ಕರಾವಳಿ

ಮರ್ಧಾಳ: ಕಾರುಗಳ ಓವರ್‌ಟೇಕ್ ಭರದಲ್ಲಿ ರಸ್ತೆ ಪಕ್ಕ ಸಿಲುಕಿಕೊಂಡ ಕೆಎಸ್ಸಾರ್ಟಿಸಿ ಬಸ್ ➤‌ ಬಸ್ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿತು ಭಾರೀ ಅನಾಹುತ

(ನ್ಯೂಸ್ ಕಡಬ) newskadaba.com ಕಡಬ, ಸೆ.25. ಕಾರುಗಳೆರಡರ ಓವರ್‌ಟೇಕ್ ಭರದಲ್ಲಿ ಕೆಎಸ್ಸಾರ್ಟಿಸಿ ಬಸ್ ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರೀ ಅವಘಡವೊಂದು ತಪ್ಪಿದ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಬ್ರಾಂತಿಕಟ್ಟೆ ಎಂಬಲ್ಲಿ ಭಾನುವಾರದಂದು ನಡೆದಿದೆ. ಸುಬ್ರಹ್ಮಣ್ಯದಿಂದ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಎಕ್ಸ್‌ಪ್ರೆಸ್ ಬಸ್ ಗೆ ಬ್ರಾಂತಿಕಟ್ಟೆ ತಿರುವಿನಲ್ಲಿ ಕಾರೊಂದು ಓವರ್‌ಟೇಕ್ ಮಾಡುವಾಗ ಹೊಡೆದು ಮುಂದೆ ಸಾಗಿದ್ದು, ಅಪಾಯವನ್ನರಿತ ಬಸ್ ಚಾಲಕ ರಸ್ತೆಯಿಂದ ಬಸ್ಸನ್ನು ಕೆಳಗಿಳಿಸಿ ನಿಯಂತ್ರಿಸಿದ ಪರಿಣಾಮ ಬಸ್ ರಸ್ತೆ ಪಕ್ಕ ಸಿಲುಕಿಕೊಂಡಿತ್ತು. ಚಾಲಕನ […]

ಮರ್ಧಾಳ: ಕಾರುಗಳ ಓವರ್‌ಟೇಕ್ ಭರದಲ್ಲಿ ರಸ್ತೆ ಪಕ್ಕ ಸಿಲುಕಿಕೊಂಡ ಕೆಎಸ್ಸಾರ್ಟಿಸಿ ಬಸ್ ➤‌ ಬಸ್ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿತು ಭಾರೀ ಅನಾಹುತ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಢಿಕ್ಕಿ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 25. ಕಾರು ಹಾಗೂ ಮಿನಿ ಲಾರಿ ನಡುವೆ ಪರಸ್ಪರ ಢಿಕ್ಕಿ ಸಂಭವಿಸಿ ಕಾರಿನಲ್ಲಿದ್ದವರು ಗಂಭೀರ ಗಾಯಗೊಂಡ ಘಟನೆ ಪುತ್ತೂರಿನ ಸಂಪ್ಯ ಎಂಬಲ್ಲಿ ನಡೆದಿದೆ. ಢಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಅಪಘಾತದ ದೃಶ್ಯ ಸಿಸಿ ಕ್ಯಾಮಾರಾದಲ್ಲಿ ಸೆರೆಯಾಗಿದೆ. ಗಾಯಾಳುಗಳ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

ಪುತ್ತೂರು: ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಢಿಕ್ಕಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸೆ. 30ರಂದು ರಾಜ್ಯದಲ್ಲಿ ‘ಭಾರತ್ ಜೋಡೋ’ ➤‌ ದ.ಕ ಜಿಲ್ಲೆಯಿಂದ 20,000 ಜನ- ಟಿ.ಎಂ ಶಹೀದ್

(ನ್ಯೂಸ್ ಕಡಬ) newskadaba.com ಕಡಬ, ಸೆ. 24. ನವಭಾರತ ನಿರ್ಮಾಣ ಧ್ಯೇಯ ಉದ್ದೇಶಗಳನ್ನಿಟ್ಟುಕೊಂಡು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ನಡೆಸುತ್ತಿರುವ ಭಾರತ್ ಜೋಡೋ ಕಾರ್ಯಕ್ರಮಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದ್ದು, ರಾಜ್ಯ ಹಾಗೂ ಕೇಂದ್ರ ಸರಕಾರದ ವಿರುದ್ಧ ಜನ ತಿರುಗಿ ಬಿದ್ದಿದ್ದಾರೆ ಎನ್ನುವುದು ಸ್ಪಷ್ಟವಾಗುತ್ತಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯ ಭಾರತ್ ಜೋಡೋ ಕಾರ್ಯಕ್ರಮದ ಸಂಯೋಜಕ ಟಿ.ಎಂ.ಶಹೀದ್ ಹೇಳಿದರು. ಅವರು ಶನಿವಾರದಂದು ಕಡಬ ಕಾಂಗ್ರೆಸ್ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಭಾರತ್ ಜೋಡೋ ಕಾರ್ಯಕ್ರಮ ಯಶಸ್ವಿಯಾಗುವುದನ್ನು

ಸೆ. 30ರಂದು ರಾಜ್ಯದಲ್ಲಿ ‘ಭಾರತ್ ಜೋಡೋ’ ➤‌ ದ.ಕ ಜಿಲ್ಲೆಯಿಂದ 20,000 ಜನ- ಟಿ.ಎಂ ಶಹೀದ್ Read More »

ಕರಾವಳಿ, ಕರ್ನಾಟಕ

ಪುತ್ತೂರು: ಅಕ್ರಮ ಜಾನುವಾರು ಸಾಗಾಟ ➤‌ ಓರ್ವ ಅಂದರ್

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 25. ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ರಕ್ಷಣೆ ಮಾಡಿ ಓರ್ವನನ್ನು ವಶಕ್ಕೆ ಪಡೆದ ಘಟನೆ ಮುರ ರೈಲ್ವೇ ಬ್ರಿಡ್ಜ್ ಸಮೀಪದಲ್ಲಿ ಇಂದು ಮುಂಜಾನೆ ನಡೆದಿದೆ. ಪುತ್ತೂರು ನಗರ ಠಾಣಾ ಪಿಎಸ್ಐ ಶ್ರೀಕಾಂತ್ ರಾಥೋಡ್ ಮತ್ತು ಸಿಬ್ಬಂದಿಗಳು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿರುವುದನ್ನು ಗಮನಿಸಿ ವಿಚಾರಣೆ ನಡೆಸಿ, ಓರ್ವನನ್ನು ವಶಕ್ಕೆ ಪಡೆದು ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ. ಕಾರ್ಯಾಚರಣೆಯಲ್ಲಿ ಪುತ್ತೂರು ನಗರ ಠಾಣಾ

ಪುತ್ತೂರು: ಅಕ್ರಮ ಜಾನುವಾರು ಸಾಗಾಟ ➤‌ ಓರ್ವ ಅಂದರ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೆಲ್ಯಾಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಅಪಘಾತ ➤‌ ಮಹಿಳೆ ಸೇರಿದಂತೆ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ.25. ಕೆಎಸ್ಸಾರ್ಟಿಸಿ ಬಸ್ ಹಾಗೂ ಸ್ವಿಫ್ಟ್ ಡಿಸೈರ್ ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಾಯಗೊಂಡ ಘಟನೆ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ಧರ್ಮಸ್ಥಳದಿಂದ ಕೋಲಾರಕ್ಕೆ ಪ್ರಯಾಣಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್, ಹಾಸನದಿಂದ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಸೇರಿ ಇಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

ನೆಲ್ಯಾಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಅಪಘಾತ ➤‌ ಮಹಿಳೆ ಸೇರಿದಂತೆ ಇಬ್ಬರಿಗೆ ಗಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಘರ್ಷಣೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 24. ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ಮಧ್ಯೆ ಘರ್ಷಣೆ ಉಂಟಾಗಿದ್ದು, ಪೊಲೀಸರ ಮಧ್ಯ ಪ್ರವೇಶದಿಂದ ತಿಳಿಯಾದ ಘಟನೆ ವರದಿಯಾಗಿದೆ. ಇತ್ತಂಡಗಳ ಬೆಂಬಲಿಗರು ಹೊಡೆದಾಟಕ್ಕೆ ಸಿದ್ಧರಾಗುತ್ತಿರುವಾಗಲೇ ಪೊಲೀಸರು ಮಧ್ಯಪ್ರವೇಶಿಸಿ ಮಾಹಿತಿ ಪಡೆದ ಉಪ್ಪಿನಂಗಡಿ ಸಬ್ ಇನ್ಸ್ಪೆಕ್ಟರ್ ರಾಜೇಶ್ ಅವರು ಹೆಚ್ಚುವರಿ ಪೊಲೀಸ್ ಪಡೆಯೊಂದಿಗೆ ಕಾಲೇಜಿಗೆ ಧಾವಿಸಿ ಸಂಘರ್ಷಕ್ಕೆ ನಿಂತಿದ್ದ ವಿದ್ಯಾರ್ಥಿಗಳನ್ನು ಚದುರಿಸಿ, ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿರುವುದಾಗಿ ತಿಳಿದುಬಂದಿದೆ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬ ದ್ವಿತೀಯ ಪಿಯುಸಿ

ಉಪ್ಪಿನಂಗಡಿ: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಘರ್ಷಣೆ Read More »

ಕರಾವಳಿ, ಕರ್ನಾಟಕ

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರು ಢಿಕ್ಕಿ ➤‌ ಚಾಲಕ ಇಂಜಿನಿಯರಿಂಗ್ ವಿದ್ಯಾರ್ಥಿ ದುರ್ಮರಣ

(ನ್ಯೂಸ್ ಕಡಬ) newskadaba.com ಭಟ್ಕಳ, ಸೆ. 24. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಮೃತಪಟ್ಟು, ನಾಲ್ವರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ತಡರಾತ್ರಿ ಮೂಡಭಟ್ಕಳ ಬೈಪಾಸ್ ರಾ.ಹೆ. 66ರಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಚಾಲಕ ಅಂಜುಮನ್ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿದ್ಯಾರ್ಥಿ, ರಂಗಿನಕಟ್ಟೆ ನಿವಾಸಿ ಮುಹಮ್ಮದ್ ಉನೈಸ್ ಖತೀಬ್ (20) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡವರನ್ನು ಅದೇ ಕಾಲೇಜಿನ ಮುಹಮ್ಮದ್ ಫುರ್ಖಾನ್ ಗಂಗಾವಳಿ,

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರು ಢಿಕ್ಕಿ ➤‌ ಚಾಲಕ ಇಂಜಿನಿಯರಿಂಗ್ ವಿದ್ಯಾರ್ಥಿ ದುರ್ಮರಣ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಪಕ್ಷ ವಿರೋಧಿ ಚಟುವಟಿಕೆ ಆರೋಪ ➤‌ ಕಾಂಗ್ರೆಸ್ ಮುಖಂಡ ಪಕ್ಷದಿಂದ ಉಚ್ಛಾಟನೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 24. ಕಾಂಗ್ರೆಸ್ ಪಕ್ಷದ ಬಿಳಿನೆಲೆ ವಲಯ ಮಾಜಿ ಅಧ್ಯಕ್ಷ ಐತ್ತೂರು ಗ್ರಾ.ಪಂ. ಸದಸ್ಯ ಮನಮೋಹನ್ ಗೋಳ್ಯಾಡಿ ಅವರನ್ನು ಪಕ್ಷದ ಶಿಸ್ತನ್ನು ಉಲ್ಲಂಘಿಸಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದಡಿ ಪಕ್ಷದ ಜಿಲ್ಲಾಧ್ಯಕ್ಷರ ಸೂಚನೆಯ ಮೇರೆಗೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಚಾಟಿಸಲಾಗಿದೆ ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಬಿಳಿನೆಲೆ ಅವರು ಕಡಬ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಮನಮೋಹನ್

ಕಡಬ: ಪಕ್ಷ ವಿರೋಧಿ ಚಟುವಟಿಕೆ ಆರೋಪ ➤‌ ಕಾಂಗ್ರೆಸ್ ಮುಖಂಡ ಪಕ್ಷದಿಂದ ಉಚ್ಛಾಟನೆ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ: ಸಾಲ ಬಾಧೆ- ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 24. ಸಾಲ ತೀರಿಸಲಾಗದೇ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ನೆರಿಯ ಗ್ರಾಮದ ಚಂದ್ರಶೇಖರ್ (24) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಗಾರೆ ಮತ್ತು ವೈರಿಂಗ್ ಕೆಲಸ ಮಾಡುತ್ತಿದ್ದ ಚಂದ್ರಶೇಖರ್, ತನ್ನ ಗೆಳೆಯರ ಜೊತೆ ಸೇರಿ ಶಬರಿ ಎಂಬ ಸ್ವಸಹಾಯ ಸಂಘ ಮಾಡಿದ್ದು, ಈ ಸಂಘದ ಮೂಲಕ ಉಜಿರೆಯ ಖಾಸಗಿ ಬ್ಯಾಂಕಿನಿಂದ 4 ಲಕ್ಷ ರೂ. ಸಾಲ ಪಡೆದು, ಈ ಹಣವನ್ನು ಎಂಟು

ಬೆಳ್ತಂಗಡಿ: ಸಾಲ ಬಾಧೆ- ಯುವಕ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ

ರಕ್ತಚಂದನ ಮರದ ದಿಮ್ಮಿ ಅಕ್ರಮ ದಾಸ್ತಾನು ಪ್ರಕರಣ ➤‌ ಆರೋಪಿಗಳ ಜಾಮೀನು ಅರ್ಜಿ ವಜಾ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 24. ಬೆಳ್ತಂಗಡಿ ತಾಲೂಕಿನ ಮೂಡಿಕೋಡಿ ಗ್ರಾಮ ಅಂಬಲೋಡಿ ಮೀಸಲು ಅರಣ್ಯ ಸರಕಾರಿ ಸ್ಥಳದಲ್ಲಿ ಅಕ್ರಮವಾಗಿ ರಕ್ತಚಂದನ ಮರದ ದಿಮ್ಮಿಗಳನ್ನು ಇರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿರುವ ಇಬ್ಬರು ಆರೋಪಿಗಳ ಜಾಮೀನು ಅರ್ಜಿಯನ್ನು ಬೆಳ್ತಂಗಡಿ ನ್ಯಾಯಾಲಯವು ತಿರಸ್ಕರಿಸಿದೆ. ಸೆ.12ರಂದು ಆರೋಪಿಗಳಾದ ಯಶವಂತ ಪೂಜಾರಿ ಮತ್ತು ಸಂತೋಷ್ ಭಂಡಾರಿ ಅವರು 23 ರಕ್ತಚಂದನ ದಿಮ್ಮಿಗಳು ಮತ್ತು 3 ಕಟ್ಟಿಗಳನ್ನು ಅಕ್ರಮವಾಗಿ ದಾಸ್ತಾನಿರಿಸಿದ್ದ ಕುರಿತು ಮಾಹಿತಿ ಪಡೆದ ಅರಣ್ಯ ಸಂಚಾರಿ ಪೊಲೀಸರು ಆರೋಪಿಗಳನ್ನು

ರಕ್ತಚಂದನ ಮರದ ದಿಮ್ಮಿ ಅಕ್ರಮ ದಾಸ್ತಾನು ಪ್ರಕರಣ ➤‌ ಆರೋಪಿಗಳ ಜಾಮೀನು ಅರ್ಜಿ ವಜಾ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top