ಕರಾವಳಿ

ಅಕ್ರಮ ಜಾನುವಾರು ಸಾಗಾಟ ➤ ವಾಹನ ಸಹಿತ ಓರ್ವ ಅಂದರ್

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 25. ಅಕ್ರಮ ಗೋ ಸಾಗಾಟದ ವೇಳೆ ಕಾರ್ಯಾಚರಣೆ ನಡೆಸಿದ ಪೊಲೀಸರು ಪಿಕಪ್ ಸಹಿತ ಓರ್ವನನ್ನು ವಶಕ್ಕೆ ಪಡೆದ ಘಟನೆ ಮಾಣಿಯಲ್ಲಿ ನಡೆದಿದೆ.   ಬಂಧಿತ ಆರೋಪಿಯನ್ನು ಇರಾಮೂಲೆ ನಿವಾಸಿ ಮಹಮ್ಮದ್ ಎಂದು ಗುರುತಿಸಲಾಗಿದೆ. ಹಮೀದ್, ಮತ್ತು ಪವನ್ ರಾಜ್ ಪರಾರಿಯಾಗಿದ್ದು, ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಪಿಕಪ್ ವಾಹನ ಹಾಗೂ ದನಗಳನ್ನು ವಶಕ್ಕೆ ಪಡೆದಿದ್ದಾರೆ. ತನಿಖೆಯ ವೇಳೆ ದನಗಳನ್ನು ವದೆ ಮಾಡಿ ಮಾಂಸವನ್ನು ಕೇರಳಕ್ಕೆ ಸಾಗಾಟ ಮಾಡುವ ಉದ್ದೇಶದಿಂದ ಪವನ್‌ […]

ಅಕ್ರಮ ಜಾನುವಾರು ಸಾಗಾಟ ➤ ವಾಹನ ಸಹಿತ ಓರ್ವ ಅಂದರ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೆಲ್ಯಾಡಿ: ಬ್ಯಾಂಕ್ ಖಾತೆಯಿಂದ ಹಣ ಪಡೆದು ಶಿಕ್ಷಕಿಗೆ ವಂಚನೆ ➤ ಸೈಬರ್ ಕ್ರೈಮ್ ಠಾಣೆಯಲ್ಲಿ ದೂರು ದಾಖಲು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ. 25. ಬ್ಯಾಂಕ್ ಅಕೌಂಟ್ ನಂಬರ್ ಪಡೆದು ವಂಚನೆ ಮಾಡಿರುವ ಕುರಿತು ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ ಮಾದೇರಿ ನಿವಾಸಿ ಅನುರೂಪ್ ಎಂಬವರ ಪತ್ನಿ, ಬೆಳಿಯೂರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರೌಢಶಾಲಾ ವಿಭಾಗದ ಶಿಕ್ಷಕಿಯಾಗಿರುವ ಸಜಿಲಾ ಎ. ಎಂಬವರು ಮಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಜೂ.11ರಂದು ಸಜಿಲಾ ರವರ ಮಗ ಪ್ರಣವ್‌ರವರ ಮೊಬೈಲ್ ಸಂಖ್ಯೆ 7899963048ಕ್ಕೆ QP-ATM SBIನಿಂದ ಎಟಿಎಂ ಕಾರ್ಡ್ ಬ್ಲಾಕ್ ಆಗಿರುವ ಬಗ್ಗೆ

ನೆಲ್ಯಾಡಿ: ಬ್ಯಾಂಕ್ ಖಾತೆಯಿಂದ ಹಣ ಪಡೆದು ಶಿಕ್ಷಕಿಗೆ ವಂಚನೆ ➤ ಸೈಬರ್ ಕ್ರೈಮ್ ಠಾಣೆಯಲ್ಲಿ ದೂರು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪಂಜ: ಅಕ್ರಮ ಮದ್ಯ ಸಾಗಾಟ ಪ್ರಕರಣ ➤ ಆರೋಪಿಗೆ ನಿರೀಕ್ಷಣಾ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 25. ಸ್ಕೂಟರ್ ನಲ್ಲಿ ಅಕ್ರಮ ಮದ್ಯ ಸಾಗಾಟ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗೆ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಮೇ. 19ರಂದು ಪಂಜದಲ್ಲಿ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದ ಸಂದರ್ಭ ಆಕ್ಟಿವಾ ಸ್ಕೂಟರ್‌ನಲ್ಲಿ ಅಕ್ರಮ ಮದ್ಯ ಸಾಗಾಟ ಮಾಡುತ್ತಿದ್ದುದನ್ನು ಪತ್ತೆಹಚ್ಚಿದ್ದು, ಈ ಸಂದರ್ಭ ಆರೋಪಿ ಸುಳ್ಯ ಪಂಬೆತ್ತಡಿ ಗ್ರಾಮದ ಪುಟ್ಟಣ್ಣ ಗೌಡ ಎಂಬವರು ಪರಾರಿಯಾಗಿದ್ದರು. ಈ ಕುರಿತು ಪೊಲೀಸರು ಆರೋಪಿ

ಪಂಜ: ಅಕ್ರಮ ಮದ್ಯ ಸಾಗಾಟ ಪ್ರಕರಣ ➤ ಆರೋಪಿಗೆ ನಿರೀಕ್ಷಣಾ ಜಾಮೀನು ಮಂಜೂರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹಿಟ್ & ರನ್- ಸ್ಕೂಟರ್ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಪೆರ್ನೆ, ಜೂ. 25. ಕಾರೊಂದು ಸ್ಕೂಟರ್ ಗೆ ಢಿಕ್ಕಿ ಹೊಡೆದು ಪರಾರಿಯಾದ ಘಟನೆ ಮಂಗಳೂರು- ಬೆಂಗಳೂರು ರಾ.ಹೆ ಪೆರ್ನೆಯಲ್ಲಿ ನಡೆದಿದೆ. ಸ್ಕೂಟರ್ ಸವಾರ ವಿಟ್ಲ ಕಸಬ ನಿವಾಸಿ ರಾಮಣ್ಣ ಮೂಲ್ಯ ಅವರು ಗಾಯಗೊಂಡಿದ್ದಾರೆ. ಇವರು ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ಕಾರೊಂದು ಢಿಕ್ಕಿ ಹೊಡೆದು ಪರಾರಿಯಾಗಿತ್ತು. ಈ ಕುರಿತು ಸಂಚಾರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಟ್ & ರನ್- ಸ್ಕೂಟರ್ ಸವಾರನಿಗೆ ಗಾಯ Read More »

ಕರಾವಳಿ, ಕರ್ನಾಟಕ

ಮಂಗಳೂರು ನಗರದಿಂದ ಏರ್ಪೋರ್ಟ್ ಗೆ ಸಾರಿಗೆ ಬಸ್ ವ್ಯವಸ್ಥೆ ➤ ಬಹುದಿನಗಳ ಬೇಡಿಕೆ ಈಡೇರಿಕೆಗೆ ಸಾರಿಗೆ ಸಚಿವರ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 25. ಮಂಗಳೂರು ನಗರದಿಂದ ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಎಸ್ಸಾರ್ಟಿಸಿ ಬಸ್ ವ್ಯವಸ್ಥೆ ಮಾಡಬೇಕು ಎಂಬ ಬಹುದಿನಗಳ ಕನಸು ಕೊನೆಗೂ ಈಡೇರುವ ಕಾಲ ಬಂದಿದೆ. ಬೆಂಗಳೂರು ನಗರದಿಂದ ದೇವನಹಳ್ಳಿ ಏರ್ಪೋರ್ಟ್ ಗೆ ಸಾರಿಗೆ ವ್ಯವಸ್ಥೆ ಕಲ್ಪಿಸಿರುವಂತೆ ಮಂಗಳೂರಿನಲ್ಲಿಯೂ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ದೆಹಲಿ ಪತ್ರಕರ್ತರಿಬ್ಬರು ಸಚಿವ ಶ್ರೀರಾಮುಲುರವರಿಗೆ ಮನವಿ ನೀಡಿದ್ದರು. ಈ ಹಿನ್ನೆಲೆ ಸಚಿವರು ಬಸ್ ವ್ಯವಸ್ಥೆ ಏರ್ಪಡಿಸಲು ಅಧಿಕಾರಿಗಳಿಗೆ ಸೂಚಿಸಿದ್ದರು. ಈ ಬಗ್ಗೆ ಸಾರಿಗೆ ಇಲಾಖೆಯ ಕಾರ್ಯದರ್ಶಿ

ಮಂಗಳೂರು ನಗರದಿಂದ ಏರ್ಪೋರ್ಟ್ ಗೆ ಸಾರಿಗೆ ಬಸ್ ವ್ಯವಸ್ಥೆ ➤ ಬಹುದಿನಗಳ ಬೇಡಿಕೆ ಈಡೇರಿಕೆಗೆ ಸಾರಿಗೆ ಸಚಿವರ ಸೂಚನೆ Read More »

ಕರಾವಳಿ, ಕರ್ನಾಟಕ

ಸುಳ್ಯದ ವಿವಿಧೆಡೆ ಭೂಮಿ ಕಂಪಿಸಿದ ಅನುಭವ ➤ ಆತಂಕದಲ್ಲಿ ಜನತೆ

(ನ್ಯೂಸ್ ಕಡಬ) newskadaba.com ಸುಳ್ಯ, ಜೂ. 25. ತಾಲೂಕಿನ ವಿವಿಧೆಡೆ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸುಳ್ಯ ತಾಲೂಕಿನ ಮರ್ಕಂಜ, ಕೊಡಪ್ಪಾಲ, ಅರಂತೋಡು ಮೊದಲಾದ ಕಡೆಗಳಲ್ಲಿ ಬೆಳಗ್ಗೆ 9.10 ರಿಂದ 9.15 ರ ಆಸುಪಾಸಿನಲ್ಲಿ 2-3 ನಿಮಿಷಗಳ ಕಾಲದಲ್ಲಿ ಹಲವರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಈ ಕಂಪನದ ಬಗ್ಗೆ ಕಾರಣಗಳು ಇಲಾಖೆಗಳು ಇನ್ನಷ್ಟೇ ಅಧಿಕೃತಪಡಿಸಬೇಕಿದೆ.  

ಸುಳ್ಯದ ವಿವಿಧೆಡೆ ಭೂಮಿ ಕಂಪಿಸಿದ ಅನುಭವ ➤ ಆತಂಕದಲ್ಲಿ ಜನತೆ Read More »

ಕರಾವಳಿ, ಕರ್ನಾಟಕ

ಜುಲೈ 03ರಂದು ದೇರಳಕಟ್ಟೆಯ RKC ವಂಡರ್ ಸಿಟಿಯಲ್ಲಿ ಬ್ಲಡ್ ಡೋನರ್ಸ್ ಮಂಗಳೂರು ಇದರ ವತಿಯಿಂದ 350 ನೇ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 24. ಬ್ಲಡ್ ಡೋನರ್ಸ್ ಮಂಗಳೂರು (ರಿ) ಇದರ ವತಿಯಿಂದ ರೆಡ್ ಕ್ರಾಸ್ ರಕ್ತನಿಧಿ ಕೇಂದ್ರ ಮಂಗಳೂರು, ಫಾದರ್ ಮುಲ್ಲರ್ ರಕ್ತನಿಧಿ ಕೇಂದ್ರ ಮಂಗಳೂರು, ಯೆನೆಪೋಯಾ ಮೆಡಿಕಲ್ ಕಾಲೇಜು ರಕ್ತನಿಧಿ ಕೇಂದ್ರ ದೇರಳಕಟ್ಟೆ ಇದರ ಸಹಯೋಗದೊಂದಿಗೆ ಸಾಧನೆಯ ಹಾದಿಯಲ್ಲಿ ಬಿ.ಡಿ.ಎಂ ಹೆಜ್ಜೆ “ಕರಾವಳಿಯ ಚರಿತ್ರೆಯ ಪುಟಗಳಿಗೆ ಮತ್ತೊಂದು ಗರಿ” ಎಂಬ ಧ್ಯೇಯದೊಂದಿಗೆ ಬ್ಲಡ್ ಡೋನರ್ಸ್ ಮಂಗಳೂರು ರಿ. ಸಂಸ್ಥೆಯ‌ ದಾಖಲೆಯ 350 ನೇ ಬೃಹತ್ ರಕ್ತದಾನ ಶಿಬಿರ ಮತ್ತು ಸನ್ಮಾನ ಕಾರ್ಯಕ್ರಮ

ಜುಲೈ 03ರಂದು ದೇರಳಕಟ್ಟೆಯ RKC ವಂಡರ್ ಸಿಟಿಯಲ್ಲಿ ಬ್ಲಡ್ ಡೋನರ್ಸ್ ಮಂಗಳೂರು ಇದರ ವತಿಯಿಂದ 350 ನೇ ರಕ್ತದಾನ ಶಿಬಿರ Read More »

ಕರಾವಳಿ, ಕರ್ನಾಟಕ

ವಿದ್ಯಾರ್ಥಿಗಳ ಕೊರತೆ ಹಿನ್ನೆಲೆ ➤ ದ.ಕ ಜಿಲ್ಲೆಯ ಎರಡು ಕಾಲೇಜು ಹೊರಜಿಲ್ಲೆಗೆ ಸ್ಥಳಾಂತರ

(ನ್ಯೂಸ್ ಕಡಬ) newskadaba.com ದಕ್ಷಿಣ ಕನ್ನಡ, ಜೂ. 24. ಸತತವಾಗಿ ಶೂನ್ಯ ಮತ್ತು ಕಡಿಮೆ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ಹೊಂದಿರುವ ಸರಕಾರಿ ಪದವಿ ಪೂರ್ವ ಕಾಲೇಜುಗಳನ್ನು ಬೇಡಿಕೆ ಇರುವ ಸರಕಾರಿ ಪ್ರೌಢ ಶಾಲೆಗಳಿಗೆ ಹುದ್ದೆ ಸಮೇತ ಸ್ಥಳಾಂತರಿಸಿ ಸರಕಾರಿ ಪ.ಪೂ.ಕಾಲೇಜುಗಳಾಗಿ ಮೇಲ್ದರ್ಜೇಗೇರಿಸಿ ಸರಕಾರ ಆದೇಶ ಹೊರಡಿಸಿದೆ. ಅದರಂತೆ ಸುಳ್ಯ ತಾಲೂಕಿನ ಹರಿಹರ ಪಳ್ಳತ್ತಡ್ಕ ಪದವಿ ಪೂರ್ವ ಕಾಲೇಜು ಸಹಿತ ಜಿಲ್ಲೆಯ ಎರಡು ಶಾಲೆ ಸೇರಿದಂತೆ ರಾಜ್ಯದಲ್ಲಿ ಒಟ್ಟು ಏಳು ಸರಕಾರಿ ಪಿಯು ಕಾಲೇಜುಗಳು ಸ್ಥಳಾಂತರಗೊಳ್ಳಲಿವೆ. ಜಿಲ್ಲೆಯ ಸುಳ್ಯ ತಾಲೂಕಿನ

ವಿದ್ಯಾರ್ಥಿಗಳ ಕೊರತೆ ಹಿನ್ನೆಲೆ ➤ ದ.ಕ ಜಿಲ್ಲೆಯ ಎರಡು ಕಾಲೇಜು ಹೊರಜಿಲ್ಲೆಗೆ ಸ್ಥಳಾಂತರ Read More »

ಕರಾವಳಿ, ಕರ್ನಾಟಕ

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕ- ರಕ್ಷಕ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 24. ಸೈಂಟ್ ಜೋಕಿಮ್ ಸಂಯುಕ್ತ ಪದವಿ ಪೂರ್ವ ಕಾಲೇಜು ಕಡಬ ಇಲ್ಲಿನ ರಕ್ಷಕ-ಶಿಕ್ಷಕ ಸಂಘದ ಮೊದಲ ಸಭೆಯು ಸಂಸ್ಥೆಯ ಸಭಾಭವನದಲ್ಲಿ ನಡೆಯಿತು. ಸೈಂಟ್ ಜೋಕಿಮ್ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂ| ಅರುಣ್ ವಿಲ್ಸನ್ ಲೋಬೋ ಅಧ್ಯಕ್ಷತೆ ವಹಿಸಿದ್ದರು. ಬಳಿಕ ಮಾತನಾಡಿದ ಅವರು ವಿದ್ಯಾಸಂಸ್ಥೆಯು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಶ್ರಮ ವಹಿಸುತ್ತದೆ. ಶಿಕ್ಷಕರ ಜೊತೆಗೆ ರಕ್ಷಕರು ತಮ್ಮ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಪ್ರೋತ್ಸಾಹ ನೀಡುವುದರೊಂದಿಗೆ ಸಂಸ್ಥೆಯ ಜೊತೆಗೆ ಉತ್ತಮ ಬಾಂಧವ್ಯವನ್ನು ಇರಿಸಿಕೊಳ್ಳಬೇಕೆಂದು

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕ- ರಕ್ಷಕ ಸಭೆ Read More »

ಕರಾವಳಿ, ಕರ್ನಾಟಕ

ಇಚಿಲಂಪಾಡಿ: ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ..!

(ನ್ಯೂಸ್ ಕಡಬ) newskadaba.com ಇಚಿಲಂಪಾಡಿ, ಜೂ. 24. ಇಲ್ಲಿನ ಬಿಜೇರು ಎಂಬಲ್ಲಿ ಮಹಿಳೆಯ ಮೃತದೇಹವೊಂದು ಬಾವಿಯಲ್ಲಿ ಪತ್ತೆಯಾಗಿದೆ. ಮೃತ ಮಹಿಳೆಯನ್ನು ರೋಸಿ ಎಂದು ಗುರುತಿಸಲಾಗಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇಚಿಲಂಪಾಡಿ: ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top