ಕರಾವಳಿ

ಬೆಳ್ಳಾರೆ: ಬೆಂಕಿ ತಗುಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು..!!

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು. 23. ಆಕಸ್ಮಿಕವಾಗಿ ಬೆಂಕಿ ತಗುಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೋರ್ವರು ಮೃತಪಟ್ಟ ಘಟನೆ ಇಂದು ಸಂಭವಿಸಿದೆ. ಮೃತರನ್ನು ಕಳಂಜ ಗ್ರಾಮದ ಬಾಳೆಗುಡ್ಡೆ ಕುಂಞಣ್ಣ ನಾಯ್ಕರ ಪುತ್ರಿ ಕುಸುಮ ಎಂದು ಗುರುತಿಸಲಾಗಿದೆ. ಇವರು ಜು. 20ರಂದು ಬೆಳಿಗ್ಗೆ ಅಡುಗೆ ಕೋಣೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿದರಾದರೂ ಚಿಕಿತ್ಸೆ […]

ಬೆಳ್ಳಾರೆ: ಬೆಂಕಿ ತಗುಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಆಲ್ಟೋ ಕಾರಿನಲ್ಲಿ ಅಕ್ರಮ ಗೋಸಾಗಾಟ ➤ ಆರೋಪಿಗಳು ಅಂದರ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 23. ಅಕ್ರಮವಾಗಿ ಆಲ್ಟೋ ಕಾರಿನಲ್ಲಿ ಗೋ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತರನ್ನು ಕೊಳ್ನಾಡು ಗ್ರಾಮದ ಪಂಜರಕೋಡಿ ನಿವಾಸಿ ಬಶೀರ್ (28) ಹಾಗೂ ನೌಫಾಲ್ (24) ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಬಂಟ್ವಾಳ: ಆಲ್ಟೋ ಕಾರಿನಲ್ಲಿ ಅಕ್ರಮ ಗೋಸಾಗಾಟ ➤ ಆರೋಪಿಗಳು ಅಂದರ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಚಿನ್ನಾಭರಣಕ್ಕಾಗಿ ಒಂಟಿ ವೃದ್ದೆಯ ಬರ್ಬರ ಹತ್ಯೆ..!!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 23. ಮನೆಯಲ್ಲಿದ್ದ ಒಂಟಿ ವೃದ್ಧೆಯನ್ನು ಬರ್ಬರವಾಗಿ ಹತ್ಯೆಗೈದು ಆಕೆಯ ಮೈಮೇಲಿದ್ದ ಚಿನ್ನಾಭರಣ ಸಹಿತ ಮನೆಯಲ್ಲಿದ್ದ ನಗದನ್ನು ದೋಚಿದ ಘಟನೆ ಇಂದು ಮಧ್ಯಾಹ್ನ ತಾಲೂಕಿನ ಬೆಳಾಲು ಗ್ರಾಮದ ಕೆರೆಕೋಡಿ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಬೆಳಾಲು ಗ್ರಾಮದ ಕೆರೆಕೋಡಿ ನಿವಾಸಿ ಅಕ್ಕು (85) ಎಂದು ಗುರುತಿಸಲಾಗಿದೆ. ಅಕ್ಕು ಅವರು ತಮ್ಮ ಮಗ, ಸೊಸೆ ಮತ್ತು ಮೊಮ್ಮಗಳ ಜೊತೆ ವಾಸವಿದ್ದರು. ಮಗ ಮತ್ತು ಸೊಸೆ ಕೆಲಸದ ನಿಮಿತ್ತ ಹೊರಗಡೆ ಹೋಗಿದ್ದು, ಇಂದು ಶನಿವಾರವಾದ ಕಾರಣ

ಬೆಳ್ತಂಗಡಿ: ಚಿನ್ನಾಭರಣಕ್ಕಾಗಿ ಒಂಟಿ ವೃದ್ದೆಯ ಬರ್ಬರ ಹತ್ಯೆ..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪುತ್ತೂರು: ಭಿನ್ನಕೋಮಿನ ವಿದ್ಯಾರ್ಥಿಗಳ ನಡುವೆ ಹೊಡೆದಾಟ- ಹಲ್ಲೆ ➤ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 23. ಖಾಸಗಿ ಸ್ಟಡಿ ಸೆಂಟರ್ ನ ಭಿನ್ನಕೋಮಿನ ತಂಡದ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದು ಪರಸ್ಪರ ಹಲ್ಲೆ ನಡೆಸಿ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಇಮ್ರಾನ್ ಎಂಬಾತ ಹೊರಗಿನಿಂದ ಯುವಕರನ್ನು ಕರೆ ತಂದು ಹಲ್ಲೆ ನಡೆಸಿದ್ದಾನೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ, ಅಷ್ಟೇ ಅಲ್ಲದೆ ಬಸ್ ನಿಲ್ದಾಣದಲ್ಲಿಯೂ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿದ್ದು, ವಿದ್ಯಾರ್ಥಿಗಳಾದ ಕಾರ್ತಿಕ್ ಅಜ್ಜಿನಡ್ಕ ಮತ್ತು ಲಿತೀಶ್ ಕಬಕ ರವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆಯ ಕುರಿತು

ಪುತ್ತೂರು: ಭಿನ್ನಕೋಮಿನ ವಿದ್ಯಾರ್ಥಿಗಳ ನಡುವೆ ಹೊಡೆದಾಟ- ಹಲ್ಲೆ ➤ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅರಂತೋಡು: ಉಪನ್ಯಾಸಕರಿಂದ ಸಾಂಪ್ರದಾಯಿಕ ನೇಜಿ ನಾಟಿ ಪಾಠ

(ನ್ಯೂಸ್ ಕಡಬ) newskadaba.com ಅರಂತೋಡು, ಜು. 23. ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡು ಇಲ್ಲಿನ ಎನ್ಎಸ್ಎಸ್ ಘಟಕ, ಕಲಾ, ಕ್ರೀಡಾ ಮತ್ತು ಲಲಿತಾ ಕಲೆ ಸಂಘದ ನೇತೃತ್ವದಲ್ಲಿ ಕಣ್ಮರೆಯಾಗುತ್ತಿರುವ ಸಾಂಪ್ರದಾಯಿಕ ನೇಜಿ ನಾಟಿಯ ಕುರಿತು ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಕ್ರಮವನ್ನು ಅರಂತೋಡು ಪೂಜಾರಿ ಮನೆ ಗದ್ದೆಯಲ್ಲಿ ನಡೆಸಲಾಯಿತು. ವಿದ್ಯಾರ್ಥಿಗಳಿಗೆ ಭತ್ತದ ಕೃಷಿಯ ಅರಿವು ಮೂಡಿಸಲು ಗದ್ದೆಯ ಯಾಜಮಾನ ಶ್ರೀ ಭರತ್ ಮತ್ತು ಮನೆಯವರು, ಕೃಷಿ ಕೆಲಸಗಾರರು ಜನಪದ ಹಾಡು, ಕುಣಿತದೊಂದಿಗೆ ಮಕ್ಕಳನ್ನೂ ರಂಜಿಸಿದರು. ಉಪನ್ಯಾಸಕರ ಪ್ರೋತ್ಸಾಹದಿಂದ ನೇಜಿ

ಅರಂತೋಡು: ಉಪನ್ಯಾಸಕರಿಂದ ಸಾಂಪ್ರದಾಯಿಕ ನೇಜಿ ನಾಟಿ ಪಾಠ Read More »

ಕರಾವಳಿ, ಕರ್ನಾಟಕ

ಮಾಣಿ: ಆಟೋರಿಕ್ಷಾ- ಲಾರಿ ನಡುವೆ ಢಿಕ್ಕಿ ➤ ಓರ್ವನಿಗೆ ಗಾಯ

(ನ್ಯೂಸ್ ಕಡಬ) newskadaba.com ಮಾಣಿ, ಜು. 23. ಅಟೋ ರಿಕ್ಷಾಕ್ಕೆ ಹಿಂದಿನಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಘಟನೆ ಮಾಣಿ ಮೈಸೂರು ಹೆದ್ದಾರಿಯ ಮಾಣಿ ಸಮೀಪದ ಸೂರಿಕುಮೇರು ಎಂಬಲ್ಲಿ ನಡೆದಿದೆ. ಮಾಣಿಯಿಂದ ಕಲ್ಲಡ್ಕ ಕಡೆಗೆ ತೆರಳುತ್ತಿದ್ದ ಆಟೋ ರಿಕ್ಷಾಕ್ಕೆ ಹಿಂಭಾಗದಿಂದ ಬಂದ ಲಾರಿ ಡಿಕ್ಕಿ ಹೊಡೆದಿದ್ದು, ಪರಿಣಾಮ ರಿಕ್ಷಾ ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯರು ಹತ್ತಿರದ ಆಸ್ಪತ್ರೆಗೆ ಕೊಂಡೊಯ್ದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ ಆಟೋ

ಮಾಣಿ: ಆಟೋರಿಕ್ಷಾ- ಲಾರಿ ನಡುವೆ ಢಿಕ್ಕಿ ➤ ಓರ್ವನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪುತ್ತೂರು: ಬೆಲ್ಲದಲ್ಲಿ ಬ್ಯಾಟರಿ ಪತ್ತೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 23. ಇಲ್ಲಿನ ನೆಟ್ಟಣಿಗೆ ಮುಡ್ನೂರಿನಲ್ಲಿ ಪೂಜೆಗೆಂದು ತಂದ‌ ಬೆಲ್ಲದೊಳಗೆ ಬ್ಯಾಟರಿ ಪತ್ತೆಯಾದ ಘಟನೆ ವರದಿಯಾಗಿದೆ. ನೆಟ್ಟಣಿಗೆ ಮುಡ್ನೂರು ಗ್ರಾಮದ ಪೆರ್ನಾಜೆ ರಾಮಕೃಷ್ಣ ಉಂಗ್ರುಪುಳಿತ್ತಾಯ ಎಂಬವರು‌ ಇಂದು ಬೆಳಗ್ಗೆ ಪೂಜೆಗೆಂದು ತಂದಿಟ್ಟಿದ್ದ ಬೆಲ್ಲವನ್ನು ಅಡುಗೆಗೆಂದು ಹುಡಿಮಾಡಿ ಬಳಸುವ ವೇಳೆ ಅದರಲ್ಲಿ ಬ್ಯಾಟರಿ ಪತ್ತೆಯಾಗಿದೆ‌.  

ಪುತ್ತೂರು: ಬೆಲ್ಲದಲ್ಲಿ ಬ್ಯಾಟರಿ ಪತ್ತೆ Read More »

ಕರಾವಳಿ, ಕರ್ನಾಟಕ

ನೆಲ್ಯಾಡಿಯ ವ್ಯಕ್ತಿ ಹೆಬ್ರಿಯಲ್ಲಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಜು. 23. ಕಾಲೇಜು ಉಪನ್ಯಾಸಕರೋರ್ವರು ಹೆಬ್ರಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಗೋಳಿತ್ತೊಟ್ಟು ಗ್ರಾಮದ ನೆಕ್ಕರೆ ನಿವಾಸಿ ಆನಂದ ಗೌಡ (33)ಎಂದು ಗುರುತಿಸಲಾಗಿದೆ. ಹೆಬ್ರಿಯ ಕಾಲೇಜೊಂದರಲ್ಲಿ ಉಪನ್ಯಾಸಕರಾಗಿದ್ದ ಇವರಿಗೆ ಮೂರು ತಿಂಗಳ ಹಿಂದೆಯಷ್ಟೇ ವಿವಾಹವಾಗಿತ್ತು. ಇವರು ವಾಸವಿದ್ದ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವುದು ವರದಿಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ.

ನೆಲ್ಯಾಡಿಯ ವ್ಯಕ್ತಿ ಹೆಬ್ರಿಯಲ್ಲಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ವರದಕ್ಷಿಣೆ ಕಿರುಕುಳ- ಹಲ್ಲೆ ➤ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 23. ವರದಕ್ಷಿಣೆ ರಹಿತ ವಿವಾಹ ಮಾಡಿಕೊಳ್ಳುವುದಾಗಿ ಪ್ರಚಾರಗಿಟ್ಟಿಸಿ ಬಳಿಕ ವರದಕ್ಷಿಣೆ ಪಡೆದು ಮದುವೆಯಾಗಿರುವ ವ್ಯಕ್ತಿಯೋರ್ವ ಇದೀಗ ಮತ್ತಷ್ಟು ವರದಕ್ಷಿಣೆ ತರುವಂತೆ ಮಾನಸಿಕ ಕಿರುಕುಳ ನೀಡಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಹಲ್ಲೆಗೊಳಗಾದವರನ್ನು ರಾಮಕುಂಜ ಆತೂರು ಪೆರ್ಜಿ ನಿವಾಸಿ ಪಿ.ಹುಸೈನ್ ಮತ್ತು ಮೈಮುನಾ ದಂಪತಿ ಪುತ್ರಿ ಸೆಮೀಮಾ ಎಂದು ಗುರುತಿಸಲಾಗಿದೆ. ಇವರನ್ನು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಈ ಕುರಿತು ಸಮೀಮಾರವರು 2012ರ ಜೂ. 15ರಂದು ನನ್ನ ವಿವಾಹವು ಹಾಸನದ ಚಿಕ್ಕನಾಡು ಟಿ.ಎಚ್.ಇಮ್ರಾನ್

ಕಡಬ: ವರದಕ್ಷಿಣೆ ಕಿರುಕುಳ- ಹಲ್ಲೆ ➤ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಯುವಕನ ಹೆಸರಿನಲ್ಲಿ ಮಂಗಳಮುಖಿ ಚಾಟಿಂಗ್ ➤ ವಿಟ್ಲ ಠಾಣಾ ಮೆಟ್ಟಿಲೇರಿದ ಯುವತಿಯ ಫೇಸ್ ಬುಕ್ ಲವ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 23. ಯುವತಿಗೆ ಫೇಸ್ ಬುಕ್ ಮೂಲಕ ವ್ಯಕ್ತಿಯೊಬ್ಬರ ಪರಿಚಯವಾಗಿ ಬಳಿಕ ಅದು ಪ್ರೀತಿಗೆ ತಿರುಗಿ ಕೊನೆಗೆ ಈ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದಾಗ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಬಂಟ್ವಾಳ ತಾಲೂಕಿನ ವಿಟ್ಲ ಪಡ್ನೂರು ಗ್ರಾಮದ ಯುವತಿಗೆ ನಾಲ್ಕು ವರ್ಷದ ಹಿಂದೆ ಫೇಸ್ ಬುಕ್ ನಲ್ಲಿ ಪ್ರದೀಪ್ ಎಂಬಾತನ ಪರಿಚಯವಾಗಿತ್ತು. ಆತನ ಮುಖ ನೋಡದೆ ಇದ್ದರೂ, ಆತನ ಪ್ರೀತಿಯ ಮಾತಿಗೆ ಮರುಳಾಗಿ ಯುವತಿ ಪ್ರೇಮಪಾಶಕ್ಕೆ ಸಿಲುಕಿದ್ದಳು. ಆತ ದಿನಾ ಕರೆ

ಯುವಕನ ಹೆಸರಿನಲ್ಲಿ ಮಂಗಳಮುಖಿ ಚಾಟಿಂಗ್ ➤ ವಿಟ್ಲ ಠಾಣಾ ಮೆಟ್ಟಿಲೇರಿದ ಯುವತಿಯ ಫೇಸ್ ಬುಕ್ ಲವ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top