ಕರಾವಳಿ

ಕಡಬ, ಪುತ್ತೂರು, ಸುಳ್ಯ & ಉಪ್ಪಿನಂಗಡಿ ಠಾಣಾ ಪೊಲೀಸರ ವರ್ಗಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 03. ‘ಸೇವಾ ಅವಧಿಯಲ್ಲಿ ಒಂದು ಬಾರಿ ಮಾತ್ರ’ ಎಂದು ಪರಿಗಣಿಸಿ ಪರಸ್ಪರ ಸ್ಥಳ ಬದಲಾವಣೆ ಮಾಡಿ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಕಾನ್‌ಸ್ಟೇಬಲ್, ಹೆಡ್‌ಕಾನ್‌ಸ್ಟೇಬಲ್‌ ಹಾಗೂ ಓರ್ವ ಎಎಸ್‌ಐಯವರನ್ನು ಕೋರಿಕೆಯ ಮೇಲೆ ವರ್ಗಾವಣೆ ಮಾಡಿ ದ.ಕ.ಜಿಲ್ಲಾ ಪೊಲೀಸ್ ಅಧೀಕ್ಷಕರು ಆದೇಶ ಹೊರಡಿಸಿದ್ದಾರೆ. ಕಡಬ ಪೊಲೀಸ್ ಠಾಣೆಯಲ್ಲಿ ಕಾನ್‌ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿರುವ ಶ್ರೀಶೈಲ ಎಂ.ಕೆ ಅವರನ್ನು ಪುತ್ತೂರು ಸಂಚಾರ ಪೊಲೀಸ್ ಠಾಣೆಗೆ, ಪುತ್ತೂರು ಸಂಚಾರ ಪೊಲೀಸ್ ಠಾಣೆಯಿಂದ ಮಲ್ಲಿಕಾರ್ಜುನಯ್ಯ […]

ಕಡಬ, ಪುತ್ತೂರು, ಸುಳ್ಯ & ಉಪ್ಪಿನಂಗಡಿ ಠಾಣಾ ಪೊಲೀಸರ ವರ್ಗಾವಣೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಲಘು ಭೂಕಂಪನದ ಅನುಭವ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 03. ನಗರದ ಮೇರಿಹಿಲ್ ಸುತ್ತಮುತ್ತದ ನಿವಾಸಿಗಳಿಗೆ ಬುಧವಾರ ಬೆಳಗ್ಗೆ 10ರಿಂದ 10.30ರ ವೇಳೆಗೆ ಭೂ ಕಂಪಿಸಿದ ಅನುಭವವಾಗಿದೆ. ಭೂಕಂಪನದ ಅನುಭವದಿಂದ ಸುರಕ್ಷತಾ ದೃಷ್ಟಿಯಿಂದ ಸುತ್ತಮುತ್ತದ ಶಾಲೆಯ ವಿದ್ಯಾರ್ಥಿಗಳನ್ನು ಕೆಲಕಾಲ ಶಿಕ್ಷಕರು ತರಗತಿಯಿಂದ ಹೊರನಿಲ್ಲಿಸಿದ್ದಾರೆ. ಬಳಿಕ ಮತ್ತೆ ಎಂದಿನಂತೆ ತರಗತಿಗಳು ಆರಂಭವಾಗಿದೆ. ವಿದ್ಯಾರ್ಥಿಗಳ ಹೆತ್ತವರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯ ಇಲ್ಲ. ಸುತ್ತಮುತ್ತಲಿನ ಒಂದಷ್ಟು ಬಹುಮಹಡಿಯ ಕಟ್ಟಡಗಳಲ್ಲೂ ಲಘು ಭೂಕಂಪನದ ಅನುಭವವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಇನ್ನು ಮೇರಿಹಿಲ್ ನಲ್ಲಿ ಭೂಮಿ

ಮಂಗಳೂರು: ಲಘು ಭೂಕಂಪನದ ಅನುಭವ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ: ಮೇಘಸ್ಫೋಟದಿಂದ ಹಾನಿಯಾದ ಪ್ರದೇಶಕ್ಕೆ ಸಚಿವ ಸುನಿಲ್ ಕುಮಾರ್ ಭೇಟಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ.03. ಮೇಘ ಸ್ಪೋಟದಿಂದಾಗಿ ಹಾನಿಯಾದ ಏನೆಕಲ್ಲು ಸೇತುವೆ ಹಾಗೂ ಹಾನಿಗೊಳಗಾದ ಪ್ರದೇಶಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಬುಧವಾರದಂದು ವೀಕ್ಷಿಸಿದರು. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ., ಪುತ್ತೂರು ಉಪ ವಿಭಾಗಾಧಿಕಾರಿ ಗಿರೀಶ್ ನಂದನ್, ಜಿ.ಪಂ. ಸಿಇಒ ಕುಮಾರ್, ಸುಳ್ಯ ತಹಶೀಲ್ದಾರ್ ಅನಿತಾ ಲಕ್ಷ್ಮೀ, ಕಡಬ ತಹಶೀಲ್ದಾರ್ ಅನಂತ ಶಂಕರ, ಪುತ್ತೂರು ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್ ಶೆಟ್ಟಿ, ಕಡಬ ಕಂದಾಯ ನಿರೀಕ್ಷಕ ಅವಿನ್ ರಂಗತ್ ಮಲೆ

ಸುಬ್ರಹ್ಮಣ್ಯ: ಮೇಘಸ್ಫೋಟದಿಂದ ಹಾನಿಯಾದ ಪ್ರದೇಶಕ್ಕೆ ಸಚಿವ ಸುನಿಲ್ ಕುಮಾರ್ ಭೇಟಿ Read More »

ಕರಾವಳಿ, ಕರ್ನಾಟಕ

ಅನ್ ಲೋಡ್ ವೇಳೆ 40 ಅಡಿ ಎತ್ತರದಿಂದ ಕೆಳಗೆಬಿದ್ದ ಟಿಪ್ಪರ್ ➤ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಕಾರ್ಕಳ, ಆ. 03. ಟಿಪ್ಪರ್ ನಿಂದ ಸೈಜುಕಲ್ಲುಗಳನ್ನು ಅನ್ ಲೋಡ್ ಮಾಡುತ್ತಿದ್ದ ವೇಳೆ 40 ಅಡಿ ಎತ್ತರದಿಂದ ಕೆಳಗೆ ಮಗುಚಿ ಬಿದ್ದು, ಚಾಲಕ ಮೃತಪಟ್ಟ ಘಟನೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಮೃತ ಚಾಲಕನನ್ನು ಆಸಿಫ್ ಎಂದು ಗುರುತಿಸಲಾಗಿದೆ. ಕಾರ್ಕಳ ತಾಲೂಕಿನ ಸೂಡ ಎಂಬಲ್ಲಿ ಸುರೇಶ್ ಶೆಟ್ಟಿ ಎಂಬವರ ಮಾಲಕತ್ವದ ಪ್ರಸ್ತುತ ಕೇರಳ ವಾಸಿ ಬಾಸಿತ್ ಎಂಬುವವರು ಲೀಸ್ ಗೆ ಪಡೆದುಕೊಂಡಿರುವ ಓಂ ಕ್ರಶರ್ ನಲ್ಲಿ ಟಿಪ್ಪರ್ ಚಾಲಕನಾಗಿ ಕೆಲಸ

ಅನ್ ಲೋಡ್ ವೇಳೆ 40 ಅಡಿ ಎತ್ತರದಿಂದ ಕೆಳಗೆಬಿದ್ದ ಟಿಪ್ಪರ್ ➤ ಚಾಲಕ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಳ್ಳಾಲ: ತಲವಾರು ದಾಳಿಯ ವದಂತಿ ಹಬ್ಬಿಸಿದ ವ್ಯಕ್ತಿಯ ವಿರುದ್ದ ಕ್ರಮ ➤ ಕಮಿಷನರ್ ಶಶಿಕುಮಾರ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 03. ವ್ಯಕ್ತಿಯೋರ್ವ ತನ್ನನ್ನು ಯಾರೋ ಬೆನ್ನಟ್ಟಿ ತಲವಾರು ದಾಳಿ ನಡೆಸಲು ಯತ್ನಿಸಿದ್ದಾರೆ ಎಂದು ವದಂತಿ ಹಬ್ಬಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.   ವದಂತಿ ಹಬ್ಬಿಸಿದ ಉಚ್ಚಿಲ ನಿವಾಸಿ ಕಿಶೋರ್ ಎಂಬಾತನ ವಿರುದ್ದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ಈತ ಇಂದು ಬೆಳಗ್ಗೆ ಕೆ.ಸಿ.ನಗರ ಮುಳ್ಳುಗುಡ್ಡೆ ಎಂಬಲ್ಲಿ ತನ್ನನ್ನು ಯಾರೋ ಬೆನ್ನಟ್ಟಿ ತಲವಾರು ದಾಳಿಗೆ ಯತ್ನಿಸಿದ್ದಾರೆ

ಉಳ್ಳಾಲ: ತಲವಾರು ದಾಳಿಯ ವದಂತಿ ಹಬ್ಬಿಸಿದ ವ್ಯಕ್ತಿಯ ವಿರುದ್ದ ಕ್ರಮ ➤ ಕಮಿಷನರ್ ಶಶಿಕುಮಾರ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಹಟ್ಟಿ ಬೆಂಕಿಗಾಹುತಿ ➤ ಲಕ್ಷಾಂತರ ರೂ. ನಷ್ಟ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 03. ಕೊಯ್ಯೂರು ಗ್ರಾಮದ ಅರ್ತಲ್ಕೆ ನಿವಾಸಿ ಸೇಸಪ್ಪ ಮುಗೇರ ಎಂಬವರ ಹಟ್ಟಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಅಪಾರ ನಷ್ಟ ಸಂಭವಿಸಿದ ಘಟನೆ ನಡೆದಿದೆ. ಮನೆಯವರು ರಾತ್ರಿ ವೇಳೆ ಮಲಗಿದ್ದ ಸಂದರ್ಭದಲ್ಲಿ ಹಟ್ಟಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಪರಿಣಾಮ ಹಟ್ಟಿಯ ಮೇಲ್ಛಾವಣಿ ಸುಟ್ಟು ಹೋಗಿ ದನ ಕರುಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇದನ್ನು ಗಮನಿಸಿದ ಪಕ್ಕದ ಮನೆಯವರು ಮನೆ ಯಜಮಾನನಿಗೆ ತಿಳಿಸಿದ್ದು, ಯಜಮಾನ ಸೇಸಪ್ಪ ಮುಗೇರ  ಬಂದು ನೋಡಿದಾಗ ಹಟ್ಟಿಯು ಸಂಪೂರ್ಣವಾಗಿ ಸುಟ್ಟು

ಬೆಳ್ತಂಗಡಿ: ಹಟ್ಟಿ ಬೆಂಕಿಗಾಹುತಿ ➤ ಲಕ್ಷಾಂತರ ರೂ. ನಷ್ಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಕ್ಕಿ ಹರಿಯುತ್ತಿರುವ ಪಯಸ್ವಿನಿ ➤ ಮಂಗಳೂರು- ಮೈಸೂರು ಹೆದ್ದಾರಿ ಬಂದ್..!!

(ನ್ಯೂಸ್ ಕಡಬ) newskadaba.com ಸುಳ್ಯ, ಆ. 03. ಭಾರಿ ಮಳೆಯಿಂದಾಗಿ ಸುಳ್ಯ ತಾಲ್ಲೂಕಿನಲ್ಲಿ ಪಯಸ್ವಿನಿ ನದಿ ಉಕ್ಕಿ ಹರಿಯುತ್ತಿದ್ದು, ಇದರಿಂದಾಗಿ ಮೈಸೂರು-ಮಂಗಳೂರು ಹೆದ್ದಾರಿ ಬಂದ್ ಆಗಿದೆ. ಸುಳ್ಯ ತಾಲೂಕಿನ ಪೆರಾಜೆ ಹಾಗೂ ಆರಂಬೂರು ಬಳಿ ಹೆದ್ದಾರಿಯಲ್ಲಿ ಭಾರಿ‌ ಪ್ರಮಾಣದಲ್ಲಿ ನೀರು ನಿಂತಿರುವುದರಿಂದ ವಾಹನ ಸಂಚಾರ ಕೂಡಾ ಮುಂಜಾನೆ 3 ಗಂಟೆಯ ನಂತರ ಸ್ಥಗಿತಗೊಂಡಿದೆ‌. ಬಸ್ ನಲ್ಲಿ ಒಂಬತ್ತು ಮಂದಿ‌ ಪ್ರಯಾಣಿಕರಿದ್ದರು. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಸ್ಥಳೀಯರ ನೆರವಿನಿಂದ ಬೋಟನ್ನು ಬಸ್ ಬಳಿ ತೆಗೆದುಕೊಂಡು ಹೋಗಿ ಒಂಬತ್ತು

ಉಕ್ಕಿ ಹರಿಯುತ್ತಿರುವ ಪಯಸ್ವಿನಿ ➤ ಮಂಗಳೂರು- ಮೈಸೂರು ಹೆದ್ದಾರಿ ಬಂದ್..!! Read More »

ಕರಾವಳಿ, ಕರ್ನಾಟಕ

ದ.ಕ, ಕೊಡಗು ಭಾಗದಲ್ಲಿ ನಿಲ್ಲದ ಮಳೆ ➤ ಚೆಂಬು ಗ್ರಾಮದಲ್ಲಿ ರಸ್ತೆ ಸಂಪರ್ಕ ಕಡಿತ

(ನ್ಯೂಸ್ ಕಡಬ) newskadaba.com ಮಡಿಕೇರಿ, ಆ. 03. ಕೊಡಗು- ದಕ್ಷಿಣ ಕನ್ನಡ ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಮಡಿಕೇರಿ ತಾಲೂಕಿನ ಚೆಂಬು ಗ್ರಾಮದ ಊರುಬೈಲು ಎಂಬಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ಮೋರಿಯೊಂದು ನೀರಿನ ಜತೆಗೆ ಸಂಪೂರ್ಣವಾಗಿ ಕೊಚ್ಚಿ ಹೋಗಿದ್ದರಿಂದ ಸಂಪಾಜೆಗೆ ಸಂಪರ್ಕಿಸುತ್ತಿದ್ದ ರಸ್ತೆ ಸಂಪೂರ್ಣವಾಗಿ ಬಂದ್ ಆಗಿದ್ದು, ಈ ಭಾಗದ ಜನರಲ್ಲಿ ಒಂದು ರೀತಿಯ ಆತಂಕದ ವಾತಾವರಣ ನಿರ್ಮಾಣವಾಗಿದೆ.

ದ.ಕ, ಕೊಡಗು ಭಾಗದಲ್ಲಿ ನಿಲ್ಲದ ಮಳೆ ➤ ಚೆಂಬು ಗ್ರಾಮದಲ್ಲಿ ರಸ್ತೆ ಸಂಪರ್ಕ ಕಡಿತ Read More »

ಕರಾವಳಿ, ಕರ್ನಾಟಕ

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ ➤ ಹಲವರು ಗಂಭೀರ

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಆ. 03. ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾಗಿ ರಸ್ತೆ ಬದಿಗೆ ಉರುಳಿಬಿದ್ದ ಘಟನೆ ಇಲ್ಲಿ‌ನ ಬನ್ನಡ್ಕದ ರಾಘವೇಂದ್ರ ಮಠದ ಬಳಿ ಬುಧವಾರ ಬೆಳಗ್ಗೆ ನಡೆದಿದೆ. ಮಂಗಳೂರಿನಿಂದ ಮೂಡುಬಿದಿರೆ ಮಾರ್ಗವಾಗಿ ಕಾರ್ಕಳ ಕಡೆಗೆ ಹೋಗುತಿದ್ದ ಖಾಸಗಿ ಬಸ್ ಬನ್ನಡ್ಕದ ರಾಘವೇಂದ್ರ ಮಠದ ಮುಂಭಾಗಕ್ಕೆ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಪಿಯಾಗಿದೆ. ಘಟನೆಯಲ್ಲಿ ಹಲವು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ ➤ ಹಲವರು ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಶಿರಾಡಿ: ಕಾರು ಹಾಗೂ ಬಸ್ ನಡುವೆ ಢಿಕ್ಕಿ ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಶಿರಾಡಿ, ಆ. 03. ಕಾರು ಮತ್ತು ಬಸ್‌ ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಕಡಬ ತಾಲೂಕಿನ ರಾಮಕುಂಜ ನಿವಾಸಿಗಳಾದ ಉಪನ್ಯಾಸಕ ಗೋವಿಂದರಾಜ್‌ ಶರ್ಮಾ ಮತ್ತು ಓಂಕಾರ್‌ ಪ್ರಸಾದ್‌ ಎಂದು ಗುರುತಿಸಲಾಗಿದೆ. ಇವರು ಸಕಲೇಶಪುರದಿಂದ ರಾಮಕುಂಜಕ್ಕೆ ಕಾರಿನಲ್ಲಿ ಬರುತ್ತಿದ್ದ ಕಾರು ಹಾಗೂ ಮಂಗಳೂರಿನಿಂದ ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಮಧ್ಯೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದ್ದು,

ಶಿರಾಡಿ: ಕಾರು ಹಾಗೂ ಬಸ್ ನಡುವೆ ಢಿಕ್ಕಿ ➤ ಇಬ್ಬರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top