ಕರಾವಳಿ

ರೆಂಜಿಲಾಡಿ: ಸಾರ್ವಜನಿಕ ಬಸ್ ನಿಲ್ದಾಣವನ್ನು ಆಕ್ರಮಿಸುವ ಹುನ್ನಾರ

(ನ್ಯೂಸ್ ಕಡಬ) newskadaba.com ಕಡಬ, ಜು. 26. ರೆಂಜಿಲಾಡಿ ಗ್ರಾಮದ ಕಾನದಬಾಗಿಲು ಎಂಬಲ್ಲಿ ಸಾರ್ವಜನಿಕ ಬಸ್ ತಂಗುದಾಣವನ್ನು ಸ್ಥಳೀಯ ವ್ಯಕ್ತಿಯೋರ್ವರು ಆಕ್ರಮಿಸಿಕೊಂಡು ಬೇಲಿ ಹಾಕುವ ಹುನ್ನಾರ ನಡೆಸುತ್ತಿದ್ದಾರೆ ಎಂದು ಅವರ ವಿರುದ್ದ ಪುತ್ತೂರು ಸಹಾಯಕ ಕಮೀಷನರ್‌ಗೆ ಮತ್ತು ಕಡಬ ಠಾಣೆಗೆ ದೂರು ನೀಡಿದ ಪ್ರಸಂಗ ನಡೆದಿದೆ. ಕಾನದಬಾಗಿಲು ಅನುಷ್ಠಾನ ಸಮಿತಿಯ ಅಧ್ಯಕ್ಷ ಪರಮೇಶ್ವರ ಗೌಡ ಎಂಬವರು ಈ ಕುರಿತು ಪುತ್ತೂರು ಸಹಾಯಕ ಆಯುಕ್ತರಿಗೆ ದೂರು ನೀಡಿ, ನೂಜಿಬಾಳ್ತಿಲ ಗ್ರಾ.ಪಂ.ಗೆ ಒಳಪಟ್ಟ ರೆಂಜಿಲಾಡಿ ಗ್ರಾಮದ ಕಲ್ಲುಗುಡ್ಡೆ-ಕೊಣಾಜೆ ರಸ್ತೆಯಲ್ಲಿ ಕಾನದಬಾಗಿಲು […]

ರೆಂಜಿಲಾಡಿ: ಸಾರ್ವಜನಿಕ ಬಸ್ ನಿಲ್ದಾಣವನ್ನು ಆಕ್ರಮಿಸುವ ಹುನ್ನಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಮಗಾರಿಗಳು ಪುನರಾವರ್ತನೆಯಾಗದಂತೆ ಎಚ್ಚರ ವಹಿಸಲು ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 26. ಕೇಂದ್ರ ಸರ್ಕಾರದ ಬ್ಲೂ ಫ್ಲಾಗ್ ಯೋಜನೆಯಡಿ ಆಯ್ಕೆಯಾಗಿರುವ ತಣ್ಣೀರು ಬಾವಿ ಬೀಚ್‍ನಲ್ಲಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳು ಬಿವಿಜಿ ಇಂಡಿಯಾ ಲಿಮಿಟೆಡ್ ಹಾಗೂ ಮಂಗಳೂರು ಸ್ಮಾರ್ಟ್ ಸಿಟಿ ವತಿಯಿಂದ ನಿರ್ವಹಿಸುವ ಕಾಮಗಾರಿಗಳು ಪುನರಾವರ್ತನೆಯಾಗದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಇವರು ಸೋಮವಾರದಂದು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಬ್ಲೂ ಫ್ಲಾಗ್ ಯೋಜನೆಯ ಕಾಮಗಾರಿಗಳ ಕುರಿತಂತೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾಮಗಾರಿಗಳು ಪುನರಾವರ್ತನೆಯಾಗದಂತೆ ಎಚ್ಚರ ವಹಿಸಲು ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ, ಕರ್ನಾಟಕ

ಪುತ್ತೂರು: ಬೈಕ್ ಹಾಗೂ ಕಾರು ನಡುವೆ ಢಿಕ್ಕಿ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 26. ಬೈಕ್ ಮತ್ತು ಕಾರು ನಡುವೆ ಢಿಕ್ಕಿ ಸಂಭವಿಸಿದ ಘಟನೆ ಇಲ್ಲಿನ ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಬಳಿ ಇಂದು ಮಧ್ಯಾಹ್ನ ನಡೆದಿದೆ. ಘಟನೆಯಿಂದ ಬೈಕ್ ಸವಾರ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಪುತ್ತೂರು: ಬೈಕ್ ಹಾಗೂ ಕಾರು ನಡುವೆ ಢಿಕ್ಕಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಜಿಲ್ಲಾ ಗೃಹರಕ್ಷಕದಳ ಕಛೇರಿಯಲ್ಲಿ ಕಾರ್ಗಿಲ್ ದಿನಾಚರಣೆ ➤ ಹುತಾತ್ಮ ಸೈನಿಕರ ಬಲಿದಾನ ವ್ಯರ್ಥವಾಗದಿರಲಿ- ಡಾ| ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 26. ಮೇರಿಹಿಲ್‍ನ ಜಿಲ್ಲಾ ಗೃಹರಕ್ಷಕದಳ ಕಛೇರಿ ಇಲ್ಲಿ ಕಾರ್ಗಿಲ್ ದಿನಾಚರಣೆಯ ಅಂಗವಾಗಿ ಕಾರ್ಗಿಲ್‍ನಲ್ಲಿ ಹುತಾತ್ಮರಾದವರಿಗೆ ಗೌರವ ನಮನವನ್ನು ಸಲ್ಲಿಸುತ್ತಾ, 23ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಆಚರಣೆ ನಡೆಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ಡಾ|| ಮುರಲೀ ಮೋಹನ್ ಚೂಂತಾರು ವಹಿಸಿದ್ದರು. 1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶಕ್ಕಾಗಿ ಮಡಿದ ಆ ಸೈನಿಕರ ಆತ್ಮಗಳಿಗೆ ಭಾವಪೂರ್ಣ ಪುಷ್ಪ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಸಮಾದೇಷ್ಟರಾದ

ಜಿಲ್ಲಾ ಗೃಹರಕ್ಷಕದಳ ಕಛೇರಿಯಲ್ಲಿ ಕಾರ್ಗಿಲ್ ದಿನಾಚರಣೆ ➤ ಹುತಾತ್ಮ ಸೈನಿಕರ ಬಲಿದಾನ ವ್ಯರ್ಥವಾಗದಿರಲಿ- ಡಾ| ಚೂಂತಾರು Read More »

ಕರಾವಳಿ, ಕರ್ನಾಟಕ

ಮಾರ್ ಇವಾನಿಯೋಸ್ ಕಾಲೇಜಿನಲ್ಲಿ “ರಾಷ್ಟ್ರೀಯ ಶಿಕ್ಷಣ ನೀತಿ- 2020″ರ ಕುರಿತು ವಿಚಾರ ಸಂಕಿರಣ

(ನ್ಯೂಸ್ ಕಡಬ) newskadaba.com ಕುಂತೂರು, ಜು. 26. ಇಲ್ಲಿನ ಮಾರ್ ಇವಾನಿಯೋಸ್ ಶಿಕ್ಷಕ-ಶಿಕ್ಷಣ ಮಹಾವಿದ್ಯಾಲಯದಲ್ಲಿ ನೂತನ “ರಾಷ್ಟ್ರೀಯ ಶಿಕ್ಷಣ ನೀತಿ-2020” ಎಂಬ ವಿಷಯದ ಕುರಿತು ವಿಚಾರ ಸಂಕಿರಣವನ್ನು ಏರ್ಪಡಿಸಲಾಯಿತು. ವಿಚಾರ ಸಂಕಿರಣವನ್ನು ಕಾಲೇಜಿನ ವ್ಯವಸ್ಥಾಪಕಾದ ರೆ|ಡಾ|ಫಾ| ಎಲ್ದೊ ಪುತ್ತನ್‍ಕಂಡತ್ತಿಲ್ ಅಧ್ಯಕ್ಷತೆ ವಹಿಸಿ, ಪ್ರಸ್ತುತ ರಾಷ್ಟ್ರೀಯ ಶಿಕ್ಷಣ ನೀತಿ-2020ರ ಅಗತ್ಯತೆ ಮತ್ತು ಅದರ ಸರಿಯಾದ ಅನುಷ್ಠಾನದ ಬಗ್ಗೆ ಆಶಾಭಾವನೆ ವ್ಯಕ್ತಪಡಿಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಶ್ರೀಯುತ ಡಾ| ರವಿ

ಮಾರ್ ಇವಾನಿಯೋಸ್ ಕಾಲೇಜಿನಲ್ಲಿ “ರಾಷ್ಟ್ರೀಯ ಶಿಕ್ಷಣ ನೀತಿ- 2020″ರ ಕುರಿತು ವಿಚಾರ ಸಂಕಿರಣ Read More »

ಕರಾವಳಿ, ಕರ್ನಾಟಕ

ಮಂಗಳೂರು: ಪಬ್ ಮೇಲೆ ಯಾವುದೇ ದಾಳಿ ನಡೆದಿಲ್ಲ ➤ ಕಮಿಷನರ್ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 26. ಪಬ್‌ ಮೇಲೆ ಯಾವುದೇ ದಾಳಿ ನಡೆದಿಲ್ಲ. ಈ ಸಂಬಂಧ ಸಿಸಿಟಿವಿ ದಾಖಲೆಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್‍ ಹೇಳಿದ್ದಾರೆ. ಪಬ್‌ಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಲ್ಮಠದ ರಿ-ಸೈಕಲ್ ರೆಸ್ಟೋರೆಂಟ್ ಕಮ್ ಪಬ್ ಬಹಳಷ್ಟು ವರ್ಷಗಳಿಂದ ಕಾರ್ಯಾಚರಿಸುತ್ತಿದೆ. ಸೋಮವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಸಂಘಟನೆಗೆ ಸೇರಿದ ಐದಾರು ಹುಡುಗರು ಬಂದು ಇಲ್ಲಿನ ಬೌನ್ಸರ್ ದಿನೇಶ್

ಮಂಗಳೂರು: ಪಬ್ ಮೇಲೆ ಯಾವುದೇ ದಾಳಿ ನಡೆದಿಲ್ಲ ➤ ಕಮಿಷನರ್ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಸರಸ್ವತಿ ವಿದ್ಯಾಲಯದಲ್ಲಿ ಕಾರ್ಗಿಲ್ ವಿಜಯ ದಿವಸ್ ಅಚರಣೆ ➤ ಮಾಜಿ ಸೈನಿಕರಿಗೆ ಗೌರವಾರ್ಪಣೆ

(ನ್ಯೂಸ್ ಕಡಬ) newskadaba.com ಕಡಬ, ಜು. 26. ಕಾರ್ಗಿಲ್ ವಿಜಯ್ ದಿವಸ್ ದಿನಾಚರಣೆಯ ಅಂಗವಾಗಿ ಸರಸ್ವತಿ ವಿದ್ಯಾಲಯಲ್ಲಿ ಮಾಜಿ ಸೈನಿಕರಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಿತು. ಮೊದಲಿಗೆ ಕಾರ್ಗಿಲ್ ಯುದ್ದದಲ್ಲಿ ವೀರ ಮರಣವನ್ನಪ್ಪಿದ ಯೋಧರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಸೈನಿಕರಾದ ರಘುನಾಥ ಹೆಬ್ಬಾರ್ ವಾಳ್ಯ, ಗೋಪಾಲ್ ವಿ. ಬಿಳಿನೆಲೆ, ವಾಸುದೇವ ಗೌಡ, ಸೈಮನ್ ಕೆ.ಸಿ, ಸುಬೇದಾರ್ ಗೋಪಾಲಕೃಷ್ಣ ಎ.ಕೆ. ಅವರ ಸ್ಮರಣಾರ್ಥ ಗೀತಾ ಅಮೈ ಕೇವಳ, ವಾಡ್ಯಪ್ಪ ಗೌಡ ಮಂಡೆಕರ ಹಾಗೂ ದೇಶದ ವಿವಿಧೆಡೆ

ಕಡಬ: ಸರಸ್ವತಿ ವಿದ್ಯಾಲಯದಲ್ಲಿ ಕಾರ್ಗಿಲ್ ವಿಜಯ ದಿವಸ್ ಅಚರಣೆ ➤ ಮಾಜಿ ಸೈನಿಕರಿಗೆ ಗೌರವಾರ್ಪಣೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಆ. 01ರಿಂದ ಮೀನುಗಾರಿಕೆ ಮರು ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 26. ಮಂಗಳೂರಿನಲ್ಲಿ ಎರಡು ತಿಂಗಳ ಕಾಲ ಸ್ಥಗಿತಗೊಂಡಿದ್ದ ಮೀನುಗಾರಿಕೆ ಆಗಸ್ಟ್ 1ರಂದು ಮರು ಆರಂಭಗೊಳ್ಳಲಿದ್ದು, ಕಡಲಿಗಿಳಿಯಲು ಮೀನುಗಾರರು ಸಿದ್ಧತೆ ಮಾಡಿಕೊಂಡಿದ್ದಾರೆ. ದೋಣಿಗಳಲ್ಲಿ ದುಡಿಯುವವರ ಪೈಕಿ ಬಹುಪಾಲು ಆಂಧ್ರ, ಒಡಿಶಾ, ತಮಿಳುನಾಡು ಸೇರಿದಂತೆ ಹೊರ ರಾಜ್ಯಗಳಿಗೆ ಸೇರಿದವರಾಗಿದ್ದು, ರಜೆಯಲ್ಲಿ ತೆರಳಿದವರು ಮರಳಿ ಬರುತ್ತಿದ್ದಾರೆ. ಜು. 31ಕ್ಕೆ ಐಸ್ ಪ್ಲಾಂಟ್ ಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭಿಸಲಿದ್ದು, ಮೀನುಗಾರಿಕೆಗೆ ಬೋಟುಗಳನ್ನು, ಎಂಜಿನ್ ಗಳನ್ನು ದುರಸ್ತಿಗೊಳಿಸಿ ಹಾಗೂ ಬಲೆಗಳನ್ನು ಸಿದ್ಧಗೊಳಿಸುವ ಕಾರ್ಯ ನಡೆದಿದೆ.

ಮಂಗಳೂರು: ಆ. 01ರಿಂದ ಮೀನುಗಾರಿಕೆ ಮರು ಆರಂಭ Read More »

ಕರಾವಳಿ, ಕರ್ನಾಟಕ

ಕಾರುಗಳ ನಡುವೆ ಅಪಘಾತ ➤ ಚಾಲಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಭಟ್ಕಳ, ಜು. 26. ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ, ಚಾಲಕರಿಬ್ಬರು ಗಾಯಗೊಂಡ ಘಟನೆ ಭಟ್ಕಳ ತಾಲೂಕಿನ ಹೆಬಳೆ ಪಂಚಾಯತ್‌ ವ್ಯಾಪ್ತಿಯ ತೆಂಗಿನ ಗಂಡು ರಸ್ತೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಹೆಬಳೆ ಕಡೆಯಿಂದ ಭಟ್ಕಳಕ್ಕೆ ಹೋಗುತ್ತಿದ್ದ ಕಾರೊಂದು ಎದುರಿನಿಂದ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದ್ದು, ಪರಿಣಾಮ ಚಾಲಕರಿಬ್ಬರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಗಾಯಾಳು ಕಾರು ಚಾಲಕರನ್ನು ಭಟ್ಕಳದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರುಗಳ ನಡುವೆ ಅಪಘಾತ ➤ ಚಾಲಕರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪ್ಲಾಸ್ಟಿಕ್ ದುಷ್ಪರಿಣಾಮದ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 26. ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ನಿಷೇಧಿಸಿರುವ ಹಿನ್ನಲೆಯಲ್ಲಿ 2016ರಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆ ಹಾಗೂ 2021ರಲ್ಲಿ ಕೇಂದ್ರ ಸರ್ಕಾರ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಸಂಬಂಧಿಸಿದ ಅಧಿಕಾರಿಗಳು ಚಾಚೂ ತಪ್ಪದೆ ಪಾಲಿಸುವಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ನಿರ್ದೇಶನ ನೀಡಿದರು. ಅವರು ಸೋಮವಾರದಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈ ಕುರಿತು ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಿಯಮಗಳು 2016ರಂತೆ ಪ್ಲಾಸ್ಟಿಕ್ ಧ್ವಜಗಳು, ಕ್ಯಾಂಡಿಸ್ಟಿಕ್‍ಗಳು,

ಪ್ಲಾಸ್ಟಿಕ್ ದುಷ್ಪರಿಣಾಮದ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ, ಕರ್ನಾಟಕ
Scroll to Top