ಕರಾವಳಿ

ಪ್ರವೀಣ್ ಹತ್ಯೆ ಪ್ರಕರಣ – ಮತ್ತಿಬ್ಬರು ಆರೋಪಿಗಳ ಬಂಧನ ➤‌ ಬಂಧಿತರ ಸಂಖ್ಯೆ ಆರಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಆ.07. ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬೆಳ್ಳಾರೆ ಗೌರಿಹೊಳೆ ಬಳಿಯ ನಿವಾಸಿ ಮಹಮ್ಮದ್ ಎಂಬವರ ಪುತ್ರ ನೌಫಾಲ್(28) ಹಾಗೂ ಸುಳ್ಯ ನಾವೂರು ಮಹಾಮ್ಮಾಯಿ ದೇವಸ್ಥಾನದ ಬಳಿಯ ನಿವಾಸಿ ಯಾಕುಬ್ ಎಂಬವರ ಪುತ್ರ ಆಬಿದ್(22) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರು ಮಂದಿಯನ್ನು ಇದುವರೆಗೆ ಬಂಧಿಸಲಾಗಿದೆ.  

ಪ್ರವೀಣ್ ಹತ್ಯೆ ಪ್ರಕರಣ – ಮತ್ತಿಬ್ಬರು ಆರೋಪಿಗಳ ಬಂಧನ ➤‌ ಬಂಧಿತರ ಸಂಖ್ಯೆ ಆರಕ್ಕೆ ಏರಿಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಆ. 15ರ ಒಳಗೆ ಎನ್ಐಟಿಕೆ ಟೋಲ್ ಗೇಟ್ ರದ್ದುಗೊಳಿಸಲು ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 06. ಎನ್ಐಟಿಕೆ ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿಗೆ ಸಂಸದರು ನೀಡಿದ ಜೂನ್ 22ರ ಅಂತಿಮ ಗಡುವು ದಾಟಿ ತಿಂಗಳುಗಳೇ ಕಳೆದಿವೆ. ಆದರೆ, ಇದೀಗ ಆ. 15ರ ಮೊದಲು ಸುರತ್ಕಲ್ ಟೋಲ್ ತೆರವುಗೊಳಿಸಿ, ಜನತೆಯನ್ನು ಟೋಲ್ ಲೂಟಿಯಿಂದ ಮುಕ್ತಗೊಳಿಸಬೇಕೆಂದು ಟೋಲ್ ವಿರೋಧಿ ಹೋರಾಟ ಸಮಿತಿಯು ನಳಿನ್ ಕುಮಾರ್ ಕಟೀಲ್ ಹಾಗೂ ಸಚಿವ ಸುನಿಲ್ ಕುಮಾರ್ ಅವರನ್ನು ಆಗ್ರಹಿಸಿದೆ. ಈ ಕುರಿತು ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಅವರು ಪ್ರಕಟಣೆ ನೀಡಿದ್ದು,

ಆ. 15ರ ಒಳಗೆ ಎನ್ಐಟಿಕೆ ಟೋಲ್ ಗೇಟ್ ರದ್ದುಗೊಳಿಸಲು ಆಗ್ರಹ Read More »

ಕರಾವಳಿ, ಕರ್ನಾಟಕ

ಮಂಗಳೂರು: ಬಸ್ ನ ಫೂಟ್ ಬೋರ್ಡ್ ನಲ್ಲಿ ನೇತಾಡಿಕೊಂಡು ವಿದ್ಯಾರ್ಥಿನಿಯರ ಪ್ರಯಾಣ ➤ ವಿಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 06. ಜನರಿಂದ ತುಂಬಿ ತುಳುಕುತ್ತಿದ್ದ ಖಾಸಗಿ ಬಸ್ ನ ಪೂಟ್ ಬೋರ್ಡಿನಲ್ಲಿ ವಿದ್ಯಾರ್ಥಿನಿಯರು ನೇತಾಡಿಕೊಂಡು ಪ್ರಯಾಣಿಸುತ್ತಿರುವ ಅಪಾಯಕಾರಿ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಸ್ ನಿರ್ವಾಹಕನೇ ವಿದ್ಯಾರ್ಥಿನಿಯರನ್ನು ತುಂಬಿ ಪುಟ್ ಬೋರ್ಡಿನಲ್ಲಿ ನೇತಾಡಿಕೊಂಡು ಕೊಂಡು ಹೋಗುತ್ತಿರುವ ದೃಶ್ಯ ವಿಡಿಯೋನಲ್ಲಿದೆ. ಒಂದೆಡೆ ಬಸ್ಸಿನ ಕೊರತೆಯಿಂದಾಗಿ ವಿದ್ಯಾರ್ಥಿಗಳ ಪರದಾಟವಾದರೆ, ಮತ್ತೊಂದೆಡೆ ಜನರ ಜೀವದ ಜೊತೆ ಚೆಲ್ಲಾಟವಾಡುವುದು ಕಂಡುಬಂದಿದೆ.    

ಮಂಗಳೂರು: ಬಸ್ ನ ಫೂಟ್ ಬೋರ್ಡ್ ನಲ್ಲಿ ನೇತಾಡಿಕೊಂಡು ವಿದ್ಯಾರ್ಥಿನಿಯರ ಪ್ರಯಾಣ ➤ ವಿಡಿಯೋ ವೈರಲ್ Read More »

ಕರಾವಳಿ, ಕರ್ನಾಟಕ

ಕರ್ತವ್ಯದಲ್ಲಿದ್ದ ವೇಳೆ ದಿಢೀರ್ ಅಸ್ವಸ್ಥ ➤ ಕೊಣಾಜೆ ಠಾಣಾ ಹೆಡ್ ಕಾನ್ಸ್ಟೇಬಲ್, ಸವಣೂರು ಮೂಲದ ಜಗನ್ನಾಥ್ ನಿಧನ

(ನ್ಯೂಸ್ ಕಡಬ) newskadaba.com ಕೊಣಾಜೆ, ಆ. 06. ಕೋಣಾಜೆ ಠಾಣೆಯಲ್ಲಿ ಕರ್ತವ್ಯನಿರತರಾಗಿದ್ದ ಪೊಲೀಸ್ ಸಿಬ್ಬಂದಿಯೊಬ್ಬರು ಅಸ್ಪಸ್ಧಗೊಂಡು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಸವಣೂರಿನ ಜಗನ್ನಾಥ (44) ಎಂದು ಗುರುತಿಸಲಾಗಿದೆ. ಇವರು ಕರ್ತವ್ಯದಲ್ಲಿದ್ದ ವೇಳೆ ದಿಢೀರ್ ಅಸ್ಪಸ್ಧಗೊಂಡಿದ್ದು, ತಕ್ಷಣವೇ ಕಣಚೂರು ಆಸ್ಫತ್ರೆಗೆ ದಾಖಲಿಸಿದ್ದು, ಆದರೆ ಚಿಕೆತ್ಸೆ ಫಲಕಾರಿಯಾಗದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತರು ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಕರ್ತವ್ಯದಲ್ಲಿದ್ದ ವೇಳೆ ದಿಢೀರ್ ಅಸ್ವಸ್ಥ ➤ ಕೊಣಾಜೆ ಠಾಣಾ ಹೆಡ್ ಕಾನ್ಸ್ಟೇಬಲ್, ಸವಣೂರು ಮೂಲದ ಜಗನ್ನಾಥ್ ನಿಧನ Read More »

ಕರಾವಳಿ, ಕರ್ನಾಟಕ

ಹರ್ ಘರ್ ತಿರಂಗಾ ಅಭಿಯಾನದಡಿ ರಾಷ್ಟ್ರಧ್ವಜ ಮಾರಾಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 06. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ತಾಲೂಕು ಪಂಚಾಯತ್, ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಹಾಗೂ ಸ್ವಚ್ಚ ಭಾರತ್ ಮಿಷನ್ ವತಿಯಿಂದ ಅಜಾದಿ ಕಾ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಹರ್ ಘರ್ ತಿರಂಗ ಅಭಿಯಾನದಡಿ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಇಂಧನ, ಕನ್ನಡ ಮತ್ತು‌ ಸಂಸ್ಕೃತಿ ಹಾಗೂ‌ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ತನ್ಮಯಿ ಸಂಜೀವಿನಿ, ಗ್ರಾಮ ಪಂಚಾಯತ್ ಒಕ್ಕೂಟ, ರಾಯಿ ಗ್ರಾಮ‌

ಹರ್ ಘರ್ ತಿರಂಗಾ ಅಭಿಯಾನದಡಿ ರಾಷ್ಟ್ರಧ್ವಜ ಮಾರಾಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ Read More »

ಕರಾವಳಿ, ಕರ್ನಾಟಕ

ಮಿಕ್ಸಿಯಲ್ಲಿ ತಾಂತ್ರಿಕ ದೋಷ ಹಿನ್ನೆಲೆ ➤ 20,189 ರೂ. ಪರಿಹಾರಕ್ಕೆ ಗ್ರಾಹಕರ ವೇದಿಕೆ ಆದೇಶ

(ನ್ಯೂಸ್ ಕಡಬ) newskadaba.com ಉಡುಪಿ, ಆ. 06. ಗ್ರಾಹಕಿಯೋರ್ವರಿಗೆ ತಾಂತ್ರಿಕ ದೋಷವಿದ್ದ ಮಿಕ್ಸರ್ ಗ್ರೈಂಡರ್ ಮಾರಾಟ ಮಾಡಿದ್ದ ಉಡುಪಿಯ ಪೈ ಇಂಟರ್‌ನ್ಯಾಷನಲ್ ಹಾಗೂ ಪ್ರೀತಿ ಕಿಚನ್ ಅಪ್ಲಯನ್ಸಸ್ ಪ್ರೈ.ಲಿ. ಪರಿಹಾರ ಒದಗಿಸಬೇಕು ಎಂದು ಉಡುಪಿ ಜಿಲ್ಲಾ ಗ್ರಾಹಕರ ಆಯೋಗ ತೀರ್ಪು ನೀಡಿದೆ. ಉಪನ್ಯಾಸಕಿ ಅನಿತಾ ಎಂಬವರು ಎರಡು ವರ್ಷಗಳ ಹಿಂದೆ ಪೈ ಇಂಟರ್‌ನ್ಯಾಷನಲ್‌ ಅಂಗಡಿಯಿಂದ 4,239 ರೂ.ಗಳನ್ನು ನೀಡಿ ಪ್ರೀತಿ ಮಿಕ್ಸರ್ ಗ್ರೈಂಡರ್ ಖರೀದಿಸಿದ್ದರು. ಆದರೆ ಮೂರೇ ತಿಂಗಳಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಮಿಕ್ಸಿಗೆ ಎರಡು ವರ್ಷಗಳ

ಮಿಕ್ಸಿಯಲ್ಲಿ ತಾಂತ್ರಿಕ ದೋಷ ಹಿನ್ನೆಲೆ ➤ 20,189 ರೂ. ಪರಿಹಾರಕ್ಕೆ ಗ್ರಾಹಕರ ವೇದಿಕೆ ಆದೇಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಮಹಡಿಯಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 05. ಫ್ಲ್ಯಾಟ್ ನ ಐದನೇ ಮಹಡಿಯಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಒಂಬತ್ತನೇ ತರಗತಿಯ ಬಾಲಕ ಮನೋಹರ್ ರೈ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟ ಘಟನೆ ವರದಿಯಾಗಿದೆ. ಸುಶಾನ್ ರೈ ಅವರು ಶಾಲೆಯಿಂದ ನೇರ ಮನೆಗೆ ಹೋಗದೆ ವಸತಿ ಸಮುಚ್ಚಾಯಕ್ಕೆ ಸಂಜೆ ಗಂಟೆ 4.20 ಕ್ಕೆ ಒಳಗೆ ಬಂದಿರುವುದು ಸಿ.ಸಿ. ಕ್ಯಾಮರದಲ್ಲಿ ಸೆರೆಯಾಗಿದೆ. ಕೆಲವೇ ನಿಮಿಷದಲ್ಲಿ ಆತ ಮಹಡಿಯಿಂದ ಕೆಳಗೆ ಬಿದ್ದಿದ್ದಾನೆ. ಆತ ಯಾವ ಮಹಡಿಯಿಂದ ಬಿದ್ದಿರುವುದೆಂದು ತಿಳಿದಿಲ್ಲ. ಆದರೆ ಆತನ ಶಾಲಾ

ಪುತ್ತೂರು: ಮಹಡಿಯಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಬಾಲಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಐದನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಗಂಭೀರ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 05. ಫ್ಲ್ಯಾಟ್ ನ ಐದನೇ ಮಹಡಿಯಿಂದ ಬಿದ್ದು 9ನೇ ತರಗತಿಯ ಬಾಲಕನೋರ್ವ ಗಂಭೀರ ಗಾಯಗೊಂಡ ಘಟನೆ ಬೊಳುವಾರಿನಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ಬಾಲಕನನ್ನು ಸುದಾನ ಶಾಲೆಯ ಒಂಬತ್ತನೇ ತರಗತಿ ವಿದ್ಯಾರ್ಥಿ ಮನೋಹರ್ ರೈ ಎಂಬವರ ಪುತ್ರ ಸುಹಾನ್ ಎಂದು ಗುರುತಿಸಲಾಗಿದೆ. ಈತ ಮನೆಯವರೊಂದಿಗೆ ವಾಸವಾಗಿದ್ದ ಫ್ಲ್ಯಾಟ್ ನ ಐದನೇ ಮಹಡಿಯಿಂದ ಕೆಳಗೆ ಬಿದ್ದಿದ್ದು, ಗಂಭೀರ ಗಾಯಗೊಂಡ ಆತನನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.

ಪುತ್ತೂರು: ಐದನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಗಂಭೀರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ ಠಾಣಾ ಎಸ್.ಐ ಶ್ರೀಕಾಂತ್ ರಾಥೋಡ್ ವರ್ಗಾವಣೆ

(ನ್ಯೂಸ್ ಕಡಬ) newskadaba.com ಕಡಬ, ಆ. 05. ಕಡಬ ಎಸ್.ಐ. ಶ್ರೀಕಾಂತ್ ರಾಥೋಡ್ ಅವರನ್ನು ಪುತ್ತೂರು ನಗರ ಠಾಣೆಗೆ ವರ್ಗಾವಣೆ ಮಾಡಿ ಪೋಲೀಸ್ ಮಹಾನಿರ್ದೇಶಕ ದಿವ್ಯಜೋತಿ ರೇ ಆದೇಶ ಹೊರಡಿಸಿದ್ದಾರೆ.   ಉಪ್ಪಿನಂಗಡಿ ಪೋಲೀಸ್ ಠಾಣಾ ಎಸ್.ಐ. ಕುಮಾರ್ ಕಾಂಬ್ಳೆ ಅವರನ್ನು ವರ್ಗಾವಣೆ ಮಾಡಿ ಪುತ್ತೂರು ನಗರ ಪೋಲೀಸ್ ಠಾಣಾಧಿಕಾರಿ ರಾಜೇಶ್ ಕೆ.ವಿ ಅವರನ್ನು ಉಪ್ಪಿನಂಗಡಿ ನೂತನ ಠಾಣಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಕಡಬ ಠಾಣಾ ಎಸ್.ಐ ಶ್ರೀಕಾಂತ್ ರಾಥೋಡ್ ವರ್ಗಾವಣೆ Read More »

ಕರಾವಳಿ, ಕರ್ನಾಟಕ

ಸುಬ್ರಹ್ಮಣ್ಯ: ಕುಮಾರಧಾರ ಸ್ನಾನಘಟ್ಟ ಮತ್ತೆ ಮುಳುಗಡೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 05. ನಿರಂತರವಾಗಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಮತ್ತೆ ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಜಲಾವೃತವಾಗಿದೆ. ಘಟ್ಟ ಪ್ರದೇಶದಲ್ಲಿ ಹಾಗೂ ಕರಾವಳಿಯಲ್ಲಿ ವಿಪರೀತ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಸುಬ್ರಹ್ಮಣ್ಯ: ಕುಮಾರಧಾರ ಸ್ನಾನಘಟ್ಟ ಮತ್ತೆ ಮುಳುಗಡೆ Read More »

ಕರಾವಳಿ, ಕರ್ನಾಟಕ
Scroll to Top