ಕರಾವಳಿ

ಚೆಂಬು, ಪೆರಾಜೆ ಗ್ರಾಮದಲ್ಲಿ ಮತ್ತೆ ಭೂಕಂಪನ…!!

(ನ್ಯೂಸ್ ಕಡಬ) newskadaba.com ಸುಳ್ಯ, ಜು. 15. ಸುಳ್ಯ ಮತ್ತು ಕೊಡಗು ಗಡಿ ಭಾಗದ ಕೆಲವಡೆ ಇಂದು ಮತ್ತೆ ದೊಡ್ಡ ಶಬ್ದದೊಂದಿಗೆ ಭೂಮಿ ಕಂಪಿಸಿರುವುದು ಅನುಭವಕ್ಕೆ ಬಂದಿರುವುದಾಗಿ ಜನರು ಹೇಳಿಕೊಂಡಿದ್ದಾರೆ. ಕೊಡಗು-ಸುಳ್ಯ ಗಡಿ ಪ್ರದೇಶವಾದ ಚೆಂಬು, ಸಂಪಾಜೆ, ಗೂನಡ್ಕ, ಅರಂತೋಡು, ತೊಡಿಕಾನ ಮುಂತಾದೆಡೆ ಇಂದು ಬೆಳಗ್ಗೆ 10.09ರ ವೇಳೆಗೆ ಭೂಮಿಯ ಒಳಗಿನಿಂದ ಭಾರೀ ಶಬ್ದ ಕೇಳಿಸಿದ್ದು, ಮನೆಯಲ್ಲಿನ ವಸ್ತುಗಳೆಲ್ಲ ಅಲುಗಾಡಿವೆ ಎಂಬುದಾಗಿ ಜನರು ಮಾಹಿತಿ ನೀಡಿದ್ದಾರೆ.

ಚೆಂಬು, ಪೆರಾಜೆ ಗ್ರಾಮದಲ್ಲಿ ಮತ್ತೆ ಭೂಕಂಪನ…!! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ…! ➤ ಕಾರು ಜಖಂ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 13. ಕಾರಿನ ಮೇಲೆ ಮರ ಬಿದ್ದು ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಮಾಣಿ-ಮೈಸೂರು ರಾ.ಹೆದ್ದಾರಿ 275ರ ಸಂಟ್ಯಾರ್ ಸೇತುವೆ ಬಳಿ ಇಂದು ಮಧ್ಯಾಹ್ನ ನಡೆದಿದೆ. ಇಂದು ಮದ್ಯಾಹ್ನ ಬೀಸಿದ ಭಾರೀ ಗಾಳಿ ಬೀಸಿದ ಪರಿಣಾಮ ಚಲಿಸುತ್ತಿದ್ದ ಕಾರಿನ ಮೇಲೆ ಮರ ಮುರಿದು ಬಿದ್ದಿದೆ. ಪರಿಣಾಮ ಕಾರು ಭಾಗಶಃ ಜಖಂಗೊಂಡಿದ್ದು ಕಾರಿನಲ್ಲಿದ್ದವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಷ್ಟೆ.

ಪುತ್ತೂರು: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ…! ➤ ಕಾರು ಜಖಂ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ: ಕೆಮಿಕಲ್ ಸಾಗಾಟದ ಲಾರಿ ಪಲ್ಟಿ ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು. 13. ಕೆಮಿಕಲ್ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಹೊಳೆಗೆ ಬಿದ್ದ ಪರಿಣಾಮ ಚಾಲಕ ಹಾಗೂ ಕ್ಲೀನರ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ಇಂದು ಮುಂಜಾನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿರುವುದಾಗಿ ತಿಳಿದು ಬಂದಿದೆ.

ನೆಲ್ಯಾಡಿ: ಕೆಮಿಕಲ್ ಸಾಗಾಟದ ಲಾರಿ ಪಲ್ಟಿ ➤ ಇಬ್ಬರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಟ್ಲ: ಹಾಡಹಗಲೇ ಮಾರಕಾಸ್ತ್ರದಿಂದ ಹಲ್ಲೆ ➤ ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಜು. 13. ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಗಳಿಬ್ಬರ ನಡುವೆ ಮಾತಿಗೆ ಮಾತು ಬೆಳೆದು ಓರ್ವನ ಇನ್ನೋರ್ವನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಪರಿಣಾಮ ಗಂಭೀರ ಗಾಯಗೊಂಡ ಘಟನೆ ವಿಟ್ಲ ಸಮೀಪದ ಅಡ್ಯನಡ್ಕ ಮರಕ್ಕಿಣಿ ಎಂಬಲ್ಲಿ ಮಂಗಳವಾರದಂದು ಸಂಜೆ ನಡೆದಿದೆ. ಅಮಲು ಪದಾರ್ಥ ಸೇವಿಸಿದ ವ್ಯಕ್ತಿಯು ಈ ಕೃತ್ಯ ಎಸಗಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಅಡ್ಯನಡ್ಕ ಸಮೀಪದ ಸಾರಡ್ಕ ಎಂಬಲ್ಲಿ ಪೋಲೀಸ್ ಚೆಕ್ ಪೋಸ್ಟ್ ಇದ್ದರೂ ವ್ಯಕ್ತಿಯ ಮೇಲೆ ಈ ದಾಳಿ ನಡೆದಿರುವುದು ಸಾರ್ವಜನಿಕ ವಲಯದಲ್ಲಿ

ವಿಟ್ಲ: ಹಾಡಹಗಲೇ ಮಾರಕಾಸ್ತ್ರದಿಂದ ಹಲ್ಲೆ ➤ ಓರ್ವ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮರದ ಗೆಲ್ಲು ಕಡಿಯುತ್ತಿದ್ದ ವೇಳೆ ಕರೆಂಟ್ ಶಾಕ್ ಹೊಡೆದು ಲೈನ್ ಮ್ಯಾನ್ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 12. ಮರದ ಗೆಲ್ಲು ಕಡಿಯುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮೆಸ್ಕಾಂ ಪವರ್‌ಮ್ಯಾನ್ ಮೃತಪಟ್ಟ ಘಟನೆ ಕುಂಬ್ರ ಸಮೀಪದ ಪರ್ಪುಂಜದಲ್ಲಿ ಇಂದು ನಡೆದಿದೆ.   ಮೃತರನ್ನು ಮೆಸ್ಕಾಂ ಕುಂಬ್ರ ಶಾಖೆಯ ಪವರ್ ಮ್ಯಾನ್ ಬಸವರಾಜ್ (26) ಎಂದು ಗುರುತಿಸಲಾಗಿದೆ. ಬಸವರಾಜ್ ಮೂಲತಃ ಬಾಗಲಕೋಟೆ ನಿವಾಸಿಯಾಗಿದ್ದು, ಕೆಲವು ಸಮಯಗಳಿಂದ ಕುಂಬ್ರ ಮೆಸ್ಕಾಂನಲ್ಲಿ ನಿರ್ವಹಿಸುತ್ತಿದ್ದರೆನ್ನಲಾಗಿದೆ.

ಮರದ ಗೆಲ್ಲು ಕಡಿಯುತ್ತಿದ್ದ ವೇಳೆ ಕರೆಂಟ್ ಶಾಕ್ ಹೊಡೆದು ಲೈನ್ ಮ್ಯಾನ್ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ ಮೆಸ್ಕಾಂ ಜೆ.ಇ ಆಗಿ ವಸಂತ ಕುಮಾರ್ ಟಿ.ಎಂ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಕಡಬ, ಜು. 12. ಹರಿಹರ ಪಲ್ಲತ್ತಡ್ಕದಲ್ಲಿ ಕಳೆದ 12 ವರ್ಷಗಳಿಂದ ಗ್ರೇಡ್ ಸೆಕೆಂಡ್ ಲೈನ್ ಮೆಕ್ಯಾನಿಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಸಂತ ಕುಮಾರ್ ಟಿ.ಎಂ ಅವರು ಕಡಬ ಮೆಸ್ಕಾಂ ಜೆ.ಇ ಆಗಿ ಅಧಿಕಾರ ಸ್ವೀಕರಿಸಿದರು.   ಎ.ಇ.ಇ ಸಜಿಕುಮಾರ್ ಮತ್ತು ಎ.ಇ ಸತ್ಯನಾರಾಯಣ ಸಿ.ಕೆ ಅಧಿಕಾರ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಅಸಿಸ್ಟೆಂಟ್ ಲೆಕ್ಕಾಧಿಕಾರಿ ಕೃಷ್ಣ ಮೂರ್ತಿ ಮತ್ತು ಕಡಬ ಉಪವಿಭಾಗದ ಬಿಳಿನೆಲೆ, ಆಲಂಗಾರು, ನೆಲ್ಯಾಡಿಯ ಎಲ್ಲಾ ಶಾಖಾ ಅಧಿಕಾರಿಗಳು ಮತ್ತು ಉಪವಿಭಾಗದ

ಕಡಬ ಮೆಸ್ಕಾಂ ಜೆ.ಇ ಆಗಿ ವಸಂತ ಕುಮಾರ್ ಟಿ.ಎಂ ಅಧಿಕಾರ ಸ್ವೀಕಾರ Read More »

ಕರಾವಳಿ, ಕರ್ನಾಟಕ

ಬೈತಡ್ಕ: ಕಾರು ಅಪಘಾತ ಪ್ರಕರಣ ➤ ಎರಡೂ ಮೃತದೇಹಗಳು ಪತ್ತೆ – ಗೊಂದಲಗಳಿಗೆ ತೆರೆ

(ನ್ಯೂಸ್ ಕಡಬ) newskadaba.com ಕಡಬ, ಜು.12. ಶನಿವಾರ ತಡರಾತ್ರಿ ಸೇತುವೆಯಿಂದ ಕೆಳಕ್ಕೆ ಕಾರು ಬಿದ್ದು ನಾಪತ್ತೆಯಾಗಿದ್ದ ಯುವಕರಿಬ್ಬರ ಮೃತದೇಹವು ಮಂಗಳವಾರ ಬೆಳಿಗ್ಗೆ ಪತ್ತೆಯಾಗಿದೆ. ಅಪಘಾತ ನಡೆದು 200 ಮೀ. ವ್ಯಾಪ್ತಿಯಲ್ಲಿ ಮೃತದೇಹವು ಮೊದಲು ಪತ್ತೆಯಾಗಿದ್ದು, ಸ್ವಲ್ಪ ಅಂತರದಲ್ಲೇ ಎರಡನೇ ಮೃತದೇಹ ಪತ್ತೆಯಾಗಿದೆ. ಈ ಮೂಲಕ ಕಳೆದೆರಡು ದಿನಗಳಿಂದ ಮೂಡಿದ್ದಂತಹ ಗೊಂದಲಗಳಿಗೆ ತೆರೆ ಬಿದ್ದಂತಾಗಿದೆ. ಹೊಳೆಯಲ್ಲಿ ನೀರು ಕಡಿಮೆಯಾದ ಹಿನ್ನೆಲೆಯಲ್ಲಿ ಮೃತದೇಹವನ್ನು ಸುಲಭವಾಗಿ ಪತ್ತೆಹಚ್ಚಲು ಸಾಧ್ಯವಾಗಿದೆ. ಸ್ಥಳದಲ್ಲಿ ಪೊಲೀಸ್, ಕಂದಾಯ ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ಕಳೆದ ಮೂರು

ಬೈತಡ್ಕ: ಕಾರು ಅಪಘಾತ ಪ್ರಕರಣ ➤ ಎರಡೂ ಮೃತದೇಹಗಳು ಪತ್ತೆ – ಗೊಂದಲಗಳಿಗೆ ತೆರೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಾಣಿಯೂರು: ಕಾರು ದುರಂತ ➤ ಓರ್ವನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಜು.12. ಬೈತ್ತಡ್ಕ ಹೊಳೆಗೆ ಕಾರು ಬಿದ್ದು ನಾಪತ್ತೆಯಾಗಿದ್ದ ಯುವಕನೋರ್ವನ ಮೃತದೇಹ ಘಟನೆ ನಡೆದ 200 ಮೀಟರ್ ದೂರದಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ.   ಹೊಳೆಯ ಬದಿಯಲ್ಲಿದ್ದ ಮರದ ದಿಮ್ಮಿಯಲ್ಲಿ ಜೋತು ಹಾಕಿಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಇನ್ನೋರ್ವನ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ.

ಕಾಣಿಯೂರು: ಕಾರು ದುರಂತ ➤ ಓರ್ವನ ಮೃತದೇಹ ಪತ್ತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸ್ವತಃ ಊಟ ಬಡಿಸದೇ, ನೀನೇ ಬಡಿಸಿಕೊಂಡು ಉಣ್ಣು ಎಂದ ತಾಯಿ..!!! ➤ ನೇಣಿಗೆ ಶರಣಾದ ಬಾಲಕ

(ನ್ಯೂಸ್ ಕಡಬ) newskadaba.com ಕೋಟ, ಜು. 12. ತಾಯಿಯು ಊಟ ಬಡಿಸದೇ, ನೀನೇ ಹೋಗಿ ಬಡಿಸಿಕೋ ಎಂದು ಹೇಳಿದ್ದಕ್ಕೆ ಬಾಲಕನೋರ್ವ ನೇಣಿಗೆ ಶರಣಾದ ಘಟನೆ ಉಡುಪಿ ಜಿಲ್ಲೆಯ ಕೋಟದಲ್ಲಿ ಸಕೊಮವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಕೋಟ ಸಮೀಪದ ಕಾರ್ಕಡ ನಿವಾಸಿ ಲಕ್ಷ್ಮೀ ಎಂಬವರ ಪುತ್ರ 9ನೇ ತರಗತಿ ವಿದ್ಯಾರ್ಥಿ ನಾಗೇಂದ್ರ (14) ಎಂದು ಗುರುತಿಸಲಾಗಿದೆ. ಈತನ ತಾಯಿ ಲಕ್ಷ್ಮೀ ಅವರು, ಜೀವನೋಪಾಯ ಕ್ಕಾಗಿ ಕಾರ್ಕಡದ ತನ್ನ ಮನೆಪಕ್ಕದಲ್ಲೇ ವೀರಭದ್ರ ಎಂಬ ಸಣ್ಣ ಕ್ಯಾಂಟೀನ್‌ ನಡೆಸುತ್ತಿದ್ದಾರೆ. ವಿಪರೀತ

ಸ್ವತಃ ಊಟ ಬಡಿಸದೇ, ನೀನೇ ಬಡಿಸಿಕೊಂಡು ಉಣ್ಣು ಎಂದ ತಾಯಿ..!!! ➤ ನೇಣಿಗೆ ಶರಣಾದ ಬಾಲಕ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನಾಳೆ (ಜು. 12) ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದ.ಕ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 11. ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಜು.12 ರಿಂದ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ವಿವರ ಇಂತಿದೆ: ಜು.12ರ ಮಂಗಳವಾರದಂದು ಮಧ್ಯಾಹ್ನ 2.30ಕ್ಕೆ ಕೊಡಗು ಜಿಲ್ಲೆಯ ಮಡಿಕೇರಿಯಿಂದ ನಿರ್ಗಮಿಸಿ, ರಸ್ತೆ ಮೂಲಕ ಸುಳ್ಯ ಮಾರ್ಗವಾಗಿ ಆಗಮಿಸಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡುವರು. ರಾತ್ರಿ 7.30ಕ್ಕೆ ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ಉಡುಪಿಗೆ ತೆರಳುವರು. ಜು.13ರ ಬುಧವಾರದಂದು ಸಂಜೆ 6.30ಕ್ಕೆ ಉಡುಪಿಯಿಂದ ರಸ್ತೆ ಮಾರ್ಗವಾಗಿ ಹೊರಟು ರಾತ್ರಿ 7.30ಕ್ಕೆ ಮಂಗಳೂರಿನ ಬಜಪೆ

ನಾಳೆ (ಜು. 12) ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದ.ಕ ಜಿಲ್ಲಾ ಪ್ರವಾಸ Read More »

ಕರಾವಳಿ, ಕರ್ನಾಟಕ
Scroll to Top