ಕರಾವಳಿ

ಶ್ರೀರಾಮ ಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ದ.ಕ. ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ➤ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.28. ಪ್ರವೀಣ್ ಹತ್ಯೆಯ ಹಿನ್ನೆಲೆಯಲ್ಲಿ ಅಹಿತಕರ ಘಟನೆಯನ್ನು ತಡೆಯುವ ಸಲುವಾಗಿ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕುಗಳ ಪ್ರವೇಶಕ್ಕೆ ನಿಷೇಧ ಹೇರಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ. ಪ್ರಮೋದ್ ಮುತಾಲಿಕ್ ಭಾಷಣ ಮಾಡಿದ್ದಲ್ಲಿ ಜನತೆ ಪ್ರಚೋದನೆಗೊಂಡು ಅಹಿತಕರ ಘಟನೆ ನಡೆಯುವ ಸಂಭವವಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕುಗಳಿಗೆ ಮುತಾಲಿಕ್ ಪ್ರವೇಶಕ್ಕೆ […]

ಶ್ರೀರಾಮ ಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ದ.ಕ. ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ➤ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಆದೇಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪ್ರವೀಣ್ ಮನೆಗೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ ➤ ಗೃಹ ಸಚಿವ ಅರಗ ಜ್ಞಾನೇಂದ್ರ, ಬಿಜೆಪಿ ಅಧ್ಯಕ್ಷ ನಳಿನ್ ಕಟೀಲ್ ಸಾಥ್

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು.28. ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆಯ ಹಿನ್ನೆಲೆಯಲ್ಲಿ ಸರಕಾರದ ಜನೋತ್ಸವ ಕಾರ್ಯಕ್ರಮವನ್ನು ರದ್ದುಗೊಳಿಸಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮೃತ ಪ್ರವೀಣ್ ರ ನೆಟ್ಟಾರಿನ ಮನೆಗೆ ಭೇಟಿ ನೀಡಿ ಕುಟುಂಬಸ್ಥರನ್ನು ಸಂತೈಸಿದ್ದಾರೆ‌. ಸಂಜೆ 4.30 ಕ್ಕೆ ಮಂಗಳೂರಿನಿಂದ ಹೊರಟ ಸಿಎಂ ರಸ್ತೆ ಮಾರ್ಗವಾಗಿ ನೆಟ್ಟಾರಿಗೆ ಆಗಮಿಸಿದ್ದು, ಗೃಹ ಸಚಿವ ಅರಗ ಜ್ಞಾನೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು ಮುಖಂಡರು ಜೊತೆಗಿದ್ದರು. ಈ ನಡುವೆ ವಿವಿಧ ನಾಯಕರು ಮನೆ

ಪ್ರವೀಣ್ ಮನೆಗೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ ➤ ಗೃಹ ಸಚಿವ ಅರಗ ಜ್ಞಾನೇಂದ್ರ, ಬಿಜೆಪಿ ಅಧ್ಯಕ್ಷ ನಳಿನ್ ಕಟೀಲ್ ಸಾಥ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

“ನನ್ನ ಗಂಡ SDPI ಪಕ್ಷದಲ್ಲಿ ಸಕ್ರಿಯನಾಗಿದ್ದ ಹೊರತು ಅಪರಾಧಿಯಲ್ಲ” ➤ ಶಪೀಕ್ ಪತ್ನಿ ಹೇಳಿಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 28. ಬಿಜೆಪಿ ಜಲ್ಲಾ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಿಲಾಗಿದೆ. ಆರೋಪಿಗಲ ಪೈಕಿ ಓರ್ವ ಆರೋಪಿ ಶಫೀಕ್ ಎಂಬಾತನ ಪತ್ನಿ ಅನ್ಶಿಫಾ ಮಾಧ್ಯಮದ ಜೊತೆ ಮಾತನಾಡಿದ್ದು, ಶಫೀಕ್ ಅಮಾಯಕ ಆತನನ್ನು ಅರೆಸ್ಟ್ ಮಾಡಲಾಗಿದೆ. ಆತ ಪಿಎಫ್ಐ ಹಾಗೂ ಎಸ್ಡಿಪಿಐ ನಲ್ಲಿ ಸಕ್ರಿಯನಾಗಿದ್ದ. ಹಾಗಂತ ಆತ ಆರೋಪಿಯಲ್ಲ. ನಿಜವಾದ ಆರೋಪಿಯನ್ನು ಬಂಧಿಸಿ ಶಫೀಕ್ ನನ್ನು ಬಿಟ್ಟು ಬಿಡಿ ಆತ ಅಪರಾಧಿಯಲ್ಲ ಎಂದು

“ನನ್ನ ಗಂಡ SDPI ಪಕ್ಷದಲ್ಲಿ ಸಕ್ರಿಯನಾಗಿದ್ದ ಹೊರತು ಅಪರಾಧಿಯಲ್ಲ” ➤ ಶಪೀಕ್ ಪತ್ನಿ ಹೇಳಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ತೋಡಿಗೆ ಜಾರಿಬಿದ್ದು ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 28. ವ್ಯಕ್ತಿಯೋರ್ವರು ಮನೆಯಿಂದ ಅಂಗಡಿಗೆ ಹೋಗಿ ವಾಪಸ್ ಮನೆಗೆ ಬರುವಾಗ ತೋಡಿಗೆ ಜಾರಿಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದಬೆಟ್ಟು ನಲ್ಲಿ ನಡೆದಿದೆ. ಮೃತರನ್ನು ಇಂದಬೆಟ್ಟು ಗ್ರಾಮದ ಬರಮೇಲು ನಿವಾಸಿ ಪೂವಪ್ಪ(54) ಎಂದು ಗುರುತಿಸಲಾಗಿದೆ. ಇವರು ಮನೆಯಿಂದ ಸಮೀಪದ ಅಂಗಡಿಗೆ ಹೋಗಿ ಹಿಂತಿರುಗಿ ಮನೆಗೆ ಮನೆಗೆ ಬರುತ್ತಿದ್ದ ವೇಳೆ ಮನೆಯ ತೋಟದಲ್ಲಿನ ತೋಡು ದಾಟುವಾಗ ಕಾಲು ಜಾರಿಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇವರ ಬರುವಿಕೆಯನ್ನು ಕಾದು ಕುಳಿತಿದ್ದ ಮನೆಯವರು ಸಂಜೆಯಾಗಿದ್ದರೂ ವಾಪಸ್

ಬೆಳ್ತಂಗಡಿ: ತೋಡಿಗೆ ಜಾರಿಬಿದ್ದು ವ್ಯಕ್ತಿ ಮೃತ್ಯು..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರವೀಣ್ ಹತ್ಯೆ ಆರೋಪಿಗಳ ಬಂಧನದ ಬೆನ್ನಲ್ಲೇ ಗುತ್ತಿಗಾರಿನಲ್ಲಿ ಅಂಗಡಿಗಳಿಗೆ ಹಾನಿ

(ನ್ಯೂಸ್ ಕಡಬ) newskadaba.com ಸುಳ್ಯ, ಜು. 28. ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳನ್ನು ಬಂಧಿಸಿರುವ ವಿಷಯ ತಿಳಿಯುತ್ತಿದ್ದಂತೆಯೇ ಗುತ್ತಿಗಾರು ಪೇಟೆಯಲ್ಲಿ ಸುಮಾರು 50ಕ್ಕೂ ಅಧಿಕ ಹಿಂದೂ ಸಂಘಟನಾ ಕಾರ್ಯಕರ್ತರು ಮುಸ್ಲಿಂ ವ್ಯಾಪಾರಿಗಳ 4-5 ಅಂಗಡಿಗಳಿಗೆ ನುಗ್ಗಿ ವಸ್ತುಗಳನ್ನು ಎಸೆದು ಹಾನಿಗೊಳಿಸಿರುವುದಾಗಿ ತಿಳಿದುಬಂದಿದೆ. ಬಂಧಿತ ಆರೋಪಿಗಳ ಪೈಕಿ ಶಫೀಕ್ ಎಂಬಾತ ಗುತ್ತಿಗಾರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಕೊಲೆ ಆರೋಪದಲ್ಲಿ ಬಂಧಿತನಾಗಿರುವುದನ್ನು ತಿಳಿದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಪ್ರವೀಣ್ ಹತ್ಯೆ ಆರೋಪಿಗಳ ಬಂಧನದ ಬೆನ್ನಲ್ಲೇ ಗುತ್ತಿಗಾರಿನಲ್ಲಿ ಅಂಗಡಿಗಳಿಗೆ ಹಾನಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿದ್ಯುತ್ ಶಾಕ್ ನಿಂದ ಮೃತಪಟ್ಟ ಬಾಲಕನ ಕುಟುಂಬಕ್ಕೆ ಪರಿಹಾರ ನೀಡಲು ಆಗ್ರಹ ➤ ಕಡಬ ತಹಶೀಲ್ದಾರ್ ಭೇಟಿ- ಸೂಕ್ತ ಕ್ರಮದ ಭರವಸೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು. 28. ಚಾರ್ಜ್‌ಗೆ ಇಟ್ಟಿದ್ದ ಮೊಬೈಲ್ ತೆಗೆಯುವ ವೇಳೆ ಸಿಡಿಲು ಬಡಿದ ಪರಿಣಾಮ ವಿದ್ಯುತ್ ಶಾಕ್ ಗೆ ಒಳಗಾಗಿ ಮೃತಪಟ್ಟ ಬಾಲಕನ ಕುಟುಂಬಕ್ಕೆ ಪರಿಹಾರ ನೀಡಬೇಕು ಹಾಗೂ ಈ ಸಂಬಂಧ ಜಿಲ್ಲಾಧಿಕಾರಿಯವರು ಸ್ಥಳಕ್ಕೆ ಭೇಟಿ ನೀಡಿ ಭರವಸೆ ನೀಡಬೇಕೆಂದು ಮೃತ ಬಾಲಕನ ಸಂಬಂಧಿಕರು ಆಗ್ರಹಿಸಿದ ಹಿನ್ನೆಲೆ ಸ್ಥಳಕ್ಕೆ ಭೇಟಿ ನೀಡಿದ ಕಡಬ ತಹಶೀಲ್ದಾರ್‌, ಪ್ರಾಕೃತಿಕ ವಿಕೋಪದಡಿ ಪರಿಹಾರ ನೀಡುವ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಲಾಗುವುದಾಗಿ ತಿಳಿಸಿದ್ದಾರೆ. ಸಿರಿಬಾಗಿಲು ಗ್ರಾಮದ ಅಡ್ಡಹೊಳೆ ಪುಲ್ಲೋಟ್ಟೆ

ವಿದ್ಯುತ್ ಶಾಕ್ ನಿಂದ ಮೃತಪಟ್ಟ ಬಾಲಕನ ಕುಟುಂಬಕ್ಕೆ ಪರಿಹಾರ ನೀಡಲು ಆಗ್ರಹ ➤ ಕಡಬ ತಹಶೀಲ್ದಾರ್ ಭೇಟಿ- ಸೂಕ್ತ ಕ್ರಮದ ಭರವಸೆ Read More »

ಕರಾವಳಿ, ಕರ್ನಾಟಕ

ಪ್ರವೀಣ್ ಹತ್ಯೆಯ ಪ್ರಮುಖ ಆರೋಪಿ ಯತೀಶ್ ಬಂಧನ ಎಂಬ ಸುಳ್ಳು ಸುದ್ದಿ ವೈರಲ್* *➤ ‘ಹೊಸಕನ್ನಡ’ ವೆಬ್‌ಸೈಟ್ ಸುದ್ದಿಯನ್ನು ತಿರುಚಿದ ಕಿಡಿಗೇಡಿಗಳು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು.28. ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ಯತೀಶ್ ಎಂಬಾತನನ್ನು ಬಂಧಿಸಲಾಗಿದೆ ಎಂದು ವೆಬ್‌ಸೈಟ್ ಒಂದರ ಹೆಡ್ ಲೈನ್ ತಿರುಚಿ ಸುಳ್ಳು ಸುದ್ದಿಯನ್ನು ವೈರಲ್ ಮಾಡಲಾಗುತ್ತಿದ್ದು, ಯತೀಶ್ ಎಂಬ ಹೆಸರಿನ ಯಾರನ್ನೂ ಬಂಧಿಸಲಾಗಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ. ‘ಹೊಸಕನ್ನಡ’ ವೆಬ್‌ಸೈಟ್ ನಲ್ಲಿ ಬಂದಿದ್ದ ‘ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಬೆಳ್ಳಾರೆ ನಿವಾಸಿ ಬಂಧನ’ ಎಂಬ ಹೆಡ್ ಲೈನನ್ನು ತಿರುಚಿ ‘ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ

ಪ್ರವೀಣ್ ಹತ್ಯೆಯ ಪ್ರಮುಖ ಆರೋಪಿ ಯತೀಶ್ ಬಂಧನ ಎಂಬ ಸುಳ್ಳು ಸುದ್ದಿ ವೈರಲ್* *➤ ‘ಹೊಸಕನ್ನಡ’ ವೆಬ್‌ಸೈಟ್ ಸುದ್ದಿಯನ್ನು ತಿರುಚಿದ ಕಿಡಿಗೇಡಿಗಳು Read More »

ಕರಾವಳಿ

ಬೆಳ್ಳಾರೆ: ಹತ್ಯೇಗೀಡಾದ ಪ್ರವೀಣ್ ತಂದೆಯ ಆರೋಗ್ಯದಲ್ಲಿ ಏರುಪೇರು..!

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು. 28. ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ರವರ ತಂದೆಯ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಬೆಳ್ಳಾರೆಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ. ಪುತ್ರ ಪ್ರವೀಣ್ ಸಾವಿನಿಂದ ಶೋಕದಲ್ಲಿರುವ ತಂದೆ ಶೇಖರ ಪೂಜಾರಿ ಅವರ ಹೃದಯ ಬಡಿತದಲ್ಲಿ ಏರುಪೇರಾಗಿದ್ದು ಈ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದೆನ್ನಲಾಗಿದೆ.

ಬೆಳ್ಳಾರೆ: ಹತ್ಯೇಗೀಡಾದ ಪ್ರವೀಣ್ ತಂದೆಯ ಆರೋಗ್ಯದಲ್ಲಿ ಏರುಪೇರು..! Read More »

ಕರಾವಳಿ, ಕರ್ನಾಟಕ

ಅರಂತೋಡು: ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಕಾರ್ಯಕ್ರಮ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಅರಂತೋಡು, ಜು. 28. ನೆಹರು ಸ್ಮಾರಕ ಪದವಿಪೂರ್ವ ಕಾಲೇಜಿನ 8ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಕಾರ್ಯಕ್ರಮ ಅಂಗವಾಗಿ ಭವಿಷ್ಯದ ಮಕ್ಕಳು ಮಾನಸಿಕ ಮತ್ತು ದೈಹಿಕ ಆರೋಗ್ಯದಿಂದ ಕೂಡಿರಬೇಕೆಂದು ಸರ್ಕಾರವು ಮಕ್ಕಳ ಪೋಷಣೆಗಾಗಿ ನೀಡುವ ಬಿಸಿಯೂಟ, ಹಾಲು, ಮೊಟ್ಟೆ , ಹಣ್ಣು ಹಂಪಲು ಹಾಗೂ ಶೇಂಗಾ ಚಿಕ್ಕಿ ಮೊದಲಾದವುಗಳ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಸದುದ್ದೇಶದಿಂದ ನೀಡುವ ಯೋಜನೆಯನ್ನು ವಿದ್ಯಾರ್ಥಿಗಳು ಬಳಸಿಕೊಂಡು ಉತ್ತಮ ಗುಣಮಟ್ಟದ ವಿದ್ಯಾರ್ಥಿಗಳಾಗಿ ರೂಪುಗೊಳ್ಳಲಿ ಎಂದು

ಅರಂತೋಡು: ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಕಾರ್ಯಕ್ರಮ ಉದ್ಘಾಟನೆ Read More »

ಕರಾವಳಿ, ಕರ್ನಾಟಕ

“ಪ್ರವೀಣ್ ನಿವಾಸಕ್ಕೆ ಭೇಟಿ ನೀಡಲು ನಿರ್ಧರಿಸಿದ್ದೇನೆ” ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 28. ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಭೇಟಿ ನೀಡಲು ನಿರ್ಧರಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ತನ್ನ ನೇತೃತ್ವದ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆ ಇಂದು ಹಮ್ಮಿಕೊಂಡಿದ್ದ ಜನೋತ್ಸವ ಕಾರ್ಯಕ್ರಮವನ್ನು ಪಕ್ಷದ ಕಾರ್ಯಕರ್ತನ ಸಾವು ಹಿನ್ನೆಲೆ ರದ್ದುಗೊಳಿಸಲಾಗಿದೆ. ಮೃತ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳುತ್ತೇನೆ ಎಂದರು.

“ಪ್ರವೀಣ್ ನಿವಾಸಕ್ಕೆ ಭೇಟಿ ನೀಡಲು ನಿರ್ಧರಿಸಿದ್ದೇನೆ” ➤ ಸಿಎಂ ಬೊಮ್ಮಾಯಿ Read More »

ಕರಾವಳಿ
Scroll to Top