ಕರಾವಳಿ

ಸುಳ್ಯ: ಭಾರೀ ಮಳೆ- ಭೂಕುಸಿತ ➤ ಆತಂಕದಲ್ಲಿ ಜನತೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 01. ನಿನ್ನೆ ಸುರಿದ ಭಾರೀ ಮಳೆಗೆ ಸುಳ್ಯ ತಾಲೂಕಿನ ಕಲ್ಮಕಾರಿನ ಕಡಮಕಲ್ಲು ಕಾಡಿನ ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಭೂ ಕುಸಿತ ಉಂಟಾಗಿರುವ ಘಟನೆ ವರದಿಯಾಗಿದೆ. ಘಟನೆಯಿಂದಾಗಿ ಅಪಾರ ಪ್ರಮಾಣದ ಮಣ್ಣು ಮಿಶ್ರಿತ ನೀರು ಹರಿದು ಸೇತುವೆಗಳು ಕೊಚ್ಚಿ ಹೋಗಿದೆ. ಅಲ್ಲದೇ ಕೃಷಿ ಜಮೀನಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಕೃಷಿ ಹಾನಿಯಾದ ಘಟನೆಯೂ ನಡೆದಿದೆ. ತೋಡಿನಲ್ಲಿ ಮಣ್ಣು ಮಿಶ್ರಿತ ನೀರು ಹರಿದು ಬರುತ್ತಿರುವುದಾಗಿ ತಿಳಿದು ಬಂದಿದೆ. ಜನತೆ ಆತಂಕಗೊಂಡಿದ್ದಾರೆ.  

ಸುಳ್ಯ: ಭಾರೀ ಮಳೆ- ಭೂಕುಸಿತ ➤ ಆತಂಕದಲ್ಲಿ ಜನತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಜ್ಯೂಸ್ ಅಂಗಡಿಯಲ್ಲಿ ಅಗ್ನಿ ಅವಘಡ ➤ ಪೊಲೀಸ್, ಗೃಹರಕ್ಷಕ ಸಿಬ್ಬಂದಿಯಿಂದ ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 01. ಇಲ್ಲಿನ ಬಸ್ ನಿಲ್ದಾಣದ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿದ್ದ ಜ್ಯೂಸ್ ಸೆಂಟರ್ ವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು ಬೆಳಗ್ಗಿನ ಜಾವ ನಡೆದಿದೆ. ಪುತ್ತೂರು ಬಸ್ ನಿಲ್ದಾಣದ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಜ್ಯೂಸ್ ಸೆಂಟರ್ ನೊಳಗೆ 3 ಗಂಟೆಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು ಹೊಗೆ ಆವರಿಸಿತ್ತು. ಈ ವೇಳೆ ರಾತ್ರಿ ಬಸ್ ನಿಲ್ದಾಣದ ಕರ್ತವ್ಯದಲ್ಲಿದ್ದ ಪುತ್ತೂರು ನಗರ ಪೊಲೀಸ್ ಠಾಣಾ ಸಿಬ್ಬಂದಿ ಭೀಮ್ ಸೇನ್ ಮತ್ತು ಗೃಹರಕ್ಷಕದಳದ ಸಿಬ್ಬಂದಿ

ಪುತ್ತೂರು: ಜ್ಯೂಸ್ ಅಂಗಡಿಯಲ್ಲಿ ಅಗ್ನಿ ಅವಘಡ ➤ ಪೊಲೀಸ್, ಗೃಹರಕ್ಷಕ ಸಿಬ್ಬಂದಿಯಿಂದ ತಪ್ಪಿದ ಅನಾಹುತ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕರಾವಳಿಯಲ್ಲಿ ಮತ್ತೆ ಎರಡು ದಿನಗಳ ಕಾಲ ರಾತ್ರಿ ನಿಷೇಧಾಜ್ಞೆ ಮುಂದುವರಿಕೆ ➤ ಬೆಳಿಗ್ಗೆ 6 ರಿಂದ ಸಂಜೆ 6ರ ವರೆಗೆ ವ್ಯಾಪಾರ ಮಾಡಲು ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 31. ದ.ಕ.ಜಿಲ್ಲಾದ್ಯಂತ ಮತ್ತೆ ಎರಡು ದಿನ ರಾತ್ರಿ ನಿಷೇಧಾಜ್ಞೆ‌ ಮುಂದುವರಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಇತ್ತೀಚಿಗೆ ಬೆಳ್ಳಾರೆ ಮತ್ತು ‌ಮಂಗಳಪೇಟೆಯಲ್ಲಿ ನಡೆದ ಕೊಲೆ ಕೃತ್ಯದ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಸಂಜೆ 6ರಿಂದ ಮುಂಜಾನೆ 6ರವರೆಗೆ ತುರ್ತು ಸೇವೆಯನ್ನು ಹೊರತುಪಡಿಸಿ ಇತರ ಚಟುವಟಿಕೆಗಳಿಗೆ‌ ನಿರ್ಬಂಧ ಹೇರಲಾಗಿತ್ತು. ಇದೀಗ ಮಂಗಳೂರು ನಗರ ಪೊಲೀಸ್ ಮತ್ತು ಜಿಲ್ಲಾ ಪೊಲೀಸ್ ಇಲಾಖೆಯ‌ ಮನವಿಯ ಮೇರೆಗೆ ಜಿಲ್ಲಾದ್ಯಂತ ಎರಡು ದಿನ ರಾತ್ರಿ

ಕರಾವಳಿಯಲ್ಲಿ ಮತ್ತೆ ಎರಡು ದಿನಗಳ ಕಾಲ ರಾತ್ರಿ ನಿಷೇಧಾಜ್ಞೆ ಮುಂದುವರಿಕೆ ➤ ಬೆಳಿಗ್ಗೆ 6 ರಿಂದ ಸಂಜೆ 6ರ ವರೆಗೆ ವ್ಯಾಪಾರ ಮಾಡಲು ಅವಕಾಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರಾವಳಿಯಲ್ಲಿ ನಡೆದ ಹತ್ಯೆಗೆ ಸಂಬಂಧಿಸಿ ಆಕ್ಷೇಪಾರ್ಹ ಪೋಸ್ಟ್ ರವಾನೆ ➤ 5 ಮಂದಿಯ ವಿರುದ್ಧ ಪ್ರಕರಣ ದಾಖಲು – ಸಾಮಾಜಿಕ ಜಾಲತಾಣದ ಮೇಲೆ ಪೊಲೀಸ್ ನಿಗಾ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.31. ಸುರತ್ಕಲ್ ನಲ್ಲಿ ನಡೆದ ಫಾಝಿಲ್ ಹತ್ಯೆಗೆ ಸಂಬಂಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ ಮತ್ತು ಕಾಮೆಂಟ್‌ಗಳನ್ನು ಮಾಡಿರುವ ವ್ಯಕ್ತಿಗಳ ವಿರುದ್ಧ ಮಂಗಳೂರು ಸೆನ್ ಪೊಲೀಸರು 5 ಪ್ರಕರಣಗಳನ್ನು ದಾಖಲಿಸಿದ್ದಾರೆ. ಕರಾವಳಿಯಲ್ಲಿ ದೊಡ್ಡಮಟ್ಟದ ಕೋಮು ಸಂಘರ್ಷ ಸ್ಫೋಟಗೊಳ್ಳುವ ಸಾಧ್ಯತೆ ಇದೆ ಎಂಬುದಾಗಿ ರಾಜ್ಯ ಗುಪ್ತಚರ ದಳ ಮಾಹಿತಿ ನೀಡಿದೆ ಎಂಬ ಸುಳ್ಳು ಸಂದೇಶ ರವಾನೆ, ಪ್ರವೀಣ್‌ ಕೊಲೆಗೆ ಪ್ರತೀಕಾರವಾಗಿ ಕೊಲೆ ಮಾಡಲು ಕರೆ ನೀಡಿರುವ ಪೋಸ್ಟ್, ಸುರತ್ಕಲ್‌ನಲ್ಲಿ ನಡೆದಿರುವ ಫಾಝಿಲ್ ಕೊಲೆಗೆ

ಕರಾವಳಿಯಲ್ಲಿ ನಡೆದ ಹತ್ಯೆಗೆ ಸಂಬಂಧಿಸಿ ಆಕ್ಷೇಪಾರ್ಹ ಪೋಸ್ಟ್ ರವಾನೆ ➤ 5 ಮಂದಿಯ ವಿರುದ್ಧ ಪ್ರಕರಣ ದಾಖಲು – ಸಾಮಾಜಿಕ ಜಾಲತಾಣದ ಮೇಲೆ ಪೊಲೀಸ್ ನಿಗಾ Read More »

ಕರಾವಳಿ, ಕ್ರೈಮ್ ನ್ಯೂಸ್

ಫಾಝಿಲ್ ಹತ್ಯೆಯಲ್ಲಿ ಬಳಸಲಾದ ಕಾರು ಕಾರ್ಕಳದಲ್ಲಿ ಪತ್ತೆ ➤ ಕಾರು ಮಾಲಕ ಸೇರಿದಂತೆ ಹಲವರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.31. ನಗರದ ಹೊರವಲಯದ ಸುರತ್ಕಲ್ ನಲ್ಲಿ ನಡೆದ ಫಾಝಿಲ್ ಹತ್ಯೆಯಲ್ಲಿ ಬಳಸಲಾದ ಕಾರನ್ನು ಪತ್ತೆ ಹಚ್ಚಿರುವ ಮಂಗಳೂರು ಪೊಲೀಸರು ಕಾರು ಮಾಲಕನನ್ನು ವಶಕ್ಕೆ ಪಡೆದಿದ್ದಾರೆ. ಕಾರು ಮಾಲಕ ಅಜಿತ್ ಎಂಬಾತನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಪ್ರಕರಣದಲ್ಲಿ ನೇರವಾಗಿ ಭಾಗಿಯಾದವರ ಮಾಹಿತಿಯನ್ನು ಕಲೆ‌ಹಾಕಿದ್ದಾರೆ. ಘಟನೆಗೆ ಸಂಬಂಧಿಸಿ ನಾಲ್ಕು ಮಂದಿಯನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಹತ್ಯೆಗೆ ಬಳಸಿದ ಕಾರು ಭಾನುವಾರದಂದು ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ನಿರ್ಜನ ಪ್ರದೇಶದಲ್ಲಿ

ಫಾಝಿಲ್ ಹತ್ಯೆಯಲ್ಲಿ ಬಳಸಲಾದ ಕಾರು ಕಾರ್ಕಳದಲ್ಲಿ ಪತ್ತೆ ➤ ಕಾರು ಮಾಲಕ ಸೇರಿದಂತೆ ಹಲವರು ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಭಾರೀ ಮಳೆ- ಮುಳುಗಿದ ಮಂಗಳೂರು ➤ ಇಂದು ನಗರದಾದ್ಯಂತ ಶಾಲೆಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 30. ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯ ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಹಠಾತ್ ಪ್ರವಾಹದಿಂದಾಗಿ ಹಲವು ರಸ್ತೆಗಳು ಮಳೆ ನೀರಿನಿಂದ ಜಲಾವೃತವಾಗಿವೆ. ಪ್ರಮುಖವಾಗಿ ನಗರದ ಪಂಪ್ ವೆಲ್, ಪಡೀಲ್ ಭಾಗದಲ್ಲೂ ನೀರು ನುಗ್ಗಿ ಸಂಚಾರ ಅಸ್ತವ್ಯಸ್ತವಾಗಿದೆ. ಅವೈಜ್ಞಾನಿಕ ಕಾಮಗಾರಿಯಿಂದಾಗಿ ಪದೇ ಪದೇ ಪಂಪ್ ವೆಲ್‌, ಪಡೀಲ್ ಮುಳುಗಡೆಯಾಗುತ್ತಿದ್ದು, ಈ ಬಗ್ಗೆ ಶಾಸಕರು, ಸಂಸದರು ಇನ್ನು ಕ್ರಮ ಕೈಗೊಂಡಿಲ್ಲ. ಮಳೆಯಿಂದಾಗಿ ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ.ಕೆವಿ

ಭಾರೀ ಮಳೆ- ಮುಳುಗಿದ ಮಂಗಳೂರು ➤ ಇಂದು ನಗರದಾದ್ಯಂತ ಶಾಲೆಗಳಿಗೆ ರಜೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಫಾಝಿಲ್ ಕೊಲೆ ಪ್ರಕರಣ ➤ ನಾಲ್ವರು ಭಜರಂಗದಳ ಕಾರ್ಯಕರ್ತರು ವಶಕ್ಕೆ…??

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 30. ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರಿನ 4 ಮಂದಿ ಭಜರಂಗದಳ ಕಾರ್ಯಕರ್ತರನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆದ ಘಟನೆ ವರದಿಯಾಗಿದೆ.   ವಿಚಾರಣೆ ಹಿನ್ನಲೆ ನಾಲ್ವರನ್ನು ನಿನ್ನೆ ರಾತ್ರಿ ಬಂಧಿಸಲಾಗಿದ್ದು, ಈ ಕುರಿತು ಮನೆಯವರು ಮಾಹಿತಿ ನೀಡಿದ್ದು, ತಡ ರಾತ್ರಿ ಪೋಲೀಸರು ವಿಚಾರಣೆಗೆ ಎಂದು ಕರೆದುಕೊಂಡು ಹೋಗಿದ್ದಾರೆ ನಮ್ಮ ಮಕ್ಕಳು ಭಜರಂಗದಳದಲ್ಲಿ ಸಕ್ರೀಯರಾಗಿದ್ದಾರೆ, ಆದರೆ ಈ ಕೊಲೆ ನಮ್ಮ ಮಕ್ಕಳು ಮಾಡಿಲ್ಲ ಎಂದು ತಿಳಿಸಿದ್ದಾರೆ. ಈ ಹತ್ಯೆಯ ಹಿಂದೆ

ಫಾಝಿಲ್ ಕೊಲೆ ಪ್ರಕರಣ ➤ ನಾಲ್ವರು ಭಜರಂಗದಳ ಕಾರ್ಯಕರ್ತರು ವಶಕ್ಕೆ…?? Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನಾಳೆ (ಜು. 30): ಕಡಬ, ಪುತ್ತೂರು ತಾಲೂಕುಗಳಲ್ಲಿ ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 29. ಪುತ್ತೂರು, ಕಡಬ, ಸುಬ್ರಹ್ಮಣ್ಯ, ವಿದ್ಯುತ್‌ ಮಾರ್ಗದ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನಾಳೆ (ಜು. 30) ರಂದು ಬೆಳಗ್ಗೆ 10:00 ರಿಂದ ಸಾಯಂಕಾಲ 5:00 ಗಂಟೆಯವರೆಗೆ 336 ವಿ ವುತ್ತೂರು ಕಡಬ ಸುಬ್ರಹ್ಮಣ, ವಿದ್ಯುತ್ ಮಾರ್ಗದ ವಿದ್ಯುತ್‌ ನಿಲುಗಡೆ ಮಾಡಲಾಗುವುದು. ಆದುದರಿಂದ 33/116ವಿ ಕಡಬ ವಿದ್ಯುತ್‌ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಿಂದ ವಿದ್ಯುತ್‌ ಸರಬರಾಜಾಗುವ ವಿದ್ಯುತ್ ಬಳಕೆದಾರರು ಸಹಕರಿಸುವಂತೆ ಕೋರಲಾಗಿದೆ.

ನಾಳೆ (ಜು. 30): ಕಡಬ, ಪುತ್ತೂರು ತಾಲೂಕುಗಳಲ್ಲಿ ವಿದ್ಯುತ್ ನಿಲುಗಡೆ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ: ಅಕ್ರಮವಾಗಿ ದಾಸ್ತಾನಿರಿಸಿದ್ದ ಗೋಡೌನ್ ಮೇಲೆ ತಹಶೀಲ್ದಾರ್ ದಾಳಿ ➤ ಆರೋಪಿ ಸಹಿತ 37.5 ಕ್ವಿಂಟಾಲ್ ಅಕ್ಕಿ ವಶ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 29. ಅಕ್ರಮವಾಗಿ ಪಡಿತರ ಅಕ್ಕಿ ದಾಸ್ತಾನು ಮಾಡಿ ವಾಹನದಲ್ಲಿ ಸಾಗಿಸಲೆತ್ನಿಸುತ್ತಿದ್ದ ಖಚಿತ ಮಾಹಿತಿ ಪಡೆದ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಹಾಗೂ ಆಹಾರ ಇಲಾಖಾ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿ ಆರೋಪಿಗಳ ಸಹಿತ ಸ್ವತ್ತುಗಳನ್ನು ವಶಪಡಿಸಿಕೊಂಡ ಘಟನೆ ತಾಲೂಕಿನ ಸೋಣಂದೂರು ಗ್ರಾಮದ ಪಣಕಜೆ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಬಂಧಿತನನ್ನು ವಾಹನ ಚಾಲಕ ಹಾಸನ ಜಿಲ್ಲೆಯ ಲಕ್ಷ್ಮೀಪುರ ನಿವಾಸಿ ನಂದೀಶ್ ಎಂದು ಗುರುತಿಸಲಾಗಿದೆ. ಅಲ್ಲದೇ ಈ ಸಂದರ್ಭದಲ್ಲಿ ಗೋಡೌನ್ ನಲ್ಲಿ

ಬೆಳ್ತಂಗಡಿ: ಅಕ್ರಮವಾಗಿ ದಾಸ್ತಾನಿರಿಸಿದ್ದ ಗೋಡೌನ್ ಮೇಲೆ ತಹಶೀಲ್ದಾರ್ ದಾಳಿ ➤ ಆರೋಪಿ ಸಹಿತ 37.5 ಕ್ವಿಂಟಾಲ್ ಅಕ್ಕಿ ವಶ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ದ.ಕ ಪ್ರವೇಶ ನಿಷೇಧದ ಹಿನ್ನೆಲೆ ➤ ರಸ್ತೆಯಲ್ಲೇ ಪ್ರತಿಭಟನೆ ಮಾಡಿ ಹಿಂತಿರುಗಿದ ಪ್ರಮೋದ್ ಮುತಾಲಿಕ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 29. ನಿಷೇಧದ ನಡುವೆಯೂ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಿಸಲು ಯತ್ನಿಸಿದ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಹೆಜಮಾಡಿಯಲ್ಲಿ ಪೊಲೀಸರು ತಡೆ ಹಿಡಿದ ಘಟನೆ ನಡೆದಿದೆ.   ಈ ಕುರಿತು ಪ್ರತಿಕ್ರಿಯಿಸಿದ ಮುತಾಲಿಕ್, ಪ್ರವೀಣ್ ಮನೆಗೆ ಹೋಗುವ ವೇಳೆ ಪೊಲೀಸರು ನನ್ನನ್ಮು ಹೆಜಮಾಡಿಯಲ್ಲಿ ತಡೆದು ದ.ಕ. ಜಿಲ್ಲಾಧಿಕಾರಿ ಕೊಟ್ಟ ನಿಷೇದಾಜ್ಞೆ ಪತ್ರವನ್ನು ಕೊಟ್ಟಿದ್ದಾರೆ. ನೀವು ಮುತಾಲಿಕ್‌ನ ಬ್ಯಾನ್ ಮಾಡುತ್ತಿಲ್ಲ, ಹಿಂದುತ್ವವನ್ನು ಬ್ಯಾನ್ ಮಾಡುತ್ತಿದ್ದೀರ. ನನ್ನನ್ನು ಹಿಂದೂ ವಿರೋಧಿ ಪಕ್ಷ

ದ.ಕ ಪ್ರವೇಶ ನಿಷೇಧದ ಹಿನ್ನೆಲೆ ➤ ರಸ್ತೆಯಲ್ಲೇ ಪ್ರತಿಭಟನೆ ಮಾಡಿ ಹಿಂತಿರುಗಿದ ಪ್ರಮೋದ್ ಮುತಾಲಿಕ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top