ಕರಾವಳಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಭೇದಿಸಿದ ಪೊಲೀಸರಿಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಿದ ಎಸ್ಪಿ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 22. ಜುಲೈ 26ರಂದು ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಪ್ರವೀಣ್ ನೆಟ್ಟಾರು ಪ್ರಕರಣದ ಪ್ರಮುಖ ಆರೋಪಿಗಳನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡುವಲ್ಲಿ ಸಹಕರಿಸಿದ ಪೊಲೀಸರಿಗೆ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೋನಾವಣೆ ಪ್ರಶಂಸನಾ ಪತ್ರವನ್ನು ಹಾಗೂ ಡಿಜಿ ನೀಡಿದ ಹತ್ತು ಲಕ್ಷ ರೂ. ಬಹುಮಾನದ ಮೊತ್ತವನ್ನು ನೀಡಿ ಗೌರವಿಸಿದರು. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಭೇದಿಸುವಲ್ಲಿ ಕಾರ್ಯಪ್ರವೃತ್ತರಾದ ಒಟ್ಟು 82 ಜನ ಪೊಲೀಸ್ ಸಿಬ್ಬಂದಿಗಳಿಗೆ ಹಂಚಿಕೆ ಮಾಡಿ ಗೌರವಿಸಲಾಯಿತು. ಪ್ರಕರಣ ಬೇಧಿಸುವಲ್ಲಿ […]

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಭೇದಿಸಿದ ಪೊಲೀಸರಿಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಿದ ಎಸ್ಪಿ Read More »

ಕರಾವಳಿ, ಕರ್ನಾಟಕ

ಪುತ್ತೂರು: ಡಿವೈಡರ್ ಗೆ ಕಾರು ಢಿಕ್ಕಿ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 22. ಉಪ್ಪಿನಂಗಡಿಯಿಂದ ಪುತ್ತೂರಿಗೆ ಬರುತ್ತಿದ್ದ ಕಾರೊಂದು ಡಿವೈಡರ್‌ಗೆ ಢಿಕ್ಕಿಯಾದ ಘಟನೆ ಇಂದು ನಡೆದಿದೆ. ಕಡಬದಿಂದ ಪುತ್ತೂರಿಗೆ ಬರುತ್ತಿದ್ದ ಕಾರೊಂದು ಪಂಕ್ಚರ್ ಆಗಿ ಕೆಮ್ಮಾಯಿ ಕೃಷ್ಣನಗರದಲ್ಲಿ ಡಿವೈಡರ್‌ಗೆ ಡಿಕ್ಕಿಯಾಗಿದ್ದು ಕಾರಿಗೆ ಹಾನಿಯಾಗಿದೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಪುತ್ತೂರು: ಡಿವೈಡರ್ ಗೆ ಕಾರು ಢಿಕ್ಕಿ Read More »

ಕರಾವಳಿ, ಕ್ರೈಮ್ ನ್ಯೂಸ್

ಭಟ್ಕಳ: ಕಿಡ್ನಾಪ್ ಆದ ಬಾಲಕ ಗೋವಾದಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಭಟ್ಕಳ, ಆ. 22. ಅಂಗಡಿಗೆ ಬ್ರೆಡ್ ತರಲೆಂದು ಹೋಗಿದ್ದ 8 ವರ್ಷದ ಬಾಲಕನ‌ ನಾಪತ್ತೆಯಾದ ಪ್ರಕರಣ ಸುಖಾಂತ್ಯ ಕಂಡಿದ್ದು, ಇದೀಗ ಬಾಲಕ ಗೋವಾದಲ್ಲಿ ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಅಲಿ ಇಸ್ಲಾಂ ಸಾದಾ(8) ಎಂಬ ಬಾಲಕ ಎರಡು ದಿನಗಳ ಹಿಂದೆ ಅಪಹರಣಕ್ಕೊಳಗಾಗಿದ್ದು, ಬಾಲಕನನ್ನು ಕಾರಿನಲ್ಲಿ ಬಂದು ಕಿಡ್ನಾಪ್ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ಕುರಿತು ಕಾರ್ಯಚರಣೆ ನಡೆಸಿದ ಭಟ್ಕಳ ನಗರ ಠಾಣಾ ಪೊಲೀಸರು ಇದೀಗ ಬಾಲಕನನ್ನು ಗೋವಾದಲ್ಲಿ ಪತ್ತೆ ಹಚ್ಚಿ ರಕ್ಷಿಸಿದ್ದಾರೆ.

ಭಟ್ಕಳ: ಕಿಡ್ನಾಪ್ ಆದ ಬಾಲಕ ಗೋವಾದಲ್ಲಿ ಪತ್ತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಲ್ಲಡ್ಕ: ಮುಗಿಯದ ರಸ್ತೆ ಹೊಂಡದ ಸಂಕಟ ➤‌ ಪ್ರಯಾಣಿಕ ಬೆಳ್ಳಾರೆಯ ಯುವಕನ ಸೊಂಟ ಮುರಿತ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 22. ಕಲ್ಲಡ್ಕದಲ್ಲಿ ನಡೆಯುತ್ತಿರುವ ಚತುಷ್ಪಥ ರಸ್ತೆಯ ಕಾಮಗಾರಿ ಮತ್ತು ಮಳೆಯ ಕಾರಣದಿಂದ ಹೊಂಡ ಬಿದ್ದಿರುವ ಕಾರಣ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸರಕಾರಿ ಬಸ್ಸೊಂದು ರಸ್ತೆ ಹೊಂಡಕ್ಕೆ ಬಿದ್ದು ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಯುವಕನೋರ್ವನ ಸೊಂಟ ಮುರಿತಕ್ಕೊಳಗಾದ ಘಟನೆ ನಡೆದಿದೆ. ಸೊಂಟ ಮುರಿತಕ್ಕೊಳಗಾದವರನ್ನು ಬೆಳ್ಳಾರೆಯ ತಡಗಜೆ ನಿವಾಸಿ ಸುಳ್ಯದ ಮೊಬೈಲ್ ಅಂಗಡಿಯಲ್ಲಿ ಉದ್ಯೋಗಿಯಾಗಿರುವ ವಿಜಯ ಕುಮಾರ್‌ ಎಂದು ಗುರುತಿಸಲಾಗಿದೆ. ಇವರು ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಬಸ್ ಹೊಂಡಕ್ಕೆ ಬಿದ್ದಿದ್ದು, ಹಿಂಬದಿ

ಕಲ್ಲಡ್ಕ: ಮುಗಿಯದ ರಸ್ತೆ ಹೊಂಡದ ಸಂಕಟ ➤‌ ಪ್ರಯಾಣಿಕ ಬೆಳ್ಳಾರೆಯ ಯುವಕನ ಸೊಂಟ ಮುರಿತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ: ಈಜಲೆಂದು ತೆರಳಿದ ಯುವಕ ನೀರಿನಲ್ಲಿ ಕಣ್ಮರೆ ➤‌ ಮುಂದುವರಿದ ಶೋಧಕಾರ್ಯ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 22. ಕುಕ್ಕೇಶ್ರೀ ದೇವಳಕ್ಕೆ ದರ್ಶನಕ್ಕೆಂದು ಬಂದಿದ್ದ ಯುವಕರ ತಂಡದಲ್ಲಿದ್ದ ಯುವಕನೋರ್ವ ಭಾನುವಾರ ಸಂಜೆ ಕುಮಾರಧಾರಾ ನದಿ ನೀರಿನಲ್ಲಿ ಸ್ನಾನಕ್ಕೆ ಇಳಿದು ನಾಪತ್ತೆಯಾಗಿದ್ದು, ಇದೀಗ ಶೋಧ ಕಾರ್ಯ ಆರಂಭವಾಗಿದೆ. ನಾಪತ್ತೆಯಾದ ಯುವಕನನ್ನು ಬೆಂಗಳೂರು ದೀಪಾಂಜಲಿ ನಗರದಲ್ಲಿ ವಾಸಿಸುತ್ತಿದ್ದ ಖಾಸಗಿ ಕಂಪನಿ ಉದ್ಯೋಗಿ ಶಿವು(25) ಎಂದು ಗುರುತಿಸಲಾಗಿದೆ. ಈತ ಭಾನುವಾರದಂದು ದೇವರ ದರ್ಶನ ಮುಗಿಸಿ ಬೆಂಗಳೂರಿಗೆ ತೆರಳುವ ಸಂದರ್ಭ ಕುಮಾರಧಾರಾ ನದಿಗೆ ತೆರಳಿದ್ದು, ಈ ಸಂದರ್ಭ ಶಿವು ಅವರು ಸ್ನಾನ ಮಾಡಲೆಂದು ನದಿಗೆ

ಸುಬ್ರಹ್ಮಣ್ಯ: ಈಜಲೆಂದು ತೆರಳಿದ ಯುವಕ ನೀರಿನಲ್ಲಿ ಕಣ್ಮರೆ ➤‌ ಮುಂದುವರಿದ ಶೋಧಕಾರ್ಯ Read More »

ಕರಾವಳಿ, ಕರ್ನಾಟಕ

ಪುತ್ತೂರು DYSP ಡಾ.ಗಾನಾ ಪಿ ಕುಮಾರ್ ವರ್ಗಾವಣೆ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 21. ಕಳೆದೆರಡು ವರ್ಷಗಳಿಂದ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಗಾನಾ ಪಿ.ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಪ್ರಸ್ತುತ ಬೆಂಗಳೂರಿನಲ್ಲಿ ಸಿಐಡಿಯಲ್ಲಿ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ವೀರಯ್ಯ ಹಿರೇಮಠ್ ಅವರನ್ನು ಪುತ್ತೂರು ಉಪವಿಭಾಗದ ಡಿವೈಎಸ್ಪಿಯಾಗಿ ನೇಮಕಗೊಳಿಸಿ ವರ್ಗಾವಣೆ ಮಾಡಿ ಸರಕಾರ ಆದೇಶಿಸಿದೆ. ಪ್ರಾಯೋಗಿಕ ತರಬೇತಿ ಪೂರ್ಣಗೊಳಿಸಿ ತಿಂಗಳ ಹಿಂದೆಯಷ್ಟೇ ಸಿಐಡಿಗೆ ತಾತ್ಕಾಲಿಕವಾಗಿ ನಿಯುಕ್ತಿಗೊಂಡಿದ್ದ ವೀರಯ್ಯ ಹಿರೇಮಠ ಅವರನ್ನು ಇದೀಗ ಪುತ್ತೂರು ಉಪವಿಭಾಗದ ಡಿವೈಎಸ್ಪಿಯಾಗಿ ನೇಮಕಗೊಳಿಸಿ ವರ್ಗಾವಣೆ ಮಾಡಿ ಆದೇಶಿಸಲಾಗಿದೆ

ಪುತ್ತೂರು DYSP ಡಾ.ಗಾನಾ ಪಿ ಕುಮಾರ್ ವರ್ಗಾವಣೆ Read More »

ಕರಾವಳಿ, ಕರ್ನಾಟಕ

ಪುತ್ತೂರು: ವಿಷ ಪದಾರ್ಥ ಸೇವಿಸಿ ನಗರಸಭೆ ಎಇಇ ಅಸ್ವಸ್ಥ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 21. ನಗರಸಭೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅರುಣ್ ಕುಮಾರ್ ಅವರು ವಿಷ ಸೇವಿಸಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದೆ. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಸ್ಮಶಾನದ ಬಳಿಯಲ್ಲಿ ಅವರು ಅಸ್ವಸ್ಥಗೊಂಡಿದ್ದು, ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಾಗ ವಿಷ ಪದಾರ್ಥ ಸೇವಿಸಿರುವುದು ತಿಳಿದು ಬಂದಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಕೆಎಂಸಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಪುತ್ತೂರು: ವಿಷ ಪದಾರ್ಥ ಸೇವಿಸಿ ನಗರಸಭೆ ಎಇಇ ಅಸ್ವಸ್ಥ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಬಿಜೆಪಿ ಸಕ್ರಿಯ ಕಾರ್ಯಕರ್ತ, ವಕ್ಫ್ ಬೋರ್ಡ್ ಸದಸ್ಯನಿಗೆ ಜೀವಬೆದರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ಬಿಜೆಪಿ ಕಾರ್ಯಕರ್ತ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಬೋರ್ಡ್ ಸದಸ್ಯ ಖಾಲಿದ್ ನಂದಾವರ ರವರು ತನಗೆ ಜೀವಬೆದರಿಕೆ ಇದೆ ಎಂದು ಬಂಟ್ವಾಳ ಉಪವಿಭಾಗದ ಡಿವೈಎಸ್ ಪಿಗೆ ದೂರು ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಬೋರ್ಡ್ ಸದಸ್ಯ ಖಾಲಿದ್ ನಂದಾವರ ಅವರು ಬಿಜೆಪಿಯ ಕಾರ್ಯಕರ್ತ ಹಾಗೂ ಆರ್ ಟಿಐ ಕಾರ್ಯಕರ್ತ. ಇವರು ಬಂಟ್ವಾಳದಲ್ಲಿ ನಡೆಯುತ್ತಿರುವ ಅಕ್ರಮ ಕಟ್ಟಡ, ಮರಳುಗಾರಿಕೆ ಸೇರಿ ಹಲವು ಅಕ್ರಮಗಳ ವಿರುದ್ಧ ಆಯಾ ಇಲಾಖೆಗೆ

ಮಂಗಳೂರು: ಬಿಜೆಪಿ ಸಕ್ರಿಯ ಕಾರ್ಯಕರ್ತ, ವಕ್ಫ್ ಬೋರ್ಡ್ ಸದಸ್ಯನಿಗೆ ಜೀವಬೆದರಿಕೆ Read More »

ಕರಾವಳಿ, ಕರ್ನಾಟಕ

ಈಶ್ವರಮಂಗಲ: ತ್ವೈಬಾ ಸಂಸ್ಥೆಯ ದಶಮಾನೋತ್ಸವ ಸಮ್ಮೇಳನ ಯಶಸ್ವಿಗೊಳಿಸಲು SYS ಈಸ್ಟ್ ಜಿಲ್ಲಾ ಸಮಿತಿ ಕರೆ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 20. ಪುತ್ತೂರು ತಾಲೂಕಿಗೊಳಪಟ್ಟ ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಈಶ್ವರಮಂಗಲ ಅಹ್ದಲ್ ನಗರದಲ್ಲಿ ಧಾರ್ಮಿಕ ಲೌಕಿಕ ಸಮನ್ವಯ ವಿದ್ಯಾಭ್ಯಾಸ ನೀಡುವ ತೈಬಾ ಎಜ್ಯುಕೇಶನ್ ಸೆಂಟರ್ ಇದರ ದಶವಾರ್ಷಿಕ ಸಮ್ಮೇಳನವು ಆಗಸ್ಟ್ 19, 20, 21 ದಿನಾಂಕಗಳಲ್ಲಿ ನಡೆಯುತ್ತಿದೆ. ಮೌಲ್ಯಯುತ ಶಿಕ್ಷಣ ಪಡೆದ ಸುಶಿಕ್ಷಿತ ಸಮಾಜದಿಂದಲೇ ಸೌಹಾರ್ದಯುತ ದೇಶವನ್ನು ಕಟ್ಟಲು ಸಾದ್ಯವಾಗಬಹುದೆಂಬ ಚಿಂತನೆಯ ಭಾಗವಾಗಿ ಶ್ರೇಷ್ಠ ಮಟ್ಟದ ವಿದ್ಯಾಭ್ಯಾಸ ಸಂಸ್ಥೆಯೊಂದು ಈಶ್ವರಮಂಗಲದಲ್ಲಿ ತಲೆಎತ್ತಿ ನಿಂತಿದೆ. ಶಿಕ್ಷಣ ಕ್ರಾಂತಿಯನ್ನೇ ಮುಖ್ಯ ಧ್ಯೇಯವಾಗಿಟ್ಟುಕೊಂಡು

ಈಶ್ವರಮಂಗಲ: ತ್ವೈಬಾ ಸಂಸ್ಥೆಯ ದಶಮಾನೋತ್ಸವ ಸಮ್ಮೇಳನ ಯಶಸ್ವಿಗೊಳಿಸಲು SYS ಈಸ್ಟ್ ಜಿಲ್ಲಾ ಸಮಿತಿ ಕರೆ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ➤‌ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 20. ಬೈಕ್ ಮತ್ತು ಕಾರಿನ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಗಂಭೀರ ಗಾಯಗೊಂಡ ಘಟನೆ ಪಡಂಗಡಿ ಪೆರ್ನಮಂಜೆ ತಿರುವಿನಲ್ಲಿ ನಡೆದಿದೆ. ಬೆಳ್ತಂಗಡಿಯಿಂದ ಮೂಡಬಿದಿರೆ ಕಡೆಗೆ ತೆರಳುತ್ತಿದ್ದ ಮಾರುತಿ ಕಾರು ಹಾಗೂ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ, ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಬೆಳ್ತಂಗಡಿ: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ➤‌ ಸವಾರ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top