ಕರಾವಳಿ

ಅರಂತೋಡು: ಬೈಕ್- ಸ್ಕೂಟರ್ ನಡುವೆ ಢಿಕ್ಕಿ ➤ ಸವಾರರಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಜೂ. 30. ಬೈಕ್ ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸವಾರರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಅರಂತೋಡು ಬಳಿಯ ಕುಕ್ಕುಂಬಳ ಎಂಬಲ್ಲಿ ನಡೆದಿದೆ. ಬಾಜಿನಡ್ಕದಿಂದ ಅರಂತೋಡು ಪೇಟೆಗೆ ಬರುತ್ತಿದ್ದ ಐತಪ್ಪ ಬಾಜಿನಡ್ಕರವರ ಸ್ಕೂಟರ್ ಹಾಗೂ ಅರಂತೋಡಿನಿಂದ ಕುಕ್ಕುಂಬಳಕ್ಕೆ ಹೋಗುತ್ತಿದ್ದ ಬೈಕ್ ನಡುವೆ ಪರಸ್ಪರ ಢಿಕ್ಕಿ ಹೊಡೆದಿದೆ. ಪರಿಣಾಮ ಸವಾರರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎನ್ನಲಾಗಿದೆ.

ಅರಂತೋಡು: ಬೈಕ್- ಸ್ಕೂಟರ್ ನಡುವೆ ಢಿಕ್ಕಿ ➤ ಸವಾರರಿಗೆ ಗಾಯ Read More »

ಕರಾವಳಿ, ಕರ್ನಾಟಕ

ಮಂಗಳೂರು: ಮಳೆ ಅವಾಂತರ ➤ ನೀರಿನಲ್ಲಿ ಕೊಚ್ಚಿಹೋಗಿ ವ್ಯಕ್ತಿ ಮೃತ್ಯು…!

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 30. ಮುಂಜಾನೆಯಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ವ್ಯಕ್ತಿಯೋರ್ವ ತೋಡಿನಲ್ಲಿ ಕೊಚ್ಚಿಹೋಗಿ ಮೃತಪಟ್ಟ ಘಟನೆ ಕೊಲ್ನಾಡು ಕೆಎಸ್ ರಾವ್ ನಗರದಲ್ಲಿ ನಡೆದಿದೆ.   ಮೃತಪಟ್ಟವರನ್ನು ಸುನಿಲ್ ಎಂದು ಗುರುತಿಸಲಾಗಿದೆ. ಘಟನೆಯು ಬುಧವಾರ ರಾತ್ರಿ ನಡೆದಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಮುಲ್ಕಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ‌.

ಮಂಗಳೂರು: ಮಳೆ ಅವಾಂತರ ➤ ನೀರಿನಲ್ಲಿ ಕೊಚ್ಚಿಹೋಗಿ ವ್ಯಕ್ತಿ ಮೃತ್ಯು…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ: ಗ್ರಾ.ಪಂ. ವತಿಯಿಂದ ಕಾರ್ಯಾಚರಣೆ ➤ 16 ಭಿಕ್ಷಕರು ಪುನರ್ವಸತಿ ಕೇಂದ್ರಕ್ಕೆ ರವಾನೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜೂ. 30. ಇಲ್ಲಿನ ಗ್ರಾ.ಪಂ. ವತಿಯಿಂದ ಕಾರ್ಯಾಚರಣೆ ನಡೆಸಿ, ಸುಬ್ರಹ್ಮಣ್ಯದಲ್ಲಿ ಬಿಕ್ಷೆ ಬೇಡುತ್ತಿದ್ದ 16 ಬಿಕ್ಷುಕರನ್ನು ಪುನರ್ವಸತಿ ಕೇಂದ್ರಕ್ಕೆ ರವಾನಿಸಲಾಗಿದೆ. ಮಂಗಳೂರಿನ ಪುನರ್ವಸತಿ ಕೇಂದ್ರವನ್ನು ಸಂಪರ್ಕಿಸಿದ ಸುಬ್ರಹ್ಮಣ್ಯ ಗ್ರಾ.ಪಂ ಪಿಡಿಒ, ಗ್ರಾ.ಪಂ ಆಡಳಿತ ಮಂಡಳಿಯ ಸಹಕಾರದಲ್ಲಿ ಬಿಕ್ಷುಕರನ್ನು ಕಲೆ ಹಾಕಿ ಪುನರ್ವಸತಿ ಕೇಂದ್ರದವರನ್ನು ಕರೆಸಿ ಬುಧವಾರದಂದು ಬೆಳಗ್ಗೆಯಿಂದ ಕೆಲಸ ಆರಂಭಿಸಿದ್ದಾರೆ. ಪುನರ್ವಸತಿ ಕೇಂದ್ರದಿಂದ ಬಂದ ವಾಹನದಲ್ಲಿ ಸುಬ್ರಹ್ಮಣ್ಯ ಪೇಟೆಯಾದ್ಯಂತ ಅಲ್ಲಲ್ಲಿ ಬಿಕ್ಷೆ ಬೇಡುತಿದ್ದ16 ಜನ ಬಿಕ್ಷುಕರನ್ನು ವಾಹನದಲ್ಲಿ ಹಾಕಿ ಮಂಗಳೂರಿನ ಪುನರ್ವಸತಿ

ಸುಬ್ರಹ್ಮಣ್ಯ: ಗ್ರಾ.ಪಂ. ವತಿಯಿಂದ ಕಾರ್ಯಾಚರಣೆ ➤ 16 ಭಿಕ್ಷಕರು ಪುನರ್ವಸತಿ ಕೇಂದ್ರಕ್ಕೆ ರವಾನೆ Read More »

ಕರಾವಳಿ, ಕರ್ನಾಟಕ

ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆ ➤ ಜಟ್ಟಿಪಳ್ಳ ಶಾಲೆಯ ಮೇಲ್ಛಾವಣಿ ಪಕ್ಕಾಸು ಮುರಿತ- ಬಿರುಕುಬಿಟ್ಟ ಗೋಡೆ..!!

(ನ್ಯೂಸ್ ಕಡಬ) newskadaba.com ಸುಳ್ಯ, ಜೂ. 30. ಕಳೆದೆರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಸುಳ್ಯ ಜಟ್ಟಿಪಳ್ಳ ಸರಕಾರಿ‌ ಶಾಲೆಯ ಪಕ್ಕಾಸು ಮುರಿದು ಬಿದ್ದು ಹೆಂಚುಗಳು ಹುಡಿಯಾದ ಘಟನೆ ನಡೆದಿದೆ. ಘಟನೆ ರಾತ್ರಿ ವೇಳೆ ಸಂಭವಿಸಿದ್ದರಿಂದ ಯಾವುದೇ ಜೀವಹಾನಿ ಉಂಟಾಗಿಲ್ಲ. ಪಕ್ಕಾಸು ಮುರಿದುಬಿದ್ದ ಜಾಗದಲ್ಲಿ ಗೋಡೆಯ ಮೇಲ್ಭಾಗ ಬಿರುಕುಬಿಟ್ಟಿದ್ದು, ಅಪಾಯದ ಮುನ್ಸೂಚನೆಯನ್ನು ನೀಡುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಶೀಘ್ರವೇ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆ ➤ ಜಟ್ಟಿಪಳ್ಳ ಶಾಲೆಯ ಮೇಲ್ಛಾವಣಿ ಪಕ್ಕಾಸು ಮುರಿತ- ಬಿರುಕುಬಿಟ್ಟ ಗೋಡೆ..!! Read More »

ಕರಾವಳಿ, ಕರ್ನಾಟಕ

ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 30. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಜೂ.30ರಂದು ದ.ಕ‌ ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ.   ವಿವರ ಇಂತಿದೆ: ಅವರು ಇಂದು ಮಧ್ಯಾಹ್ನ 12.45ಕ್ಕೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ, ಅಲ್ಲಿನ ಅಥಿತಿಗೃಹದಲ್ಲಿ ವಾಸ್ತವ್ಯ ಹೂಡುವರು. ಮಧ್ಯಾಹ್ನ 3 ಗಂಟೆಗೆ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿ, ರಾತ್ರಿ ದೇವಸ್ಥಾನದ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುವರು. ಜುಲೈ 1ರ ಬೆಳಿಗ್ಗೆ 6 ಗಂಟೆಗೆ ಕುಕ್ಕೆಶ್ರೀ ಸುಬ್ರಹ್ಮಣ್ಯದಲ್ಲಿ ದೇವರ ದರ್ಶನ ಪಡೆದು,

ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ Read More »

ಕರಾವಳಿ, ಕರ್ನಾಟಕ

ರಾಮಕುಂಜ: ಪಶುಸಂಗೋಪನಾ ಸಚಿವರಿಂದ ಗೋಶಾಲೆಗೆ ಶಂಕುಸ್ಥಾಪನೆ ➤ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಗೋಶಾಲೆ ಆರಂಭ- ಸಚಿವ ಪ್ರಭು ಚೌವ್ಹಾನ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 30. ಕೃಷಿ ಪ್ರಧಾನ ದೇಶವಾದ ಭಾರತದಲ್ಲಿ ಗೋವಿಗೆ ಪ್ರಮುಖ ಸ್ಥಾನವಿದ್ದು, ಅವುಗಳ ರಕ್ಷಣೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಗೋಶಾಲೆ ನಿರ್ಮಾಣ ಕಾರ್ಯ ಆರಂಭಗೊಂಡಿದೆ ಎಂದು ಪಶು ಸಂಗೋಪನಾ ಇಲಾಖೆಯ ಸಚಿವರಾದ ಪ್ರಭು ಬಿ ಚೌಹಾಣ್ ಅವರು ತಿಳಿಸಿದರು. ಅವರು ಬುಧವಾರದಂದು ಕಡಬ ತಾಲೂಕಿನ ರಾಮಕುಂಜ ಗ್ರಾಮದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಜಿಲ್ಲಾ ಪ್ರಾಣಿ ದಯಾ ಸಂಘ ಮತ್ತು ರಾಮಕುಂಜ ಗ್ರಾಮ ಪಂಚಾಯತ್

ರಾಮಕುಂಜ: ಪಶುಸಂಗೋಪನಾ ಸಚಿವರಿಂದ ಗೋಶಾಲೆಗೆ ಶಂಕುಸ್ಥಾಪನೆ ➤ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಗೋಶಾಲೆ ಆರಂಭ- ಸಚಿವ ಪ್ರಭು ಚೌವ್ಹಾನ್ Read More »

ಕರಾವಳಿ, ಕರ್ನಾಟಕ

ಭಾರೀ ಮಳೆ ಹಿನ್ನೆಲೆ- ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ರಜೆ ➤ ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 30. ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆ ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ದ.ಕ ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ಅವರು ರಜೆ ಘೋಷಿಸಿದ್ದಾರೆ.

ಭಾರೀ ಮಳೆ ಹಿನ್ನೆಲೆ- ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ರಜೆ ➤ ಜಿಲ್ಲಾಧಿಕಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ನಿಯಂತ್ರಣ ತಪ್ಪಿ ತೋಟಕ್ಕೆ ಮಗುಚಿಬಿದ್ದ ಕಾರು ➤ ನಾಲ್ವರಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಜೂ. 30. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ತೋಟಕ್ಕೆ ಮಗುಚಿಬಿದ್ದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಅಲೆಟ್ಟಿ ಗ್ರಾಮದ ನಾರ್ಕೋಡಿನಲ್ಲಿ ಬುಧವಾರದಂದು ರಾತ್ರಿ ನಡೆದಿದೆ. ಹೈದರಾಬಾದ್ ಮೂಲದ ಪ್ರವಾಸಿಗರು ಕನ್ಯಾಕುಮಾರಿ ಯಾತ್ರೆ ಮುಗಿಸಿ ಸುಳ್ಯ ರಸ್ತೆಯ ಮೂಲಕ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಪಕ್ಕದ ತೋಟಕ್ಕೆ ಉರುಳಿದೆ. ಪರಿಣಾಮ ನಾಲ್ವರು ಗಾಯಗೊಂಡಿದ್ದು, ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಸುಳ್ಯ: ನಿಯಂತ್ರಣ ತಪ್ಪಿ ತೋಟಕ್ಕೆ ಮಗುಚಿಬಿದ್ದ ಕಾರು ➤ ನಾಲ್ವರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಶಾಲೆಗೆ ಬರಲು ತೊಂದರೆಯಾಗುವ ಪ್ರದೇಶದ ಮಕ್ಕಳಿಗೆ ರಜೆ ನೀಡಿ..! ➤ ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 30. ದ.ಕ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆ ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಶಾಲೆಗೆ ಬರಲು ಅನಾನುಕೂಲವಾದ ಪ್ರದೇಶದ ಮಕ್ಕಳಿಗೆ ಈ ದಿನ ರಜೆ ಸಾರಲಾಗಿದೆ. ಈಗಾಗಲೇ ಶಾಲೆಗೆ ಬಂದಿರುವ ಮಕ್ಕಳಿಗೆ ಮುಂಜಾಗ್ರತೆ ವಹಿಸಿ ತರಗತಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಶಿಕ್ಷಣ ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯ ಶಾಲಾ ಮಕ್ಕಳ ಸುರಕ್ಷತೆ ಬಗ್ಗೆ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದ್ದಾರೆ. ತಾಲೂಕು ಮಟ್ಟದಲ್ಲಿ ಮಳೆಯ ಪ್ರಮಾಣ ನೋಡಿಕೊಂಡು ಪರಿಸ್ಥಿತಿ ನಿಭಾಯಿಸಲು

ಮಂಗಳೂರು: ಶಾಲೆಗೆ ಬರಲು ತೊಂದರೆಯಾಗುವ ಪ್ರದೇಶದ ಮಕ್ಕಳಿಗೆ ರಜೆ ನೀಡಿ..! ➤ ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ, ಕರ್ನಾಟಕ

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆ- ವಿದ್ಯಾರ್ಥಿ ಸಂಘ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 29. ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆ ಕಡಬ ಇಲ್ಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯು ಸಂಸ್ಥೆಯ ಸಭಾಭವನದಲ್ಲಿ ನಡೆಯಿತು. ವಿದ್ಯಾರ್ಥಿ ಸಂಘವನ್ನು ಉದ್ಘಾಟನೆಗೈದ ಕೊಕ್ಕಡ ಸ.ಪ.ಪೂ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ವಿಶ್ವನಾಥ ರೈ ಮಾತನಾಡಿ, ವಿದ್ಯಾರ್ಥಿಗಳು ಕ್ರಿಯಾಶೀಲ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವಲ್ಲಿ ವಿದ್ಯಾರ್ಥಿ ಸಂಘಟನೆಯು ಪ್ರಮುಖ ಪಾತ್ರ ವಹಿಸುತ್ತದೆ. ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣವನ್ನು ಬೆಳೆಸುವ ಮೂಲಕ ವಿದ್ಯಾರ್ಥಿಗಳು ಭವಿಷ್ಯದ ಉತ್ತಮ ನಾಯಕರಾಗಲು ಪ್ರೇರೆಪಿಸುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದು ಹೇಳಿ ಶುಭಹಾರೈಸಿದರು. ಅಧ್ಯಕ್ಷತೆ

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆ- ವಿದ್ಯಾರ್ಥಿ ಸಂಘ ಉದ್ಘಾಟನೆ Read More »

ಕರಾವಳಿ, ಕರ್ನಾಟಕ
Scroll to Top