ಕರಾವಳಿ

ರೆಂಜಿಲಾಡಿ: ಭಾರೀ ಮಳೆಗೆ ಮನೆ ಜಲಾವೃತ ➤ ಏಳು ಮಂದಿಯ ರಕ್ಷಣೆ- ಸ್ಥಳಾಂತರ

(ನ್ಯೂಸ್ ಕಡಬ) newskadaba.com ಕಡಬ, ಆ. 03. ಎರಡು ದಿನಗಳಿಂದ ಎಡೆಬಿಡದೆ ಆರ್ಭಟಿಸುತ್ತಿರುವ ಮಹಾ ಮಳೆಗೆ ರೆಂಜಿಲಾಡಿ ಗ್ರಾಮ ಕುಬಲಾಡಿ ಎಂಬಲ್ಲಿ ಹಳ್ಳದ ನೀರು ಮನೆಗೆ ನುಗ್ಗಿ ಮನೆ ಜಲಾವೃತವಾದ ಘಟನೆ ವರದಿಯಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳೀಯಾಡಳಿತದ ಅಧಿಕಾರಿಗಳು ಹಾಗೂ ಎನ್.ಡಿ.ಆರ್.ಎಫ್ ತಂಡದವರು ಮಧ್ಯರಾತ್ರಿಯೇ ಸ್ಥಳಕ್ಕೆ ತೆರಳಿ ಮನೆಯಲ್ಲಿದ್ದ ತನಿಯಪ್ಪ (54), ಭಾಗೀರಥಿ (50), ಚಂದಪ್ಪ (41), ರೇವತಿ (34) ಅರುಣಾ (15)ಅನಿತಾ (9) ಅಂಜಲಿ (6) ಸೇರಿ ಒಟ್ಟು 7 ಜನರನ್ನು ರಕ್ಷಿಸಿದ್ದು ಸದ್ಯ […]

ರೆಂಜಿಲಾಡಿ: ಭಾರೀ ಮಳೆಗೆ ಮನೆ ಜಲಾವೃತ ➤ ಏಳು ಮಂದಿಯ ರಕ್ಷಣೆ- ಸ್ಥಳಾಂತರ Read More »

ಕರಾವಳಿ, ಕರ್ನಾಟಕ

ಸುಬ್ರಹ್ಮಣ್ಯ ಪರಿಸರದಲ್ಲಿ ಭಾರೀ ಮಳೆ ➤ ನೆಟ್ಟಣ ಪೇಟೆಗೆ ನುಗ್ಗಿದ ನೆರೆ ನೀರು

(ನ್ಯೂಸ್ ಕಡಬ) newskadaba.com ಕಡಬ, ಆ.02. ಮಂಗಳವಾರ ಸಂಜೆ ಸುಬ್ರಹ್ಮಣ್ಯ ಹಾಗೂ ಕಡಬ ಪರಿಸರದಲ್ಲಿ ಭಾರೀ ಮಳೆಯಾಗಿದ್ದು, ನೆಟ್ಟಣ ಪೇಟೆಗೆ ನೆರೆ ನೀರು ನುಗ್ಗಿದೆ. ನೆಟ್ಟಣ ಪೇಟೆಯ ಬದಿಯಲ್ಲಿ ಹೊಳೆಯೊಂದು ಹರಿಯುತ್ತಿದ್ದು, ಮಂಗಳವಾರ ರಾತ್ರಿ ಹೊಳೆಯ ನೀರು ಪೇಟೆಗೆ ನುಗ್ಗಿದ್ದು, ಕಡಬ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ನೀರು ನಿಂತಿದೆ. ಅಲ್ಲದೆ ಪೇಟೆಯಲ್ಲಿನ ಕೆಲವು ಅಂಗಡಿಗಳಿಗೆ ನೀರು ನುಗ್ಗಿದೆ.  

ಸುಬ್ರಹ್ಮಣ್ಯ ಪರಿಸರದಲ್ಲಿ ಭಾರೀ ಮಳೆ ➤ ನೆಟ್ಟಣ ಪೇಟೆಗೆ ನುಗ್ಗಿದ ನೆರೆ ನೀರು Read More »

ಕರಾವಳಿ

ಸುಬ್ರಹ್ಮಣ್ಯ: ಮಕ್ಕಳು ಮೃತಪಟ್ಟ ಕುಟುಂಬಕ್ಕೆ ಸರಕಾರದಿಂದ 11ಲಕ್ಷ ರೂ. ಪರಿಹಾರ ಚೆಕ್ ವಿತರಿಸಿದ ಸಚಿವ ಎಸ್. ಅಂಗಾರ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 02. ಇಲ್ಲಿನ ಪರ್ವತಮುಖಿ ಎಂಬಲ್ಲಿ ಗುಡ್ಡ ಜರಿದು ಮಣ್ಣಿನಡಿ ಸಿಲುಕಿ ಮೃತಪಟ್ಟ ಮಕ್ಕಳ ಕುಟುಂಬಕ್ಕೆ ರೂ. 11 ಲಕ್ಷ 5 ಸಾವಿರ ಮೊತ್ತದ ಒಟ್ಟು 3 ಚೆಕ್ ನ್ನು ಸಚಿವ ಎಸ್. ಅಂಗಾರರವರು ಕುಸುಮಾಧರರಿಗೆ ಮಂಗಳವಾರದಂದು ವಿತರಿಸಿದ್ದಾರೆ. ಮೃತಪಟ್ಟ ಇಬ್ಬರು‌ ಮಕ್ಕಳಿಗಾಗಿ ಸರಕಾರದಿಂದ ತಲಾ 5 ಲಕ್ಷದಂತೆ ಹಾಗೂ‌ ಮನೆ ನಾಶಕ್ಕಾಗಿ ಸರಕಾರ ನೀಡುವ ರೂ. 95ಸಾವಿರದ 100 ಹಾಗೂ ಮನೆಯೊಳಗಿದ್ದ ವಸ್ತುಗಳು ನಾಶವಾಗಿರುವುದಕ್ಕೆ ಸರಕಾರದಿಂದ ಕೊಡಮಾಡುವ ರೂ. 10

ಸುಬ್ರಹ್ಮಣ್ಯ: ಮಕ್ಕಳು ಮೃತಪಟ್ಟ ಕುಟುಂಬಕ್ಕೆ ಸರಕಾರದಿಂದ 11ಲಕ್ಷ ರೂ. ಪರಿಹಾರ ಚೆಕ್ ವಿತರಿಸಿದ ಸಚಿವ ಎಸ್. ಅಂಗಾರ Read More »

ಕರಾವಳಿ, ಕರ್ನಾಟಕ

ಕಡಬ, ಸುಳ್ಯ ತಾಲೂಕುಗಳಲ್ಲಿ ನಾಳೆ (ಆ.03) ಶಾಲಾ ಕಾಲೇಜುಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 02. ಪುಷ್ಪಗಿರಿ ವನ್ಯಧಾಮದ ತಪ್ಪಲಿನಲ್ಲಿ ಮೇಘಸ್ಪೋಟದಿಂದ ಕುಕ್ಕೆ ಸುಬ್ರಹ್ಮಣ್ಯ ಭಾಗದಲ್ಲಿ ಭಾರಿ ಹಾನಿಯಾಗಿದ್ದು, ಕಡಬ ಮತ್ತು ಸುಳ್ಯ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ (ಅ.03) ರಜೆ ಘೋಷಿಸಲಾಗಿದೆ. ಕಡಬ, ಸುಳ್ಯ ಪರಿಸರದಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ನಾಳೆ ಕಡಬ ಹಾಗೂ ಸುಳ್ಯ ತಾಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.    

ಕಡಬ, ಸುಳ್ಯ ತಾಲೂಕುಗಳಲ್ಲಿ ನಾಳೆ (ಆ.03) ಶಾಲಾ ಕಾಲೇಜುಗಳಿಗೆ ರಜೆ Read More »

ಕರಾವಳಿ, ಕರ್ನಾಟಕ

ಕರಾವಳಿಯಲ್ಲಿ ಮತ್ತೆ 2 ದಿನಗಳ ಕಾಲ ನಿಷೇಧಾಜ್ಞೆ ಮುಂದುವರಿಕೆ ➤ ಜಿಲ್ಲಾಧಿಕಾರಿ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 02. ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಇನ್ನೂ 2 ದಿನಗಳ ಕಾಲ (ಆ.3ಮತ್ತು 4ರಂದು) ರಾತ್ರಿ ನಿರ್ಬಂಧವನ್ನು ವಿಸ್ತರಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. ಈ ಹಿನ್ನೆಲೆ ಆ.5ರ ಬೆಳಗ್ಗೆ 6ವರೆಗೆ ನಿರ್ಬಂಧ ಮುಂದುವರಿಯಲಿದೆ. ಇತ್ತೀಚಿಗೆ ಬೆಳ್ಳಾರೆ ಮತ್ತು ‌ಸುರತ್ಕಲ್‌ನಲ್ಲಿ ನಡೆದ ಕೊಲೆ ಕೃತ್ಯದ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಸಂಜೆ 6ರಿಂದ ಮುಂಜಾನೆ 6ರವರೆಗೆ ತುರ್ತು ಸೇವೆಯನ್ನು ಹೊರತುಪಡಿಸಿ ಇತರ ಚಟುವಟಿಕೆಗಳಿಗೆ‌ ನಿರ್ಬಂಧ ಹೇರಲಾಗಿತ್ತು.

ಕರಾವಳಿಯಲ್ಲಿ ಮತ್ತೆ 2 ದಿನಗಳ ಕಾಲ ನಿಷೇಧಾಜ್ಞೆ ಮುಂದುವರಿಕೆ ➤ ಜಿಲ್ಲಾಧಿಕಾರಿ ಆದೇಶ Read More »

ಕರಾವಳಿ, ಕರ್ನಾಟಕ

ಸುಳ್ಯ: ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ

(ನ್ಯೂಸ್ ಕಡಬ) newskadaba.com ಸುಳ್ಯ , ಆ. 02. ಸುಳ್ಯ ಮತ್ತು ಕಡಬ ತಾಲೂಕಿನ ವಿವಿಧೆಡೆ ಸೋಮವಾರ ರಾತ್ರಿ ಹಾಗೂ ಮಂಗಳವಾರ ಬೆಳಗ್ಗೆ ಸುರಿದ ಭಾರೀ ಮಳೆಯಿಂದಾಗಿ ಹಾನಿಗೀಡಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಭೇಟಿ ಪರಿಶೀಲನೆ ನಡೆಸಿದರು.   ಸುಳ್ಯದಲ್ಲಿ ಪಯಸ್ವಿನಿ ನದಿ ಉಕ್ಕಿ ಹರಿದ ಪರಿಣಾಮ ಸಂಪಾಜೆ ಗ್ರಾಮದ ಕಲ್ಲುಗುಂಡಿ ಪೇಟೆ ಸಂಪೂರ್ಣ ಜಲಾವೃತಗೊಂಡಿತ್ತು. ಕೊಯನಾಡಿನ ಗಣಪತಿ ಗುಡಿಯ ಬಳಿ ಇರುವ ಸೇತುವೆ ಬಿರುಕು ಬಿಟ್ಟಿದ್ದು, ಸುಳ್ಯ-ಮಡಿಕೇರಿ ಸಂಪರ್ಕ ರಸ್ತೆಗೆ ಕಡಿತದ

ಸುಳ್ಯ: ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ Read More »

ಕರಾವಳಿ, ಕರ್ನಾಟಕ

ಕಡಬ ಪರಿಸರದಲ್ಲಿ ಹಲವು ಉದ್ಯೋಗಗಳು ➤ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಕಡಬ, ಮೇ.16. ಕಡಬದ ಹಲವು ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ. * ಕಡಬದಲ್ಲಿರುವ ಕಂಪ್ಯೂಟರ್ ಸೆಂಟರ್ ಕಚೇರಿಯಲ್ಲಿ ಕೆಲಸ ಮಾಡಲು ಕಂಪ್ಯೂಟರ್ ಅನುಭವಿ ಅಭ್ಯರ್ಥಿ ಬೇಕಾಗಿದ್ದಾರೆ, ಅಭ್ಯರ್ಥಿಗಳಿಗೆ ತರಬೇತಿಯೊಂದಿಗೆ ಉತ್ತಮ ವೇತನ ನೀಡಲಾಗುವುದು. ಕೂಡಲೇ ಸಂಪರ್ಕಿಸಿ: ಜೆಮ್ಸ್ ಗ್ರಾಫಿಕ್ಸ್ ಅಂಡ್ ಸರ್ವಿಸಸ್, ಶಾಪ್ ನಂ-4, J.P

ಕಡಬ ಪರಿಸರದಲ್ಲಿ ಹಲವು ಉದ್ಯೋಗಗಳು ➤ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ, ಲೈಫ್‍ಸ್ಟೈಲ್

ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಗೊಳಿಸಿ ➤ ರಾಜ್ಯ ಸರಕಾರಿ ನೌಕರರಿಗೆ ಮುಖ್ಯ ಕಾರ್ಯದರ್ಶಿ ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 02. ಆಗಸ್ಟ್ 13 ರಿಂದ 15 ರವರೆಗೆ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿ ಹರ್ ಘರ್ ತಿರಂಗಾ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ರಾಜ್ಯದ ಎಲ್ಲಾ ಸರ್ಕಾರಿ ನೌಕರರಿಗೆ ಕರೆ ನೀಡಿದ್ದಾರೆ. ರಾಜ್ಯ ಮಟ್ಟದ ಸ್ವಾತಂತ್ರ್ಯ ದಿನಾಚರಣೆಯ ಕುರಿತು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಅಧಿಕಾರಿಗಳನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು. ತಮ್ಮ ಮನೆಗಳ ಮೇಲೆ ರಾಷ್ಟ್ರ

ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಗೊಳಿಸಿ ➤ ರಾಜ್ಯ ಸರಕಾರಿ ನೌಕರರಿಗೆ ಮುಖ್ಯ ಕಾರ್ಯದರ್ಶಿ ಕರೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಚುನಾವಣಾ ಗುರುತಿನ ಚೀಟಿಗೆ ಆಧಾರ್ ಜೋಡಿಸಲು ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 02. ಜಿಲ್ಲೆಯ ಮತದಾರರು ಚುನಾವಣಾ ಗುರುತಿನ ಚೀಟಿಗೆ ಆಧಾರ್ ಸಂಖ್ಯೆಯನ್ನು ಜೋಡಿಸಿಕೊಳ್ಳುವಂತೆ ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಸೂಚಿಸಿದ್ದಾರೆ. ಚುನಾವಣಾ ಸುಧಾರಣೆಗಳು ಮತ್ತು ಮತದಾರರ ಗುರುತಿನ ಚೀಟಿಯೊಂದಿಗೆ ಆಧಾರ್ ಜೋಡಣೆ ಕುರಿತಂತೆ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ವಿದ್ಯಾರ್ಥಿಗಳೊಂದಿಗೆ ದ.ಕ.ಜಿಲ್ಲಾಧಿಕಾರಿಯ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಗುರುತಿನ ಚೀಟಿಗೆ ಕಡ್ಡಾಯವಾಗಿ ಆಧಾರ್ ಕಾರ್ಡ್ ಜೋಡಣೆ ಮಾಡಬೇಕಿದೆ. ಅದರಂತೆ ಎಪಿಕ್ ಕಾರ್ಡ್

ಮಂಗಳೂರು: ಚುನಾವಣಾ ಗುರುತಿನ ಚೀಟಿಗೆ ಆಧಾರ್ ಜೋಡಿಸಲು ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ, ಕರ್ನಾಟಕ

ಸುಬ್ರಹ್ಮಣ್ಯ: ಮಳೆಹಾನಿ ಪ್ರದೇಶಗಳಿಗೆ ಸಚಿವ ಎಸ್.ಅಂಗಾರ ಭೇಟಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 02. ಭಾರೀ ಮಳೆಗೆ ಹಾನಿಗೊಳಗಾದ ಸುಬ್ರಹ್ಮಣ್ಯದ ಪ್ರದೇಶಗಳಿಗೆ ಸಚಿವ ಎಸ್.ಅಂಗಾರ ಮಂಗಳವಾರ ಬೆಳಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಮಳೆಯಿಂದ ಉಂಟಾದ ಹಾನಿಗಳ ಬಗ್ಗೆ ಮಾಹಿತಿ ತಿಳಿದ ಕೂಡಲೇ ರಾತ್ರಿ ವೇಳೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಇಂದು ಬೆಳಗ್ಗೆ ಹರಿಹರ ಪಲ್ಲತ್ತಡ್ಕಕ್ಕೆ ಭೇಟಿ ನೀಡಿದ್ದೇನೆ. ಮನೆ ಹಾನಿ, ರಸ್ತೆ, ಸೇತುವೆ ಹಾನಿಗಳ ಬಗ್ಗೆ ಮಾಹಿತಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ತುರ್ತು ಕ್ರಮಕ್ಕೆ

ಸುಬ್ರಹ್ಮಣ್ಯ: ಮಳೆಹಾನಿ ಪ್ರದೇಶಗಳಿಗೆ ಸಚಿವ ಎಸ್.ಅಂಗಾರ ಭೇಟಿ Read More »

ಕರಾವಳಿ, ಕರ್ನಾಟಕ
Scroll to Top