ಕರಾವಳಿ

ಧೈರ್ಯ, ನಂಬಿಕೆ ಬರುವವರೆಗೆ ಭಾರತ ಸುಭದ್ರವಾಗಲು ಸಾಧ್ಯವಿಲ್ಲ: ಹುಸೈನ್ ಮು‌ಈ‌ನೀ ಮಾರ್ನಾಡ್ ➤‌ ಎಸ್‌ವೈಎಸ್ ಮಾಣಿ ಸೆಂಟರ್ ನಿಂದ ಅಮೃತ ಭಾರತ ಸಂಗಮ

(ನ್ಯೂಸ್ ಕಡಬ) newskadaba.com ಮಾಣಿ, ಆ. 29. ಭಾರತದ ಅಮೃತ ಮಹೋತ್ಸವದ ಸಲುವಾಗಿ 1942 ರ ಕ್ವಿಟ್ ಇಂಡಿಯಾ ಚಳುವಳಿಯ ಸ್ಮರಣಾರ್ಥ ಎಸ್ ವೈಎಸ್ ಮಾಣಿ ಸೆಂಟರ್ ವತಿಯಿಂದ ಮಿತ್ತೂರು ಜಂಕ್ಷನ್ ನಲ್ಲಿ ‘ಮರೆತ ಭಾರತ’ ಧ್ಯೇಯ ವಾಕ್ಯದೊಂದಿಗೆ ಅಮೃತ ಭಾರತ ಸಂಗಮ ಕಾರ್ಯಕ್ರಮವು ಎಸ್‌ವೈಎಸ್ ಮಾಣಿ ಸೆಂಟರ್ ಅಧ್ಯಕ್ಷರಾದ ಸುಲೈಮಾನ್ ಸಅದಿ ಪಾಟ್ರಕೋಡಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಭಾಷಣಗಾರರಾಗಿ ಆಗಮಿಸಿದ ಕೆಜಿಎನ್ ದಅವಾ ಕಾಲೇಜಿನ ಪ್ರೊಫೆಸರ್ ಹುಸೈನ್ ಅಹ್ಸನಿ ಅಲ್ ಮುಈನಿ ಮಾರ್ನಾಡ್‌ರವರು ಭಾರತದ […]

ಧೈರ್ಯ, ನಂಬಿಕೆ ಬರುವವರೆಗೆ ಭಾರತ ಸುಭದ್ರವಾಗಲು ಸಾಧ್ಯವಿಲ್ಲ: ಹುಸೈನ್ ಮು‌ಈ‌ನೀ ಮಾರ್ನಾಡ್ ➤‌ ಎಸ್‌ವೈಎಸ್ ಮಾಣಿ ಸೆಂಟರ್ ನಿಂದ ಅಮೃತ ಭಾರತ ಸಂಗಮ Read More »

ಕರಾವಳಿ, ಕರ್ನಾಟಕ

ಉಪ್ಪಿನಂಗಡಿ: ಟಿಪ್ಪರ್ ಹಾಗೂ ಬೈಕ್ ನಡುವೆ ಢಿಕ್ಕಿ ➤‌ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 29. ಟಿಪ್ಪರ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಪ್ಪೆಟ್ಟಿಯಲ್ಲಿ ಸೋಮವಾರದಂದು ನಡೆದಿದೆ. ಮೃತ ಸವಾರನನ್ನು ಉಳಿ ಗ್ರಾಮದ ನಿವಾಸಿ ಸಫ್ವಾನ್ (20) ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿಯಿಂದ ಬೆಳ್ತಂಗಡಿಗೆ ತೆರಳುತ್ತಿದ್ದ ಟಿಪ್ಪರ್ ಮತ್ತು ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ಉಪ್ಪಿನಂಗಡಿ: ಟಿಪ್ಪರ್ ಹಾಗೂ ಬೈಕ್ ನಡುವೆ ಢಿಕ್ಕಿ ➤‌ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅರಂತೋಡು: ಉಕ್ಕಿ ಹರಿದ ಪಯಸ್ವಿನಿ ➤‌ ಹಲವು ಮನೆಗಳು ಜಲಾವೃತ

(ನ್ಯೂಸ್ ಕಡಬ) newskadaba.com ಅರಂತೋಡು, ಆ. 29. ಇಲ್ಲಿನ ಪಯಸ್ವಿನಿ ನದಿ ಉಕ್ಕಿ ಹರಿದ ಪರಿಣಾಮ ಹಲವೆಡೆ ನೀರು ನುಗ್ಗಿ ಅವಾಂತರ ಸೃಷ್ಠಿಸಿದ ಘಟನೆ ಸೋಮವಾರದಂದು ಮುಂಜಾನೆ ನಡೆದಿದೆ.   ಪಯಸ್ವಿನಿ ನದಿಯಲ್ಲಿ ಭಾರೀ ಪ್ರಮಾಣದಲ್ಲಿ ನೀರು ಉಕ್ಕಿ ಹರಿದು, ಬದಿಯ ಪ್ರದೇಶಗಳಿಗೆ ನೀರು ನುಗ್ಗಿದೆ. ಕೊಯನಾಡು ಶಾಲೆ ಬಳಿಯ 5 ಮನೆಗಳು ಜಲಾವೃತಗೊಂಡಿದ್ದು, ಮನೆಯವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಅಲ್ಲದೇ ಭಾರೀ ಗಾತ್ರದ ಮರಗಳು ನೀರಿನಲ್ಲಿ ಕೊಚ್ಚಿ ಬಂದು ಕೊಯನಾಡಿನ ಕಿಂಡಿ ಅಣೆಕಟ್ಟಿನಲ್ಲಿ ಅಡ್ಡಲಾಗಿ ನಿಂತಿವೆ.

ಅರಂತೋಡು: ಉಕ್ಕಿ ಹರಿದ ಪಯಸ್ವಿನಿ ➤‌ ಹಲವು ಮನೆಗಳು ಜಲಾವೃತ Read More »

ಕರಾವಳಿ, ಕರ್ನಾಟಕ

ಪೂಂಜಾಲಕಟ್ಟೆ: ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ➤‌ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ಪುಂಜಾಲಕಟ್ಟೆ, ಆ. 29. ಬೈಕ್‌ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಪುಂಜಾಲಕಟ್ಟೆಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಬೆಳ್ತಂಗಡಿ ತಾಲೂಕಿನ ಕರಾಯ ನಿವಾಸಿ ಶಫೀಕ್ ಎಂದು ಗುರುತಿಸಲಾಗಿದೆ. ಈತ ಕರಾಯದಿಂದ ಮಂಗಳೂರಿಗೆ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಇನ್ನೊಂದು ಬೈಕ್ ಢಿಕ್ಕಿ ಹೊಡೆದಿದೆ. ಘಟನಾ ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಪುಂಜಾಲಕಟ್ಟೆ

ಪೂಂಜಾಲಕಟ್ಟೆ: ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ➤‌ ವಿದ್ಯಾರ್ಥಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಎರ್ಟಿಗಾ ಹಾಗೂ ಓಮ್ನಿ ನಡುವೆ ಅಪಘಾತ ➤‌ ಏಳು ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಆ.27. ಎರ್ಟಿಗಾ ಕಾರು ಹಾಗೂ ಮಾರುತಿ ಓಮ್ನಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಏಳು ಮಂದಿ ಗಾಯಗೊಂಡ ಘಟನೆ ಧರ್ಮಸ್ಥಳ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣ ಎಂಬಲ್ಲಿ ಶನಿವಾರದಂದು ನಡೆದಿದೆ. ಬೆಂಗಳೂರು ಮೂಲದ‌ ಕುಟುಂಬವು ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ವೇಳೆ ನೆಟ್ಟಣ ಅಮಲ ಫಾರ್ಮ್ ಬಳಿ ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಓಮ್ನಿ ನಡುವೆ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದು, ಗಾಯಾಳುಗಳಿಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ

ಕಡಬ: ಎರ್ಟಿಗಾ ಹಾಗೂ ಓಮ್ನಿ ನಡುವೆ ಅಪಘಾತ ➤‌ ಏಳು ಮಂದಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಪ್ರಾಚೀನ ಮಣ್ಣಿನ ಪರಿಕರಗಳು ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಆ. 27. ತಾಲೂಕಿನ ಎಡಮಂಗಲ ಗ್ರಾಮದ ಕಲ್ಲೆಂಬಿ ಎಂಬಲ್ಲಿ ಗುಡ್ಡದಲ್ಲಿ ಗುಂಡಿ ತೆಗೆಯುವ ವೇಳೆ ಗುಹೆ ಪತ್ತೆಯಾಗಿದ್ದು, ಅದರಲ್ಲಿ ಪ್ರಾಚೀನ ಮಣ್ಣಿನ ಪರಿಕರಗಳು ಪತ್ತೆಯಾಗಿವೆ.   ಕಲ್ಲೆಂಬಿ ವಿಶ್ವನಾಥ ಗೌಡ ಅವರ ಅಡಿಕೆ ತೋಟ ಮಾಡುವ ಉದ್ದೇಶದಿಂದ ಗುಂಡಿ ತೆಗೆಯುತ್ತಿದ್ದ ವೇಳೆ ಮಣ್ಣಿನಲ್ಲಿ ಸಡಿಲ ಭಾಗ ಗೋಚರಿಸಿದ್ದು, ಗುಹೆಯಾಕಾರದ ಮಾದರಿ ಪತ್ತೆಯಾಗಿದೆ. ಅದನ್ನು ಸೂಕ್ಷ್ಮವಾಗಿ ಗಮನಿಸಿದಾಗ ಮಣ್ಣಿನ ಮಡಿಕೆ, ಬಟ್ಟಲು, ಸಣ್ಣ-ಪುಟ್ಟ ಪಾತ್ರೆಗಳ ಅವಶೇಷಗಳು ಪತ್ತೆಯಾಗಿವೆ. ಈ ಗುಹೆಯಲ್ಲಿ ಎರಡು ಅಂತರದ

ಕಡಬ: ಪ್ರಾಚೀನ ಮಣ್ಣಿನ ಪರಿಕರಗಳು ಪತ್ತೆ Read More »

ಕರಾವಳಿ, ಕರ್ನಾಟಕ

ನೆಲ್ಯಾಡಿ: ಬಸ್ ಹಾಗೂ ಲಾರಿ ನಡುವೆ ಢಿಕ್ಕಿ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ. 27. ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಈಚರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬಸ್ಸಿನಲ್ಲಿದ್ದ ಮಗು ಹಾಗೂ ತಂದೆ ಗಾಯಗೊಂಡಿರುವ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಬೆಂಗಳೂರು ಕಡೆಯಿಂದ ಬರುತ್ತಿದ್ದ ಲಾರಿ ನಡುವೆ ಅಡ್ಡಹೊಳೆಯಲ್ಲಿ ಮುಖಾಮುಖಿ ಡಿಕ್ಕಿಯಾಗಿದ್ದು, ಪರಿಣಾಮ ತಂದೆ ಹಾಗೂ ಮಗುವಿಗೆ ಗಾಯಗಳಾಗಿವೆ. ಅಲ್ಲದೇ ಈಚರ್ ಲಾರಿಯ ಚಾಲಕನಿಗೂ ಸಣ್ಣಪುಟ್ಟ

ನೆಲ್ಯಾಡಿ: ಬಸ್ ಹಾಗೂ ಲಾರಿ ನಡುವೆ ಢಿಕ್ಕಿ ಇಬ್ಬರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ನೆಲ್ಯಾಡಿಯ ವ್ಯಕ್ತಿ ಕೊಕ್ಕಡದಲ್ಲಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ. 27. ನೆಲ್ಯಾಡಿಯ ವ್ಯಕ್ತಿಯೋರ್ವರು ತನ್ನ ಪತ್ನಿ ಮನೆಯಾದ ಕೊಕ್ಕಡದಲ್ಲಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ನೆಲ್ಯಾಡಿ ಗ್ರಾಮದ ಮಾದೇರಿ ಪಲಸತಡ್ಕ ನಿವಾಸಿ ವಸಂತ ಮಾಡಿವಾಳ ಎಂದು ಗುರುತಿಸಲಾಗಿದೆ. ಧರ್ಮಸ್ಥಳದಲ್ಲಿ ಕಾವಲುಗಾರನಾಗಿ ಕೆಲಸ ಮಾಡಿಕೊಂಡಿದ್ದ ಇವರು, ಆ. 25ರಂದು ಮಧ್ಯಾಹ್ನ ಕೊಕ್ಕಡ ಗ್ರಾಮದ ಕೆಂಪಕೋಡಿಯಲ್ಲಿರುವ ಪತ್ನಿಯ ಮನೆಗೆ ಬಂದು ಮದ್ಯದ ಜೊತೆ ವಿಷಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದರು. ತಕ್ಷಣವೇ ಮನೆಯವರು ನೆಲ್ಯಾಡಿಯ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ

ನೆಲ್ಯಾಡಿಯ ವ್ಯಕ್ತಿ ಕೊಕ್ಕಡದಲ್ಲಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ನೆರೆಯಿಂದ ಸಂಕಷ್ಟಕ್ಕೀಡಾದ ಹಾಫಿಲ್ ಪೇರಡ್ಕ ಕುಟುಂಬಕ್ಕೆ ತೆಕ್ಕಿಲ್ ಕುಟುಂಬಸ್ಥರಿಂದ 55 ಸಾವಿರ ರೂ. ಸಹಾಯಧನ ವಿತರಣೆ

(ನ್ಯೂಸ್ ಕಡಬ) newskadaba.com ಸಂಪಾಜೆ, ಆ. 27. ಇತ್ತೀಚೆಗೆ ಸಂಪಾಜೆ ಗ್ರಾಮದಲ್ಲಿ ಸುರಿದ ಭಾರಿ ಮಳೆಯಿಂದ ನೆರೆ ಪ್ರವಾಹಕ್ಕೆ ಸಿಲುಕಿ ಹಾನಿಯಾದ ಗೂನಡ್ಕ, ಪೇರಡ್ಕ ತೆಕ್ಕಿಲ್ ಸಫಿಯ ಅವರ ಮನೆಯು ಸಂಪೂರ್ಣ ಜಲಾವೃತಗೊಂಡು ಮನೆಯಲ್ಲಿದ್ದ ಎಲ್ಲಾ ವಸ್ತುಗಳು, ಬಟ್ಟೆ ಬರೆಗಳು ಕೊಚ್ಚಿ ಹೋಗಿ ಭಾರಿ ನಷ್ಟ ಉಂಟಾಗಿದ್ದು, ಇದನ್ನು ಮನಗಂಡು ತೆಕ್ಕಿಲ್ ಕುಟುಂಬಸ್ತರ ಒಕ್ಕೂಟವು ಸಂಗ್ರಹಿಸಿದ ರೂ. 55 ಸಾವಿರ ಮೊತ್ತದ ಸಹಾಯಧನವನ್ನು ತೆಕ್ಕಿಲ್ ಕುಟುಂಬಸ್ಥರ ಪರವಾಗಿ ಸಮಿತಿ ಅಧ್ಯಕ್ಷ ಟಿ.ಎಂ. ಶಹೀದ್ ತೆಕ್ಕಿಲ್ ರವರು ಗೂನಡ್ಕದ

ನೆರೆಯಿಂದ ಸಂಕಷ್ಟಕ್ಕೀಡಾದ ಹಾಫಿಲ್ ಪೇರಡ್ಕ ಕುಟುಂಬಕ್ಕೆ ತೆಕ್ಕಿಲ್ ಕುಟುಂಬಸ್ಥರಿಂದ 55 ಸಾವಿರ ರೂ. ಸಹಾಯಧನ ವಿತರಣೆ Read More »

ಕರಾವಳಿ, ಕರ್ನಾಟಕ
Scroll to Top