ಕರಾವಳಿ

ಪುತ್ತೂರು ನೂತನ ಡಿವೈಎಸ್ಪಿ ವೀರಯ್ಯ ಹಿರೇಮಠ್ ಕರ್ತವ್ಯಕ್ಕೆ ಹಾಜರು

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 24. ಇಲ್ಲಿನ ನೂತನ ಡಿವೈಎಸ್ಪಿಯಾಗಿ ವರ್ಗಾವಣೆಗೊಂಡು ಆಗಮಿಸಿರುವ ವೀರಯ್ಯ ಹಿರೇಮಠ್ ಅವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಈ ಹಿಂದೆ ಬೆಂಗಳೂರಿನ ಸಿಐಡಿ ಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೀರಯ್ಯ ಹಿರೇಮಠ್ ಅವರು ಪುತ್ತೂರು ಡಿವೈಎಸ್ಪಿಯಾಗಿ ವರ್ಗಾವಣೆಗೊಂಡಿದ್ದು, ಇವರಿಗೆ ಡಾ.ಗಾನ ಪಿ ಕುಮಾರ್ ಅವರು ಅಧಿಕಾರ ಹಸ್ತಾಂತರಿಸಿದರು.

ಪುತ್ತೂರು ನೂತನ ಡಿವೈಎಸ್ಪಿ ವೀರಯ್ಯ ಹಿರೇಮಠ್ ಕರ್ತವ್ಯಕ್ಕೆ ಹಾಜರು Read More »

ಕರಾವಳಿ, ಕರ್ನಾಟಕ

ಮುಗಿಯದ ಹಿಜಾಬ್ ವಿವಾದ ➤‌ ಟಿಸಿ ಹಿಂಪಡೆದ ವಿದ್ಯಾರ್ಥಿನಿಯರು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ಹಿಜಾಬ್ ವಿವಾದ ತಣ್ಣಗಾಗಿದ್ದರೂ ಅದರ ಪರಿಣಾಮ ಮಾತ್ರ ಇದುವರೆಗೂ ನಿಂತಿಲ್ಲ. ತರಗತಿಗೆ ಹಿಜಾಬ್ ಧರಿಸಿ ಬರಲು ಅವಕಾಶ ನೀಡದ ಹಿನ್ನೆಲೆ ಒಟ್ಟು 145 ಕಾಲೇಜು ವಿದ್ಯಾರ್ಥಿನಿಯರು ತಮ್ಮ ಟಿಸಿಯನ್ನೇ ಹಿಂಪಡೆದ ಘಟನೆ ಮಂಗಳೂರು ವಿಶ್ವವಿದ್ಯಾಲಯದಲ್ಲಿ ನಡೆದಿದೆ. ಯಾವುದೇ ಧಾರ್ಮಿಕ ಚಿಹ್ನೆ ಧರಿಸಿ ಶಾಲಾ-ಕಾಲೇಜಿನ ತರಗತಿಗಳಿಗೆ ಹೋಗುವಂತಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದ್ದರೂ ಕೂಡಾ ಹಿಜಾಬ್ ಧರಿಸಿ ಬರಲು ಅವಕಾಶ ನೀಡುವಂತೆ ಮಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿನಿಯರು ಪಟ್ಟು ಹಿಡಿದಿದ್ದರು. ಹಿಜಾಬ್

ಮುಗಿಯದ ಹಿಜಾಬ್ ವಿವಾದ ➤‌ ಟಿಸಿ ಹಿಂಪಡೆದ ವಿದ್ಯಾರ್ಥಿನಿಯರು Read More »

ಕರಾವಳಿ, ಕರ್ನಾಟಕ

ವಿಟ್ಲ: ಹಠಾತ್ತನೆ ಕುಸಿದುಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಆ. 23. ಹಠಾತ್ತನೆ ಕುಸಿದು ಬಿದ್ದು ವ್ಯಕ್ತಿಯೋರ್ವರ ತಲೆಗೆ ಗಂಭೀರ ಗಾಯವಾಗಿ ಮೃತಪಟ್ಟ ಘಟನೆ ವಿಟ್ಲದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮೂಲತಃ ವಿಟ್ಲ ಅಡ್ಯನಡ್ಕ ನಿವಾಸಿ ಸದ್ಯ ಸಾಲೆತ್ತೂರಿನಲ್ಲಿ ವಾಸವಿರುವ ಮೊಯ್ದೀನ್ ಎಂದು ಗುರುತಿಸಲಾಗಿದೆ. ಇವರು ವಿಟ್ಲದ ಖಾಸಗಿ ಬಸ್ ನಿಲ್ದಾಣದಲ್ಲಿನ ರಿಕ್ಷಾ ಪಾರ್ಕಿಂಗ್ ಬಳಿ ಹಠಾತ್ ಕುಸಿದು ಬಿದ್ದಿದ್ದು, ತಲೆಗೆ ಗಂಭೀರ ಗಾಯವಾಗಿತ್ತು. ಅವರನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರಾದರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ವಿಟ್ಲ: ಹಠಾತ್ತನೆ ಕುಸಿದುಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ➤‌ ಓರ್ವನಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಆ. 23. ಕಾರು ಹಾಗು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದ ಪರಿಣಾಮ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡ ಘಟನೆ ಮಿತ್ತೂರು ಸಮೀಪ‌ ಆ. 23ರಂದು ನಡೆದಿದೆ. ಗಾಯಗೊಂಡವರನ್ನು ಕೋಲ್ಪೆ ಸಮೀಪದ ಸೂರ್ಯ ನಿವಾಸಿ ವಾಸಪ್ಪ ಸಪಲ್ಯ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡಿದ್ದು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಆಗಮಿಸಿ ಮಾಹಿತಿ

ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ➤‌ ಓರ್ವನಿಗೆ ಗಾಯ Read More »

ಕರಾವಳಿ, ಕರ್ನಾಟಕ

ಕಾಂಗ್ರೆಸ್ ಪಕ್ಷದ ಎಸ್ಪಿ ಕಚೇರಿ ಚಲೋಗೆ ಹೆದರಿ ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿ, ಇದು ಸರ್ಕಾರದ ಹೇಡಿತನದ ಕ್ರಮ ➤‌ ಶೌವಾದ್ ಗೂನಡ್ಕ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 23. ವಿಪಕ್ಷ ನಾಯಕ ಸಿದ್ದರಾಮಯ್ಯರವರ ಕಾರಿನ ಮೇಲೆ ಮೊಟ್ಟೆ ಎಸೆತವನ್ನು ಖಂಡಿಸಿ ಆಗಸ್ಟ್ 26 ರಂದು ಕಾಂಗ್ರೆಸ್ ಪಕ್ಷವು ಕರೆ ನೀಡಿದ್ದ ಎಸ್.ಪಿ.ಕಚೇರಿ ಚಲೋ ಪ್ರತಿಭಟನೆಗೆ ಹೆದರಿ ರಾಜ್ಯ ಸರ್ಕಾರವು ಕೊಡಗು ಜಿಲ್ಲೆಯಲ್ಲಿ ನಿಷೇಧಾಜ್ಞೆಯನ್ನು ಜಾರಿ ಮಾಡಿದ್ದು, ಇದು ಸರ್ಕಾರದ ಹೇಡಿತನದ ಕ್ರಮ ಎಂದು ಕೆ.ಪಿ.ಸಿ.ಸಿ. ಮಾಧ್ಯಮ ವಕ್ತಾರ ಶೌವಾದ್ ಗೂನಡ್ಕರವರು ಹೇಳಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆಗೆ ಎಲ್ಲರಿಗೂ ಅವಕಾಶವಿದೆ. ರಾಜ್ಯ ಬಿ.ಜೆ.ಪಿ ಸರ್ಕಾರವು ಅದನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ಕೊಡಗಿನಲ್ಲಿ ಅಸ್ತಿತ್ವವನ್ನು

ಕಾಂಗ್ರೆಸ್ ಪಕ್ಷದ ಎಸ್ಪಿ ಕಚೇರಿ ಚಲೋಗೆ ಹೆದರಿ ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿ, ಇದು ಸರ್ಕಾರದ ಹೇಡಿತನದ ಕ್ರಮ ➤‌ ಶೌವಾದ್ ಗೂನಡ್ಕ Read More »

ಕರಾವಳಿ, ಕರ್ನಾಟಕ

ವಿದ್ಯಾರ್ಥಿನಿಗೆ ಇನ್ಸ್ಟಾಗ್ರಾಂ ಮೂಲಕ ಮೆಸೇಜ್ ➤‌ ಯುವಕನಿಗೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 23. ವಿದ್ಯಾರ್ಥಿನಿಗೆ ಇನ್ ಸ್ಟಾಗ್ರಾಂ ನಲ್ಲಿ ಮೆಸೇಜ್ ಮಾಡಿದ ಆರೋಪದಡಿ ಯುವಕನೋರ್ವನನ್ನು ಪೊಲೀಸರು ಎಚ್ಚರಿಕೆ ನೀಡಿ ಕಳುಹಿಸಿ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಇಲ್ಲಿನ ಕರ್ವೇಲು ನಿವಾಸಿ ಸಮೀರ್ ಎಂಬಾತ ಖಾಸಗಿ ಶಾಲೆಯ ವಿದ್ಯಾರ್ಥಿನಿಯೋರ್ವಳಿಗೆ ಇನ್ ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡಿದ್ದು, ಇದನ್ನು ಆಕೆ ಹೆತ್ತವರಿಗೆ ತಿಳಿಸಿದ್ದಾಳೆ. ಈ ಬಗ್ಗೆ ಅವರು ಉಪ್ಪಿನಂಗಡಿ ಠಾಣೆಯಲ್ಲಿ ದೂರು ನೀಡಿದ್ದು, ಆತನನ್ನು ಠಾಣೆಗೆ ಕರೆಯಿಸಿದ ಪೊಲೀಸರು ವಿಚಾರಣೆ ನಡೆಸಿ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ ಎನ್ನಲಾಗಿದೆ.

ವಿದ್ಯಾರ್ಥಿನಿಗೆ ಇನ್ಸ್ಟಾಗ್ರಾಂ ಮೂಲಕ ಮೆಸೇಜ್ ➤‌ ಯುವಕನಿಗೆ ಎಚ್ಚರಿಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಕಾರು ಮತ್ತು ಲಾರಿ ನಡುವೆ ಅಪಘಾತ ➤‌ ಕಾರು ಚಾಲಕ ಗಂಭೀರ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 23. ಕಾರು ಹಾಗೂ ಲಾರಿ ಮಧ್ಯೆ ಪರಸ್ಪರ ಢಿಕ್ಕಿ ಸಂಭವಿಸಿದ ಪರಿಣಾಮ ಕಾರು ಚಾಲಕ ಗಂಭೀರ ಗಾಯಗೊಂಡ ಘಟನೆ ಕನಕಮಜಲು ಗ್ರಾಮದ ಕೋಡಿ ಎಂಬಲ್ಲಿ ಸಂಭವಿಸಿದೆ. ಪುತ್ತೂರಿನಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಕಾರು ಕನಕಮಜಲಿನ ಕೋಡಿ ಎಂಬಲ್ಲಿ ತಿರುವಿನ ಬಳಿ ತಲುಪುತ್ತಿದ್ದಂತೆಯೇ ವಿರುದ್ದ ದಿಕ್ಕಿನಿಂದ ಬಂದ ಲಾರಿಗೆ ಢಿಕ್ಕಿ ಹೊಡೆದಿದ್ದು, ಪರಿಣಾಮ ಕಾರು ಚಾಲಕನ ಕಾಲಿಗೆ ಗಂಭೀರ ಗಾಯವಾಗಿದೆ. ತಕ್ಷಣವೇ ಸ್ಥಳೀಯರು ಸೇರಿ ಗಾಯಾಳುವನ್ನು ಸುಳ್ಯದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎನ್ನಲಾಗಿದೆ.

ಸುಳ್ಯ: ಕಾರು ಮತ್ತು ಲಾರಿ ನಡುವೆ ಅಪಘಾತ ➤‌ ಕಾರು ಚಾಲಕ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಟ್ಲ: ದ್ವಿಚಕ್ರ ವಾಹನಗಳ ನಡುವೆ ಅಪಘಾತ ➤‌ ಸಹಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಆ. 22. ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ದ್ವಿಚಕ್ರ ವಾಹನದ ಸಹ ಸವಾರ ಮೃತಪಟ್ಟ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಮೃತರನ್ನು ಮಂಕುಡೆ ಅಮೈ ನಿವಾಸಿ ಸಂಜೀವ ಶೇಖರ ಪುತ್ರ ವಿಕಲಚೇತನರಾಗಿದ್ದ ಚಂದ್ರಹಾಸ ಶೇಖ (50) ಎಂದು ಗುರುತಿಸಲಾಗಿದೆ. ಢಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನದ ಸಹ ಸವಾರ ವಿಕಲಚೇತನರಾದ ಚಂದ್ರಹಾಸ ಶೇಖ ರವರು ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ದೇರಳಕಟ್ಟೆ ಆಸ್ಪತ್ರೆಗೆ

ವಿಟ್ಲ: ದ್ವಿಚಕ್ರ ವಾಹನಗಳ ನಡುವೆ ಅಪಘಾತ ➤‌ ಸಹಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾಸರಗೋಡು: ಮಾದಕ ವಸ್ತು ಸಹಿತ ಓರ್ವ ಆರೋಪಿ ಪೊಲೀಸ್ ಬಲೆಗೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ. 22. ಮಾದಕ ವಸ್ತುಗಳ ಸಹಿತ ಓರ್ವನನ್ನು ಡಿವೈಎಸ್ಪಿ ನೇತೃತ್ವದ ಪೊಲೀಸ್ ತಂಡವು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಕೆ.ಹರ್ಷಾದ್ (32) ಎಂದು ಗುರುತಿಸಲಾಗಿದೆ. ಕಾಞ೦ಗಾಡ್ ಬಸ್ಸು ನಿಲ್ದಾಣ ಪರಿಸರದಿಂದ 10 ಗ್ರಾಂ ಮಾದಕ ವಸ್ತು ಸಹಿತ ಈತನನ್ನು ಬಂಧಿಸಲಾಯಿತು. ಈತನ ವಿರುದ್ಧ ಅತ್ಯಾಚಾರ, ಕಳವು, ಹೊಡೆದಾಟ ಸೇರಿದಂತೆ ಹಲವು ಪ್ರಕರಣಗಳು ಹೊಸದುರ್ಗ, ನೀಲೇಶ್ವರ, ಪಯ್ಯನ್ನೂರು ಠಾಣೆಗಳಲ್ಲಿ ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಸರಗೋಡು: ಮಾದಕ ವಸ್ತು ಸಹಿತ ಓರ್ವ ಆರೋಪಿ ಪೊಲೀಸ್ ಬಲೆಗೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಕೊಲೆಯತ್ನ ಆರೋಪಿಗೆ ಗುಂಡೇಟು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 22. ಸ್ಥಳ ಮಹಜರು ವೇಳೆ ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಯಾಗಲೆತ್ನಿಸಿದ ಆರೋಪಿಗೆ ಪೊಲೀಸರು ಫೈರಿಂಗ್ ನಡೆಸಿದ ಘಟನೆ ಮಂಗಳೂರು ಗ್ರಾಮಾಂತರ ಠಾಣೆಯ ಕಂಬಳ ಎಂಬಲ್ಲಿ ನಡೆದಿದೆ. ಆರೋಪಿ ಮಿಸ್ತಾ ಯಾನೆ ಮುಸ್ತಾಕ್ ಗುಂಡೇಟು ತಗುಲಿದಾತ. ಕಳೆದೆರಡು ದಿನಗಳ ಹಿಂದೆ ನಗರದ ಹೊರವಲಯದಲ್ಲಿ ನಡೆದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ಈತನನ್ನು ಇಂದು ಸ್ಥಳ ಮಹಜರಿಗೆಂದು ಘಟನಾ ಸ್ಥಳಕ್ಕೆ ಕರೆದೊಯ್ಯಲಾಗಿತ್ತು. ಈ ವೇಳೆ ಆರೋಪಿ ಪೊಲೀಸರಿಗೆ ಹಲ್ಲೆ ನಡೆಸಿ

ಮಂಗಳೂರು: ಕೊಲೆಯತ್ನ ಆರೋಪಿಗೆ ಗುಂಡೇಟು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top