ಕರಾವಳಿ

ಬೈಕ್ ಸವಾರರಿಗೆ ಶಾಕಿಂಗ್ ನ್ಯೂಸ್ ➤ ನಾಳೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶವಿಲ್ಲ..!!!

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 04. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶವಿಲ್ಲ ಎಂದು ಎಡಿಜಿಪಿ ಅಲೋಕ್ ಕುಮಾರ್ ಮಂಗಳೂರಿನಲ್ಲಿ ತಿಳಿಸಿದ್ದಾರೆ. ಹದಿನೆಂಟು ವರ್ಷದ ಕೆಳಗಿನ ಮಕ್ಕಳು, ಹಿರಿಯ ನಾಗರಿಕರು ಮತ್ತು ಮಹಿಳೆಯರಿಗೆ ಈ ನಿಯಮದಿಂದ ರಿಯಾಯಿತಿ ನೀಡಲಾಗಿದೆ. ಕೇವಲ ಪುರುಷ ಹಿಂಬದಿ ಸವಾರರಿಗೆ ಮಾತ್ರ ಈ ನಿಯಮ ಅನ್ವಯಿಸಲಿದೆ. ಮುಂದಿನ ಒಂದು ವಾರದ ಮಟ್ಟಿಗೆ ಜಿಲ್ಲೆಯಲ್ಲಿ ಈ ನಿಯಮವನ್ನು ಪಾಲನೆ ಮಾಡಲಾಗುತ್ತದೆ ಎಂದು ಅವರು […]

ಬೈಕ್ ಸವಾರರಿಗೆ ಶಾಕಿಂಗ್ ನ್ಯೂಸ್ ➤ ನಾಳೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶವಿಲ್ಲ..!!! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಟ್ಲ: ಯುವಕ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಟ್ಲ, ಆ. 04. ಮನೆಯಲ್ಲೇ ನೇಣುಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಶಿವಾಜಿನಗರದ ನೆಕ್ಕರೆಕಾಡು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ವಿಟ್ಲ ಶಿವಾಜಿನಗರದ ನೆಕ್ಕರೆಕಾಡು ನಿವಾಸಿ ಸುರೇಶ್ ಎಂದು ಗುರುತಿಸಲಾಗಿದೆ. ಈತ ಮನೆಯಲ್ಲೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ತಕ್ಷಣವೇ ವಿಟ್ಲ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪರಿಶೀಲಿಸಿದ ವೈದ್ಯರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

ವಿಟ್ಲ: ಯುವಕ ನೇಣುಬಿಗಿದು ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ತಲವಾರು ದಾಳಿ ನಡೆದಿದೆ ಅಂತ ಕಥೆ ಕಟ್ಟಿದ್ದ ವ್ಯಕ್ತಿಯ ವಿರುದ್ದ ಪ್ರಕರಣ ದಾಖಲು..?

(ನ್ಯೂಸ್ ಕಡಬ) nrwskadaba.com ಮಂಗಳೂರು, ಆ. 04. ಸೆಂಟ್ರಿಂಗ್ ಕೆಲಸಕ್ಕೆ ತೆರಳುತ್ತಿದ್ದ ವೇಳೆ ತನ್ನ ಮೇಲೆ ಮೂವರು ತಲವಾರು ದಾಳಿ ನಡೆಸಲೆತ್ನಿಸಿದ್ದಾರೆ ಎಂದು ಸುಳ್ಳು ಸುದ್ದಿ ಹರಿಸಿದ್ದ ಕೆಸಿರೋಡ್ ನಿವಾಸಿ ಕಿಶೋರ್ ಎಂಬಾತನ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸುಳ್ಳು ಸುದ್ದಿ ಹರಡಿದ ಕುರಿತು ಮಂಗಳೂರು ಕಮಿಷನರ್ ಶಶಿಕುಮಾರ್ ಸ್ಪಷ್ಟನೆ ನೀಡಿದ್ದು, ಉಳ್ಳಾಲದ ಬಿಜೆಪಿ ಕಾರ್ಯಕರ್ತ ಕಿಶೋರ್ ಸಾಲ್ಯಾನ್ ಎಂಬಾತ ಕೆಲಸಕ್ಕೆ ತೆರಳುತ್ತಿದ್ದ ವೇಳೆ ತಲವಾರು ದಾಳಿಗೆ ಯತ್ನ ನಡೆಸಿದ್ದರು ಎಂಬುವುದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಜಿ ಬಗ್ಗೆ

ತಲವಾರು ದಾಳಿ ನಡೆದಿದೆ ಅಂತ ಕಥೆ ಕಟ್ಟಿದ್ದ ವ್ಯಕ್ತಿಯ ವಿರುದ್ದ ಪ್ರಕರಣ ದಾಖಲು..? Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಾರಿಗೆ ಲಾರಿ ಢಿಕ್ಕಿ ➤ ವಿದ್ಯಾರ್ಥಿನಿಗೆ ಗಾಯ

(ನ್ಯೂಸ್ ಕಡಬ) newskadaba.com ಉಡುಪಿ, ಆ. 04. ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮಣಿಪಾಲದ ವಿದ್ಯಾರ್ಥಿನಿಯೋರ್ವಳು ಗಾಯಗೊಂಡ ಘಟನೆ ಉಡುಪಿಯ ಸಂತೆಕಟ್ಟೆ ಜಂಕ್ಷನ್ ನಲ್ಲಿ ನಡೆದಿದೆ. ಗಾಯಗೊಂಡ ಮಣಿಪಾಲದ ಎಂಐಟಿ ವಿದ್ಯಾರ್ಥಿನಿ‌ ಚಲಾಯಿಸಿಕೊಂಡು ಹೋಗುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ವಿದ್ಯಾರ್ಥಿನಿ ಗಾಯಗೊಂಡಿದ್ದು, ತಕ್ಷಣವೇ ಮಲ್ಪೆಯ ಅಪತ್ಭಾಂಧವ ಈಶ್ವರ್ ಮಲ್ಪೆ ಮತ್ತು ಸ್ನೇಹಿತರು ವಿದ್ಯಾರ್ಥಿನಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಕುರಿತು ಉಡುಪಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾರಿಗೆ ಲಾರಿ ಢಿಕ್ಕಿ ➤ ವಿದ್ಯಾರ್ಥಿನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಜಿಲ್ಲಾ ಮತ್ತು ಸಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾಗಿ ಬೆಳ್ತಂಗಡಿಯ ಸಿರಾಜುದ್ದೀನ್ ಎ. ಆಯ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 04. ಮಂಗಳೂರಿನಲ್ಲಿ 16 ವರ್ಷಗಳಿಂದ ವಕೀಲರಾಗಿ ಗುರುತಿಸಿಕೊಂಡಿದ್ದ ಸಿರಾಜುದ್ದೀನ್ ಎ. ಅವರು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಹುದ್ದೆಗೆ ಆಯ್ಕೆಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ನಿವಾಸಿ ಸಿರಾಜುದ್ದೀನ್, ಮಂಗಳೂರಿನಲ್ಲಿ ಖ್ಯಾತ ವಕೀಲ ಅರುಣ್ ಬಂಗೇರ ಅವರ ಜೂನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಹಲವು ವರ್ಷಗಳಿಂದ ನ್ಯಾಯಾಧೀಶರ ಹುದ್ದೆಗಾಗಿ ಪರೀಕ್ಷೆ ಬರೆಯುತ್ತಿದ್ದ ಇವರು, ಏಳನೇ ಬಾರಿಯ ಪ್ರಯತ್ನದಲ್ಲಿ ಸಫಲತೆ ಕಂಡಿದ್ದು, ನ್ಯಾಯವಾದಿಯಾಗಿದ್ದ ಸಿರಾಜುದ್ದೀನ್ ಎ. ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ

ಜಿಲ್ಲಾ ಮತ್ತು ಸಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾಗಿ ಬೆಳ್ತಂಗಡಿಯ ಸಿರಾಜುದ್ದೀನ್ ಎ. ಆಯ್ಕೆ Read More »

ಕರಾವಳಿ, ಕರ್ನಾಟಕ

ಸುಬ್ರಹ್ಮಣ್ಯ: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 04. ವಿವಾಹಿತ ಮಹಿಳೆಯನ್ನು ಅತ್ಯಾಚಾರವೆಸಗಿ ಬಳಿಕ ಮದುವೆಯಾಗುವುದಾಗಿ ನಂಬಿಸಿ 1.70 ಲಕ್ಷ ರೂ. ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಸುಬ್ರಹ್ಮಣ್ಯ ಠಾಣೆಯಲ್ಲಿ ಕೇಸು ದಾಖಲಾಗಿದೆ. ಸಂತ್ರಸ್ತ ಮಹಿಳೆಯು ಮಕ್ಕಳೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಮೇ. 20ರಂದು ರಾತ್ರಿ ಹತ್ತು ಗಂಟೆಯ ವೇಳೆಗೆ ಪಾನಮತ್ತನಾಗಿ ಬಂದ ಪವನ್ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದನು. ಈ ಕುರಿತು ಪೊಲೀಸ್ ದೂರು ನೀಡುತ್ತೇನೆ ಎಂದಾಗ ನಾನು ನಿನ್ನನ್ನು ಮದುವೆಯಾಗುತ್ತೇನೆ. ದೂರು ಕೊಡುವುದು ಬೇಡ ಎಂದು ಹೇಳಿ

ಸುಬ್ರಹ್ಮಣ್ಯ: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ➤ ದೂರು ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಫಾಝಿಲ್ ಕೊಲೆ ಆರೋಪಿಗಳು 14 ದಿನ ಪೊಲೀಸ್ ಕಸ್ಟಡಿಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 04. ಸುರತ್ಕಲ್ ನಲ್ಲಿ ಇತ್ತೀಚೆಗೆ ನಡೆದ ಕಾಟಿಪಳ್ಳ ಮಂಗಳಪೇಟೆ ನಿವಾಸಿ ಫಾಝಿಲ್ ಹತ್ಯೆ ಪ್ರಕರಣದಲ್ಲಿ ಬಂಧಿತರಾದ ಆರು ಮಂದಿ ಆರೋಪಿಗಳನ್ನು ನ್ಯಾಯಾಲಯವು 14 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಒಪ್ಪಿಸಲಾಗಿದೆ. ಪ್ರಕರಣ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ತಮ್ಮ ಕಸ್ಟಡಿಗೆ ಒಪ್ಪಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ ಹಿನ್ನಲೆ ಆರೋಪಿಗಳಾದ ಸುಹಾಸ್‌ ಶೆಟ್ಟಿ, ಮೋಹನ್‌, ಅಭಿಷೇಕ್‌, ಶ್ರೀನಿವಾಸ್‌, ದೀಕ್ಷಿತ್‌ ಮತ್ತು ಗಿರಿಧರ್‌ನನ್ನು ನ್ಯಾಯಾಲಯವು ಪೊಲೀಸ್‌ ಕಸ್ಟಡಿಗೆ ನೀಡಿದೆ. ಕಾರು ಮಾಲಕ ಅಜಿತ್‌

ಫಾಝಿಲ್ ಕೊಲೆ ಆರೋಪಿಗಳು 14 ದಿನ ಪೊಲೀಸ್ ಕಸ್ಟಡಿಗೆ Read More »

ಕರಾವಳಿ, ಕರ್ನಾಟಕ

ವಿಪರೀತ ಮಳೆಯ ಹಿನ್ನೆಲೆ ➤ ನಾಳೆ (ಆ.04) ಸುಳ್ಯ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ.03. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸುಳ್ಯ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳಿಗೆ ಆ.4ರಂದು ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ತಿಳಿಸಿದ್ದಾರೆ. ಕಡಬ ಮತ್ತಿತರ ತಾಲೂಕುಗಳಿಗೆ ಸಂಬಂಧಿಸಿದಂತೆ ಆಯಾ ತಾಲೂಕಿನ ತಹಶೀಲ್ದಾರ್ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ತಿಳಿಸಿದ್ದಾರೆ.  

ವಿಪರೀತ ಮಳೆಯ ಹಿನ್ನೆಲೆ ➤ ನಾಳೆ (ಆ.04) ಸುಳ್ಯ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ Read More »

ಕರಾವಳಿ

ಕಡಬ: ಅಕ್ರಮ ಜಾನುವಾರು ಸಾಗಾಟ ಪತ್ತೆ ➤ ದನ ಹಾಗೂ ಪಿಕಪ್ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ.03. ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದುದನ್ನು ಪತ್ತೆ ಹಚ್ಚಿರುವ ಕಡಬ ಪೊಲೀಸರು ಒಂದು ಜಾನುವಾರು ಸಹಿತ ಪಿಕಪ್ ವಾಹನವನ್ನು ವಶಕ್ಕೆ ಪಡೆದುಕೊಂಡ ಘಟನೆ ಕೊಯಿಲ ಗ್ರಾಮದ ಆನೆಗುಂಡಿ ಎಂಬಲ್ಲಿ ಬುಧವಾರದಂದು ನಡೆದಿದೆ. ನಝೀರ್ ಹಾಗೂ ರತ್ನಾಕರ ಎಂಬವರು ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವೇಳೆ ಕಡಬ ಠಾಣಾ ಸಬ್ ಇನ್ಸ್‌ಪೆಕ್ಟರ್ ಆಂಜನೇಯ ರೆಡ್ಡಿಯವರು ಆನೆಗುಂಡಿ ಸಮೀಪ ವಾಹನವನ್ನು ನಿಲ್ಲಿಸಲು ಸೂಚಿಸಿದರೂ, ನಿಲ್ಲಿಸದೆ ಪರಾರಿಯಾಗಲೆತ್ನಿಸಿದ ಪಿಕಪ್ ವಾಹನವನ್ನು ಬೆನ್ನಟ್ಟಿ ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳ

ಕಡಬ: ಅಕ್ರಮ ಜಾನುವಾರು ಸಾಗಾಟ ಪತ್ತೆ ➤ ದನ ಹಾಗೂ ಪಿಕಪ್ ಪೊಲೀಸ್ ವಶಕ್ಕೆ Read More »

ಕರಾವಳಿ

ಭಟ್ಕಳ: ಪ್ರವಾಹ ಪೀಡಿತ ಪ್ರದೇಶಗಳಿಗೆ ಇಂದು ಸಂಜೆ ಸಿಎಂ ಭೇಟಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 03. ಭಟ್ಕಳ ಮಳೆ ಹಾನಿ ಪೀಡಿತ ಪ್ರದೇಶಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಸಂಜೆ 4 ಗಂಟೆಗೆ ಭೇಟಿ ನೀಡಲಿದ್ದಾರೆ. ಇವರು ವಿಮಾನದ ಮೂಲಕ ಬೆಂಗಳೂರಿನಿಂದ ಗೋವಾಕ್ಕೆ ತೆರಳಿ ಅಲ್ಲಿಂದ ರಸ್ತೆ ಮೂಲಕ ಭಟ್ಕಳಕ್ಮೆ ಪ್ರಯಾಣಿಸಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಂಜೆ 6 ಗಂಟೆಗೆ ಹಿಂತಿರುಗಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಭಟ್ಕಳ: ಪ್ರವಾಹ ಪೀಡಿತ ಪ್ರದೇಶಗಳಿಗೆ ಇಂದು ಸಂಜೆ ಸಿಎಂ ಭೇಟಿ Read More »

ಕರಾವಳಿ, ಕರ್ನಾಟಕ
Scroll to Top