ಕರಾವಳಿ

ಬೆಳ್ಳಾರೆ ಠಾಣಾ ನೂತನ ಎಸ್ಐ ಆಗಿ ಸುಹಾಸ್ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಆ. 02. ಬೆಳ್ಳಾರೆ ಠಾಣಾ ನೂತನ ಎಸ್.ಐ. ಆಗಿ ವರ್ಗಾವಣೆಯಾದ ಸುಹಾಸ್ ಅವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಅವರ ಪಾರ್ಥೀವ ಶರೀರದ ಮೆರವಣಿಗೆ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿರುವ ಆರೋಪದ ಹಿನ್ನೆಲೆ ಬೆಳ್ಳಾರೆ ಪೊಲೀಸ್ ಠಾಣಾ ಎಸ್.ಐ ರುಕ್ಮ ನಾಯ್ಕರವರನ್ನು ವರ್ಗಾವಣೆಗೊಳಿಸಲಾಗಿತ್ತು. ಇದೀಗ ಅವರಿಂದ ತೆರವಾದ ಸ್ಥಾನಕ್ಕೆ ಕುಂದಾಪುರದಿಂದ ವರ್ಗಾವಣೆಗೊಂಡ ಸುಹಾಸ್ ಆರ್. ಆಗಮಿಸಿ ಅಧಿಕಾರ ಸ್ವೀಕರಿಸಿದ್ದಾರೆ.

ಬೆಳ್ಳಾರೆ ಠಾಣಾ ನೂತನ ಎಸ್ಐ ಆಗಿ ಸುಹಾಸ್ ಅಧಿಕಾರ ಸ್ವೀಕಾರ Read More »

ಕರಾವಳಿ, ಕರ್ನಾಟಕ

ಕೆಪಿಸಿಸಿ ಉಡುಪಿ ಜಿಲ್ಲಾ ಕಾರ್ಯದರ್ಶಿಯಾಗಿ ಕಡಬದ ಅನಿಲ್ ವರ್ಗೀಸ್ ನೇಮಕ

(ನ್ಯೂಸ್ ಕಡಬ) newskadaba.com ಕಡಬ, ಆ. 02. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಉಡುಪಿ ಜಿಲ್ಲಾ ಕಾರ್ಯದರ್ಶಿಯಾಗಿ ಕಡಬದ ಅನಿಲ್ ವರ್ಗೀಸ್ ಇವರನ್ನು ಕೆ.ಪಿ.ಸಿ.ಸಿ. ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ, ಎಂ.ಎಲ್.ಸಿ. ಅಬ್ದುಲ್ ಜಬ್ಬಾರ್  ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಅನಿಲ್ ವರ್ಗೀಸ್ ಅವರು ಕಡಬ ಬ್ಲಾಕ್ ಕಾಂಗ್ರೆಸ್‌ನ ಕಾರ್ಯಕಾರಿಣಿ ಸದಸ್ಯರಾಗಿ, ಜಿಲ್ಲಾ ಕಾಂಗ್ರೆಸ್‌ನ ಸಾಮಾಜಿಕ ಜಾಲತಾಣದ ಪ್ರಧಾನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು.

ಕೆಪಿಸಿಸಿ ಉಡುಪಿ ಜಿಲ್ಲಾ ಕಾರ್ಯದರ್ಶಿಯಾಗಿ ಕಡಬದ ಅನಿಲ್ ವರ್ಗೀಸ್ ನೇಮಕ Read More »

ಕರಾವಳಿ, ಕರ್ನಾಟಕ

ಫಾಝಿಲ್ ಕೊಲೆ ಪ್ರಕರಣ ➤ 6 ಮಂದಿ ಸೆರೆ- ಕಮಿಷನರ್ ಶಶಿಕುಮಾರ್

(ನ್ಯೂಸ್ ಕಡಬ) newskadaba.com ಸುರತ್ಕಲ್, ಆ. 02. ಕಳೆದ ವಾರ ನಡೆದ ಫಾಝಿಲ್ ಹತ್ಯೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು, ಆರು ಮಂದಿ ಆರೋಪಿಗಳನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈ ವೇಳೆ ಮಾತನಾಡಿದ ಕಮಿಷನರ್ ಶಶಿಕುಮಾರ್, ಫಾಝಿಲ್ ಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸಲಾಗಿದೆ. ವಿಚಾರಣೆಯ ವೇಳೆ ಆರೋಪಿಗಳು ಎಸಗಿದ ಕೃತ್ಯವನ್ನು ಒಪ್ಪಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು. ಘಟನೆಗೆ ಸಂಬಂಧಿಸಿದಂತೆ ದುಷ್ಕರ್ಮಿಗಳು ಬಳಸಿದ್ದ ಕಾರಿನ ನೋಂದಣಿ ಸಂಖ್ಯೆ ಪತ್ತೆಹಚ್ಚಿ, ಅದರ ಮಾಲಕ ಅಜಿತ್ ಕ್ರಾಸ್ತಾ ಎಂಬವರನ್ನು ವಶಕ್ಕೆ ಪಡೆದು

ಫಾಝಿಲ್ ಕೊಲೆ ಪ್ರಕರಣ ➤ 6 ಮಂದಿ ಸೆರೆ- ಕಮಿಷನರ್ ಶಶಿಕುಮಾರ್ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ➤ ಮತ್ತಿಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಆ. 02. ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಇನ್ನಿಬ್ಬರು ಆರೋಪಿಗಳ ಬಂಧನವಾಗಿದ್ದು, ಈ ಮೂಲಕ ಬಂಧಿತರ ಸಂಖ್ಯೆ ನಾಲ್ಕಕ್ಕೇರಿದೆ. ಬಂಧಿತರನ್ನು ಬೆಳ್ಳಾರೆ ಪಳ್ಳಿಮಜಲು ನಿವಾಸಿಗಳಾದ ಸದ್ದಾಂ ( 32) ಮತ್ತು ಹ್ಯಾರಿಸ್ (42) ಎಂದು ಗುರುತಿಸಲಾಗಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಶಫೀಕ್ ಮತ್ತು ಜಾಕೀರ್ ಎಂಬಿಬ್ಬರನ್ನು ಜುಲೈ 28ರಂದು ಪೊಲೀಸರು ಬಂಧಿಸಿದ್ದರು. ಅಲ್ಲದೇ ಇಬ್ಬರನ್ನೂ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದ್ದು, ತನಿಖೆ ವೇಳೆ ಲಭಿಸಿದ ಮಾಹಿತಿಯಾಧರಿಸಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ➤ ಮತ್ತಿಬ್ಬರ ಬಂಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಭಾಷಣ ➤ SDPI ಯಿಂದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗೆ(SP) ದೂರು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಜು. 30. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ಎಂಬವರ ಹತ್ಯೆಯನ್ನು ಖಂಡಿಸಿ, ವಿಶ್ವ ಹಿಂದೂ ಪರಿಷತ್, ಬಜರಂಗದಳದ ವತಿಯಿಂದ ಹಿರೇಬೈಲ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಗಿರೀಶ್ ಹೆಮ್ಮಕ್ಕಿ ಎಂಬಾತ ಮೀನು ಮಾರಾಟಗಾರರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೋಮು ಭಾವನೆ ಕೆರಳಿಸಿ, ಕೋಮು ಗಲಭೆಗೆ ಪ್ರಚೋದಿಸುವ ಯತ್ನ ನಡೆಸಿರುವುದನ್ನು ವಿರೋಧಿಸಿ ಈತನ ವಿರುದ್ಧ ಹಾಗೂ ಪ್ರತಿಭಟನೆಯ ಆಯೋಜಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ

ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಭಾಷಣ ➤ SDPI ಯಿಂದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗೆ(SP) ದೂರು Read More »

ಕರಾವಳಿ, ಕರ್ನಾಟಕ

ಮನೆಮೇಲೆ ಕುಸಿದ ಮಣ್ಣು ➤ ಅವಶೇಷಗಳಡಿಯಲ್ಲಿ ಸಿಲುಕಿದ ನಾಲ್ವರು

(ನ್ಯೂಸ್ ಕಡಬ) newskadaba.com ಭಟ್ಕಳ, ಆ. 02. ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಗುಡ್ಡದ ಮೇಲಿನಿಂದ ಭಾರೀ ಪ್ರಮಾಣದ ಮಣ್ಣು ಮನೆಮೇಲೆ ಕುಸಿದ ಪರಿಣಾಮ ಮನೆ ಸಂಪೂರ್ಣ ನಾಶವಾಗಿ ನಾಲ್ವರು ಸಿಲುಕಿರುವ ಘಟನೆ ಮುಟ್ಟಳ್ಳಿಯಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ. ಮನೆಯಲ್ಲಿದ್ದ ಲಕ್ಷ್ಮೀ ನಾರಾಯಣ ನಾಯ್ಕ(48), ಲಕ್ಷ್ಮಿ ನಾಯ್ಕ (33), ಅನಂತ ನಾರಾಯಣ ನಾಯ್ಕ (32) ಪ್ರವೀಣ ಬಾಲಕೃಷ್ಣ ನಾಯ್ಕ (20) ಎಂಬವರು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯ ಆರಂಭವಾಗಿದೆ ಎಂದು ತಿಳಿದುಬಂದಿದೆ.

ಮನೆಮೇಲೆ ಕುಸಿದ ಮಣ್ಣು ➤ ಅವಶೇಷಗಳಡಿಯಲ್ಲಿ ಸಿಲುಕಿದ ನಾಲ್ವರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರ್ಕಾರದ ದುರಾಡಳಿತದ ವಿರುಧ್ದ ಪ್ರತಿಭಟಿಸಿದ ವಿದ್ಯಾರ್ಥಿಗಳನ್ನು ಜೈಲಿಗಟ್ಟಿದ ಕೊಪ್ಪಳ ಪೋಲಿಸರ ನಡೆಯನ್ನು ಖಂಡಿಸಿ ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆ ➤ ಕ್ಯಾಂಪಸ್ ಫ್ರಂಟ್

(ನ್ಯೂಸ್ ಕಡಬ) newskadaba.com ಕೊಪ್ಪಳ, ಆ. 02. ರಾಜ್ಯ ಸರ್ಕಾರದ ದುರಾಡಳಿತ ಹಾಗೂ ತಾರತಮ್ಯ ಧೋರಣೆಯ ವಿರುದ್ಧ ಪ್ರತಿಭಟಿಸಿದ ಕ್ಯಾಂಪಸ್ ಫ್ರಂಟ್ ರಾಜ್ಯ ಸಮಿತಿ ಸದಸ್ಯ ಚಾಂದ್ ಸಲ್ಮಾನ್ ಸೇರಿದಂತೆ ಕೊಪ್ಪಳ ಜಿಲ್ಲೆಯ ಕಾರ್ಯಕರ್ತರ ಬಂಧನವನ್ನು ಕ್ಯಾಂಪಸ್ ಫ್ರಂಟ್ ರಾಜ್ಯ ಸಮಿತಿಯು ತೀವ್ರವಾಗಿ ಖಂಡಿಸುತ್ತಿದೆ. ರಾಜ್ಯದಲ್ಲಿ ಬೊಮ್ಮಾಯಿ ಸರ್ಕಾರವು ಒಂದು ವರ್ಷದಿಂದ ದ್ವೇಷದ, ತಾರತಮ್ಯದ ಆಡಳಿತ ನಡೆಸುತ್ತಿದ್ದು ಇದನ್ನು ವಿರೋಧಿಸಿ ಸಂವಿಧಾನಾತ್ಮಕವಾಗಿ ಪ್ರತಿಭಟಿಸಿದ ವಿದ್ಯಾರ್ಥಿಗಳನ್ನು ಬಂಧನ ಮಾಡಿ ಹಿಂಸಿಸಿ ಜೈಲಿಗಟ್ಟಿದ ಕೊಪ್ಪಳ ಪೊಲೀಸರ ಕ್ರಮವನ್ನು ಖಂಡಿಸಿ ರಾಜ್ಯವ್ಯಾಪಿ

ಸರ್ಕಾರದ ದುರಾಡಳಿತದ ವಿರುಧ್ದ ಪ್ರತಿಭಟಿಸಿದ ವಿದ್ಯಾರ್ಥಿಗಳನ್ನು ಜೈಲಿಗಟ್ಟಿದ ಕೊಪ್ಪಳ ಪೋಲಿಸರ ನಡೆಯನ್ನು ಖಂಡಿಸಿ ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆ ➤ ಕ್ಯಾಂಪಸ್ ಫ್ರಂಟ್ Read More »

ಕರಾವಳಿ, ಕರ್ನಾಟಕ

ಹನ್ನೊಂದು ಜಿಲ್ಲೆಗಳಿಗೆ NSUI ನ ಸಾಮಾಜಿಕ ಜಾಲತಾಣ ಸಂಯೋಜಕರ ನೇಮಕ ➤ ದ.ಕ ಜಿಲ್ಲೆಗೆ ಟಿ.ಎಂ ಶಾಜ್ ತೆಕ್ಕಿಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 02. ಹನ್ನೊಂದು ಜಿಲ್ಲೆಗಳಿಗೆ NSUI ಯ ಸಾಮಾಜಿಕ ಜಾಲತಾಣ ಸಂಯೋಜಕರನ್ನು ನೇಮಕ ಮಾಡಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಟಿ.ಎಂ.ಶಾಜ್ ತೆಕ್ಕಿಲ್ ರವರನ್ನು ನೇಮಕ ಮಾಡಲಾಗಿದೆ. ಸುಳ್ಯ ಸಂಪಾಜೆ ಗ್ರಾಮದ ಗೂನಡ್ಕ ತೆಕ್ಕಿಲ್ ಹೈಸ್ಕೂಲಿನ ಮಾಜಿ ವಿದ್ಯಾರ್ಥಿ ನಾಯಕ ಟಿ.ಎಂ.ಶಾಜ್ ತೆಕ್ಕಿಲ್ ರವರನ್ನು NSUI ನ ದಕ್ಷಿಣ ಕನ್ನಡ ಜಿಲ್ಲಾ ಸಾಮಾಜಿಕ ಜಾಲತಾಣದ ಸಂಯೋಜಕರಾಗಿ, ರಾಜ್ಯದ ಎನ್ ಎಸ್ ಯು ಐ ಅಧ್ಯಕ್ಷರಾದ ಕೀರ್ತಿ ಗಣೇಶ್ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಹನ್ನೊಂದು ಜಿಲ್ಲೆಗಳಿಗೆ NSUI ನ ಸಾಮಾಜಿಕ ಜಾಲತಾಣ ಸಂಯೋಜಕರ ನೇಮಕ ➤ ದ.ಕ ಜಿಲ್ಲೆಗೆ ಟಿ.ಎಂ ಶಾಜ್ ತೆಕ್ಕಿಲ್ Read More »

ಕರಾವಳಿ, ಕರ್ನಾಟಕ

ಮಹಾಮಳೆಗೆ ಕರಾವಳಿಯ ಸುಬ್ರಹ್ಮಣ್ಯ, ಸುಳ್ಯ ತತ್ತರ..!! ➤ ಮುರಿದುಬಿದ್ದ ಸಂಪರ್ಕ ಸೇತುವೆ- ಕಲ್ಲುಗುಂಡಿ ಸಂಪೂರ್ಣ ಜಲಾವೃತ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 02. ಕಳೆದ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಗೆ ಸುಳ್ಯದ ಕಲ್ಮಕಾರು, ಕೊಲ್ಲಮೊಗ್ರು, ಹರಿಹರ ಪಲ್ಲತ್ತಡ್ಕ, ಕಡಬ ತಾಲೂಕಿನ ಸುಬ್ರಹ್ಮಣ್ಯ ತತ್ತರಿಸಿದ್ದು, ಕಲ್ಮಕಾರಿನ ಪೇಟೆಯ ಬಳಿಯಿರುವ ಸಂತಡ್ಕ ಬೈಲು, ಗುಳಿಕಾನ ಸೇರಿದಂತೆ ಹಲವು ಪ್ರದೇಶಗಳ ಸುಮಾರು 150 ಕ್ಕೂ ಹೆಚ್ಚಿನ ಮನೆಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಮುರಿದುಬಿದ್ದು ಅಲ್ಲಿನ ಮನೆಗಳ ಸಂಪರ್ಕ ಕಡಿತಗೊಂಡಿದೆ. ರವಿವಾರದಂದು ಸೇತುವೆಗೆ ಹಾನಿಯಾಗಿತ್ತು ಆದರೆ, ಸೋಮವಾರದಂದು ತಡರಾತ್ರಿ ಸೇತುವೆ ಮುರಿದುಬಿದ್ದು ಸಂಪರ್ಕ ಕಡಿತವಾಗಿದೆ. ಇನ್ನು ಕಲ್ಲುಗುಂಡಿಯಲ್ಲಿ ಪಯಸ್ವಿನಿ‌

ಮಹಾಮಳೆಗೆ ಕರಾವಳಿಯ ಸುಬ್ರಹ್ಮಣ್ಯ, ಸುಳ್ಯ ತತ್ತರ..!! ➤ ಮುರಿದುಬಿದ್ದ ಸಂಪರ್ಕ ಸೇತುವೆ- ಕಲ್ಲುಗುಂಡಿ ಸಂಪೂರ್ಣ ಜಲಾವೃತ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ: ಗುಡ್ಡ ಕುಸಿದು ಮಕ್ಕಳಿಬ್ಬರು ಮೃತಪಟ್ಟ ಪ್ರಕರಣ ➤ ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಬೇಟಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 02. ಕಳೆದ ರಾತ್ರಿ ಗುಡ್ಡ ಕುಸಿದು ಮಕ್ಕಳಿಬ್ಬರು ಮೃತಪಟ್ಟ ಸುಬ್ರಹ್ಮಣ್ಯ ಸಮೀಪದ ಪರ್ವತಮುಖಿ ಘಟನಾ ಸ್ಥಳಕ್ಕೆ ಇಂದು ಬೆಳಗ್ಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಭೇಟಿ ನೀಡಿದರು. ಅಧಿಕಾರಿಗಳು, ಸ್ಥಳೀಯಾಡಳಿತ ಅಧಿಕಾರಿಗಳಿಂದ ಮಾಹಿತಿ ಪಡೆದರು. ಪುತ್ತೂರು ಎಸಿ ಗಿರೀಶ್ ನಂದನ್, ತಹಶೀಲ್ದಾರ್ ಅನಂತಶಂಕರ, ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ, ಪಿಡಿಒ ಶೇಖರ್ ಯು.ಡಿ ಸೇರಿದಂತೆ ಅಧಿಕಾರಿಗಳು ಜೊತೆಗಿದ್ದರು.

ಸುಬ್ರಹ್ಮಣ್ಯ: ಗುಡ್ಡ ಕುಸಿದು ಮಕ್ಕಳಿಬ್ಬರು ಮೃತಪಟ್ಟ ಪ್ರಕರಣ ➤ ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಬೇಟಿ Read More »

ಕರಾವಳಿ, ಕರ್ನಾಟಕ
Scroll to Top