ಕರಾವಳಿ

ಪುಳಿಕುಕ್ಕು: ರಸ್ತೆಗೆ ಬಂದ ನೆರೆ ನೀರು ➤ ಕಡಬ – ಪಂಜ ರಸ್ತೆ ಸಂಚಾರ ಸ್ಥಗಿತ

(ನ್ಯೂಸ್ ಕಡಬ) newskadaba.com ಕಡಬ, ಜು.10. ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ಕಡಬ – ಪಂಜ ರಸ್ತೆಯ ಪುಳಿಕುಕ್ಕು ಎಂಬಲ್ಲಿ ಕುಮಾರಧಾರಾ ನದಿಯ ನೀರು ರಸ್ತೆಗೆ ನುಗ್ಗಿದ್ದು, ಪಂಜ – ಕಡಬ ಸಂಚಾರ ಸ್ಥಗಿತಗೊಂಡಿದೆ. ಕೆಲವು ವಾಹನಗಳು ನೆರೆ ನೀರಿನಲ್ಲಿ ಸಂಚರಿಸುತ್ತಿದೆಯಾದರೂ, ಹಲವರು ಪುಳಿಕುಕ್ಕು, ಎಡಮಂಗಲ, ನಿಂತಿಕಲ್ಲು ಮೂಲಕ ಪಂಜಕ್ಕೆ ತೆರಳುತ್ತಿದ್ದಾರೆ.    

ಪುಳಿಕುಕ್ಕು: ರಸ್ತೆಗೆ ಬಂದ ನೆರೆ ನೀರು ➤ ಕಡಬ – ಪಂಜ ರಸ್ತೆ ಸಂಚಾರ ಸ್ಥಗಿತ Read More »

ಕರಾವಳಿ

ಕಡಬ: ಕಿರುಸೇತುವೆಯಿಂದ ಕೆಳಕ್ಕೆ ಬಿದ್ದ ಕಾರು ➤ ನೀರುಪಾಲಾದ ಶಂಕೆ, ದೃಶ್ಯ ಸಿಸಿಟಿವಿಯಲ್ಲಿ ಸೆರೆ

(ನ್ಯೂಸ್ ಕಡಬ) newskadaba.com ಕಡಬ, ಜು.10. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಉಕ್ಕಿ ಹರಿಯುತ್ತಿರುವ ಹೊಳೆಗೆ ಬಿದ್ದ ಘಟನೆ ಶನಿವಾರ ತಡರಾತ್ರಿ ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರಿನಿಂದ ಕಾಣಿಯೂರು ಕಡೆಗಡ ತೆರಳುತ್ತಿದ್ದ ಅಪರಿಚಿತ ಕಾರು ತಡರಾತ್ರಿ ವೇಳೆಗೆ ಬೈತಡ್ಕ ಗೌರಿಹೊಳೆಗೆ ಬಿದ್ದಿದ್ದು, ಈ ದೃಶ್ಯವು ಬೈತಡ್ಕ ಜುಮಾ ಮಸೀದಿಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾರು ಯಾರದ್ದು, ಕಾರಿನಲ್ಲಿ ಎಷ್ಟು ಮಂದಿ ಇದ್ದರೆಂಬ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ. ಸ್ಥಳಕ್ಕೆ ಬೆಳ್ಳಾರೆ ಠಾಣಾ ಪೊಲೀಸರು ಭೇಟಿ

ಕಡಬ: ಕಿರುಸೇತುವೆಯಿಂದ ಕೆಳಕ್ಕೆ ಬಿದ್ದ ಕಾರು ➤ ನೀರುಪಾಲಾದ ಶಂಕೆ, ದೃಶ್ಯ ಸಿಸಿಟಿವಿಯಲ್ಲಿ ಸೆರೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಸಿಸಿಬಿ ದಾಳಿ ➤ ಗಾಂಜಾ ಮಾರಾಟ ಮಾಡುತ್ತಿದ್ದ 12 ವಿದ್ಯಾರ್ಥಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 09. ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಹಾಗೂ ಗಾಂಜಾವನ್ನು ಹೊಂದಿದ 12 ಮಂದಿ ವಿದ್ಯಾರ್ಥಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತರನ್ನು ಕೇರಳ ಮೂಲದ ಶಾನೂಫ್ ಅಬ್ದುಲ್ ಗಫೂರ್ (21), ಮುಹಮ್ಮದ್ ರಸೀನ್(22), ಗೋಕುಲ ಕೃಷ್ಣನ್ (22), ಶಾರೂನ್ ಆನಂದ(19), ಅನಂತು ಕೆ ಪಿ(18), ಅಮಲ್(21), ಅಭಿಷೇಕ(21), ನಿದಾಲ್(21), ಶಾಹೀದ್ ಎಂ.ಟಿ.ಪಿ(22), ಫಹಾದ್ ಹಬೀಬ್(22), ಮುಹಮ್ಮದ್ ರಿಶಿನ್(22), ರಿಜಿನ್ ರಿಯಾಝ್(22)

ಮಂಗಳೂರು: ಸಿಸಿಬಿ ದಾಳಿ ➤ ಗಾಂಜಾ ಮಾರಾಟ ಮಾಡುತ್ತಿದ್ದ 12 ವಿದ್ಯಾರ್ಥಿಗಳ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆ ➤ ಸೈಂಟ್ ಆನ್ಸ್ ಶಾಲೆಯ ಪ್ರಣಮ್ ಸಂಕಡ್ಕ ತೃತೀಯ

(ನ್ಯೂಸ್ ಕಡಬ) newskadaba.com ಕಡಬ, ಜು. 08. ವಿಜಯ ಕರ್ನಾಟಕ ಕನ್ನಡ ದಿನಪತ್ರಿಕೆ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಸ್ತುತಪಡಿಸಿದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಕಡಬದ ಸೈಂಟ್ ಆನ್ಸ್ ಶಾಲೆಯ 6ನೇ ತರಗತಿಯ ವಿದ್ಯಾರ್ಥಿ ಪ್ರಣಮ್ ಸಂಕಡ್ಕ ತೃತೀಯ ಸ್ಥಾನವನ್ನು ಗಳಿಸಿರುತ್ತಾನೆ. ಇವನು ಶ್ರೀಚಿನ್ನಪ್ಪ ಸಂಕಡ್ಕ ಮತ್ತು ಶ್ರೀಮತಿ ಭಾರತಿ ದಂಪತಿಗಳ ಪುತ್ರ. ಇವನಿಗೆ ಚಿತ್ರಕಲಾ ಶಿಕ್ಷಕ ಸತೀಶ್

ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆ ➤ ಸೈಂಟ್ ಆನ್ಸ್ ಶಾಲೆಯ ಪ್ರಣಮ್ ಸಂಕಡ್ಕ ತೃತೀಯ Read More »

ಕರಾವಳಿ, ಕರ್ನಾಟಕ

ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ➤ ನಿಂತಿಕಲ್ಲು ಕೆ.ಎಸ್.ಗೌಡ ಶಾಲೆಯ ಕುಶ್ಮಿತಾ ಶಿರಾಜೆ ತೃತೀಯ

(ನ್ಯೂಸ್ ಕಡಬ) newskadaba.com ಕಡಬ, ಜು. 08. ವಿಜಯ ಕರ್ನಾಟಕ ಕನ್ನಡ ದಿನಪತ್ರಿಕೆ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಸ್ತುತಪಡಿಸಿದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ನಿಂತಿಕಲ್ಲು ಕೆಎಸ್.ಗೌಡ ಪ್ರೌಢಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿನಿ ಕುಶ್ಮಿತಾ ಶಿರಾಜೆ ಅವರು ತೃತೀಯ ಸ್ಥಾನ ಹಾಗೂ ವಿಜಯವಾಣಿ ಕನ್ನಡ ದಿನಪತ್ರಿಕೆ ಇವರು ಪ್ರಸ್ತುತಪಡಿಸಿದ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಸಮಾಧಾನಕರ ಪ್ರಶಸ್ತಿಯನ್ನು ಪಡೆದಿರುತ್ತಾಳೆ.

ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ➤ ನಿಂತಿಕಲ್ಲು ಕೆ.ಎಸ್.ಗೌಡ ಶಾಲೆಯ ಕುಶ್ಮಿತಾ ಶಿರಾಜೆ ತೃತೀಯ Read More »

ಕರಾವಳಿ, ಕರ್ನಾಟಕ

ಕುಂತೂರು: ಆಟೋ ರಿಕ್ಷಾ – ಟಾಟಾ ಏಸ್ ನಡುವೆ ಅಪಘಾತ ➤ ಕಡಬದ ರಿಕ್ಷಾ ಚಾಲಕ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಜು.08. ಟಾಟಾ ಏಸ್ ಹಾಗೂ ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪದವು ಸಮೀಪದ ಎರ್ಮಾಳ ಎಂಬಲ್ಲಿ ಶುಕ್ರವಾರ ಅಪರಾಹ್ನ ನಡೆದಿದೆ. ಗಾಯಾಳು ಚಾಲಕನನ್ನು ಮರ್ಧಾಳ ಸಮೀಪದ ಸುಳ್ಯ ಮೇಪತ್ತಪಾಲು ನಿವಾಸಿ ಹರೀಶ್ ಎಂದು ಗುರುತಿಸಲಾಗಿದೆ. ಕುಂತೂರು ಪದವು ಸಮೀಪದ ಎರ್ಮಾಳ ಎಂಬಲ್ಲಿ ಈ ಘಟನೆ ಸಂಭವಿಸಿದ್ದು, ಗಂಭೀರ ಗಾಯಗೊಂಡ ರಿಕ್ಷಾ ಚಾಲಕನನ್ನು ಪುತ್ತೂರಿನ ಆಸ್ಪತ್ರೆಗೆ

ಕುಂತೂರು: ಆಟೋ ರಿಕ್ಷಾ – ಟಾಟಾ ಏಸ್ ನಡುವೆ ಅಪಘಾತ ➤ ಕಡಬದ ರಿಕ್ಷಾ ಚಾಲಕ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಓಮ್ನಿ ಮೇಲೆ ಪಲ್ಟಿಯಾದ ಸರಕು ಸಾಗಾಟದ ಲಾರಿ..! ➤ ಚಾಲಕ ಗಂಭೀರ

(ನ್ಯೂಸ್ ಕಡಬ) newskadaba.com ಸುರತ್ಕಲ್, ಜು. 08. ಸರಕು ಸಾಗಾಟದ ಲಾರಿಯೊಂದು ಓಮ್ನಿ ಕಾರಿನ ಮೇಲೆ ಪಲ್ಟಿಯಾದ ಪರಿಣಾಮ ಓಮ್ನಿ ಚಾಲಕ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಹೊನ್ನಕಟ್ಟೆ ಜಂಕ್ಷನ್ ನಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ ಓಮ್ನಿ ಸಂಪೂರ್ಣ ಅಪ್ಪಚ್ಚಿಯಾಗಿದ್ದು, ಸುರತ್ಕಲ್ ಉತ್ತರ ಟ್ರಾಫಿಕ್ ಪೊಲೀಸರು ಸ್ಥಳಕ್ಕಾಗಮಿಸಿ ಕ್ರೇನ್ ಸಹಾಯದಿಂದ ಲಾರಿಯನ್ನು ಎತ್ತಿ ಓಮ್ನಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಓಮ್ನಿ ಮೇಲೆ ಪಲ್ಟಿಯಾದ ಸರಕು ಸಾಗಾಟದ ಲಾರಿ..! ➤ ಚಾಲಕ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಸರಸ್ವತೀ ವಿದ್ಯಾಲಯದ ಶಿಶುಮಂದಿರದ ತಡೆಗೋಡೆ ಕುಸಿತ..!!

(ನ್ಯೂಸ್ ಕಡಬ) newskadaba.com ಕಡಬ, ಜು. 08. ನಿರಂತರ ಸುರಿದ ಮಳೆಗೆ ಕಡಬ-ಪಂಜ ರಸ್ತೆಯ ವಿದ್ಯಾನಗರದಲ್ಲಿನ ಶಾಲೆಯೊಂದರ ತಡೆಗೋಡೆ ಕುಸಿದು ಬಿದ್ದ ಘಟನೆ ವರದಿಯಾಗಿದೆ. ಇಲ್ಲಿನ ಸರಸ್ವತೀ ವಿದ್ಯಾಲಯವು ತಮ್ಮ ಶಾಲಾ ವಠಾರದಲ್ಲಿದ್ದ ಶಿಶು ಮಂದಿರದ ಬಳಿ ತಡೆಗೋಡೆ ನಿರ್ಮಿಸಿತ್ತು. ಇದೀಗ ನಿರಂತರ ಸುರಿಯುತ್ತಿರುವ ವಿಪರೀತ ಮಳೆಗೆ ರಸ್ತೆ ಸಮೀಪದ ತಡೆಗೋಡೆಯ ಮಣ್ಣು ಸಡಿಲಗೊಂಡು ಪೂರ್ತಿಯಾಗಿ ವಾಲಿಕೊಂಡಿದೆ. ಪಿಲ್ಲರ್ ಅಳವಡಿಸದೇ ತಡೆಗೋಡೆ ನಿರ್ಮಿಸಿರುವುದೇ ಈ ಕುಸಿತಕ್ಕೆ ಕಾರಣ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಡಬ: ಸರಸ್ವತೀ ವಿದ್ಯಾಲಯದ ಶಿಶುಮಂದಿರದ ತಡೆಗೋಡೆ ಕುಸಿತ..!! Read More »

ಕರಾವಳಿ, ಕರ್ನಾಟಕ

ವಾರಪೂರ್ತಿ ರಜೆ ಹಿನ್ನೆಲೆ- ಸಾರ್ವತ್ರಿಕ ರಜೆಗೆ ಕತ್ತರಿ ➤ ಶಿಕ್ಷಣ ಸಂಸ್ಥೆಗಳಿಗೆ ದ.ಕ ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 08. ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಶಾಲಾ ಕಾಲೇಜುಗಳಿಗೆ ನೀಡಲಾದ ರಜೆಯ ಅವಧಿಯಲ್ಲಿ ನಿರ್ವಹಿಸಬೇಕಾಗಿದ್ದ ಪಠ್ಯಗಳನ್ನು ಇತರ ಸಾರ್ವತ್ರಿಕ ರಜಾದಿನಗಳಂದು ಸರಿದೂಗಿಸಬೇಕು ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಿದ್ದಾರೆ. ಜಿಲ್ಲೆಯಲ್ಲಿ ಕಳೆದ ಮಂಗಳವಾರದಿಂದ ವಿಪರೀತ ಮಳೆ ಸುರಿಯುತ್ತಿದ್ದು, ನಿರಂತರವಾಗಿ ರೆಡ್ ಅಲರ್ಟ್ ಘೋಷಣೆಯಾಗುತ್ತಿದೆ. ಅಲ್ಲದೇ, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಮನೆಗಳಿಗೂ ನೀರು ನುಗ್ಗುತ್ತಿದೆ. ಜಿಲ್ಲೆಯ ಕೆಲವೆಡೆ ಭೂಕುಸಿತದಂತಹ

ವಾರಪೂರ್ತಿ ರಜೆ ಹಿನ್ನೆಲೆ- ಸಾರ್ವತ್ರಿಕ ರಜೆಗೆ ಕತ್ತರಿ ➤ ಶಿಕ್ಷಣ ಸಂಸ್ಥೆಗಳಿಗೆ ದ.ಕ ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ, ಕರ್ನಾಟಕ

ಟ್ಯಾಂಕರ್ ನಿಂದ ಲಿಕ್ವಿಡ್ ಸೋರಿಕೆ ➤ ಸಾರ್ವಜನಿಕರಲ್ಲಿ ಆತಂಕ

(ನ್ಯೂಸ್ ಕಡಬ) newskadaba.com ಕಾಪು‌, ಜು. 08. ಟ್ಯಾಂಕರ್ ವೊಂದರಿಂದ ರಾಷ್ಟ್ರೀಯ ಹೆದ್ದಾರಿ 66 ರ ಉಳಿಯಾರಗೋಳಿ ಬಿಕ್ಕೋ ಎಂಬಲ್ಲಿ ಲಿಕ್ವಿಡ್ ಸೋರಿಕೆಯಾಗುತ್ತಿದ್ದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಮಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ನ ಹೊರ ಭಾಗದಲ್ಲಿ ಲಿಕ್ವಿಡ್ ಸೋರಿಕೆಯಾಗಿದ್ದು, ಸ್ಥಳೀಯರು ಭಯಭೀತಗೊಂಡಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ‌ ದೌಡಾಯಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗದಲ್ಲಿ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಘಟನಾ ಸ್ಥಳಕ್ಕೆ ಕಾಪು‌ ಪೊಲೀಸರು ಸ್ಥಳಕ್ಕೆ‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟ್ಯಾಂಕರ್ ನಿಂದ ಲಿಕ್ವಿಡ್ ಸೋರಿಕೆ ➤ ಸಾರ್ವಜನಿಕರಲ್ಲಿ ಆತಂಕ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top