿಗೆಯಲ್ಲಿ ಕೈಜೋಡಿಸುವ

ಕಡಬ: ಕ್ರೈಸ್ತ ಅಲ್ಪಸಂಖ್ಯಾತರ ವಿವಿಧೋದ್ದೇಶ ಸಹಕಾರಿ ಸಂಘ ಉದ್ಘಾಟನೆ Read More »

ಕರಾವಳಿ

ಮಂಗಳೂರು, ಉಡುಪಿಯ ಹಲವೆಡೆ ಪೊಲೀಸ್ ದಾಳಿ ➤‌ ಹಲವು ಪಿಎಫ್ಐ ನಾಯಕರು ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 27. ನಗರ ಹಾಗೂ ಗ್ರಾಮಾಂತರ ಪ್ರದೇಶದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯ ಹಲವು ಮಂದಿ ನಾಯಕರನ್ನು ಪೊಲೀಸರು ಸೋಮವಾರ ತಡರಾತ್ರಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಉಳ್ಳಾಲ, ತಲಪಾಡಿ, ಮಂಗಳೂರು ಹಾಗೂ ದ.ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಯ ಕೆಲವು ಪ್ರದೇಶದ ಮನೆಗಳಿಂದ ಹಲವು ಮಂದಿ ಪಿಎಫ್‌ಐ ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಮಂದಿಯನ್ನು ಸೆಕ್ಷನ್ 107, 157 ಕಾಯ್ದೆಯಡಿ ವಶಕ್ಕೆ ಪಡೆದು,

ಮಂಗಳೂರು, ಉಡುಪಿಯ ಹಲವೆಡೆ ಪೊಲೀಸ್ ದಾಳಿ ➤‌ ಹಲವು ಪಿಎಫ್ಐ ನಾಯಕರು ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಅಪಘಾತ ತಪ್ಪಿಸಲು ಹೋಗಿ ಮನೆಗೆ ಢಿಕ್ಕಿ ಹೊಡೆದ ಲಾರಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 27. ಅಪಘಾತ ತಪ್ಪಿಸಲು ಹೋದ ಲಾರಿಯೊಂದು ರಸ್ತೆ ಬದಿಯ ಮನೆಗೆ ಢಿಕ್ಕಿ ಹೊಡೆದ ಘಟನೆ ನಿಡಿಗಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರದಂದು ನಡೆದಿದೆ. ಅತಿವೇಗದಲ್ಲಿ ಬಂದ ಬಸ್ ಲಾರಿಯನ್ನು ಓವರ್ ಟೇಕ್ ಮಾಡಿದ್ದು, ಈ ಸಂದರ್ಭ ಅಪಘಾತ ತಪ್ಪಿಸಲು ಲಾರಿ ಚಾಲಕ ವಾಹನವನ್ನು ರಸ್ತೆ ಬದಿಗೆ ತಂದಿದ್ದಾನೆ. ಈ ವೇಳೆ ಲಾರಿಯಲ್ಲಿ ಮರದ ದಿಮ್ಮಿಗಳು ತುಂಬಿದ್ದರಿಂದ ನಿಯಂತ್ರಣ ಕಳೆದುಕೊಂಡ ಲಾರಿಯು ರಸ್ತೆ ಬದಿಯಲ್ಲಿದ್ದ ಹಳೆ ಮನೆಗೆ ನುಗ್ಗಿದ್ದು ,ಮನೆಯ ಮೇಲ್ಛಾವಣಿ

ಬೆಳ್ತಂಗಡಿ: ಅಪಘಾತ ತಪ್ಪಿಸಲು ಹೋಗಿ ಮನೆಗೆ ಢಿಕ್ಕಿ ಹೊಡೆದ ಲಾರಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿಗಳ ನಡುವೆ ಮಾರಾಮಾರಿ ➤‌ ಮೂವರು ವಶಕ್ಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 27. ಇಲ್ಲಿನ ಸರಕಾರಿ ಪಿಯು ಕಾಲೇಜಿನಲ್ಲಿ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಸೆ. 26ರ ಸೋಮವಾರದಂದು ಸಂಜೆ ಉಪ್ಪಿನಂಗಡಿಯ ಬಸ್ ನಿಲ್ದಾಣದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಯೊಬ್ಬರ ಮೇಲೆ ಪ್ರಥಮ ವರ್ಷದ ಪಿಯು ವಿದ್ಯಾರ್ಥಿಯು ಹಲ್ಲೆ ನಡೆಸಿದ ವಿಚಾರವಾಗಿ ಎರಡು ಗುಂಪುಗಳ ನಡುವೆ ವಾಗ್ವಾದ ನಡೆದಿದ್ದು, ಈ ಸಂಬಂಧ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿಗಳ ನಡುವೆ ಮಾರಾಮಾರಿ ➤‌ ಮೂವರು ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top