ಕರಾವಳಿ

ನೆಲ್ಯಾಡಿ: ಕೆಎಸ್ಸಾರ್ಟಿಸಿ ಬಸ್, ಲಾರಿ ಹಾಗೂ ಟ್ಯಾಂಕರ್ ನಡುವೆ ಸರಣಿ ಅಪಘಾತ ➤ ಒಂದು ಗಂಟೆಗೂ ಹೆಚ್ಚು ಕಾಲ ಸಂಚಾರ ಸ್ಥಗಿತ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ. 24. ಕೆಎಸ್ಸಾರ್ಟಿಸಿ ಬಸ್, ಮಿನಿ ಟ್ಯಾಂಕರ್ ಹಾಗೂ ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಒಂದು ಗಂಟೆಗೂ ಅಧಿಕ ಕಾಲ ಸಂಚಾರ ಬಂದ್ ಆದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ಬೆದ್ರೋಡಿ ಎಂಬಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಐರಾವತ ಬಸ್ ಗೆ ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಲಾರಿ ಬೆದ್ರೋಡಿ ತಿರುವಿನಲ್ಲಿ ಡಿಕ್ಕಿ ಹೊಡೆದು, ಬಳಿಕ ಎದುರಿನಿಂದ ಬರುತ್ತಿದ್ದ ಟ್ಯಾಂಕರ್ ಗೂ […]

ನೆಲ್ಯಾಡಿ: ಕೆಎಸ್ಸಾರ್ಟಿಸಿ ಬಸ್, ಲಾರಿ ಹಾಗೂ ಟ್ಯಾಂಕರ್ ನಡುವೆ ಸರಣಿ ಅಪಘಾತ ➤ ಒಂದು ಗಂಟೆಗೂ ಹೆಚ್ಚು ಕಾಲ ಸಂಚಾರ ಸ್ಥಗಿತ Read More »

ಕರಾವಳಿ, ಕರ್ನಾಟಕ

ಕಡಬ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಕರಿಂದ ಥಳಿತ ➤ ಆಸ್ಪತ್ರೆಗೆ ದಾಖಲು..!

(ನ್ಯೂಸ್ ಕಡಬ) newskadaba.com ಕಡಬ, ಜೂ. 24. ಇಲ್ಲಿನ ಸರಕಾರಿ ಪ್ರೌಢ ಶಾಲೆಯ ಶಿಕ್ಷಕರೋರ್ವರು ಥಳಿಸಿದ್ದಾರೆ ಎಂದು ಆರೋಪಿಸಿ ಇಬ್ಬರು ವಿದ್ಯಾರ್ಥಿಗಳು ಕಡಬ ಸಮುದಾಯ ಆಸ್ಪತ್ರೆಗೆ ದಾಖಲಾದ ಘಟನೆ ಶುಕ್ರವಾರದಂದು ನಡೆದಿದೆ.   ಎಂಟನೇ ತರಗತಿ ವಿದ್ಯಾರ್ಥಿಗಳಾದ ಸುದೀಶ್ ಮತ್ತು ದಿಗಂತ್ ಎಂಬಿಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರಿಗೆ ಈ ಶಾಲೆಯ ಶಿಕ್ಷಕ ಖಾದರ್ ಎಂಬವರು ಕೆನ್ನೆಗೆ ಥಳಿಸಿದ್ದರಿಂದ ವಿದ್ಯಾರ್ಥಿಗಳ ಕೆನ್ನೆ ಊದಿಕೊಂಡಿದ್ದು, ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ. ಇದೀಗ ಶಿಕ್ಷಕರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿಗಳ ಪೋಷಕರು ಕ್ಷೇತ್ರ

ಕಡಬ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಕರಿಂದ ಥಳಿತ ➤ ಆಸ್ಪತ್ರೆಗೆ ದಾಖಲು..! Read More »

ಕರಾವಳಿ, ಕರ್ನಾಟಕ

ಅಕ್ರಮ ಜಾನುವಾರು ಸಾಗಾಟ ➤ ವಾಹನ, ಜಾನುವಾರು ಸಹಿತ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಬಜಪೆ, ಜೂ. 24. ಪಿಕಪ್ ವಾಹನವೊಂದರಲ್ಲಿ ಅಕ್ರಮ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರರಣಕ್ಕೆ ಸಂಬಂಧಿಸಿ ವಾಹನ ಹಾಗೂ ಜಾನುವಾರು ಸಹಿತ ಮೂವರು ಆರೋಪಿಗಳನ್ನು ಬಂಧಿಸಿದ ಘಟನೆ ಬಡಗ ಎಡಪದವು ಗ್ರಾಮ ಪಂಚಾಯತ್ ವ್ಯಾಪ್ತಿಯ ದಡ್ಡಿ ಕ್ರಾಸ್ ಬಳಿ ನಡೆದಿದೆ. ಬಂಧಿತ ಆರೋಪಿಗಳನ್ನು ಪುತ್ತಿಗೆ ಹಂಡೇಲು ಜರೀನಾ ಮಂಜಿಲ್‌ನ ಅಬ್ದುಲ್ ಫಾರೂಕ್ (41), ಬಡಗ ಮಿಜಾರಿನ ಅಬೂಬಕ್ಕರ್ (45) ಹಾಗೂ ತೋಡಾರು ದರ್ಖಾಸ್ ಹೌಸ್ ಶಿವ(60) ಎಂದು ಗುರುತಿಸಲಾಗಿದೆ. ಬಂಧಿತರಿಂದ ಸಾಗಾಟಕ್ಕೆ ಬಳಸಿದ ಪಿಕ್

ಅಕ್ರಮ ಜಾನುವಾರು ಸಾಗಾಟ ➤ ವಾಹನ, ಜಾನುವಾರು ಸಹಿತ ಮೂವರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಆಟೋ ರಿಕ್ಷಾ ಹಾಗೂ ಬೈಕ್ ನಡುವೆ ಢಿಕ್ಕಿ ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 24. ಆಟೋ ರಿಕ್ಷಾ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಮಂಜಲ್ಪಡು ಎಂಬಲ್ಲಿ ಶುಕ್ರವಾರದಂದು ನಡೆದಿದೆ.   ಅಪಘಾತ ರಭಸಕ್ಕೆ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮತ್ತು ಬೈಕ್ ಸವಾರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಟೋ ರಿಕ್ಷಾ ಹಾಗೂ ಬೈಕ್ ನಡುವೆ ಢಿಕ್ಕಿ ➤ ಇಬ್ಬರಿಗೆ ಗಾಯ Read More »

ಕರಾವಳಿ, ಕರ್ನಾಟಕ

ಇಲೆಕ್ಟ್ರಿಕ್ ಶೋರೂಂ ನಲ್ಲಿ ಅಗ್ನಿ ಅವಘಡ- ಲಕ್ಷಾಂತರ ರೂ ನಷ್ಟ ➤ ಶಾರ್ಟ್ ಸರ್ಕ್ಯೂಟ್ ಶಂಕೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 24. ಇಲ್ಲಿನ ಪಡೀಲ್ ಬಳಿಯ ಒಕಿನಾವ ಶೋರೂಮ್‌ ಒಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಬೈಕ್ ಗಳು ಬೆಂಕಿಗಾಹುತಿಯಾದ ಘಟನೆ ವರದಿಯಾಗಿದೆ. ಇಂದು ಬೆಳಗ್ಗೆ ಸುಮಾರು 8 ಗಂಟೆ ಹೊತ್ತಿಗೆ ಶೋರೂಮ್ ನಲ್ಲಿ ಹೊಗೆ ಕಾಣಿಸಿದ್ದು, ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಗ್ನಿ ಅವಘಡ ಸಂಭವಿಸಿದೆನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

ಇಲೆಕ್ಟ್ರಿಕ್ ಶೋರೂಂ ನಲ್ಲಿ ಅಗ್ನಿ ಅವಘಡ- ಲಕ್ಷಾಂತರ ರೂ ನಷ್ಟ ➤ ಶಾರ್ಟ್ ಸರ್ಕ್ಯೂಟ್ ಶಂಕೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅರಂತೋಡು: ದೇಹ ಮತ್ತು ಮನಸ್ಸಿನ ಆರೋಗ್ಯಕ್ಕೆ ಯೋಗ ಪೂರಕವಾಗಿದೆ ➤ ಯೋಗ ಶಿಕ್ಷಕ ರಾಮಕೃಷ್ಣ ಭಟ್

(ನ್ಯೂಸ್ ಕಡಬ) newskadaba.com ಅರಂತೋಡು, ಜೂ. 24. ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಕ್ರೀಡಾ ಸಂಘದ ನೇತೃತ್ವದಲ್ಲಿ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಿತು. ಯೋಗ ಶಿಕ್ಷಕ ಶ್ರೀ ರಾಮಕೃಷ್ಣ ಭಟ್ ಸುಳ್ಯ ಅವರು ಗಿಡಕ್ಕೆ ನೀರು ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ದೇಹ ಮತ್ತು ಮನಸ್ಸಿನ ಆರೋಗ್ಯಕ್ಕೆ ಯೋಗ ಪೂರಕವಾಗಿದೆ. ವಿದ್ಯಾರ್ಥಿಗಳು ಯೋಗದ ಮಹತ್ತ್ವ ತಿಳಿದು ರೂಢಿಸಿಕೊಳ್ಳಲು ಕರೆ ನೀಡಿದರು. ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಶ್ರೀ ರಮೇಶ್ ವಹಿಸಿದ್ದರು.

ಅರಂತೋಡು: ದೇಹ ಮತ್ತು ಮನಸ್ಸಿನ ಆರೋಗ್ಯಕ್ಕೆ ಯೋಗ ಪೂರಕವಾಗಿದೆ ➤ ಯೋಗ ಶಿಕ್ಷಕ ರಾಮಕೃಷ್ಣ ಭಟ್ Read More »

ಕರಾವಳಿ, ಕರ್ನಾಟಕ

ಕಡಬ: ಅಂಗಡಿಗಳಿಗೆ ನುಗ್ಗಿ ಕಳ್ಳರ ಕೈಚಳಕ ➤ ಇಲೆಕ್ಟ್ರಾನಿಕ್ ವಸ್ತುಗಳು, ನಗದಿನೊಂದಿಗೆ ಪರಾರಿ..?

(ನ್ಯೂಸ್ ಕಡಬ) newskadaba.com ಕಡಬ, ಜೂ.24. ಕಡಬದಲ್ಲಿ ಕಳ್ಳರು ತಮ್ಮ ಕೈಚಳಕವನ್ನು ಮೆರೆದಿದ್ದು, ಎರಡು ಪ್ರಮುಖ ಅಂಗಡಿಯ ಮೇಲ್ಛಾವಣಿಯ ಮೂಲಕ ಒಳ ನುಗ್ಗಿರುವ ಕಳ್ಳರು ಸಾವಿರಾರು ರೂ. ಮೌಲ್ಯದ ವಸ್ತುಗಳನ್ನು ದೋಚಿರುವ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ಕಡಬದ ಮುಖ್ಯ ರಸ್ತೆಯ ಸಂಗೀತಾ ಇಲೆಕ್ಟ್ರಾನಿಕ್ಸ್ ಹಾಗೂ ಸ್ಟಾರ್ ಟ್ರೇಡರ್ಸ್ ನ ಹಿಂಭಾಗದ ಮೇಲ್ಛಾವಣಿಯ ಮೂಲಕ ಒಳ ನುಗ್ಗಿರುವ ಕಳ್ಳರು ನಗದು ಇಲೆಕ್ಟ್ರಾನಿಕ್ ವಸ್ತುಗಳ ಜೊತೆ ಪರಾರಿಯಾಗಿದ್ದಾರೆ. ಸಿಸಿ ಕ್ಯಾಮರಾವನ್ನು ಧ್ವಂಸಗೊಳಿಸಿ ಡಿವಿಆರ್ ನ್ನು ಹೊತ್ತೊಯ್ದಿದ್ದಾರೆ‌. ಈ ಬಗ್ಗೆ

ಕಡಬ: ಅಂಗಡಿಗಳಿಗೆ ನುಗ್ಗಿ ಕಳ್ಳರ ಕೈಚಳಕ ➤ ಇಲೆಕ್ಟ್ರಾನಿಕ್ ವಸ್ತುಗಳು, ನಗದಿನೊಂದಿಗೆ ಪರಾರಿ..? Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಜ್ವರದಿಂದ ಬಳಲುತ್ತಿದ್ದ ಒಂದನೇ ತರಗತಿ ವಿದ್ಯಾರ್ಥಿನಿ ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 23. ಜ್ವರದಿಂದ ಬಳಲುತ್ತಿದ್ದ ಒಂದನೇ ತರಗತಿಯ ಬಾಲಕಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ಗುರುವಾರದಂದು ನಡೆದಿದೆ. ಮೃತ ಬಾಲಕಿಯನ್ನು ಕಲ್ಲಡ್ಕದ ಹನುಮಾನ್ ನಗರ ನಿವಾಸಿ ರವಿ ಆಚಾರ್ಯ ಎಂಬವರ ಪುತ್ರಿ ಆರಾಧ್ಯ ಆಚಾರ್ಯ(6) ಎಂದು ಗುರುತಿಸಲಾಗಿದೆ. ಕಳೆದೊಂದು ವಾರದಿಂದ ಜ್ವರದಿಂದ ಬಳಲುತ್ತಿದ್ದ ಈಕೆಗೆ ಸ್ಥಳೀಯ ವೈದ್ಯರಿಂದ ಚಿಕಿತ್ಸೆ ನೀಡಲಾಗಿತ್ತಾದರೂ, ಎರಡು ದಿನಗಳ ಹಿಂದೆ ಜ್ವರ ಏಕಾಏಕಿ ಉಲ್ಬಣಿಸಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.  

ಜ್ವರದಿಂದ ಬಳಲುತ್ತಿದ್ದ ಒಂದನೇ ತರಗತಿ ವಿದ್ಯಾರ್ಥಿನಿ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಕ್ಕಳ ಕಲಿಕೆಯಲ್ಲಿ ಪೋಷಕರ ಪಾತ್ರ ಮಹತ್ವದ್ದಾಗಿದೆ ➤ ಕೆ.ಆರ್. ಗಂಗಾಧರ

(ನ್ಯೂಸ್ ಕಡಬ) newskadaba.com ಅರಂತೋಡು, ಜೂ. 23. ಮಕ್ಕಳ ಕಲಿಕೆಯಲ್ಲಿ ಪೋಷಕರ ಪಾತ್ರ ಮಹತ್ವದ್ದಾಗಿದೆ. ಮಕ್ಕಳ ಚಲನವಲನದ ಬಗ್ಗೆ ತಂದೆ-ತಾಯಿಯರು ಸೂಕ್ಷ್ಮವಾಗಿ ತಿಳಿದು ಮಾರ್ಗದರ್ಶನ ನೀಡಬೇಕು. ಅನಗತ್ಯ ಮೊಬೈಲ್ ಬಳಕೆಗೆ ಕಡಿವಾಣ ಹಾಕಬೇಕು ಎಂದು ಕಾಲೇಜಿನ ಸಂಚಾಲಕ ಕೆ.ಆರ್ ಗಂಗಾಧರ ಪೋಷಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಾಂಶುಪಾಲರಾದ ಶ್ರೀ ರಮೇಶ್ ಸ್ವಾಗತಿಸಿ, ವರ್ಷದ ಶೈಕ್ಷಣಿಕ ಚಟುವಟಿಕೆಗಳ ಕುರಿತು ಪೋಷಕರಿಗೆ ಮಾರ್ಗದರ್ಶನ ನೀಡಿದರು. ಭೌತಶಾಸ್ತ್ರ ಉಪನ್ಯಾಸಕ ಸುರೇಶ್ ವಾಗ್ಲೆ ವಂದಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕ ಕಾರ್ಯಕ್ರಮ ನಿರೂಪಿಸಿದರು. ಇತಿಹಾಸ

ಮಕ್ಕಳ ಕಲಿಕೆಯಲ್ಲಿ ಪೋಷಕರ ಪಾತ್ರ ಮಹತ್ವದ್ದಾಗಿದೆ ➤ ಕೆ.ಆರ್. ಗಂಗಾಧರ Read More »

ಕರಾವಳಿ, ಕರ್ನಾಟಕ

ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ರಿಕ್ಷಾ ಪಲ್ಟಿ..! ➤ ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 23. ಆಟೋ ರಿಕ್ಷಾವೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಘಟನೆ ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೃಷ್ಣನಗರದಲ್ಲಿ ಗುರುವಾರದಂದು ಬೆಳಗ್ಗೆ ಸಂಭವಿಸಿದೆ.   ಸೇಡಿಯಾಪು ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಪರಿಣಾಮ ಚಾಲಕ ಸೇಡಿಯಾಪು ನಿವಾಸಿ ಶಿವಪ್ಪ ಎಂಬವರಿಗೆ ಗಾಯವಾಗಿದ್ದು, ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ರಿಕ್ಷಾ ಪಲ್ಟಿ..! ➤ ಚಾಲಕನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top