ಕರಾವಳಿ

ಆಲ್ಟೋ ಕಾರು ಹಾಗೂ KSRTC ಬಸ್ ನಡುವೆ ಅಪಘಾತ ➤ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಜು. 25. ಆಲ್ಟೋ ಕಾರು ಹಾಗೂ ಬಸ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಮೂವರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಮದೆನಾಡು ಎಂಬಲ್ಲಿ ಸಂಭವಿಸಿದೆ. ಗಾಯಗೊಂಡವರನ್ನು ಸುಳ್ಯ ಜಯನಗರದ ಸಿನಾನ್, ಅತಾವುಲ್ಲಾ ಹಾಗೂ ಸಿರಾಜ್ ಎಂದು ಗುರುತಿಸಲಾಗಿದೆ. ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಆಲ್ಟೊ ಕಾರು ಹಾಗೂ ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಸರ್ಕಾರಿ ಬಸ್ ನಡುವೆ ಈ ಅಪಘಾತ ಸಂಭವಿಸಿದೆನ್ನಲಾಗಿದೆ.

ಆಲ್ಟೋ ಕಾರು ಹಾಗೂ KSRTC ಬಸ್ ನಡುವೆ ಅಪಘಾತ ➤ ಮೂವರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಯುವಕನನ್ನು ಅಪಹರಿಸಿ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳು..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 25. ಸ್ಕೂಟರ್‌ ನಲ್ಲಿ ತೆರಳುತ್ತಿದ್ದ ಯುವಕನನ್ನು ಕಾರಿನಲ್ಲಿ ಬಂದ ತಂಡವೊಂದು ಕಿಡ್ನಾಪ್‌ ಮಾಡಿ ಆಳದಂಗಡಿ ಕೆದ್ದು ಶಾಲೆಗೆ ಕರೆದೊಯ್ದು ಹಲ್ಲೆ ಮಾಡಿದ ಘಟನೆ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಬೆಳ್ತಂಗಡಿ ತಾಲೂ‌ಕಿನ ಲಾಯಿಲ ಗ್ರಾಮದ ಅಂಕಾಜೆ ನಿವಾಸಿ ಮೆಕ್ಯಾನಿಕ್ ನಿಶೇತ್(23) ಎಂದು ಗುರುತಿಸಲಾಗಿದೆ. ಬೊಲೆರೋ ವಾಹನಲ್ಲಿ ಬಂದ ಎಂಟು ಮಂದಿ ದುಷ್ಪರ್ಮಿಗಳ ತಂಡವೊಂದು ನಿತೇಶ್ ನನ್ನು ಕಿಡ್ನಾಪ್ ಮಾಡಿ, ಅಳದಂಗಡಿಯ ಕೆದ್ದು ಶಾಲೆಯ ಆಟದ ಮೈದಾನಕ್ಕೆ ಕರೆದುಕೊಂಡು ಹೋಗಿ ಅಲ್ಲಿ ಮಾರಣಾಂತಿಕ

ಬೆಳ್ತಂಗಡಿ: ಯುವಕನನ್ನು ಅಪಹರಿಸಿ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು..!!

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 25. ನೀರು ತುಂಬಿದ್ದ ಕೆಂಪು ಕಲ್ಲಿನ ಕ್ವಾರಿ ಹೊಂಡದಲ್ಲಿ ಈಜಲು ತೆರಳಿದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಉಳಾಯಿಬೆಟ್ಟು ಕಾಯರಪದವು ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಜೋಕಟ್ಟೆ ನಿವಾಸಿ ಶಿಯಾಬ್ (21) ಎಂದು ಗುರುತಿಸಲಾಗಿದೆ. ಈತ ಗೆಳೆಯರ ಜೊತೆ ಕ್ರಿಕೆಟ್ ಆಡಿ ನಂತರ ಅಲ್ಲಿಯೇ ಮೈದಾನದ ಪಕ್ಕದಲ್ಲಿದ್ದ ಕೆಂಪು ಕಲ್ಲಿನ ಕ್ವಾರಿ ಹೊಂಡದಲ್ಲಿ ಈಜಲು ಹೋಗಿದ್ದ ವೇಳೆ ನೀರು ತುಂಬಿದ್ದ ಹೊಂಡದಲ್ಲಿ ಈಜಲು ಸಾಧ್ಯವಾಗದೆ ಮುಳುಗಿ

ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆಲಂಕಾರು: ಜುಗಾರಿ ಅಡ್ಡೆಗೆ ದಾಳಿ ➤ 3 ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ) newskadaba.com ಆಲಂಕಾರು, ಜು. 24. ಜುಗಾರಿ ಆಟ ಆಡುತ್ತಿದ್ದ ವೇಳೆ ದಾಳಿ ನಡೆಸಿದ ಕಡಬ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ ಘಟನೆ ಆಲಂಕಾರು ಗ್ರಾಮದ ನಾಡ್ತಿಲ ಸರಕಾರಿ ಗುಡ್ಡದಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಸಂತೋಷ್ ಗುರಿಯಡ್ಕ, ರಘುರಾಮ ಶರವೂರು, ಮಂಜುನಾಥ ಬೇಳ್ಪಾಡಿ ಎಂದು ಗುರುತಿಸಲಾಗಿದೆ. ದಾಳಿಯ ವೇಳೆ ಹಲವಾರು ಮಂದಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳದಿಂದ 5 ಮೋಟಾರ್ ಸೈಕಲ್, ಒಂದು ಅಟೋ ರಿಕ್ಷಾ ಹಾಗೂ ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಕಡಬ ಠಾಣಾ

ಆಲಂಕಾರು: ಜುಗಾರಿ ಅಡ್ಡೆಗೆ ದಾಳಿ ➤ 3 ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪುತ್ತೂರು ಮೂಲದ ಕಾರು ಚಿಕ್ಕಮಗಳೂರಿನಲ್ಲಿ ಅಪಘಾತ ➤ ಅಪಾಯದಿಂದ ಪಾರಾದ ಪ್ರಯಾಣಿಕರು

(ನ್ಯೂಸ್ ಕಡಬ) newskadaba.com ಮೂಡಿಗೆರೆ, ಜು. 24. ಪುತ್ತೂರಿನಿಂದ ಚಿಕ್ಕಮಗಳೂರಿಗೆ ಪ್ರವಾಸಕ್ಕೆಂದು ತೆರಳಿದ್ದ ಪ್ರವಾಸಿಗರ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕೊಟ್ಟಿಗೆಹಾರ ಮತ್ತು ಬಣಕಲ್ ಹೆದ್ದಾರಿಯ ಹೆಬ್ಬರಿಗೆ ಬಳಿ ಭಾನುವಾರದಂದು ನಡೆದಿದೆ. ಪುತ್ತೂರಿನ ನಿವಾಸಿಗಳು ಪ್ರವಾಸಕ್ಕೆಂದು ಹೋಗಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಎರಡು ಪಲ್ಟಿಯಾಗಿದೆ. ಕಾರಿನಲಿದ್ದ ಆರು ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಪುತ್ತೂರು ಮೂಲದ ಕಾರು ಚಿಕ್ಕಮಗಳೂರಿನಲ್ಲಿ ಅಪಘಾತ ➤ ಅಪಾಯದಿಂದ ಪಾರಾದ ಪ್ರಯಾಣಿಕರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬದ ಸಿದ್ಧಿ ಟೆಕ್ಸ್ ಟೈಲ್ಸ್ ನಲ್ಲಿ ಜುಲೈ 30ರ ವರೆಗೆ ಡಿಸ್ಕೌಂಟ್ ಸೇಲ್ ➤ ಎಲ್ಲಾ ಉಡುಪುಗಳ ಮೇಲೆ 10 – 40% ಡಿಸ್ಕೌಂಟ್

(ನ್ಯೂಸ್ ಕಡಬ) newskadaba.com ಕಡಬ, ಜು.24. ಇಲ್ಲಿನ ಪಂಜ ರಸ್ತೆಯ ಯೋಗಕ್ಷೇಮ ಸಂಕೀರ್ಣದಲ್ಲಿ ಕಾರ್ಯಾಚರಿಸುತ್ತಿರುವ ಸಿದ್ಧಿ ಟೆಕ್ಸ್ ಟೈಲ್ಸ್ ನಲ್ಲಿ ಜುಲೈ 20 ರಿಂದ ವಿಶೇಷ ಡಿಸ್ಕೌಂಟ್ ಸೇಲ್ ಆರಂಭಗೊಂಡಿದೆ. ಮಳಿಗೆಯಲ್ಲಿನ ಎಲ್ಲಾ ಉಡುಪುಗಳ ಮೇಲೆ 10 ರಿಂದ 40% ಡಿಸ್ಕೌಂಟ್ ಸೇಲ್ ಜುಲೈ 30ರ ವರೆಗೆ ನಡೆಯಲಿದ್ದು, ಗ್ರಾಹಕರು ಈ ಆಫರ್ ನ ಸದುಪಯೋಗ ಪಡೆಯುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಕಡಬದ ಸಿದ್ಧಿ ಟೆಕ್ಸ್ ಟೈಲ್ಸ್ ನಲ್ಲಿ ಜುಲೈ 30ರ ವರೆಗೆ ಡಿಸ್ಕೌಂಟ್ ಸೇಲ್ ➤ ಎಲ್ಲಾ ಉಡುಪುಗಳ ಮೇಲೆ 10 – 40% ಡಿಸ್ಕೌಂಟ್ Read More »

ಕರಾವಳಿ

ಬೆಳ್ತಂಗಡಿ: ಒಂಟಿ ವೃದ್ದೆ ಕೊಲೆ ಪ್ರಕರಣ ➤ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 24. ಒಂಟಿ ವೃದ್ಧೆಯ ಮನೆಗೆ ನುಗ್ಗಿ ಬರ್ಬರವಾಗಿ ಕೊಲೆಗೈದು ಚಿನ್ನಾಭರಣ ಹಾಗೂ ನಗದು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಡಿರುದ್ಯಾವರ ಗ್ರಾಮದ ಕಾನರ್ಪ ಕುಮೇರು ಅಶೋಕ ಎಂದು ಗುರುತಿಸಲಾಗಿದೆ. ಬೆಳಾಲು ಗ್ರಾಮದ ಕೆರೆಕೋಡಿ ನಿವಾಸಿ ಅಕ್ಕು (85) ಎಂಬ ವೃದ್ದೆಯನ್ನು ಸಂಬಂಧಿ ಯುವಕನೇ ಹತ್ಯೆಗೈದು ಹಣ, ಚಿನ್ನಾಭರಣ ಸಹಿತ ಪರಾರಿಯಾಗಿದ್ದ ಎನ್ನಲಾಗಿದೆ. ಅಕ್ಕು ಅವರು ಮಗ, ಸೊಸೆ ಮತ್ತು ಮೊಮ್ಮಗಳ ಜೊತೆ

ಬೆಳ್ತಂಗಡಿ: ಒಂಟಿ ವೃದ್ದೆ ಕೊಲೆ ಪ್ರಕರಣ ➤ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಟ್ಲ: ಫೇಸ್ ಬುಕ್ ನಲ್ಲಿ ಪುರುಷ ಎಂದು ನಂಬಿಸಿ ಯುವತಿಗೆ ವಂಚನೆ ➤ ತೃತೀಯಲಿಂಗಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 24. ಪುರುಷನೆಂದು ನಂಬಿಸಿ ಫೇಸ್‌ಬುಕ್ ಖಾತೆಯ ಮೂಲಕ ಮಹಿಳೆಯೊಬ್ಬರಿಗೆ ವಂಚಿಸಿದ ಆರೋಪದ ಮೇಲೆ ತೃತೀಯಲಿಂಗಿಯೊಬ್ಬರನ್ನು ಬಂಧಿಸಿರುವ ಘಟನೆ ವಿಟ್ಲದಲ್ಲಿ ನಡೆದಿದೆ. ಸಿವಿಲ್ ಇಂಜಿನಿಯರ್ ಎಂದು ನಟಿಸಿದ ಆರೋಪಿ ಫೇಸ್‌ಬುಕ್‌ನಲ್ಲಿ ಯುವತಿಯೊಂದಿಗೆ ಸ್ನೇಹ ಬೆಳೆಸಿ ಕಳೆದ ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಚಾಟ್ ಮಾಡುತ್ತಿದ್ದುದಲ್ಲದೇ ಫೋನ್‌ನಲ್ಲಿ ಕೂಡಾ ಮಾತನಾಡುತ್ತಿದ್ದರು ಎನ್ನಲಾಗಿದೆ. ಈ ವಿಷಯ ತಿಳಿದ ಹುಡುಗಿಯ ತಾಯಿ, ಅದನ್ನು ತಮ್ಮ ಕುಟುಂಬ ಸ್ನೇಹಿತೆ ವಕೀಲೆ ಶೈಲಜಾ ರಾಜೇಶ್ ಅವರೊಂದಿಗೆ ಹಂಚಿಕೊಂಡಿದ್ದಾರೆ. ಶೇಲಜಾ

ವಿಟ್ಲ: ಫೇಸ್ ಬುಕ್ ನಲ್ಲಿ ಪುರುಷ ಎಂದು ನಂಬಿಸಿ ಯುವತಿಗೆ ವಂಚನೆ ➤ ತೃತೀಯಲಿಂಗಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ದ.ಕ, ಉಡುಪಿ ಜಿಲ್ಲೆಯ ವಿವಿಧ ಪಶು ವೈದ್ಯಾಧಿಕಾರಿಗಳ ವರ್ಗಾವಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 24. ದ.ಕ ಹಾಗೂ ಉಡುಪಿ ಜಿಲ್ಲೆಯ ವಿವಿಧ ಪಶು ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಪುತ್ತೂರು ಪಶು ಆಸ್ಪತ್ರೆಯ ಸಂಚಾರಿ ಮತ್ತು ವಿಸ್ತರಣೆ ಮುಖ್ಯ ಪಶು ವೈದ್ಯಾಧಿಕಾರಿ ಡಾ. ಉಷಾ ವರ್ಗಾವಣೆಯಾಗಿದೆ. ಬೆಂಗಳೂರಿನ ಪಶುಪಾಲನಾ ಇಲಾಖೆ ಆಯುಕ್ತರ ಕಚೇರಿಯ ಜಾನುವಾರು ರೋಗಗಳ ಕಣ್ಗಾವಲು ಯೋಜನೆ ಶಾಖೆಯ ಮುಖ್ಯ ಪಶು ವೈದ್ಯಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಪುತ್ತೂರು ತಾಲೂಕಿನ ಕೊಳ್ತಿಗೆ ಪಶು ಚಿಕಿತ್ಸಾಲಯದ ಹಿರಿಯ ಪಶು ವೈದ್ಯಾಧಿಕಾರಿ ಡಾ. ಎಸ್.ಕೆ. ಪುನೀತ್

ದ.ಕ, ಉಡುಪಿ ಜಿಲ್ಲೆಯ ವಿವಿಧ ಪಶು ವೈದ್ಯಾಧಿಕಾರಿಗಳ ವರ್ಗಾವಣೆ Read More »

ಕರಾವಳಿ, ಕರ್ನಾಟಕ

ಶಿರಾಡಿ ಹಾಗೂ ಸಂಪಾಜೆ ಘಾಟ್ ಸಂಪರ್ಕ ಕಡಿತದ ಹಿನ್ನೆಲೆ ➤ ಜು.26ರಿಂದ ಮಂಗಳೂರು – ಬೆಂಗಳೂರು ನಡುವೆ ವಿಶೇಷ ರೈಲು ಆರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 24. ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ಮತ್ತು ಎನ್ಎಚ್ 276 ಸಂಪಾಜೆ ಘಾಟ್ ನಡುವೆ ರಸ್ತೆ ಸಂಪರ್ಕ ಕಡಿತಗೊಂಡಿರುವ ಕಾರಣ ಜುಲೈ 26 ರಿಂದ ಮೈಸೂರು ಮೂಲಕ ಬೆಂಗಳೂರು ಮತ್ತು ಮಂಗಳೂರು ನಡುವೆ ತ್ರಿಪ್ತಾಹಿಕ ವಿಶೇಷ ಎಕ್ಸ್​ಪ್ರೆಸ್ ರೈಲು ಆರಂಭಿಸಲಾಗುವುದು ಎಂದು ನೈಋತ್ಯ ರೈಲ್ವೇ ಇಲಾಖೆ ಅಧಿಕೃತ ಪ್ರಕಟಣೆ ಹೊರಡಿಸಿದೆ. ಇದರಂತೆ ಜುಲೈ 22 ರಂದು ನೈಋತ್ಯ ರೈಲ್ವೇ ಬಿಡುಗಡೆಗೊಳಿಸಿರುವ ಅಧಿಸೂಚನೆಯ ಪ್ರಕಾರ ರೈಲು ಸಂಖ್ಯೆ 06547/548 ಬೆಂಗಳೂರು-ಮಂಗಳೂರು

ಶಿರಾಡಿ ಹಾಗೂ ಸಂಪಾಜೆ ಘಾಟ್ ಸಂಪರ್ಕ ಕಡಿತದ ಹಿನ್ನೆಲೆ ➤ ಜು.26ರಿಂದ ಮಂಗಳೂರು – ಬೆಂಗಳೂರು ನಡುವೆ ವಿಶೇಷ ರೈಲು ಆರಂಭ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top